ಮಾಡು ದಾನ ಧರ್ಮ ಪರ
ಮಾಡು ದಾನ ಧರ್ಮ ಪರ ಉಪಕಾರವ ಮರೆಯದಿರೆಚ್ಚರಿಕೆ ಕೇಡು ನೆನೆಯ ಬೇಡ ನಂಬಿದವರ ಮೇಲೆ ಕೆಡುವೆ ನೀನೆಚ್ಚರಿಕೆ ಬಾಳು ಬದುಕು ಸಿರಿ ಇರುವಾಗ ಬಂಧುಬಳಗಗಳೆಚ್ಚರಿಕೆಹಾಳು ಸಂಸಾರಕ್ಕೆ ಹಲವರ ಬಾಯ್ಗಳ ಬಡಿಯದಿರೆಚ್ಚರಿಕೆ ||1|| ಮೂಢರ ಒಡನಾಡಿ ಮುಂದೆ ಕೆಡಲು ಬೇಡ ಮೋಸ ನೋಡೆಚ್ಚರಿಕೆನಾಡೊಳು ಸುಜನರ ನೋಡಿ ನಡೆ ಕಂಡ್ಯ ನಟನೆ ಬೇಡೆಚ್ಚರಿಕೆ ||2|| ಚೆನ್ನಾಗಿ ಬದುಕಿದೆ ಗಳಿಸಿದೆ ನಾನೆಂಬ ಹೆಮ್ಮೆ ಬೇಡೆಚ್ಚರಿಕೆನಿನ್ನಾಯು ಮುಗಿಯಲು ಯಮದೂತರು ಬಂದು ಎಳೆಯುವರೆಚ್ಚರಿಕೆ ||3|| ಹೆಣ್ಣು ಹೊನ್ನು ಮಣ್ಣು ನಿನ್ನನ್ನಗಲಿ ಹೋಗುವರೆಚ್ಚರಿಕೆಮುನ್ನ ಮಾಡಿದ ಪುಣ್ಯ […]