ಒಮ್ಮೆ ಕಾಮನ ಕಾಲ ಹಿಡಿವೆ,
ಒಮ್ಮೆ ಕಾಮನ ಕಾಲ ಹಿಡಿವೆ, ಮತ್ತೊಮ್ಮೆ ಚಂದ್ರಮಂಗೆ ಸೆರಗೊಡ್ಡಿ ಬೇಡುವೆ. ಸುಡಲೀ ವಿರಹವ, ನಾನಾರಿಗೆ ಧೃತಿಗೆಡುವೆ ? ಚೆನ್ನಮಲ್ಲಿಕಾರ್ಜುನ ಕಾರಣ ಎಲ್ಲರಿಗೆ ಹಂಗುಗಿತ್ತಿಯಾದೆನವ್ವಾ.
ಒಮ್ಮೆ ಕಾಮನ ಕಾಲ ಹಿಡಿವೆ, Read More »
ಒಮ್ಮೆ ಕಾಮನ ಕಾಲ ಹಿಡಿವೆ, ಮತ್ತೊಮ್ಮೆ ಚಂದ್ರಮಂಗೆ ಸೆರಗೊಡ್ಡಿ ಬೇಡುವೆ. ಸುಡಲೀ ವಿರಹವ, ನಾನಾರಿಗೆ ಧೃತಿಗೆಡುವೆ ? ಚೆನ್ನಮಲ್ಲಿಕಾರ್ಜುನ ಕಾರಣ ಎಲ್ಲರಿಗೆ ಹಂಗುಗಿತ್ತಿಯಾದೆನವ್ವಾ.
ಒಮ್ಮೆ ಕಾಮನ ಕಾಲ ಹಿಡಿವೆ, Read More »
ಒಬ್ಬಂಗೆ ಇಹವುಂಟು ಒಬ್ಬಂಗೆ ಪರವುಂಟು, ಒಬ್ಬಂಗೆ ಇಹವಿಲ್ಲ ಒಬ್ಬಂಗೆ ಪರವಿಲ್ಲ. ಒಬ್ಬಂಗೆ ಇಹಪರವೆರಡೂ ಇಲ್ಲ. ಚೆನ್ನಮಲ್ಲಿಕಾರ್ಜುನದೇವರ ಶರಣರಿಗೆ ಇಹಪರವೆರಡೂ ಉಂಟು.
ಒಬ್ಬಂಗೆ ಇಹವುಂಟು ಒಬ್ಬಂಗೆ ಪರವುಂಟು, Read More »
ಒಪ್ಪುವ ವಿಭೂತಿಯ ನೊಸಲಲ್ಲಿ ಧರಿಸಿ, ದೃಷ್ಟಿವಾ[ರಿ] ನಿಮ್ಮನೋಡಲೊಡನೆ ಬೆಟ್ಟದಷ್ಟು ತಪ್ಪುಳ್ಳಡೆಯೂ ಮುಟ್ಟಲಮ್ಮವು ನೋಡಾ. ದುರಿತ ಅನ್ಯಾಯವ ಪರಿಹರಿಸಬಲ್ಲಡೆ ‘ಓಂ ನಮಃ ಶಿವಾಯ’ ಶರಣೆಂಬುದೆ ಮಂತ್ರ. ಅದೆಂತೆಂದಡೆ ‘ನಮಃ ಶಿವಾಯೇತಿ ಮಂತ್ರಂ ಯಃ ಕರೋತಿ ತ್ರಿಪುಂಡ್ರಕಂ ಸಪ್ತಜನ್ಮಕೃತಂ ಪಾಪಂ ತತ್‍ಕ್ಷಣಾದೇವ ನಶ್ಯತ್ಬಿ’ ಇಂತೆಂದುದಾಗಿ, ಸಿಂಹದ ಮರಿಯ ಸೀಳ್ನಾಯಿ ತಿಂಬಡೆ ಭಂಗವಿನ್ನಾರದೊ ಚೆನ್ನಮಲ್ಲಿಕಾರ್ಜುನಾ ?
ಒಪ್ಪುವ ವಿಭೂತಿಯ ನೊಸಲಲ್ಲಿ ಧರಿಸಿ, Read More »
ಒಡಲಿಲ್ಲದ ನುಡಿಯಿಲ್ಲದ ಕಡೆಯಿಲ್ಲದ ನಲ್ಲನ ಒಡಗೂಡಿ ಸುಖಿಯಾದೆ ಕೇಳಿರಯ್ಯಾ. ಭಾಷೆ ಪೈಸರವಿಲ್ಲ, ಓಸರಿಸೆನನ್ಯಕ್ಕೆ, ಆಸೆ ಮಾಡೆನು ಮತ್ತೆ ಭಿನ್ನ ಸುಖಕ್ಕೆ. ಅರಳಿದು ಮೂರಾಗಿ, ಮೂರಳಿದು ಎರಡಾಗಿ, ಎರಡಳಿದು ಒಂದಾಗಿ ನಿಂದೆನಯ್ಯಾ. ಬಸವಣ್ಣ ಮೊದಲಾದ ಶರಣರಿಗೆ ಶರಣಾರ್ಥಿ ಆ ಪ್ರಭುವಿನಿಂದ ಕೃತಕೃತ್ಯಳಾದೆನು ನಾನು. ಮರೆಯಲಾಗದು, ನಿಮ್ಮ ಶಿಶುವೆಂದು ಎನ್ನನು, ಚೆನ್ನಮಲ್ಲಿಕಾರ್ಜುನನ ಬೆರೆಸೆಂದು ಹರಸುತ್ತಿಹುದು.
ಒಡಲಿಲ್ಲದ ನುಡಿಯಿಲ್ಲದ ಕಡೆಯಿಲ್ಲದ Read More »
ಒಂದಲ್ಲ ಎರಡಲ್ಲ ಮೂರಲ್ಲ ನಾಲ್ಕಲ್ಲ ಎಂಬತ್ತುನಾಲ್ಕುಲಕ್ಷಯೋನಿಯೊಳಗೆ ಬಾರದ ಭವಂಗಳಲ್ಲಿ ಬಂದೆ ಬಂದೆ. ಉಂಡೆ ಉಂಡೆ ಸುಖಾಸುಖಂಗಳ. ಹಿಂದಣ ಜನ್ಮ ತಾನೇನಾದಡೆಯೂ ಆಗಲಿ ಮುಂದೆ ನೀ ಕರುಣಿಸಾ, ಚೆನ್ನಮಲ್ಲಿಕಾರ್ಜುನಾ.
ಒಂದಲ್ಲ ಎರಡಲ್ಲ ಮೂರಲ್ಲ ನಾಲ್ಕಲ್ಲ Read More »
ಒಂದರಳ ಶಿವಂಗೆಂದ ಫಲದಿಂದ ಶಿವಪದಂಗಳಾದುದ ಕೇಳಿಯರಿಯಾ ? ಒಂದರಳನೇರಿಸುವಲ್ಲಿ ಅಡ್ಡವಿಸಿದರೆ ಗೊಂದಣದ ಕುಲಕೋಟಿಗೆ ನರಕ ಕಾಣಾ. ಇಂದು ಚೆನ್ನಮಲ್ಲಿಕಾರ್ಜುನನ ವೇಳೆ ತಡೆದಡೆ ಮುಂದೆ ಬಹ ನರಕಕ್ಕೆ ಕಡೆಯಿಲ್ಲ ಮರುಳೆ.
ಒಂದರಳ ಶಿವಂಗೆಂದ ಫಲದಿಂದ Read More »
ಐದು ಪರಿಯ ಬಣ್ಣವ ತಂದು ಕೊಟ್ಟಡೆ ನಾಲ್ಕು ಮೊಲೆಯ ಹಸುವಾಯಿತ್ತು. ಹಸುವಿನ ಬಸಿರಲ್ಲಿ ಕರುವು ಹುಟ್ಟಿತ್ತು. ಕರುವ ಮುಟ್ಟಲೀಯದೆ ಹಾಲು ಕರೆದುಕೊಂಡಡೆ ಕರ ರುಚಿಯಾಯಿತ್ತು. ಮಧುರ ತಲೆಗೇರಿ ಅರ್ಥವ ನೀಗಾಡಿ ಆ ಕರುವಿನ ಬೆಂಬಳಿವಿಡಿದು ಭವಹರಿಯಿತ್ತು ಚೆನ್ನಮಲ್ಲಿಕಾರ್ಜುನಾ.
ಐದು ಪರಿಯ ಬಣ್ಣವ ತಂದು ಕೊಟ್ಟಡೆ Read More »
ಎಳೆವರದಲ್ಲಿ ಮೋಹಮೊಳೆ ಹುಟ್ಟಿತ್ತು, ಗುರುಹಸ್ತದಲ್ಲಿ ಅಂಕುರವಾಯಿತ್ತು, ಏಳೆಲೆ ಹೋಯಿತ್ತು ಬಳಗದ ನಡುವೆ. ಕೇಳೆಲೆಯವ್ವಾ, ನೀನು ಕೇಳು ತಾಯೆ. ಒಂಬತ್ತೆಲೆ ಎಂದಿಂಗೆ ಪರಿಪೂರ್ಣವಾಯಿತ್ತು ನೋಡವ್ವಾ. ಚೆನ್ನಮಲ್ಲಿಕಾರ್ಜುನನೆ ಗಂಡನೆನಗೆ ಲೋಕದವರ ಸಂಬಂಧವಿಲ್ಲೆಂದು ಬಿಟ್ಟು ತೊಲಗಿದೆನು ಕಾಣಾ ಎಲೆಯವ್ವಾ.
ಎಳೆವರದಲ್ಲಿ ಮೋಹಮೊಳೆ ಹುಟ್ಟಿತ್ತು, Read More »
ಎಲ್ಲಿ ಹೋದಡೆ ಕಲಿಗೆ ಭಯವಿಲ್ಲ, ಹಂದೆಗೆ ಸುಖವಿಲ್ಲ ಕಾಣಿರಣ್ಣಾ. ಈವಂಗವಗುಣವಿಲ್ಲ, ಕರುಣವುಳ್ಳವಂಗೆ ಪಾಪವಿಲ್ಲ. ನಿಮ್ಮ ಮುಟ್ಟಿ ಪರಧನ ಪರಸ್ತ್ರೀಯ ತೊರೆದಾತಂಗೆ ಮುಂದೆ ಭವವಿಲ್ಲ ಚೆನ್ನಮಲ್ಲಿಕಾರ್ಜುನಾ.
ಎಲ್ಲಿ ಹೋದಡೆ ಕಲಿಗೆ ಭಯವಿಲ್ಲ, Read More »
ಎಲೆ ದೇವಾ, ಸಕಲ ಕರಣಂಗಳ ಉಪಟಳಕ್ಕಂಜಿ ನಿಮ್ಮ ಶರಣರ ಮರೆಯೊಕ್ಕು ಕಾರುಣ್ಯಮಂ ಪಡೆದು, ಬಂದು ನಿಮ್ಮ ಶ್ರೀ ಮೂರ್ತಿಯ ಕಂಡೆ. ಇನ್ನು ಎನ್ನ ನಿಮ್ಮೊಳಗೆ ಐಕ್ಯವ ಮಾಡಿಕೊಳ್ಳಾ ಚೆನ್ನಮಲ್ಲಿಕಾರ್ಜುನಾ.
ಎಲೆ ದೇವಾ, ಸಕಲ ಕರಣಂಗಳ ಉಪಟಳಕ್ಕಂಜಿ Read More »
ಎಲೆ ತಾಯಿ ನೀನಂತಿರು, ಎಲೆ ತಂದೆ ನೀನಂತಿರು, ಎಲೆ ಬಂಧುವೆ ನೀನಂತಿರು, ಎಲೆ ಕುಲವೆ ನೀನಂತಿರು, ಎಲೆ ಬಲವೆ ನೀನಂತಿರು. ಚೆನ್ನಮಲ್ಲಿಕಾರ್ಜುನನ ಕೂಡುವ ಭರದಿಂದ ಹೋಗುತ್ತಿದ್ದೇನೆ. ನಿಮಗೆ ಶರಣಾರ್ಥಿ ಶರಣಾರ್ಥಿ
ಎಲೆ ತಾಯಿ ನೀನಂತಿರು, Read More »
ಎಲೆ ಕಾಲಂಗೆ ಸೂರೆಯಾದ ಕರ್ಮಿ, ಎಲೆ ಕಾಮಂಗೆ ಗುರಿಯಾದ ಮರುಳೆ, ಬಿಡು ಬಿಡು ಕೈಯ ನರಕವೆಂದರಿಯದೆ ತಡೆವರೆ ಮನುಜಾ ? ಚೆನ್ನಮಲ್ಲಿಕಾರ್ಜುನನ ಪೂಜೆಯ ವೇಳೆ ತಪ್ಪಿದರೆ ನಾಯಕ ನರಕ ಕಾಣಾ ನಿನಗೆ.
ಎಲೆ ಕಾಲಂಗೆ ಸೂರೆಯಾದ ಕರ್ಮಿ, Read More »
ಎಲೆ ಅಣ್ಣಾ ಅಣ್ಣಾ, ನೀವು ಮರುಳಲ್ಲಾ ಅಣ್ಣಾ, ಎನ್ನ ನಿನ್ನಳವೆ ? ಹದಿನಾಲ್ಕು ಲೋಕವ ನುಂಗಿದ ಕಾಮನ ಬಾಣದ ಗುಣ ಎನ್ನ ನಿನ್ನಳವೆ ? ವಾರುವ ಮುಗ್ಗಿದಡೆ, ಮಿಡಿಹಯ ಹೊಯ್ವರೆ ? ಮುಗ್ಗಿದ ಭಂಗವ ಮುಂದೆ ರಣದಲ್ಲಿ ತಿಳಿವುದು. ನಿನ್ನ ನೀ ಸಂವರಿಸಿ ಕೈದುವ ಕೊಳ್ಳಿರಣ್ಣಾ, ಚೆನ್ನಮಲ್ಲಿಕಾರ್ಜುನನೆಂಬ ಹಗೆಗೆ ಬೆಂಗೊಡದಿರಣ್ಣಾ.
ಎಲೆ ಅಣ್ಣಾ ಅಣ್ಣಾ, ನೀವು ಮರುಳಲ್ಲಾ ಅಣ್ಣಾ, Read More »
ಎಲ್ಲರ ಪ್ರಾಣವಂಗೈಯಲದೆ ಎನ್ನ ಪ್ರಾಣ ಜಂಗಮದಲದೆ. ಎಲ್ಲರ ಆಯುಷ್ಯ ಶಿರದಲ್ಲಿ ಬರೆದಿದೆ ಎನ್ನ ಆಯುಷ್ಯ ನಿಮ್ಮಲ್ಲಿ ಸಂದಿದೆ. ಚೆನ್ನಮಲ್ಲಿಕಾರ್ಜುನಾ, ನಿಮ್ಮ ಶರಣರೆನ್ನ ಪ್ರಾಣಲಿಂಗವೆಂದು ಧರಿಸಿದೆನು.
ಎಲ್ಲರ ಪ್ರಾಣವಂಗೈಯಲದೆ Read More »
ಎಲ್ಲರ ಗಂಡರ ಶೃಂಗಾರದ ಪರಿಯಲ್ಲ, ಎನ್ನ ನಲ್ಲನ ಶೃಂಗಾರದ ಪರಿ ಬೇರೆ. ಶಿರದಲ್ಲಿ ಕಂಕಣ, ಉರದಮೇಲಂದುಗೆ, ಕಿವಿಯಲ್ಲಿ ಹಾವುಗೆ, ಉಭಯ ಸಿರಿವಂತನ ಮೊಳಕಾಲಲ್ಲಿ ಜಳವಟ್ಟಿಗೆ. ಉಂಗುಟದಲ್ಲಿ ಮೂಕುತಿ – ಇದು ಜಾಣರಿಗೆ ಜಗುಳಿಕೆ. ಚೆನ್ನಮಲ್ಲಿಕಾರ್ಜುನಯ್ಯನ ಶೃಂಗಾರದ ಪರಿ ಬೇರೆ.
ಎಲ್ಲರ ಗಂಡರ ಶೃಂಗಾರದ ಪರಿಯಲ್ಲ, Read More »
ಎಲ್ಲ ಎಲ್ಲವನರಿದು ಫಲವೇನಯ್ಯಾ, ತನ್ನ ತಾನರಿಯಬೇಕಲ್ಲದೆ ? ತನ್ನಲ್ಲಿ ಅರಿವು ಸ್ವಯವಾಗಿರಲು ಅನ್ಯರ ಕೇಳಲುಂಟೆ ? ಚೆನ್ನಮಲ್ಲಿಕಾರ್ಜುನಾ, ನೀನರಿವಾಗಿ ಮುಂದುದೋರಿದ ಕಾರಣ ನಿಮ್ಮಿಂದ ನಿಮ್ಮನರಿದೆನಯ್ಯಾ ಪ್ರಭುವೆ.
ಎಲ್ಲ ಎಲ್ಲವನರಿದು ಫಲವೇನಯ್ಯಾ, Read More »
ಎಲುವಿಲ್ಲದ ನಾಲಗೆ ಹೊದಕುಳಿಗೊಂಡಾಡುದು, ಎಲೆ ಕಾಲಂಗೆ ಗುರಿಯಾದ ಕರ್ಮಿ. ಉಲಿಯದಿರು, ಉಲಿಯದಿರು ಭವಭಾರಿ ನೀನು. ಹಲವು ಕಾಲದ ಹುಲುಮನುಜಂಗೆ ಹುಲುಮನುಜ ಹೆಂಡತಿ ಇವರಿದ್ದರೆ ಅದಕ್ಕದು ಸರಿ. ಚೆನ್ನಮಲ್ಲಿಕಾರ್ಜುನನೆ ಗಂಡನೆನಗೆ ಲೋಕದೊಳಗ್ಹೆಂಡಿರುಂಟಾದರೆ ಮಾಡಿಕೊ, ಎನ್ನ ಬಿಡು ಮರುಳೆ.
ಎಲುವಿಲ್ಲದ ನಾಲಗೆ ಹೊದಕುಳಿಗೊಂಡಾಡುದು, Read More »
ಎಮ್ಮೆಗೊಂದು ಚಿಂತೆ ಸಮ್ಮಗಾರಗೊಂದು ಚಿಂತೆ. ಧರ್ಮಿಗೊಂದು ಚಿಂತೆ ಕರ್ಮಿಗೊಂದು ಚಿಂತೆ. ಎನಗೆ ಎನ್ನ ಚಿಂತೆ, ತನಗೆ ತನ್ನ ಕಾಮದ ಚಿಂತೆ. ಒಲ್ಲೆ ಹೋಗು, ಸೆರಗ ಬಿಡು ಮರುಳೆ. ಎನಗೆ ಚೆನ್ನಮಲ್ಲಿಕಾರ್ಜುನದೇವರು ಒಲಿವರೊ ಒಲಿಯರೊ ಎಂಬ ಚಿಂತೆ ?
ಎಮ್ಮೆಗೊಂದು ಚಿಂತೆ ಸಮ್ಮಗಾರಗೊಂದು ಚಿಂತೆ. Read More »
ಎನ್ನನಿರಿದಡೆ ಸೈರಿಸುವೆ, ಎನ್ನ ಕೊರೆದಡೆ ಸೈರಿಸುವೆ, ಎನ್ನ ಕಡಿದು ಹರಹಿದಡೆ ಮನಕ್ಕೆ ತಾರೆನು. ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ಶರಣರನೊಡನೆನ್ನ ಕಣ್ಣ ಮುಂದೆ ಕಂಡು ಮೊಗೆದುಂಡಮೃತದಂತೆ ಆದೆನಯ್ಯಾ.
ಎನ್ನನಿರಿದಡೆ ಸೈರಿಸುವೆ, ಎನ್ನ ಕೊರೆದಡೆ ಸೈರಿಸುವೆ, Read More »
ಎನ್ನಂತೆ ಪುಣ್ಯಗೈದವರುಂಟೆ , ಎನ್ನಂತೆ ಭಾಗ್ಯಂಗೈದವರುಂಟೆ , ಕಿನ್ನರನಂತಪ್ಪ ಸೋದರರೆನಗೆ, ಏಳೇಳು ಜನ್ಮದಲ್ಲಿ ಶಿವಭಕ್ತರೆ ಬಂಧುಗಳೆನಗೆ. ಚೆನ್ನಮಲ್ಲಿಕಾರ್ಜುನನಂತಪ್ಪ ಗಂಡ ನೋಡಾ ಎನಗೆ.
ಎನ್ನಂತೆ ಪುಣ್ಯಗೈದವರುಂಟೆ , Read More »
ಎನ್ನ ಮೀಸಲ ಬೀಸರ ಮಾಡಿದೆಯಲ್ಲಯ್ಯ. ಎನ್ನ ಮೀಸಲ ಬೀಸಾಡಿ ಕಳೆದೆಯಲ್ಲಯ್ಯ. ಎನ್ನ ಭಾಷೆಯ ಪೈಸರ ಮಾಡಿದೆಯಲ್ಲಯ್ಯ. ಎನ್ನ ಭಾಷೆಗೆ ದೋಷವ ತೋರಿಸಿದೆಯಲ್ಲಯ್ಯ. ಎನ್ನ ಮೀಸಲ ಕಾಯವ ನಿಮಗೆಂದಿರಿಸಿಕೊಂಡಿದ್ದಡೆ, ಬೀಸಾಡಿ ಕಳೆವರೆ ಹೇಳಾ ತಂದೆ ? ಏಸು ಕಾಲ ನಿಮಗೆ ನಾನು ಮಾಡಿದ ತಪ್ಪ ಈ ಸಮಯದಲ್ಲಿ ಹೊರಿಸಿ ಕೊಂದೆಯಲ್ಲಾ ಚೆನ್ಮಮಲ್ಲಿಕಾರ್ಜುನಾ.
ಎನ್ನ ಮೀಸಲ ಬೀಸರ ಮಾಡಿದೆಯಲ್ಲಯ್ಯ. Read More »
ಎನ್ನ ಮನವ ಮಾರುಗೊಂಡನವ್ವಾ, ಎನ್ನ ತನುವ ಸೂರೆಗೊಂಡನವ್ವಾ, ಎನ್ನ ಸುಖವನೊಪ್ಪುಗೊಂಡನವ್ವಾ. ಎನ್ನ ಇರವನಿಂಬುಗೊಂಡನವ್ವಾ. ಚೆನ್ನಮಲ್ಲಿಕಾರ್ಜುನನ ಒಲುಮೆಯವಳಾನು.
ಎನ್ನ ಮನವ ಮಾರುಗೊಂಡನವ್ವಾ, Read More »
ಎನ್ನ ಮನ ಪ್ರಾಣ ಭಾವ ನಿಮ್ಮಲ್ಲಿ ನಿಂದಬಳಿಕ ಕಾಯದ ಸುಖವ ನಾನೇನೆಂದರಿಯೆನು. ಆರು ಸೋಂಕಿದರೆಂದರಿಯೆನು. ಚೆನ್ನಮಲ್ಲಿಕಾರ್ಜುನನ ಮನದೊಳಗೆ ಒಚ್ಚತವಾದ ಬಳಿಕ ಹೊರಗೇನಾಯಿತ್ತೆಂದರಿಯೆನು.
ಎನ್ನ ಮನ ಪ್ರಾಣ ಭಾವ ನಿಮ್ಮಲ್ಲಿ ನಿಂದಬಳಿಕ Read More »
ಎನ್ನ ಮಾಯದ ಮದವ ಮುರಿಯಯ್ಯಾ. ಎನ್ನ ಕಾಯದ ಕತ್ತಲೆಯ ಕಳೆಯಯ್ಯಾ. ಎನ್ನ ಜೀವದ ಜಂಜಡವ ಮಾಣಿಸಯ್ಯಾ. ಎನ್ನ ದೇವ ಚೆನ್ನಮಲ್ಲಿಕಾರ್ಜುನಯ್ಯಾ, ಎನ್ನ ಸುತ್ತಿದ ಪ್ರಪಂಚವ ಬಿಡಿಸಾ ನಿಮ್ಮ ಧರ್ಮ
ಎನ್ನ ಮಾಯದ ಮದವ ಮುರಿಯಯ್ಯಾ. Read More »
ಎನ್ನ ಪ್ರಾಣ ಜಂಗಮ, ಎನ್ನ ಜೀವ ಜಂಗಮ, ಎನ್ನ ಪುಣ್ಯದ ಫಲವು ಜಂಗಮ ಎನ್ನ ಹ[ರು]ರುಷದ ಮೇರೆ [ಜಂಗಮ] ಚೆನ್ನಮಲ್ಲಿಕಾರ್ಜುನಾ, ಜಂಗಮ ತಿಂಥಿಣಿಯಲೋಲಾಡುವೆ.