ಅಜ್ಞಾನಿಗಳ ಕೂಡೆ ಅಧಿಕ ಸ್ನೇಹಕ್ಕಿಂತ ಸುಜ್ಞಾನಿಗಳ ಕೂಡೆ ಜಗಳವೇ ಲೇಸು
ಉಂಬುಡುವುದಕಿಲ್ಲದರಸಿನೋಲಗಕಿಂತತುಂಬಿದೂರೊಳಗೆ ತಿರಿದುಂಬುವುದೆ ಲೇಸುಹಂಬಲಿಸಿ ಹಾಳ್ಹರಟೆ ಹೊಡೆವುದಕಿಂತ – ಹರಿಯೆಂಬ ದಾಸರ ಕೂಡೆ ಸಂಭಾಷಣೆಯೆ ಲೇಸು ||1||
ಒಡನೆ ಹಂಗಿಸುವನೋಗರವನುಂಬುದಕಿಂತಕುಡಿನೀರು ಕುಡಿದುಕೊಂಡಿರುವುದೇ ಲೇಸುಬಿಡದೆ ಬಾಂಧವರೊಡನೆ ಕಡಿದಾಡುವುದಕಿಂತಅಡವಿಯೊಳಗe್ಞÁತ ವಾಸವೇ ಲೇಸು ||2||
ಮಸೆಯುತಿಹ ಮತ್ಸರದ ನೆರೆಯೊಳಿರುವುದಕಿಂತಹಸನಿಲ್ಲದ ಹಾಳುಗುಡಿಯೇ ಲೇಸುಬಿಸಜಾಕ್ಷ ಕಾಗಿನೆಲೆಯಾದಿಕೇಶವರಾಯವಸುಮತಿಯೊಳು ನಿನ್ನ ದಾಸತ್ವವೇ ಲೇಸು ||3||