ಕನಕದಾಸ

ನಾರಾಯಣಾ ನಮೋ ನಾರಾಯಣಾ

ನಾರಾಯಣಾ ನಮೋ ನಾರಾಯಣಾ ಘೋರ ಸಂಸಾರ ಭವದೂರ ಋಷಿಜನ ಮನೋ-ಹಾರ ಸಾಕಾರ ಸಿರಿಧರ ರೂಪನೆ ನಮೋ ಉತ್ತಾನಪಾದನ ಅಣುಗಗೆ ಧ್ರುವ ಪದವಿಜತ್ತಯಿಸಿ ಕೊಟ್ಟೆ ಶ್ರೀನಾರಾಯಣಾಉತ್ಕಚದ ಬಾಲೆಯ ಕಡುಲಜ್ಜೆ ಸಭೆಯೊಳಗೆವಿಸ್ತರಿಸಿ ಕಾಯ್ದೆ ಶ್ರೀನಾರಾಯಣಾಕತ್ತರಿಸಿ ನೆಗಳು ನುಂಗಿದ ಕುಮಾರಕನ ತಂ-ದಿತ್ತೆ ಮುನಿವರನಿಗೆ ನಾರಾಯಣಾಚಿತ್ತಜಾರಿ ಕೊಲ್ಲಲಂಬರೀಷ ಭೂಪೋತ್ತಮನ ಕಾಯ್ದೆ ಶ್ರೀನಾರಾಯಣಾ ||1|| ನಕ್ರಂಗೆ ಸಿಲ್ಕಿ ನಡುನೀರೊಳೊದರುವ ಗಜವಚಕ್ರದಿಂ ಕಾಯ್ದೆ ಶ್ರೀನಾರಾಯಣಾಶುಕ್ರನುಪದೇಶವನು ತವೆ ಜರಿದ ವೈಷ್ಣವರಅಕ್ಕರದಿ ಪಾಲಿಸಿದೆ ನಾರಾಯಣಾಶಕ್ರಜಿತುಪಿತ ಸಹೋದರಗೆ ಸ್ಥಿರರಾಜ್ಯವನುಉತ್ಕøಷ್ಟದಿಂ ಕೊಟ್ಟೆ ನಾರಾಯಣಾದುಷ್ಕøತದಿ ಸುತನ ಪೆಸರ್ಗೊಂಡವನ ಕಾಯ್ದೆಯೊ ತ್ರಿ-ವಿಕ್ರಮಾಂಕಿತ ವೀರ ನಾರಾಯಣಾ||2|| […]

ನಾರಾಯಣಾ ನಮೋ ನಾರಾಯಣಾ Read More »

ನಾರಾಯಣನೆ ಈತ

ನಾರಾಯಣನೆ ಈತ – ನಾರಿ ಒಳ್ಳೆಯವರಿಗೆ ಮಾಡ್ದ ವಿಘಾತ ಪರಿಪರಿಯಲಿ ಪೊಗಳುವ ಗೀತ – ನಾನೆಂದವರ ಮುರಿದ ಪ್ರಖ್ಯಾತ ಕೈಕಾಲಿಲ್ಲದೆ ಆಡ್ದಾಮೈಮೇಲ್ಭಾರವ ಪೊತ್ತು ನೋಡ್ದಾಕೋರೆಯಲಿ ತಿವಿದು ಹತ ಮಾಡ್ದಾತಾಕೊ ಎಂದು ಒದರಿ ಬಗೆದು ಬೀರ್ದಾಅರ್ತಿಯಿಂದ ಪಾತಾಳಕೆ ದೂಡ್ದಾಮುನಿಯ ಮಗನಾಗಿ ಕ್ಷತ್ರಿಯರ ಕಾಡ್ದಾರಾವಣಗಾಗಿ ಅಂಬುತೆಗೆದು ಹೂಡ್ದಾಆ ಜಮುನೆ ಪೊಕ್ಕು ಮೋಜು ಮಾಡ್ದಾದಿಗಂಬರ ವೇಷವ ತಾಳ್ದಾದಿಗಿದಿಗಿ ಎಂದು ಅಶ್ವವೇರ್ದಾ ||1|| ಕಳ್ಳಗಿಂತ ಮಹಾಕಳ್ಳಕಲ್ಲನು ಮರೆ ಮಾಡಿಕೊಂಡಿಹನಲ್ಲಭೂಮಿ ನೆಗಹುದ ಬಲ್ಲಪುಟ್ಟ ಮಗು ಪ್ರಹ್ಲಾದಗೊಲಿದನಲ್ಲಎರಡು ಪಾದ ಭೂಮಿ ತಾನೊಲ್ಲಇವನ ಕೊಡಲಿಬಾಯಿಗಿದಿರಿಲ್ಲಕೋ ಎಂದ ಲಂಕೆಗೆ

ನಾರಾಯಣನೆ ಈತ Read More »

ನಾರಾಯಣ ನಿನ್ನ ನಾಮವೊಂದಿರುತಿರೆ

ನಾರಾಯಣ ನಿನ್ನ ನಾಮವೊಂದಿರುತಿರೆಬೇರೊಂದು ನಾಮವಿನ್ನ್ಯಾಕಯ್ಯ ನೆಟ್ಟನೆ ದಾರಿಯು ಬಟ್ಟೆಯೊಳಿರುತಿರೆಬೆಟ್ಟವ ಬಳಸಲಿನ್ನ್ಯಾಕಯ್ಯಅಷ್ಟೈಶ್ವರ್ಯದ ಮೃಷ್ಟಾನ್ನವಿರುತಿರೆಬಿಟ್ಟಿ ಕೂಳನು ತಿನ್ನಲ್ಯಾಕಯ್ಯ ||1|| ಪರುಶದ ಪಾಳಗಳಿರುತಿರೆ ಬೀದಿಜರಿಗಲ್ಲ ತೊಳೆಯಲಿನ್ಯಾಕಯ್ಯಹರಿವಾಣದೊಳಗಮೃತಾನ್ನವಿರುತಿರೆತಿರಿಪೆ ಕೂಳನು ತಿನ್ನಲ್ಯಾಕಯ್ಯ ||2|| ಬೆಲ್ಲವು ಕರದೊಳಗಿರುತಿರೆ ಕಾಡಕಲ್ಲನು ಕಡಿಯಲಿನ್ಯಾಕಯ್ಯಬಲ್ಲಿದ ನೆಲೆಯಾದಿಕೇಶವನಿರುತಿರೆಚಿಲ್ಲರೆ ದೈವದ ಹಂಬಲ್ಯಾಕಯ್ಯ ||3||

ನಾರಾಯಣ ನಿನ್ನ ನಾಮವೊಂದಿರುತಿರೆ Read More »

ನಾರಾಯಣ ಎಂಬ ನಾಮದ ಬೀಜವನು

ನಾರಾಯಣ ಎಂಬ ನಾಮದ ಬೀಜವನು ನಾಲಗೆಯಕೂರಿಗೆಯ ಮಾಡಿ ಬಿತ್ತಿರಯ್ಯ ತನುವ ನೇಗಿಲು ಮಾಡಿ ಹೃದಯ ಹೊಲವನು ಮಾಡಿತನ್ವಿರಾ ಎಂಬ ಎರಡೆತ್ತ ಹೂಡಿಜ್ಞಾನವೆಂಬೊ ಮಿಣಿಯ ಕಣ್ಣಿ ಹಗ್ಗವ ಮಾಡಿಧ್ಯಾನವೆಂಬ ಧಾನ್ಯವ ನೋಡಿ ಬಿತ್ತಿರಯ್ಯ ||1|| ಕಾಮಕ್ರೋಧಗಳೆಂಬ ಗಿಡಗಳನು ತರಿಯಿರಯ್ಯಮದಮತ್ಸರವೆಂಬ ಪೊದೆಯ ಇರಿಯಿರಯ್ಯಪಂಚೇಂದ್ರಿಯಗಳೆಂಬ ಮಂಚಿಕೆಯ ಹಾಕಿರಯ್ಯಚಂಚಲವೆಂಬ ಹಕ್ಕಿಯ ಓಡಿಸಿರಯ್ಯ ||2|| ಉದಯಾಸ್ತಮಾನವೆಂಬ ಎರಡು ಕೊಳಗವ ಮಾಡಿ ಆಯುಶ್ಯದ ರಾಶಿಯನು ಅಳೆಯಿರಯ್ಯಇದು ಕಾರಣ ಕಾಗಿನೆಲೆಯಾದಿಕೇಶವನಮುದದಿಂದ ನೆನೆನೆನೆದು ಸುಖಿಯಾಗಿರಿಯ್ಯ||3||

ನಾರಾಯಣ ಎಂಬ ನಾಮದ ಬೀಜವನು Read More »

ನಾಮ ಮುಂದೊ ಸ್ವಾಮಿ ವಿಭೂತಿ ಮುಂದೊ

ನಾಮ ಮುಂದೊ ಸ್ವಾಮಿ ವಿಭೂತಿ ಮುಂದೊ ಭೂಮಿ ಆಕಾಶ ಪೊತ್ತೊ ಆಕಾಶ ಭೂಮಿಯ ಪೊತ್ತೊಭೂಮಿಯು ಮುಂದೊ ಆಕಾಶ ಮುಂದೊ ಸ್ವಾಮಿ ||1|| ತತ್ತಿ ಹಕ್ಕಿಯ ಪೊತ್ತೊ ಹಕ್ಕಿ ತತ್ತಿಯ ಪೊತ್ತೊತತ್ತಿಯು ಮುಂದೊ ಹಕ್ಕಿಯು ಮುಂದೊ ಸ್ವಾಮಿ ||2|| ಬೀಜ ವೃಕ್ಷವ ಪೊತ್ತೊ ವೃಕ್ಷ ಬೀಜವ ಪೊತ್ತೊಬೀಜವು ಮುಂದೊ ವೃಕ್ಷವು ಮುಂದೊ ಸ್ವಾಮಿ ||3|| ಗಂಡ ಹೆಂಡಿರ ಪೊತ್ತೊ ಹೆಂಡಿರು ಗಂಡನ ಪೊತ್ತೊಗಂಡನು ಮುಂದೊ ಹೆಂಡಿರು ಮುಂದೊ ಸ್ವಾಮಿ||4|| ಕನಕನು ಹೇಳಿದ ಬೆಡಗಿದು ಕಂಡವರೆಲ್ಲರುಮನದಲಿ ಚಿಂತಿಸಿ ಮಥಿಸಿ ನವನೀತ

ನಾಮ ಮುಂದೊ ಸ್ವಾಮಿ ವಿಭೂತಿ ಮುಂದೊ Read More »

ನಾನೇನು ಬಲ್ಲೆ ನಿಮ್ಮ ನಾಮದ ಸ್ಮರಣೆಯನು

ನಾನೇನು ಬಲ್ಲೆ ನಿಮ್ಮ ನಾಮದ ಸ್ಮರಣೆಯನುಏನೆಂದು ಸ್ತುತಿ ಮಾಡಲರಿಯೆ ಹರಿ ಮುಕುಂದನು ನೀನು ನರಜನ್ಮ ಹುಳು ನಾನುಪರಮಪುರುಷನು ನೀನು ಪಾಪಿ ನಾನುಗರುಡ ಗಮನನು ನೀನು ದುರುಳ ಕರ್ಮಿಯು ನಾನುಪರಂಜ್ಯೋತಿಯು ನೀನು ಪಾಮರನು ನಾನು ||1|| ಅಣುರೇಣು ತೃಣ ಕಾಷ್ಠ ಪರಿಪೂರ್ಣನು ನೀನುಕ್ಷಣಕ್ಷಣಕೆ ಅವಗುಣದ ಕರ್ಮಿ ನಾನುವನಜಸಂಭವನಯ್ಯ ವೈಕುಂಠಪತಿ ನೀನುತನುವು ಸ್ಥಿರವಲ್ಲದ ನರಬೊಂಬೆ ನಾನು ||2|| ಕಂಬದಲಿ ಬಂದಂಥ ಆನಂದಪತಿ ನೀನುನಂಬಿಗಿಲ್ಲದ ನಿರ್ಜೀವಿ ನಾನುಅಂಬರೀಷಗೆ ಒಲಿದ ದುರಿತ ದೂರನು ನೀನುಡಂಬಕದ ಮಾಯಾ ಶರೀರಿ ನಾನು ||3|| ವಾರಿಧಿಶಯನ ಭೂರಿ

ನಾನೇನು ಬಲ್ಲೆ ನಿಮ್ಮ ನಾಮದ ಸ್ಮರಣೆಯನು Read More »

ನಾನು ನೀನು ಎನ್ನದಿರು ಹೀನ ಮಾನವ

ನಾನು ನೀನು ಎನ್ನದಿರು ಹೀನ ಮಾನವ ಜ್ಞಾನದಿಂದ ನಿನ್ನ ನೀನೆ ತಿಳಿದು ನೋಡೆಲೊ ಹೆಣ್ಣು ಹೊನ್ನು ಮಣ್ಣು ಮೂರು ನಿನ್ನದೇನೆಲೊಅನ್ನದಿಂದ ಬಂದ ಕಾಮ ನಿನ್ನದೇನೆಲೊಕರ್ಣದಿಂದ ಬರುವ ಘೋಷ ನಿನ್ನದೇನೆಲೊನಿನ್ನ ಬಿಟ್ಟು ಹೋಹ ದೇಹ ನಿನ್ನದೇನೆಲೊ||1|| ಹಲವು ಜನ್ಮದಿಂದ ಬಂದಿರುವನು ನೀನೆಲೊಮಲದ ಗರ್ಭದಲಿ ನಿಂದಿರುವನು ನೀನೆಲೊಜಲದ ದಾರಿಯಲಿ ಬಂದಿರುವನು ನೀನೆಲೊಕುಲವು ಜಾತಿ ಗೋತ್ರವುಳ್ಳವನು ನೀನೆಲೊ ||2|| ಕಾಲಕರ್ಮ ಶೀಲ ನೇಮ ನಿನ್ನದೇನೆಲೊಬಾಲವಿದ್ಯೆ ಬಯಲ ಮಾಯೆ ನಿನ್ನದೇನೆಲೊಕೀಲು ಜಡಿದ ತೊಗಲಗೊಂಬೆ ನಿನ್ನದೇನೆಲೊಲೋಲ ಆದಿಕೇಶವನ ಭಕ್ತನಾಗೆಲೊ ||3||

ನಾನು ನೀನು ಎನ್ನದಿರು ಹೀನ ಮಾನವ Read More »

ನಾ ನಿಮ್ಮ ದಾಸರ ದಾಸ

ನಾ ನಿಮ್ಮ ದಾಸರ ದಾಸಈ ನರರ ಪಾಡೇನೆರಡು ದಿನದ ಸಂಸಾರ ಕರೆಸು ಕಂಬದಿ ಎಂದು ವಾದಿಸಿದವ ಕೆಟ್ಟಪರಹೆಣ್ಣಿಗಾಸೆ ಪಟ್ಟು ಕೀಚಕ ಕೆಟ್ಟಬರಿದೆ ದ್ರೌಪದಿಗಾಗಿ ದುರ್ಯೋಧನ ಕೆಟ್ಟಉರಿ ಹಸ್ತವ ಬೇಡಿ ಭಸ್ಮಾಸುರ ಕೆಟ್ಟ ||1|| ಆಡಿದ ಮಾತಿಗೆ ಬಲಿ ನೀಡಲಾಗಿ ಕೆಟ್ಟಮಾಡುವ ದಾನ ತಡೆದು ಶುಕ್ರನು ಕೆಟ್ಟಕೂಡಿದ ಶಿರವರಿದು ರೂಢಿಗೀಶ್ವರ ಕೆಟ್ಟಬೇಡಲು ಗುಂಡಿಗೆ ಸೀಳಿ ಕರ್ಣನು ಕೆಟ್ಟ ||2|| ಎರಡೆಂಟಾಡೆನೆಂದು ಹರಿಶ್ಚಂದ್ರ ಕೆಟ್ಟನೆರೆ ಪಗಡೆಯನಾಡಿ ಧರ್ಮಜನು ಕೆಟ್ಟಹರಿದು ಬಾಣವ ತೊಟ್ಟು ದಶರಥನು ಕೆಟ್ಟಹರಿಯ ಮೊರೆ ಸೇರಿದರ್ಗೆ ಸ್ಥಿರ ಪಟ್ಟ

ನಾ ನಿಮ್ಮ ದಾಸರ ದಾಸ Read More »

ನಮ್ಮಮ್ಮ ಶಾರದೆ ಉಮಾ ಮಹೇಶ್ವರಿ

ನಮ್ಮಮ್ಮ ಶಾರದೆ ಉಮಾ ಮಹೇಶ್ವರಿನಿಮ್ಮೊಳಗಿಹನ್ಯಾರಮ್ಮ ಕಮ್ಮಗೋಲನ ವೈರಿಸುತನಾದ ಸೊಂಡಿಲಹೆಮ್ಮೈಯ್ಯ ಗಣನಾಥನೆ ಅಮ್ಮಯ್ಯ ಮೋರೆ ಕಪ್ಪಿನ ಭಾವ ಮೊರದಗಲ ಕಿವಿಯುಳ್ಳಕೋರೆ ದಾಡೆಯವನ್ಯಾರಮ್ಮಮೂರು ಕಣ್ಣನ ಸುತ ಮುರಿದಿಟ್ಟ ಚಂದ್ರನಧೀರ ತಾ ಗಣನಾಥನೆ ಅಮ್ಮಯ್ಯ ||1|| ಉಟ್ಟ ದಟ್ಟಿಯು ಮತ್ತೆ ಬಿಗಿದುಟ್ಟ ಚಲ್ಲಣದದಿಟ್ಟ ತಾನಿವನ್ಯಾರಮ್ಮಪಟ್ಟದ ರಾಣಿ ಪಾರ್ವತಿಯ ಕುಮಾರಹೊಟ್ಟೆಯ ಗಣನಾಥನೆ ಅಮ್ಮಯ್ಯ||2|| ರಾಶಿ ವಿದ್ಯೆಯ ಬಲ್ಲ ರಮಣಿ ಹಂಬಲನೊಲ್ಲಭಾಷಿಗನಿವನ್ಯಾರಮ್ಮಲೇಸಾಗಿ ಸುಜನರ ಸಲಹುವ ನೆಲೆಯಾದಿಕೇಶವನ ದಾಸ ಕಾಣೆ ಅಮ್ಮಯ್ಯ ||3||

ನಮ್ಮಮ್ಮ ಶಾರದೆ ಉಮಾ ಮಹೇಶ್ವರಿ Read More »

ನಮಗೆಲ್ಲಿ ಮನೆಗಳಯ್ಯ ನಾರಾಯಣ

ನಮಗೆಲ್ಲಿ ಮನೆಗಳಯ್ಯ ನಾರಾಯಣ ಕಮಲ ಬ್ರಹ್ಮಾಂಡ ಕೋಟಿ ಒಡಲೊಳು ತಾಳ್ದಂಥರಮಾಧವ ನಿಮಗೆ ನೀರೊಳಗೆ ವಾಸವಾಯಿತು ಜಲನಿಧಿಯನುತ್ತರಿಸಿ ಲಂಕೆಯನೈವುದಕೆಕುಲಗಿರಿಯ ಕಿತ್ತು ತಂದು ಸೇತುವೆ ಕಟ್ಟಿಸಲೆ ದೈತ್ಯನ ಕೊಂದು ಸೀತೆಯ ತಂದನಿಗೆ ಗಿರಿತಲೆಯ ಮೇಲೆ ಇಹ ಪ್ರಾಪ್ತಿಯಾಯಿತು ||1|| ಪೃಥ್ವಿಯ ತಲೆಯನು ಪರೆಮಾಡಿ ತಾಳಿದಳುತ್ಯಾನಮಮ್ಮನ ತಂದೆಯ ಮೆಲುವನಮೃತ್ಯುನಾಶಕನೆಂದು ಸುತ್ತಿದ್ದಾನೆಹುತ್ತಿನೊಳಗೆ ಇಹ ಪ್ರಾಪ್ತಿಯಾಯಿತು ||2|| ನಾಡದೇವತೆಗಳ ಸೆರೆಗಳ ಬಿಡಿಸಿಕ್ರೀಡೆಯಾಯಿತು ನಿಮ್ಮ ದಯದಿಂದಲಿರೂಢಿಯೊಳತಿ ಸೇವಕನಾದ ಗರುಡನಿಗೆಬೋಡು ಮರದ ಮೇಲೆ ಇಹ ಪ್ರಾಪ್ತಿಯಾಯಿತು ||3|| ಜಲನಿಧಿ ಸುತನ ಮೊಮ್ಮಗನ ಕೊಂದ ಶೂರ ನಕುಲ ಸಹದೇವ

ನಮಗೆಲ್ಲಿ ಮನೆಗಳಯ್ಯ ನಾರಾಯಣ Read More »

ನನ್ನಿಂದ ನಾನೇ ಜನಿಸಿ ಬಂದೆನೆ

ನನ್ನಿಂದ ನಾನೇ ಜನಿಸಿ ಬಂದೆನೆ ದೇವಎನ್ನ ಸ್ವತಂತ್ರವು ಲೇಶವಿದ್ದರು ತೋರು ನಿನ್ನ ಪ್ರೇರಣೆಯಿಂದ ನಡೆದು ನುಡಿದ ಮೇಲೆನಿನ್ನದು ತಪ್ಪೋ ನನ್ನದು ತಪ್ಪೋ ಪರಮಾತ್ಮ ಜನನಿಯ ಜಠರದಲಿ ನವಮಾಸ ಪರಿಯಂತಘನದಿ ನೀ ಪೋಷಿಸುತಿರೆ, ನಾನುಜನಿಸಲಾರೆನು ಎನೆ ಜನಿಸೆಂದಿಕ್ಕಳದಿಂದವನಜಾಕ್ಷ ನೂಕಿದವನು ನೀನಲ್ಲವೆ ||1|| ಎಲವುಗಳ ಜಂತೆ ಮಾಡಿ ನರಗಳ ಹುರಿಯಿಂಹೊಲಿದು ಚರ್ಮವ ಹೊದಿಸಿ ದೇಹದೊಳುಮಲಮೂತ್ರಕೆ ಹೊರದಾರಿ ನಿರ್ಮಿಸಿ ಹೃದಯದಲಿನೆಲಸಿ ಚೇತನವನಿತ್ತವ ನೀನಲ್ಲವೆ ||2|| ಜನಿಸಿದಾರಭ್ಯದಿಂದ ಇಂದಿನ ಪರಿಯಂತಘನಘನ ಪಾಪ ಸುಕರ್ಮಂಗಳನುಮನಕೆ ಬೋಧಿಸಿ ಮಾಡಿಸಿ ಮುಂದೆ ಇದನೆಲ್ಲಅನುಭವಿಸುವುದು ಜೀವನೊ ನೀನೊ ದೇವ

ನನ್ನಿಂದ ನಾನೇ ಜನಿಸಿ ಬಂದೆನೆ Read More »

ನನ್ನವ್ವ ಕಲ್ಲ ಬಿಡೆ

ನನ್ನವ್ವ ಕಲ್ಲ ಬಿಡೆ ಈ ಧೋತ್ರವಚೆನ್ನಾಗಿ ಒಗೆಯಬೇಕು ಮುನ್ನ ಮಾಡಿದ ಪಾಪ ಕರ್ಮ ಹೋಗುವ ಹಾಗೆಚೆನ್ನಕೇಶವನ ಪ್ರಸಾದಕ್ಕೊದಗಬೇಕು ಉಟ್ಟ ಧೋತ್ರವು ಮಾಸಿತು – ಮನದೊಳಗಿರುವದುಷ್ಟರೈವರುಗಳಿಂದ ಕಷ್ಟ ದುರಿತಗಳುಬಿಟ್ಟು ಹೋಗುವ ಹಾಗೆ ಮುಟ್ಟಿ ಜಲದೊಳುಗಟ್ಯಾಗಿ ಒಗೆಯಬೇಕು ||1|| ವೇದವನೋದಬೇಕು ಮನದೊಳಗಿದ್ದಭೇದವ ಕಳೆಯಬೇಕುಸಾದರಣೆಯಿಂದ ತಿಳಿದು ನಿಶ್ಚಯವಾಗಿಕ್ರೋಧಕರ್ಮಗಳೆಲ್ಲ ಬಿಟ್ಟು ಹೋಗುವ ಹಾಗೆ ||2|| ವೇಲಾಪುರದ ಚೆನ್ನಕೇಶವನ ಸೇವೆಗೆಆಲಸ್ಯವನು ಮಾಡದೆಕೋಲ ಹಿಡಿದು ದ್ವಾರಪಾಲಕನಾಗುವೆನೀಲ ಕುಂತಳೆ ಕಲ್ಲ ಬಿಟ್ಟು ಆ ಕಡೆ ಸಾರೆ ||3||

ನನ್ನವ್ವ ಕಲ್ಲ ಬಿಡೆ Read More »

ನಡತೆ ಹೀನನಾದರೇನಯ್ಯ

ನಡತೆ ಹೀನನಾದರೇನಯ್ಯ – ಜಗದೊಡೆಯನ ಭಕುತಿ ಇದ್ದರೆ ಸಾಲದೆ ಪುಂಡರಾ ಪಾಂಡುನಂದನರು ಮತ್ತದರೊಳುಕಂಡೋರ್ವಳೈವರು ಭೋಗಿಪರುಖಂಡಿಸಿದರು ರಣದೊಳು ಗುರುಹಿರಿಯರಪುಂಡರೀಕಾಕ್ಷನ ಒಲುಮೆಯೊಂದಲ್ಲದೆ ||1|| ಒಂದೊಂದು ಪರಿ ಬುದ್ಧಿಯ ಹೇಳಿ ಹಿರಣ್ಯಕಕಂದನ ನಿರ್ಬಂಧಿಸುತಿರಲುಅಂದು ಸಾಧಿಸಲು ಕಂಬದ ಬಳಿಯೆ ತನ್ನತಂದೆಯ ಕೊಲಿಸಿದನೆಂಬರು ಜನರು||2|| ದಾಸಿಯ ಜಠರದೊಳು ಜನಿಸಿದ ವಿದುರ – ಸ-ನ್ಯಾಸಿಯೆಂದೆನಿಸಿಕೊಂಡಸಾಸಿರನಾಮದೊಡೆಯ ಕೃಷ್ಣ ಬಾಡದಾದಿಕೇಶವನ ಭಕುತಿಯೊಂದಿದ್ದರೆ ಸಾಲದೆ ||3||

ನಡತೆ ಹೀನನಾದರೇನಯ್ಯ Read More »

ನಂಬು ನಾರಾಯಣನ ನಂಬೋ ನರಹರಿಯ

ನಂಬು ನಾರಾಯಣನ ನಂಬೋ ನರಹರಿಯನಂಬಿದಾ ಭಕ್ತರ ಕುಟುಂಬ ಸಾರಥಿಯ ಬಲಿ ನಂಬಿ ಪಾತಾಳಲೋಕಕರಸಾದನದೆಕುಲದ ಪ್ರಹ್ಲಾದನು ನಿಜವ ಕಂಡಕಲಿ ವಿಭೀಷಣ ನಂಬಿ ಲಂಕೆಯಲಿ ಸ್ಥಿರವಾದಛಲದ ಪಾರ್ಥನು ನಂಬಿ ವಿಶ್ವರೂಪವ ಕಂಡ||1|| ಅಂಬರೀಷನು ನಂಬಿ ವೈಕುಂಠವೇರಿದನುಹಂಬಲಿಸಿ ಶಶಿಧರನು ಉರಿಯ ಗೆದ್ದಕುಂಭಿನೀದೇವಿ ತಾ ಬಂಧನವ ಕಳೆದಳುಅಂಬುಜಾಕ್ಷಿ ದ್ರೌಪದಿಯು ಮಾನ ಉಳುಹಿಕೊಂಡಳು ||2|| ಅತಿ ಭಕುತರಿಗೆ ಮೆಚ್ಚಿ ಗತಿಮೋಕ್ಷವನಿತ್ತನುಮತಿಭ್ರಷ್ಟ ಅಜಮಿಳನ ಉದ್ಧರಿಸಿದನುಕ್ಷಿತಿಯೊಳಗೆ ಕಾಗಿನೆಲೆಯಾದಿಕೇಶವರಾಯಪತಿತ ಪಾವನ ಪರಮಪುರುಷೋತ್ತಮನನು ||3||

ನಂಬು ನಾರಾಯಣನ ನಂಬೋ ನರಹರಿಯ Read More »

ನಂಬಬೇಡಿ ಸಿರಿಯ ತನ್ನದೆ

ನಂಬಬೇಡಿ ಸಿರಿಯ ತನ್ನದೆ ? ನಂಬಬೇಡಿ ಸಿರಿಯು ತನ್ನದೆಂಬ ನಿಮಿಷದೊಳಗೇನಹುದೊಡಂಬತನವಿದೇಕೆ ಹರಿಯ ಪಾ-ದಾಂಬುಜವನು ಭಜಿಸಿ ನರರು ಜಲಧಿಯನ್ನು ಪೀರ್ದ ಮುನಿಯಜನನಿ ಪೆಸರ್ಗೆ ಕಿವಿಯನಾಂತಖಳನ ಬಲವ ನಂಬಲಾತುತಲೆಯ ತವಿಸಿದವನ ಸಿರಿಯುಗಳಿಗೆಯೊಳಗೆ ಕೀಲು ಸಡಿಲದೆ – ಎಣಿಕೆ ಇಲ್ಲದದಳವು ಯಮನನಗರಿಗೈದದೆ – ದೈವಕೃಪೆಯುತೊಲಗಲೊಡನೆ ದಾಳಿವರಿಯದೆ – ಕೇಳಿ ಜನರೆ ||1|| ಅಂಧರಾಯನಾತ್ಮಜರು ಮ-ದಾಂಧರಾಗಿ ಮಲೆತು ಗೋತ್ರಬಂಧುಗಳನು ಲೆಕ್ಕಿಸದೆ ಇಭ ಪುರಿಯನಾಳಿದ ನೃಪತಿ ಕೌರವೇಂದ್ರನರಸುತನವು ತೊಡೆಯದೆ – ಸಕಲ ಸೈನ್ಯಬಂಧು ಬಳಗ ರಣದಿ ಮಡಿಯದೆ – ಶೌರಿ ಮುನಿಯಲಂದು ಅವನ ಪದವು

ನಂಬಬೇಡಿ ಸಿರಿಯ ತನ್ನದೆ Read More »

ಧರ್ಮೇಂದ್ರಿಯಕ್ಕೆ ದಟ್ಟಡಿಯನಿಡಲೊಲ್ಲೆ

ಧರ್ಮೇಂದ್ರಿಯಕ್ಕೆ ದಟ್ಟಡಿಯನಿಡಲೊಲ್ಲೆ ದುಷ್ಕರ್ಮೇಂದ್ರಿಯಕ್ಕೆ ಕಾಲ್ಗೆರಗುತ್ತಲಿಹೆ ಮರುಳೆ ಪುಸ್ತಕವ ಬಿಚ್ಚಿ ಪೌರಾಣ ಶಾಸ್ತ್ರಂಗಳಿಂವಿಸ್ತರಿಸಿ ಹರಿಯ ಕಲ್ಯಾಣಗುಣ ಕಥೆಯನ್ನುಸ್ವಸ್ಥದಿಂ ಕುಳ್ಳಿರ್ದು ಕೇಳೆಂಬ ಠಾವಿನಲಿಮಸ್ತಕಕೆ ವ್ಯಥೆಯೆಂದು ಮನೆಯತ್ತ ನೀ ನಡೆವೆಹಸ್ತದಿಂ ಹಣ ಭತ್ತ ಹಚ್ಚಡಂಗಳ ಕೊಟ್ಟುಕುಸ್ತರಿಸಿ ಬಿನಗು ಚಾರಿತ್ರ್ಯವಂ ಲಾಲಿಸುತದುಸ್ತರದ ಲೆತ್ತ ಚದುರಂಗ ಪಗಡೆಯನು ಉದಯಾಸ್ತದವರೆಗಾಡುತ ಮೇಲೇಳದಿಹೆ ಮರುಳೆ ||1|| ಸುರಭಿ ಸೇವಂತಿ ಮಲ್ಲಿಗೆ ಮೊಲ್ಲೆ ಬಕುಳ ಪಾದರಿ ಚಂಪಕಾ ಕಂಜ ಕಣಿಗಲು ಶ್ರೀ ತುಳಸಿಪರಿಮಳದ ಪಚ್ಚೆತೆನೆ ಹರಿಪಾದಕರ್ಪಿಸುತೆನಿರುಮಾಲ್ಯ ಪರಿಮಳವನಾಘ್ರಾಣಿಸೆನೆ ಒಲ್ಲೆಬಿರಿದ ಕೆಂಜಾಜಿ ಪುಷ್ಪಂಗಳಂ ವನಿತೆಯರಸಿರಿ ಮುಡಿಗೆ ಮುಡಿಸಿ ಕುಂತಳ ಸೌರಭವ

ಧರ್ಮೇಂದ್ರಿಯಕ್ಕೆ ದಟ್ಟಡಿಯನಿಡಲೊಲ್ಲೆ Read More »

ಧರ್ಮವೆಂದೆನಿಪ ಮಾರ್ಗವನು ಬಿಟ್ಟು

ಧರ್ಮವೆಂದೆನಿಪ ಮಾರ್ಗವನು ಬಿಟ್ಟುಕರ್ಮವೆಂದೆನಿಪ ಕಾನನವ ಪೊಕ್ಕುದುರ್ಮಾರ್ಗದಲಿ ನಡೆದವಗೆ ಘೋರವ್ಯಾಧಿಕರ್ಮಪಾಕದಲಿ ಸಾರುತಿದೆ ಜಗದಿ ಹರಿಹರ ವಿಭೇದಗೈದವಂಗೆ ದಂತಚ್ಯುತವುಗುರುದೈವಗಳ ನಿಂದೆಗೈದವಗೆ ಉನ್ಮದವುಪರಸತಿಯ ಕಾಮಿಸಿದವಗೆ ಪಾಂಡು ರೋಗವುಕೆರೆಗಳನು ಒಡೆಸಿದಾತಗೆ ಶೀತಜ್ವರವುಹಿರಿಯರನು ಜರಿದವಗೆ ಪೀನಾಶಿ ರೋಗವುಧರೆಯನಳಿಸಿದವಗೆ ಸರ್ವಾಂಗ ಪರಿಶ್ವೇತವುಪುರ ಅಗ್ರಹಾರ ಕೆಡಿಸಿದವಗೆ ರಾಜರೋಗವೆಂದುಅರಿವುದು ಸಕಲ ಜನರು ||1|| ಕಥೆ ಪುರಾಣಗಳ ಹಳಿದವಗೆ ಕಾಸಶ್ವಾಸಮತಭೇದವನು ಮಾಡಿದವಗೆ ಮೂಲವ್ಯಾಧಿಪಿತಮಾತೆಯರ ಸಲಹದವಗೆ ಗಂಡಾಮಾಲೆಯತಿಗಳನು ನಿಂದಿಸಿದವಗೆ ಸನ್ನಿಪಾತ – ಪರಸತಿಯರಿಗೆ ಅಳುಪಿದಾತಗೆ ಮೂತ್ರ ಕೃಚ್ರಪತಿವ್ರತೆಯರ ಪೀಡಿಸಿದವಗೆ ಅತಿಸಾರಮತಿಗೇಡಿ ಮೂರ್ಖನಿಗೆ ಕ್ಷಯರೋಗ – ಇದುಕ್ಷಿತಿಯೊಳಗೆ ಸಿದ್ಧಾಂತ ||2|| ಶಿಶು ಹತ್ಯೆ

ಧರ್ಮವೆಂದೆನಿಪ ಮಾರ್ಗವನು ಬಿಟ್ಟು Read More »

ಧರೆಯ ಭೋಗವನ್ನು ನಂಬಿ

ಧರೆಯ ಭೋಗವನ್ನು ನಂಬಿಹರಿಯ ಮರೆದು ಕೆಡಲು ಬೇಡಧರೆಯ ಭೋಗ ಕನಸಿನಂತೆ ಕೇಳು ಮಾನವ ತಿರುಕನೋರ್ವನೂರ ಮುಂದೆಮುರುಕು ಧರ್ಮಶಾಲೆಯಲ್ಲಿಒರಗಿರುತ್ತಲೊಂದು ಕನಸು ಕಂಡನೆಂತೆನೆಪುರದ ಅರಸು ಸತ್ತನವಗೆವರ ಕುಮಾರರಿಲ್ಲದಿರಲುಕರಿಯ ಕೈಲಿ ಕುಸುಮ ಮಾಲೆಯಿತ್ತು ಪುರದೊಳು ||1|| ಬಿಡಲದಾರ ಕೊರಳಿನಲ್ಲಿತೊಡರಿಸಲ್ಕೆ ಅವರ ಪಟ್ಟದೊಡೆಯರನ್ನು ಮಾಳ್ಪೆವೆಂದು ಬಿಟ್ಟರಲ್ಲಿಯೆಒಡನೆ ತನ್ನ ಕೊರಳಿನಲ್ಲಿತೊಡರಿಸುವುದ ಕಂಡು ತಿರುಕಪೊಡವಿಯಾಣ್ಮನಾದೆನೆಂದು ಹಿಗ್ಗುತಿದ್ದನು ||2|| ಪಟ್ಟಗಟ್ಟಲಾಗ ನೃಪರುಕೊಟ್ಟರವಗೆ ಕಪ್ಪಗಳನುನೆಟ್ಟನವನು ರಾಜ್ಯವಾಳ್ದ ಕನಸಿನಲ್ಲಿಯೆಪಟ್ಟದರಸಿಯೊಳಗೆ ಸುಖವಪಟ್ಟು ಮನದಿ ಹರುಷಗೊಳಲುಪುಟ್ಟಿದವು ಹೆಣ್ಣು ಗಂಡು ಮಕ್ಕಳಾಗಲೆ ||3|| ಓಲಗದೊಳಗಿರುತ ತೊಡೆಯಮೇಲೆ ಮಕ್ಕಳಾಡುತಿರಲುಲೀಲೆಯಿಂದ ಚಾತುರಂಗ ಬಲವ ನೋಡುತಲೋಲನಾಗಿ ನೆನೆದು ಮನದಿಪೇಳೆ

ಧರೆಯ ಭೋಗವನ್ನು ನಂಬಿ Read More »

ದ್ಯಾವಿ ನಮ್ಮ ದ್ಯಾವರು ಬಂದರು

ದ್ಯಾವಿ ನಮ್ಮ ದ್ಯಾವರು ಬಂದರು ಬನ್ನೀರೆ, ನೋಡ ಬನ್ನಿರೆ ಕೆಂಗಣ್ಣ ಮೀನನಾಗಿ ನಮ ರಂಗಗುಂಗಾಡು ಸೋಮನ ಕೊಂದಾನ್ಮ್ಯಾಗುಂಗಾಡು ಸೋಮನ ಕೊಂದು ವೇದವನುಬಂಗಾರದೊಡಲನಿಗಿತ್ತಾನ್ಮ್ಯಾ||1|| ದೊಡ್ಡ ಮಡುವಿನೊಳಗೆ ನಮ ರಂಗಗುಡ್ಡವ ಹೊತ್ಕೊಂಡು ನಿಂತಾನ್ಮ್ಯಾಗುಡ್ಡವ ಹೊತ್ಕೊಂಡು ನಿಂತು ಸುರರನುದೊಡ್ಡವರನ್ನ ಮಾಡ್ಯಾನ್ಮ್ಯಾ ||2|| ಚೆನ್ನ ಕಾಡಿನ ಹಂದಿಯಾಗಿ ನಮ ರಂಗಚಿನ್ನದ ಕಣ್ಣನ ಕೊಂದಾನ್ಮ್ಯಾಚಿನ್ನದ ಕಣ್ಣನ ಕೊಂದು ಭೂಮಿಯವನಜಸಂಭವಗಿತ್ತಾನ್ಮ್ಯಾ ||3|| ಸಿಟ್ಟಿಂದ ಸಿಂಹನಾಗಿ ನಮ ರಂಗಹೊಟ್ಟೆಯ ಕರುಳ ಬಗೆದಾನ್ಮ್ಯಾಹೊಟ್ಟೆಯ ಕರುಳ ಹಾರವ ಮಾಡಿ ಪುಟ್ಟಗೆ ವರವ ಕೊಟ್ಟಾನ್ಮ್ಯಾ||4|| ಹುಡುಗ ಹಾರುವನಾಗಿ ನಮ ರಂಗಬೆಡಗಲಿ ಮುಗಿಲಿಗೆ

ದ್ಯಾವಿ ನಮ್ಮ ದ್ಯಾವರು ಬಂದರು Read More »

ದೇಶಾಧಿಪತಿ ನರಹರಿಯೆ ನಿನ್ನಯ ಪಾದ

ದೇಶಾಧಿಪತಿ ನರಹರಿಯೆ ನಿನ್ನಯ ಪಾದದಾಸರ ದಾಸನೆಂದೆನಿಸಬೇಕೆನ್ನ ರಜತಮೋಗುಣ ಪ್ರವರ್ತಕ ಮೂಲಾಂತರದಿಂಯಜಮಾನತನದಹಂಕಾರವನು ಒಲ್ಲೆಭುಜ ಚಕ್ರ ಧರಿಸಿ ಸಾತ್ತ್ವಿಕರ ಪಾದಾಂಬುಜರಜ ಭಜಕರ ಭಜಕನೆಂದೆನಿಸೆನ್ನ||1|| ಸಿರಿಗಂಧ ಕುಂಕುಮ ಸಾದು ಜವ್ವಾಜಿ ಕ-ಸ್ತೂರಿ ತಿಲಕವನಿಡುವುದ ನಾನೊಲ್ಲೆಸಿರಿ ಊಧ್ರ್ವಪುಂಡ್ರ ದ್ವಾದಶನಾಮವಿಡುವವರಪರಿಚಾರಕರ ಪರಿಚಾರಕನೆನಿಸೆನ್ನ ||2|| ಸ್ವಾದು ಕಲ್ಪಿತವಾದ ಭಕ್ಷ್ಯ ಭೋಜ್ಯಗಳನುಆದರದ ಅಮೃತಾನ್ನ ಉಣುವುದನೊಲ್ಲೆಬೋಧೆಯನು ಹೇಳುವ ಕೇಳುವ ಹರಿದಾಸರಪಾದತೀರ್ಥ ಪ್ರಸಾದವನುಣಿಸೆನ್ನ||3|| ಕಾಲ ಕರ್ಮದೊಳುಪೇಕ್ಷೆಯ ಮಾಡಿ ಹರಿಭಕುತಿಶೀಲರಹಿತ ಬ್ರಾಹ್ಮಣನಾಗಲೊಲ್ಲೆಕೀಲನರಿತು ಹರಿಭಕುತಿಯನು ಮಾಳ್ಪ ಪರಚಾಂ-ಡಾಲನ ಮನೆ ಬಾಗಿಲ ಕಾಯಿಸೆನ್ನ|| 4|| ಕ್ರೂರಶಾಸ್ತ್ರವನೋದಿ ಕುರಿ ಕೋಣವನೆ ಕಡಿದುಘೋರ ನರಕದಿ ಬೀಳುವುದನು ನಾನೊಲ್ಲೆವಾರಿಜಾಕ್ಷ

ದೇಶಾಧಿಪತಿ ನರಹರಿಯೆ ನಿನ್ನಯ ಪಾದ Read More »

ದುರ್ಜನರ ಸಂಗ ಎಂದಿಗೂ ಒಲ್ಲೆನು ಇಂಥ

ದುರ್ಜನರ ಸಂಗ ಎಂದಿಗೂ ಒಲ್ಲೆನು ಇಂಥ,ಸಜ್ಜನರ ಸಂಗದೊಳಗಿರಿಸೆನ್ನ ರಂಗ ಉಂಡಮನೆಗೆರಡನು ಎಣಿಸುವಾತನ ಸಂಗಕೊಂಡೆಯವ ಪೇಳಿ ಕಾದಿಸುವನ ಸಂಗತಂದೆ ತಾಯನು ಬೈದು ಬಾಧಿಸುವವನ ಸಂಗನಿಂದಕರ ಸಂಗ ಬಹು ಭಂಗ ರಂಗ ||1|| ನಂಬಿದ ಠಾವಿನಲಿ ಕೇಡನೆಣಿಪನ ಸಂಗಸಂಭ್ರಮದಿ ಜಗಳ ಕಾಯುವನ ಸಂಗಹಂಬಲಿಸಿ ಭವದ ಸುಖ ಮೆಚ್ಚಿದಾತನ ಸಂಗರಂಭೆಯರ ನೋಡಿ ಮೋಹಿಪನ ಸಂಗ||2|| ಕುಳಿತ ಸಭೆಯೊಳು ಕುಹಕ ಮಾಡುವಾತನ ಸಂಗಬಲು ಬೇಡೆ ಕೊಡದಿರುವ ಲೋಭಿ ಸಂಗಕುಲಹೀನರ ಕೂಡೆ ಸ್ನೇಹ ಬೆಳೆಪನ ಸಂಗಹಲವು ಮಾತಾಡಿ ಆಚರಿಸದನ ಸಂಗ||3|| ಗುರುಸತಿಗೆ ಪರಸತಿಗೆ ಎರಡು

ದುರ್ಜನರ ಸಂಗ ಎಂದಿಗೂ ಒಲ್ಲೆನು ಇಂಥ Read More »

ದಾಸಾರ್ಯರ ದಾಸರ ದಾಸ ನಾನು

ದಾಸಾರ್ಯರ ದಾಸರ ದಾಸ ನಾನು – ಬಾಡದೀಶ ಕಾಯ್ದುಕೊಳ್ಳೊ ಗುಟ್ಟುಮಾಡಿಕೊಂಡಿರದೆ ಕಂಡವರಿಗೆ ಕಾರ್ಪಣ್ಯಪಟ್ಟು ಬಡವನಾದೆನಲ್ಲ – ಅಯ್ಯ ಕೈಗೊಟ್ಟು ರಕ್ಷಿಸುವರಿಲ್ಲ ಜನ್ಮ ಜನ್ಮಂಗಳಲಿಪುಟ್ಟುವಂತೆ ಮಾಡಬೇಡ ಮಾಧವ ಮನ್ನಿಸೊ ಎನ್ನ ||1|| ಮಡದಿ ಮಕ್ಕಳೆಂಬ ಪಾಶ ಮಮತೆ ಎನ್ನ ಕೊರಳಬಿಡದೆ ಸುತ್ತಿಕೊಂಡಿತಲ್ಲಯ್ಯಪಡೆದ ದ್ರವ್ಯವೆಲ್ಲ ವಸ್ತು ಕ್ಷೇತ್ರಂಗಳ ಕಾಣದೆ ನಿತ್ಯನಡೆದುದ ವಿಸ್ತರಿಸಲಾರೆ ನೀಲಮೇಘಶ್ಯಾಮ ನಿನ್ನ||2|| ಘೋರ ಸಂಸಾರವೆಂಬ ವಾರಿಧಿಯೊಳಗೆ ಬಿದ್ದುಪಾರಗಾಣದವನಾದೆನಲ್ಲಯ್ಯಧೀರಕರ್ತನಾದ ಬಾಡದಾದಿಕೇಶವೇಶ ಸರ್ವಸಾರಿದೆ ಸಲಹೊ ಎನ್ನುದ್ಧಾರಿ ಮುದ್ದುಕೃಷ್ಣ ನಿನ್ನ ||3||

ದಾಸಾರ್ಯರ ದಾಸರ ದಾಸ ನಾನು Read More »

ದಾಸನಾಗೋ ಭವಪಾಶನೀಗೋ

ದಾಸನಾಗೋ ಭವಪಾಶನೀಗೋ – ವಿಶೇಷನಾಗೋ ಏಸೊ ಕಾಯಂಗಳ ಕಳೆದು ಎಂಬತ್ತ್ನಾಲ್ಕು ಲಕ್ಷ ಜೀವರಾಶಿಯನ್ನು ದಾಟಿ ಬಂದೆ ಈ ಶರೀರ ತಾನಲ್ಲ ತನ್ನದಲ್ಲಆಶೆಯು ತರವಲ್ಲ ಸ್ಥಿರವಲ್ಲ ಮುಂದೆ ಬಾಹೋದಲ್ಲಆಶಾಕ್ಲೇಶ ದೋಷವೆಂಬ ಅಬ್ಧಿಯೊಳು ಮುಳುಗಿ ಯಮನಪಾಶಕ್ಕೊಳಗಾಗದೆ ನಿರ್ದೋಷಿಯಾಗೊ – ಸಂತೋಷಿಯಾಗೊ ಕಾಶಿ ವಾರಣಾಸಿ ಕಂಚಿ ಕಾಳಹಸ್ತಿ ರಾಮೇಶ್ವರಏಸು ದೇಶ ತಿರುಗಿದರೆ ಬಾಹೋದೇನೊ – ಅಲ್ಲಿ ಆಹೋದೇನೊದೋಷನಾಶೆ ಕೃಷ್ಣವೇಣಿ ಗಂಗೆ ಗೋದಾವರಿ ಭವನಾಶಿ ತುಂಗಭದ್ರೆ ಯಮುನೆ ವಾಸದಲ್ಲಿ – ಉಪವಾಸದಲ್ಲಿಮೀಸಲಾಗಿ ಮಿಂದು ಜಪತಪ ಹೋಮನೇಮಗಳಏಸು ಬಾರಿ ಮಾಡಿದರೂ ಫಲವೇನೊ – ಇದು

ದಾಸನಾಗೋ ಭವಪಾಶನೀಗೋ Read More »

ದಾಸನಾಗಬೇಕು ಸದಾಶಿವನ ದಾಸನಾಗಬೇಕು

ದಾಸನಾಗಬೇಕು ಸದಾಶಿವನ ದಾಸನಾಗಬೇಕು ದಾಸನಾಗಬೇಕು ಕ್ಲೇಶಪಂಚಕವಳಿದು |ಆಸೆಯಲ್ಲಿ ಮನ ಸೂಸದೆ ಸರ್ವದಾ ಮನದ ಕಲ್ಮಷ ಕಳೆದು – ಮಹಾದೇ-ವನ ಮಹಿಮೆಯ ತಿಳಿದುಇನಿತು ಈ ಜಗವೆಲ್ಲ ಈಶ್ವರಮಯವೆಂದುಘನವಾದ ಮೋಹದ ಗಡಿಯನು ದಾಟುತ ||1|| ತನುವು ಅಸ್ಥಿರವೆನುತ – ತಿಳಿದು ಶಂಕರನ ಹೃದಯವ ಕಾಣುತಘನವಾದ ಇಂದ್ರಜಾಲವ ಮಾಯೆಯೆನುತಬಿನುಗು ಸಂಸಾರದ ಮಮತೆಯ ಬಿಡುತ ||2|| ಆರು ಚಕ್ರದಿ ಮೆರೆವ – ಅಖಂಡನಮೂರು ಗುಣವ ತಿಳಿದುಆರು ಮೂರು ಹದಿನಾರು ತತ್ತ್ವವ ಮೀರಿತೋರುವ ಕಾಗಿನೆಲೆಯಾದಿಕೇಶವನಡಿ ||3||

ದಾಸನಾಗಬೇಕು ಸದಾಶಿವನ ದಾಸನಾಗಬೇಕು Read More »

ದಾಸ ಪಟ್ಟವೋ ಸನ್ಯಾಸ ಪಟ್ಟವೋ

ದಾಸ ಪಟ್ಟವೋ ಸನ್ಯಾಸ ಪಟ್ಟವೋ ಆಸೆಯಿಂದ ನೆಲೆಯಾದಿಕೇಶವನ್ನ ನೆನೆಯದವಗೆ ಮಂಡೆ ಬೋಳು ಮಾಡಿ ನಾಮದುಂಡೆಯನ್ನು ಬರೆದು ಕೆಡಿಸಿಕಂಡಕಂಡವರನು ಕೂಡಿಭಂಡ ಜನ್ಮ ಹೊರೆಯುವವಗೆ ||1|| ಅವರಿವರ ಕೈಯ ನೋಡಿ ಹ-ಲವು ಕೆಲವು ಮಾತನಾಡಿ ಹ-ಲವ ಹಂಬಲಿಸಿ ದಿ-ನವ ಕಳೆದು ಉಳಿದು ಬಾಳುವಗೆ ||2|| ಬೆಂದ ಸಂಸಾರವೆಂಬಬಂಧನದೊಳಗೆ ಸಿಲುಕಿಕೊಂಡುಚೆಂದಾದಿಕೇಶವನ್ನಒಂದು ಬಾರಿ ನೆನೆಯದವಗೆ ||3||

ದಾಸ ಪಟ್ಟವೋ ಸನ್ಯಾಸ ಪಟ್ಟವೋ Read More »