ತೆರಣಿಯ ಹುಳು ತನ್ನ ಸ್ನೇಹದಿಂದ ಮನೆಯ ಮಾಡಿ
ತೆರಣಿಯ ಹುಳು ತನ್ನ ಸ್ನೇಹದಿಂದ ಮನೆಯ ಮಾಡಿ ತನ್ನ ನೂಲು ತನ್ನನೆ ಸುತ್ತಿ ಸಾವಂತೆ, ಮನಬಂದುದನು ಬಯಸಿ ಬೇವುತ್ತಿದ್ದೇನಯ್ಯಾ. ಎನ್ನ ಮನದ ದುರಾಶೆಯ ಮಾಣಿಸಿ ನಿಮ್ಮತ್ತ ತೋರಾ ಚೆನ್ನಮಲ್ಲಿಕಾರ್ಜುನಾ.
ತೆರಣಿಯ ಹುಳು ತನ್ನ ಸ್ನೇಹದಿಂದ ಮನೆಯ ಮಾಡಿ Read More »
ತೆರಣಿಯ ಹುಳು ತನ್ನ ಸ್ನೇಹದಿಂದ ಮನೆಯ ಮಾಡಿ ತನ್ನ ನೂಲು ತನ್ನನೆ ಸುತ್ತಿ ಸಾವಂತೆ, ಮನಬಂದುದನು ಬಯಸಿ ಬೇವುತ್ತಿದ್ದೇನಯ್ಯಾ. ಎನ್ನ ಮನದ ದುರಾಶೆಯ ಮಾಣಿಸಿ ನಿಮ್ಮತ್ತ ತೋರಾ ಚೆನ್ನಮಲ್ಲಿಕಾರ್ಜುನಾ.
ತೆರಣಿಯ ಹುಳು ತನ್ನ ಸ್ನೇಹದಿಂದ ಮನೆಯ ಮಾಡಿ Read More »
ತಾನು ದಂಡುಮಂಡಲಕ್ಕೆ ಹೋದಹೆನೆಂದಡೆ ನಾನು ಸುಮ್ಮನಿಹೆನಲ್ಲದೆ, ತಾನೆನ್ನ ಕೈಯೊಳಗಿದ್ದು ತಾನೆನ್ನ ಮನದೊಳಗಿದ್ದು ಎನ್ನ ಕೂಡದಿದ್ದಡೆ ನಾನೆಂತು ಸೈರಿಸುವೆನವ್ವಾ ? ನೆನಹೆಂಬ ಕುಂಟಿಣಿ ಚೆನ್ನಮಲ್ಲಿಕಾರ್ಜುನನ ನೆರಹದಿದ್ದಡೆ ನಾನೇವೆ ಸಖಿಯೆ ?
ತಾನು ದಂಡುಮಂಡಲಕ್ಕೆ ಹೋದಹೆನೆಂದಡೆ Read More »
ತಾಯ ತೊರದು ನಾನೇನ ಮಾಡುವೆ ? ತಂದೆಯ ತೊರದು ನಾನೇನ ಮಾಡುವೆ ? ಎತ್ತ ಮುಂತಾಗಿ ನಡೆದು ನಾನೇನ ಮಾಡುವೆ ? ಚೆನ್ನಮಲ್ಲಿಕಾರ್ಜುನಾ ನೀನೊಲಿಯದನ್ನಕ್ಕರ ?
ತಾಯ ತೊರದು ನಾನೇನ ಮಾಡುವೆ ? Read More »
ತುಂಬಿದುದು ತುಳುಕದು ನೋಡಾ. ನಂಬಿದುದು ಸಂದೇಹಿಸದು ನೋಡಾ. ಒಲಿದುದು ಓಸರಿಸದು ನೋಡಾ. ನೆರೆಯರಿದುದು ಮರೆಯದು ನೋಡಾ. ಚೆನ್ನಮಲ್ಲಿಕಾರ್ಜುನಯ್ಯಾ, ನೀನೊಲಿದ ಶರಣಂಗೆ ನಿಸ್ಸೀಮಸುಖವಯ್ಯಾ.
ತುಂಬಿದುದು ತುಳುಕದು ನೋಡಾ. Read More »
ತನ್ನವಸರಕ್ಕಾಗಿ ಹಗಲುಗನ್ನವನಿಕ್ಕಿದಡೆ, ತನ್ನ ಸವೆಯಲಿಲ್ಲ, ಕಳವು ದೊರೆಯಲಿಲ್ಲ ? ಬೊಬ್ಬುಲಿಯನೇರಿದ ಮರ್ಕಟನಂತೆ ಹಣ್ಣ ಮೆಲ್ಲಲಿಲ್ಲ, ಕುಳ್ಳಿರೆ ಠಾವಿಲ್ಲ. ನಾನು ಸರ್ವಸಂಗಪರಿತ್ಯಾಗಮಾಡಿದವಳಲ್ಲ, ನಿಮ್ಮ ಕೂಡಿ ಕುಲವಳಿದವಳಲ್ಲ, ಚೆನ್ನಮಲ್ಲಿಕಾರ್ಜುನಾ.
ತನ್ನವಸರಕ್ಕಾಗಿ ಹಗಲುಗನ್ನವನಿಕ್ಕಿದಡೆ, Read More »
ತನ್ನ ಶಿಷ್ಯ ತನ್ನ ಮಗನೆಂಬುದು ತಪ್ಪದಲಾ. ಏಕೆ? ಆತನ ಧನಕ್ಕೆ ತಂದೆಯಾದನಲ್ಲದೆ ಆತನ ಮನಕ್ಕೆ ತಂದೆಯಾದನೆ ? ಏಕೆ? ಆತನ ಮನವನರಿಯನಾಗಿ, ಆತನ ಧನಕ್ಕೆ ತಂದೆಯಾದನು. ತನ್ನಲ್ಲಿರ್ದ ಭಕ್ತಿಯ ಮಾರಿಕೊಂಡುಂಬವರು ನಿಮ್ಮ ನಿಜಭಕ್ತರಲ್ಲವಯ್ಯಾ ಚೆನ್ನಮಲ್ಲಿಕಾರ್ಜುನಾ.
ತನ್ನ ಶಿಷ್ಯ ತನ್ನ ಮಗನೆಂಬುದು ತಪ್ಪದಲಾ. Read More »
ತನ್ನ ವಿನೋದಕ್ಕೆ ತಾನೆ ಸೃಜಿಸಿದ ಸಕಲ ಜಗತ್ತ. ತನ್ನ ವಿನೋದಕ್ಕೆ ತಾನೆ ಸುತ್ತಿದನದಕ್ಕೆ ಸಕಲ ಪ್ರಪಂಚನು. ತನ್ನ ವಿನೋದಕ್ಕೆ ತಾನೆ ತಿರುಗಿಸಿದನನಂತ ಭವದುಃಖಂಗಳಲ್ಲಿ. ಇಂತೆನ್ನ ಚೆನ್ನಮಲ್ಲಿಕಾರ್ಜುನನೆಂಬ ಪರಶಿವನು ತನ್ನ ಜಗದ್ವಿಲಾಸ ಸಾಕಾದ ಮತ್ತೆ ತಾನೆ ಪರಿವನದರ ಮಾಯಾಪಾಶವನು.
ತನ್ನ ವಿನೋದಕ್ಕೆ ತಾನೆ ಸೃಜಿಸಿದ ಸಕಲ ಜಗತ್ತ. Read More »
ತನುಶುದ್ಭ ಮನಶುದ್ಧ ಭಾವಶುದ್ಧ ವಾದವರನೆನಗೊಮ್ಮೆ ತೋರಾ ? ನಡೆಯೆಲ್ಲ ಸದಾಚಾರ; ನುಡಿಯೆಲ್ಲ ಶಿವಾಗಮ ; ನಿತ್ಯಶುದ್ಧರಾದವರನೆನಗೊಮ್ಮೆ ತೋರಾ ? ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನಾ ?
ತನುಶುದ್ಭ ಮನಶುದ್ಧ ಭಾವಶುದ್ಧ Read More »
ತನುವಿನ ಸತ್ವವ ನಿಲಿಸಿತ್ತು, ಮನದ ವಿರಕ್ತಿಯ ಕೆಡಿಸಿತ್ತು. ಘನವ ಕಾಣಲೀಯದು ದುಃಖ. ಅರುಹಿರಿಯರ ತರಕಟ ಕಾಡಿತ್ತು. ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ಮರೆಗೊಂಡ ಸಂಸಾರದ ತೆರೆ ಎನ್ನ ಬರಲೀಯದಯ್ಯಾ.
ತನುವಿನ ಸತ್ವವ ನಿಲಿಸಿತ್ತು, Read More »
ತನುವಿಡಿದ ಇಂದ್ರಿಯಸುಖ ಸಿರಿಯಂತೆ ತೋರಿ ಅಡಗುತ್ತಲಿದೆ. ಗಗನದೊಡ್ಡಣೆಯಂತೆ ತನು ; ನೋಡ ನೋಡಲನುಮಾನವಿಲ್ಲದೆ ಹರಿದು ಹೋಗುತ್ತದೆ. ಇವಾದಿಯ ಮಾಣಿಸಿ, ನಿಮ್ಮ ಘನನೆನಹಿನೊಳಿರಿಸಾ ಚೆನ್ನಮಲ್ಲಿಕಾರ್ಜುನಯ್ಯಾ.
ತನುವಿಡಿದ ಇಂದ್ರಿಯಸುಖ Read More »
ತನುವಿಕಾರದಿಂದ ಸವದು ಸವದು, ಮನವಿಕಾರದಿಂದ ನೊಂದು ಬೆಂದವರೆಲ್ಲಾ ಬೋಳಾಗಿ ; ದಿನ ಜವ್ವನಂಗಳು ಸವದು ಸವದು, ಜಂತ್ರ ಮುರಿದು ಗತಿಗೆಟ್ಟವರೆಲ್ಲಾ ಬೋಳಾಗಿದ ‘ಹೇಸಿ, ಒಲ್ಲೆ ಸಂಸಾರವನೆಂಬರು ‘ ವೈರಾಗ್ಯವ ಬಲ್ಲವರಲ್ಲ ಕೇಳವ್ವಾ. ಕನ್ನೆಯಳಿಯದ ಜವ್ವನ ಸತಿಗಲ್ಲದೆ ಚೆನ್ನಮಲ್ಲಿಕಾರ್ಜುನದೇವಗಲ್ಲ ಕೇಳವ್ವಾ.
ತನುವಿಕಾರದಿಂದ ಸವದು ಸವದು, Read More »
ತನುವೆಂಬ ಸಾಗರ ತುಂಬಲು, ಮನವೆಂಬುದು ಹರುಗೋಲಾಯಿತ್ತು ಅಂಬಿಗಾ. ಎನ್ನ ಗಮ್ಮನೆ ತೆಗೆಯೋ ಅಂಬಿಗಾ. ತೊರೆದು ದಾಂಟಿಹೆನೆಂಬ ಭರವಸ ಕರಘನ, ಗಮ್ಮನೆ ತೆಗೆಯೋ ಅಂಬಿಗಾ. ಸಿರಿಶೈಲ ಚೆನ್ನಮಲ್ಲಿಕಾರ್ಜುನಾ ನಿನ್ನ ಕಾಣಲು ಬಂದಿಹೆ ಅಂಬಿಗಾ.
ತನುವೆಂಬ ಸಾಗರ ತುಂಬಲು, Read More »
ತನುವಬೇಡಿದಡೆ ತನುವಕೊಟ್ಟು ಶುದ್ಧವಪ್ಪೆ. ಮನವ ಬೇಡಿದಡೆ ಮನವಕೊಟ್ಟು ಶುದ್ಧವಪ್ಪೆ. ಧನವ ಬೇಡಿದಡೆ ಧನವ ಕೊಟ್ಟು ಶುದ್ಧವಪ್ಪೆ. ನೀನಾವುದ ಬೇಡಿದಡೂ ಓಸರಿಸಿದಡೆ, ಕೈವಾರಿಸಿದಡೆ ಹಿಡಿದು ಮೂಗ ಕೊಯಿ. ಎನ್ನ ಕಲಿತನದ ಬಿನ್ನಪವ ಕಡೆತನಕ ನಡೆಸದಿರ್ದಡೆ ತಲೆದಂಡ ಕಾಣಾ ಚೆನ್ನಮಲ್ಲಿಕಾರ್ಜುನಾ.
ತನುವಬೇಡಿದಡೆ ತನುವಕೊಟ್ಟು ಶುದ್ಧವಪ್ಪೆ. Read More »
ತನುವನುವಾಯಿತ್ತು, ಮನವನುವಾಯಿತ್ತು, ಪ್ರಾಣವನುವಾಯಿತ್ತು. ಮುನಿದು ಬಾರದ ಪರಿ ಇನ್ನೆಂತು ಹೇಳಾ ? ಎನ್ನ ಪ್ರಾಣದಲ್ಲಿ ಸಂದು, ಎನ್ನ ಮನಕ್ಕೆ ಮನವಾಗಿ ನಿಂದ ಎನ್ನ ದೇವ ಚೆನ್ನಮಲ್ಲಿಕಾರ್ಜುನನ ಕಾಣದಡೆ ಆನೆಂತು ಬದುಕುವೆನಯ್ಯಾ ?
ತನುವನುವಾಯಿತ್ತು, ಮನವನುವಾಯಿತ್ತು, Read More »
ತನು ಶುದ್ಧವಾಯಿತ್ತು ಶಿವಭಕ್ತರೊಕ್ಕುದ ಕೊಂಡೆನ್ನ. ಮನ ಶುದ್ಧವಾಯಿತ್ತು ಅಸಂಖ್ಯಾತರ ನೆನದೆನ್ನ. ಕಂಗಳು ಶುದ್ಧವಾಯಿತ್ತು ಸಕಲಗಣಂಗಳ ನೋಡಿ ಎನ್ನ. ಶ್ರೋತ್ರ ಶುದ್ಧವಾಯಿತ್ತು ಅವರ ಕೀರ್ತಿಯ ಕೇಳಿ ಎನ್ನ. ಭಾವನೆ ಎನಗಿದು ಜೀವನ ಲಿಂಗತಂದೆ. ನೆಟ್ಟನೆ ನಿಮ್ಮ ಮನಮುಟ್ಟಿ ಪೂಜಿಸಿ ಭವಗೆಟ್ಟೆ ನಾನು ಚೆನ್ನಮಲ್ಲಿಕಾರ್ಜುನಾ.
ತನು ಶುದ್ಧವಾಯಿತ್ತು ಶಿವಭಕ್ತರೊಕ್ಕುದ ಕೊಂಡೆನ್ನ. Read More »
ತನು ನಿಮ್ಮ ರೂಪಾದ ಬಳಿಕ ಆರಿಗೆ ಮಾಡುವೆ ? ಮನ ನಿಮ್ಮ ರೂಪಾದ ಬಳಿಕ ಆರ ನೆನೆವೆ ? ಪ್ರಾಣ ನಿಮ್ಮ ರೂಪಾದ ಬಳಿಕ ಆರನಾರಾಧಿಸುವೆ ? ಅರಿವು ನಿಮ್ಮಲ್ಲಿ ಸ್ವಯವಾದ ಬಳಿಕ ಆರನರಿವೆ ? ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮಿಂದ ನೀವೆಯಾದಿರಾಗಿ ನಿಮ್ಮನೆ ಅರಿವುತ್ತಿರ್ದೆನು.
ತನು ನಿಮ್ಮ ರೂಪಾದ ಬಳಿಕ Read More »
ತನು ಕರಗದವರಲ್ಲಿ ಮಜ್ಜನವನೊಲ್ಲೆಯಯ್ಯಾ ನೀನು. ಮನ ಕರಗದವರಲ್ಲಿ ಪುಷ್ಪವನೊಲ್ಲೆಯಯ್ಯಾ ನೀನು. ಹದುಳಿಗರಲ್ಲದವರಲ್ಲಿ ಗಂಧಾಕ್ಷತೆಯನೊಲ್ಲೆಯಯ್ಯಾ ನೀನು. ಅರಿವು ಕಣ್ದೆರೆಯದವರಲ್ಲಿ ಆರತಿಯನೊಲ್ಲೆಯಯ್ಯಾ ನೀನು. ಭಾವಶುದ್ಭವಿಲ್ಲದವರಲ್ಲಿ ಧೂಪವನೊಲ್ಲೆಯಯ್ಯಾ ನೀನು. ಪರಿಣಾಮಿಗಳಲ್ಲದವರಲ್ಲಿ ನೈವೇದ್ಯವನೊಲ್ಲೆಯಯ್ಯಾ ನೀನು. ತ್ರಿಕರಣ ಶುದ್ಧವಿಲ್ಲದವರಲ್ಲಿ ತಾಂಬೂಲವನೊಲ್ಲೆಯಯ್ಯಾ ನೀನು. ಹೃದಯಕಮಲ ಅರಳದವರಲ್ಲಿ ಇರಲೊಲ್ಲೆಯಯ್ಯಾ ನೀನು. ಎನ್ನಲ್ಲಿ ಏನುಂಟೆಂದು ಕರಸ್ಥಲವನಿಂಬುಗೊಂಡೆ ಹೇಳಾ ಚೆನ್ನಮಲ್ಲಿಕಾರ್ಜುನಯ್ಯಾ ? ಇದರೊಂದಿಗೆ ಕೆಳಕಂಡ ವಚನ “ತನು ಕರಗದವರಲ್ಲಿ” ಧ್ವನಿಮುದ್ರಿತಲಾಗಿಸಿದೆ. 218 ತನು ಕರಗದವರಲ್ಲಿ ಮಜ್ಜನವನೊಲ್ಲೆಯಯ್ಯಾ ನೀನು. ಮನ ಕರಗದವರಲ್ಲಿ ಪುಷ್ಪವನೊಲ್ಲೆಯಯ್ಯಾ ನೀನು. ಹದುಳಿಗರಲ್ಲದವರಲ್ಲಿ ಗಂಧಾಕ್ಷತೆಯನೊಲ್ಲೆಯಯ್ಯಾ ನೀನು. ಅರಿವು ಕಣ್ದೆರೆಯದವರಲ್ಲಿ
ತೋರೊ ನಿನ್ನಯ ಮೂರ್ತಿಯ ತೋರೊ ನಿನ್ನ ಮೂರ್ತಿ ಬೀರೊ ಹೃದಯವೆಂಬೊ ನೀರಜಹಾದೊಳಗೆ ಸಾರೋ ಸಾರಿ ಸಾರಿಗೆ ಸೇರೊ ಬಾರೊ ಬಾರೊ ಪರಿವಾರದೊಡನೆ ಮನಸೂರೆಗೊಡುವೆ ಕಂ ಸಾರಿ ಮುರಾರಿ ತುಂಬೆ ವಿಶ್ವಮಾಯಾದ ಬೊಂಬೆ ನಾಮ ಪೀಯೂಷ ಉಂಬೆ ಸೇವೆಯ ಕೈಕೊಂಬೆ ಅನ್ಯರ ನಂಬೆ ಕಾಂಬೆ ನಮಿಸಿ ಪಾಲಿಸೆಂಬೆ ಕಾಲಿಗೆ ಮನ ದುಂಬೆ ದಂತೆ ಎರಗಿ ಅಂಬೆ ಪಿಡಿವಾಕೊಂಬೆ ನಂಬಿದೆ ನಂಬಿದೆ ಅಂಬುಜಾಕ್ಷ ನೀ ನೆಂಬದು ಸುರನಿಕರಂಬ ಹಂಬಲಿಸಲು ದಿಂಬಾಗಿ ಕರ್ಣಾವಲಂಬನವಾಯಿತು ಇಂಬಿಡು ಪ್ರಾಙ್ಞನೆಂದೆಂಬ ಮೂರುತಿಯಾ||1|| ಸ್ನಾನ ಪ್ರಣಮ ವಾಚಾ
ತೋರೊ ನಿನ್ನಯ ಮೂರ್ತಿಯ Read More »
ತುಳಸಿಯ ಸೇವಿಸಿ ಶ್ರೀ ತುಳಸಿಯಳ ಸೇವೆ ಪ್ರೀತಿಯಿಂದಲಿ ಮಾಡೆ ಗಾತರದ ಮಲವಳಿದು ಮಾತೆ ಯೆಂಬನಿತರೊಳು ಪಾತಕ ಪರಿಹರಿಸಿ ಪುನೀತರನು ಮಾಡುವಳು ಯಾತಕನುಮಾನವಯ್ಯ ಸುಧೆಗಡಲ ಮಥಿಸುವ ಸಮಯದಲಿ ವೈದ್ಯನಾಗಿ | ಪದುವನಾಭನು ತಾನು ಉದುಭವಿಸಿ ಬರಲಂದು | ಉದುರಿದುವು ಕಣ್ಣಿಂದ ಉದಕವುತ್ಸಹದಿಂದಲದೆ ತುಳಸಿ ನಾಮನಾಗೆ || ತ್ರಿದಶರೊಂದಿಸುತ ಮೋದದಿಂ ಕೊಂಡಾಡಿದರು | ಒದಗಿ ಸುಜನರು ತಮ್ಮ ಸದನದಲಿ ನಿತ್ಯ ತ್ಪದವಿಗೆ ಸಿದ್ಧವೆಂದು ಮುದದಿಂದ ತಿಳಿದು ವೃಂದಾವನ ರಚಿಸಿದರೈಯ||1|| ಮೂಲದಲಿ ಸರ್ವ ತೀರ್ಥಗಳುಂಟು ತನ್ಮದ್ಯೆ | ಕಾಲ ಮೀರದೆ ಸರ್ವ
ತುರುಕರಿಲ್ಲದ ಮನೆ ದಿರದಿಮ್ಮನೆ ತುರಕರ ನೋಡದ ಕಣ್ಣು ಶಿಖಿಗರಿಗಣ್ಣು ತುರಕರಿಗೆರಗದ ತಲೆ ಕಗ್ಗತ್ತಲೆ ತುರಕರ ಕಥಾಶ್ರವಣ ಕೇಳದ ಕರ್ಣ ಈಚಲಪರ್ಣ ತುರಕರುವಿನುಚ್ಛಿಷ್ಟ ಉಣ್ಣ ಬಾಯಿ ವಿಷಗಾಯಿ ||1|| ತುರಕರನಾಘ್ರಾಣಿಸದ ಮೂಗು ಅಡವಿಯ ಕೂಗು ತುರಕರಸೇವೆಸದಕರ ವಿಕಾರ ಪಾಮರ ತುರಕರ ಕೊಂಡಾಡದ ಜಿಹ್ವೆ ಅಧಮನ ಗುಂಹೆ ತುರಕರನೊದೆವ ಕಾಲು ಯಮನ ಪಾಲು ||2|| ತುರಕರ ಪ್ರಸಾದ ಉಣ್ಣದ ಹೊಟ್ಟೆ ಗೂಗಿನ ಮೊಟ್ಟೆ ತುರಕರನ ಚಿಂತಿಸದ ಮನ ಗಾರ್ಧಭ ಗಮನ ತುರಕರ ಕಾಯ್ದ ವಿಜಯವಿಠ್ಠಲರೇಯ ತುರಕರ ಕರುಣ ಪಡೆಯದವನು ಶುದ್ಧ
ತುರುಕರಿಲ್ಲದ ಮನೆ ದಿರದಿಮ್ಮನೆ Read More »
ತುತ್ತನ್ನವ ನಮಗಿಂದು ನೀಡಿರಮ್ಮಾ ನಾನು ಹತ್ತು ಸಾರೆ ಬಾರದಲೆ ತೊಲಗೆನಮ್ಮ ನಿರಾಧಾರಾದಿ ನಿದ್ರೆ ಬಾರದಮ್ಮ ವಿ ಚಾರಿಸು ತಾಯಿ ಪಾಲುವಲ್ಲೆನಮ್ಮ ಧಾರುಣಿ ಸಂಬಂಧ ಎನಗಾಗದಮ್ಮ ಇದಕ್ಕೆ ಸಾರಿ ಸಾರಿಗೆ ಬಾಯಿ ತೆರೆವೆನಮ್ಮ ||1|| ದೇಹಿ ಎಂಬೊದೆನ್ನ ಜಾತಿಧರ್ಮವಮ್ಮ ನಾನು ದ್ರೋಹಿಗಳಿಗೆ ಕರ ಚಾಚೆನಮ್ಮ ಆಹಾರಕ್ಕೆ ಬಲುದಿನ ಮೀರಿತಮ್ಮ ಸಂ ದೇಹವಿಲ್ಲದೆ ನಾರೇರು ಬಡಿಸಲಮ್ಮ ||2|| ಇದೇ ಕೇಳಿದೆನು ಇನ್ನು ಮೌನವಮ್ಮ ಬಲು ಸದಮಲ e್ಞÁನಿಗಳಿಗೆ ಪ್ರೀತಿಯಮ್ಮ ಮಧುಹರಿ ವಿಜಯವಿಠ್ಠಲ ಪೂರ್ಣನಮ್ಮ ಸರ್ವರ ಹೃದಯದೊಳಗಾನಂದವಾಸನಮ್ಮ ||3||
ತುತ್ತನ್ನವ ನಮಗಿಂದು ನೀಡಿರಮ್ಮಾ Read More »
ತುಂಗೆ ಬಂದಳು ದೇವೋತ್ತುಂಗ ವರಹನಾ ಮುಂಗೋರಿಯಲ್ಲಿ ಪುಟ್ಟಿ ಭಕ್ತ ನಿಕರನಾ ಹಿಂಗದೆ ಪೊರೆದು ಸುಖಂಗಳನೀವು ತಾ ಮಂಗಳಾಂಗೆ ಮಾತಂಗೆ ಸುಗಮನೆ ಕಾಳ ಪನ್ನಗವೇಣಿ ಕೋಕಿಲವಾಣಿ ಫಾಲ ಕಸ್ತುರಿ ಜಾಣೆ ಪಲ್ಲವಪಾಣಿ ವಾಲೆ ಮೂಗುತಿ ಅಣಿ ಮುತ್ತು ಕಠಾಣಿ ತೋಳು ಮಂದಾರಮಣಿ ಅರಿಗುಣಶ್ರೇಣಿ ಮೌಳಿಯಾ ಮೇಲಿನ ಜಾಳಿಗೆ ಸೂಸುಕಾ ವಾಲಲು ಕದಿಪಿನ ನೀಲಗೂದಲು ಭ್ರಮ ರಾಳಿಗಳಂತಿರೆ ಬಾಲ ಸುಧಾಕರ ಪೋಲುವ ವದನೇ||1|| ಕುಡುತೆಗಂಗಳ ನೀರೆ ಕಂಬುಕಂಧರೆ ಕಡಗ ಕಂಕಣದ್ವಾರೆ ಕೈಯ ಶೃಂಗಾರೇ ಜಡಿವ ಪದಕಹಾರೆ ಕಂಚಕಸೀರೆ ಮುಡಿದ ಪುಷ್ಪಂಗಳು
ತುಂಗೆ ಬಂದಳು ದೇವೋತ್ತುಂಗ ವರಹನಾ Read More »
ತಿಳಿದು ವಿಚಾರಿಸು ವಿಶ್ವದಲ್ಲಿ ಹಲವು ಜೀವಿಗಳೊಂದೆ ಪ್ರಕಾರ ಚರಿಸುವದು ಇರವು ನೊಣ ಪೋದರೆ ಏನಾದರೂ ಕ್ಲೇಶ ಬರುವುದೇ ಪ್ರತ್ಯಕ್ಷ ನೋಡಿದರು ಭರದಿಂದ ಆಲಿಸು ದೇಹ ಮಾತುರ ಬ್ಯಾರೆ ಇರುವದಲ್ಲದೆ ಒಳಗೆ ಚೇತನಾಡುವದೊಂದೆ ||1|| ಕೂಡಿಕೊಂಡವು ತಮ್ಮತಮ್ಮೊಳಗೆ ಭೂತಗಳು ಆಡಲೇನದು ಪೂರ್ವದ ನಿರ್ಮಾಣ ನಾಡೊಳಾಗಿದ್ದನಿತೆ ಸಮ್ಮಂಧವಲ್ಲದೆ ಬೀಡು ತೊರದಾಮ್ಯಲೆ ಬಿಂಕವೆತ್ತಣದೊ ||2|| ಹರಿಮಾಯದಿಂದಲಿ ನಾನು ನನ್ನದು ಎಂಬ ಗರುವಿಕೆ ಪುಟ್ಟುವದು ಮೋಹ ಪೆಚ್ಚಿ ನಿರಯದೊಳಿಳಿಯದೆ ವಿಜಯವಿಠ್ಠಲನ ಸ್ಮರಣೆಯಲಿ ಕುಣಿದಾಡು ಎಲ್ಲ ಸಮನ ನೋಡು||3||
ತಿಳಿದು ವಿಚಾರಿಸು ವಿಶ್ವದಲ್ಲಿ Read More »
ತಿರುದುಂಬುವ ನೀನು ತಿರುಮಲೇಶಾ ಮರುಗಲ್ಯಾತಕೆ ಇನ್ನು ಮನಸಿನೊಳಗೆ ಪ್ರತಿದಿನವು ಬಲಿರಾಯ ಬಲು ದಾನವನು ಮಾಡುತಿರಲಾಗಿ ಇಳಿಯ ಸುರÀವೇಷವನು ಧರಿಸಿ ಪೋಗಿ ಹಲುಬಿ ಬಾಯಿದೆರದು ತ್ರಿಪಾದ ತಿರಕೆ ಕೊಂಡು ನಿಳಿಯ ಬಾಗಿಲ ಕಾಯ್ದೊ ನಿಗಮ ಕುಲದಾತಾರಾ ||1|| ಗೋಪಳ್ಳಿಯಲಿ ಜನಿಸಿ ಗೋವುಗಳ ಕಾವುತ್ತ ಗೋಪಾಲತತಿ ವಡನೆ ವಡನಾಡುತ ತಾಪಸರು ಯಜ್ಞ ಕರ್ಮಾದಿಗಳು ಮಾಡುತಿರೆ ಶ್ರೀಪತಿ ಅನ್ನ ತಿರಿದುಂಡು ಕ್ಷುದಿಯನ್ನ ಕಳೆದೆ ||2|| ಅಂದು ಈ ಪರಿಯ ಯಾಚಕ ವೃತ್ತಿಯನು ಮಾಡಿ ಇಂದೆನ್ನ ಹೃತ್ಕಮಲದೊಳಗೆ ಬಂದೂ ನಿಂದು ಮನೆಮನೆ ತಿರದುಂಬುವ
ತಿರುದುಂಬುವ ನೀನು ತಿರುಮಲೇಶಾ Read More »
ತಿಮ್ಮ ನಿನ್ನಯ ಪಾದ ಒಮ್ಮಿಗಾದರು ನೆನೆದು ಕರ್ಮ ಪೋಪುವುದು ಎಂತೊ ಇಮ್ಮನಾವಾಗುವುದು ವ್ಯಾಮೋಹ ಸಂಗತಿಗೆ ಕಮ್ಮಗೋಲನ ಬದುಕೀಲಿ ರಂಗಾ ಹಾಳ ಹರಟಿಗೆ ಮನಾ ಹೇಳಿಸಿಕೊಳದೆವು ಬ್ಬಾಳುತನದಿಂದ ಕುಳಿತು ಕೇಳುವುದು ಕಿವಿಗೊಟ್ಟು ಅವರ ಕಿಂಕರನಾಗಿ ಹೇಳು ಇನ್ನೊಮ್ಮೆ ಎನುತಾ ಲಾಲಿಸಿ ಗತಿ ತಪ್ಪದಂತೆ ಜೋಡಿಸಿ ಮಾತು ಪೇಳುವೆನು ಕೈತಿರುವುತಾ ಶ್ರೀಲೋಲ ನಿನ್ನ ಕೀರ್ತನೆಗೆಯಿಲ್ಲದೊಂದು ಕೀಳು ವಾರ್ತೆಯ ತಾಹದೊ ಮನಸು||1|| ಧರೆಯನಾಳುವವನ ಸಮ್ಮುಖದಲ್ಲಿ ನಿಂದು ಕರವೆರಡು ನೊಸಲಿಗೆ ಚಾಚಿ ಕರುಣಿಸುವದೆಂದು ಮೊಗವೆತ್ತಿ ಪೊಗಳುವೆ ನಿನಗೆ ಸರಿ ಮಿಗಿಲು ಯಿಲ್ಲವೆಂದೂ ಮರಿಯದಲೆ
ತಿಮ್ಮ ನಿನ್ನಯ ಪಾದ ಒಮ್ಮಿಗಾದರು ನೆನೆದು Read More »