ಮುಟ್ಟಬೇಡ ಮುಟ್ಟಬೇಡ ಮುರಹರನ ದಾಸರನು
ಕಟ್ಟು ಮಾಡಿದ ಯಮನು ತನ್ನ ದೂತರಿಗೆ
ತಿರುಮಣಿ ತಿರುಚೂರ್ಣ ಶೃಂಗಾರ ಧರಿಸುವರಸಿರಿತುಳಸಿ ವನಮಾಲೆಯಿಂದೊಪ್ಪುವವರತಿರುಮಂತ್ರ ತೀರ್ಥಪ್ರಸಾದಕೊಳಗಾದವರತಿರುಪತಿ ಯಾತ್ರೆಯನು ಮಾಡುವ ಮಹಾತ್ಮರ ||1||
ಬಡವರಾಗಲಿ ಭಾಗ್ಯವಂತರಾಗಲಿ ಅವರುಕಡು ಕರ್ಮಿ ಘೋರಪಾತಕರಾಗಲಿನಡೆನುಡಿಗೆ ಮಾಧವನ ಬಿಡದೆ ಕೊಂಡಾಡುವರಗೊಡವೆ ಬೇಡೆಂದು ಯಮಧರ್ಮ ಸಾರಿದನು ||2||
ವಾಸುದೇವನ ವಾಸರವನಾಚರಿಸುವವರಬೇಸರಿಸದೆ ಹರಿಪ್ರಸಂಗ ಮಾಳ್ಪವರಶೇಷಶಯನ ಕಾಗಿನೆಲೆಯಾದಿಕೇಶವನದಾಸಾನುದಾಸರಿಗೆ ದಾಸರಾದವರ||3||