ಅಕ್ಕ ಮಹಾದೇವಿ

ಎನ್ನ ನಾಲಗೆಗೆ ಬಪ್ಪರುಚಿ ನಿಮಗರ್ಪಿತ.

ಎನ್ನ ನಾಲಗೆಗೆ ಬಪ್ಪರುಚಿ ನಿಮಗರ್ಪಿತ. ಎನ್ನ ನಾಸಿಕಕ್ಕೆ ಬಪ್ಪ ಪರಿಮಳ ನಿಮಗರ್ಪಿತ. ಎನ್ನ ಕಾಯಕ್ಕೆ ಬಪ್ಪ ಸುಖ ನಿಮಗರ್ಪಿತ. ಚೆನ್ನಮಲ್ಲಿಕಾರ್ಜುನಯ್ಯಾ, ನಿಮಗರ್ಪಿಸದ ಮುನ್ನ ಮುಟ್ಟಲಮ್ಮೆನಯ್ಯಾ.

ಎನ್ನ ನಾಲಗೆಗೆ ಬಪ್ಪರುಚಿ ನಿಮಗರ್ಪಿತ. Read More »

ಎನ್ನ ನಾನರಿಯದಲ್ಲಿ ಎಲ್ಲಿರ್ದೆ ಹೇಳಯ್ಯಾ

ಎನ್ನ ನಾನರಿಯದಲ್ಲಿ ಎಲ್ಲಿರ್ದೆ ಹೇಳಯ್ಯಾ ಚಿನ್ನದೊಳಗಣ ಬಣ್ಣದಂತೆ ಎನ್ನೊಳಗಿರ್ದೆ. ಅಯ್ಯಾ ಎನ್ನೊಳಗೆ ಇನಿತಿರ್ದು ಮೈದೋರದ ಭೇದವ ನಿಮ್ಮಲ್ಲಿ ಕಂಡೆ ಕಾಣಾ ಚೆನ್ನಮಲ್ಲಿಕಾರ್ಜುನಾ.

ಎನ್ನ ನಾನರಿಯದಲ್ಲಿ ಎಲ್ಲಿರ್ದೆ ಹೇಳಯ್ಯಾ Read More »

ಎನ್ನ ತುಂಬಿದ ಜವ್ವನ, ತುಳುಕುವ ಮೋಹನವ,

ಎನ್ನ ತುಂಬಿದ ಜವ್ವನ, ತುಳುಕುವ ಮೋಹನವ, ನಿನಗೆ ಇಂಬು ಮಾಡಿಕೊಂಡಿರ್ದೆನಲ್ಲಾ ಎಲೆಯಯ್ಯಾ. ಎನ್ನ ಲಂಬಿಸುವ ಲಾವಣ್ಯದ ರೂಪುರೇಖೆಗಳ ನಿನ್ನ ಕಣ್ಣಿಂಗೆ ಕೈವಿಡಿದಂತೆ ಮಾಡಿರ್ದೆನಲ್ಲಯ್ಯ. ನಿನ್ನ ಮುಂದಿರಟ್ಟಲನ್ಯರು ಕೊಂಡೊಯಿವಾಗಲೆಂತು ಸೈರಿಸಿದೆ ಹೇಳಾ ಚೆನ್ನಮಲ್ಲಿಕಾರ್ಜುನಾ ?

ಎನ್ನ ತುಂಬಿದ ಜವ್ವನ, ತುಳುಕುವ ಮೋಹನವ, Read More »

ಎನ್ನ ಕಾಯ ಮಣ್ಣು, ಜೀವ ಬಯಲು,

ಎನ್ನ ಕಾಯ ಮಣ್ಣು, ಜೀವ ಬಯಲು, ಆವುದ ಹಿಡಿವೆನಯ್ಯಾ. ದೇವಾ, ನಿಮ್ಮನಾವ ಪರಿಯಲ್ಲಿ ನೆನೆವೆನಯ್ಯಾ ? ಎನ್ನ ಮಾಯೆಯನು ಮಾಣಿಸಯ್ಯಾ ಚೆನ್ನಮಲ್ಲಿಕಾರ್ಜುನಾ.

ಎನ್ನ ಕಾಯ ಮಣ್ಣು, ಜೀವ ಬಯಲು, Read More »

ಎನ್ನ ಅಂಗದಲ್ಲಿ ಆಚಾರವ ತೋರಿದನಯ್ಯಾ ಬಸವಣ್ಣನು.

ಎನ್ನ ಅಂಗದಲ್ಲಿ ಆಚಾರವ ತೋರಿದನಯ್ಯಾ ಬಸವಣ್ಣನು. ಆ ಆಚಾರವನೆ ಲಿಂಗವೆಂದರುಹಿದನಯ್ಯಾ ಬಸವಣ್ಣನು. ಎನ್ನ ಪ್ರಾಣದಲ್ಲಿ ಅರಿವ ತೋರಿದನಯ್ಯಾ ಬಸವಣ್ಣನು. ಆ ಅರಿವೆ ಜಂಗಮವೆಂದರುಹಿದನಯ್ಯಾ ಬಸವಣ್ಣನು. ಚೆನ್ನಮಲ್ಲಕಾರ್ಜುನಯ್ಯಾ, ಎನ್ನ ಹೆತ್ತತಂದೆ ಸಂಗನಬಸವಣ್ಣನು ಎನಗೀ ಕ್ರಮವನರುಹಿದನಯ್ಯಾ ಪ್ರಭುವೆ.

ಎನ್ನ ಅಂಗದಲ್ಲಿ ಆಚಾರವ ತೋರಿದನಯ್ಯಾ ಬಸವಣ್ಣನು. Read More »

ಎನಗೇಕಯ್ಯಾ ನಾ ಪ್ರಪಂಚಿನ ಪುತ್ಥಳಿ.

ಎನಗೇಕಯ್ಯಾ ನಾ ಪ್ರಪಂಚಿನ ಪುತ್ಥಳಿ. ಮಾಯಿಕದ ಮಲಭಾಂಡ, ಆತುರದ ಭವನಿಳಯ. ಜಲಕುಂಭದ ಒಡೆಯಲ್ಲಿ ಒಸರುವ ನೆಲೆವನೆಗೇಕಯ್ಯಾ ? ಬೆರಳು ತಾಳಹಣ್ಣ ಹಿಸುಕಿದಡೆ ಮೆಲಲುಂಟೆ ? ಬಿತ್ತೆಲ್ಲಾ ಜೀವ ಅದರೊಪ್ಪದ ತೆರ ಎನಗೆ. ಎನ್ನ ತಪ್ಪನೊಪ್ಪಗೊಳ್ಳಿ, ಚೆನ್ನಮಲ್ಲಿಕಾರ್ಜುನದೇವರದೇವ ನೀವೆ ಅಣ್ಣಗಳಿರಾ.

ಎನಗೇಕಯ್ಯಾ ನಾ ಪ್ರಪಂಚಿನ ಪುತ್ಥಳಿ. Read More »

ಎರೆಯಂತೆ ಕರಕರಗಿ, ಮಳಲಂತೆ ಜರಿಜರಿದು,

ಎರೆಯಂತೆ ಕರಕರಗಿ, ಮಳಲಂತೆ ಜರಿಜರಿದು, ಕನಸಿನಲ್ಲಿ ಕಳವಳಿಸಿ, ಆನು ಬೆರಗಾದೆ. ಆವಿಗೆಯ ಕಿಚ್ಚಿನಂತೆ ಸುಳಿಸುಳಿದು ಬೆಂದೆ ಆಪತ್ತಿಗೆ ಸಖಿಯರನಾರನೂ ಕಾಣೆ. ಅರಸಿ ಕಾಣದ ತನುವ, ಬೆರಸಿ ಕೂಡದ ಸುಖವ, ಎನಗೆ ನೀ ಕರುಣಿಸಾ, ಚೆನ್ನಮಲ್ಲಿಕಾರ್ಜುನಾ.

ಎರೆಯಂತೆ ಕರಕರಗಿ, ಮಳಲಂತೆ ಜರಿಜರಿದು, Read More »

ಎರದ ಮುಳ್ಳಿನಂತೆ ಪರಗಂಡರೆನಗವ್ವಾ.

ಎರದ ಮುಳ್ಳಿನಂತೆ ಪರಗಂಡರೆನಗವ್ವಾ. ಸೋಂಕಲಮ್ಮೆ ಸುಳಿಯಲಮ್ಮೆ ನಂಬಿ ನಚ್ಚಿ ಮಾತಾಡಲಮ್ಮೆನವ್ವಾ. ಚೆನ್ನಮಲ್ಲಿಕಾರ್ಜುನನಲ್ಲದ ಗಂಡರಿಗೆ ಉರದಲ್ಲಿ ಮುಳ್ಳುಂಟೆಂದು ನಾನಪ್ಪಲಮ್ಮೆನವ್ವಾ.

ಎರದ ಮುಳ್ಳಿನಂತೆ ಪರಗಂಡರೆನಗವ್ವಾ. Read More »

ಊಡಿದಡುಣ್ಣದು, ನೀಡಿದಡೊಲಿಯದು.

ಊಡಿದಡುಣ್ಣದು, ನೀಡಿದಡೊಲಿಯದು. ಕಾಡದು ಬೇಡದು ಒಲಿಯದು ನೋಡಾ. ಊಡಿದಡುಂಡು ನೀಡಿದಡೊಲಿದು ಬೇಡಿದ ವರವ ಕೊಡುವ ಜಂಗಮಲಿಂಗದ ಪಾದವ ಹಿಡಿದು ಬದುಕಿದೆ, ಕಾಣಾ ಚೆನ್ನಮಲ್ಲಿಕಾರ್ಜುನಾ.

ಊಡಿದಡುಣ್ಣದು, ನೀಡಿದಡೊಲಿಯದು. Read More »

ಊರ ಮುಂದೆ ಹಾಲತೊರೆ ಇರಲು

ಊರ ಮುಂದೆ ಹಾಲತೊರೆ ಇರಲು ನೀರಡಸಿ ಬಂದೆನಲ್ಲಯ್ಯ ನಾನು. ಬರುದೊರೆವೋದವಳನೆನ್ನನಪ್ಪದಿರಯ್ಯಾ. ನೀನೊತ್ತಿದ ಕಾರಣ ಬಂದೆನಯ್ಯ. ಹೆರಿಗೆ ಕೂತವಳ ತೆಗೆದಪ್ಪುವನೆಗ್ಗ ನೋಡಾ ? ಈ ಸೂನೆಗಾರಂಗೆ ಕುರಿಯ ಮಾರುವರೆ ? ಮಾರಿದರೆಮ್ಮವರೆನ್ನ ನಿನಗೆ. ಎನ್ನತ್ತ ಮುಂದಾಗದಿರು, ಎನ್ನಮೇಲೆ ಕಾಲನಿಡದಿರು. ಚೆನ್ನಮಲ್ಲಿಕಾರ್ಜುನಂಗೆ ಸಲೆ ಮಾರುವೋದವಳಾನು.

ಊರ ಮುಂದೆ ಹಾಲತೊರೆ ಇರಲು Read More »

ಊರ ನಡುವೆ ಒಂದು ಬೇಂಟೆ ಬಿದ್ದಿತ್ತು.

ಊರ ನಡುವೆ ಒಂದು ಬೇಂಟೆ ಬಿದ್ದಿತ್ತು. ಆರು ಕಂಡವರು ತೋರಿರಯ್ಯಾ. ಊರಿಗೆ ದೂರುವೆನಗುಸೆಯನಿಕ್ಕುವೆ ಅರಸುವೆನೆನ್ನ ಬೇಂಟೆಯ. ಅರಿತು ಅರಿಯದೆ ಒಂದು ಬೇಂಟೆಯನಾಡಿದೆನು. ಅರಸಿಕೊಡಾ, ಚೆನ್ನಮಲ್ಲಿಕಾರ್ಜುನಾ.

ಊರ ನಡುವೆ ಒಂದು ಬೇಂಟೆ ಬಿದ್ದಿತ್ತು. Read More »

ಉಳ್ಳುದೊಂದು ತನು, ಉಳ್ಳುದೊಂದು ಮನ.

ಉಳ್ಳುದೊಂದು ತನು, ಉಳ್ಳುದೊಂದು ಮನ. ನಾನಿನ್ನಾವ ಮನದಲ್ಲಿ ಧ್ಯಾನವ ಮಾಡುವೆನಯ್ಯಾ ? ಸಂಸಾರವನಾವ ಮನದಲ್ಲಿ ತಲ್ಲೀಯವಾಹೆನಯ್ಯಾ ? ಅಕಟಕಟಾ, ಕೆಟ್ಟೆ ಕೆಟ್ಟೆ ? ಸಂಸಾರಕ್ಕಲ್ಲಾ, ಪರಮಾರ್ಥಕ್ಕಲ್ಲಾ ? ಎರಡಕ್ಕೆ ಬಿಟ್ಟ ಕರುವಿನಂತೆ ? ಬಿಲ್ವ ಬೆಳವಲಕಾಯನೊಂದಾಗಿ ಹಿಡಿಯಬಹುದೆ ಚೆನ್ನಮಲ್ಲಿಕಾರ್ಜುನಾ ?

ಉಳ್ಳುದೊಂದು ತನು, ಉಳ್ಳುದೊಂದು ಮನ. Read More »

ಉಳುಹುವ, ಕರವ ನೇಹವುಂಟೆ ನಿಮ್ಮಲ್ಲಿ

ಉಳುಹುವ, ಕರವ ನೇಹವುಂಟೆ ನಿಮ್ಮಲ್ಲಿ ಸಂಸಾರಕ್ಕೆಡೆಯಾ [ಡದ] ಭಕ್ತಿಯೊಳವೆ ಎನ್ನದೇವ ಚೆನ್ನಮಲ್ಲಿಕಾರ್ಜುನಯ್ಯಾ, ಏನ ಹೇಳುವೆನಯ್ಯ ಲಜ್ಜೆಯ ಮಾತನು

ಉಳುಹುವ, ಕರವ ನೇಹವುಂಟೆ ನಿಮ್ಮಲ್ಲಿ Read More »

ಉಸುರಿನ ಪರಿಮಳವಿರಲು

ಉಸುರಿನ ಪರಿಮಳವಿರಲು ಕುಸುಮದ ಹಂಗೇಕಯ್ಯಾ ಕ್ಷಮೆ ದಮೆ ಶಾಂತಿ ಸೈರಣೆಯಿರಲು ಸಮಾಧಿಯ ಹಂಗೇಕಯ್ಯಾ ಲೋಕವೆ ತಾನಾದ ಬಳಿಕ ಏಕಾಂತದ ಹಂಗೇಕಯ್ಯಾ ಚೆನ್ನಮಲ್ಲಿಕಾರ್ಜುನಾ ?

ಉಸುರಿನ ಪರಿಮಳವಿರಲು Read More »

ಉದಯದಲೆದ್ದು ನಿಮ್ಮ ನೆನೆವೆನಯ್ಯಾ.

ಉದಯದಲೆದ್ದು ನಿಮ್ಮ ನೆನೆವೆನಯ್ಯಾ. ಕಸದೆಗೆದು ಚಳೆಯ ಕೊಟ್ಟು ನಿಮ್ಮ ಬರವ ಹಾರುತಿರ್ದೆನಯ್ಯಾ. ಹಸೆ ಹಂದರವನಿಕ್ಕಿ ನಿಮ್ಮಡಿಗಳಿಗೆಡೆಮಾಡಿಕೊಂಡಿರ್ದೆನಯ್ಯಾ. ಚೆನ್ನಮಲ್ಲಿಕಾರ್ಜುನಯ್ಯಾ, ನೀನಾವಾಗ ಬಂದೆಯಾ ಎನ್ನ ದೇವಾ ?

ಉದಯದಲೆದ್ದು ನಿಮ್ಮ ನೆನೆವೆನಯ್ಯಾ. Read More »

ಉದಯಾಸ್ತಮಾನವೆಂಬೆರಡು ಕೊಳಗದಲ್ಲಿ,

ಉದಯಾಸ್ತಮಾನವೆಂಬೆರಡು ಕೊಳಗದಲ್ಲಿ, ಆಯುಷ್ಯವೆಂಬ ರಾಶಿ ಅಳೆದು ತೀರದ ಮುನ್ನ ಶಿವನ ನೆನೆಯಿರೆ ! ಶಿವನ ನೆನೆಯಿರೆ ! ಈ ಜನ್ಮ ಬಳಿಕಿಲ್ಲ. ಚೆನ್ನಮಲ್ಲಿಕಾರ್ಜುನದೇವರದೇವನ ನೆನೆದು ಪಂಚಮಹಾಪಾತಕರೆಲ್ಲರು ಮುಕ್ತಿವಡೆದರಂದು ?

ಉದಯಾಸ್ತಮಾನವೆಂಬೆರಡು ಕೊಳಗದಲ್ಲಿ, Read More »

ಉಣಲೆಂದು ಬಂದ ಸುಖ ಉಂಡಲ್ಲದೆ ಹರಿಯದು.

ಉಣಲೆಂದು ಬಂದ ಸುಖ ಉಂಡಲ್ಲದೆ ಹರಿಯದು. ಕಾಣಲೆಂದು ಬಂದ ದುಃಖ ಕಂಡಲ್ಲದೆ ಹರಿಯದು. ತನುವಿಂಗೆ ಬಂದ ಕರ್ಮ ಹರಿವ ಕಾಲಕ್ಕೆ ಚೆನ್ನಮಲ್ಲಿಕಾರ್ಜುನದೇವರು ಕಡೆಗಣ್ಣಿನಿಂದ ನೋಡಿದರು.

ಉಣಲೆಂದು ಬಂದ ಸುಖ ಉಂಡಲ್ಲದೆ ಹರಿಯದು. Read More »

ಉಡುವೆ ನಾನು ಲಿಂಗಕ್ಕೆಂದು,

ಉಡುವೆ ನಾನು ಲಿಂಗಕ್ಕೆಂದು, ತೊಡುವೆ ನಾನು ಲಿಂಗಕ್ಕೆಂದು, ಮಾಡುವೆ ನಾನು ಲಿಂಗಕ್ಕೆಂದು, ನೋಡುವೆ ನಾನು ಲಿಂಗಕ್ಕೆಂದು, ಎನ್ನಂತರಂಗ ಬಹಿರಂಗಗಳು ಲಿಂಗಕ್ಕಾಗಿ. ಮಾಡಿಯೂ ಮಾಡದಂತಿಪ್ಪೆ ನೋಡಾ. ಆನೆನ್ನ ಚೆನ್ನಮಲ್ಲಿಕಾರ್ಜುನನೊಳಗಾಗಿ ಹತ್ತರೊಡನೆ ಹನ್ನೊಂದಾಗಿಪ್ಪುದನೇನ ಹೇಳುವೆನವ್ವಾ?

ಉಡುವೆ ನಾನು ಲಿಂಗಕ್ಕೆಂದು, Read More »

ಉರಿಯೊಡ್ಡಿದಡೆ ಸೀತಳವೆನಗೆ.

ಉರಿಯೊಡ್ಡಿದಡೆ ಸೀತಳವೆನಗೆ. ಗಿರಿಮೇಲೆ ಬಿದ್ದರೆ ಪುಷ್ಪವೆನಗೆ. ಸಮುದ್ರಮೇಲುವಾಯಿದರೆ ಕಾಲುವೆಯೆನಗೆ. ಚೆನ್ನಮಲ್ಲಿಕಾರ್ಜುನಾ, ನಿಮ್ಮಾಣೆಯೆಂಬುದು ತಲೆಯೆತ್ತಿ ಬಾರದ ಭಾರವೆನಗೆ.

ಉರಿಯೊಡ್ಡಿದಡೆ ಸೀತಳವೆನಗೆ. Read More »

ಉರಿಯ ಫಣಿಯನುಟ್ಟು ಊರಿಂದ ಹೊರಗಿರಿಸಿ,

ಉರಿಯ ಫಣಿಯನುಟ್ಟು ಊರಿಂದ ಹೊರಗಿರಿಸಿ, ಕರೆಯಲಟ್ಟಿದ ಸಖಿಯ ನೆರೆದ ನೋಡೆಲೆಗವ್ವಾ. ತೂರ್ಯಾವಸ್ಥೆಯಲ್ಲಿ ತೂಗಿ ತೂಗಿ ನೋಡಿ ಬೆರಗಾಗಿ ನಿಲಲಾರೆನವ್ವಾ. ಆರವಸ್ಥೆ ಕರ ಹಿರಿದು ಎಲೆ ತಾಯೆ. ಗಿರಿ ಬೆಂದು ತರುವುಳಿದು ಹೊನ್ನರಳೆಯ ಮರನುಲಿವಾಗ ಹಿರಿಯತನಗೆಡಿಸಿ ನೆರೆವೆನು ಚೆನ್ನಮಲ್ಲಿಕಾರ್ಜುನನ.

ಉರಿಯ ಫಣಿಯನುಟ್ಟು ಊರಿಂದ ಹೊರಗಿರಿಸಿ, Read More »

ಉರಕ್ಕೆ ಜವ್ವನಗಳು ಬಾರದ ಮುನ್ನ,

ಉರಕ್ಕೆ ಜವ್ವನಗಳು ಬಾರದ ಮುನ್ನ, ಮನಕ್ಕೆ ನಾಚಿಕೆಗಳು ತೋರದ ಮುನ್ನ, ನಮ್ಮವರಂದೆ ಮದುವೆಯ ಮಾಡಿದರು ಸಿರಿಶೈಲ ಚೆನ್ನಮಲ್ಲಿಕಾರ್ಜುನಂಗೆ. ಹೆಂಗೂಸೆಂಬ ಭಾವ ತೋರದ ಮುನ್ನ ನಮ್ಮವರಂದೆ ಮದುವೆಯ ಮಾಡಿದರು

ಉರಕ್ಕೆ ಜವ್ವನಗಳು ಬಾರದ ಮುನ್ನ, Read More »

ಇದನಾರಯ್ಯ ಬಲ್ಲರು

ಇದನಾರಯ್ಯ ಬಲ್ಲರು ಹಮ್ಮಳಿದ ಶರಣರ ಮೇಲಿಹ ಪರವ ಬಲ್ಲ ಶರಣ. ಪಂಚೇಂದ್ರಿಯದ ಇಂಗಿತವ ಬಲ್ಲ ಶರಣ. ಒಡಲ ಬಿಟ್ಟ ಶರಣನಲ್ಲದೆ, ಉಳಿದ ಪ್ರಾಣಘಾತಕ ಪಾತಕರಿವರೆತ್ತಲು, ಶ್ರೀಶೈಲ ಚೆನ್ನಮಲ್ಲಿಕಾರ್ಜುನಯ್ಯ, ನಿಮ್ಮ ಶರಣ ಬಸವಣ್ಣಂಗಲ್ಲದೆ.

ಇದನಾರಯ್ಯ ಬಲ್ಲರು Read More »

ಇಂದ್ರಿಯವ ಬಿಟ್ಟು ಕಾಯವಿರದು

ಇಂದ್ರಿಯವ ಬಿಟ್ಟು ಕಾಯವಿರದು ; ಕಾಯವ ಬಿಟ್ಟು ಇಂದ್ರಿಯವಿರದು. ಎಂತು ನಿಃಕಾಮಿಯೆಂಬೆ, ಎಂತು ನಿರ್ದೋಷಿಯೆಂಬೆ ನೀನೊಲಿದಡೆ ಸುಖಿಯಾಗಿಪ್ಪೆ, ನೀನೊಲ್ಲದಿರೆ ದುಃಖಿಯಾಗಿಪ್ಪೆನಯ್ಯಾ, ಚೆನ್ನಮಲ್ಲಿಕಾರ್ಜುನಾ.

ಇಂದ್ರಿಯವ ಬಿಟ್ಟು ಕಾಯವಿರದು Read More »

ಇಂದೆನ್ನ ಮನೆಗೆ ಒಡೆಯರು ಬಂದಡೆ

ಇಂದೆನ್ನ ಮನೆಗೆ ಒಡೆಯರು ಬಂದಡೆ ತನುವೆಂಬ ಕಳಶದಲುದಕವ ತುಂಬಿ, ಕಂಗಳ ಸೋನೆಯೊಡನೆ ಪಾದಾರ್ಚನೆಯ ಮಾಡುವೆ. ನಿತ್ಯ ಶಾಂತಿಯೆಂಬ ಶೈತ್ಯದೊಡನೆ ಸುಗಂಧವ ಪೂಸುವೆ. ಅಕ್ಷಯ ಸಂಪದವೆಂದರಿದು ಅಕ್ಷತೆಯನೇರಿಸುವೆ. ಹೃದಯಕಮಲ ಪುಷ್ಪದೊಡನೆ ಪೂಜೆಯ ಮಾಡುವೆ. ಸದ್ಭಾವನೆಯೊಡನೆ ಧೂಪವ ಬೀಸುವೆ. ಶಿವe್ಞನ ಪ್ರಕಾಶದೊಡನೆ ಮಂಗಳಾರತಿಯನೆತ್ತುವೆ. ನಿತ್ಯತೃಪ್ತಿಯೊಡನೆ ನೈವೇದ್ಯವ ಕೈಕೊಳಿಸುವೆ. ಪರಿಣಾಮದೊಡನೆ ಕರ್ಪೂರ ವೀಳೆಯವ ಕೊಡುವೆ. ಪಂಚಬ್ರಹ್ಮದೊಡನೆ ಪಂಚಮಹಾವಾದ್ಯವ ಕೇಳಿಸುವೆ. ಹರುಷದೊಡನೆ ನೋಡುವೆ, ಆನಂದದೊಡನೆ ಕುಣಿಕುಣಿದಾಡುವೆ, ಪರವಶದೊಡನೆ ಹಾಡುವೆ, ಭಕ್ತಿಯೊಡನೆ ಎರಗುವೆ, ನಿತ್ಯದೊಡನೆ ಕೂಡಿ ಆಡುವೆ. ಚೆನ್ನಮಲ್ಲಿಕಾರ್ಜುನಾ, ನಿಮ್ಮ ನಿಲವ ತೋರಿದ ಗುರುವಿನಡಿಯಲ್ಲಿ

ಇಂದೆನ್ನ ಮನೆಗೆ ಒಡೆಯರು ಬಂದಡೆ Read More »

ಇಂದ್ರನೀಲದ ಗಿರಿಯನೇರಿಕೊಂಡು

ಇಂದ್ರನೀಲದ ಗಿರಿಯನೇರಿಕೊಂಡು ಚಂದ್ರಕಾಂತದ ಶಿಲೆಯನಪ್ಪಿಕೊಂಡು ಕೊಂಬ ಬಾರಿಸುತ್ತ ಎಂದಿಪ್ಪೆನೊ ಶಿವನೆ ? ನಿಮ್ಮ ನೆನೆವುತ್ತ ಎಂದಿಪ್ಪೆನೊ ? ಅಂಗಭಂಗ ಮನಭಂಗವಳಿದು ನಿಮ್ಮನೆಂದಿಂಗೊಮ್ಮೆ ನೆರೆವೆನಯ್ಯಾ ಚೆನ್ನಮಲ್ಲಿಕಾರ್ಜುನಾ ?

ಇಂದ್ರನೀಲದ ಗಿರಿಯನೇರಿಕೊಂಡು Read More »