ನಮಿ ನಮಿ ವಿವೇಕಾನಂದ ಸ್ವಾಮಿ

ನಮಿ ನಮಿ ವಿವೇಕಾನಂದ ಸ್ವಾಮಿ ಜನಗಣಮನ ಉದ್ವೋಧಕ ಹೇ|ಜ್ಞಾನ-ಪಥ ಬಹಿಯ ಎಲೆ ನಮಿ ಅಜ್ಞಾನ-ಮನ ಜ್ಞಾನ-ದ್ಯೋತಕ ಹೇ|| ಭಕ್ತೇ ದಿಲೇ ತುಮಿ ಭಕ್ತಿರ ಪ್ರಾಣಅಜ್ಞಾನ ದಿಲೆ ಜ್ಞಾನ-ಅಲೋಕ ದಾನ|ಯೋಗಿ ಜಾನೆ ದಿಲೆ ತುಮಿ ಯೋಗ ಅನುಧ್ಯಾನಅಂತರ-ಮಲಿನತಾ-ಶೋಧಕ ಹೇ|| ಅರ್ತೇರ ಸೇವಾ ತವ ಚಿಲ ಮಹಾಧರ್ಮವ್ಯಥಿತೇರ ವ್ಯಥಾ ದೂರ ಛಿಲ ಮಹಾಕರ್ಮ|ದರದೇ ಭರಾ ಛಿಲ ಸದಾ’ ತವ ಮರ್ಮದೀನದುಃಖೀ ಜನ ಸೇವಕ ಹೇ|| ಸಬಾರ್ ಉಪಾರೆ ಮಾನುಷ್‌ಈ ಸತ್ಯದೇಖಿಲೇ ಈಶ್ವರ ಪ್ರೇಮೇತೇ ಮೂರ್ತಾಮಿಥ್ಯಾ ಜಗತೇ ಪ್ರೇಮೈ ಯೆ ಸತ್ಯ […]

ನಮಿ ನಮಿ ವಿವೇಕಾನಂದ ಸ್ವಾಮಿ Read More »

ನಾ ಪಾಪಿಯಾದರೂ ನನ್ನ ಕಡೆಗಾಲದಲಿ

ದುರ್ಗಾ – ಝಪತಾಲ ನಾ ಪಾಪಿಯಾದರೂ ನನ್ನ ಕಡೆಗಾಲದಲಿ ನಿನ್ನ ಶ್ರೀನಾಮವನು ಜಪಿಸುತಿರಲು ಮುಕ್ತಿಗೊಯ್ಯದೆ ನೀನು ಬಿಡುವಳೇನು ? ಸ್ತ್ರೀಹತ್ಯ ಪಶುಹತ್ಯ ಭ್ರೂಣ ಬ್ರಾಹ್ಮಣ ಹತ್ಯ ಇನಿತೆಲ್ಲ ಪಾಪಗಳ ಮಾಡಿದ್ದರೂ ನಿನ್ನ ಶ್ರೀಶುಭನಾಮ ನನ್ನ ದುರಿತವ ನೀಗಿ ಬ್ರಹ್ಮಪದವಿಯ ಕಡೆಗೆ ಎತ್ತದೇನು? – ವಚನವೇದ

ನಾ ಪಾಪಿಯಾದರೂ ನನ್ನ ಕಡೆಗಾಲದಲಿ Read More »

ನನ್ನ ಜನನಿ ನಿನ್ನ ಜನನಿ

ಅಲೈಯಾ ಬಿಲಾವಲ್ – ಏಕತಾಲ ನನ್ನ ಜನನಿ ನಿನ್ನ ಜನನಿ ಎಂಬ ಭೇದ ಸಲ್ಲದು| ಅವಳು ಜಗದ ಕೋಟಿಕೋಟಿ ಜೀವಜನ್ಮದಾತೆಯು||   ತಾಯೆ ನಿನ್ನ ಸಮ್ಮುಖದಲ್ಲಿ ನಾವು ಕೂಡಿ ನಲಿವೆವು| ನಿನ್ನ ವಾತ್ಸಲ್ಯಸುಧೆಯ ನೀಡಿ ಎಮ್ಮ ಕಾಪಿಡು||   ಅಮ್ಮಾ ಎಂದು ಎಷ್ಟು ಬಾರಿ ಕರೆದರದೂ ಸಾಲದು! ತಾಯ ಮಧುರ ಋಣವ ನಾವು ತೀರಿಸಲೇ ಆರೆವು||   ಮೈಮನಗಳ ಮರೆಸುವಂಥ ದಿವ್ಯನಾಮವಿಲ್ಲಿದೆ! ಅಮ್ಮಾ ಎಂಬ ನಾಮಸುಧೆಗೆ ಜಗದಿ ಸಾಟಿ ಎಲ್ಲಿದೆ||   ಪರಬ್ರಹ್ಮ ಆದಿಶಕ್ತಿ ಎನಿತೊ ನಾಮ

ನನ್ನ ಜನನಿ ನಿನ್ನ ಜನನಿ Read More »

ನಿಖಿಲ ಮಾತೃಹೃದಯ

ನಿಖಿಲ ಮಾತೃಹೃದಯ ಮಥಿಸಿ ಪ್ರೇಮದಮೃತ ಧರೆಗೆ ತಂದೆ ಯಾರು ನೀನು ನಿತ್ಯ ನಿರ್ಮಲ ಶುದ್ಧ ಜ್ಯೋತಿ ಬಂದಿಹೇ || ಅನ್ನದಾಯಿನಿ ಅನ್ನಪೂರ್ಣೇ ಮಾತೃಮೂರ್ತಿ ಪ್ರೀತಿ ತುಂಬಿ ನೊಂದ ಜನಕೆ ನೆರವ ನೀಡೆ ಇಳೆಗೆ ಇಳಿದು ಇಳಿದು ಇಳಿದು ಇಳಿದು ಬಂದೆ || ಹೇ ಶಾರದೇ ವರದೇ ಶುಭದೇ ಜ್ಞಾನದೇ ಭಕ್ತಿದೇ ಭುಕ್ತಿದೇ ಮುಕ್ತಿದೇ ನಿನ್ನ ಕೃಪಾಬಲದಿ ಬೇಗ ಸಫಲವಾಗಲೆಮ್ಮ ಯೋಗ ||

ನಿಖಿಲ ಮಾತೃಹೃದಯ Read More »

ನೀನಿಕ್ಕಿದ ಸರಿದೊಡಕನಾರು ಬಿಡಿಸಬಲ್ಲರಯ್ಯಾ ?

ನೀನಿಕ್ಕಿದ ಸರಿದೊಡಕನಾರು ಬಿಡಿಸಬಲ್ಲರಯ್ಯಾ ? ನೀನಿಕ್ಕಿದ ಕಟ್ಟನಾರು ಕಳೆಯಬಲ್ಲರಯ್ಯಾ ? ನೀ ಸೀಳಿದ ರೇಖೆಯನಾರು ಮೀರಬಹುದಯ್ಯಾ ? ಚೆನ್ನಮಲ್ಲಿಕಾರ್ಜುನಯ್ಯಾ, ನೀನು ಕಳುಹಿದ ಸೆರೆಗೆ ಮಾರುವೋಗದಿರ್ದಡೆ ಎನ್ನಿಚ್ಚೆಯ ಅಯ್ಯಾ ?

ನೀನಿಕ್ಕಿದ ಸರಿದೊಡಕನಾರು ಬಿಡಿಸಬಲ್ಲರಯ್ಯಾ ? Read More »

ನೀನು ಹೋಗೆಂದಡೆ ಹೋದೆನಯ್ಯಾ.

ನೀನು ಹೋಗೆಂದಡೆ ಹೋದೆನಯ್ಯಾ. ನೀನು ಹುಟ್ಟೆಂದಡೆ ಹುಟ್ಟಿದೆನಯ್ಯಾ. ನೀನು ಬೆಳೆಯೆಂದ ಠಾವಿನಲ್ಲಿ ಬೆಳೆದೆನಯ್ಯಾ. ನೀನು ಹಿಡಿಯೆಂದವರ ಮನೆಯ ಹೊಕ್ಕೆನಯ್ಯಾ. ನೀನು ಮಾಡೆಂದ ಕೆಲಸವ ಮಾಡಿಕೊಂಡು ನಿಮ್ಮ ಬೆಸಲಾದ ಮಗಳಾಗಿರ್ದೆ ಕಾಣಾ ಚೆನ್ನಮಲ್ಲಿಕಾರ್ಜುನಾ.

ನೀನು ಹೋಗೆಂದಡೆ ಹೋದೆನಯ್ಯಾ. Read More »

ನೀರಕ್ಷೀರದಂತೆ ನೀನಿಪ್ಪೆಯಾಗಿ,

ನೀರಕ್ಷೀರದಂತೆ ನೀನಿಪ್ಪೆಯಾಗಿ, ಆವುದು ಮುಂದು, ಆವುದು ಹಿಂದು ಎಂದರಿಯೆ. ಆವುದು ಕರ್ತೃ, ಆವುದು ಭೃತ್ಯನೆಂದರಿಯೆ. ಆವುದು ಘನ, ಆವುದು ಕಿರಿದೆಂದರಿಯೆ. ಚೆನ್ನಮಲ್ಲಿಕಾರ್ಜುನಯ್ಯಾ, ನೀನೊಲಿದು ಕೊಂಡಾಡಿದಡೆ ಇರುಹೆ ರುದ್ರನಾಗದೆ ಹೇಳಯ್ಯಾ ?

ನೀರಕ್ಷೀರದಂತೆ ನೀನಿಪ್ಪೆಯಾಗಿ, Read More »

ನಿಮ್ಮ ನಿಲವಿಂಗೆ ನೀವು ನಾಚಬೇಡವೆ ?

ನಿಮ್ಮ ನಿಲವಿಂಗೆ ನೀವು ನಾಚಬೇಡವೆ ? ಅನ್ಯರ ಕೈಯಲ್ಲಿ ಅಲ್ಲ ಎನಿಸಿಕೊಂಬ ನಡೆನುಡಿ ಏಕೆ ? ಅಲ್ಲ ಎನಿಸಿಕೊಂಬುದರಿಂದ ಆ ಕ್ಷಣವೆ ಸಾವುದು ಲೇಸು ಕಾಣಾ ಚೆನ್ನಮಲ್ಲಿಕಾರ್ಜುನಾ.

ನಿಮ್ಮ ನಿಲವಿಂಗೆ ನೀವು ನಾಚಬೇಡವೆ ? Read More »

ನಿಮ್ಮ ಒಕ್ಕುದ ಕೊಂಡು ಓಲಾಡುವೆ,

ನಿಮ್ಮ ಒಕ್ಕುದ ಕೊಂಡು ಓಲಾಡುವೆ, ಮಿಕ್ಕುದ ಕೊಂಡು ಕುಣಿದಾಡುವೆ. ನಿಮ್ಮ ತೊತ್ತಿನ ತೊತ್ತಿನ ಕರುಣಪ್ರಸಾದವ ಕೊಂಡು ನಿತ್ಯಳಾಗಿ ಬದುಕಿದೆನು ಕಾಣಾ ಚೆನ್ನಮಲ್ಲಿಕಾರ್ಜುನಾ.

ನಿಮ್ಮ ಒಕ್ಕುದ ಕೊಂಡು ಓಲಾಡುವೆ, Read More »

ನಿನ್ನರಿಕೆಯ ನರಕವೆ ಮೋಕ್ಷ ನೋಡಯ್ಯಾ,

ನಿನ್ನರಿಕೆಯ ನರಕವೆ ಮೋಕ್ಷ ನೋಡಯ್ಯಾ, ನಿನ್ನನರಿಯದ ಮುಕ್ತಿಯೆ ನರಕ ಕಂಡಯ್ಯಾ. ನೀನೊಲ್ಲದ ಸುಖವೆ ದಃಖ ಕಂಡಯ್ಯಾ, ನೀನೊಲಿದ ದುಃಖವೆ ಪರಮಸುಖ ಕಂಡಯ್ಯಾ. ಚೆನ್ನಮಲ್ಲಿಕಾರ್ಜುನಯ್ಯಾ, ನೀ ಕಟ್ಟಿ ಕೆಡಹಿದ ಬಂಧನವ ನಿರ್ಬಂಧವೆಂದಿಪ್ಪೆನು.

ನಿನ್ನರಿಕೆಯ ನರಕವೆ ಮೋಕ್ಷ ನೋಡಯ್ಯಾ, Read More »

ನಿತ್ಯವೆನ್ನ ಮನೆಗೆ ನಡೆದುಬಂದಿತ್ತಿಂದು.

ನಿತ್ಯವೆನ್ನ ಮನೆಗೆ ನಡೆದುಬಂದಿತ್ತಿಂದು. ಮುಕ್ತಿ ಎನ್ನ ಮನೆಗೆ ನಡೆದುಬಂದಿತ್ತಿಂದು. ಜಯ ಜಯಾ, ಹರಹರಾ, ಶಂಕರ ಶಂಕರಾ, ಗುರುವೆ ನಮೋ, ಪರಮಗುರುವೆ ನಮೋ. ಚೆನ್ನಮಲ್ಲಿಕಾರ್ಜುನನ ತೋರಿದ ಗುರುವೆ ನಮೋ ನಮೋ.

ನಿತ್ಯವೆನ್ನ ಮನೆಗೆ ನಡೆದುಬಂದಿತ್ತಿಂದು. Read More »

ನಿತ್ಯವೆಂಬ ನಿಜಪದವೆನ್ನ ಹತ್ತೆಸಾರ್ದು ಕಂಡಬಳಿಕ

ನಿತ್ಯವೆಂಬ ನಿಜಪದವೆನ್ನ ಹತ್ತೆಸಾರ್ದು ಕಂಡಬಳಿಕ ಚಿತ್ತ ಕರಗಿ ಮನ ಕೊರಗಿ ಹೃದಯವರಳಿತ್ತು ನೋಡಯ್ಯಾ. ಒತ್ತಿ ಬಿಗಿದ ಸೆರೆಯೊಳಗೆ ಅತ್ತಿತ್ತಲೆಂದರಿಯದೆ ಚೆನ್ನಮಲ್ಲಿಕಾರ್ಜುನನ ಪಾದದಲ್ಲಿ ಮರೆದೊರಗಿದೆ ನೋಡಯ್ಯಾ.

ನಿತ್ಯವೆಂಬ ನಿಜಪದವೆನ್ನ ಹತ್ತೆಸಾರ್ದು ಕಂಡಬಳಿಕ Read More »

ನಿತ್ಯತೃಪ್ತಂಗೆ ನೈವೇದ್ಯದ ಹಂಗೇತಕ್ಕೆ ?

ನಿತ್ಯತೃಪ್ತಂಗೆ ನೈವೇದ್ಯದ ಹಂಗೇತಕ್ಕೆ ? ಸುರಾಳ ನಿರಾಳಂಗೆ ಮಜ್ಜನದ ಹಂಗೇತಕ್ಕೆ ? ಸ್ವಯಂಜ್ಯೋತಿರ್ಮಯಂಗೆ ದೀಪಾರಾಧನೆಯ ಹಂಗೇತಕ್ಕೆ ? ಸುವಾಸನೆ ಸೂಕ್ಷ್ಮಗಂಧ ಕರ್ಪೂರಗೌರಂಗೆ ಪುಷ್ಪದ ಹಂಗೇತಕ್ಕೆ ? ಮಾಟದಲಿ ಮನ ನಂಬುಗೆಯಿಲ್ಲದ, ಅಹಂಕಾರಕ್ಕೀಡಾದ, ಭಕ್ತಿಯೆಂಬ ಪಸಾರವನಿಕ್ಕಿ ಹೊಲೆಹದಿನೆಂಟುಜನ್ಮವ ಹೊರೆವುದರಿಂದ ಅಂಗೈಯಲೊರಸಿ ಮುಕ್ತಿಯ ಮೂಲ ಶಿಖಿರಂಧ್ರದ ಕಾಮನ ಸುಟ್ಟು ಶುದ್ಭಸ್ಫಟಿಕ ಸ್ವಯಂಜ್ಯೋತಿಯನು ಸುನಾಳದಿಂದ ಹಂ ಕ್ಷಂ ಎಂಬೆರಡಕ್ಷರವ ಸ್ವಯಾನುಭಾವಭಕ್ತಿನಿರ್ವಾಣವಾದವರನೆನಗೊಮ್ಮೆ ತೋರಿದೆ. ಶ್ರೀಗಿರಿ ಚೆನ್ನ ಮಲ್ಲಿಕಾರ್ಜುನಾ.

ನಿತ್ಯತೃಪ್ತಂಗೆ ನೈವೇದ್ಯದ ಹಂಗೇತಕ್ಕೆ ? Read More »

ನೋಡೆನೆಂಬವರ ನೋಡಿಸುವೆ,

ನೋಡೆನೆಂಬವರ ನೋಡಿಸುವೆ, ನುಡಿಯೆನೆಂಬವರ ನುಡಿಯಿಸುವೆ, ಒಲ್ಲೆನೆಂಬವರನೊಲಿಸುವೆ, ಒಲಿದೆನೆಂಬವರ ತೊಲಗಿಸುವೆ ನೋಡಯ್ಯಾ. ಚೆನ್ನಮಲ್ಲಿಕಾರ್ಜುನಯ್ಯಾ, ನೀನಲ್ಲದನ್ಯರ ಮುಖದ ನೋಡೆನೆಂದಡೆ ನೋಡುವಂತೆ ಮಾಡಿದೆಯಲ್ಲಾ ಲಿಂಗವೆ ?

ನೋಡೆನೆಂಬವರ ನೋಡಿಸುವೆ, Read More »

ನೋಡುವ ಕಂಗಳಿಗೆ ರೂಪಿಂಬಾಗಿರಲು

ನೋಡುವ ಕಂಗಳಿಗೆ ರೂಪಿಂಬಾಗಿರಲು ನೀವು ಮನನಾಚದೆ ಬಂದಿರಣ್ಣಾ. ಕೇಳಿದ ಶ್ರೋತ್ರಸೊಗಸಿಗೆ ನೀವು ಮರುಳಾಗಿ ಬಂದಿರಣ್ಣಾ. ನಾರಿಯೆಂಬ ರೂಪಿಂಗೆ ನೀವು ಒಲಿದು ಬಂದಿರಣ್ಣಾ. ಮೂತ್ರವು ಬಿಂದು ಒಸರುವ ನಾಳವೆಂದು ಕಂಗಾಣದೆ ಮುಂದುಗೆಟ್ಟು ಬಂದಿರಣ್ಣಾ. ಬುದ್ಧಿಗೇಡಿತನದಿಂದ ಪರಮಾರ್ಥದ ಸುಖವ ಹೋಗಲಾಡಿಸಿಕೊಂಡು ಇದಾವ ಕಾರಣವೆಂದರಿಯದೆ, ನೀವು ನರಕಹೇತುವೆಂದರಿತು ಮನ ಹೇಸದೆ ಬಂದಿರಣ್ಣಾ. ಚೆನ್ನಮಲ್ಲಿಕಾರ್ಜುನನಲ್ಲದೆ ಮಿಕ್ಕಿಹ ಪುರುಷರೆನಗೆ ಸಹೋದರರು. ಅಛೀ ಹೋಗಾ ಮರುಳೆ.

ನೋಡುವ ಕಂಗಳಿಗೆ ರೂಪಿಂಬಾಗಿರಲು Read More »

ನೆಲದ ಮರೆಯ ನಿಧಾನದಂತೆ

ನೆಲದ ಮರೆಯ ನಿಧಾನದಂತೆ ಫಲದ ಮರೆಯ ರುಚಿಯಂತೆ ಶಿಲೆಯ ಮರೆಯ ಹೇಮದಂತೆ ತಿಲದ ಮರೆಯ ತೈಲದಂತೆ ಮರದ ಮರೆಯ ತೇಜದಂತೆ ಭಾವದ ಮರೆಯ ಬ್ರಹ್ಮವಾಗಿಪ್ಪ ಚೆನ್ನಮಲ್ಲಿಕಾರ್ಜುನನ ನಿಲವನರಿಯಬಾರದು.

ನೆಲದ ಮರೆಯ ನಿಧಾನದಂತೆ Read More »

ನಾಳದ ಮರೆಯ ನಾಚಿಕೆ,

ನಾಳದ ಮರೆಯ ನಾಚಿಕೆ, ನೂಲಮರೆಯಲ್ಲಿ ಅಡಗಿತ್ತೆಂದು ಅಂಜುವರು, ಅಳುಕುವರು. ಮನ ಮೆಚ್ಚಿದಭಿಮಾನಕ್ಕೆ ಆವುದು ಮರೆ ಹೇಳಾ ? ಕಾಯ ಮಣ್ಣೆಂದು ಕಳೆದ ಬಳಿಕ, ದೇಹದಭಿಮಾನ ಅಲ್ಲಿಯೇ ಹೋಯಿತ್ತು. ಪ್ರಾಣ ಬಯಲೆಂದು ಕಳೆದ ಬಳಿಕ, ಮನದ ಲಜ್ಜೆಯಲ್ಲಿಯೆ ಹೋಯಿತ್ತು. ಚೆನ್ನಮಲ್ಲಿಕಾರ್ಜುನನ ಕೂಡಿ ಲಜ್ಜೆಗೆಟ್ಟವಳ ಉಡಿಗೆಯ ಸೆಳೆದುಕೊಂಡಡೆ, ಮುಚ್ಚಿದ ಸೀರೆ ಹೋದರೆ ಅಂಜುವರೆ ಮರುಳೆ ?

ನಾಳದ ಮರೆಯ ನಾಚಿಕೆ, Read More »

ನಾನುಣ್ಣದ ಮುನ್ನವೆ ಜಂಗಮಕ್ಕೆ

ನಾನುಣ್ಣದ ಮುನ್ನವೆ ಜಂಗಮಕ್ಕೆ ಅಮೃತಾನ್ನಾದಿ ನೈವೇದ್ಯವ ನೀಡುವೆ. ನಾನುಡದ ಮುನ್ನವೆ ಜಂಗಮಕ್ಕೆ ದೇವಾಂಗಾದಿ ವಸ್ತ್ರವನುಡಿಸುವೆ. ನಾನು ಹೂಸದ ಮುನ್ನವೆ ಜಂಗಮಕ್ಕೆ ಸುಗಂಧಾದಿ ಪರಿಮಳದ್ರವ್ಯವ ಹೂಸುವೆ. ನಾನು ಮುಡಿಯದ ಮುನ್ನವೆ ಜಂಗಮಕ್ಕೆ ಪರಿಪರಿಯ ಪುಷ್ಪವ ಮುಡಿಸುವೆ. ನಾನು ತೊಡದ ಮುನ್ನವೆ ಜಂಗಮಕ್ಕೆ ತೊಡಿಗೆಯ ತೊಡಿಸುವೆ. ನಾನಾವಾವ ಭೋಗವ ಭೋಗಿಸುವದ ಜಂಗಮಕ್ಕೆ ಭೋಗಿಸಲಿತ್ತು, ಆ ಶೇಷಪ್ರಸಾದವ ಲಿಂಗಕ್ಕಿತ್ತು. ಭೋಗಿಸಿದ ಬಳಿಕಲಲ್ಲದೆ ಭೋಗಿಸಿದಡೆ ಬಸವಣ್ಣಾ, ನಿಮ್ಮಾಣೆಯಯ್ಯಾ ಚೆನ್ನಮಲ್ಲಿಕಾರ್ಜುನಾ.

ನಾನುಣ್ಣದ ಮುನ್ನವೆ ಜಂಗಮಕ್ಕೆ Read More »

ನಾನು ಮಜ್ಜನವ ಮಾಡುವುದಕ್ಕೆ ಮುನ್ನವೆ

ನಾನು ಮಜ್ಜನವ ಮಾಡುವುದಕ್ಕೆ ಮುನ್ನವೆ ಜಂಗಮಕ್ಕೆ ಮಜ್ಜನವ ಮಾಡಿಸುವೆ. ನಾನು ಸೀರೆಯನುಡುವುದಕ್ಕೆ ಮುನ್ನವೆ ಜಂಗಮಕ್ಕೆ ದೇವಾಂಗವನುಡಿಸುವೆ. ನಾನು ಪರಿಮಳವ ಲೇಪಿಸುವುದಕ್ಕೆ ಮುನ್ನವೆ ಜಂಗಮಕ್ಕೆ ಸುಗಂಧದ್ರವ್ಯಂಗಳ ಲೇಪಿಸುವೆ. ನಾನು ಅಕ್ಷತೆಯನಿಡುವುದಕ್ಕೆ ಮುನ್ನವೆ ಜಂಗಮಕ್ಕೆ ಅಕ್ಷತೆಯನಿಡುವೆ. ನಾನು ಪುಷ್ಪವ ಮುಡಿವುದಕ್ಕೆ ಮುನ್ನವೆ ಜಂಗಮಕ್ಕೆ ಪರಿಮಳಪುಷ್ಪವ ಮುಡಿಸುವೆ. ನಾನು ಧೂಪವಾಸನೆಯ ಕೊಳ್ಳುವ ಮುನ್ನವೆ ಜಂಗಮಕ್ಕೆ ಧೂಪವಾಸನೆಯ ಕೊಡುವೆ. ನಾನು ದೀಪಾರತಿಯ ನೋಡುವ ಮುನ್ನವೆ ಜಂಗಮಕ್ಕೆ ಆರತಿಯ ನೋಡಿಸುವೆ. ನಾನು ಸಕಲ ಪದಾರ್ಥಂಗಳ ಸ್ವೀಕರಿಸುವ ಮುನ್ನವೆ ಜಂಗಮಕ್ಕೆ ಮೃಷ್ಟಾನ್ನವ ನೀಡುವೆ. ನಾನು ಪಾನಂಗಳ

ನಾನು ಮಜ್ಜನವ ಮಾಡುವುದಕ್ಕೆ ಮುನ್ನವೆ Read More »

ನಾನು ನಿನಗೊಲಿದೆ, ನೀನು ಎನಗೊಲಿದೆ.

ನಾನು ನಿನಗೊಲಿದೆ, ನೀನು ಎನಗೊಲಿದೆ. ನೀನೆನ್ನನಗಲದಿಪ್ಪೆ, ನಾನಿನ್ನನಗಲದಿಪ್ಪೆನಯ್ಯಾ. ನಿನಗೆ ಎನಗೆ ಬೇರೊಂದು ಠಾವುಂಟೆ ? ನೀನು ಕರುಣಿಯೆಂಬುದ ಬಲ್ಲೆನು ; ನೀನಿರಿಸಿದ ಗತಿಯೊಳಗಿಪ್ಪವಳಾನು. ನೀನೆ ಬಲ್ಲೆ ಚೆನ್ನಮಲ್ಲಿಕಾರ್ಜುನಾ.

ನಾನು ನಿನಗೊಲಿದೆ, ನೀನು ಎನಗೊಲಿದೆ. Read More »

ನಾಣಮರೆಯ ನೂಲು ಸಡಿಲಲು

ನಾಣಮರೆಯ ನೂಲು ಸಡಿಲಲು ನಾಚುವರು ನೋಡಾ ಗಂಡು ಹೆಣ್ಣೆಂಬ ಜಾತಿಗಳು. ಪ್ರಾಣದೊಡೆಯ ಜಗದೊಳಗೆ ಮುಳುಗಲು ತೆರಹಿಲ್ಲದಿರಲು ದೇವರ ಮುಂದೆ ನಾಚಲೆಡೆಯುಂಟೆ ? ಚೆನ್ನಮಲ್ಲಿಕಾರ್ಜುನ ಜಗವೆಲ್ಲ ಕಣ್ಣಾಗಿ ನೋಡುತ್ತಿರಲು ಮುಚ್ಚಿ ಮರಸುವ ಠಾವಾವುದು ಹೇಳಯ್ಯಾ ?

ನಾಣಮರೆಯ ನೂಲು ಸಡಿಲಲು Read More »

ನಾ ಹುಟ್ಟಿದಲ್ಲಿ ಸಂಸಾರ ಹುಟ್ಟಿತ್ತು.

ನಾ ಹುಟ್ಟಿದಲ್ಲಿ ಸಂಸಾರ ಹುಟ್ಟಿತ್ತು. ಸಂಸಾರ ಹುಟ್ಟಿದಲ್ಲಿ ಅe್ಞನ ಹುಟ್ಟಿತ್ತು. ಅe್ಞನ ಹುಟ್ಟಿದಲ್ಲಿ ಆಶೆ ಹುಟ್ಟಿತ್ತು. ಆಶೆ ಹುಟ್ಟಿದಲ್ಲಿ ಕೋಪ ಹುಟ್ಟಿತ್ತು. ಆ ಕೋಪಾಗ್ನಿಯ ತಾಮಸಧೂಮ್ರ ಮುಸುಕಿದಲ್ಲಿ ನಾ ನಿಮ್ಮ ಮರೆದು ಭವದುಃಖಕ್ಕೀಡಾದೆ. ನೀ ಕರುಣದಿಂದೆತ್ತಿ ಎನ್ನ ಮರಹ ವಿಂಗಡಿಸಿ ನಿಮ್ಮ ಪಾದವನರುಹಿಸಯ್ಯಾ, ಚೆನ್ನಮಲ್ಲಿಕಾರ್ಜುನಾ.

ನಾ ಹುಟ್ಟಿದಲ್ಲಿ ಸಂಸಾರ ಹುಟ್ಟಿತ್ತು. Read More »

ನಮಗೆ ನಮ್ಮ ಲಿಂಗದ ಚಿಂತೆ, ನಮಗೆ ನಮ್ಮ ಭಕ್ತರ ಚಿಂತೆ,

ನಮಗೆ ನಮ್ಮ ಲಿಂಗದ ಚಿಂತೆ, ನಮಗೆ ನಮ್ಮ ಭಕ್ತರ ಚಿಂತೆ, ನಮಗೆ ನಮ್ಮ ಆದ್ಯರ ಚಿಂತೆ, ನಮಗೆ ನಮ್ಮ ಚೆನ್ನಮಲ್ಲಿಕಾರ್ಜುನಯ್ಯನ ಚಿಂತೆಯಲ್ಲದೆ ಲೋಕದ ಮಾತು ನಮಗೇಕಣ್ಣಾ ?

ನಮಗೆ ನಮ್ಮ ಲಿಂಗದ ಚಿಂತೆ, ನಮಗೆ ನಮ್ಮ ಭಕ್ತರ ಚಿಂತೆ, Read More »

ನಡೆಶುಚಿ, ನುಡಿಶುಚಿ, ತನುಶುಚಿ, ಮನಶುಚಿ, ಭಾವಶುಚಿ.

ನಡೆಶುಚಿ, ನುಡಿಶುಚಿ, ತನುಶುಚಿ, ಮನಶುಚಿ, ಭಾವಶುಚಿ. ಇಂತೀ ಪಂಚ ತೀರ್ಥಂಗಳನೊಳಕೊಂಡು ಮತ್ರ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನಾ ?

ನಡೆಶುಚಿ, ನುಡಿಶುಚಿ, ತನುಶುಚಿ, ಮನಶುಚಿ, ಭಾವಶುಚಿ. Read More »

ನಡೆಯದ ನುಡಿಗಡಣ, ಮಾಡದ ಕಲಿತನ,

ನಡೆಯದ ನುಡಿಗಡಣ, ಮಾಡದ ಕಲಿತನ, ಚಿತ್ರದಸತಿಯ ಶೃಂಗಾರವದೇತಕ್ಕೆ ಪ್ರಯೋಜನ ? ಎಲೆಯಿಲ್ಲದ ಮರನು, ಜಲವಿಲ್ಲದ ನದಿಯು, ಗುಣಿಯಲ್ಲದ ಅವಗುಣಿಯ ಸಂಗವದೇತಕ್ಕೆ ಪ್ರಯೋಜನ ? ದಯವಿಲ್ಲದ ಧರ್ಮ, ಉಭಯವಿಲ್ಲದ ಭಕ್ತಿಯು, ನಯವಿಲ್ಲದ ಶಬ್ದವದೇತಕ್ಕೆ ಪ್ರಯೋಜನ ಎನ್ನ ದೇವ ಚೆನ್ನಮಲ್ಲಿಕಾರ್ಜುನಾ ?

ನಡೆಯದ ನುಡಿಗಡಣ, ಮಾಡದ ಕಲಿತನ, Read More »