ಬಸವಣ್ಣಾ, ನಿಮ್ಮಂಗದಾಚಾರವ ಕಂಡು
ಎನಗೆ ಲಿಂಗಸಂಗವಾಯಿತ್ತಯ್ಯಾ.
ಬಸವಣ್ಣಾ, ನಿಮ್ಮ ಮನದ ಸುe್ಞನವ ಕಂಡು
ಎನಗೆ ಜಂಗಮಸಂಬಂಧವಾಯಿತ್ತಯ್ಯಾ.
ಬಸವಣ್ಣಾ, ನಿಮ್ಮ ಸದ್ಭಕ್ತಿಯ ತಿಳಿದು
ಎನಗೆ ನಿಜವು ಸಾಧ್ಯವಾಯಿತ್ತಯ್ಯಾ.
ಚೆನ್ನಮಲ್ಲಿಕಾರ್ಜುನಯ್ಯನ ಹೆಸರಿಟ್ಟ ಗುರು
ನೀವಾದ ಕಾರಣ ನಿಮ್ಮ ಶ್ರೀಪಾದಕ್ಕೆ
ನಮೋ ನಮೋ ಎನುತಿರ್ದೆನು ಕಾಣಾ ಸಂಗನಬಸವಣ್ಣಾ.