ಯಾಕೆ ನೀನಿಲ್ಲಿ ಪವಡಿಸಿದೆ ಹರಿಯೆ

ಯಾಕೆ ನೀನಿಲ್ಲಿ ಪವಡಿಸಿದೆ ಹರಿಯೆ – ಜಗ
ದೇಕ ವಿಖ್ಯಾತ ಪಶ್ಚಿಮ ರಂಗಧಾಮ

ತಮನೊಡನೆ ಹೋರಿ ಬೆಟ್ಟವನು ಬೆನ್ನಲಿ ಪೊತ್ತುರಮಣಿ ಭೂಮಿಯನು ತಂದಾಯಾಸವೂಅಮರವೈರಿಯ ಕರುಳ ಕಿತ್ತ ಕಡು ಧಾವತಿಯೊಕ್ಷಮೆಯನಳೆದೀ ಪಾದಕಮಲ ನೊಂದವೊ ||1||

ಪೊಡವಿಪಾಲಕರ ವಂಶವನು ವಪನ ಮಾಡಿಕೊಡಲಿಯನು ಬಿಸುಟು ಮಲಗಿದ ಭಾವವೊಮಡದಿಯನು ಕದ್ದೊಯ್ದವನ ಶಿರವನೆ ತರಿದುಒಡಲಿನಾಯಾಸದಲಿ ಪವಡಿಸಿದ ಪರಿಯೋ ||2||

ವಾಲಿ ಮೊದಲಾದ ಎದುರಾಂತ ವೀರರ ಕೊಂದುಕಾಳಿಯ ಹೆಡೆಯ ತುಳಿತುಳಿದು ಮೈಯಲಸಿತೊಲೀಲೆಗೋಸುಗ ಬಂದು ನಿರ್ವಾಣದಲಿ ನಿಂದುಆ ಲಜ್ಜೆಗಾಗಿ ತಲೆ ಬಾಗಿ ಮಲಗಿದೆಯೊ ||3||

ನಾಲ್ಕು ಯುಗದಾಧಾರಿ ಕಡೆಗೆ ತುರಗವನೇರಿಸಾಕಾಗಿ ದಣಿದು ನೀನಿಲ್ಲಿ ಮಲಗಿದೆಯೊಸಾಕಾರಿಯಾಗಿ ಗೌತಮ ಮುನೀಶ್ವರನಿಗೆಬೇಕೆಂದು ನೀ ಕೊಟ್ಟ ವರಕೆ ಮಲಗಿದೆಯೊ ||4||

ಇನ್ನೆಷ್ಟು ಕಾಲ ನೀನಿಲ್ಲಿ ಮಲಗಿದ್ದರೂನಿನ್ನನೆಬ್ಬಿಸುವವರನೊಬ್ಬರನು ಕಾಣೆಉನ್ನಂತ ಕಾಗಿನೆಲೆಯಾದಿಕೇಶವರಾಯಚೆನ್ನ ಶ್ರೀರಂಗಪಟ್ಟಣದ ರಂಗಧಾಮ ||5||

Leave a Comment

Your email address will not be published. Required fields are marked *