ನೀರಕ್ಷೀರದಂತೆ ನೀನಿಪ್ಪೆಯಾಗಿ,
ಆವುದು ಮುಂದು, ಆವುದು ಹಿಂದು ಎಂದರಿಯೆ.
ಆವುದು ಕರ್ತೃ, ಆವುದು ಭೃತ್ಯನೆಂದರಿಯೆ.
ಆವುದು ಘನ, ಆವುದು ಕಿರಿದೆಂದರಿಯೆ.
ಚೆನ್ನಮಲ್ಲಿಕಾರ್ಜುನಯ್ಯಾ, ನೀನೊಲಿದು ಕೊಂಡಾಡಿದಡೆ ಇರುಹೆ ರುದ್ರನಾಗದೆ ಹೇಳಯ್ಯಾ ?
ನೀರಕ್ಷೀರದಂತೆ ನೀನಿಪ್ಪೆಯಾಗಿ,
ಆವುದು ಮುಂದು, ಆವುದು ಹಿಂದು ಎಂದರಿಯೆ.
ಆವುದು ಕರ್ತೃ, ಆವುದು ಭೃತ್ಯನೆಂದರಿಯೆ.
ಆವುದು ಘನ, ಆವುದು ಕಿರಿದೆಂದರಿಯೆ.
ಚೆನ್ನಮಲ್ಲಿಕಾರ್ಜುನಯ್ಯಾ, ನೀನೊಲಿದು ಕೊಂಡಾಡಿದಡೆ ಇರುಹೆ ರುದ್ರನಾಗದೆ ಹೇಳಯ್ಯಾ ?