ದಾನಧರ್ಮವ ಮಾಡಿ ಸುಖಯಾಗು ಮನವೆ
ಹೀನ ವೃತ್ತಿಯಲಿ ನೀ ಕೆಡಬೇಡ ಮನವೆ
ಎಕ್ಕನಾತಿ ಯಲ್ಲಮ್ಮ ಮಾರಿ ದುರ್ಗಿ ಚೌಡಿಯಅಕ್ಕರಿಂದಲಿ ಪೂಜೆ ಮಾಡಲೇಕೆಗಕ್ಕನೆಯೆ ಯಮನ ದೂತರೆಳೆದೊಯ್ಯುವಾಗಶಕ್ತೇರು ಬಿಡಿಸಿಕೊಂಡಾರೇನೊ ಮರುಳೆ ||1||
ಸಂಭ್ರಮದಲಿ ಒಂದ್ಹೊತ್ತು ನೇಮದೊಳಗಿದ್ದುತಂಬಿಟ್ಟಿನಾ ದೀಪ ಹೊರಲೇತಕೆಕೊಂಬು ಹೋತು ಕುರಿ ಕೋಣಗಳನ್ನು ಬಲಿಗೊಂಬದೊಂಬಿ ದೈವಗಳ ಭಜಿಸದಿರು ಮನವೆ||2||
ಚಿಗುರೆಲೆ ಬೇವಿನ ಸೊಪ್ಪುಗಳ ನಾರಸೀರೆಬಗೆಬಗೆಯಿಂದ ಶೃಂಗಾರ ಮಾಡಿನೆಗೆನೆಗೆದಾಡುತ ಕುಣಿಯುತಿರೆ ನಿನಗಿನ್ನುಮಿಗಿಲಾದ ಮುಕ್ತಿಯುಂಟೇ ಹುಚ್ಚು ಮನವೆ ||3||
ದಾನಧರ್ಮ ಪರೋಪಕಾರವ ಮಾಡುದೀನನಾಗಿ ನೀ ಕೆಡಬೇಡವೊe್ಞÁನವಿಲ್ಲದೆ ಹೀನ ದೈವವ ಭಜಿಸಿದರೆಏನುಂಟು ನಿನಗಿನ್ನು ಎಲೆ ಹುಚ್ಚು ಮನವೆ ||4||
ನರಲೋಕದಲಿ ಯಮನ ಬಾಧೆಯನು ಕಳೆಯಲುವರ ಪುಣ್ಯ ಕಥೆಗಳನು ಕೇಳುತಲಿಸಿರಿ ಕಾಗಿನೆಲೆಯಾದಿ ಕೇಶವನ ನೆರೆ ನಂಬಿಸ್ಥಿರ ಪದವಿಯನು ಪಡೆ ಹುಚ್ಚು ಮನವೆ||5||