ನಿನ್ನ ಮಹಿಮೆ ಇದೇನೊ

ನಿನ್ನ ಮಹಿಮೆ ಇದೇನೊ
ಕನ್ನಗಾರರ ಗುರುವೆ ಅಳಗಿರಿ ತಿಮ್ಮರಾಯಾ

ಕ್ಷೋಣಿಯೊಳಗುಳ್ಳವರು ಕ್ಷಿಪ್ರದಲ್ಲಿ
ನಿನ್ನ ಕಾಣಿವೇನೆಂಬ ತವಕದಲಿ ಬರಲು
ಮಾಣದಲೆ ಅವರ ವಸನ ಸುಲಿಸಿ ತಡೆಯದೆ
ಮಾನವನು ಕೊಂಬ ಅಭಿಮಾನಗೇಡಿ ||1||

ಬ್ರಹ್ಮಾದಿಗಳು ಇಲ್ಲಿ ಸುಲಿಸಿಕೊಳಬೇಕೆಂದು
ಹೆಮ್ಮೆಯಿಂದಲಿ ನೋಡಿ ಹಿಗ್ಗುವರೋ
ಹಮ್ಮಿನದೇವ ನಿನ್ನ ಸೋಜಿಗವೆ ತಿಳಿಯದು
ಈ ಮ್ಮಹಿಯೊಳಗೆ ಇಂಥ ಸುಮ್ಮಾನವೇನೊ||2||

ಹಲವು ಕೇಳಿದರೇನು ನೀಚೋಚ್ಚ ಎಣಿಸಲೆ
ಒಲಿಸಿದವರಿಗೆ ನೀನು ಒಲಿದು ಎಲ್ಲಾ
ಸುಲಿಗೆಯನು ಯಿತ್ತು ಸಂತತಲವರ ಪಾಲಿಪ
ಬಲು ದೈವ ವಿಜಯವಿಠ್ಠಲ ಅಳಗಿರಿ ತಿಮ್ಮಾ||3||

Leave a Comment

Your email address will not be published. Required fields are marked *