ಬಯಲಿಂದ ಹುಟ್ಟಿದ ಪರವೆಂಬ ತಾಯಿಗೆ

ಬಯಲಿಂದ ಹುಟ್ಟಿದ ಪರವೆಂಬ ತಾಯಿಗೆ
ಐವರು ಮಕ್ಕಳು ಜನಿಸಿದರು.
ಒಬ್ಬ ಭಾವರೂಪ, ಒಬ್ಬ ಪ್ರಾಣರೂಪ ;
ಒಬ್ಬ ಐಮುಖವಾಗಿ ಕಾಯರೂಪಾದ ;
ಇಬ್ಬರು ಉತ್ಪತ್ತಿ ಸ್ಥಿತಿಗೆ ಕಾರಣವಾದರು.
ಐಮುಖನರಮನೆ ಸುಖವಿಲ್ಲೆಂದು
ಕೈಲಾಸವ ಹೊಗೆನು, ಮತ್ರ್ಯಕ್ಕೆ ಅಡಿ ಇಡೆನು ;
ಚೆನ್ನಮಲ್ಲಿಕಾರ್ಜುನದೇವಾ, ನೀನೇ ಸಾಕ್ಷಿ.

Leave a Comment

Your email address will not be published. Required fields are marked *