admin

ಕೆಂಪು ಮೂಗಿನ ಪಕ್ಷಿ ತಂಪಿನೊಳಿರುವುದು

ಕೆಂಪು ಮೂಗಿನ ಪಕ್ಷಿ ತಂಪಿನೊಳಿರುವುದುನೆಂಪು ಬಲ್ಲವರು ಪೇಳಿ ಹಂಪೆಯ ವಿರೂಪಾಕ್ಷ ಲಿಂಗನಲ್ಲಿಝಂಪೆಯನಾಡುತಿಹುದು ಆರು ತಲೆ ಹದಿನಾರು ಕಣ್ಣುಗಳುಂಟುಮೂರು ಮೂರು ನಾಲಗೆಬೇರೆ ಹನ್ನೆರಡು ಕಣ್ಣು ಕಿವಿಗಳುಂಟುಸೇರಿತು ತೆಂಕಲಾಗೆ ||1|| ಬಲೆಯ ಬೀಸಿದರು ಸಿಕ್ಕದಾ ಮೃಗಜಲದೊಳು ತಾ ನಿಲ್ಲದುನೆಲನ ಮೇಲಿರುವುದು ನಿಂತರೆ ಸಾವುದು ಕುಲದೊಳಗಾಡುತಿಹುದು ||2|| ಸಕಲ ಕಲೆಯು ಬಲ್ಲ ಸೀತಳ ಮಲ್ಲಿಗೆಬೇರೆ ಬೇರೆನಬಹುದುಚೆನ್ನ ಕೇಶವನಲ್ಲಿ ಕೃಪೆಯುಂಟಾದರೆಅಲ್ಲುಂಟು ಇಲ್ಲಿಲ್ಲವೆ ||3||

ಕೆಂಪು ಮೂಗಿನ ಪಕ್ಷಿ ತಂಪಿನೊಳಿರುವುದು Read More »

ಕೂಸನು ಕಂಡೀರ್ಯಾ ಸುಪ್ರ-ಹ್ಲಾದನ

ಕೂಸನು ಕಂಡೀರ್ಯಾ ಸುಪ್ರ-ಹ್ಲಾದನ ಕಂಡೀರ್ಯಾ ನಮ್ಮಕೂಸನು ಕಂಡೀರ್ಯಾ ರಾಕ್ಷಸ ಕುಲದಲಿ ಜನಿಸಿತು ಕೂಸುರಾಧಾಕೃಷ್ಣನ ಭಜಿಸಿತು ಕೂಸುರಾಗ ದ್ವೇಷಗಳ ಬಿಟ್ಟಿತು ಕೂಸುರಾಮ ಪಾದವ ನೆನೆಯುವ ಕೂಸು ||1|| ಘನ ಹರಿ ಕಂಬದಿ ತೋರಿತು ಕೂಸುಗಳಿಸಿತು ಕೃಷ್ಣನ ಪ್ರೇಮವ ಕೂಸುಘನ ಪಂಪಾಲಯದಿ ವಾಸಿಪ ಕೂಸುಗಣೆ ಗೋಪಾಲನ ಪ್ರೀತಿಯ ಕೂಸು||2|| ಪ್ರಸಿದ್ಧ ವ್ಯಾಸರಾಯರೆಂಬ ಕೂಸುಪ್ರವೀಣ ವಿದ್ಯೆಯೊಳೆನಿಸಿದ ಕೂಸುಪ್ರಹ್ಲಾದನೆಂಬುವ ಆಹ್ಲಾದ ಕೂಸುಪ್ರಸನ್ನ ಕಾಗಿನೆಲೆಯಾದಿಕೇಶವನ ಕೂಸು||3||

ಕೂಸನು ಕಂಡೀರ್ಯಾ ಸುಪ್ರ-ಹ್ಲಾದನ Read More »

ಕುಲ ಕುಲವೆಂದು ಹೊಡೆದಾಡದಿರಿ

ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮಕುಲದ ನೆಲೆಯನೇನಾದರೂ ಬಲ್ಲಿರ ಹುಟ್ಟದ ಯೋನಿಗಳಿಲ್ಲ ಮೆಟ್ಟದ ಭೂಮಿಗಳಿಲ್ಲಅಟ್ಟು ಉಣ್ಣದ ವಸ್ತುಗಳಿಲ್ಲಗುಟ್ಟು ಕಾಣಿಸ ಬಂತು ಹಿರಿದೇನು ಕಿರಿದೇನುನೆಟ್ಟನೆ ಸರ್ವಜ್ಞನ ನೆನೆ ಕಂಡ್ಯ ಮನುಜ ||1|| ಜಲವೆ ಸಕಲ ಕುಲಕ್ಕೆ ತಾಯಲ್ಲವೆಜಲದ ಕುಲವನೇನಾದರೂ ಬಲ್ಲಿರಜಲದ ಬೊಬ್ಬುಳಿಯಂತೆ ಸ್ಥಿರವಲ್ಲವೀ ದೇಹನೆಲೆಯನರಿತು ನೀ ನೆನೆ ಕಂಡ್ಯ ಮನುಜ ||2|| ಹರಿಯೆ ಸರ್ವೋತ್ತಮ ಹರಿಯೆ ಸರ್ವೇಶ್ವರಹರಿಮಯವೆಲ್ಲವೆನುತ ತಿಳಿದುಸಿರಿ ಕಾಗಿನೆಲೆಯಾದಿಕೇಶವರಾಯನಚರಣ ಕಮಲವ ಕೀರ್ತಿಸುವನೆ ಕುಲಜ ||3||

ಕುಲ ಕುಲವೆಂದು ಹೊಡೆದಾಡದಿರಿ Read More »

ಕುಲ ಕುಲ ಕುಲವೆನ್ನುತಿಹರು 

ಕುಲ ಕುಲ ಕುಲವೆನ್ನುತಿಹರು ಕುಲವ್ಯಾವುದು ಸತ್ಯಸುಖವುಳ್ಳ ಜನರಿಗೆ ಕೆಸರೊಳು ತಾವರೆ ಪುಟ್ಟಲು ಅದ ತಂದುಬಿಸಜನಾಭನಿಗರ್ಪಿಸಲಿಲ್ಲವೆಹಸುವಿನ ಮಾಂಸದೊಳುತ್ಪತ್ತಿ ಕ್ಷೀರವವಸುಧೆಯೊಳಗೆ ಭೂಸುರರುಣಲಿಲ್ಲವೆ||1|| ಮೃಗಗಳ ಮೈಯಲಿ ಪುಟ್ಟಿದ ಕತ್ತುರಿಯತೆಗೆದು ಪೂಸುವರು ದ್ವಿಜರೆಲ್ಲರುಬಗೆಯಿಂದ ನಾರಾಯಣನ್ಯಾವ ಕುಲಅಗಜ ವಲ್ಲಭನ್ಯಾತರ ಕುಲದವನು ||2|| ಆತ್ಮ ಯಾವ ಕುಲ ಜೀವ ಯಾವ ಕುಲತತ್ತ್ವೇಂದ್ರಿಯಗಳ ಕುಲ ಪೇಳಿರಯ್ಯಆತ್ಮಾಂತರಾತ್ಮ ನೆಲೆಯಾದಿಕೇಶವನುಆತನೊಲಿದ ಮೇಲೆ ಯಾತರ ಕುಲವಯ್ಯ ||3||

ಕುಲ ಕುಲ ಕುಲವೆನ್ನುತಿಹರು  Read More »

ಕಾಯೊ ಕರುಣಾಕರನೆ

ಕಾಯೊ ಕರುಣಾಕರನೆ ಕಡು ಪಾಪಿ ನಾನುನ್ಯಾಯವೆಂಬುದು ಎನ್ನೊಳೆಳ್ಳನಿತಿಲ್ಲ ಎಣ್ಣೆ ಕೊಪ್ಪರಿಗೆಯೊಳ್ಬಿದ್ದು ಸ್ತುತಿಸಿದವನಲ್ಲಚಿನ್ನಕಶಿಪು ಬಾಧೆಗೊಳಗಾದವನಲ್ಲಬಣ್ಣಗೆಟ್ಟಡವಿಯಲಿ ತಪಸು ಮಾಡಿದವನಲ್ಲಹೆಣ್ಣನೊಲ್ಲದೆ ನಿನ್ನ ಬಂಟನಾದವನಲ್ಲ ||1|| ಒಲಿದು ದಾನವನಿತ್ತ ವೈರಿಕುಲದವನಲ್ಲಬಲು ಭಕುತಿಯ ದಾಸಿ ಪುತ್ರ ನಾನಲ್ಲಕಲಹದಲಿ ಪಣೆಗೆ ಬಾಣವ ನೆಡಿಸಿದವನಲ್ಲಕಳವಳದಿ ಕರೆದ ಪಾಂಚಾಲಿ ನಾನಲ್ಲ ||2|| ಉರಗರಾಜನ ತೆರದಿ ಹಾಸಿಗಾದವನಲ್ಲಗರುಡನಂದದಿ ಪೊತ್ತು ತಿರುಗಿದವನಲ್ಲಸಿರಿಧರನೆ ಕಾಗಿನೆಲೆಯಾದಿಕೇಶವ ನಿನ್ನಚರಣ ಡಿಂಗರಿಗ ಮಾತ್ರ ನಾನಾಗಿಹೆನೆಂದು ||3||

ಕಾಯೊ ಕರುಣಾಕರನೆ Read More »

ಕಾಯೊ ಎನ್ನನು ದೇವ

ಕಾಯೊ ಎನ್ನನು ದೇವ ಕಡೆ ಹಾಯಿಸೊ ಕಡಲೊಡೆಯ ಕಾಯಯ್ಯ ನೀ ಎನ್ನ ಕಮಲದಳಾಕ್ಷ ಒಂದು ಕಾಯಲಿ ನಾನು ಒಲಿದು ದಂಡಿಗೆಯಾದೆಎರಡು ಕಾಯಲಿ ನಾನು ವೀಣೆಯಾದೆಮೂರು ಕಾಯಲಿ ನಾನು ಮುದ್ದು ಕಿನ್ನರಿಯಾದೆನೀಟಾದ ಕಾಯಲಿ ನಾನು ನಾಗಸ್ವರವಾದೆ ||1|| ದಪ್ಪ ದಪ್ಪ ಕಾಯಲಿ ದರವೇಶಿಗಳಿಗಾದೆಮಿಕ್ಕ ಕಾಯಲಿ ನಾನು ಸನ್ನೇಸಿಗಳಿಗಾದೆಕೈತಪ್ಪಿ ಬಿದ್ದರೆ ಕದಿರಿಗೆ ಬಿಲ್ಲಾದೆಮತ್ತೆ ದೇವರ ಗುಡಿಗೆ ದೀಪವೇ ನಾನಾದೆ ||2|| ಚಿಕ್ಕಂದು ಮೊದಲು ನಾ ಸಾಸೂವೆ ಕಾಯಾದೆಚಿಕ್ಕ ಚಿನ್ಮಯಗೆ ಬುರುಡೆಯಾದೆಉಕ್ಕುವಾ ಹೊಳೆಯಲ್ಲಿ ತೆಪ್ಪವೇ ನಾನಾದೆಚೊಕ್ಕ ಕನಕಪ್ಪನ ಹಿಂದೆ ನಾ ತಿರುಪತಿಗೆ

ಕಾಯೊ ಎನ್ನನು ದೇವ Read More »

ಕಾಡುವ ದುರಿತಗಳನು ಬಿಡಿಸೆಂದು

ಕಾಡುವ ದುರಿತಗಳನು ಬಿಡಿಸೆಂದುಬೇಡಿಕೊಂಬೆನೊ ದೇವ ನಾ ನಿನ್ನ ಅಡಿದಾಸನೆಂಬೋ ಎನಗೊಂದು ದೃಢ ಬುದ್ಧಿಯು ಇಲ್ಲದೆಮಡದಿ ಮಕ್ಕಳೆಂಬೊ ಕಡಲೊಳು ಮುಳುಗಿದೆಕಡೆ ಹಾಯಿಸೊ ಎನ್ನೊಡೆಯ ನೀನಾದಡೆ ||1|| ಆಸೆಗಳ ಆಧಿಕ್ಯದಿಂದೀ ಪರಿಯ ಯಮಪಾಶಕ್ಕೆ ಒಳಗಾದೆನೋಮೀಸಲೂಳಿಗವ ಮಾಡದೆಯೆ ಪರಿಪರಿಯಕ್ಲೇಶದಿಂದಲಿ ಗಾಸಿಗೊಂಡೆನಯ್ಯ ||2|| ಪಾಡುವೆನು ನಿನ್ನ ನಾಮ ಸೀತಾರಾಮಆಡುವೆನು ಮನದಣಿವ ತನಕಬೇಡಿಕೊಂಬೆನೊ ನಿನ್ನ ಭಕ್ತರ ಸೇವೆಯನುಬಾಡದಾದಿಕೇಶವ ಭಕ್ತವತ್ಸಲನೆ||3||

ಕಾಡುವ ದುರಿತಗಳನು ಬಿಡಿಸೆಂದು Read More »

ಕಷ್ಟಪಟ್ಟರು ಇಲ್ಲ ಕಳವಳಿಸಿದರು ಇಲ್ಲ

ಕಷ್ಟಪಟ್ಟರು ಇಲ್ಲ ಕಳವಳಿಸಿದರು ಇಲ್ಲಭ್ರಷ್ಟ ಮಾನವ ನಿನ್ನ ಹಣೆಬರೆಹವಲ್ಲದೆ ಇಲ್ಲ ಸಿರಿವಂತನ ಸ್ನೇಹವ ಮಾಡಿ ನಡೆದರು ಇಲ್ಲಪರಿಪರಿಯಲಿ ವಿದ್ಯೆಯ ಕಲಿತರಿಲ್ಲನರಿಯ ಬುದ್ಧಿಯಿಂದಲಿ ನಡೆದುಕೊಂಡರು ಇಲ್ಲಅರಿಯದೆ ಹಲವ ಹಂಬಲಿಸಿದರು ಇಲ್ಲ ||1|| ಕೊಂಡಾಡಿ ಕಾಡಿ ನೀ ಬೇಡಿಕೊಂಡರು ಇಲ್ಲಕಂಡ ಕಂಡವರಿಗೆ ಕೈ ಮುಗಿದರಿಲ್ಲಗಂಡುಗತ್ತರಿಯನು ಕೊರಳಿಗಿಟ್ಟರು ಇಲ್ಲ – ಪ್ರ-ಚಂಡನಾದರು ಇಲ್ಲ, ಪರಿಹಾಸ್ಯವೆಲ್ಲ ||2|| ಕಟ್ಟಾಳು ಕಡುಜಾಣನಾಗಿ ಪುಟ್ಟಿದರಿಲ್ಲಬೆಟ್ಟವನು ಕಿತ್ತು ತಂದಿಟ್ಟರಿಲ್ಲಸೃಷ್ಟಿಯೊಳು ಕಾಗಿನೆಲೆಯಾದಿಕೇಶವರಾಯಕೊಟ್ಟವರಿಗುಂಟು ಕೊಡದವರಿಗಿಲ್ಲ||3||

ಕಷ್ಟಪಟ್ಟರು ಇಲ್ಲ ಕಳವಳಿಸಿದರು ಇಲ್ಲ Read More »

ಕಷ್ಟ ತನುವಿನಲಿ ಹುಟ್ಟಿ

ಕಷ್ಟ ತನುವಿನಲಿ ಹುಟ್ಟಿ ತೊಳಲುವಂಥಎಷ್ಟೆಂದು ತಾಳುವೆನೊ ಶ್ರೀರಂಗ ಅಷ್ಟರೊಳೆಂದೆನ್ನ ಅವಗುಣವೆಣಿಸದೆ ಕಷ್ಟ ಪಡಿಸುವುದೇನು ಶ್ರೀರಂಗ ನರಜನ್ಮವನು ಎತ್ತಿ ನರಕದೊಳಗೆ ಸುತ್ತಿಗುರಿ ಗೊತ್ತು ಕಾಣೆನಯ್ಯ ಶ್ರೀರಂಗಪರಮಪಾತಕನಾಗಿ ಹರಿ ನಿಮ್ಮ ಸ್ಮರಣೆಯನುಮರೆದು ಪಾಮರನಾದೆ ಶ್ರೀರಂಗ||1|| ಅತಿವೇಧೆಯಲಿ ಸತಿಸುತರೆಂಬ ಮಂದ ದು-ರ್ಮತಿಗೆ ಮರುಳಾದೆನೊ ಶ್ರೀರಂಗಅತುಳ ಪ್ರಪಂಚಕ್ಕೆ ಹಿತನಾಗಿ ದುಷ್ಟ ಸಂ-ಗತಿಯ ನಾನರಿದಿದ್ದೆನೊ ಶ್ರೀರಂಗ ||2|| ಮಿತಿಮೀರಿ ಮನ ಹರಿ ಪದವ ನೆನೆಯದೆ ಪರಸತಿಯರಿಗಳುಪಿದೆನೊ ಶ್ರೀರಂಗಕೃತಬುದ್ಧಿಯೊಳು ಉನ್ನತನಾಗಿ ತಾನೆರೆದುಸ್ತುತಿ ಮಾಡಿಕೊಂಡಿದ್ದೆನೈ ಶ್ರೀರಂಗ ||3|| ಆಶಾಪಾಶಗಳೆಂಬ ದೇಹಕ್ಕೆ ಸಿಲ್ಕಿ ಸ-ದ್ವಾಸನೆಯನು ಬಿಟ್ಟೆನು ಶ್ರೀರಂಗಮೋಸದಿಂದಾತ್ಮಘಾತುಕನಾಗಿ ಅಪರಾಧವೇಸೊಂದು ಮಾಡಿದೆನಯ್ಯ ಶ್ರೀರಂಗ

ಕಷ್ಟ ತನುವಿನಲಿ ಹುಟ್ಟಿ Read More »

ಕಲಿಯುಗದ ಮಹಿಮೆಯನು ಕಂಡಷ್ಟು ಪೇಳುವೆನು 

ಕಲಿಯುಗದ ಮಹಿಮೆಯನು ಕಂಡಷ್ಟು ಪೇಳುವೆನು ಜಲಜನಾಭನ ಕೃಪೆಯ ಪಡೆದವರು ಕೇಳಿ ಸತ್ಯಧರ್ಮಗಳೆಲ್ಲ ಎತ್ತ ಪೋದವೊ ಕಾಣೆಉತ್ತಮರ ಜೀವನಕೆ ದಾರಿಯಿಲ್ಲನಿತ್ಯದಲಿ ಕಳವು ವ್ಯಭಿಚಾರವುಳ್ಳವರೆಲ್ಲಅರ್ಥ ಸಂಪನ್ನರಾಗನುಭವಿಸುತಿಹರು||1|| ಅತ್ತೆಯೇ ಸೊಸೆಯಾಗಿ ಸೊಸೆಯು ಅತ್ತೆಯು ಆಗಿಪುತ್ರ ಪಿತನಾಗಿ ಪಿತ ಪುತ್ರನಾಗಿಮತ್ತೆ ಗಂಡನಿಗೆ ಹೆಂಡತಿಯೆ ಗಂಡಳು ಆಗಿವರ್ತಿಸುವರಯ್ಯ ತಮಗೆದುರಿಲ್ಲವೆಂದು ||2|| ವಾವೆವರಸೆಯು ತಪ್ಪಿ ವೈರಿ ವರ್ಗವು ಹೆಚ್ಚಿದೇವ ಬ್ರಾಹ್ಮಣ ಗುರು ಹಿರಿಯರನು ಜರಿದುಕೇವಲಾಧಮರೆಲ್ಲ ಸಿರಿ ಮದದಿ ಸೊಕ್ಕಿದರುಕಾವರಾರೈ ಸಾಧು ಸಜ್ಜನರನೀಗ||3|| ವೇದ ವಿಪ್ರರು ತಮ್ಮ ವೃತ್ತಿ ಸ್ವಾಸ್ಥ್ಯವ ಕಳೆದುಆಧಾರವಿಲ್ಲದೆ ತಿರಿದು ತಿಂಬುವರುಕಾದುವ ಶೂರರಿಗೆ ಕಾಸು ಕೊಡುವವರಿಲ್ಲಮೇದಿನಿಗೆ ಬೀಳ್ವ ಮಳೆ ಖಂಡಮಂಡಲವು

ಕಲಿಯುಗದ ಮಹಿಮೆಯನು ಕಂಡಷ್ಟು ಪೇಳುವೆನು  Read More »

ಕಲಿ ಹೆಚ್ಚಿ ಬಂದಿತಲ್ಲ, ರಂಗಯ್ಯ

ಕಲಿ ಹೆಚ್ಚಿ ಬಂದಿತಲ್ಲ, ರಂಗಯ್ಯ ಕಾಯೆನ್ನ ಸಿರಿಯ ನಲ್ಲ ಬಲು ಘೋರ ಪಾತಕದಿ ಇಳೆಯು ತಲ್ಲಣಗೊಂಡುಕಳವಳಿಸುತಿದೆ ಕಾಲ ವಿಪರೀತದಿ ಅತ್ತೆಯ ಸೊಸೆ ಬಯ್ವಳು – ಪುತ್ರರು ತಮ್ಮಹೆತ್ತ ತಾಯಿಯ ಬಿಡುವರುಉತ್ತಮ ಗರತಿಗೆ ಅಪವಾದ – ಅವಿವೇಕಿಗಳುಎತ್ತ ನೋಡಲು ಹೆಚ್ಚಿ ಹೆದರಿಸಿತುನ್ಮತ್ತತನದಲಿ ಮನೆಯ ರಚಿಸುವರುಭಕ್ತಿಯೆಂಬುದ ಬಯಸದಿರುವರುಕತ್ತಲಾಯಿತು ಕಲಿಯ ಮಹಿಮೆ ||1|| ನಿತ್ಯ ನೇಮವು ನಿಂತಿತು – ಹೋಯಿತಲ್ಪಜಾತಿಗೈಶ್ವರ್ಯ ಭೋಗಭಾಗ್ಯಧಾತರಾದವರಿಗೆ ಧಾರಣೆ ಪಾರಣೆಜಾತಿನೀತಿಗಳೆಲ್ಲ ಒಂದಾಗಿಪಾತಕದಿ ಮನವೆರಗಿ ಮೋಹಿಸುತಮಾತಾಪಿತೃ ಗುರು ದೈವ ದ್ರೋಹದಿಭೂತಳವು ನಡ ನಡುಗುತಿಹುದು ||2|| ಬಿನ್ನಣ ಮಾತುಗಳು ಮತ್ತೆ ಮತ್ತೆಘನ್ನ ಮತ್ಸರ

ಕಲಿ ಹೆಚ್ಚಿ ಬಂದಿತಲ್ಲ, ರಂಗಯ್ಯ Read More »

ಕನಕದಾಸನ ಮೇಲೆ ದಯ ಮಾಡಲು ವ್ಯಾಸ

ಕನಕದಾಸನ ಮೇಲೆ ದಯ ಮಾಡಲು ವ್ಯಾಸಮುನಿ ಮಠಿಕರೆಲ್ಲರು ದೂರುತಿಹರೊ ತೀರ್ಥವನು ಕೊಡುವಾಗ ಕನಕನ್ನ ಕರೆಯೆನಲುದೂರ್ತರಾಗಿದ್ದ ವಿದ್ವಾಂಸರೆಲ್ಲಸಾರ್ಥಕವಾಯ್ತು ಇವರ ಸನ್ಯಾಸಿತನವೆಲ್ಲಪೂತ್ರ್ಯಾಗಲೆಂದು ಯತಿ ನಗುತಲಿಹನು 1 ಮರುದಿನ ಅವರವರ ಪರೀಕ್ಷಿಸಬೇಕೆಂದುಕರೆದು ಸನ್ಯಾಸಿಗಳ ಕನಕಸಹಿತತ್ವರಿತದಲಿ ಕರದಲ್ಲಿ ಕದಳಿ ಫಲವನೆ ಕೊಟ್ಟುಯಾರಿರದ ಸ್ಥಳದಲ್ಲಿ ಮೆದ್ದು ಬನ್ನಿರಿ ಎನಲು2 ಊರ ಹೊರಗೆ ಹೋಗಿ ಬ್ಯಾರೆ ಬ್ಯಾರೆ ಕುಳಿತುತ್ವರಿತದಿಂ ಮೆದ್ದು ವಿದ್ವಾಂಸರೆಲ್ಲತೋರಲಿಲ್ಲವು ಎನಗೆ ಏಕಾಂತ ಸ್ಥಳವೆನುತಸಾರಿ ಕದಳಿ ಫಲವ ತಂದು ಮುಂದಿಟ್ಟ 3 ಡಿಂಬದೊಳು ಶಬ್ದ ವಾಗಾದಿ ಶ್ರೋತೃಗಳಲ್ಲಿಇಂಬಾಗಿ ತತ್ತ್ವೇಶರೆಲ್ಲ ತುಂಬಿಹರುತಿಂಬುವುದು ಹ್ಯಾಂಗೆನುತ ವ್ಯಾಸರಾಯರ ಕೇಳೆಕಂಬದಂತಾದರವರೆಲ್ಲ ಕುಳಿತವರು 4 ಮಾಣಿಕವು ಕೋಡಗನ

ಕನಕದಾಸನ ಮೇಲೆ ದಯ ಮಾಡಲು ವ್ಯಾಸ Read More »

ಕದರ ಮಂಡಲಗಿಯ ಕರುಣಿ ಹನುಮರಾಯ

ಕದರ ಮಂಡಲಗಿಯ ಕರುಣಿ ಹನುಮರಾಯ |ಸದುಗುಣವಂತನೆ ಹಣುವಂತನೆ ಅಂಜನೆಯ ವರಸೂನು ಆಶ್ರಿತ ಕಾಮಧೇನುಮಂಜುಳ ಗಾನ ಗೀತ ಪರಮ ವಿಖ್ಯಾತ ಸಂಜೀವನವ ತಂದ ವ್ಯೋಮ ಮಾರ್ಗದಿ ಬಂದಅಂಜದ ಗುಣವಂತನೆ ಹಣುವಂತನೆ1 ಶಶಿಧರಾನ್ವಯ ದೂತ ಸೌಮಿತ್ರಿಯ ವರೂಥ ಅಸಮಾಸ್ತ್ರಧೃತವೇದ ಅಮಿತ ಪ್ರಖ್ಯಾತ ಆ ಸುಗ್ರೀವ ಜಾಮಾತ ಮುಖ್ಯ ಪ್ರಾಣನಾಥ ವಿಶಾಲ ಗುಣವಂತನೆ ಹಣುವಂತನೆ 2 ಕ್ಷೋಣಿಯೊಳು ಕನಕದಾಸನ ನೆರಳು ಅನಕ ಏನು ಬಲಿಸಿದೆಯೊ ಔಷಧಿಯ ಕುಣುಕ ನೀನಿದ್ದರೆ ಕನಕ ಪ್ರಾಣ ತೆರಳುವ ತನಕ ಶ್ರೀನಿಧೇ ಆದಿಕೇಶವ ಎನ್ನ ಜನಕ3

ಕದರ ಮಂಡಲಗಿಯ ಕರುಣಿ ಹನುಮರಾಯ Read More »

ಕಣಿಯ ಹೇಳಲು ಬಂದೆ ನಾರಾಯಣನಲ್ಲದೆ

ಕಣಿಯ ಹೇಳಲು ಬಂದೆ ನಾರಾಯಣನಲ್ಲದೆ ಇಲ್ಲವೆಂದು – ಮಿಕ್ಕಬಣಗು ದೈವದ ಗೊಡವೆ ಬೇಡ ನರಕ ತಪ್ಪದು ಎಕ್ಕನಾತಿಯರು ಕಾಟಿ ಜಕ್ಕಿ ಜಲಕನ್ಯೆಯರುಸೊಕ್ಕಿನಿಂದ ಸೊಂಟಮುರುಕ ಬೈರೇ ದೇವರುಮಿಕ್ಕ ಮಾರಿ ಮಸಣಿ ಚೌಡಿ ಮೈಲಾರಿ ಮೊದಲಾದಠಕ್ಕು ದೈವದ ಗೊಡವೆ ಬೇಡ ನರಕ ತಪ್ಪದು ||1|| ಸುತ್ತಣವರ ಮಾತ ಕೇಳಿ ಗುತ್ತಿಯ ಎಲ್ಲಮ್ಮಗೊಲಿದುಬತ್ತಲೆಯೆ ದೇವರೆದುರು ಬರುವುದು ನೋಡಿರೊಮತ್ತೆ ಬೇವಿನುಡುಗೆಯ ಅರ್ತಿಯಿಂದುಟುಗೊಂಡುಮುಕ್ತಿ ಕಾಂಬೆವೆಂಬ ಮೌಢ್ಯ ಬೇಡಿರಯ್ಯ ||2|| ತೂಳದವರ ಮಾತ ಕೇಳಿ ಖೂಳರೆಲ್ಲ ಕೂಡಿಕೊಂಡುಹಾಳು ಮಾಡಿ ಕೈಯಲಿದ್ದ ಹೊನ್ನು ಹಣಗಳಬಾಳುತಿಪ್ಪ ಕೋಣ ಕುರಿಯ

ಕಣಿಯ ಹೇಳಲು ಬಂದೆ ನಾರಾಯಣನಲ್ಲದೆ Read More »

ಕಡೆ ಹಾಯಿಸೊ ಕಮಲ ಲೋಚನನೆ

ಕಡೆ ಹಾಯಿಸೊ ಕಮಲ ಲೋಚನನೆ ಎನ್ನತಡಿಯ ಸೇರಿಸೊ ತರಣಿಶತಕೋಟಿ ತೇಜ ಕಾಕು ಇಂದ್ರಿಯಗಳೆಂಬ ಕಟುಕರಿಗೆ ನಾ ಸಿಲುಕಿಮೇಕೆಯಂದದಿ ಬಾಯಿ ಬಿಡುತಿಪ್ಪೆನುಸಾಕಾರ ರೂಪ ಸರ್ವೋತ್ತಮನೆ ನೀ ಕರುಣಾಕರನೆಂಬ ಪೆಂಪುಂಟಾದಡೀಗೆನ್ನ|| 1|| ಕೊಮಲೆವ ದುಷ್ಕøತವೆಂಬ ಗಜಕೆ ಕೇಸರಿ ಎಂಬಛಲ ಬಿರುದು ತಾಳ್ದ ದೇವರ ದೇವ ನೀನೆನ್ನ ||2|| ಹಾದಿಗಾಣದೆ ತೊಲಗಿ ಪೋಪೆನೆಂದರೆ ಭಾವಬೂದಿಯೊಳಗಾಡಿ ಮುಳುಗಾಡುತಿಹೆನೊಭೂಧರನ ತಾಳ್ದ ಕೂರ್ಮಾವತಾರನೆ ಬಾಡದಾದಿಕೇಶವರಾಯ ಬೆನ್ನಲೆತ್ತಿಕೊಂಡು||3||

ಕಡೆ ಹಾಯಿಸೊ ಕಮಲ ಲೋಚನನೆ Read More »

ಕಂಡೆ ಶ್ರೀಹರಿ ದಿವ್ಯಪಾದ

ಕಂಡೆ ಶ್ರೀಹರಿ ದಿವ್ಯಪಾದ – ಬ್ರ-ಹ್ಮಾಂಡ ವ್ಯಾಪಕವಾಗಿ ಬೆಳಗುವ ಪಾದ ಸಿರಿಯು ಸೇವಿಪ ವರ ಪಾದ – ನಮ್ಮಗರುಡನಿಂದ ಹೊತ್ತು ತಿರುಗುವ ಪಾದತರಳ ಧ್ರುವನ ಕಾಯ್ದ ಪಾದ – ಮುನಿಸುರರು ನಮಿಸುವ ಲಲಿತ ಪಾದ 1 ಸರಸಿಜೋದ್ಭವ ವಂದ್ಯ ಪಾದಪುರಹರ ನಮಿತ ಪರಿಪೂರ್ಣ ಪಾದನರಗೆ ಸಾರಥಿಯಾದ ಪಾದಕೌರವ ಮೂಲ ಮುರಿದಿಟ್ಟ ಪಾದ2 ದಿವಿಜರಾಜನಿಗೊಲಿದ ಪಾದಅವಿವೇಕಿ ದಾನವರ ಕೊಂದ ಪಾದಬುವಿ ಗಯಾಪುರ ಶ್ರೇಷ್ಠ ಪಾದಭವ ಹಿಂಗಿಪಾದಿಕೇಶವ ಪಾದ3

ಕಂಡೆ ಶ್ರೀಹರಿ ದಿವ್ಯಪಾದ Read More »

ಕಂಡೆ ನಾ ತಂಡ ತಂಡದ ಹಿಂಡು

ಕಂಡೆ ನಾ ತಂಡ ತಂಡದ ಹಿಂಡು ಹಿಂಡು ದೈವ ಪ್ರಚಂಡ – ರಿಪುಗಂಡ ಉದ್ದಂಡ ನರಸಿಂಹನ ಕಂಡೆನಯ್ಯ ಘುಡುಘುಡಿಸಿ ಕಂಬದಲಿ ಧಡಧಡ ಸಿಡಿಲು ಸಿಡಿಯೆಕಿಡಿಕಿಡಿಸೆ ನುಡಿಯಡಗಲೊಡನೆ ಮುಡಿವಿಡಿದುಘಡಘಡನೆ ನಡುನಡುಗೆ ಘುಡುಘುಡಿಸಿ ಸಭೆ ಬೆದರೆಹಿಡಿ ಹಿಡಿದು ಹಿರಣ್ಯಕನ ತೊಡೆ ಮೇಲೆ ಕೆಡಹಿದನ||1|| ಉರದೊಳಪ್ಪಳಿಸಿ ಅರಿ ಬಸಿರ ಸರಸರನೆ ಸೀಳಿಪರಿಪರಿಯಲಿ ಚರ್ಮ ಎಳೆದೆಳೆದು ಎಲುಬು ನರನರವನು ತೆಗೆದು ನಿರ್ಗಳಿತ ಶೋಣಿತ ಸುರಿಯೆಹರಿಹರಿದು ಕರುಳ ಕೊರಳೊಳಿಟ್ಟವನ||2|| ಪುರಜನರು ಹಾಯೆನಲು ಸುರರು ಹೂಮಳೆಗರೆಯೆತರತರದ ವಾದ್ಯ ಸಂಭ್ರಮಗಳಿಂದಹರಿಹರಿ ಶರಣೆಂದು ಸ್ತುತಿಸಿ ಶಿಶು ಮೊರೆಯಿಡುವಕರುಣಾಳು ಕಾಗಿನೆಲೆಯಾದಿಕೇಶವನ||3||

ಕಂಡೆ ನಾ ತಂಡ ತಂಡದ ಹಿಂಡು Read More »

ಓಹೊ ಎನ ಜೀವ ಮೈಯೆಲ್ಲ ನವಗಾಯ 

ಓಹೊ ಎನ ಜೀವ ಮೈಯೆಲ್ಲ ನವಗಾಯ ಗಾಯ ಕಟ್ಟುವರಿಲ್ಲ ಗಾಳಿ ಹಾಕುವರಿಲ್ಲ ಮಾಡಿಲ್ಲ ಮಳೆಯಿಲ್ಲ ಮರದ ಮ್ಯಾಲೆ ನೀರ ಕಂಡೆಕಾಡು ಸುಡುವುದ ಕಂಡೆ ಬೂದಿಯ ಕಾಣಲಿಲ್ಲ ||1|| ಬಿತ್ತಲಿಲ್ಲ ಬೆಳೆಯಲಿಲ್ಲ ನೆಟ್ಟು ನೀರ ತೋರಲಿಲ್ಲಹೊತ್ತುಕೊಂಡು ತಿರುಗಿದೆ ರೊಕ್ಕದಾ ಪ್ರಾಣಿಯನ್ನು ||2|| ಅಡಿಕೆಯಷ್ಟು ಆಕಳಣ್ಣ ಹಿಡಿಕೆಯಷ್ಟು ಕೆಚ್ಚಲಣ್ಣಒಡನೆ ಕರೆದಾರ ಕರಿತೈತಿ ರಂಜಣಿಗಿ ಹಾಲಣ್ಣ ||3|| ಮೂರು ಮೊಳದಾ ಬಳ್ಳಿಗೆ ಆರು ಮೊಳದ ಕಾಯಣ್ಣಆರು ಹತ್ತರ ಮೊಳದ, ಕಾಯಿ ಕೊಯ್ಯುವ ಕುಡುಗೋಲಣ್ಣ||4|| ಊರ ಮುಂದೆ ಹಿರಣ್ಯಕನ ಕೊರಳ ಕೊಯ್ವುದ ಕಂಡೆಕೊರಳ

ಓಹೊ ಎನ ಜೀವ ಮೈಯೆಲ್ಲ ನವಗಾಯ  Read More »

ಒಡವೆ ಹೋಯಿತು ಮನ ದೃಢವಾಯಿತು

ಒಡವೆ ಹೋಯಿತು ಮನ ದೃಢವಾಯಿತು ಹಿಡಿದರೋಡುವ ಕಳ್ಳ ಬಿಡದೆ ಕದ್ದುಕೊಂಡು ಹೋದ ಆರು ಜೋಡಿನ ಓಲೆಯಿತ್ತು ಮೂರು ಮುತ್ತಿನ ಮೂಗುತಿಯಿತ್ತುಚಾರುತರದ ಇಪ್ಪತ್ನಾಲ್ಕೆಳೆಯ ಸರವು ಒಂದಿತ್ತುಈರೈದು ತಾಳಿಗಳಿತ್ತು ಬಿರುದಿನ ಕಪ್ಪೆಂಟಿತ್ತುದಾರಿ ನೋಡಿಕೊಂಡು ಇದ್ದ ಛಾಯನೆಂಬ ಕಳ್ಳ ಕದ್ದ ||1|| ಎಪ್ಪತ್ತೆರಡು ಸಾವಿರ ಸೂತ್ರದ ಹಸ್ತಕಟ್ಟು ಎರಡಿತ್ತುಕಪ್ಪು ಬಿಳುಪು ಕೆಂಪು ವರ್ಣದ ಪದಕ ಒಂದಿತ್ತುಒಪ್ಪವಿತ್ತ ಹಸ್ತಕಡಗ ಆಶಾಪಾಶವೆರಡಿತ್ತುಒಪ್ಪವನ್ನು ಸಾಧಿಸಿ ನೇತ್ರನೆಂಬ ಕಳ್ಳ ಕದ್ದ ||2|| ಹುಟ್ಟು ಸಾವು ಎರಡು ಎಂಬ ಘಟ್ಟಿ ತೂಕದ ನಗವಿತ್ತುಕಷ್ಟ ಸುಖ ಕರ್ಮಗಳೆಂಬ ಸಂಚಿಗಳಿತ್ತುಅಷ್ಟು ಇಷ್ಟು

ಒಡವೆ ಹೋಯಿತು ಮನ ದೃಢವಾಯಿತು Read More »

ಒಂಬತ್ತು ಹೂವಿಗೆ ಒಂದೇ ನಾಳವು ಚಂದಮಾಮ 

ಒಂಬತ್ತು ಹೂವಿಗೆ ಒಂದೇ ನಾಳವು ಚಂದಮಾಮ ತುಂಬಿ ನಾಳತುದಿ ತುಂಬಿ ಭಾನು ಪ್ರಭೆ ಚಂದಮಾಮ ಕದರು ಗಾತ್ರ ಕಂಬ ತೆಕ್ಕೆಗಾತರ ಹೂವು ಚಂದಮಾಮಆನೆಗಾತರ ಕಾಯಿ ಒಂಟೆಗಾತರ ಹಣ್ಣು ಚಂದಮಾಮ ||1|| ಕಾಲಿಲ್ಲದಾತನು ಹತ್ತಿದನು ಮರವನು ಚಂದಮಾಮಕೈಯಿಲ್ಲದಾತನು ಕೊಯ್ದನಾ ಹಣ್ಣನು ಚಂದಮಾಮ ||2|| ನೆತ್ತಿಲ್ಲದಾತನು ಹೊತ್ತನು ಹಣ್ಣ ಚಂದಮಾಮತಳವಿಲ್ಲದಾ ಗೂಡೆಯಲಿಳಿಸಿದನಾ ಹಣ್ಣ ಚಂದಮಾಮ ||3|| ಮಾರ್ಗ ತಪ್ಪಿ ಮಾರ್ಗ ಹಿಡಿದು ನಡೆದರು ಚಂದಮಾಮಸದ್ದಿಲ್ಲದಾ ಸಂತೇಲಿಳಿಸಿದರಾ ಹಣ್ಣ ಚಂದಮಾಮ ||4|| ರೊಕ್ಕವಿಲ್ಲದಾತ ಕೊಂಡನಾ ಹಣ್ಣ ಚಂದಮಾಮಮೂಗಿಲ್ಲದಾತ ಮೂಸಿದನಾ ಹಣ್ಣ ಚಂದಮಾಮ ||5|| ಕಣ್ಣಿಲ್ಲದಾತನು ಕೆಂಪಾನೆ ಹಣ್ಣೆಂದ

ಒಂಬತ್ತು ಹೂವಿಗೆ ಒಂದೇ ನಾಳವು ಚಂದಮಾಮ  Read More »

ಏನೆಂದು ನುಡಿವೆ ನಿನ್ನವರಂತೆ

ಏನೆಂದು ನುಡಿವೆ ನಿನ್ನವರಂತೆ ಕೇಡು ಬುದ್ಧಿ ಎನ್ನೊಳಗಿಲ್ಲ – ಗುಣಹೀನರಲ್ಲದ ಈ ನರರ ಪಾಲಿಪ ಬುದ್ಧಿ ನಿನ್ನೊಳಗಿಲ್ಲ ತರಳ ಪ್ರಹ್ಲಾದನಂದದಿ ನಿನ್ನ ರೂಪನು ಕೆಡಿಸಲಿಲ್ಲನರನಂತೆ ಬಂಡಿಬೋವನ ಮಾಡಿ ನಿನ್ನ ದುಡಿಸಲಿಲ್ಲಪರಾಶರನಂತೆ ನದಿಯೊಳಿದ್ದ ಹೆಣ್ಣ ಕೂಡಲಿಲ್ಲಗರುಡನಂದದಿ ನಿನ್ನ ಪೊತ್ತು ತಿರುಗಲಿಲ್ಲ ||1|| ಸನಕಾದಿ ಮುನಿಯಂತೆ ವನದೊಳು ಅನುದಿನ ಚರಿಸಲಿಲ್ಲಬಿನಗು ಬೇಡತಿಯಂತೆ ಸವಿದುಂಡ ಹಣ್ಣ ತಿನಿಸಲಿಲ್ಲಇನಕುಲ ಕಪಿಯಂತೆ ವಂಚಿಸಿ ವಾಲಿಯ ಕೊಲಿಸಲಿಲ್ಲಘನ ಪಾತಕದಜಮಿಳನಂತೆ ನಾರಗ ಎನ್ನಲಿಲ್ಲ||2|| ಕದನದೊಳು ವಿಭೀಷಣನಂತೆ ಅಣ್ಣನ ಕೊಲಿಸಲಿಲ್ಲವಿದುರನ ತೆರನಂತೆ ಸದನವ ಮುರಿದು ನಿನ್ನ ಬೆರೆಯಲಿಲ್ಲಮದಗಜದಂತೆ ಮಕರಿಗೆ ಸಿಲ್ಕಿ ಒರಲಲಿಲ್ಲಗದರಿ

ಏನೆಂದು ನುಡಿವೆ ನಿನ್ನವರಂತೆ Read More »

ಏನೆಂದು ಕೊಂಡಾಡಿ ಸ್ತುತಿಸಲೋ

ಏನೆಂದು ಕೊಂಡಾಡಿ ಸ್ತುತಿಸಲೋ ದೇವನಾನೇನು ಬಲ್ಲೆ ನಿನ್ನ ಮಹಿಮೆಗಳ ಮಾಧವ ಹರಿಮುಕುಂದನು ನೀನು ನರಜನ್ಮ ಹುಳು ನಾನುಪರಮಾತ್ಮನು ನೀನು ಪಾಮರನು ನಾನುಗರುಡ ಗಮನನು ನೀನು ಮರುಳು ಪಾಪಿಯು ನಾನುಪರಂಜ್ಯೋತಿಯು ನೀನು ದುರುಳ ತಿರುಕನು ನಾನು|| 1|| ವಾರಿಧಿಶಯನನಾದ ಕಾರುಣ್ಯನಿಧಿ ನೀನುಘೋರದಿಂದಿಹ ಕಾಮಿಕ್ರೋಧಿ ನಾನುಈರೇಳು ಭುವನದೊಳು ಇರುವ ಮೂರುತಿ ನೀನುದೂರಿ ನಿನ್ನನು ಬೈವ ದುಷ್ಟ ನಾನು||2|| ಅಣುರೇಣು ತೃಣಗಳಲಿ ಪರಿಪೂರ್ಣನು ನೀನುಕ್ಷಣಕ್ಷಣಕೆ ಅವಗುಣದ ಕುಕರ್ಮಿ ನಾನುವಾಣಿಯರಸನ ಪೆತ್ತ ವೈಕುಂಠಪತಿ ನೀನುಕ್ಷಣಭಂಗುರ ತನುವಿನ ಗೊಂಬೆ ನಾನು ||3|| ಕಂಬದಲಿ ಬಂದ ಆನಂದ ಮೂರುತಿ ನೀನುನಂಬಿಕೆಯಿಲ್ಲದ

ಏನೆಂದು ಕೊಂಡಾಡಿ ಸ್ತುತಿಸಲೋ Read More »

ಏನೆಂದಳೇನೆಂದಳೋ  ನಿನ್ನೊಳು ಸೀತೆ

ಏನೆಂದಳೇನೆಂದಳೋ ನಿನ್ನೊಳು ಸೀತೆ ಹನುಮಯ್ಯ ಜನಕನರಮನೆಯಲ್ಲಿ ಜನಿಸಿ ಸುಖದಲ್ಲಿರಲುಧನು ಮುರಿದು ಕೈಹಿಡಿದು ತನ್ನಘನ ಪದವಿಯನು ಬಿಟ್ಟು ವನವ ಸೇರಿದನೆಂದುವನಿತೆ ತಪಿಸುತೆ ಮನದಿ ನೊಂದು|| 1|| ಕುರುಹಿನುಂಗುರವನು ತರಳಾಕ್ಷಿಗಿತ್ತಾಗತಿರುಳಿಗಿಂತಧಿಕವೇ ಕರಟವೆಂದುಬೆರಳಿಂದ ಚಿಮ್ಮಿದಳೆ ಅಶೋಕವನದಾಚೆಗೆನಿರುತ ಸಂತಾಪದಲಿ ಮನದಿ ನೊಂದು ||2|| ಸೇತುವೆಯ ಕಟ್ಟಿ ಸಿಂಧುಗೆ ವಿಭೀಷಣಾಗ್ರಜಾತ ಲಂಕಾಧಿಪನ ವಧಿಸಿಸೀತೆಯನು ಸೆರೆಯಿಂದ ಬಿಡಿಸಿದ್ದೆ ಆದರೆನಾಥಾದಿಕೇಶವಗೆ ಬಲು ಬಿರುದು ಎಂದು||3||

ಏನೆಂದಳೇನೆಂದಳೋ  ನಿನ್ನೊಳು ಸೀತೆ Read More »

ಏನೆ ಮನವಿತ್ತೆ ಲಲಿತಾಂಗಿ

ಏನೆ ಮನವಿತ್ತೆ ಲಲಿತಾಂಗಿ ಅಸ-ಮಾನ ಗೋವಳ ಕುಲವಿಲ್ಲದವನೊಳು ಮಗಗೆ ಮೈದುನನಾದ ಮಗಳಿಗೆ ಪತಿಯಾದ ಮಗಳಿಗಳಿಯನಾದ ಅಳಿಯಗಳಿಯನಾದ ||1|| ಮಗಳ ಮಗಗೆ ಮೈದುನನಾಗಿ ಮಾವನಜಗವರಿಯಲು ಕೊಂದ ಕುಲಗೇಡಿ ಗೋವಳ ||2|| ಅತ್ತೆಗೆ ವಲ್ಲಭನಾದ ಭೃತ್ಯರಿಗಾಳಾದಚಿತ್ತ ಒಲಿದು ಚೆನ್ನ ಆದಿಕೇಶವನೊಳು ||3||

ಏನೆ ಮನವಿತ್ತೆ ಲಲಿತಾಂಗಿ Read More »

ಏನು ಮಾಡಲಯ್ಯ

ಏನು ಮಾಡಲಯ್ಯ ಬಯಲಾಸೆ ಬಿಡದು ಮಾನವ ಮೃಗೇಂದ್ರ ರಾಮಚಂದ್ರ ರಕ್ಷಿಸಯ್ಯ ಜ್ಯೋತಿರ್ಮಯವಾದ ದೀಪದ ಬೆಳಕಿಗೆ ತಾನುಕಾತರಿಸಿ ಬೀಳುವ ಪತಂಗದಂದದಲಿಧಾತುಗೆಟ್ಟು ಬೆಳ್ಳಿ ಬಂಗಾರದಲಿ ಮೆರೆವಧೂರ್ತೆಯರ ನೋಡುವೀ ಚಕ್ಷುರಿಂದ್ರಿಯಕೆ ||1|| ಅಂದವಹ ಸಂಪಗೆಯ ಅರಳ ಪರಿಮಳವುಂಡುಮುಂದುವರಿಯದೆ ಬೀಳ್ವ ಮಧುಪನಂತೆಸಿಂಧೂರ ಗಮನೆಯರ ಸಿರಿಮುಡಿಯೊಳಿಪ್ಪ ಪೂಗಂಧ ವಾಸಿಸುವ ಘ್ರಾಣೇಂದ್ರಿಯಕೆ ||2|| ಗಾಣದ ತುದಿಯೊಳಿಪ್ಪ ಭೂನಾಗನಂ ಕಂಡುಪ್ರಾಣಾಹುತಿಯೆಂದು ಸವಿವ ಮೀನಿನಂತೆಏಣಾಕ್ಷಿಯರ ಚೆಂದುಟಿಯ ಸವಿಯ ಸವಿಸವಿದುಜಾಣತನದಲಿ ನಲಿವ ಜಿಹ್ವೇಂದ್ರಿಯಕೆ ||3|| ದಿಮಿದಿಮ್ಮಿ ಘಣಘಣಾ ಎಂಬ ಘಂಟೆಯ ರವಕೆಜುಮುಜುಮನೆ ಬೆಮೆಗೊಳ್ಳುವ ಹರಿಣದಂತೆರಮಣಿಯರ ರಂಜಕದ ನುಡಿಗಳನು ಕೇಳಿ ಪ್ರ-ಣಮವೆಂದು

ಏನು ಮಾಡಲಯ್ಯ Read More »