ಉಬ್ಬದಿರು ಉಬ್ಬದಿರು
ಉಬ್ಬದಿರು ಉಬ್ಬದಿರು ಎಲೆ ಮಾನವ | ಹೆಬ್ಬುಲಿಯಂತೆ ಯಮ ಬೊಬ್ಬಿಡುತ ಕಾದಿರುವ|| ಸಾಗರದ ತೆರೆಯಂತೆ ಸಾವು ಹುಟ್ಟಿರಲಾಗಿ ಭೋಗಭಾಗ್ಯಗಳೆಂದು ಬಳಲಲೇಕೋ| ನಾಗಹೆಡೆ ನೆರಳಲ್ಲಿ ನಡುಗೋ ಕಪ್ಪೆಯ ತೆರದಿ ಕೂಗಿ ಚೀರಿದರೆ ನಿನ್ನಾಗ ಕೇಳುವರೆ|| ಮಾಳಿಗೆ ಮನೆಯೆಂದು ಮತ್ತೆ ಸತಿಸುತರೆಂದು ಜಾಳಿಗೆ ಧನಧಾನ್ಯ ಪಶುಗಳೆಂದು| ವೇಳೆ ತಪ್ಪದೆ ತಿಂಬ ಕೂಳು ತನಗುಂಟೆಂದು ಗಾಳಿಗೊಡ್ಡಿದ ದೀಪ ಬದುಕು ಬಯಲು || ಅಸ್ಧಿರದ ಭವದೊಳಗೆ ಅತಿಶಯಗಳಣಿಸದಲೆ ವಸ್ತು ಇದರಲಿ ಕೇಳು ವೈರಾಗ್ಯವ| ವಿಸ್ತಾರ ಮಹಿಮ ಶ್ರೀ ಪುರಂದರವಿಟ್ಠಲನ ಸ್ವಸ್ಥಚಿತ್ತದಿ ನೆನೆದು ಮುಕ್ತಿ […]