ಆವಗತಿ ಎನಗೆ ವೈಕುಂಠಪತಿಯೆ

ಆವಗತಿ ಎನಗೆ ವೈಕುಂಠಪತಿಯೆ | ಕಾವ ಕರುಣಿಯೆ ಸರ್ವದೇವರ ದೇವ ಉದಯದಲಿ ಎದ್ದು ನಿನ್ನ ನಾಮವೆನ್ನದೆ | ಉದರಕಿನ್ನೇನು ಮಾಡಲಿ ಎನ್ನುತಾ | ಕÀದಗಳಾ ಸರಸುತ್ತ ಕಂಡಲ್ಲಿ ತಿರುಗಿದೆ | ಮದ ಗರ್ವದಲಿ ಬಾಳ್ವ ಮನುಜ ಶಿರೋಮಣಿಗೆ ||1|| ಧನವ ಘಳಿಸವ ವಾತ್ಸಲ್ಯವಲ್ಲದೆ ಸಾ | ಧನಕೆ ಒಮ್ಮೆ ಮನಸ್ಸು ಎರಗಲಿಲ್ಲಾ | ಮನುಜರೊಳಗೆ ಖ್ಯಾತಿಯಾಗುವೆನೆಂಬೊ | ವೇ | ದನೆ ಮಿಗಿಲಲ್ಲದೆ ಭಕುತಿ ಮತ್ತಿಲ್ಲ ||2|| ಒಬ್ಬರಕಿಂತಲಧಿಕನಾಗುವೆನೆಂದು | ಉಬ್ಬಿ ಪರರಾ ಸೇವೆಯನು ಮಾಡುವೆ | […]

ಆವಗತಿ ಎನಗೆ ವೈಕುಂಠಪತಿಯೆ Read More »

ಆವ ಬಗೆಯಿಂದ ಸಲಿಗೆಯನಿತ್ತಿಯೊ

ಆವ ಬಗೆಯಿಂದ ಸಲಿಗೆಯನಿತ್ತಿಯೊ ಮಾವಮರ್ದನ ರಂಗ ನಿನ್ನ ದಯಾ ತಿಳಿಯದು ಅಂದರೆ ಆನಂದ ಅನಂದದೇ ಅನಾನಂದ ನಿಂದದೆ ಗೋಕುಲ ನಿಲದದೆ ವ್ಯಾಕುಲ ಬಂದದೆ ಪುರುಷಾರ್ಥ ಬಾರದಿದ್ದರೆ ವ್ಯರ್ಥ ಮಂಧರಧರ ನಿನ್ನ ಮನಸು ಬಂದದ್ದೆ ಸರಿ ||1|| ಕೊಟ್ಟದ್ದೆ ಪುರುಷಾರ್ಥ ಕೊಡದಿಪ್ಪದೆ ಅನರ್ಥ ಅಟ್ಟಿ ಬರುವ ಪಾಪ ಸುಟ್ಟು ಬಿಡು ನಿರ್ಲೇಪ ತಟ್ಟಿದುದೆ ವೇದಾರ್ಥ (ತಟ್ಟದದೆ) ಮಿಥ್ಯ ವಿಠ್ಠಲ ನಿನ್ನ ಭಕ್ತರಿಗೆ ನೀ ಬಲು ಸುಲಭಾ ||2|| ಹರಿ ನಿನ್ನ ಶರಣರ ಮನಸ್ಸು ಆವರಕಾದ ದೆರಗಲು ಆಕ್ಷಣವೆ ಸಿದ್ಧ

ಆವ ಬಗೆಯಿಂದ ಸಲಿಗೆಯನಿತ್ತಿಯೊ Read More »

ಆವ ಪರಿಯಲಿ ಹರಿಯ ವೊಲಿಸು

ಆವ ಪರಿಯಲಿ ಹರಿಯ ವೊಲಿಸು ಈ ಉಪಾಯವು ತೋರಿ ಕೊಡುವೆನು ಉದಯದಲಿ ಎದ್ದೀಗ ಊರ ವಾರ್ತಿಯ ಬಿಟ್ಟು ಮುದದಿಂದ ವೃಂದಾವನ ಸೇವಿಸಿ ವದನದಲಿ ಶ್ರೀ ಹರಿಯನಾಮ ಗುಣಕಥೆಗಳನು ಪದೋಪದಿಗೆ ಪಾಡಿ ಕೊಂಡಾಡು ನಲಿದಾಡು ||1|| ಆಮೇಲೆ ದೇವರೆಡೆ ರಂಗವಾಲಿಯನಿಕ್ಕಿ ಕಾಮುಕನಾಗದಲೆ ಸ್ನಾನ ಸಂಧ್ಯಾ ನೇಮ ನಿತ್ಯವ ಮುಗಿಸಿ ದೇವತಾ ಪೂಜೆಗೈದು ಪ್ರೇಮದಿಂದಲಿ ದಾನ ಕರದಲ್ಲಿ ಮಾಡೊ ||2|| ಮಂಗಳ ಮೂರುತಿಯ ಅಂತರಂಗದಿ ನಿಲಿಸಿ ಶೃಂಗಾರದುಡಿಗೆ ಇಡಿಗಿಯನು ತೊಡಿಸಿ ಮಂಗಳಾರುತಿ ಬೆಳಗಿ ಮನದಲ್ಲಿ ನಲಿನಲಿದು ಕಂಗಳಿಂದಲಿ ನೋಡು ಹರಿಯ

ಆವ ಪರಿಯಲಿ ಹರಿಯ ವೊಲಿಸು Read More »

ಆವ ತಾ ಸುಖವೊ ಮತ್ತಾವನಂದವೊ

ಆವ ತಾ ಸುಖವೊ ಮತ್ತಾವನಂದವೊ | ಈ ಉಡುಪಿ ಯಾತ್ರಿ ಮಾಡಿದ ಮನುಜಗೆ ಮನದೊಳಪೇಕ್ಷಿಸೆ ಅವನೀಗ ಹದಿನಾಲ್ಕು | ಮನುಗಳು ಭೂಮಿ ಆಳುವ ತನಕಾ | ಕನಕ ರಜತಪೀಠ ಗೋಕುಲದಿಂದ | ಸ | ಜ್ಬನ ಮಾರ್ಗದಲ್ಲಿ ಗುಣವಂತ ನೆನೆಸುವ ||1|| ಒಂದು ಹೆಜ್ಜೆಯನಿಟ್ಟು ಸಾಗಿ ಬರುತಲಿರೆ | ಅಂದೆ ಸುರರೊಳು ಗಣನೆ ಎನ್ನಿ | ಒಂದಕ್ಕೆ ನೂರಾರು ಯಾಗ ಮಾಡಿದ ಫಲ | ತಂದು ಕೊಡುವ ಅಜನಾದಿ ಕಲ್ಪ ಪರಿಯಂತ||2|| ಅರ್ಧ ಮಾರ್ಗವು ಬರಲು ಬಂದೆ

ಆವ ತಾ ಸುಖವೊ ಮತ್ತಾವನಂದವೊ Read More »

ಆವ ಜನ್ಮದ ಪುಣ್ಯ ಫಲಿಸಿತೆನಗೆ

ಆವ ಜನ್ಮದ ಪುಣ್ಯ ಫಲಿಸಿತೆನಗೆ | ಈ ಉಡುಪಿ ಕೃಷ್ಣನ ಪ್ರಸಾದ ಭುಂಜಿಸಿದೆ ಲವಣವನು ಸವಿದುಣಲು | ಬಲುಜನ್ಮದಲಿ ಯಿದ್ದ ಭವರಾಸಿಗಳು ಹಾರಿ ಬಯಲಾದವು| ನವವಿಧ ಭಕುತಿಯಾ ಮಾರ್ಗವನೆ ತಿಳಿದು ಮಾ | ನವರೊಳಗೆ ಪರಿ ಶುದ್ಧನಾದೆ ಗುರು ಕರುಣದಲೀ||1|| ಶಾಖಫಲ ಕೈಕೊಳಲು ಅರಿಷಡ್ವರ್ಗಗಳಿಂದ | ಶೋಕವನೆ ಬಂದಿರಲು ಬೆನ್ನು ಬಟ್ಟು | ಕಾಕೆಟ್ಟು ಪೋಗುವವು ಏನೆಂಬೆ ಸೋಜಿಗವು | ಲೋಕದೊಳಗೆ ನಮ್ಮ ಕುಲಗೋತ್ರಜರೆ ಧನ್ಯ ||2|| ಸೂಪವನು ಉಂಡರೆ ಮುಂದಟ್ಟಿ ಬರುತ್ತಿಪ್ಪ | ಆಪತ್ತು ಕಳವಳಿಸಿ

ಆವ ಜನ್ಮದ ಪುಣ್ಯ ಫಲಿಸಿತೆನಗೆ Read More »

ಆವ ಜನುಮದ ಪಾಪ ವೊದಗಿತೋ

ಆವ ಜನುಮದ ಪಾಪ ವೊದಗಿತೋ ಎನಗಿಂದು | ದೇವ ಗಂಗೆಯ ನೋಡಿದೆ ದೇವಕೀಸುತ ಒಲಿದು ಕರೆತಂದು ಎನ್ನನು | ಪಾವನ್ನ ಮಾಡಿದನು ಇನ್ನೂ-ಮುನ್ನೂ ಅ.ಪ ಗುರುಗಳನು ವಹಿಸಿ ಭೂಸುರರಿಗೆ ಕಠಿಣ | ಉ- ತ್ತರ ಪೇಳಿಸಾಗಿದ್ದನೊ | ವರ ಬ್ರಾಹ್ಮಣರ ತಪ್ಪು ಬಲು ಇರಲು ಇಲ್ಲದೇ | ಸರಿಯೆಂದು ಸ್ಥಾಪಿಸಿದೆನೊ | ಮುರಿವ ಲಗ್ನಕೆ ಪೋಗಿ ಪುಸಿ ದ್ರವ್ಯವನೆ ಪೇಳಿ | ಮರಳಿ ಪೂರ್ತಿಸಿ ಇದ್ದೆನೊ | ವರ ವಿಪ್ರರಿಗೆ ವಧೆಯು ಬರಲು ಸಾಕ್ಷಿಯಾಗಿ | ಪರಿಹರಿಸಿ

ಆವ ಜನುಮದ ಪಾಪ ವೊದಗಿತೋ Read More »

ಆರೇನು ಮಾಡುವರು ಅವನಿಯೊಳಗೆ

ಆರೇನು ಮಾಡುವರು ಅವನಿಯೊಳಗೆ | ಪೂರ್ವಜನ್ಮದ ಕರ್ಮ ಫಣಿಯಲ್ಲಿ ಬರೆದುದಕೆ ಮಾಡಿದಡಿಗಿಯು ಕೆಡಲು ಮನಿಯ ಗಂಡನು ಬಿಡಲು | ಕೂಡಿದ ಸತಿ ತನ್ನ ಕುಣಿಸ್ಯಾಡಲು ನಿಜದಿ || ಗೋಡೆಗೆ ಬರೆದ ಹುಲಿ ಘಡಘಡನೆ ತಿನಬರಲು | ಆಡಿದ ಮತುಗಳು ಅಖಿಳಿರು ನಿಜವೆನಲು ||1|| ಹೊಲ ಬೇಲಿ ಮೆಯ್ದರೆ ಮೊಲ ಇರಿಯ ಬಂದರೆ | ತಲೆಗೆ ತನ್ನ ಕೈ ಪೆಟ್ಟು ತಾಕಿದರೆ || ಹೆರಳು ಹಾವಾದರೆ ಗೆಳೆಯ ರಿಪುವಾದರೆ | ಕಲಿಸಿದ ಅವಲಕ್ಕಿ ಕಲಪರಟಿ ನುಂಗಿದರೆ ||2|| ಹೆತ್ತ

ಆರೇನು ಮಾಡುವರು ಅವನಿಯೊಳಗೆ Read More »

ಆರೀಗ ನೀ ಎನ್ನ ಕಣ್ಣು ಮುಚ್ಚಿದೆಯೊ

ಆರೀಗ ನೀ ಎನ್ನ ಕಣ್ಣು ಮುಚ್ಚಿದೆಯೊ ಕು- | ಮಾರ ಮೌನದಲಿದ್ದಿ ಮಾತನಾಡಯ್ಯಾ ಇಂದಿರಾ ಭೂದೇವಿ ಆಳಿದವನೊ | ನಂದ ಗೋಕುಲದಲ್ಲಿ ಪುಟ್ಟಿದವನೊ || ಮಂದಿರ ವೈಕುಂಠ ಶ್ರೀನಿವಾಸನೊ | ಕರಿ – | ಬಂಧನ ವಿನಾಶದ ವಿಠ್ಠಲನೊ ||1|| ಅಂಬರೀಷನ ಶಾಪ ಪರಿಹರನೊ | ಶಂಭು ಮೊರೆಯಿಡಲು ಕಾಯಿದವನೊ || ಕಂಭದಿಂದೊಡೆದು ಬಂದವನೊ | ತ್ರಿ – ಯಂಬಕನ ಭಕ್ತನ ಸಂಹರನೊ ||2|| ಬೆರಳಲ್ಲಿ ಬೆಟ್ಟವನೆತ್ತಿದವನೊ | ದುರುಳ ಕಾಳಿಂಗನ ತುಳಿದವನೊ || ಒರಳನು ಕಾಲಲ್ಲಿ

ಆರೀಗ ನೀ ಎನ್ನ ಕಣ್ಣು ಮುಚ್ಚಿದೆಯೊ Read More »

ಆರಸಿಕೊಡು ಒಬ್ಬಳ ಅರಸಿಕೊಂಬೆ

ಆರಸಿಕೊಡು ಒಬ್ಬಳ ಅರಸಿಕೊಂಬೆ | ಅರಸಿಕೊಂಬೆ ಮನಸ್ಸಿಗೆ ಬಂದವಳ ಶ್ರೀ ರುಕ್ಮಿಣಿ ಸಂಗಡ ಕೇಳಿಯಲಿ ಶ್ರೀ ರಮಣ ಇರಲು | ನಾರದಮುನಿ ಬಂದು ಕುಳಿತು ಷೋಡಶೋಪಚಾರವ ಕೊಂಡು ಮಾತಾಡಿ ಬೇಡಿದ ||1|| ನಾರಿಯರು ನಿನಗೆ ಉಂಟಾಗ ಈರೈದು ಸಾವಿರ ನೂರಾಎಂಟು ಮಂದಿಯೊಳಗತಿ ಚಲುವಿಯ ಕಾರುಣ್ಯವನು ಮಾಡುಬೇಕು ಪರಾಕು ||2|| ಕೇಳೈ ಮಹ ತಪಸಿಯನ್ನೀಗ ವೇಳ್ಯ ಮೀರಗೊಡದೆ | ಲಾಲಿಸು ಮಾತನು ನಾ ನಿಲ್ಲದೆ | ಸತಿ ಆಲಯಕೆ ವೇಗ ಪೋಗು ನೀ ಸಾಗು ||3|| ನಿಂದಿರದೆ ನಾರದಾ

ಆರಸಿಕೊಡು ಒಬ್ಬಳ ಅರಸಿಕೊಂಬೆ Read More »

ಆನಂದಾ ಆನಂದಾ ಮತ್ತೆ

ಆನಂದಾ ಆನಂದಾ ಮತ್ತೆ ಪರಮಾನಂದಾ ಆನಂದನನಂದನೊಲಿಯೆ ಏನಂದದ್ದೆ ವೇದ ವೃಂದಾ ‘ಅ’ಮೊದಲು ‘ಕ’್ಷ ಕಾರಾಂತ ಈ ಮಹಾವರ್ಣಗಳೆಲ್ಲ ಸ್ವಾಮಿಯಾದ ವಿಷ್ಣುವಿನ ನಾಮವೆಂದು ತಿಳಿದವರಿಗೆ ||1|| ಪೋಪದು ಬರುತಿಪ್ಪುದು ಕೋಪಶಾಣಿ ಮಾಡುವುದು ರೂಪ ಲಾವಣ್ಯವು ಹರಿವ್ಯಾಪಾರವೆಂದವರಿಗೆ ||2|| ಜಲ ಕಾಷ್ಠ ಶೈಲ ಗಗನ ನೆಲ ಪಾವಕ ವಾಯು ತರು ಫಲಪುಷ್ಪ ಬಳ್ಳಿಲಿ ಹರಿ ಒಳಗೆ ವ್ಯಾಪ್ತನೆಂದವಗೆ ||3|| ತಾರೊ ಬಾರೊ ಬೀರೊ ಸಾರೊ ಮಾರೊ ಕೋರೊ ಹಾರೊ ಹೋರೊ ಸೇರೊ ಕೋರೊದೆಂಬ ದಿಶಾಪ್ರೇರಣೆ ಎಂದವರಿಗೆ ||4|| ಮಧ್ವಶಾಸ್ತ್ರ ಪ್ರವಚನ

ಆನಂದಾ ಆನಂದಾ ಮತ್ತೆ Read More »

ಆವುದೊಳ್ಳೆಯದೊ ನಿನ್ನಂಗ ಚೆಲುವ

ಆವುದೊಳ್ಳೆಯದೊ ನಿನ್ನಂಗ – ಚೆಲುವದೇವ ಬಂಕಾಪುರದ ಲಕುಮಿ ನರಸಿಂಗ ಜಗದೊಳಗೆ ತಾನು ತಂದೆಯ ಮಾತು ಕೇಳದಾಮಗನು ಇಹ ಪರಕೆ ಸಲುವ ಪ್ರಾಜ್ಞನೆ ?ಬಗೆಗೊಳಿಸಿ ಪ್ರಹ್ಲಾದ ಪಿತನೊಡಲ ನಿನ್ನ ಕೂ-ರುಗುರಿನಿಂ ಬಗೆಸಿದಾತಂಗೆ ಮುಕುತಿಯನೀವೆ ||1|| ಪೊಡವಿಯೊಳು ಅಣ್ಣನಾಜ್ಞೆಯ ಮೀರಿ ನಡೆಯುತಿಹಒಡಹುಟ್ಟಿದವಗೆ ಕೈವಲ್ಯವುಂಟೆ ?ದೃಢದಲಿ ವಿಭೀಷಣಾಗ್ರಜನನ್ನು ಬಾಣದಲಿಕೆಡಹಿಸಿದ ಬಳಿಕವಗೆ ಸ್ಥಿರಪಟ್ಟ ಕಟ್ಟಿದೆ||2|| ರೂಢಿಯಲಿ ಗುರುದ್ರೋಹವನು ಮಾಡಿದವನ ಮೊಗನೋಡಿದಾಗಲೆ ಪ್ರಾಯಶ್ಚಿತ್ತವುಂಟುನೋಡಿದಾಗಲೆ ಬೃಹಸ್ಪತಿಸತಿಗೆ ಅಳುಪಿದನಸೂಡಿದಾತನ ಸ್ನೇಹವನು ಮಾಡಿಕೊಂಡಿರ್ಪೆ ||3|| ದೇಶದೊಳು ವಂಶಕಂಟಕರೆನಿಸಿದವರೊಳಗೆಭಾಷಣವ ಮಾಡಬಪ್ಪುದೆ ಪ್ರಾಜ್ಞರು ?ಬೇಸರಿಸದೆ ಕೌರವರ ಕೊಂದ ಪಾಂಡವರ ಸಂ-ತೋಷದಲಿ ಪಕ್ಷಿಕರ

ಆವುದೊಳ್ಳೆಯದೊ ನಿನ್ನಂಗ ಚೆಲುವ Read More »

ಆವ ಸಿರಿಯಲಿ ನೀನು ಎನ್ನ ಮರೆತೆ

ಆವ ಸಿರಿಯಲಿ ನೀನು ಎನ್ನ ಮರೆತೆದೇವ ಜಾನಕೀರಮಣ ಪೇಳು ರಘುಪತಿಯೆ ಸುರರ ಸೆರೆಯನು ಬಿಡಿಸಿ ಬಂದೆನೆಂಬಾ ಸಿರಿಯೆಕರಿ ಮೊರೆಯ ಲಾಲಿಸಿದೆನೆಂಬ ಸಿರಿಯೆಶರಧಿಗೆ ಸೇತುವೆಗಟ್ಟಿದೆನೆನ್ನುವಾ ಸಿರಿಯೆಸ್ಥಿರವಾಗಿ ಹೇಳೆನಗೆ ಹೇಳು ರಘುಪತಿಯೆ ||1|| ಕಡಲೊಳಗೆ ಮನೆಮಾಡಿ ಮಲಗಿದೆನೆಂಬಾ ಸಿರಿಯೆಮೃಢ ನಿನ್ನ ಸಖನಾದನೆಂಬ ಸಿರಿಯೆಬಿಡದೆ ದ್ರೌಪದಿ ಮಾನ ಕಾಯ್ದೆನೆಂಬಾ ಸಿರಿಯೆದೃಢವಾಗಿ ಹೇಳೆನಗೆ ದೇವಕೀ ಸುತನೆ||2|| ಭೂಮಿಯನು ಮೂರಡಿಯ ಮಾಡಿದೆನೆಂಬ ಸಿರಿಯೆಕಾಮ ನಿನ್ನ ಸುತನಾದನೆಂಬ ಸಿರಿಯೆಆ ಮಹಾಲಕುಮಿ ನಿನ್ನ ಸತಿಯಾದಳೆಂಬ ಸಿರಿಯೆಪ್ರೇಮದಲಿ ಹೇಳೆನಗೆ ಸ್ವಾಮಿ ಅಚ್ಯುತನೆ ||3|| ಮನುಜರೆಲ್ಲರು ನಿನ್ನ ಸ್ತುತಿಸುವರೆಂಬ ಸಿರಿಯೆಹನುಮ

ಆವ ಸಿರಿಯಲಿ ನೀನು ಎನ್ನ ಮರೆತೆ Read More »

ಆವ ಪರಿಯಲಿ ನಿಮ್ಮನೊಲಿಸಿ ಮೆಚ್ಚಿಪ

ಆವ ಪರಿಯಲಿ ನಿಮ್ಮನೊಲಿಸಿ ಮೆಚ್ಚಿಪ ವಿಧವುರವೆಯಷ್ಟು ತೋರದಲ್ಲ ದೇವ ದೇವೇಶ ನೀನೆಂದು ನಂಬಿರಲು ಕೃ-ಪಾವಲೋಕನದಿ ಸಲಹೊ ದೇವ ಫಣಿರಾಜನಾಸನದಿ ಕುಳಿತಿಹಗೆ ಅರಿವೆಯಾಸನವ ನಾನೆಂತ್ಹಾಸಲಿಘನವಾದ ಗಂಗೆಯನು ಪಡೆದವಗೆ ಕಲಶ ನೀರನದೆಂತು ಮೈಗೆರೆಯಲಿತನುವಿನ ಪರಿಮಳವು ಘಮಘಮಿಪನಿಗೆ ಸುಚಂದನವದೆಂತು ನಾ ಪೂಸಲಿಅನವರತ ನಾಭಿಯೊಳು ಶತಪತ್ರವಿಹಗೆ ಮಿಕ್ಕಿನ ಪೂವ ಮುಡಿಸಲೆಂತೈ ದೇವ|| 1|| ಸುರುಚಿರೋಜ್ವಲ ಪೀತವಾಸನಿಗೆ ಉಡುಗೊರೆಯಅರಿವೆಯೇನನು ಪೊದಿಸಲಿವರ ಕೌಸ್ತುಭವು ಕೊರಳೊಳಗೆ ಇಪ್ಪವಗೆ ಆ-ಭರಣವಾವುದ ತೊಡಿಸಲಿತರಣಿ ಶತಕೋಟಿತೇಜನ ಮುಂದೆ ಹ್ಯಾಗೆ ನಾ-ಪೆರತೊಂದು ದೀಪವಿಡಲಿನೆರಹಿದ ಫಣಿಪತಿಯ ಸ್ತೋತ್ರದೂರನ ನಾನುಸ್ಮರಿಪೆನೆಂತಯ್ಯ ದೇವ ದೇವ|| 2|| ವನಜಜಾಂಡ

ಆವ ಪರಿಯಲಿ ನಿಮ್ಮನೊಲಿಸಿ ಮೆಚ್ಚಿಪ Read More »

ಆವ ಕರ್ಮವೊ ಇದು ಆವ ಧರ್ಮವೊ

ಆವ ಕರ್ಮವೊ ಇದು ಆವ ಧರ್ಮವೊಆವ ಕರ್ಮವೆಂದರಿಯೆ, ಹಾರುವರಿವರು ಬಲ್ಲರೆ ಸತ್ತವನು ಎತ್ತ ಪೋದಸತ್ತು ತನ್ನ ಜನ್ಮಕೆ ಪೋದಸತ್ತವನು ಉಣ್ಣುವನೆಂದುನಿತ್ಯ ಪಿಂಡವಿಕ್ಕುತೀರಿ||1|| ಎಳ್ಳು ದರ್ಭೆ ಕೈಲಿ ಪಿಡಿದುಪಿತರ ತೃಪ್ತಿ ಪಡಿಸುತೀರಿಎಳ್ಳು ಮೀನು ನುಂಗಿ ಹೋಯಿತುದರ್ಭೆ ನೀರೊಳು ಹರಿದು ಹೋಯಿತು|| 2|| ಎಡಕೆ ಒಂದು ಬಲಕೆ ಒಂದುಎಡಕೆ ತೋರಿಸಿ ಬಲಕೆ ತೋರಿಸಿಕಡು ಧಾವಂತ ಪಡಿಸಿಕಟಿಯ ಹಸ್ತದೊಳಗೆ ಪಿಡಿಸುತೀರಿ|| 3|| ಮಂತ್ರಾಕ್ಷತೆಯ ಕೈಗೆ ಕೊಟ್ಟುಮೋಕ್ಷವನ್ನು ಹಾರೈಸುವಿರಿಮಂತ್ರವೆಲ್ಲೊ ಅಕ್ಷತೆಯೆಲ್ಲೊಮೋಕ್ಷವೆಲ್ಲೊ ಮತ್ರ್ಯವೆಲ್ಲೊ||4|| ಹೇಳುವವನು ಅವಿವೇಕಿಕೇಳುವವನು ಅಜ್ಞಾನಿಹೇಳುವ  ಕೇಳುವ ಇಬ್ಬರ ಸೊಲ್ಲಆದಿಕೇಶವಮೂರ್ತಿ ಬಲ್ಲ||5||

ಆವ ಕರ್ಮವೊ ಇದು ಆವ ಧರ್ಮವೊ Read More »

ಆರೂ ಸಮಯಕ್ಕೊದಗಲಿಲ್ಲ

ಆರೂ ಸಮಯಕ್ಕೊದಗಲಿಲ್ಲಮೋರೆ ನೋಡುತ ಸುಮ್ಮನಿಹರೆಲ್ಲ ಮಗಳು ಮಹಲಕುಮಿ ಮೊಮ್ಮಗನು ಸರಸಿಜಭವನುಖಗರಾಜವಾಹನನು ತನ್ನಳಿಯನುಅಗಜನಂದು ತನ್ನೊಡಲೊಳಿಂಬಿಟ್ಟು ಮೂ-ರ್ಬೊಗಸೆ ಮಾಡಿದ ಮುನಿಯ ಬಿಡಿಸಲಿಲ್ಲ||1|| ಶ್ರೀದೇವಿ ಭೂದೇವಿ ಮಾತೆಯರು ತಾವಿರಲುಯಾದವರಾಯ ಮೋಹದ ತಂದೆಯುವೇದಮುಖದಣ್ಣನಿರೆ ಉರಿ ನಯನದಿಂದ ಸ್ಮರಬೂದಿಯಾಗುವಾಗ ಬಿಡಿಸಲಿಲ್ಲವೇಕೆ||2|| ಪಿತನು ಸಾಗರನು ಹಿತದಾಕೆ ಶ್ರೀದೇವಿಅತಿ ಬೀಗನಾದವ ನಾರಾಯಣಜತೆ ಅಳಿಯರು ಬೊಮ್ಮಮನ್ಮಥರಿರಲಾಗಿಕ್ಷಿತಿಯೊಳಗೆ ಶಶಿ ಕ್ಷೀಣವಾಗುವ ಸಮಯದಿ ||3|| ತೆತ್ತೀಸ ಕೋಟಿ ದೇವರ್ಕಳು ತಾವಿರಲುಒತ್ತಿನಲಿ ಇಂದ್ರ ಉಪೇಂದ್ರರಿರಲುಮತ್ತೆ ಪಾರ್ವತಿ ಪುತ್ರ ವೀರೇಶ ದಕ್ಷನನೆತ್ತಿ ಹರಿಗಡಿವಾಗ ನೋಡುತಿಹರೆಲ್ಲ|| 4|| ಇಂಥಿಂಥ ದೊಡ್ಡವರು ಈ ಪಾಡು ಪಡಲಾಗಿಭ್ರಾಂತ ಮನುಜರಿಗೆ ಪೇಳಲಿನ್ನೆಷ್ಟುಕಂತುಪಿತ

ಆರೂ ಸಮಯಕ್ಕೊದಗಲಿಲ್ಲ Read More »

ಆರೂ ಸಂಗಡ ಬಾಹೋರಿಲ್ಲ 

ಆರೂ ಸಂಗಡ ಬಾಹೋರಿಲ್ಲ ನಾರಾಯಣ ನಾಮ ನೆರೆ ಬಾಹೋದಲ್ಲದೆ ಹೊತ್ತು ನವಮಾಸ ಪರಿಯಂತ ಗರ್ಭದಲಿಹೆತ್ತು ಅತ್ಯಂತ ನೋವು ಬೇನೆಗಳಿಂದಲಿತುತ್ತು ವಸ್ತ್ರವನಿಕ್ಕಿ ಸಲಹಿದಾ ತಾಯ್ತಂದೆಹೊತ್ತುಗಳೆವರಲ್ಲದೆ ಬೆನ್‍ಹತ್ತಿ ಬಹರೆ ||1|| ಗುರು ಬಂಧು ಬುಧ ಜನರು ನಿಂತಗ್ನಿ ಸಾಕ್ಷ್ಯಾಗಿಕರವಿಡಿದು ಧಾರೆಯನೆರೆಸಿಕೊಂಡತರುಣಿ ಇನಿಯನ ಹರಣ ಹೋಗಲು ತಾ ಕಂಡುಬರುವುದಕಂಜಿ ದಾರು ಗತಿಯೆಂದಳುವಳು||2|| ಮನೆ ಮಕ್ಕಳು ತಮ್ಮ ಧನಕೆ ಬಡಿದಾಡುವರುಧನಕಾಗಿ ನಿನ್ನನೆ ನಂಬಿದವರುಅನುಮಾನವೇಕೆ ಜೀವನು ತೊಲಗಿದಾಕ್ಷಣದಿಇನ್ನೊಂದು ಅರಗಳಿಗೆ ನಿಲ್ಲಗೊಡರು ||3|| ಸುತ್ತಲು ಕುಳ್ಳಿರ್ದ ಮಿತ್ರ ಬಾಂಧವರೆಲ್ಲಹೊತ್ತು ಹೋದೀತು ಹೊರಗೆ ಹಾಕೆನುವರುಹಿತ್ತಲಾ ಕಸಕಿಂತ ಅತ್ತತ್ತ ಈ ದೇಹಹೊತ್ತುಕೊಂಡೊಯ್ದು ಅಗ್ನಿಯಲಿ ಬಿಸುಡುವರು ||4|| ಹರಣ

ಆರೂ ಸಂಗಡ ಬಾಹೋರಿಲ್ಲ  Read More »

ಆರು ಹಿತವರು ಎಂದು ನಂಬಬೇಡ 

ಆರು ಹಿತವರು ಎಂದು ನಂಬಬೇಡ ಆರಿಗಾರಿಲ್ಲ ಆಪತ್ತು ಬಂದೊದಗಿದಡೆ ಜನಕ ಹಿತದವನೆಂದು ನಂಬಬಹುದೇ ಹಿಂದೆತನಯ ಪ್ರಹ್ಲಾದನಿಗೆ ಪಿತ ಮುನಿದನುಜನನಿ ರಕ್ಷಿಪಳೆಂಬೆನೇ ತಿಳಿತಿಳಿದು ಕುಂತಿತನಯ ರಾಧೇಯನಿಗೆ ಎರಡೆಣಿಸಿದ ಮೇಲೆ ||1|| ಮಗನು ತೆತ್ತಿಗನೆನಲೆ ಕಂಸ ತನ್ನಯ ಪಿತನನಿಗಳ ಬಂಧನದಿಂದ ಬಂಧಿಸಿದನುಜಗವರಿಯೆ ಸೋದರನು ಮಮತೆಯುಳ್ಳವನೆನಲೆಹಗೆವೆರಸಿ ವಾಲಿಯನು ಅನುಜ ಕೊಲಿಸಿದ ಮೇಲೆ||2|| ತನಗೆ ದೇಹಾನುಬಂಧಿಗಳೆ ಬಂಧುಗಳೆಂದುಮನದಿ ನಿಚ್ಚಳವಾಗಿ ನಂಬಬೇಡಘನ ಕೃಪಾನಿಧಿ ಕಾಗಿನೆಲೆಯಾದಿಕೇಶವನಅನುದಿನದಿ ನಂಬಿದವಗಿಹಪರದಿ ಸುಖವು|| 3||

ಆರು ಹಿತವರು ಎಂದು ನಂಬಬೇಡ  Read More »

ಆರು ಬಾಳಿದರೇನು ಆರು ಬದುಕಿದರೇನು

ಆರು ಬಾಳಿದರೇನು ಆರು ಬದುಕಿದರೇನುನಾರಾಯಣನ ಸ್ಮರಣೆ ನಮಗಿಲ್ಲದನಕ ಉಣ್ಣ ಬರದವರಲ್ಲಿ ಊರೂಟವಾದರೇನುಹಣ್ಣುಬಿಡದ ಮರಗಳು ಹಾಳಾದರೇನುಕಣ್ಣಿಲ್ಲದವಗಿನ್ನು ಕನ್ನಡಿಯಿದ್ದು ಫಲವೇನುಪುಣ್ಯವಿಲ್ಲದವನ ಪ್ರೌಢಿಮೆ ಮೆರೆದರೇನು ||1|| ಅಕ್ಕರಿಲ್ಲದವಗೆ ಮಕ್ಕಳಿದ್ದು ಫಲವೇನುಹೊಕ್ಕು ನಡೆಯದ ನಂಟತನದೊಳೇನುರೊಕ್ಕವಿಲ್ಲದವಗೆ ಬಂಧುಗಳು ಇದ್ದರೇನುಮರ್ಕಟನ ಕೈಯೊಳಗೆ ಮಾಣಿಕ್ಯವಿದ್ದರೇನು ||2|| ಅಲ್ಪ ದೊರೆಗಳ ಜೀತ ಎಷ್ಟು ಮಾಡಿದರೇನುಬಲ್ಪಂಥವಿಲ್ಲದವನ ಬಾಳ್ವೆಯೇನುಕಲ್ಪಕಲ್ಪಿತ ಕಾಗಿನೆಲೆಯಾದಿಕೇಶವನಸ್ವಲ್ಪವೂ ನೆನೆಯದ ನರನಿದ್ದರೇನು ||3||

ಆರು ಬಾಳಿದರೇನು ಆರು ಬದುಕಿದರೇನು Read More »

ಆರು ಬಲ್ಲರು ಹರಿಹರಾದಿಗಳ ಮಹಿಮೆಯನು

ಆರು ಬಲ್ಲರು ಹರಿಹರಾದಿಗಳ ಮಹಿಮೆಯನು ವಾರಿಜೋದ್ಭವ ಸುರೇಂದ್ರಾದಿಗಳಿಗಳವಲ್ಲ ಪೌರತ್ರಯವ ಗೆಲ್ವ ಸಮಯದಲಿ ತಪ ಮಾಡಿನಾರಾಯಣಾಸ್ತ್ರವನು ಪಡೆದನೀತಗೌರೀ ಮನೋಹರನ ಘನತರಾರ್ಚನೆಗೈದುಚಾರುತರ ಚಕ್ರವನು ಪಡೆದನಾ ಶೌರಿ ||1|| ಬಲಿಚಕ್ರವರ್ತಿ ಭಕ್ತಿಗೆ ಮೆಚ್ಚಿ ಅವನ ಬಾ-ಗಿಲ ಕಾಯ್ದನಚ್ಯುತನು ಅನುಗಾಲದಿಬಲು ಭುಜನು ಬಾಣಾಸುರನ ಗೃಹ ದ್ವಾರವನುಬಳಸಿ ಕಾಯ್ದನು ಹರನು ವರವ ತಾನಿತ್ತು ||2|| ಭೋಗಿಶಯನನು ಆಗಿ ಭೋಗಿಭೂಷಣನಾಗಿವಾಗೀಶನಾಗಿ ಸೃಷ್ಟಿಸ್ಥಿತಿಲಯಕ್ಕಾಗು ಕಾರಣ ಕಾರ್ಯ ಕರ್ಮಾದಿ ರೂಪಕ್ಕೆಕಾಗಿನೆಲೆಯಾದಿಕೇಶವನ ಮಹಿಮೆಯನು|| 3||

ಆರು ಬಲ್ಲರು ಹರಿಹರಾದಿಗಳ ಮಹಿಮೆಯನು Read More »

ಆರು ಬದುಕಿದರಯ್ಯ ಹರಿ ನಿನ್ನ ನಂಬಿ 

ಆರು ಬದುಕಿದರಯ್ಯ ಹರಿ ನಿನ್ನ ನಂಬಿ ತೋರು ಈ ಧರೆಯೊಳಗೆ ಒಬ್ಬರನು ಕಾಣೆ ಕೃಷ್ಣ ಕಲಹ ಬಾರದ ಮುನ್ನ ಕರ್ಣನೊಬ್ಬನ ಕೊಂದೆಸುಲಭದಲಿ ಕೌರವರ ಮನೆಯ ಮುರಿದೆನೆಲನ ಬೇಡಲು ಪೋಗಿ ಬಲಿಯ ಭೂಮಿಗೆ ತುಳಿದೆಮೊಲೆಯನುಣ್ಣಲು ಪೋಗಿ ಪೂತನಿಯ ಕೊಂದೆ ||1|| ಕರುಳೊಳಗೆ ಕತ್ತರಿಯನಿಟ್ಟೆ ಹಂಸಧ್ವಜನಸರಸದಿಂ ಮಗಳ ಗಂಡನ ಕೊಲಿಸಿದೆಮರುಳಿನಿಂದಲಿ ಪೋಗಿ ಭೃಗುಮುನಿಯ ಕಣ್ಣೊಡೆದೆಅರಿತು ನರಕಾಸುರನ ಹೆಂಡಿರನು ತಂದೆ||2|| ತಿರಿದುಂಬ ದಾಸರ ಕೈ ಕಪ್ಪ ಕೊಂಬ ಮರ್ಮತಿರುಮಲಾಚಾರ್ಯ ಶ್ರೀಗುರುವೆ ಬಲ್ಲವರ ಕಾಗಿನೆಲೆಯಾದಿಕೇಶವನ ಭಜಿಸಿದರೆತಿರಿವೆನೆಂದರು ತಿರುಪೆ ಕೂಳ್ ಪುಟ್ಟದೈ ಕೃಷ್ಣ||3||

ಆರು ಬದುಕಿದರಯ್ಯ ಹರಿ ನಿನ್ನ ನಂಬಿ  Read More »

ಆರಿಗಾರಿಲ್ಲ ಆಪತ್ಕಾಲದೊಳಗೆ 

ಆರಿಗಾರಿಲ್ಲ ಆಪತ್ಕಾಲದೊಳಗೆ ವಾರಿಜಾಕ್ಷನ ನಾಮ ನೆನೆ ಕಂಡ್ಯ ಮನವೆ ಹಸಿದು ಬಳಲುವಾಗ ಹಗೆ ಕೈಗೆ ಸಿಲುಕಿದಾಗದೆಸೆಗೆಟ್ಟು ಅಧಿಕ ವ್ಯಾಧಿಯಲಿ ಇರುವಾಗಅಸಮಾನನಾದಾಗ ಅತಿ ಭೀತಿಗೊಂಡಾಗಬಿಸಜನಾಭನ ನಾಮ ನೆನೆಕಂಡ್ಯ ಮನವೆ||1|| ಸಾಲದವರೆಳೆವಾಗ ಚಾಡಿ ಮಾತಿಗೆ ಭೂಪಘಳುಘುಳಿಸುತ ಕೋಪವನು ತೋರಿದಾಗಮೇಲು ತಾನರಿಯದಯೆ ನಿಂದೆ ಹೊಂದಿರುವಾಗನೀಲಮೇಘಶ್ಯಾಮನ ನೆನೆಕಂಡ್ಯ ಮನವೆ|| 2|| ಪಂಥದಲಿರುವಾಗ ಪದವಿ ತಪ್ಪಿರುವಾಗದಂತಿಮದವೇರಿ ಬೆನ್ನತ್ತಿದಾಗಕಂತುಪಿತ ಕಾಗಿನೆಲೆಯಾದಿಕೇಶವನ ನಿ-ಶ್ಚಿಂತೆಯಿಂದಲಿ ನೀನು ನೆನೆಕಂಡ್ಯ ಮನವೆ ||3||

ಆರಿಗಾರಿಲ್ಲ ಆಪತ್ಕಾಲದೊಳಗೆ  Read More »

ಆರಿಗಳವಲ್ಲಾತ್ಮ ಯೋಗ

ಆರಿಗಳವಲ್ಲಾತ್ಮ ಯೋಗ ಸಿದ್ಧಿಸೇರಿ ಸುಜ್ಞಾನಸವಿದುಂಬಗಲ್ಲದೆ ರಜಸು – ತಾಮಸವೆಂಬ ರಯವನೆಲ್ಲವ ಕಳೆದುಗಜ ಬಜಿಸುವ ಪಂಚಭೂತಗಳರಜನಿಗೆ ಸಿಲ್ಕದೆ ಪರಬ್ರಹ್ಮನ ಬಲುನಿಜವ ತಿಳಿಯಬಲ್ಲ ನಿರ್ವಾಣಗಲ್ಲದೆ|| 1|| ಭಿನ್ನ ಭೇದಗಳೆಂಬ ಬಲು ಸಂಶಯ ಕಳೆದುತನ್ನೊಳಗೆ ತಾ ತಿಳಿದು ತಾರಕಬ್ರಹ್ಮವಚೆನ್ನಾಗಿ ನೀ ನೋಡು ಚೆಲುವ ಕಂಗಳಿಂದತನ್ನಗ್ನಿಯೊಳಗಿರುವ ಪ್ರೌಢರಿಗಲ್ಲದೆ|| 2|| ಅಕಾರ ಉಕಾರ ಮಕಾರ ಎಂತೆಂಬಓಂಕಾರಕೆ ಕೂಡಿ ಎರಡಿಲ್ಲದಸಾಕಾರ ಕಾಗಿನೆಲೆಯಾದಿಕೇಶವನಆಕಾರದೊಡನಾಡುವರಿಗಲ್ಲದೆ ||3||

ಆರಿಗಳವಲ್ಲಾತ್ಮ ಯೋಗ Read More »

ಆನೆಯ ನೋಡಿರಯ್ಯ ನೀವೆಲ್ಲರು

ಆನೆಯ ನೋಡಿರಯ್ಯ ನೀವೆಲ್ಲರುಆನಂದ ಪಡೆಯಿರಯ್ಯ ತಾನು ತನ್ನವರೆಂಬ ಮಾನವರ ಸಲಹಿದ ಪಾಂಡು ಚಕ್ರೇಶನ ಸುತರಿಗೊಲಿದಾನೆಗಂಡುಗಲಿ ಮಾಗಧನ ಒರಸಿದಾನೆಹಿಂಡು ಗೋವಳರೊಳಗೆ ಹಿರಿಯನ ಕಳೆಯದಾನೆಲಂಡರಿಗೆ ಎದೆಗೊಡುವ ಪುಂಡಾನೆ ||1|| ಬಾಲಕನ ನುಡಿಗೇಳಿ ಖಳನ ಸೀಳಿದಾನೆಪಾಲುಂಡು ವಿದುರನ ಸಲಹಿದಾನೆಲೋಲಾಕ್ಷಿ ಮಾನಭಂಗಕ್ಕೊದಗಿದಾನೆಖೂಳ ಶಿಶುಪಾಲನನು ಸೀಳಿದಾನೆ||2|| ಅಜಮಿಳನಿಗೆ ನಿಜಪದವಿಯ ಕೊಟ್ಟಾನೆಕುಜನರೆಲ್ಲರನು ಒರಗಿಸಿದಾನೆಅಜಪಿತ ಕಾಗಿನೆಲೆಯಾದಿಕೇಶವಾನೆತ್ರಿಜಗವಲ್ಲಭ ತಾನು ಭಜಕರ ವಶವಾನೆ ||3||

ಆನೆಯ ನೋಡಿರಯ್ಯ ನೀವೆಲ್ಲರು Read More »

ಆನೆ ಬರುತಾದೆ ನೋಡಮ್ಮ ಮದ್ದಾನೆ ಬರುತಾದೆ

ಆನೆ ಬರುತಾದೆ ನೋಡಮ್ಮ ಮದ್ದಾನೆ ಬರುತಾದೆ ಆನೆ ಬರುತಾದೆ ಎಲ್ಲರು ನೋಡಿರಿ ಒಂ-ದಾನೆಯ ಕೊಂದ ಮದ್ದಾನೆಏನೆಂದು ಪೇಳಲಿ ಎಲ್ಲ ದಿಕ್ಕುಗಳಲಿತಾನೇ ತಾನಾಗಿ ಮದ ಸೊಕ್ಕಿದಾನೆ ಅನೀರ ಮುಳುಗಿ ಖಳನ ಕೊಂದು ವೇದ ತಂದುಬರಮದೇವಗಿತ್ತ ಮದ್ದಾನೆಕ್ರೂರ ಚಿತ್ರಗುಪ್ತನೊಡನೆ ಕಾರುಬಾರಿಗಿಳಿದಜಾರ ಕೃಷ್ಣನೆಂಬ ಸೊಕ್ಕಿದಾನೆ|| 1|| ದಶದಿಕ್ಕಿನೊಳು ಘಂಟೆ ಘಣಿರೆಂದು ಬರುತ್ತಿದೆಕುಸುಮಶರನ ಪೆತ್ತ ಮದ್ದಾನೆದಶಕಂಠನ ಕೊಂದು ಅನುಜಗೆ ಪಟ್ಟಗಟ್ಟಿದದಶರಥಸುತನೆಂಬ ಮದ ಸೊಕ್ಕಿದಾನೆ ||2|| ಗಂಧ ಕಸ್ತೂರಿ ಬೊಟ್ಟು ಗಮಕದಿಂದಲಿ ಇಟ್ಟುಗೊಂದಲಗಡಿಬಿಡಿ ಸುರಲೋಕ ಅಮ್ಮಮ್ಮಬೆಂಬಿಡದೆ ದೈತ್ಯರನು ಕೊಂದ ಗುಣ ಸಂಪನ್ನಸುಂದರ ಕೃಷ್ಣನೆಂಬ ಮದ

ಆನೆ ಬರುತಾದೆ ನೋಡಮ್ಮ ಮದ್ದಾನೆ ಬರುತಾದೆ Read More »

ಆನೆ ಬಂದಿದೆ ಇದಿಗೊ ಮದ್ದಾನೆ 

ಆನೆ ಬಂದಿದೆ ಇದಿಗೊ ಮದ್ದಾನೆ ಜ್ಞಾನಿಗಳೊಳಾಡುವ ಮದ್ದಾನೆ ದೇವಕಿಯೊಳು ಪುಟ್ಟಿದಾನೆ – ವಸುದೇವನ ಪೆಸರೊಳೈತಂದ ಮದ್ದಾನೆಶ್ರೀ ವಾಸುದೇವನೆಂಬಾನೆ – ಗೋಪಿದೇವಿಯ ಗೃಹದೊಳಾಡುವ ಪುಟ್ಟಾನೆ ||1|| ನೀಲವರ್ಣದ ನಿಜದಾನೆ – ಸ್ವರ್ಣಮಾಲೆಗಳಿಟ್ಟು ಮೆರೆವ ಚಲುವಾನೆಶ್ರೀಲೋಲನೆನಿಪ ಪಟ್ಟದಾನೆ – ದುಷ್ಟಕಾಲಿಂಗನ ಪೆಡೆಯ ಮೆಟ್ಟಿ ತುಳಿದಾನೆ ||2|| ಬಾಲೇಂದು ಮುಖದ ಮರಿಯಾನೆ – ಕದ್ದುಪಾಲನ್ನು ಕುಡಿದ ಮರಿಯಾನೆಕೈಲಿ ಗಿರಿಯನೆತ್ತಿದಾನೆಕಾಳ್ಕಿಚ್ಚನ್ನು ನುಂಗಿದ ಪಟ್ಟದಾನೆ ||3|| ಧೇನುಕಾಸುರನ ಕೊಂದಾನೆತನಗೆ ಜೋಡಿಲ್ಲದಿಹ ನಿಜದಾನೆಮಾನವರಿಗೆಲ್ಲ ಸಿಲ್ಕದಾನೆಶೌನಕಾದಿಗಳೊಂದಿಗಿಪ್ಪಾನೆ ||4|| ಮಲ್ಲರೊಡನೆ ಗೆಲಿದಾನೆ – ಕಡುಖುಲ್ಲ ಕಂಸನ ಕೆಡಹಿದಾನೆ –

ಆನೆ ಬಂದಿದೆ ಇದಿಗೊ ಮದ್ದಾನೆ  Read More »