ಬಂಜೆ ಬೇನೆಯನರಿವಳೆ ?
ಬಲದಾಯಿ ಮದ್ದ ಬಲ್ಲಳೆ ?
ನೊಂದವರ ನೋವ ನೋಯದವರೆತ್ತ ಬಲ್ಲರೊ ?
ಚೆನ್ನಮಲ್ಲಿಕಾರ್ಜುನಯ್ಯನಿರಿದಲಗು
ಒಡಲಲ್ಲಿ ಮುರಿದು ಹೊರಳುವೆನ್ನಳಲನು ನೀವೆತ್ತ ಬಲ್ಲಿರೆ, ಎಲೆ ತಾಯಿಗಳಿರಾ ?
ಬಂಜೆ ಬೇನೆಯನರಿವಳೆ ?
ಬಲದಾಯಿ ಮದ್ದ ಬಲ್ಲಳೆ ?
ನೊಂದವರ ನೋವ ನೋಯದವರೆತ್ತ ಬಲ್ಲರೊ ?
ಚೆನ್ನಮಲ್ಲಿಕಾರ್ಜುನಯ್ಯನಿರಿದಲಗು
ಒಡಲಲ್ಲಿ ಮುರಿದು ಹೊರಳುವೆನ್ನಳಲನು ನೀವೆತ್ತ ಬಲ್ಲಿರೆ, ಎಲೆ ತಾಯಿಗಳಿರಾ ?