admin

ಬೀದಿಯೊಳು ಯಾತರಾ ನಂಟು ಬೇಡ

ಬೀದಿಯೊಳು ಯಾತರಾ ನಂಟು ಬೇಡ ದಮ್ಮಯ್ಯ ಭೇದಿಸಿ ನೋಡುವರುಂಟು ಬೆಂಬತ್ತಿ ಬಾರದಿರಯ್ಯ ಕಂಡ ಕಂಡ ಠಾವಿನಲಿ ಕಣ್ಣೆತ್ತಿ ನೋಡದಿರಯ್ಯಕಂಡಿಯೊಳು ಕೈಸನ್ನೆ ಮಾಡದಿರಯ್ಯಗಂಡನುಳ್ಳವಳ ಜೊತೆ ಭಂಡಾಟವ್ಯಾಕಯ್ಯಕೊಂಡೆಗಾತಿಯರುಂಟು ದುಡುಕದಿರಯ್ಯ ||1|| ಬೇಳುವೆಯ ಮಾತಾಡಿ ಗಾಳ ಹಾಕದಿರಯ್ಯಬಾಳೆ ಹಣ್ಣಿಗೆ ಕೊಡಲಿ ಬೇಕೆ ದಮ್ಮಯ್ಯಆಳುವ ಅರಸಾಗಿ ನಿನಗಾವ ಬರವಯ್ಯಮೇಳದವರ ಬಿಟ್ಟು ಮೇರೆದಪ್ಪುವರೇನಯ್ಯ ||2|| ನೋಡುವರು ಜನರೆಲ್ಲ ನಾಚಿಕೆ ಇಲ್ಲವೇನಯ್ಯಜೋಡು ಕಳಸವ ಹಿಡಿಯದಿರು ಜೋಕೆ ದಮ್ಮಯ್ಯಮಾಡುವ ದೈನ್ಯ ಬಲ್ಲೆ ಮದ್ದೂರು ನರಸಿಂಹಯ್ಯಕೂಡಿದ ಕನಕನಾದಿಕೇಶವ ನೀನಹುದಯ್ಯ ||3||

ಬೀದಿಯೊಳು ಯಾತರಾ ನಂಟು ಬೇಡ Read More »

ಬಾಲಕನೆಂದೆತ್ತಿಕೊಂಡೆನೆ – ಗೋಪಾಲಕೃಷ್ಣನ

ಬಾಲಕನೆಂದೆತ್ತಿಕೊಂಡೆನೆ – ಗೋಪಾಲಕೃಷ್ಣನಬಾಲಕನೆಂದೆತ್ತಿಕೊಂಡೆನೆ ಬಾಲಕನೆಂದೆತ್ತಿಕೊಂಡರೆ – ವಾರೆ ಮಾಡಿ ಮೋರೆ ನೋಡಿಶ್ರೀಲತಾಂಗಿಯರ ಲೋಲ – ಮಾರನಾಟವಾಡಿ ಪೋದನೆ ಹೊತ್ತರೆದ್ದು ಮನೆಗೆ ಬಂದನೆ – ಯಶೋದೆ ಕೇಳೆ ಎತ್ತಿಕೊಂಡು ಮುತ್ತುಕೊಟ್ಟೆನೆಎತ್ತಿಕೊಂಡು ಮುತ್ತು ಕೊಟ್ಟರೆಮುತ್ತಿನ್ಹಾರ ಕೊರಳಿಗ್ಹಾಕಿಚಿತ್ತಜಾತ ಕೇಳಿಯಲ್ಲಿಬತ್ತಲೆ ನಿಂದೆತ್ತು ಎಂದನೆ||1|| ಗಂಡನಂತೆ ಮನೆಗೆ ಬಂದನೆ – ಯಶೋದೆ ಕೇಳೆಮಿಂಡನಂತೆ ಕಣ್ಣು ಹೊಡೆದನೆಪುಂಡಪೋಕರನ್ನು ಮೀರಿದುಂಡು ಕುಚಗಳನ್ನು ಪಿಡಿದುದಿಂಡುರುಳಿಸಿ ಒಂದುಸರಲಿಬಂಡನುಂಡು ಹಾರಿ ಪೋದನೆ ||2|| ಏಸು ಮೋಸ ಕಲಿತ ಜಾಣನೆ – ಯಶೋದೆ ಕೇಳೆವಾಸುದೇವ ಮಾಯಕಾರನೆಹಾಸುಮಂಚದ ಹಾಸುಗೆಯಲಿತೋಷದಿಂದ ಬಾಚಿ ಸೆಳೆದುಶೇಷನನ್ನು ಪೂಜಿಸೆಂದಶ್ರೀಶ ಬಾಡದಾದಿ

ಬಾಲಕನೆಂದೆತ್ತಿಕೊಂಡೆನೆ – ಗೋಪಾಲಕೃಷ್ಣನ Read More »

ಬಾರೊ ಭಾಗ್ಯದ ನಿಧಿಯೆ

ಬಾರೊ ಭಾಗ್ಯದ ನಿಧಿಯೆ, ದಯಾಂಬುಧಿಯೆ ಸಾರಿದವರ್ಗಿತ್ತೆ ಸುಧೆವಾರಿಜಾರಿ ಕೌಮುದಿವಾರಿಜಧರ ಮುದದಿಸಾರಸ ಹೃದಯದಿಕೇರಿ ಕೇರಿಯಲಿ ಶೃಂಗಾರದಿ ಮೆರೆವ ಅಪಾರ ದಯಾನಿಧಿ ವಿಜಯ ನಿಮ್ಮಯ ಪಾದ ಭಜಕರಿಗೆ ಕೊಡಲಿವಿಜಯ ದಶಮಿಯಲ್ಲಿ ವಿಜಯರಥದಲ್ಲಿ ಕೂತುವಿಜಯಳ ಸಹಿತದಿ ವಿಜಯ ಮಾಡುತ ಬಾರೊವಿಜಯ ಸಾರಥಿ ಆದಿವಿಜಯ ರಥದಿ ಪರ ರವಿಜನ ನೀ ಸೋಲಿಸಿತ್ರಿಜಗ ವಿಜಯ ವೇಷ ವಿಜಯಗಿತ್ತು ಮೆರೆದೆವಿಜಯ ಮೂರುತಿಯೆ ||1|| ದಶದಶನಂದ ಏಕಾದಶ ಚಂದ್ರಶೇಖರ ದ್ವಾ-ದಶಾದಿತ್ಯ ಮಾರುತರು ದಶ ವಿಶ್ವದೇವ ಯಾತ್ರಾದಶನಾ ಏಕಾ ಸರ್ವದಾದಶಋಷಿ ಮುನಿ ನೃಪ ದಶದಿಕ್ಕಿನ ಜನರುದಶಮ ಉತ್ಸವ ನೋಡಿ

ಬಾರೊ ಭಾಗ್ಯದ ನಿಧಿಯೆ Read More »

ಬಾಯಿ ನಾರಿದ ಮೇಲೆ ಏಕಾಂತವೆ

ಬಾಯಿ ನಾರಿದ ಮೇಲೆ ಏಕಾಂತವೆತಾಯಿ ತೀರಿದ ಮೇಲೆ ತೌರಾಸೆಯೆ ಕಣ್ಣು ಕೆಟ್ಟ ಮೇಲೆ ಕಡುರೂಪು ಚೆಲ್ವಿಕೆಯೆಬಣ್ಣಗುಂದಿದ ಮೇಲೆ ಬಹುಮಾನವೆಪುಣ್ಯ ತೀರಿದ ಮೇಲೆ ಪರಲೋಕ ಸಾಧನವೆಸುಣ್ಣವಿಲ್ಲದ ವೀಳ್ಯವದು ಸ್ವಾದುಮಯವೆ ||1|| ಕಿಲುಬಿನಾ ಬಟ್ಟಲೊಳು ಹುಳಿ ಕಲಸಿ ಉಣಬಹುದೆಚಳಿಜ್ವರಕೆ ಚಂದನದ ಲೇಪ ಹಿತವೆಮೊಲೆಬಿದ್ದ ಹೆಣ್ಣಿನೊಳು ಮೋಹಕ್ಕೆ ಸೊಗಸಹುದೆಬೆಲೆಬಿದ್ದ ಸರಕಿನೊಳು ಲಾಭ ಉಂಟೆ ||2|| ಪಥ್ಯ ಸೇರದ ಮೇಲೆ ನಿತ್ಯ ಸುಖವೆನಬಹುದೆಸತ್ತ್ವ ತಗ್ಗಿದ ಮೇಲೆ ಸಾಮಥ್ರ್ಯವೆಪೃಥ್ವಿಯೊಳು ಕಾಗಿನೆಲೆಯಾದಿಕೇಶವ ನಿನ್ನಸತ್ಯವಾದ ಭಕ್ತಿ ಇರದವಗೆ ಮುಕ್ತಿಯುಂಟೆ ||3||

ಬಾಯಿ ನಾರಿದ ಮೇಲೆ ಏಕಾಂತವೆ Read More »

ಬಾಗಿಲನು ತೆರೆದು

ಬಾಗಿಲನು ತೆರೆದು ಸೇವೆಯನು ಕೊಡು ಹರಿಯೆಕೂಗಿದರು ಧ್ವನಿ ಕೇಳಲಿಲ್ಲವೇ ನರಹರಿಯೇ ಪರಮ ಪದದೊಳಗೆ ವಿಷಧರನ ತಲ್ಪದಲಿ ನೀಸಿರಿ ಸಹಿತ ಕ್ಷೀರವಾರಿಧಿಯೊಳಿರಲುಕರಿರಾಜ ಕಷ್ಟದಲಿ ಆದಿಮೂಲಾ ಎಂದುಕರೆಯಲಾಕ್ಷಣ ಬಂದು ಒದಗಿದೆಯೊ ನರಹರಿಯೆ ||1|| ಕಡುಕೋಪದಿಂ ಖಳನು ಖಡುಗವನು ಪಿಡಿದು ನಿ-ನ್ನೊಡೆಯನೆಲ್ಲಿಹನೆಂದು ಜಡಿದು ನುಡಿಯೆದೃಢ ಭಕುತಿಯಲಿ ಶಿಶುವು ಬಿಡದೆ ನಿನ್ನನು ಭಜಿಸೆಸಡಗರದಿ ಕಂಬದಿಂದೊಡೆದೆ ನರಹರಿಯೆ ||2|| ಯಮಸುತನ ರಾಣಿಗಕ್ಷಯ ವಸನವನ್ನಿತ್ತೆಸಮಯದಲಿ ಅಜಮಿಳನ ಪೊರೆದೆಸಮಯಾಸಮಯವುಂಟೆ ಭಕ್ತವತ್ಸಲ ನಿನಗೆಕಮಲಾಕ್ಷ ಕಾಗಿನೆಲೆಯಾದಿಕೇಶವನೆ ||3||

ಬಾಗಿಲನು ತೆರೆದು Read More »

ಬಲ್ಲೆ ಬಲ್ಲೆನು ನಿನ್ನ ಬಾಳ ಪ್ರತಾಪವ

ಬಲ್ಲೆ ಬಲ್ಲೆನು ನಿನ್ನ ಬಾಳ ಪ್ರತಾಪವಎಲ್ಲಾ ಲೋಕ ಲೋಕದಿ ಬಲ್ಲಿದವರ ಭಂಗ ಪಡಿಸಿದೆ ನಿನಗೆಣೆ-ಯಿಲ್ಲ ಶನೈಶ್ಚರನೆ ಹರಿಹರ ಬ್ರಹ್ಮಾದಿಗಳ ಭಂಗಪಡಿಸಿದೆ ಕರುಣವಿಲ್ಲವೆ ನಿನಗೆ ಹರಿಶ್ಚಂದ್ರ ನಳಚಕ್ರವರ್ತಿ ಷೋಡಶ ಮಹಾರಾಯ ಪಾಂಡ್ಯರ ದಣಿಸಿ ತೋರಿಸಿದೆ ಮನೆ ಮನೆ ವಾರ್ತೆಗಳೆಲ್ಲವ ತಿರಿದುಂಡು ಮರುಳುಗೊಂಡು ಪರರ ಪೀಡಿಸಿ ಭ್ರಮೆಪಟ್ಟು ಲಜ್ಜೆಗೆಟ್ಟು ತಿರುಗುವಂದದಿ ಮಾಡಿದೆ ||1|| ಕಟ್ಟಿದ ಪಶು ಕರೆಯದು ತಾನಾಡಿದ ಮಾತು ಕಟ್ಟದು ಸಭೆಯೊಳಗೆ ಮೆಟ್ಟಿದ ನೆಲ ಮುನಿವುದು ಹೊನ್ನ ಹಿಡಿದರೆ ಬಕ್ಕಟ್ಟೆ ಬಯಲಹುದು ಉಟ್ಟದ್ದು ಹಾವಾಗಿ ಹರಿವುದು ಸಾಲಿ-ಗರಟ್ಟುಳಿ ಘನವಹುದು

ಬಲ್ಲೆ ಬಲ್ಲೆನು ನಿನ್ನ ಬಾಳ ಪ್ರತಾಪವ Read More »

ಬಲ್ಲವರೆ ಬಲ್ಲರು ಎಲ್ಲವರು ಅರಿಯರು

ಬಲ್ಲವರೆ ಬಲ್ಲರು ಎಲ್ಲವರು ಅರಿಯರುಪುಲ್ಲಲೋಚನ ಪರಬ್ರಹ್ಮನೆಂಬುದನು ಅಜ್ಞಾನಾಧಿಕ ಬಲ್ಲ ಅನ್ನಲಸ್ನೇಹಿತ ಬಲ್ಲಗಜ ಚರ್ಮಾಂಬರ ಬಲ್ಲ ಗರುಡ ಬಲ್ಲಭುಜಗೇಶ್ವರ ಬಲ್ಲ ಭೂರಿಲೋಚನ ಬಲ್ಲತ್ರಿಜಗದಧಿಪತಿ ತ್ರಿವಿಕ್ರಮನೆಂಬುದನು||1|| ಶುಕಯೋಗೀಶ್ವರ ಬಲ್ಲ ಸುಗುಣ ನಾರದ ಬಲ್ಲಭಕುತ ಪ್ರಹ್ಲಾದ ಬಲ್ಲ ಬಲಿಯು ಬಲ್ಲರುಕುಮಾಂಗದ ಬಲ್ಲ ಋಷಿ ಪರಾಶರ ಬಲ್ಲಮಕರಕುಂಡಲಧರ ಪರಾತ್ಪರನೆಂಬುದನು ||2|| ಅಂಬರೀಶನು ಬಲ್ಲ ಅತ್ರಿ ಋಷಿಯು ಬಲ್ಲಸಂಭ್ರಮದಿ ಮನು ಬಲ್ಲ ಸಹದೇವ ಬಲ್ಲಬೆಂಬಿಡದುದ್ಧವ ಬಲ್ಲ ಬೇಡಿದ ಧ್ರುವ ಬಲ್ಲಕಂಬು ಚಕ್ರಧರ ಕರ್ಮಹರನೆಂಬುದನು ||3|| ವಶಿಷ್ಠಮುನಿ ಬಲ್ಲ ವರ ವಿಭೀಷಣ ಬಲ್ಲವಿಶಿಖಶಯನ ಬಲ್ಲ ವಿದುರ

ಬಲ್ಲವರೆ ಬಲ್ಲರು ಎಲ್ಲವರು ಅರಿಯರು Read More »

ಬಲಗೊಂಬೆ ಚೆನ್ನರಾಯ ಭಕ್ತರ ಪ್ರಿಯ

ಬಲಗೊಂಬೆ ಚೆನ್ನರಾಯ ಭಕ್ತರ ಪ್ರಿಯ ವೇದ ವಾದಗಳಲ್ಲಿ | ಕಾಡುವ ಜನರಲ್ಲಿಓದುವ ವಿದ್ಯೆಗಳಲ್ಲಿ | ವಾದವ ಗೆಲಿಸಯ್ಯ ||1|| ಆರು ವೈರಿಗಳಲ್ಲಿ | ಅಷ್ಟ ಗಜಂಗಳಲ್ಲಿಮೂರು ಏಳರಲ್ಲಿ | ಮುಂದೆ ನೀ ಗೆಲಿಸಯ್ಯ||2|| ಪರಮ ಭಕ್ತಿಯೊಳ್ನಿನ್ನ | ಚರಣಕೆರಗುವೆ ಮುನ್ನಸಿರಿಯ ಪಾಲಿಪ ಚೆನ್ನ | ವರದ ಕೇಶವ ರನ್ನ||3||

ಬಲಗೊಂಬೆ ಚೆನ್ನರಾಯ ಭಕ್ತರ ಪ್ರಿಯ Read More »

ಬಯಗುತನಕ ಆಟ ಕೂಟ

ಬಯಗುತನಕ ಆಟ ಕೂಟ ಊಟದ ಕೆಲಸ ಉಂಡ ಮೇಲೆ ಶಯನ ಬಯಲಾಯಿತು ಈ ಒಗತನವೆಲ್ಲ ರಕ್ಷಿಸಯ್ಯ ರಘುಕುಲ ತಿಲಕ ಪುರಾಣವಿಲ್ಲ ಪುಣ್ಯಕತೆಯಿಲ್ಲ ಪಾರಾಯಣದಿ ಮನಸಿಲ್ಲತರೋಣ ಬರೋಣ ತಿನ್ನೋಣ ಮಲಗೋಣ ಮತ್ತೇಳೋಣ ||1|| ಕಣ್ಣಿಗೆ ಜೋಂಪು ಹತ್ತುವತನಕ ಅನ್ಯವಿಷಯ ಮಾತುಕತೆಯಾಟಹೆಣ್ಣು ಹೊನ್ನು ಮಣ್ಣು ಮಮಕಾರದಿ ಒಳಹೊರಗಿಣುಕಾಟ||2|| ಹೀಗಾಗಿ ನಿನ್ನಲ್ಲಿಗೆ ಬಂದೆ ಇನ್ನಾದರೂ ಸಲಹೊ ಸಿರಿಕಾಗಿನೆಲೆಯಾದಿಕೇಶವ ಶಿರಬಾಗಿ ಬೇಡಿಕೊಂಬೆ ||3||

ಬಯಗುತನಕ ಆಟ ಕೂಟ Read More »

ಬದುಕಿದೆನು ಬದುಕಿದೆನು ಭವ ಎನಗೆ ಹಿಂಗಿತು

ಬದುಕಿದೆನು ಬದುಕಿದೆನು ಭವ ಎನಗೆ ಹಿಂಗಿತು ಪದುಮನಾಭನ ಪಾದದೊಲುಮೆ ಎನಗಾಯಿತು ಹರಿತೀರ್ಥ ಪ್ರಸಾದ ಎನ್ನ ಜಿಹ್ವೆಗೊದಗಿತುಹರಿಯ ನಾಮಾಮೃತ ಕಿವಿಗೊದಗಿತುಹರಿಯ ದಾಸರು ಎನ್ನ ಬಂಧು ಬಳಗವಾದರುಹರಿಯ ಶ್ರೀಮುದ್ರೆ ಆಭರಣವಾಯ್ತು ||1|| ಮುಕುತರಾದರು ಎನ್ನ ನೂರೊಂದು ಕುಲದವರುಮುಕುತಿ ಮಾರ್ಗಕೆ ಯೋಗ್ಯ ನಾನಾದೆನೊಅಕಳಂಕ ಶ್ರೀಹರಿ ಭಕುತಿಗೆನ್ನ ಮನ ಬೆಳೆದುರುಕುಮಿಣಿಯರಸ ಕೈವಶನಾದನೆನಗೆ ||2|| ಇಂದೆನ್ನ ಜೀವಕ್ಕು ಸಕಲ ಸಂಪದವಾಯ್ತುಮುಂದೆನ್ನ ಜನ್ಮ ಸಫಲವಾಯಿತುತಂದೆ ಶ್ರೀ ಕಾಗಿನೆಲೆಯಾದಿಕೇಶವರಾಯಬಂದೆನ್ನ ಹೃದಯದಲಿ ನೆಲೆಯಾಗಿ ನಿಂತ ||3||

ಬದುಕಿದೆನು ಬದುಕಿದೆನು ಭವ ಎನಗೆ ಹಿಂಗಿತು Read More »

ಬಂಧುಗಳದಾರಿಗಾರಿದ್ದರೇನು

ಬಂಧುಗಳದಾರಿಗಾರಿದ್ದರೇನು – ಇಷ್ಟಬಂಧು ತ್ರೈಜಗಕೆ ಶ್ರೀಹರಿಯಲ್ಲದೆ – ಮಿಕ್ಕಬಂದುಗಳದಾರಿಗಾರಿದ್ದರೇನು ನೆಗಳ ಕೈಯಲ್ಲಿ ಮಾತಂಗವು ಸಿಕ್ಕಿ ಒದರಲಾಗಿ – ಆನೆಗಳೇನ ಮಾಡುತಿರ್ದವಡವಿಯಲಿನಗಜೆಯಾಳ್ದನ ಬ್ರಹ್ಮೇತಿ ಬಂದು ಕಾಡಲಾಗಿ ರುದ್ರಾದಿಗಳೇನ ಮಾಡುತಿರ್ದರಾ ಶೈಲದೊಳಗೆ ||1|| ದಿಂಡೆಯ ಮಾರ್ಗದಿ ಮಲತಾಯಿ ಮಗನ ಹೊಡೆಯಲುಮಂಡಲ ಪತಿ ಏನ ಮಾಡುತಿರ್ದನುಮಿಂಡಿ ಪೆಣ್ಣನು ಸಭೆಯಲ್ಲಿ ಸೀರೆ ಸುಲಿಯಲುಗಂಡರೈವರು ನೋಡಿ ಏನ ಮಾಡುತಿರ್ದರಯ್ಯ ||2|| ಮೃಗಚಕ್ರವರ್ತಿ ಬಹುವರನಾಗಿ ಪೋಗುತ್ತಿರೆಮಿಗೆ ಸತಿಸುತರೇನ ಮಾಡುತಿರ್ದರುಮೃಗಮಾನವಾಕಾರ ಕಾಗಿನೆಲೆಯಾದಿಕೇಶವನಲ್ಲದೆಮಿಗು ಬಂಧುಗಳದಾರಿಗಾರಿದ್ದರೇನು ||3||

ಬಂಧುಗಳದಾರಿಗಾರಿದ್ದರೇನು Read More »

ಬಂದೆವಯ್ಯ ಗೋವಿಂದಶೆಟ್ಟಿ

ಬಂದೆವಯ್ಯ ಗೋವಿಂದಶೆಟ್ಟಿ – ನಿಮ್ಮಹರಿವಾಣ ತೀರ್ಥಪ್ರಸಾದ ಉಂಟೆನಲಾಗಿ ಅಪ್ಪವು ಅತಿರಸ ತುಪ್ಪವು ಚಿನಿಪಾಲುಒಪ್ಪುವ ಸಕ್ಕರೆ ಯಾಲಕ್ಕಿಯುಅಪರೂಪವಾದ ಕಜ್ಜಾಯಗಳನೆಲ್ಲಛಪ್ಪನ್ನ ದೇಶಕ್ಕೆ ಮಾರುವ ಶೆಟ್ಟಿ||1|| ಒಡೆದ ಮಡಕೆ ತಂದು ಇಡಿದು ನಾಮವ ಮಾಡಿಕೊಡುವೆ ನೀ ಕಾಸಿಗೆ ಒಂದೊಂದನುಒಡಲು ತುಂಬಿ ಮಿಕ್ಕ ಅನ್ನವ ಮಾರಿಸಿಒಡವೆಯ ಗಳಿಸುವ ಕಡುಲೋಭಿ ಶೆಟ್ಟಿ ||2|| ಶೇಷಗಿರಿಯಲ್ಲಿ ವಾಸ ಮಾಡಿಕೊಂಡುದೇಶದೇಶಕ್ಕೆ ಹೆಸರಾದ ಶೆಟ್ಟಿಕಾಸುಕಾಸಿಗೆ ಬಡ್ಡಿ ಗಳಿಸಿಕೊಂಬ ಆದಿಕೇಶವ ನಾರಾಯಣ ತಿಮ್ಮಶೆಟ್ಟಿ ||3||

ಬಂದೆವಯ್ಯ ಗೋವಿಂದಶೆಟ್ಟಿ Read More »

ಬಂದಿದೆ ದೂರು ಬರಿದೆ ಪಾಂಡವರಿಗೆ

ಬಂದಿದೆ ದೂರು ಬರಿದೆ ಪಾಂಡವರಿಗೆ ಕೊಂದವರಿವರು ಕೌರವರನೆಂಬಪಕೀರ್ತಿ ಮುನ್ನಿನ ವೈರದಿ ಕಡು ಸ್ನೇಹವ ಮಾಡಿಉನ್ನತ ಲೆತ್ತ ಪಗಡೆಯಾಡಿಸಿತನ್ನ ಕುಹಕದಿಂದ ಕುರುಬಲವ ಕೊಂದವನುಘನ್ನಘಾತಕ ಶಕುನಿಯೊ ಪಾಂಡವರೊ ||1|| ಮರಣ ತನ್ನಿಚ್ಛೆಯೊಳುಳ್ಳ ಗಾಂಗೇಯನುಧುರದೊಳು ಷಂಡನ ನೆಪದಿಂದಲಿಸರಳ ಮಂಚದ ಮೇಲೆ ಮಲಗಿ ಮೊಮ್ಮಗನಕೊರಳ ಕೊಯ್ದವನು ಭೀಷ್ಮನೊ ಪಾಂಡವರೊ ||2|| ಮಗನ ನೆಪದಿ ಕಾಳಗವ ಬಿಸುಟು ಸುರನಗರಿಗೈದಲು ವೈರಾಗ್ಯದಲಿಜಗವರಿಯಲು ಕುರುವಂಶಕ್ಕೆ ಕೇಡನುಬಗೆದು ಕೊಂದವನು ದ್ರೋಣನೊ ಪಾಂಡವರೊ||3|| ತೊಟ್ಟ ಬಾಣವ ತೊಡಲೊಲ್ಲದೆ ಮಾತೆಗೆಕೊಟ್ಟ ಭಾಷೆಗೆ ಐವರ ಕೊಲ್ಲದೆನೆಟ್ಟನೆ ರಣಮುಖದಲಿ ತನ್ನ ಪ್ರಾಣವಬಿಟ್ಟು ಕೊಂದವನು ಕರ್ಣನೊ

ಬಂದಿದೆ ದೂರು ಬರಿದೆ ಪಾಂಡವರಿಗೆ Read More »

ಬಂದದೊಂದು ಚೆಂದ ಸಾಲದೆ ಗೋಪಿಯ ಕಂದ

ಬಂದದೊಂದು ಚೆಂದ ಸಾಲದೆ ಗೋಪಿಯ ಕಂದ ವಿಕಟ ಪೂತನಿಯ ಕೊಂದುಶಕಟಾಸುರನ ಪಾದದಿ ತುಳಿದುಧಿಕಿಟ ಧಿಕಿಟ ಎನ್ನುತಲಿಕುಕಿಲಿರಿದು ಕುಣಿಯುತ ಮನೆಗೆ ||1|| ಗೋವರ್ಧನ ಪರ್ವತವನೆತ್ತಿಗೋವುಗಳ ಕಾಯ್ದು ತನ್ನಮಾವ ಕಂಸನ ಕೊಂದುಕಾವನ ಜನಕ ಪಾಡುತ ಮನೆಗೆ ||2|| ಫಾಲನೇತ್ರ ಚಂದ್ರಶೇಖರನಸುಲಭದಿಂದ ಬಾಧೆಯ ಬಿಡಿಸಿಪಾಲಿಸುವ ಕರುಣದಿಂದಬೇಲಾಪುರದ ಚೆನ್ನಕೇಶವ||3||

ಬಂದದೊಂದು ಚೆಂದ ಸಾಲದೆ ಗೋಪಿಯ ಕಂದ Read More »

ಬಂಟನಾಗಿ ಬಾಗಿಲ ಕಾಯ್ವೆ ಹರಿಯ

ಬಂಟನಾಗಿ ಬಾಗಿಲ ಕಾಯ್ವೆ ಹರಿಯ ವೈಕುಂಠದ ಸೊಂಪಿನ ದಾಸರ ಮನೆಯ ಹೊರಸುತ್ತು ಪ್ರಾಕಾರ ನಾ ಸುತ್ತಿ ಬರುವೆಬರುವ ಹೋಗುವರ ವಿಚಾರಿಸುತಿರುವೆಕರದಿ ಕಂಬಿಯ ಪೊತ್ತು ಅಲ್ಲಿ ನಿಂದಿರುವೆ ಶ್ರೀಹರಿಯ ಸಮ್ಮುಖದ ಓಲಗದೊಳಿರುವೆ ||1|| ತೊತ್ತು ತೊಂಡನಾಗಿ ಬಾಗಿಲ ಕಾಯ್ವೆಚಿತ್ರದ ಚಾವಡಿ ರಜವನು ಬಳಿವೆಮುತ್ತಿನ ರಂಗವಲ್ಲಿಯನಿಟ್ಟು ಬರೆವೆರತ್ನಗಂಬಳಿ ಹೊತ್ತು ಹಾಸುವೆನು ||2|| ವೇಳೆವೇಳೆಗೆ ನಾನೂಳಿಗವ ಮಾಡುವೆಆಲವಟ್ಟಿಗೆ ಚಾಮರವ ಬೀಸುವೆತಾಳದಂಡಿಗೆ ಭೃಂಗಿ ಮೇಳಗಳ ಕೂಡಿ ಶ್ರೀಲೋಲನ ಕೊಂಡಾಡಿ ಪಾಡುವೆನು ||3|| ಎಂಜಲ ಹರಿವಾಣಂಗಳ ಬೆಳಗುವೆಕಂಜನಾಭನ ಪಾದಕಮಲವ ತೊಳೆವೆರಂಜಿಪ ಕುಸುಮದ ಮಾಲೆ ತಂದಿಡುವೆಸಂಜೆಗೆ

ಬಂಟನಾಗಿ ಬಾಗಿಲ ಕಾಯ್ವೆ ಹರಿಯ Read More »

ಪ್ರಾಚೀನ ಕರ್ಮವಿದು ಬಿಡಲರಿಯದು

ಪ್ರಾಚೀನ ಕರ್ಮವಿದು ಬಿಡಲರಿಯದುಯೋಚನೆಯ ಮಾಡಿ ಬಳಲುವುದೇಕೆ ಮನುಜ ಸೇತುವೆಯ ಕಟ್ಟಿ ಲಂಕೆಗೆ ಹಾರಿ ಹನುಮಂತಖ್ಯಾತಿಯಿಂದಲಿ ರಾವಣನ ಕೊಲ್ಲಿಸಿಸೀತೆಯನು ತಂದು ಶ್ರೀರಾಮನಿಗೆ ಕೊಡಲಾಗಿಪ್ರೀತಿಯಲಿ ಕೌಪೀನ ಬಿಡಿಸಲಿಲ್ಲ ಹರಿಯು ||1|| ಲೋಕಾದಿಲೋಕಗಳ ಚರಿಸುವ ರವಿರಥಕೆಏಕಗಾಲಿಯು ಏಳುಕುದುರೆಗಳ ಕಟ್ಟಿಲೋಕಲೋಕಗಳನೆಲ್ಲ ಚರಿಸುವ ಅರುಣನಿಗೆಬೇಕೆಂದು ಚರಣಗಳ ಕೊಡಲಿಲ್ಲ ಹರಿಯು ||2|| ಸಾಸಿರ ನಾಮದ ಒಡೆಯಾದಿಕೇಶವನಬೇಸರಿಸದೆ ಹೆಗಲ ಮೇಲಿರಿಸಿಕೊಂಡುಆಕಾಶ ಮಾರ್ಗದಲಿ ಚರಿಸುವ ಗರುಡನಿಗೆನಾಸಿಕದ ಕೊನೆಡೊಂಕು ತಿದ್ದಲಿಲ್ಲ ಹರಿಯು ||3||

ಪ್ರಾಚೀನ ಕರ್ಮವಿದು ಬಿಡಲರಿಯದು Read More »

ಪೋಗದೋ ಛಳಿ ಪೋಗದೋ

ಪೋಗದೋ ಛಳಿ ಪೋಗದೋ ಹಳೆಯ ಹಚ್ಚಡ ಸಕಲಾತಿ ಚಿಮ್ಮುರಿ ಟೊಪ್ಪಿಗೆಬಿಳಿಯ ಕಂಬಳಿ ಪೊತ್ತರೆ ಪೋಗದೋನಳಿನಾಕ್ಷಿಯ ತನ್ನ ತೊಡೆಯ ಮೇಗಡೆ ಇಟ್ಟುಕಳಸ ಕುಚದ ಮೇಲೆ ಕೈಯಿಕ್ಕಿದಲ್ಲದೆ||1|| ಬಡನಡುವಿನ ಬಟ್ಟಕುಚದ ಕಾಮಿನಿರನ್ನೆಬೆಡಗಿನಲಿ ನಗುತ ನಲ್ಲನ ಬಳಿಗೆ ಬರಲುಒಡನೆಯೆ ಮೋಹದಿಂ ಪಿಡಿದೆತ್ತಿ ಲಲನೆಯನಡುಮಂಚದ ಮೇಲೆ ಕೆಡಹಿಕೊಂಡಲ್ಲದೆ||2|| ಛಳಿಗಾರದೆ ವಿಷ್ಣು ಛಳಿಗಾರದೆ ಶಿವಘಳಿಲನೆ ಗಂಗೆಯ ಬೀಸಾಡಲುಛಳಿಯ ಕಾರಣವೇನು ನೆಲೆಯಾದಿಕೇಶವತಿಳಿದು ನೀ ಹೇಳಯ್ಯ ಕಳಿಯ ವಿವರವನು ||3||

ಪೋಗದೋ ಛಳಿ ಪೋಗದೋ Read More »

ಪೂರ್ವ ಜನ್ಮದಲಿ ನಾ ಮಾಡಿದ ಕರ್ಮದಿಂ

ಪೂರ್ವ ಜನ್ಮದಲಿ ನಾ ಮಾಡಿದ ಕರ್ಮದಿಂಉರ್ವಿಯೊಳು ಜನಿಸಿದೆನೊ ಕೃಷ್ಣ ಕಾರುಣ್ಯನಿಧಿ ಎನ್ನ ಕಾಯಬೇಕಯ್ಯ ಹರಿವಾರಿಜನಾಭನೆ ಮುದ್ದುಕೃಷ್ಣ ಪುಟ್ಟಿದಂದಿನಾರಭ್ಯ ಸುಖವೆಂಬುವುದನರಿಯೆಕಷ್ಟ ಪಟ್ಟೆನು ಕೇಳೋ ಕೃಷ್ಣತೊಟ್ಟಿಲ ಶಿಶು ತಾಯ್ಗೆ ಬಾಯ್ಬಿಟ್ಟ ತೆರದಿ ಕಂ-ಗೆಟ್ಟು ಶೋಕಿಪೆನೋ ಕೃಷ್ಣಮುಟ್ಟಲಮ್ಮರು ಎನ್ನ ಬಂಧುಗಳು ಕಂಡರೆಅಟ್ಟಿ ಬಡಿವುತಲಿಹರೊ ಕೃಷ್ಣದಟ್ಟ ದಾರಿದ್ರ್ಯವನು ಪರಿಹರಿಸದಿದ್ದರೆಮುಟ್ಟುವುದು ದೂರು ನಿನಗೆ ಕೃಷ್ಣ||1|| ಕಾಶಿಯಾ ವಾಸವನು ಬಯಸಿ ಬಹು ದಿನದಿಂದಘಾಸಿ ಪಟ್ಟೆನು ನಾನು ಕೃಷ್ಣಈ ಶರೀರವನಾಂತು ಹೀನಾಯಗೊಂಡೆನುನೀ ಸಲಹಬೇಕಯ್ಯ ಕೃಷ್ಣಹೇಸಿಗೆಯ ಸಂಸಾರದಿ ನೀನಿಂತು ಮಾಯಾಪಾಶದೊಳು ಬಿಗಿವರೇ ಕೃಷ್ಣಘಾಸಿ ಮಾಡದೆ ಎನ್ನ ಪಾಪವನು ಪರಿಹರಿಸೊಸಾಸಿರನಾಮದ

ಪೂರ್ವ ಜನ್ಮದಲಿ ನಾ ಮಾಡಿದ ಕರ್ಮದಿಂ Read More »

ಪಾಪಾತ್ಮ ನಾನಲ್ಲ ಪಾಪವೆನದಿನಿತಿಲ್ಲ

ಪಾಪಾತ್ಮ ನಾನಲ್ಲ ಪಾಪವೆನದಿನಿತಿಲ್ಲ ಶ್ರೀಪತಿಯೆ ನಿನಗೆ ನೀನೇ ಮಾಡಿಕೊಂಡೆ ವರದನು ಕರದಲಿ ಉಷ್ಣಜಲ ಮೃತ್ತಿಕೆಯತರಲು ಕೈ ಸುಟ್ಟಾಗ ಪಣೆಯ ಠೊಣೆದು ಬೈದೆಮರಳಿ ನಾಚಿಕೆ ಇರದೆ ಚರಣಕೆ ಪಾವುಗೆ ತಂ-ದಿರಿಸಿದಪರಾಧ ಎನ್ನದೊ ನಿನ್ನದೊ ದೇವ ||1|| ಬಂದ ಭೃಗು ಮುನಿ ಎದೆಯನೊದೆಯೆ ಆತಗೆ ಪಾಪಅಂದು ಮೂದಲಿಸಿ ಬೈದವರಿಗೆ ದೋಷನಿಂದುದೇ ಹಣೆಯೊಳಗೆಸೆಯೆ ಭೀಷ್ಮಂಗಘವುಹೊಂದಿದಾ ಪಾಂಡವರಿಗೆ ಕುಂದು ಬಂದಿತೆ ದೇವ||2|| ಕುರುಡನಿಗೆ ದಾರಿಯನು ತೋರದೆ ಆತಗೆ ಮುನಿದುದರಿಗೆ ನೂಕಿದಡೆ ಅವನು ಏನು ಮಾಡುವನುಶಿರಕೆ ತಪ್ಪಾಗಿ ಗುರಿಯಿಡಲದು ಸರಳ ತಪ್ಪೆಅರಸನಾಳ ಕೊಂದಡೆ ಆರೇನು

ಪಾಪಾತ್ಮ ನಾನಲ್ಲ ಪಾಪವೆನದಿನಿತಿಲ್ಲ Read More »

ಪರಮಪದವಿಯನೀವ ಗುರುಮುಖ್ಯ ಪ್ರಾಣನ

ಪರಮಪದವಿಯನೀವ ಗುರುಮುಖ್ಯ ಪ್ರಾಣನಧರೆಯೊಳಗುಳ್ಳ ಮಾನವರೆಲ್ಲ ಭಜಿಸಿರೊ ಅಂದು ತ್ರೇತಾಯುಗದಿ ಹನುಮನಾಗವತರಿಸಿಬಂದು ದಾಶರಥಿಯ ಪಾದಕೆರಗಿಸಿಂಧುವನು ದಾಂಟಿ ಮುದ್ರಿಕೆಯಿತ್ತು ದಾನವರವೃಂದಪುರ ದಹಿಸಿ ಚೂಡಾಮಣಿಯ ತಂದವನ||1|| ದ್ವಾಪರಯುಗದಲಿ ಭೀಮಸೇನನೆನಿಸಿಶ್ರೀಪತಿಯಪಾದ ಕಡು ಭಜಕನಾಗಿಕೋಪಾವೇಶದಲಿ ದುಶ್ಶಾಸನನನು ಸೀಳಿಭೂಪನ ಜಲದೊಳಗೆ ಕರೆಕರೆದು ಜರೆದವನ ||2|| ಕಲಿಯುಗದಲಿ ತುರೀಯಾಶ್ರಮವನೆ ಧರಿಸಿಕಲುಷದ ಮಾಯಿಗಳನೆ ಸೋಲಿಸಿಖಿಲವಾದ ಮಧ್ವಮತವನು ಬಲಿದೆನಿಸಿ ಕಾಗಿನೆಲೆಯಾದಿಕೇಶವನೆ ಪರದೈವನೆಂದವನ ||3||

ಪರಮಪದವಿಯನೀವ ಗುರುಮುಖ್ಯ ಪ್ರಾಣನ Read More »

ಪರಮ ಪುರುಷ ಹರಿ ಗೋವಿಂದ

ಪರಮ ಪುರುಷ ಹರಿ ಗೋವಿಂದ – ಸಿರಿವರ ನಾರಾಯಣ ಗೋವಿಂದ ನಿಶೆವೆಸರಸುರನ ಉಸಿರ ತೊಲಗಿಸಿದೆಕುಸುಮ ಶರನ ಪಿತ ಗೋವಿಂದವಸು ಪೂರಿತ ಶ್ರುತಿ ಮಸುಳಿಸದೆ ತಂದೆಬಿಸಜ ಸಂಭವನಯ್ಯ ಗೋವಿಂದ ||1|| ಜತನದಿ ಮಧುಮಥನದಿ ಮಂದರ ಪರುವತ ಉದ್ಧರಿಸಿದೆ ಗೋವಿಂದಶತ ಕ್ರತುವಿನ ಸಿರಿ ಗತವಾಗದ ಮುನ್ನಕ್ಷಿತಿ ಪೆತ್ತನಯ್ಯ ಗೋವಿಂದ ||2|| ಭೂತಳವೆರಸಿ ರಸಾತಳಕಿಳಿದಿಹಪಾತಕನ ಕಂಡೆ ಗೋವಿಂದಆತನೊಡನೆ ಕಾದಾತನ ಗೆಲಿದು ಮ-ಹೀತಳವನು ತಂದೆ ಗೋವಿಂದ ||3|| ದುರುಳಾಸುರನ ನಡುಗರುಳ ಮಾಲೆ ಮುಂ-ಗೊರಳೊಳು ಧರಿಸಿದೆ ಗೋವಿಂದಗರಳ ಕೊರಳನು ಬೆರಳೆತ್ತಿ ಪೊಗಳಲುತರಳಗೊಲಿದೆ ನೀ ಗೋವಿಂದ||4||

ಪರಮ ಪುರುಷ ಹರಿ ಗೋವಿಂದ Read More »

ಪರಮ ಪದವಿಯೆ ಶ್ರೀರಂಗಂ

ಪರಮ ಪದವಿಯೆ ಶ್ರೀರಂಗಂಪರವಾಸುದೇವರೆ ಶ್ರೀರಂಗಂ ವೇದನಾಲ್ಕು ಶೃಂಗಾರವಾದಓಂಕಾರ ವಿಮಾನವೆ ಶ್ರೀರಂಗಂಸಾಧಿಸಿ ಪೂರ್ವಾಚಾರ್ಯರು ನೆಲಸಿಹಆದಿ ವಿಮಾನವೆ ಶ್ರೀರಂಗಂ ||1|| ಸತ್ಯಲೋಕದಲಿ ಬ್ರಹ್ಮನು ಪೂಜಿಪವಸ್ತು ವಿಮಾನವೆ ಶ್ರೀರಂಗಂಭಕ್ತಿಗೆ ಇಕ್ಷ್ವಾಕುರಾಯಗೊಲಿದು ಬಂದಉತ್ತಮಾಯೋಧ್ಯವೆ ಶ್ರೀರಂಗಂ||2|| ತ್ರೇತಾಯುಗದಿ ವಿಭೀಷಣನಿಗೆ ರಘುನಾಥನು ಕೃಪೆ ಇತ್ತ ಶ್ರೀರಂಗಂಪ್ರೀತಿಸಿ ದಕ್ಷಿಣಭೂಮಿಯೊಳಗೆ ರಂಗನಾಥ ನೆಲಸಿಹ ಶ್ರೀರಂಗಂ ||3|| ಮುನ್ನ ಕಾವೇರಿ ಉಭಯ ಮಧ್ಯದೊಳಿನ್ನು ಶೋಭಿಪುದೆ ಶ್ರೀರಂಗಂಸನ್ನುತ ಭಕ್ತರ ಸಲಹುವ ಬಿರುದಿನೊಳಿನ್ನು ತೋರುವುದೆ ಶ್ರೀರಂಗಂ||4|| ಶೇಷನ ಮೇಲೆ ಪವಳಿಸಿ ಲಂಕಾದೇಶವ ನೋಡುವ ಶ್ರೀರಂಗಂಶ್ರೀಸಿರಿನಾಯಕೀ ರಮಣಕೇಶವರಾಯರ ಮಹಿಮೆಯೆ ಶ್ರೀರಂಗಂ ||5||

ಪರಮ ಪದವಿಯೆ ಶ್ರೀರಂಗಂ Read More »

ಪಥ ನಡೆಯದಯ್ಯ ಪರಲೋಕ

ಪಥ ನಡೆಯದಯ್ಯ ಪರಲೋಕ ಸಾಧನಕೆ – ಮ-ನ್ಮಥನೆಂಬ ಖಳನು ಮಾರ್ಗವ ಕಟ್ಟಿ ಸುಲಿಯುತ್ತಿರೆ ತನುರೋಮ ಗಿಡ ವೃಕ್ಷ ತಳಿತ ಭುಜಲತೆ ಮೆರೆವಘನಸಿಂಹ ಗಜ ಮೃಗಗಳಿಂದೊಪ್ಪುವವನಿತೆಯರ ಕಾಯ ಕಾಂತಾರವೆಂಬ ಮಾರ್ಗದಿಸ್ತನದ್ವಯ ಕಣಿವೆಯ ಮಧ್ಯೆ ಸೇರಿಹನು ||1|| ಗಿಳಿ ನವಿಲು ಕೋಗಿಲೆ ವಸಂತ ಭ್ರಮರಂಗಳಬಲದೊಡನೆ ಮದನ ಮಾರ್ಗವ ಕಟ್ಟಲುಬಲವುಳ್ಳ ಭಕ್ತ ಮುನಿ ಸಂನ್ಯಾಸಿ ಯೋಗಿಗಳುಸುಲಿಸಿಕೊಂಡರು, ಕೆಲರು ಸಿಕ್ಕಿದರು ಸೆರೆಯ ||2|| ಕಾಳಗದೊಳಿದಿರಿಲ್ಲ ಸುರರು ದಾನವರು – ಕ-ಟ್ಟಾಳು ಮನ್ಮಥನ ಛಲದಂಕ ಬಿರುದುಪೇಳಲೆನ್ನಳವೆ ಬಡದಾದಿಕೇಶವರಾಯ-ನಾಳ ಸಂಗಡ ಹೋದರಾವ ಭಯವಿಲ್ಲ ||3|| *

ಪಥ ನಡೆಯದಯ್ಯ ಪರಲೋಕ Read More »

ಪಕ್ಷಿ ಬಂದಿದೆ ಗಂಡಭೇರುಂಡ

ಪಕ್ಷಿ ಬಂದಿದೆ ಗಂಡಭೇರುಂಡ – ತನ್ನಕುಕ್ಷಿಯೊಳು ಈರೇಳು ಜಗವನಿಂಬಿಟ್ಟಂಥ ಜಾತಿ ಸೂತಕವೆಂಬ ತ್ರಿಮಲಕ್ಕೆ ಶೂಲದಂತಿಹ ಪರವಸ್ತು ತಿರುಮಂತ್ರೋದಯವೆಂಬಾಸನವನೆ ಪೊತ್ತು ತಾಹರುಷದಿಂದ ವೈಷ್ಣವರೆಡೆಯ ಪಾಡಿಪರವ ತೋರುವೆನೆಂದು ಪಾಕವನೆತ್ತುತಾಹರಿಹರ ಬ್ರಹ್ಮಾದಿಗಳ ಪುಟ್ಟಿಸಿದಂಥ||1|| ಅಕಾರ ಉಕಾರ ಮಕಾರ ಸಾಕಾರದಿಂದಪರಮ ರೂಪವ ತಾಳಿಆಕಾರ ಕ್ರಿಯಾ ನಾಮ ಮಕಾರವನುಓಂಕಾರದಿಂದ ಪುಟ್ಟಿಸಿದಂಥ ಪರವಸ್ತು ||2|| ಪಾಖಂಡವೆಂತೆಂಬ ಪರವಾದಿಗಳನ್ನುಲೋಕದೊಳು ತಮ್ಮೊಳಗೈಕ್ಯಮಾಡಿ ಜಗದೇಕ ಪತಿ ತಿರುವಕೋವಲೂರಿನೊಳಿರುವಂಥಾದಿಕೇಶವರಾಯ ತಾನಾದ ಪರವಸ್ತು ||3||

ಪಕ್ಷಿ ಬಂದಿದೆ ಗಂಡಭೇರುಂಡ Read More »

ನೋಡು ನೋಡು ಗೋಪಿ ನಿನ್ನ ಮಗನ

ನೋಡು ನೋಡು ಗೋಪಿ ನಿನ್ನ ಮಗನ ಲೂಟಿಯ ಮಾಡುತಾನೆ ಮನೆಗೆ ಬಂದು ಬಹಳ ಚೇಷ್ಟೆಯ ಮಾನಿನೀಯರೊಳಗೆ ಪೋಕಾಟವೇನಿದುಮಾನವನ್ನು ಕಳೆದ ಪರಿಯ ಹೇಳತೀರದು ||1|| ಪಿಡಿದ ಸೆರಗ ಬಿಡನು ಇನ್ನೇನ ಮಾಡಲಿತಡೆಯಲಾರೆವಮ್ಮ ಕೇಳೆ ಇವನ ಹಾವಳಿ ||2|| ಇನ್ನು ಚೆನ್ನಕೇಶವ ಕದಳಿ ರಂಗನಬನ್ನಣೇಯ ಮಾತ ಕೇಳಿ ಬಿಡುವೆ ಪುರುಷನ ||3||

ನೋಡು ನೋಡು ಗೋಪಿ ನಿನ್ನ ಮಗನ Read More »