ಹೂವು ಕಂದಿದಲ್ಲಿ ಪರಿಮಳವನರಸುವರೆ ?

ಹೂವು ಕಂದಿದಲ್ಲಿ ಪರಿಮಳವನರಸುವರೆ ?
ಕಂದನಲ್ಲಿ ಕುಂದನರಸುವರೆ ?
ಎಲೆ ದೇವ, ಸ್ನೇಹವಿದ್ದ ಠಾವಿನೊಳು ದ್ರೋಹವಾದ ಬಳಿಕ
ಮರಳಿ ಸದ್ಗುಣವನರಸುವರೆ ?
ಎಲೆ ದೇವ, ಬೆಂದ ಹುಣ್ಣಿಗೆ ಬೇಗೆಯನಿಕ್ಕುವರೆ ?
ಕೇಳಯ್ಯಾ, ಶ್ರೀಶೈಲ ಚೆನ್ನಮಲ್ಲಿಕಾರ್ಜುನಾ ಹೊಳೆಯಿಳಿದ ಬಳಿಕ ಅಂಬಿಗಂಗೇನುಂಟು ?

Leave a Comment

Your email address will not be published. Required fields are marked *