ದುರ್ಜನರ ಸಂಗ ಎಂದಿಗೂ ಒಲ್ಲೆನು ಇಂಥ

ದುರ್ಜನರ ಸಂಗ ಎಂದಿಗೂ ಒಲ್ಲೆನು ಇಂಥ,ಸಜ್ಜನರ ಸಂಗದೊಳಗಿರಿಸೆನ್ನ ರಂಗ

ಉಂಡಮನೆಗೆರಡನು ಎಣಿಸುವಾತನ ಸಂಗಕೊಂಡೆಯವ ಪೇಳಿ ಕಾದಿಸುವನ ಸಂಗತಂದೆ ತಾಯನು ಬೈದು ಬಾಧಿಸುವವನ ಸಂಗನಿಂದಕರ ಸಂಗ ಬಹು ಭಂಗ ರಂಗ ||1||

ನಂಬಿದ ಠಾವಿನಲಿ ಕೇಡನೆಣಿಪನ ಸಂಗಸಂಭ್ರಮದಿ ಜಗಳ ಕಾಯುವನ ಸಂಗಹಂಬಲಿಸಿ ಭವದ ಸುಖ ಮೆಚ್ಚಿದಾತನ ಸಂಗರಂಭೆಯರ ನೋಡಿ ಮೋಹಿಪನ ಸಂಗ||2||

ಕುಳಿತ ಸಭೆಯೊಳು ಕುಹಕ ಮಾಡುವಾತನ ಸಂಗಬಲು ಬೇಡೆ ಕೊಡದಿರುವ ಲೋಭಿ ಸಂಗಕುಲಹೀನರ ಕೂಡೆ ಸ್ನೇಹ ಬೆಳೆಪನ ಸಂಗಹಲವು ಮಾತಾಡಿ ಆಚರಿಸದನ ಸಂಗ||3||

ಗುರುಸತಿಗೆ ಪರಸತಿಗೆ ಎರಡು ಎಣಿಪನ ಸಂಗಗುರುನಿಂದೆ ಪರನಿಂದೆ ಮಾಡುವನ ಸಂಗಪರಹಿತಾರ್ಥದ ಧರ್ಮ ಪಡೆಯದಾತನ ಸಂಗಪರಮಪಾಮರ ಸಂಗ ಬಹುಭಂಗ ರಂಗ ||4||

ಆಗಮ ಮಹಾತ್ಮೆಯನು ಅರಿಯದಾತನ ಸಂಗಯೋಗಿಜನ ಗುರುಗಳನು ನಿಂದಿಪನ ಸಂಗರಾಗದ್ವೇಷಾದಿಯಲಿ ಮುಳುಗೇಳುವನ ಸಂಗಕಾಗಿನೆಲೆಯಾದಿಕೇಶವ ಬಿಡಿಸು ಈ ಭಂಗ ||5||

Leave a Comment

Your email address will not be published. Required fields are marked *