admin

ಕೊಳಲ ದನಿಗೆ ಸರ್ಪ ತಲೆದೂಗಿದಡೇನು,

ಕೊಳಲ ದನಿಗೆ ಸರ್ಪ ತಲೆದೂಗಿದಡೇನು, ಒಳಗಣ ವಿಷದ ಬಯಕೆ ಬಿಡದನ್ನಕ್ಕ ? ಹಾಡಿದಡೇನು, ಕೇಳಿದಡೇನು, ತನ್ನಲುಳ್ಳ ಅವಗುಣ ಬಿಡದನ್ನಕ್ಕ ? ಒಳಗನರಿದು ಹೊರಗೆ ಮರೆದವರ ನೀ ಎನಗೆ ತೋರಯ್ಯಾ ಚೆನ್ನಮಲ್ಲಿಕಾರ್ಜುನಾ.

ಕೊಳಲ ದನಿಗೆ ಸರ್ಪ ತಲೆದೂಗಿದಡೇನು, Read More »

ಕೇಳವ್ವಾ ಕೇಳವ್ವಾ ಕೆಳದಿ ನಾನೊಂದು ಕನಸುವ ಕಂಡೆ.

ಕೇಳವ್ವಾ ಕೇಳವ್ವಾ ಕೆಳದಿ ನಾನೊಂದು ಕನಸುವ ಕಂಡೆ. ಗಿರಿಯಮೇಲೊಬ್ಬ ಗೊರವ ಕುಳ್ಳಿರ್ದುದ ಕಂಡೆ ಚಿಕ್ಕ ಚಿಕ್ಕ ಜಡೆಗಳ ಸುಲಿಪಲ್ಲ ಗೊರವನು ಬಂದೆನ್ನ ನೆರೆದ ನೋಡವ್ವಾ ಆತನನಪ್ಪಿಕೊಂಡು ತಳವೆಳಗಾದೆನು. ಚೆನ್ನಮಲ್ಲಿಕಾರ್ಜುನನ ಕಂಡು ಕಣ್ಣು ಮುಚ್ಚಿ ತೆರೆದು ತಳವೆಳಗಾದೆನು.

ಕೇಳವ್ವಾ ಕೇಳವ್ವಾ ಕೆಳದಿ ನಾನೊಂದು ಕನಸುವ ಕಂಡೆ. Read More »

ಕೆತ್ತಿದ ತಿಗುಡು ಹತ್ತೂದೆ ಮುನ್ನಿನಂತೆ ?

ಕೆತ್ತಿದ ತಿಗುಡು ಹತ್ತೂದೆ ಮುನ್ನಿನಂತೆ ? ಎರಿಣ ತಪ್ಪಿದಲ್ಲಿ ಗುಣವನರಸುವರೆ ? ಸಕ್ಕರೆ ಹಾಲು ತುಪ್ಪ ಎಂದರೆ ಕಪ್ಪ ಕಂಡಲ್ಲಿ ಮನ ಹಿಡಿವುದೆ ? ಕರ್ತೃವೆ ಚೆನ್ನಮಲ್ಲಿಕಾರ್ಜುನಯ್ಯಾ ಸತ್ತವರು ಮರಳಿ ತಕ್ಕೈಸಿಕೊಂಬರೆ

ಕೆತ್ತಿದ ತಿಗುಡು ಹತ್ತೂದೆ ಮುನ್ನಿನಂತೆ ? Read More »

ಕೆಚ್ಚಿಲ್ಲದ ಮರನ ಕ್ರಿಮಿ ಇಂಬುಗೊಂಬಂತೆ,

ಕೆಚ್ಚಿಲ್ಲದ ಮರನ ಕ್ರಿಮಿ ಇಂಬುಗೊಂಬಂತೆ, ಒಡೆಯನಿಲ್ಲದ ಮನೆಯ ಶುನಕ ಸಂಚುಗೊಂಬಂತೆ, ನೃಪತಿಯಿಲ್ಲದ ದೇಶವ ಮನ್ನೆಯರಿಂಬುಗೊಂಬಂತೆ, ನಿಮ್ಮ ನೆನಹಿಲ್ಲದ ಶರೀರವ ಭೂತ ಪ್ರೇತ ಪಿಶಾಚಿಗಳಿಂಬುಗೊಂಬಂತೆ ಚೆನ್ನಮಲ್ಲಿಕಾರ್ಜುನಾ.

ಕೆಚ್ಚಿಲ್ಲದ ಮರನ ಕ್ರಿಮಿ ಇಂಬುಗೊಂಬಂತೆ, Read More »

ಕಾಮವುಳ್ಳವರಿಗೆ ಕಾಯಸಂಗ ಮಚ್ಚು ನೋಡಾ.

ಕಾಮವುಳ್ಳವರಿಗೆ ಕಾಯಸಂಗ ಮಚ್ಚು ನೋಡಾ. ಕಾಮವಿಲ್ಲದವರಿಗೆ ಲಿಂಗಸಂಗ ಮಚ್ಚು ನೋಡಾ. ಕಾಮವಿಕಾರಿ ಕಾಯದತ್ತ ಮುಂತಾದಡೆ, ನಾ ನಿಮ್ಮತ್ತ ಮುಂತಾದೆ. ಚೆನ್ನಮಲ್ಲಿಕಾರ್ಜುನಯ್ಯಾ, ಕಾಮವಿಕಾರಿಯ ಸಂಗವ ಹೊದ್ದಿದಡೆ ನಿಮ್ಮಾಣೆ.

ಕಾಮವುಳ್ಳವರಿಗೆ ಕಾಯಸಂಗ ಮಚ್ಚು ನೋಡಾ. Read More »

ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು,

ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು, ಸೋಮ ಸೂರ್ಯರ ಹುರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ ? ನೀ ಮದವಳಿಗನಾಗೆ ನಾ ಮದವಳಿಗಿತ್ತಿಯಾಗೆ ಯಮನ ಕೂಡುವ ಮರುತನಂತೆ ನೋಡಾ ಶ್ರೀಗಿರಿ ಚೆನ್ನಮಲ್ಲಿಕಾರ್ಜುನಾ.

ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು, Read More »

ಕಾಮ ಬಲ್ಲಿದನೆಂದಡೆ ಉರುಹಿ ಭಸ್ಮವ ಮಾಡಿದ.

ಕಾಮ ಬಲ್ಲಿದನೆಂದಡೆ ಉರುಹಿ ಭಸ್ಮವ ಮಾಡಿದ. ಕಾಲ ಬಲ್ಲಿದನೆಂದಡೆ ಕೆಡಹಿ ತುಳಿದ. ಎಲೆ ಅವ್ವಾ, ನೀನು ಕೇಳಾ ತಾಯೆ. ಬ್ರಹ್ಮ ಬಲ್ಲಿದನೆಂದಡೆ ಶಿರವ ಚಿವುಟಿಯಾಡಿದ. ಎಲೆ ಅವ್ವಾ ನೀನು ಕೇಳಾ ತಾಯೆ. ವಿಷ್ಣು ಬಲ್ಲಿದನೆಂದಡೆ ಆಕಳ ಕಾಯ್ದಿರಿಸಿದ. ತ್ರಿಪುರದ ಕೋಟೆ ಬಲ್ಲಿತ್ತೆಂದಡೆ ನೊಸಲಕಂಗಳಲುರುಹಿದನವ್ವಾ. ಇದು ಕಾರಣ, ಚೆನ್ನಮಲ್ಲಿಕಾರ್ಜುನ ಗಂಡನೆನಗೆ, ಜನನ ಮರಣಕ್ಕೊಳಗಾಗದ ಬಲುಹನೇನ ಬಣ್ಣಿಪೆನವ್ವಾ.

ಕಾಮ ಬಲ್ಲಿದನೆಂದಡೆ ಉರುಹಿ ಭಸ್ಮವ ಮಾಡಿದ. Read More »

ಕಾಮಾರಿಯ ಗೆಲಿದನು ಬಸವಾ ನಿಮ್ಮಿಂದ.

ಕಾಮಾರಿಯ ಗೆಲಿದನು ಬಸವಾ ನಿಮ್ಮಿಂದ. ಸೋಮಧರನ ಹಿಡಿತಪ್ಪೆನು ಬಸವಾ ನಿಮ್ಮ ಕೃಪೆಯಿಂದ. ನಾಮದಲ್ಲಿ ಹೆಂಗೂಸೆಂಬ ಹೆಸರಾದಡೇನು ? ಭಾವಿಸಲು ಗಂಡು ರೂಪು ಬಸವಾ ನಿಮ್ಮ ದಯದಿಂದ. ಅತಿಕಾಮಿ ಚೆನ್ನಮಲ್ಲಿಕಾರ್ಜುನಂಗೆ ತೊಡರಿಕ್ಕಿ ಎರಡುವರಿಯದೆ ಕೂಡಿದೆನು ಬಸವಾ ನಿಮ್ಮ ಕೃಪೆಯಿಂದ.

ಕಾಮಾರಿಯ ಗೆಲಿದನು ಬಸವಾ ನಿಮ್ಮಿಂದ. Read More »

ಕಾಯವಿಕಾರಿಗೆ ಕಾಯಕ್ಕೆ ಮೆಚ್ಚಿದೆ.

ಕಾಯವಿಕಾರಿಗೆ ಕಾಯಕ್ಕೆ ಮೆಚ್ಚಿದೆ. ವಾಯದ ಸುಖ ನಿನಗೆ ಮುಂದೆ ನರಕವೆಂದರಿಯೆ. ದೇವರ ದೇವಂಗೆ ವಂದಿಸಹೋದರೆ ಬಾಯಬಿಡದಿರು, ಕೈವಿಡಿದು ಸೆಳೆಯದಿರು. ಚೆನ್ನಮಲ್ಲಿಕಾರ್ಜುನನ ಪಾದಕ್ಕೆರಗುವ ಭರವೆನಗೆ ಮರುಳೆ.

ಕಾಯವಿಕಾರಿಗೆ ಕಾಯಕ್ಕೆ ಮೆಚ್ಚಿದೆ. Read More »

ಕಾಯದೊಳಗೆ ಅಕಾಯವಾಯಿತ್ತು.

ಕಾಯದೊಳಗೆ ಅಕಾಯವಾಯಿತ್ತು. ಜೀವದೊಳಗೆ ನಿರ್ಜೀವವಾಯಿತ್ತು. ಭಾವದೊಳಗೆ ನಿರ್ಭಾವವಾಯಿತ್ತು. ಎನ್ನ ಮನದೊಳಗೆ ಘನ ನೆನಹಾಯಿತ್ತು. ಎನ್ನ ತಲೆ ಮೊಲೆಗಳ ನೋಡಿ ಸಲಹಿದಿರಾಗಿ ಚೆನ್ನಮಲ್ಲಿಕಾರ್ಜುನಯ್ಯನ ಧರ್ಮದವಳಾನು.

ಕಾಯದೊಳಗೆ ಅಕಾಯವಾಯಿತ್ತು. Read More »

ಕಾಯದ ಕಾರ್ಪಣ್ಯವರತಿತ್ತು, ಕರಣಂಗಳ ಕಳವಳವಳಿದಿತ್ತು.

ಕಾಯದ ಕಾರ್ಪಣ್ಯವರತಿತ್ತು, ಕರಣಂಗಳ ಕಳವಳವಳಿದಿತ್ತು. ಮನ ತನ್ನ ತಾರ್ಕಣೆಯ ಕಂಡು ತಳವೆಳಗಾದುದು. ಇನ್ನೇವೆನಿನ್ನೇವೆನಯ್ಯಾ ? ನಿಮ್ಮ ಶರಣ ಬಸವಣ್ಣನ ಶ್ರೀಪಾದವ ಕಂಡಲ್ಲದೆ ಬಯಕೆ ಬಯಲಾಗದು. ಇನ್ನೇವೆನಿನ್ನೇವೆನಯ್ಯಾ ಚೆನ್ನಮಲ್ಲಿಕಾರ್ಜುನಾ ?

ಕಾಯದ ಕಾರ್ಪಣ್ಯವರತಿತ್ತು, ಕರಣಂಗಳ ಕಳವಳವಳಿದಿತ್ತು. Read More »

ಕಾಯದ ಕಳವಳವ ಕೆಡಿಸಿ, ಮನದ ಮಾಯೆಯ ಮಾಣಿಸಿ,

ಕಾಯದ ಕಳವಳವ ಕೆಡಿಸಿ, ಮನದ ಮಾಯೆಯ ಮಾಣಿಸಿ, ಎನ್ನ ಹರಣವ ಮೇಲೆತ್ತಿ ಸಲಹಿದೆಯಯ್ಯಾ. ಶಿವಶಿವಾ, ಎನ್ನ ಭವಬಂಧನವ ಬಿಡಿಸಿ, ನಿಮ್ಮತ್ತ ತೋರಿದ ಘನವನುಪಮಿಸಬಾರದಯ್ಯಾ. ಇರುಳೋಸರಿಸಿದ ಜಕ್ಕವಕ್ಕಿಯಂತೆ ನಾನಿಂದು ನಿಮ್ಮ ಶ್ರೀಪಾದವನಿಂಬುಗೊಂಡು ಸುಖದೊಳೋಲಾಡುವೆನಯ್ಯಾ, ಚೆನ್ನಮಲ್ಲಿಕಾರ್ಜುನಾ.

ಕಾಯದ ಕಳವಳವ ಕೆಡಿಸಿ, ಮನದ ಮಾಯೆಯ ಮಾಣಿಸಿ, Read More »

ಕಾಯಕ್ಕೆ ನೆಳಲಾಗಿ ಕಾಡಿತ್ತು ಮಾಯೆ.

ಕಾಯಕ್ಕೆ ನೆಳಲಾಗಿ ಕಾಡಿತ್ತು ಮಾಯೆ. ಪ್ರಾಣಕ್ಕೆ ಮನವಾಗಿ ಕಾಡಿತ್ತು ಮಾಯೆ. ಮನಕ್ಕೆ ನೆನಹಾಗಿ ಕಾಡಿತ್ತು ಮಾಯೆ. ನೆನಹಿಂಗೆ ಅರುಹಾಗಿ ಕಾಡಿತ್ತು ಮಾಯೆ. ಅರುಹಿಂಗೆ ಮರಹಾಗಿ ಕಾಡಿತ್ತು ಮಾಯೆ. ಜಗದ ಜಂಗುಳಿಗೆ ಬೆಂಗೋಲನೆತ್ತಿ ಕಾಡಿತ್ತು ಮಾಯೆ. ಚೆನ್ನಮಲ್ಲಿಕಾರ್ಜುನಾ, ನೀನೊಡ್ಡಿದ ಮಾಯೆಯನಾರಿಗೂ ಗೆಲಬಾರದು.

ಕಾಯಕ್ಕೆ ನೆಳಲಾಗಿ ಕಾಡಿತ್ತು ಮಾಯೆ. Read More »

ಕಾಯ ಮೀಸಲಾಗಿ ನಿನಗರ್ಪಿತವಾಯಿತ್ತು.

ಕಾಯ ಮೀಸಲಾಗಿ ನಿನಗರ್ಪಿತವಾಯಿತ್ತು. ಕರಣ ಮೀಸಲಾಗಿ ನಿನಗರ್ಪಿತವಾಯಿತ್ತು. ಆನೊಂದರಿಯೆನಯ್ಯಾ. ಎನ್ನ ಗತಿ ನೀನಾಗಿ, ಎನ್ನ ಮತಿ ನೀನಾಗಿ, ಪ್ರಾಣ ನಿನಗರ್ಪಿತವಾಯಿತ್ತು. ನೀನಲ್ಲದೆ ಪೆರತೊಂದ ನೆನೆದಡೆ ಆಣೆ, ನಿಮ್ಮಾಣೆ ಚೆನ್ನಮಲ್ಲಿಕಾರ್ಜುನಾ.

ಕಾಯ ಮೀಸಲಾಗಿ ನಿನಗರ್ಪಿತವಾಯಿತ್ತು. Read More »

ಕಾಯ ಪ್ರಸಾದವೆನ್ನ, ಜೀವ ಪ್ರಸಾದವೆನ್ನ,

ಕಾಯ ಪ್ರಸಾದವೆನ್ನ, ಜೀವ ಪ್ರಸಾದವೆನ್ನ, ಪ್ರಾಣ ಪ್ರಸಾದವೆನ್ನ, ಮನಪ್ರಸಾದವೆನ್ನ, ಧನ ಪ್ರಸಾದವೆನ್ನ, ಭಾವ ಪ್ರಸಾದವೆನ್ನ, ಸಯದಾನ ಪ್ರಸಾದವೆನ್ನ, ಸಮಭೋಗ ಪ್ರಸಾದವೆನ್ನ. ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ಪ್ರಸಾದವ ಹಾಸಿ ಹೊದಿಸಿಕೊಂಡಿಪ್ಪೆನು.

ಕಾಯ ಪ್ರಸಾದವೆನ್ನ, ಜೀವ ಪ್ರಸಾದವೆನ್ನ, Read More »

ಕಾಯ ಕರ್ರನೆ ಕಂದಿದಡೇನಯ್ಯಾ ?

ಕಾಯ ಕರ್ರನೆ ಕಂದಿದಡೇನಯ್ಯಾ ? ಕಾಯ ಮಿರ್ರನೆ ಮಿಂಚಿದಡೇನಯ್ಯಾ ? ಅಂತರಂಗ ಶುದ್ಧವಾದ ಬಳಿಕ ಚೆನ್ನಮಲ್ಲಿಕಾರ್ಜುನಯ್ಯಾ ನೀನೊಲಿದ ಕಾಯವು ಹೇಗಿದ್ದಡೇನಯ್ಯಾ ?

ಕಾಯ ಕರ್ರನೆ ಕಂದಿದಡೇನಯ್ಯಾ ? Read More »

ಕೂಡಿ ಕೂಡುವ ಸುಖದಿಂದ

ಕೂಡಿ ಕೂಡುವ ಸುಖದಿಂದ ಒಪ್ಪಚ್ಚಿ ಅಗಲಿ ಕೂಡುವ ಸುಖ ಲೇಸು, ಕೆಳದಿ ? ಒಚ್ಚೊತ್ತಗಲಿದಡೆ ಕಾಣದಿರಲಾರೆ. ಎನ್ನ ದೇವ ಚೆನ್ನಮಲ್ಲಿಕಾರ್ಜುನನಗಲಿಯಗಲದ ಸುಖವೆಂದಪ್ಪುದೊ ?

ಕೂಡಿ ಕೂಡುವ ಸುಖದಿಂದ Read More »

ಕುಲಗಿರಿಯ ಶಿಖರದ ಮೇಲೆ ಬಾಳೆ ಬೆಳೆವುದಯ್ಯಾ ಎಂದಡೆ,

ಕುಲಗಿರಿಯ ಶಿಖರದ ಮೇಲೆ ಬಾಳೆ ಬೆಳೆವುದಯ್ಯಾ ಎಂದಡೆ, ಬಾಳೆ ಬೆಳೆವುದಯ್ಯಾ ಎನಬೇಕು. ಓರೆಗಲ್ಲ ನುಗ್ಗುಗುಟ್ಟಿ ಮೆಲಬಹುದಯ್ಯಾ ಎಂದಡೆ, ಅದು ಅತ್ಯಂತ ಮೃದು ಮೆಲಬಹುದಯ್ಯಾ ಎನಬೇಕು. ಸಿಕ್ಕದ ಠಾವಿನಲ್ಲಿ ಉಚಿತವ ನುಡಿವುದೆ ಕಾರಣ ಚೆನ್ನಮಲ್ಲಿಕಾರ್ಜುನ ಮತ್ರ್ಯಕ್ಕೆ ಬಂದುದಕ್ಕಿದೆ ಗೆಲವು.

ಕುಲಗಿರಿಯ ಶಿಖರದ ಮೇಲೆ ಬಾಳೆ ಬೆಳೆವುದಯ್ಯಾ ಎಂದಡೆ, Read More »

ಕಳನೇರಿ ಇಳಿವುದು ವೀರಂಗೆ ಮತವಲ್ಲ.

ಕಳನೇರಿ ಇಳಿವುದು ವೀರಂಗೆ ಮತವಲ್ಲ. ಶಿವಶರಣಂಗೆ ಹಿಮ್ಮೆಟ್ಟುವುದು ಪ ಥವಲ್ಲ. ಮನದೊಡೆಯ ಮನವನಿಂಬುಗೊಂಬನಯ್ಯಾ. ಇರಲಾಗದು ಶ್ರೀಪರ್ವತವ ಇಳಿದಡೆ ವ್ರತಕ್ಕೆ ಭಂಗ. ಕಳನೇರಿ ಕೈದು ಮರೆದಡೆ ಮಾರಂಕ ಚೆನ್ನಮಲ್ಲಿಕಾರ್ಜುನನಿಮ್ಮೈಗಾಣಲಿರಿವನು.

ಕಳನೇರಿ ಇಳಿವುದು ವೀರಂಗೆ ಮತವಲ್ಲ. Read More »

ಕಲ್ಯಾಣವೆಂಬುದಿನ್ನಾರಿಗೆ ಹೊಗಬಹುದು ?

ಕಲ್ಯಾಣವೆಂಬುದಿನ್ನಾರಿಗೆ ಹೊಗಬಹುದು ? ಹೊಗಬಾರದು, ಅಸಾಧ್ಯವಯ್ಯಾ. ಆಸೆ ಆಮಿಷ ಅಳಿದಂಗಲ್ಲದೆ ಕಲ್ಯಾಣದತ್ತಲಡಿಯಿಡಬಾರದು. ಒಳಹೊರಗು ಶುದ್ಧನಾದಂಗಲ್ಲದೆ ಕಲ್ಯಾಣವ ಹೊಗಬಾರದು. ನೀನಾನೆಂಬುದ ಹರಿದಂಗಲ್ಲದೆ ಕಲ್ಯಾಣದ ಒಳಗು ತಿಳಿಯಬಾರದು. ಚೆನ್ನಮಲ್ಲಿಕಾರ್ಜುನಂಗೊಲಿದು ಉಭಯ ಲಜ್ಜೆ ಅಳಿದೆನಾಗಿ ಕಲ್ಯಾಣವಂ ಕಂಡು ನಮೋ ನಮೋ ಎನುತಿದ್ದೆನು.

ಕಲ್ಯಾಣವೆಂಬುದಿನ್ನಾರಿಗೆ ಹೊಗಬಹುದು ? Read More »

ಕಲ್ಯಾಣಕೈಲಾಸವೆಂಬ ನುಡಿ ಹಸನಾಯಿತ್ತು.

ಕಲ್ಯಾಣಕೈಲಾಸವೆಂಬ ನುಡಿ ಹಸನಾಯಿತ್ತು. ಒಳಗೂ ಕಲ್ಯಾಣ ಹೊರಗೂ ಕಲ್ಯಾಣ. ಇದರಂತುವನಾರು ಬಲ್ಲರಯ್ಯಾ ? ನಿಮ್ಮ ಸತ್ಯ ಶರಣರ ಸುಳುಹು ತೋರುತ್ತಿದೆಯಯ್ಯಾ. ನಿಮ್ಮ ಶರಣ ಬಸವಣ್ಣನ ಕಾಂಬೆನೆಂಬ ತವಕವೆನಗಾಯಿತ್ತು ಕೇಳಾ ಚೆನ್ನಮಲ್ಲಿಕಾರ್ಜುನಾ.

ಕಲ್ಯಾಣಕೈಲಾಸವೆಂಬ ನುಡಿ ಹಸನಾಯಿತ್ತು. Read More »

ಕಲ್ಲಹೊತ್ತು ಕಡಲೊಳಗೆ ಮುಳುಗಿದಡೆ

ಕಲ್ಲಹೊತ್ತು ಕಡಲೊಳಗೆ ಮುಳುಗಿದಡೆ ಎಡರಿಂಗೆ ಕಡೆಯುಂಟೆ ಅವ್ವಾ ? ಉಂಡು ಹಸಿವಾಯಿತ್ತೆಂದಡೆ ಭಂಗವೆಂಬೆ. ಕಂಡ ಕಂಡ ಠಾವಿನಲ್ಲಿ ಮನ ಬೆಂದಡೆ ಗಂಡ ಚೆನ್ನಮಲ್ಲಿಕಾರ್ಜುನಯ್ಯನೆಂತೊಲಿವನವ್ವಾ ?

ಕಲ್ಲಹೊತ್ತು ಕಡಲೊಳಗೆ ಮುಳುಗಿದಡೆ Read More »

ಕಲ್ಲ ತಾಗಿದ ಮಿಟ್ಟೆ ಕೆಲಕ್ಕೆ ಸಾರುವಂತೆ

ಕಲ್ಲ ತಾಗಿದ ಮಿಟ್ಟೆ ಕೆಲಕ್ಕೆ ಸಾರುವಂತೆ ಆನು ಬಲ್ಲೆನೆಂಬ ನುಡಿ ಸಲ್ಲದು. ಲಿಂಗದಲ್ಲಿ ಮರೆದು ಮಚ್ಚಿರ್ದ ಮನವು ಹೊರಗೆ ಬೀಸರವೋಗದೆ ? ಉರೆ ತಾಗಿದ ಕೋಲು ಗರಿ ತೋರುವುದೆ ? ಮೊರೆದು ಬೀಸುವ ಗಾಳಿ ಪರಿಮಳವನುಂಡಂತೆ ಬೆರಸಬೇಕು ಚೆನ್ನಮಲ್ಲಿಕಾರ್ಜುನಯ್ಯನ.

ಕಲ್ಲ ತಾಗಿದ ಮಿಟ್ಟೆ ಕೆಲಕ್ಕೆ ಸಾರುವಂತೆ Read More »

ಕರ್ಮವೆಂಬ ಕದಳಿ ಎನಗೆ, ಕಾಯವೆಂಬ ಕದಳಿ ನಿಮಗೆ.

ಕರ್ಮವೆಂಬ ಕದಳಿ ಎನಗೆ, ಕಾಯವೆಂಬ ಕದಳಿ ನಿಮಗೆ. ಮಾಟವೆಂಬ ಕದಳಿ ಬಸವಣ್ಣಂಗೆ, ಭಾವವೆಂಬ ಕದಳಿ ಚೆನ್ನಬಸವಣ್ಣಂಗೆ. ಬಂದ ಬಂದ ಭಾವ ಸಲೆ ಸಂದಿತ್ತು. ಎನ್ನಂಗದ ಅವಸಾನವ ಹೇಳಾ, ಚೆನ್ನಮಲ್ಲಿಕಾರ್ಜುನಾ.

ಕರ್ಮವೆಂಬ ಕದಳಿ ಎನಗೆ, ಕಾಯವೆಂಬ ಕದಳಿ ನಿಮಗೆ. Read More »

ಕದಳಿ ಎಂಬುದು ತನು, ಕದಳಿ ಎಂಬುದು ಮನ,

ಕದಳಿ ಎಂಬುದು ತನು, ಕದಳಿ ಎಂಬುದು ಮನ, ಕದಳಿ ಎಂಬುದು ವಿಷಯಂಗಳು. ಕದಳಿ ಎಂಬುದು ಭವಘೋರಾರಣ್ಯ. ಈ ಕದಳಿ ಎಂಬುದ ಗೆದ್ದು ತವೆ ಬದುಕಿ ಬಂದು ಕದಳಿಯ ಬನದಲ್ಲಿ ಭವಹರನ ಕಂಡೆನು. ಭವ ಗೆದ್ದು ಬಂದ ಮಗಳೆ ಎಂದು ಕರುಣದಿ ತೆಗೆದು ಬಿಗಿಯಪ್ಪಿದಡೆ ಚೆನ್ನಮಲ್ಲಿಕಾರ್ಜುನನ ಹೃದಯಕಮಲದಲ್ಲಿ ಅಡಗಿದೆನು.

ಕದಳಿ ಎಂಬುದು ತನು, ಕದಳಿ ಎಂಬುದು ಮನ, Read More »