ಸಂಸಾರಸಂಗದಲ್ಲಿರ್ದೆ ನೋಡಾ ನಾನು.

ಸಂಸಾರಸಂಗದಲ್ಲಿರ್ದೆ ನೋಡಾ ನಾನು.
ಸಂಸಾರ ನಿಸ್ಸಾರವೆಂದು ತೋರಿದನೆನಗೆ ಶ್ರೀಗುರು.
ಅಂಗವಿಕಾರದ ಸಂಗವ ನಿಲಿಸಿ,
ಲಿಂಗವನಂಗದ ಮೇಲೆ ಸ್ಥಾಪ್ಯವ ಮಾಡಿದನೆನ್ನ ಗುರು,
ಹಿಂದಣ ಜನ್ಮವ ತೊಡೆದು, ಮುಂದಣ ಪ ಥವ ತೋರಿದನೆನ್ನ ತಂದೆ.
ಚೆನ್ನಮಲ್ಲಿಕಾರ್ಜುನನ ನಿಜವ ತೋರಿದನೆನ್ನ ಗುರು.

Leave a Comment

Your email address will not be published. Required fields are marked *