admin

ವಿರಕ್ತಿಯೇ ಅವಿರಕ್ತಿ, ವಿರಕ್ತನೆನ್ನದಿರಣ್ಣಾ.

ವಿರಕ್ತಿಯೇ ಅವಿರಕ್ತಿ, ವಿರಕ್ತನೆನ್ನದಿರಣ್ಣಾ. ನೋಟದ ಕರುಳ ಕೊಯ್ಯದನ್ನಕ್ಕರ, ಕ್ರೀಯದ ಕರಬೋನಗಳೊಡೆಯದನ್ನಕ್ಕರ, ಅಷ್ಟಮದಾದಿಗಳೆಂಬವ ಹೊಟ್ಟುಹುರಿಯದನ್ನಕ್ಕರ, ಬೇಕುಬೇಡಾಯೆಂದು ಪರಿವ ಸರ್ವಸಂದೇಹವ ಹೂಳದನ್ನಕ್ಕರ ವಿರಕ್ತ ವಿರಕ್ತನೆನ್ನದಿರಣ್ಣಾ. ಶ್ರೀಶೈಲಚೆನ್ನಮಲ್ಲಿಕಾರ್ಜುನದೇವನೊಬ್ಬನೆ ವಿರಕ್ತ ಕಾಣಿರಣ್ಣಾ.

ವಿರಕ್ತಿಯೇ ಅವಿರಕ್ತಿ, ವಿರಕ್ತನೆನ್ನದಿರಣ್ಣಾ. Read More »

ವಿರಕ್ತಿ ವಿರಕ್ತಿಯೆಂಬವರು

ವಿರಕ್ತಿ ವಿರಕ್ತಿಯೆಂಬವರು ವಿರಕ್ತಿಯ ಪರಿಯೆಂತುಟು ಹೇಳಿರಯ್ಯಾ ? ಕಟ್ಟಿದ್ದ ಲಿಂಗವ ಕೈಯಲ್ಲಿ ಹಿಡಿದು ಬತ್ತಲೆಯಿರ್ದಡೆ ವಿರಕ್ತನೆ ? ಉಟ್ಟುದ ತೊರದ ಮತ್ತೆ ಕಟ್ಟಿದ ಲಿಂಗವ ಕೈಯಲ್ಲಿ ಹಿಡಿಯಲೇಬೇಕು. ಉಟ್ಟುದ ತೊರೆಯದೆ ಕಟ್ಟಿದ ಲಿಂಗವ ಕೈಯಲ್ಲಿ ಹಿಡಿದ ಭ್ರಷ್ಟರನೇನೆಂಬೆ ಚೆನ್ನಮಲ್ಲಿಕಾರ್ಜುನಾ ?

ವಿರಕ್ತಿ ವಿರಕ್ತಿಯೆಂಬವರು Read More »

ವಿರಕ್ತಿ ವಿರಕ್ತಿ ಎಂಬರು ವಿರಕ್ತಿಯ ಪರಿ ಎಂತುಂಟು ಹೇಳಿರಯ್ಯಾ.

ವಿರಕ್ತಿ ವಿರಕ್ತಿ ಎಂಬರು ವಿರಕ್ತಿಯ ಪರಿ ಎಂತುಂಟು ಹೇಳಿರಯ್ಯಾ. ಕಟ್ಟಿದ ಲಿಂಗವ ಕೈಯಲ್ಲಿ ಹಿಡಿದಿದ್ದರೆ ವಿರಕ್ತನೆ ? ಹುಟ್ಟು ಕೆತ್ತುವ ಡೊಂಬನಂತೆ ಬಿಟ್ಟಮಂಡೆಯ ಕೇಶವ ನುಣ್ಣಿಸಿ ಬಣ್ಣಿಸಿ, ಎಣ್ಣೆಯ ಗಂಟ ಹಾಕಿದಡೆ ವಿರಕ್ತನೆ ? ಕಟ್ಟುಹರಿದ ಪಂಜಿನಂತೆ, ಬಿಟ್ಟಮಂಡೆಯ ಕಟ್ಟದಿರ್ದಡೆ ವಿರಕ್ತನೆ ? ಹರದನಂತೆ ಹೇಸಿಯಾಗಿರ್ದಡೆ ವಿರಕ್ತನೆ ? ಮೂಗನಂತೆ ಮಾತನಾಡದಿರ್ದಡೆ ವಿರಕ್ತನೆ ? ಹೊನ್ನು ಹೆಣ್ಣು ಮಣ್ಣ ಬಿಟ್ಟು ಅಡವಿಯಾರಣ್ಯದಲ್ಲಿರ್ದಡೆ ವಿರಕ್ತನೆ ?ಅಲ್ಲ. ವಿರಕ್ತನ ಪರಿಯೆಂತೆಂದೊಡೆ ಒಡಲ ಹುಡಿಗುಟ್ಟಿ, ಮೃಡನೊಳೆಡದೆರಹಿಲ್ಲದಿರಬಲ್ಲಡೆ ವಿರಕ್ತನಪ್ಪನು. ಅಲ್ಲದಿರ್ದಡೆ ಮೈಲಾರಿ ಮಲ್ಲಿ

ವಿರಕ್ತಿ ವಿರಕ್ತಿ ಎಂಬರು ವಿರಕ್ತಿಯ ಪರಿ ಎಂತುಂಟು ಹೇಳಿರಯ್ಯಾ. Read More »

ರವಿಯ ಕಾಳಗವ ಗೆಲಿದು, ಒಂಬತ್ತು ಬಾಗಿಲ ಮುರಿದು,

ರವಿಯ ಕಾಳಗವ ಗೆಲಿದು, ಒಂಬತ್ತು ಬಾಗಿಲ ಮುರಿದು, ಅಷ್ಟಧವಳಾರಮಂ ಸುಟ್ಟು, ಮೇಲುಪ್ಪರಿಗೆಯ ಮೆಟ್ಟಿ, ಅಲ್ಲಅಹುದು, ಉಂಟುಇಲ್ಲ, ಬೇಕುಬೇಡೆಂಬ ಆರರಿತಾತನೆ ಗುರು ತಾನೆ ಬೇರಿಲ್ಲ. ದ್ವಯಕಮಳದಲ್ಲಿ ಉದಯವಾದ ಚೆನ್ನಮಲ್ಲಿಕಾರ್ಜುನಯ್ಯಾ ನಿಮ್ಮ ಶರಣ ಸಂಗನಬಸವಣ್ಣನ ಶ್ರೀಪಾದಕ್ಕೆ ನಮೋ ನಮೋ ಎನುತಿರ್ದೆನು.

ರವಿಯ ಕಾಳಗವ ಗೆಲಿದು, ಒಂಬತ್ತು ಬಾಗಿಲ ಮುರಿದು, Read More »

ರತ್ನದ ಸಂಕೋಲೆಯಾದಡೆ ತೊಡರಲ್ಲವೆ ?

ರತ್ನದ ಸಂಕೋಲೆಯಾದಡೆ ತೊಡರಲ್ಲವೆ ? ಮುತ್ತಿನ ಬಲೆಯಾದಡೆ ಬಂಧನವಲ್ಲವೆ ? ಚಿನ್ನದ ಕತ್ತಿಯಲ್ಲಿ ತಲೆಹೊಯ್ದಡೆ ಸಾಯದಿರ್ಪರೆ ? ಲೋಕದ ಭಜನೆಯ ಭಕ್ತಿಯಲ್ಲಿ ಸಿಲುಕಿದಡೆ ಜನನಮರಣ ಬಿಡುವುದೆ ಚೆನ್ನಮಲ್ಲಿಕಾರ್ಜುನಾ ?

ರತ್ನದ ಸಂಕೋಲೆಯಾದಡೆ ತೊಡರಲ್ಲವೆ ? Read More »

ಮೋಹವುಳ್ಳಲ್ಲಿ ಮಚ್ಚುವಂತೆಮಾಡಯ್ಯಾ.

ಮೋಹವುಳ್ಳಲ್ಲಿ ಮಚ್ಚುವಂತೆಮಾಡಯ್ಯಾ. ಮೋಹವುಳ್ಳಲ್ಲಿ ಕರುಳುವ ಕೊಯ್ಯಯ್ಯಾ. ಮೋಹವುಳ್ಳಲ್ಲಿ ಬೆರಳುವ ಕಡಿಯಯ್ಯಾ. ಚೆನ್ನಮಲ್ಲಿಕಾರ್ಜುನದೇವಯ್ಯಾ, ನೊಂದೆನೆಂದಡೆ ಮನಕತಮಾಡಯ್ಯಾ.

ಮೋಹವುಳ್ಳಲ್ಲಿ ಮಚ್ಚುವಂತೆಮಾಡಯ್ಯಾ. Read More »

ಮೊಲೆ ಬಿದ್ದು, ಮುಡಿ ಸಡಲಿ, ಗಲ್ಲ ಬತ್ತಿ, ತೋಳು ಕಂದಿದವಳ

ಮೊಲೆ ಬಿದ್ದು, ಮುಡಿ ಸಡಲಿ, ಗಲ್ಲ ಬತ್ತಿ, ತೋಳು ಕಂದಿದವಳ ಎನ್ನನೇಕೆ ನೋಡುವಿರಿ ಎಲೆ ಅಣ್ಣಗಳಿರಾ ? ಕುಲವಳಿದು bsಲವಳಿದು ಭವಗೆಟ್ಟು ಭಕ್ತೆಯಾದವಳ, ಎನ್ನನೇಕೆ ನೋಡುವಿರಿ ಎಲೆ ತಂದೆಗಳಿರಾ ? ಚೆನ್ನಮಲ್ಲಿಕಾರ್ಜುನನ ಕೂಡಿ ಕುಲವಳಿದು bsಲವಳಿದವಳನು.

ಮೊಲೆ ಬಿದ್ದು, ಮುಡಿ ಸಡಲಿ, ಗಲ್ಲ ಬತ್ತಿ, ತೋಳು ಕಂದಿದವಳ Read More »

ವಾನರಂಗಳಿಗೆ ಭೈತ್ರ ತಪ್ಪಿಬಂದಡೆ

ವಾನರಂಗಳಿಗೆ ಭೈತ್ರ ತಪ್ಪಿಬಂದಡೆ ಮುತ್ತು ಮಾಣಿಕ್ಯ ನವರತ್ನದ ಪೆಟ್ಟಿಗೆಗಳು ಸಾರಿದವು. ಸಾರಿದಡೆ ಆ ವಾನರಂಗಳು ಬಲ್ಲವೆ ಮುತ್ತಿನ ರಕ್ಷೆಯ ? ನವರತ್ನದ ಪೆಟ್ಟಿಗೆಯ ತೆರದು ನೋಡಿ, ಕೆಯ್ಕೊಂಡು, ವಾನರಂಗಳು ಮೆದ್ದು ನೋಡಿ, ಹಣ್ಣಲ್ಲವೆಂದು ಬಿಟ್ಟು ಕಳದವು. ಲೋಕದೊಳಗೆ ಶರಣ ಸುಳಿದಡೆ, ಆ ಶರಣನ ನಡೆ ನುಡಿ ಚಾರಿತ್ರವ ಕರ್ಮಿಗಳೆತ್ತ ಬಲ್ಲರು ? ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ಶರಣರ ಇರವನು ನಿಮ್ಮ ಶರಣರು ಬಲ್ಲರಲ್ಲದೆ ಆ ವಾನರನಂತಹ ಮನುಜರೆತ್ತ ಬಲ್ಲರು.

ವಾನರಂಗಳಿಗೆ ಭೈತ್ರ ತಪ್ಪಿಬಂದಡೆ Read More »

ವೃಷಭನ ಹಿಂದೆ ಪಶುವಾನು ಬಂದೆನು ;

ವೃಷಭನ ಹಿಂದೆ ಪಶುವಾನು ಬಂದೆನು ; ನಂಬಿ ನಚ್ಚಿ ಪಶುವಾನುಬಂದೆನು. ಸಾಕಿ ಸಲಹಿಹನೆಂದು ಸಲೆ ನಚ್ಚಿ ಬಂದೆನು. ಒಲಿದಹ ಒಲಿದಹನೆಂದು ಬಳಿಯಲ್ಲಿ ಬಂದೆನು. ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ನಂಬಿ ಬಂದ ಹೆಂಗೂಸ ಹಿಂದೊಬ್ಬರೆಳದೊಯ್ದರೆ ಎಂತು ಸೈರಿಸಿದೆ ಹೇಳಾ, ಎನ್ನ ದೇವರದೇವಾ ?

ವೃಷಭನ ಹಿಂದೆ ಪಶುವಾನು ಬಂದೆನು ; Read More »

ಮುತ್ತು ನೀರಲಾಯಿತ್ತು, ವಾರಿಕಲ್ಲು ನೀರಲಾಯಿತ್ತು,

ಮುತ್ತು ನೀರಲಾಯಿತ್ತು, ವಾರಿಕಲ್ಲು ನೀರಲಾಯಿತ್ತು, ಉಪ್ಪು ನೀರಲಾಯಿತ್ತು. ಉಪ್ಪು ಕರಗಿತ್ತು, ವಾರಿಕಲ್ಲು ಕರಗಿತ್ತು, ಮುತ್ತು ಕರಗಿದುದನಾರೂ ಕಂಡವರಿಲ್ಲ. ಈ ಸಂಸಾರಿಮಾನವರು ಲಿಂಗವಮುಟ್ಟಿ ಭವಭಾರಿಗಳಾದರು. ನಾ ನಿಮ್ಮ ಮುಟ್ಟಿ ಕರಿಗೊಂಡೆನಯ್ಯಾ ಚೆನ್ನಮಲ್ಲಿಕಾರ್ಜುನಯ್ಯಾ.

ಮುತ್ತು ನೀರಲಾಯಿತ್ತು, ವಾರಿಕಲ್ಲು ನೀರಲಾಯಿತ್ತು, Read More »

ಮುತ್ತು ಒಡೆದಡೆ ಬೆಸೆಯಬಹುದೆ ?

ಮುತ್ತು ಒಡೆದಡೆ ಬೆಸೆಯಬಹುದೆ ? ಮನ ಮುರಿದಡೆ ಸಂತಕ್ಕೆ ತರಬಹುದೆ ? ಅಪ್ಪುಗೆ ಸಡಲಿದ ಸುಖವ ಮರಳಿ ಅರಸಿದರುಂಟೆ ? ಸಾಧಕನೊಯಿದ ನಿಧಾನದ ಕುಳಿಯಂತೆ ಅಲ್ಲಿ ಏನುಂಟು ? ಮಚ್ಚು ಪಲ್ಲಟವಾಗಿ, ನೋಟದ ಸುಖವ ಹಿಂಗಿದರೊಳವೆ ? ನೋಡದಿರು, ಕಾಡದಿರು, ಮನಬಳಸದಿರು. ಭಾಷೆಗೆ ತಪ್ಪಿದರೆ ಮುಳ್ಳುಮೊನೆಯ ಕಿಚ್ಚಿನಂತೆ. ಲೇಸು ಬೀಸರವೋಗದ ಮುನ್ನ ಚೆನ್ನಮಲ್ಲಿಕಾರ್ಜುನನ ಕೂಡಿ ಧಾತುಗೆಟ್ಟ ಬಳಿಕ ಒಳವೆ ?

ಮುತ್ತು ಒಡೆದಡೆ ಬೆಸೆಯಬಹುದೆ ? Read More »

ಮುಡಿಬಿಟ್ಟು ತೊಂಗವಾರಿದವು ಕೇಳು ತಂದೆ.

ಮುಡಿಬಿಟ್ಟು ತೊಂಗವಾರಿದವು ಕೇಳು ತಂದೆ. ಉಡಿ ಜೋಲಿ ಅಡಿಗಿಕ್ಕಿ ಹೋಯಿತ್ತು ಶಿವಶಿವಾ. ನಡೆಗೆಟ್ಟು ನಿಧಿ ನಿಂದಿತ್ತು ಕೇಳಾ ಎನ್ನ ತಂದೆ. ಪ್ರಾಣದೊಡೆಯಾ, ಕರುಣದಿಂದೊಪ್ಪುಗೊಳ್ಳಾ ಚೆನ್ನಮಲ್ಲಿಕಾರ್ಜುನಾ.

ಮುಡಿಬಿಟ್ಟು ತೊಂಗವಾರಿದವು ಕೇಳು ತಂದೆ. Read More »

ಮುಂಗೈಯಲ್ಲಿ ವೀರಗಂಕಣವಿಕ್ಕಿ,

ಮುಂಗೈಯಲ್ಲಿ ವೀರಗಂಕಣವಿಕ್ಕಿ, ಮುಂಗಾಲಲ್ಲಿ ತೊಡರುಬಾವುಲಿಯ ಕಟ್ಟಿದೆ. ಗಂಡುಡಿಗೆಯನುಟ್ಟೆನೆಂಬ ಮಾತಿನ ಬಿರಿದ ನುಂಗಿದೆನು. ಚೆನ್ನಮಲ್ಲಿಕಾರ್ಜುನಾ, ನಿಮ್ಮಾಣೆಗೆ ಊಣೆಯವ ತಂದೆನಾದಡೆ, ನಿಮ್ಮ ತೊತ್ತಿನ ಮಗಳಲ್ಲಯ್ಯಾ.

ಮುಂಗೈಯಲ್ಲಿ ವೀರಗಂಕಣವಿಕ್ಕಿ, Read More »

ಮನೆಯೆನ್ನದು, ತನುವೆನ್ನದು, ಧನವೆನ್ನದೆನ್ನೆನಯ್ಯಾ.

ಮನೆಯೆನ್ನದು, ತನುವೆನ್ನದು, ಧನವೆನ್ನದೆನ್ನೆನಯ್ಯಾ. ಮನ ನಿಮ್ಮದು, ತನು ನಿಮ್ಮದು, ಧನ ನಿಮ್ಮದು ಎಂದಿಪ್ಪೆನಯ್ಯಾ. ಸತಿಯಾನು, ಪತಿಯುಂಟು, ಸುಖ ಉಂಟೆಂಬುದ ಮನ, ಭಾವದಲ್ಲಿ ಅರಿದೆನಾದಡೆ, ನಿಮ್ಮಾಣೆಯಯ್ಯಾ. ನೀನಿರಿಸಿದ ಗೃಹದಲ್ಲಿ ನಿನ್ನಿಚ್ಫೆಯವಳಾಗಿಪ್ಪೆನಲ್ಲದೆ ಅನ್ಯವನರಿಯೆ ಕಾಣಾ ಚೆನ್ನಮಲ್ಲಿಕಾರ್ಜುನಾ.

ಮನೆಯೆನ್ನದು, ತನುವೆನ್ನದು, ಧನವೆನ್ನದೆನ್ನೆನಯ್ಯಾ. Read More »

ಮನೆ ಮನೆದಪ್ಪದೆ ಕೈಯೊಡ್ಡಿ ಬೇಡುವಂತೆ ಮಾಡಯ್ಯ ?

ಮನೆ ಮನೆದಪ್ಪದೆ ಕೈಯೊಡ್ಡಿ ಬೇಡುವಂತೆ ಮಾಡಯ್ಯ ? ಬೇಡಿದಡೆ ಇಕ್ಕದಂತೆ ಮಾಡಯ್ಯ ? ಇಕ್ಕಿದಡೆ ನೆಲಕ್ಕೆ ಬೀಳುವಂತೆ ಮಾಡಯ್ಯ ? ನೆಲಕ್ಕೆ ಬಿದ್ದಡೆ ನಾನೆತ್ತಿಕೊಂಬುದಕ್ಕೆ ಮುನ್ನವೆ ಸುನಿಯೆತ್ತಿಕೊಂಬಂತೆ ಮಾಡಾ ಚೆನ್ನಮಲ್ಲಿಕಾರ್ಜುನಯ್ಯ || 327 ||

ಮನೆ ಮನೆದಪ್ಪದೆ ಕೈಯೊಡ್ಡಿ ಬೇಡುವಂತೆ ಮಾಡಯ್ಯ ? Read More »

ಮನವೆಲ್ಲಾ ಕಲ್ಪತರು, ಗಿಡವೆಲ್ಲಾ ಮರುಜವಣಿ,

ಮನವೆಲ್ಲಾ ಕಲ್ಪತರು, ಗಿಡವೆಲ್ಲಾ ಮರುಜವಣಿ, ಶಿಲೆಗಳೆಲ್ಲಾ ಪರುಷ, ನೆಲವೆಲ್ಲಾ ಅವಿಮುಕ್ತಿಕ್ಷೇತ್ರ. ಜಲವೆಲ್ಲಾ ನಿರ್ಜರಾಮೃತ, ಮೃಗವೆಲ್ಲಾ ಪುರುಷಾಮೃಗ, ಎಡಹುವ ಹರಳೆಲ್ಲಾ ಚಿಂತಾಮಣಿ. ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ, ನೋಡುತ್ತ ಬಂದು ಕದಳಿಯ ಬನವ ಕಂಡೆ ನಾನು.

ಮನವೆಲ್ಲಾ ಕಲ್ಪತರು, ಗಿಡವೆಲ್ಲಾ ಮರುಜವಣಿ, Read More »

ಮನ ಬೀಸರವಾದಡೆ ಪ್ರಾಣ ಪಲ್ಲಟವಹುದವ್ವಾ.

ಮನ ಬೀಸರವಾದಡೆ ಪ್ರಾಣ ಪಲ್ಲಟವಹುದವ್ವಾ. ತನು ಕರಣಂಗಳು ಮೀಸಲಾಗಿ ಮನ ಸಮರಸವಾಯಿತ್ತು ನೋಡಾ ಅನ್ಯವನರಿಯೆ ಭಿನ್ನವನರಿಯೆ. ಎನ್ನ ದೇವ ಚೆನ್ನಮಲ್ಲಿಕಾರ್ಜುನಯ್ಯನ ಬಳಿಯವಳಾನು ಕೇಳಾ ತಾಯೆ ?

ಮನ ಬೀಸರವಾದಡೆ ಪ್ರಾಣ ಪಲ್ಲಟವಹುದವ್ವಾ. Read More »

ಮಧ್ಯಾಹ್ನದಿಂದ ಮೇಲೆ ಹಿರಿಯರಿಲ್ಲ.

ಮಧ್ಯಾಹ್ನದಿಂದ ಮೇಲೆ ಹಿರಿಯರಿಲ್ಲ. ಅಸ್ತಮಾನದಿಂದ ಮೇಲೆ ಜಿತೇಂದ್ರಿಯರಿಲ್ಲ. ವಿಧಿಯ ಮೀರುವ ಅಮರರಿಲ್ಲ. ಕ್ಷುಧೆ ವಿಧಿ ವ್ಯಸನಕ್ಕಂಜಿ, ನಾ ನಿಮ್ಮ ಮರೆಹೊಕ್ಕು ಬದುಕಿದೆನು ಚೆನ್ನಮಲ್ಲಿಕಾರ್ಜುನಾ.

ಮಧ್ಯಾಹ್ನದಿಂದ ಮೇಲೆ ಹಿರಿಯರಿಲ್ಲ. Read More »

ಮತ್ರ್ಯಲೋಕದ ಭಕ್ತರ ಮನವ

ಮತ್ರ್ಯಲೋಕದ ಭಕ್ತರ ಮನವ ಬೆಳಗಲೆಂದು ಇಳಿತಂದನಯ್ಯಾ ಶಿವನು ಕತ್ತಲೆಯ ಪಾಳೆಯವ ರವಿ ಹೊಕ್ಕಂತಾಯಿತ್ತಯ್ಯಾ. ಚಿತ್ತದ ಪ್ರಕೃತಿಯ ಹಿಂಗಿಸಿ, ಮುಕ್ತಿಪ ಥವ ತೋರಿದನೆಲ್ಲ ಅಸಂಖ್ಯಾತ ಗಣಂಗಳಿಗೆ. ತನುವೆಲ್ಲ ಸ್ವಯಲಿಂಗ, ಮನವೆಲ್ಲ ಚರಲಿಂಗ. ಭಾವವೆಲ್ಲ ಮಹಾಘನದ ಬೆಳಗು. ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ಶರಣ ಸಮ್ಯಕ್e್ಞನಿ ಚೆನ್ನಬಸವಣ್ಣನ ಶ್ರೀ ಪಾದಕ್ಕೆ ಶರಣೆಂದು ಎನ್ನ ಭವಂ ನಾಸ್ತಿಯಾಯಿತ್ತಯ್ಯಾ ಪ್ರಭುವೆ.

ಮತ್ರ್ಯಲೋಕದ ಭಕ್ತರ ಮನವ Read More »

ಮಡಿವಾಳಯ್ಯನ ಪ್ರಸಾದವ ಕೊಂಡು

ಮಡಿವಾಳಯ್ಯನ ಪ್ರಸಾದವ ಕೊಂಡು ಎನ್ನ ಸರ್ವಾಂಗ ಶುದ್ಧವಾಯಿತ್ತಯ್ಯಾ. ಸಿದ್ಧರಾಮಯ್ಯನ ಪ್ರಸಾದವ ಕೊಂಡು ಎನ್ನ ಕರಣಂಗಳು ಶುದ್ಧವಾಯಿತ್ತಯ್ಯಾ. ಬಸವಣ್ಣನ ಪ್ರಸಾದವ ಕೊಂಡು ಭಕ್ತಿಸಂಪನ್ನನಾದೆನಯ್ಯಾ. ಚೆನ್ನಬಸವಣ್ಣನ ಪ್ರಸಾದವ ಕೊಂಡು e್ಞನಸಂಪನ್ನನಾದೆನಯ್ಯಾ. ನಿಜಗುಣನ ಪ್ರಸಾದವ ಕೊಂಡು ನಿಶ್ಚಿಂತನಾದೆನಯ್ಯಾ. ಅಜಗಣ್ಣನ ಪ್ರಸಾದವ ಕೊಂಡು ಆರೂಢನಾದೆನಯ್ಯಾ. ಘಟ್ಟಿವಾಳಯ್ಯನ ಪ್ರಸಾದವ ಕೊಂಡು ನಿರಾಕಾರ ಪರಬ್ರಹ್ಮ ಸ್ವರೂಪನಾದೆನಯ್ಯಾ. ಪ್ರಭುದೇವರ ಪ್ರಸಾದವ ಕೊಂಡು ಚೆನ್ನಮಲ್ಲಿಕಾರ್ಜುನಯ್ಯನ ಕೂಡಿ ಸುಖಿಯಾದೆನು.

ಮಡಿವಾಳಯ್ಯನ ಪ್ರಸಾದವ ಕೊಂಡು Read More »

ಮರೆದೊರಗಿ, ಕನಸ ಕಂಡು ಹೇಳುವಲ್ಲಿ

ಮರೆದೊರಗಿ, ಕನಸ ಕಂಡು ಹೇಳುವಲ್ಲಿ ಸತ್ತ ಹೆಣ ಎದ್ದಿತ್ತು. ತನ್ನ ಋಣ ನಿಧಾನ ಎದ್ದು ಕರೆಯಿತ್ತು. ಹೆಪ್ಪಿಟ್ಟ ಹಾಲು ಗಟ್ಟಿತುಪ್ಪಾಗಿ ಸಿಹಿಯಾಯಿತ್ತು. ಇದಕ್ಕೆ ತಪ್ಪ ಸಾಧಿಸಲೇಕೆ ಚೆನ್ನಮಲ್ಲಿಕಾರ್ಜುನದೇವರ ದೇವನಣ್ಣಗಳಿರಾ ?

ಮರೆದೊರಗಿ, ಕನಸ ಕಂಡು ಹೇಳುವಲ್ಲಿ Read More »

ಮರಹು ಬಂದಿಹುದೆಂದು ಗುರು ಕುರುಹನೆ ಕೊಟ್ಟ ;

ಮರಹು ಬಂದಿಹುದೆಂದು ಗುರು ಕುರುಹನೆ ಕೊಟ್ಟ ; ಅರಿವಿಂಗೆ ಪ್ರಾಣಲಿಂಗ ಬೇರೆ ಕಾಣಿರಣ್ಣಾ. ನಿರ್ಣಯವಿಲ್ಲದ ಭಕ್ತಿಗೆ ಬರಿದೆ ಬಳಲಲದೇತಕೆ ? ಚೆನ್ನಮಲ್ಲಿಕಾರ್ಜುನಯ್ಯನನರಿದು ಪೂಜಿಸಿದಡೆ ಮರಳಿ ಭವಕ್ಕೆ ಬಹನೆ ?

ಮರಹು ಬಂದಿಹುದೆಂದು ಗುರು ಕುರುಹನೆ ಕೊಟ್ಟ ; Read More »

ಮರವಿದ್ದು ಫಲವೇನು ನೆಳಲಿಲ್ಲದನ್ನಕ್ಕ ?

ಮರವಿದ್ದು ಫಲವೇನು ನೆಳಲಿಲ್ಲದನ್ನಕ್ಕ ? ಧನವಿದ್ದು ಫಲವೇನು ದಯವಿಲ್ಲದನ್ನಕ್ಕ ? ಹಸುವಿದ್ದು ಫಲವೇನು ಹಯನಿಲ್ಲದನ್ನಕ್ಕ ? ರೂಪಿದ್ದು ಫಲವೇನು ಗುಣವಿಲ್ಲದನ್ನಕ್ಕ ? ಅಗಲಿದ್ದು ಫಲವೇನು ಬಾನವಿಲ್ಲದನ್ನಕ್ಕ ? ನಾನಿದ್ದು ಫಲವೇನು ನಿಮ್ಮ e್ಞನವಿಲ್ಲದನ್ನಕ್ಕ ಚೆನ್ನಮಲ್ಲಿಕಾರ್ಜುನಾ ?

ಮರವಿದ್ದು ಫಲವೇನು ನೆಳಲಿಲ್ಲದನ್ನಕ್ಕ ? Read More »

ಮರಮರ ಮಥನಿಸಿ ಕಿಚ್ಚು ಹುಟ್ಟಿ

ಮರಮರ ಮಥನಿಸಿ ಕಿಚ್ಚು ಹುಟ್ಟಿ ಸುತ್ತಣ ತರುಮರಾದಿಗಳ ಸುಡಲಾಯಿತ್ತು. ಆತ್ಮ ಆತ್ಮ ಮಥನಿಸಿ ಅನುಭಾವ ಹುಟ್ಟಿ ಹೊದ್ದಿರ್ದ ತನುಗುಣಾದಿಗಳ ಸುಡಲಾಯಿತ್ತು. ಇಂತಪ್ಪ ಅನುಭಾವರ ಅನುಭಾವವ ತೋರಿ ಎನ್ನ ಒಡಲನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನಾ.

ಮರಮರ ಮಥನಿಸಿ ಕಿಚ್ಚು ಹುಟ್ಟಿ Read More »

ಮಚ್ಚು ಅಚ್ಚುಗವಾಗಿ ಒಪ್ಪಿದ ಪರಿಯ ನೋಡಾ.

ಮಚ್ಚು ಅಚ್ಚುಗವಾಗಿ ಒಪ್ಪಿದ ಪರಿಯ ನೋಡಾ. ಎಚ್ಚಡೆ ಗರಿದೋರದಂತಿರಬೇಕು. ಅಪ್ಪಿದಡೆ ಅಸ್ಥಿಗಳು ನಗ್ಗುನುಸಿಯಾಗಬೇಕು. ಬೆಚ್ಚಡೆ ಬೆಸುಗೆಯರಿಯದಂತಿರಬೇಕು. ಮಚ್ಚು ಒಪ್ಪಿತ್ತು, ಚೆನ್ನಮಲ್ಲಿಕಾರ್ಜುನನ ಸ್ನೇಹ ತಾಯೆ.

ಮಚ್ಚು ಅಚ್ಚುಗವಾಗಿ ಒಪ್ಪಿದ ಪರಿಯ ನೋಡಾ. Read More »