admin

ಅಂಗವಿಕಾರವಳಿದು ಸತಿಯ ಸಂಗವರಿಯ ನೋಡಾ,

ಅಂಗವಿಕಾರವಳಿದು ಸತಿಯ ಸಂಗವರಿಯ ನೋಡಾ, ದೇಹಗುಣಂಗಳಿಲ್ಲಾಗಿ ನಿರ್ದೇಹಪ್ರಸಾದಿ ನೋಡಯ್ಯಾ, ಅಶನವ್ಯಸನಾದಿಗಳೆಲ್ಲವು ಬೆಂದವು ನೋಡಯ್ಯಾ. ಈ ಎಲ್ಲ ಗುಣಂಗಳಳಿದು ಕೂಡಲಸಂಗಮದೇವರಲ್ಲಿ ಸಾವಧಾನಿ ಪ್ರಸಾದಿ ಚೆನ್ನಬಸವಣ್ಣನು.

ಅಂಗವಿಕಾರವಳಿದು ಸತಿಯ ಸಂಗವರಿಯ ನೋಡಾ, Read More »

ಅಂಗದಿಚ್ಛೆಗೆ ಮದ್ಯಮಾಂಸವ ತಿಂಬರು,

ಅಂಗದಿಚ್ಛೆಗೆ ಮದ್ಯಮಾಂಸವ ತಿಂಬರು, ಕಂಗಳಿಚ್ಛೆಗೆ ಪರವಧುವ ನೆರೆವರು. ಲಿಂಗಲಾಂಛನಧಾರಿಯಾದಲ್ಲಿ ಫಲವೇನು ಲಿಂಗಪಥವ ತಪ್ಪಿ ನಡೆವವರು ಜಂಗಮಮುಖದಿಂದ ನಿಂದೆ ಬಂದಡೆ ಕೊಂಡ ಮಾರಿಂಗೆ ಹೋಹುದು ತಪ್ಪದು ಕೂಡಲಸಂಗಮದೇವಾ.

ಅಂಗದಿಚ್ಛೆಗೆ ಮದ್ಯಮಾಂಸವ ತಿಂಬರು, Read More »

ಅಂಗದಲ್ಲಿ ಲಿಂಗಸಂಗ,

ಅಂಗದಲ್ಲಿ ಲಿಂಗಸಂಗ, ಲಿಂಗದಲ್ಲಿ ಅಂಗಸಂಗವ ಮಾಡಿಹೆನೆಂದಡೆ, ಸಂದು ಭೇದವಳಿವ ಪರಿ ಎಂತು ಹೇಳಾ ಅಂಗದಲ್ಲಿ ಸಂಗವ ಮಾಡಿಹೆನೆಂದಡೆ, ಮುಂದುಗೆಡಿಸಿ ಕಾಡುವನು ಶಿವನು. ಕಾಮವೆಂಬ ಬಯಕೆಯಲ್ಲಿ ಅಳಲಿಸುವ ಬಳಲಿಸುವ ಶಿವನು. ಲಿಂಗದಲ್ಲಿ ಅಂಗವ ತಂದು ನಿಕ್ಷೇಪಿಸಿಹೆನೆಂದಡೆ, ಅಂಗದಿಂದ ಅತ್ತತ್ತಲೋಸರಿಸಿ ಓಡುವನಯ್ಯಾ ಶಿವನು. ಹೆಣ್ಣು ಗಂಡಾದಡೆ ಸಂಗಕ್ಕೆ ಒಲಿವನು ಕೇಳಾ ಶಿವನು. ಕೂಡಲಸಂಗಮದೇವರ ಬೆರಸುವಡೆ, ಭಿನ್ನವಿಲ್ಲದೆ ಕಲಿಯಾಗಿರಬೇಕು ಕೇಳಾ ಅವ್ವಾ.

ಅಂಗದಲ್ಲಿ ಲಿಂಗಸಂಗ, Read More »

ಅಂಗದಲ್ಲಿ ಅರ್ಪಿತವಾದ ಸುಖವು ಲಿಂಗದಲ್ಲಿ

ಅಂಗದಲ್ಲಿ ಅರ್ಪಿತವಾದ ಸುಖವು ಲಿಂಗದಲ್ಲಿ ಲೀಯವಾಯಿತ್ತೆಂದಡೆ ಅಂಗವ ಲಿಂಗದಲ್ಲಿ ಮತ್ತೆ ನಿಕ್ಷೇಪಿಸಿಹೆನೆಂಬ ಕಾರಣವೇಕಯ್ಯಾ ಶರಣಂಗೆ ಪ್ರಾಣನ ಲಿಂಗದಲ್ಲಿ ಸವೆಸಿ ನಿರವಯವಾಗಬಹುದಲ್ಲದೆ ಕರ್ಮದಿಂದಾದ ಕಾಯವ ಸವೆಸಿ ಸಯವಪ್ಪ ಪರಿ ಎಂತು ಹೇಳಯ್ಯಾ ಕೂಡಲಸಂಗಮದೇವಾ, ನಿಮ್ಮ ಶರಣರು ಕಾಯವಿಡಿದಿರ್ದು ನಿರ್ಮಾಯವಾಗಿರ್ಪುದ ಹೇಳಯ್ಯಾ ನಿಮ್ಮ ಧರ್ಮ.

ಅಂಗದಲ್ಲಿ ಅರ್ಪಿತವಾದ ಸುಖವು ಲಿಂಗದಲ್ಲಿ Read More »

ಅಂಗದಲಳವಟ್ಟ ಲಿಂಗಕ್ಕೆ ಅಂಗವೆ ಭಾಜನ,

ಅಂಗದಲಳವಟ್ಟ ಲಿಂಗಕ್ಕೆ ಅಂಗವೆ ಭಾಜನ, ಪ್ರಾಣದ ಮೇಲಣ ಲಿಂಗಕ್ಕೆ ನಿರ್ಭಾವವೆ ಭಾಜನ. ಅರಿವಿನ ಮೇಲಣ ಲಿಂಗಕ್ಕೆ ನಿರ್ಭಾವವೆ ಭಾಜನ ಕೂಡಲಸಂಗಮದೇವಯ್ಯಾ, ಪ್ರಭುದೇವರು ಆರೋಗಣೆಯ ಮಾಡುವಡೆ ಭಕ್ತಿಪರಿಯಾಣವಲ್ಲದೆ ಬೇರೆ ಭಾಜನವ ಕಾಣೆನು.

ಅಂಗದಲಳವಟ್ಟ ಲಿಂಗಕ್ಕೆ ಅಂಗವೆ ಭಾಜನ, Read More »

ಅಂಗದ ಮೇಲೆ ಲಿಂಗಸಾಹಿತ್ಯವಾದ

ಅಂಗದ ಮೇಲೆ ಲಿಂಗಸಾಹಿತ್ಯವಾದ ಬಳಿಕ ಸ್ಥಾವರದೈವಕ್ಕೆರಗಲಾಗದು. ತನ್ನ ಪುರುಷನ ಬಿಟ್ಟು ಅನ್ಯಪುರುಷನ ಸಂಗ ಸಲ್ಲುವುದೇ ರಿ ಕರಸ್ಥಲದ ದೇವನಿದ್ದಂತೆ ಧರೆಯ ಮೇಲಣ ಪ್ರತಿಷ್ಠೆಗೆರಗಿದಡೆ ನರಕದಲ್ಲಿಕ್ಕುವ ಕೂಡಲಸಂಗಮದೇವ.

ಅಂಗದ ಮೇಲೆ ಲಿಂಗಸಾಹಿತ್ಯವಾದ Read More »

ಅಂಗದ ಮೇಲೆ ಲಿಂಗ ಆಯತವಾಗಿ

ಅಂಗದ ಮೇಲೆ ಲಿಂಗ ಆಯತವಾಗಿ ಲಿಂಗಾರ್ಚನೆಯ ಮಾಡಿದಡೆ ಭವ ಹಿಂಗದೆಂದು, ಪ್ರಾಣದ ಮೇಲೆ ಲಿಂಗ[ಸ್ವಾ]ಯತವ ಮಾಡಿ ಎನ್ನಂತರಂಗ ಶುದ್ಧವ ಮಾಡಿ ಲಿಂಗೈಕ್ಯದ ಹೊಲಬ ತೋರಿದನಯ್ಯಾ, ಚೆನ್ನಬಸವಣ್ಣನು. ಕಾಯದ ಕಳವಳವು ದಾಸೋಹದ ಮುಖದಲ್ಲಿ ಅಲ್ಲದೆ ಹರಿಯದೆಂದು ಜಂಗಮಮುಖಲಿಂಗವಾಗಿ ಬಂದು ಎನ್ನ ಶಿಕ್ಷಿಸಿ ರಕ್ಷಿಸಿ ಎನ್ನ ಸಂಸಾರದ ಪ್ರಕೃತಿಯ ಹರಿದನಯ್ಯಾ, ಪ್ರಭುದೇವರು. ಕೂಡಲಸಂಗಮದೇವರಲ್ಲಿ ಪ್ರಭುದೇವರ ಚೆನ್ನಬಸವಣ್ಣನ ಕರುಣದಿಂದಲಾನು ಬದುಕಿದೆನು.

ಅಂಗದ ಮೇಲೆ ಲಿಂಗ ಆಯತವಾಗಿ Read More »

ಅಂಗದ ಮೇಲಣ ಲಿಂಗ ಹಿಂಗಿ ಬಂದ

ಅಂಗದ ಮೇಲಣ ಲಿಂಗ ಹಿಂಗಿ ಬಂದ ಸುಖವನಾರಿಗರ್ಪಿಸುವೆ ಹಿಂಗಲಾಗದು, ಭಕ್ತಿಪಥಕ್ಕೆ ಸಲ್ಲದಾಗಿ, ಹಿಂಗಲಾಗದು, ಶರಣಪಥಕ್ಕೆ ಸಲ್ಲದಾಗಿ, ಕೂಡಲಸಂಗಮದೇವರ ಹಿಂಗಿ ನುಂಗಿದುಗುಳು ಕಿಲ್ಬಿಷ.

ಅಂಗದ ಮೇಲಣ ಲಿಂಗ ಹಿಂಗಿ ಬಂದ Read More »

ಅಂಗದ ನಮಾಫಟವು ಸಿಂಗದ ಗಾತ್ರವು,

ಅಂಗದ ನಮಾಫಟವು ಸಿಂಗದ ಗಾತ್ರವು, ಹಿಂಗದು ಮನದಲ್ಲಿ ನಾನಾ ವಿಕಾರವು. ಬಂದೆಹೆನೆಂದರಿಯಲಿಲ್ಲಾಗಿ, ಸಂದೇಹ ಬಿಡದಾಗಿ, ಮುಂದುಗಾಣದು ಲೋಕ, ಬೆಂದ ಮಾಯಕ್ಕಂಜಿ ನಿಮ್ಮ ಮರೆವೊಕ್ಕೆ, ಕೂಡಲಸಂಗಮದೇವಾ.

ಅಂಗದ ನಮಾಫಟವು ಸಿಂಗದ ಗಾತ್ರವು, Read More »

ಅಂಗಯ್ಯ ಒಳಗಣ ಲಿಂಗವ ನೋಡುತ್ತ,

ಅಂಗಯ್ಯ ಒಳಗಣ ಲಿಂಗವ ನೋಡುತ್ತ, ಕಂಗಳು ಕಡೆಗೋಡಿವರಿಯುತ್ತ ಸುರಿಯುತ್ತ ಎಂದಿಪ್ಪೆನೊ ನೋಟವೆ ಪ್ರಾಣವಾಗಿ ಎಂದಿಪ್ಪೆನೊ ಕೂಟವೇ ಪ್ರಾಣವಾಗಿ ಎಂದಿಪ್ಪೆನೊ ಎನ್ನ ಅಂಗವಿಕಾರದ ಸಂಗವಳಿದು, ಕೂಡಲಸಂಗಯ್ಯಾ, ಲಿಂಗ ಲಿಂಗವೆನುತ್ತ.

ಅಂಗಯ್ಯ ಒಳಗಣ ಲಿಂಗವ ನೋಡುತ್ತ, Read More »

ಅಂಕ ಕಳನೇರಿ ಕೈಮರೆದಿರ್ದಡೆ ಮಾರಂಕ ಬಂದಿರಿವುದ

ಅಂಕ ಕಳನೇರಿ ಕೈಮರೆದಿರ್ದಡೆ ಮಾರಂಕ ಬಂದಿರಿವುದ ಮಾಬನೆ ನಿಮ್ಮ ನೆನಹ ಮನ ಮರೆದಿರ್ದಡೆ ಮಾಯೆ ತನುವನಂಡಲೆವುದ ಮಾಬುದೆ ಕೂಡಲಸಂಗಯ್ಯನ ನೆನೆದಡೆ, ಪಾಪ ಉರಿಗೊಡ್ಡಿದರಗಿನಂತೆ ಕರಗುವುದಯ್ಯಾ.

ಅಂಕ ಕಳನೇರಿ ಕೈಮರೆದಿರ್ದಡೆ ಮಾರಂಕ ಬಂದಿರಿವುದ Read More »

ಅಂಕ ಕಂಡಾ, ಕೋಲಾಸೆ ಮತ್ತೇಕಯ್ಯಾ ಲೆಂಕ ಕಂಡಾ,

ಅಂಕ ಕಂಡಾ, ಕೋಲಾಸೆ ಮತ್ತೇಕಯ್ಯಾ ಲೆಂಕ ಕಂಡಾ, ಪ್ರಾಣದಾಸೆ ಮತ್ತೇಕಯ್ಯಾ ಭಕ್ತ ಕಂಡಾ, ತನುಮನಧನದಾಸೆ ಮತ್ತೇಕಯ್ಯಾ ನಿಮ್ಮ ಅಂಕೆಗೆ ಝಂಕೆಗೆ ಶಂಕಿತನಾದಡೆ ಎನ್ನ ಲೆಂಕತನಕ್ಕೆ ಹಾನಿ ಕೂಡಲಸಂಗಮದೇವಾ.

ಅಂಕ ಕಂಡಾ, ಕೋಲಾಸೆ ಮತ್ತೇಕಯ್ಯಾ ಲೆಂಕ ಕಂಡಾ, Read More »

ಹೋದೆನೂರಿಗೆ, ಇದ್ದೆ ನಾನಲ್ಲಿ,

ಹೋದೆನೂರಿಗೆ, ಇದ್ದೆ ನಾನಲ್ಲಿ, ಹೋದಡೆ ಮರಳಿತ್ತ ಬಾರೆನವ್ವಾ. ಐವರು ಭಾವದಿರು, ಐವರು ನಗೆವೆಣ್ಣು ಈ ಐವರು ಕೂಡಿ ಎನ್ನ ಕಾಡುವರು ಬೈವರು ಹೊಯ್ವರು ಮಿಗೆ ಕೇಡನುಡಿವರು. ಇವರೈವರ ಕಾಟಕ್ಕೆ ನಾನಿನ್ನಾರೆ ಕಂಡವ್ವಾ. ಅತ್ತೆ ಮಾವ ಮೈದುನ ನಗೆವೆಣ್ಣು, ಚಿತ್ತವನೊರೆದು ನೋಡುವ ಗಂಡ. ಕತ್ತಲೆಯಾದಡೆ ಕರೆದನ್ನವ ನೀಡವ್ವಾ, ಅತ್ತಿಗೆ ಹತ್ತೆಂಟ ನುಡಿವಳಮ್ಮಮ್ಮ ತಾಯೆ. ಉಪಮಾತೀತರು ಬಂಧುಬಳಗಂಗಳು. ಶ್ರೀಶೈಲ ಚೆನ್ನಮಲ್ಲಿಕಾರ್ಜುನ ಒಲಿದಡೆ ಮರಳಿ ಬಾರೆನಮ್ಮ ತಾಯೆ.

ಹೋದೆನೂರಿಗೆ, ಇದ್ದೆ ನಾನಲ್ಲಿ, Read More »

ಹಿತವಿದೆ ಸಕಲಲೋಕದ ಜನಕ್ಕೆ,

ಹಿತವಿದೆ ಸಕಲಲೋಕದ ಜನಕ್ಕೆ, ಮತವಿದೆ ಶ್ರುತಿಪುರಾಣಾಗಮದ, ಗತಿಯಿದೆ, ಭಕುತಿಯ ಬೆಳಗಿನುನ್ನತಿಯಿದೆ. ಶ್ರೀ ವಿಭೂತಿಯ ಧರಿಸಿದಡೆ ಭವವ ಪರಿವುದು ದುರಿತಸಂಕುಳವನೊರಸುವುದು ಹರನ ಸಾಲೋಕ್ಯ ಸಾಮೀಪ್ಯ ಸಾರೂಪ್ಯ ಸಾಯುಜ್ಯದಲ್ಲಿರಿಸುವುದು. ನಿರುತವಿದು ನಂಬು ಮನುಜಾ, ಜನನಭೀತಿ ಈ ವಿಭೂತಿ. ಮರಣಭಯದಿಂದ ಅಗಸ್ತ್ಯ ಕಾಶ್ಯಪ ಜಮದಗ್ನಿಗಳು ಧರಿಸಿದರಂದು ನೋಡಾ. ಶ್ರೀಶೈಲ ಚೆನ್ನಮಲ್ಲಿಕಾರ್ಜುನನ ಒಲಿವ ವಿಭೂತಿ.

ಹಿತವಿದೆ ಸಕಲಲೋಕದ ಜನಕ್ಕೆ, Read More »

ಹಿಡಿವೆನೆಂದಡೆ ಹಿಡಿಗೆ ಬಾರನವ್ವಾ.

ಹಿಡಿವೆನೆಂದಡೆ ಹಿಡಿಗೆ ಬಾರನವ್ವಾ. ತಡೆವೆನೆಂದಡೆ ಮೀರಿ ಹೋಹನವ್ವಾ. ಒಪ್ಪಚ್ಚಿ ಅಗಲಿದಡೆ ಕಳವಳಗೊಂಡೆ. ಚೆನ್ನಮಲ್ಲಿಕಾರ್ಜುನನ ಕಾಣದೆ ಆನಾರೆಂದರಿಯೆ ಕೇಳಾ, ತಾಯೆ.

ಹಿಡಿವೆನೆಂದಡೆ ಹಿಡಿಗೆ ಬಾರನವ್ವಾ. Read More »

ಹಿಡಿಯದಿರು ತಡೆಯದಿರು ಬಿಡುಬಿಡು ಕೈಯಸೆರಗ.

ಹಿಡಿಯದಿರು ತಡೆಯದಿರು ಬಿಡುಬಿಡು ಕೈಯಸೆರಗ. ಭಾಷೆಯ ಬರೆದುಕೊಟ್ಟ ಸತ್ಯಕ್ಕೆ ತಪ್ಪಿದರೆ ಅಘೋರ ನರಕವೆಂದರಿಯಾ ? ಚೆನ್ನಮಲ್ಲಿಕಾರ್ಜುನನ ಕೈವಿಡಿದ ಸತಿಯ ಮುಟ್ಟಿದರೆ ಕೆಡುವೆ ಕಾಣಾ ಮರುಳೆ.

ಹಿಡಿಯದಿರು ತಡೆಯದಿರು ಬಿಡುಬಿಡು ಕೈಯಸೆರಗ. Read More »

ಹಿಂದಣ ಹಳ್ಳ, ಮುಂದಣ ತೊರೆ,

ಹಿಂದಣ ಹಳ್ಳ, ಮುಂದಣ ತೊರೆ, ಸಲ್ಲುವ ಪರಿಯೆಂತು ಹೇಳಾ ? ಹಿಂದಣ ಕೆರೆ, ಮುಂದಣ ಬಲೆ, ಹದುಳವಿನ್ನೆಲ್ಲಿಯದು ಹೇಳಾ ? ನೀನಿಕ್ಕಿದ ಮಾಯೆ ಕೊಲುತಿಪ್ಪುದು ಕಾಯಯ್ಯಾ, ಕಾಯಯ್ಯಾ ಚೆನ್ನಮಲ್ಲಿಕಾರ್ಜುನಾ.

ಹಿಂದಣ ಹಳ್ಳ, ಮುಂದಣ ತೊರೆ, Read More »

ಹೋದೆನೂರಿಗೆ, ಇದ್ದೆ ನಾನಲ್ಲಿ,

ಹೋದೆನೂರಿಗೆ, ಇದ್ದೆ ನಾನಲ್ಲಿ, ಹೋದಡೆ ಮರಳಿತ್ತ ಬಾರೆನವ್ವಾ. ಐವರು ಭಾವದಿರು, ಐವರು ನಗೆವೆಣ್ಣು ಈ ಐವರು ಕೂಡಿ ಎನ್ನ ಕಾಡುವರು ಬೈವರು ಹೊಯ್ವರು ಮಿಗೆ ಕೇಡನುಡಿವರು. ಇವರೈವರ ಕಾಟಕ್ಕೆ ನಾನಿನ್ನಾರೆ ಕಂಡವ್ವಾ. ಅತ್ತೆ ಮಾವ ಮೈದುನ ನಗೆವೆಣ್ಣು, ಚಿತ್ತವನೊರೆದು ನೋಡುವ ಗಂಡ. ಕತ್ತಲೆಯಾದಡೆ ಕರೆದನ್ನವ ನೀಡವ್ವಾ, ಅತ್ತಿಗೆ ಹತ್ತೆಂಟ ನುಡಿವಳಮ್ಮಮ್ಮ ತಾಯೆ. ಉಪಮಾತೀತರು ಬಂಧುಬಳಗಂಗಳು. ಶ್ರೀಶೈಲ ಚೆನ್ನಮಲ್ಲಿಕಾರ್ಜುನ ಒಲಿದಡೆ ಮರಳಿ ಬಾರೆನಮ್ಮ ತಾಯೆ.

ಹೋದೆನೂರಿಗೆ, ಇದ್ದೆ ನಾನಲ್ಲಿ, Read More »

ಹೊಳೆವ ಕೆಂಜೆಡೆಗಳ, ಮಣಿಮಕುಟದ, ಒಪ್ಪುವ ಸುಲಿಪಲ್ಗಳ,

ಹೊಳೆವ ಕೆಂಜೆಡೆಗಳ, ಮಣಿಮಕುಟದ, ಒಪ್ಪುವ ಸುಲಿಪಲ್ಗಳ, ನಗೆಮೊಗದ, ಕಂಗಳ ಕಾಂತಿಯ, ಈರೇಳುಭುವನವ ಬೆಳಗುವ ದಿವ್ಯಸ್ವರೂಪನ ಕಂಡೆ ನಾನು. ಕಂಡೆನ್ನ ಕಂಗಳ ಬರ ಹಿಂಗಿತ್ತೆನಗೆ. ಗಂಡಗಂಡರೆಲ್ಲರ ಹೆಂಡಿರಾಗಿ ಆಳುವ ಗರುವನ ಕಂಡೆ ನಾನು. ಜಗದಾದಿ ಶಕ್ತಿಯೊಳು ಬೆರಸಿ ಮಾತನಾಡುವ ಪರಮಗುರು ಚೆನ್ನಮಲ್ಲಿಕಾರ್ಜುನನ ನಿಲವ ಕಂಡು ಬದುಕಿದೆನು

ಹೊಳೆವ ಕೆಂಜೆಡೆಗಳ, ಮಣಿಮಕುಟದ, ಒಪ್ಪುವ ಸುಲಿಪಲ್ಗಳ, Read More »

ಹೊಳೆ ಕೆಂಜೆಡೆಯ ಮೇಲೆ ಎಳೆವೆಳದಿಂಗಳು,

ಹೊಳೆ ಕೆಂಜೆಡೆಯ ಮೇಲೆ ಎಳೆವೆಳದಿಂಗಳು, ಫಣಿಮಣಿ ಕರ್ಣಕುಂಡಲ ನೋಡವ್ವಾ ; ರುಂಡಮಾಲೆಯ ಕೊರಳವನ ಕಂಡಡೆ ಒಮ್ಮೆ ಬರಹೇಳವ್ವಾ ? ಗೋವಿಂದನ ನಯನ ಉಂಗುಟದ ಮೇಲಿಪ್ಪುದು, ಚೆನ್ನಮಲ್ಲಿಕಾರ್ಜುನದೇವನ ಕುರುಹವ್ವಾ.

ಹೊಳೆ ಕೆಂಜೆಡೆಯ ಮೇಲೆ ಎಳೆವೆಳದಿಂಗಳು, Read More »

ಹೊನ್ನು ಮುರಿದಡೆ ಬೆಸಸಬಹುದಲ್ಲದೆ,

ಹೊನ್ನು ಮುರಿದಡೆ ಬೆಸಸಬಹುದಲ್ಲದೆ, ಮುತ್ತು ಒಡೆದಡೆ ಬೆಸಸಬಹುದೆ ? ಮನ ಮುರಿದಡೆ ಮನಕೊಬ್ಬರೊಡೆಯರುಂಟೆ ? ಚೆನ್ನಮಲ್ಲಿಕಾರ್ಜುನ ಸಾಕ್ಷಿಯಾಗಿ ಬೇಟವುಳ್ಳಲ್ಲಿ ಬೆರೆಸೆ ಘನ

ಹೊನ್ನು ಮುರಿದಡೆ ಬೆಸಸಬಹುದಲ್ಲದೆ, Read More »

ಹೆದರದಿರು ಮನವೆ, ಬೆದರದಿರು ತನುವೆ,

ಹೆದರದಿರು ಮನವೆ, ಬೆದರದಿರು ತನುವೆ, ನಿಜವನರಿತು ನಿಶ್ಚಿಂತನಾಗಿರು. ಫಲವಾದ ಮರನ ಕಲ್ಲಲಿ ಇಡುವುದೊಂದು ಕೋಟಿ, ಎಲವದಮರನ ಇಡುವರೊಬ್ಬರ ಕಾಣೆ. ಭಕ್ತಿಯುಳ್ಳವರ ಬೈವರೊಂದುಕೋಟಿ, ಭಕ್ತಿಯಿಲ್ಲದವರ ಬೈವರೊಬ್ಬರ ಕಾಣೆ. ನಿಮ್ಮ ಶರಣರ ನುಡಿಯೆ ಎನಗೆ ಗತಿ, ಸೋಪಾನ, ಚೆನ್ನಮಲ್ಲಿಕಾರ್ಜುನಾ.

ಹೆದರದಿರು ಮನವೆ, ಬೆದರದಿರು ತನುವೆ, Read More »

ಹೆಣ್ಣು ಹೆಣ್ಣಾದಡೆ ಗಂಡಿನಸೂತಕ.

ಹೆಣ್ಣು ಹೆಣ್ಣಾದಡೆ ಗಂಡಿನಸೂತಕ. ಗಂಡು ಗಂಡಾದಡೆ ಹೆಣ್ಣಿನಸೂತಕ. ಮನದಸೂತಕ ಹಿಂಗಿದಡೆ ತನುವಿನ ಸೂತಕಕ್ಕೆ ತೆರಹುಂಟೆ ? ಅಯ್ಯಾ, ಮೊದಲಿಲ್ಲದ ಸೂತಕಕ್ಕೆ ಮರುಳಾಯಿತ್ತು ಜಗವೆಲ್ಲ. ಎನ್ನ ದೇವ ಚೆನ್ನಮಲ್ಲಿಕಾರ್ಜುನನೆಂಬ ಗರುವಂಗೆ ಜಗವೆಲ್ಲ ಹೆಣ್ಣು ನೋಡಾ ಅಯ್ಯಾ.

ಹೆಣ್ಣು ಹೆಣ್ಣಾದಡೆ ಗಂಡಿನಸೂತಕ. Read More »

ಹಾಲಹಿಡಿದು ಬೆಣ್ಣೆಯನರಸಲುಂಟೆ ?

ಹಾಲಹಿಡಿದು ಬೆಣ್ಣೆಯನರಸಲುಂಟೆ ? ಲಿಂಗವಹಿಡಿದು ಪುಣ್ಯತೀರ್ಥಕ್ಕೆ ಹೋಗಲುಂಟೆ ? ಲಿಂಗದ ಪಾದತೀರ್ಥ ಪ್ರಸಾದವ ಕೊಂಡು ಅನ್ಯಬೋಧೆ ಅನ್ಯಶಾಸ್ತ್ರಕ್ಕೆ ಹಾರೈಸಲೇತಕ್ಕೆ ? ಇಷ್ಟಲಿಂಗವಿದ್ದಂತೆ ಸ್ಥಾವರಲಿಂಗಕ್ಕೆ ಶರಣೆಂದೆನಾದಡೆ ತಡೆಯದೆ ಹುಟ್ಟಿಸುವನು ಶ್ವಾನನ ಗರ್ಭದಲ್ಲಿ. ಅದೆಂತೆಂದಡೆ ಶಿವಧರ್ಮಪುರಾಣದಲ್ಲಿ ‘ಇಷ್ಟಲಿಂಗಮವಿಶ್ವಸ್ಯ ತೀರ್ಥಲಿಂಗಸ್ಯ ಪೂಜಕಃ ಶ್ವಾನಯೋನಿಶತಂ ಗತ್ವಾ ಚಾಂಡಾಲಗೃಹಮಾಚರೇತ್’ || ಎಂದುದಾಗಿ, ಇದನರಿದು ಗುರು ಕೊಟ್ಟ ಲಿಂಗದಲ್ಲಿಯೆ ಎಲ್ಲಾ ತೀರ್ಥಂಗಳೂ ಎಲ್ಲಾ ಕ್ಷೇತ್ರಂಗಳೂ ಇದ್ದಾವೆಂದು ಭಾವಿಸಿ ಮುಕ್ತರಪ್ಪುದಯ್ಯಾ. ಇಂತಲ್ಲದೆ ಗುರು ಕೊಟ್ಟ ಲಿಂಗವ ಕಿರಿದುಮಾಡಿ, ತೀರ್ಥಲಿಂಗವ ಹಿರಿದುಮಾಡಿ ಹೋದಾತಂಗೆ ಅಘೋರ ನರಕ ತಪ್ಪದು ಕಾಣಾ

ಹಾಲಹಿಡಿದು ಬೆಣ್ಣೆಯನರಸಲುಂಟೆ ? Read More »

ಹಾವಿನ ಹಲ್ಲ ಕಳೆದು ಹಾವನಾಡಿಸಬಲ್ಲಡೆ

ಹಾವಿನ ಹಲ್ಲ ಕಳೆದು ಹಾವನಾಡಿಸಬಲ್ಲಡೆ ಹಾವಿನ ಸಂಗವೆ ಲೇಸು ಕಂಡಯ್ಯಾ. ಕಾಯದ ಸಂಗವ ವಿವರಿಸಬಲ್ಲಡೆ ಕಾಯದ ಸಂಗವೆ ಲೇಸು ಕಂಡಯ್ಯಾ. ತಾಯಿ ರಕ್ಕಸಿಯಾದಂತೆ ಕಾಯವಿಕಾರವು. ಚೆನ್ನಮಲ್ಲಿಕಾರ್ಜುನಯ್ಯಾ, ನೀನೊಲಿದವರು ಕಾಯಗೊಂಡಿದ್ದರೆನಬೇಡ.

ಹಾವಿನ ಹಲ್ಲ ಕಳೆದು ಹಾವನಾಡಿಸಬಲ್ಲಡೆ Read More »