ಆಳುತನದ ಮಾತನಾಡದಿರೆಲವೊ
ಆಳುತನದ ಮಾತನಾಡದಿರೆಲವೊ ಮೇಲೆ ಕಾರ್ಯದಿಮ್ಮಿತ್ತಣ್ಣಾ. ಅಲಗಿನ ಮೊನೆಯ ಧಾರೆ ಮಿಂಚುವಾಗ ಕೋಡದೆ ಕೊಂಕದೆ ನಿಲಬೇಕಯ್ಯ. ಬಂಟ ಬೆಟ್ಟ ಭಕ್ತಿಯೊಂದೆ ಕಂಡಯ್ಯ ಚೆನ್ನಮಲ್ಲಿಕಾರ್ಜುನನಂತಲ್ಲದೊಲ್ಲ.
ಆಳುತನದ ಮಾತನಾಡದಿರೆಲವೊ Read More »
ಆಳುತನದ ಮಾತನಾಡದಿರೆಲವೊ ಮೇಲೆ ಕಾರ್ಯದಿಮ್ಮಿತ್ತಣ್ಣಾ. ಅಲಗಿನ ಮೊನೆಯ ಧಾರೆ ಮಿಂಚುವಾಗ ಕೋಡದೆ ಕೊಂಕದೆ ನಿಲಬೇಕಯ್ಯ. ಬಂಟ ಬೆಟ್ಟ ಭಕ್ತಿಯೊಂದೆ ಕಂಡಯ್ಯ ಚೆನ್ನಮಲ್ಲಿಕಾರ್ಜುನನಂತಲ್ಲದೊಲ್ಲ.
ಆಳುತನದ ಮಾತನಾಡದಿರೆಲವೊ Read More »
ಆಹಾರವ ಕಿರಿದು ಮಾಡಿರಣ್ಣಾ, ಆಹಾರವ ಕಿರಿದು ಮಾಡಿ. ಆಹಾರದಿಂದ ವ್ಯಾಧಿ ಹಬ್ಬಿ ಬಲಿವುದಯ್ಯಾ. ಆಹಾರದಿಂ ನಿದ್ರೆ, ನಿದ್ರೆಯಿಂ ತಾಮಸ, ಅಜ್ಞಾನ, ಮೈಮರಹು, ಅಜ್ಞಾನದಿಂ ಕಾಮವಿಕಾರ ಹೆಚ್ಚಿ, ಕಾಯವಿಕಾರ, ಮನೋವಿಕಾರ, ಇಂದ್ರಿಯವಿಕಾರ, ಭಾವವಿಕಾರ, ವಾಯುವಿಕಾರವನುಂಟುಮಾಡಿ, ಸೃಷ್ಟಿಗೆ ತಹುದಾದ ಕಾರಣ ಕಾಯದ ಅತಿಪೆಷಣ ಬೇಡ. ಅತಿ ಪೆಷಣೆ ಮೃತ್ಯುವೆಂದುದು. ಜಪ ತಪ ಧ್ಯಾನ ಧಾರಣ ಪೂಜೆಗೆ ಸೂಕ್ಷ್ಮದಿಂ ತನುಮಾತ್ರವಿದ್ದರೆ ಸಾಲದೆ ತನುವ ಪೆಷಿಸುವ ಆಸೆ ಯತಿತ್ವಕ್ಕೆ ವಿಫ್ಸ್ನವೆಂದುದು. ತನು ಪೆಷಣೆಯಿಂದ ತಾಮಸ ಹೆಚ್ಚಿ, ಅಜ್ಞಾನದಿಂ ವಿರಕ್ತಿ ಹಾನಿ, ಅರಿವು ನಷ್ಟ,
ಆಹಾರವ ಕಿರಿದು ಮಾಡಿರಣ್ಣಾ, ಆಹಾರವ ಕಿರಿದು ಮಾಡಿ. Read More »
ಆಶೆಯಾಮಿಷವಳಿದು, ಹುಸಿ ವಿಷಯಂಗಳೆಲ್ಲ ಹಿಂಗಿ, ಸಂಶಯ ಸಂಬಂಧ ವಿಸಂಬಂಧವಾಯಿತ್ತು ನೋಡಾ. ಎನ್ನ ಮನದೊಳಗೆ ಘನಪರಿಣಾಮವ ಕಂಡು ಮನ ಮಗ್ನವಾಯಿತ್ತಯ್ಯಾ. ಚೆನ್ನಮಲ್ಲಿಕಾರ್ಜುನಾ, ನಿಮ್ಮ ಶರಣ ಪ್ರಭುದೇವರ ಕರುಣದಿಂದ ಬದುಕಿದೆನಯ್ಯಾ.
ಆಶೆಯಾಮಿಷವಳಿದು, ಹುಸಿ ವಿಷಯಂಗಳೆಲ್ಲ ಹಿಂಗಿ, Read More »
ಆವ ವಿದ್ಯೆಯ ಕಲಿತಡೇನು ಸಾವ ವಿದ್ಯೆ ಬೆನ್ನಬಿಡದು. ಅಶನವ ತೊರೆದಡೇನು, ವ್ಯಸನವ ಮರೆದಡೇನು ಉಸುರ ಹಿಡಿದಡೇನು, ಬಸುರ ಕಟ್ಟಿದಡೇನು ಚೆನ್ನಮಲ್ಲಿಕಾರ್ಜುನದೇವಯ್ಯಾ, ನೆಲ ತಳವಾರನಾದಡೆ ಕಳ್ಳನೆಲ್ಲಿಗೆ ಹೋಹನು
ಆವ ವಿದ್ಯೆಯ ಕಲಿತಡೇನು Read More »
ಆನು ನೊಂದೆನಯ್ಯಾ, ಆನು ಬೆಂದೆನಯ್ಯಾ, ಆನು ಬೆಂದ ಬೇಗೆಯನರಿಯದೆ ಕೆಟ್ಟೆನಯ್ಯಾ, ಆನು ಕೆಟ್ಟ ಕೇಡನೇನೆಂದು ಹವಣಿಸುವೆನಯ್ಯಾ ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ಶರಣರ ನೋವ ಕಂಡು ಆನು ಬೆಂದೆನಯ್ಯಾ.
ಆನು ನೊಂದೆನಯ್ಯಾ, ಆನು ಬೆಂದೆನಯ್ಯಾ, Read More »
ಆದಿ ಅನಾದಿಯೆನ್ನದೆ ಬಸವಣ್ಣ ಗಣಮೇಳಾಪವಾಗಿ ಅನಂತ ಯುಗಂಗಳಲ್ಲಿಯೂ ಸಕಲ ಲೋಕದೊಳು ಚರಿಸುತ್ತಿಪ್ಪ ಸುಳುಹನರಿಯದೆ ಸಕಲ ನಿಃಕಲರೆಲ್ಲ ಭ್ರಮೆಗೊಂಡು ಬೀಳುತ್ತೇಳುತ್ತಿರ್ದರು. ಇವರೆಲ್ಲರ ಮುಂದೆ ಆ ಗಣಂಗಳ ನಾನರಿದು ಬದುಕಿದೆನು ಕಾಣಾ ಶ್ರೀಶೈಲಚೆನ್ನಮಲ್ಲಿಕಾರ್ಜುನಾ.
ಆದಿ ಅನಾದಿಯೆನ್ನದೆ ಬಸವಣ್ಣ ಗಣಮೇಳಾಪವಾಗಿ Read More »
ಆದಿ ಅನಾದಿ ನಿತ್ಯಾನಿತ್ಯವ ತಿಳಿಯಲರಿಯದೆ ವಾಯಕ್ಕೆ ಪರಬ್ರಹ್ಮವ ನುಡಿವ ವಾಯುಪ್ರಾಣಿಗಳವರೆತ್ತ ಬಲ್ಲರೋ, ಆ ಪರಬ್ರಹ್ಮದ ನಿಜದ ನಿಲವ ? ಅದೆಂತೆಂದಡೆ ; ಆದಿಯೆ ದೇಹ, ಅನಾದಿಯೆ ನಿರ್ದೇಹ, ಆದಿಯೆ ಸಕಲ, ಅನಾದಿಯೆ ನಿಷ್ಕಲ, ಆದಿಯೆ ಜಡ, ಅನಾದಿಯೆ ಅಜಡ. ಆದಿಯೆ ಕಾಯ, ಅನಾದಿಯೆ ಪ್ರಾಣ. ಈ ಎರಡರ ಯೋಗವ ಭೇದಿಸಿ ತನ್ನಿಂದ ತಾನೆ ತಿಳಿದು ನೋಡಲು, ಆದಿ ಸಂಬಂಧವಪ್ಪ ಭೂತಂಗಳು ನಾನಲ್ಲ. ದಶವಿಧೇಂದ್ರಿಯಂಗಳು ನಾನಲ್ಲ, ದಶವಾಯುಗಳು ನಾನಲ್ಲ. ಅಷ್ಟಮದಂಗಳು, ಸಪ್ತವ್ಯಸನಂಗಳು, ಅರಿಷಡ್ವರ್ಗಂಗಳು, ಷಡೂರ್ಮಿಗಳು, ಷಡ್ಬ್ರಮೆಗಳು, ಷಡ್ಭಾವವಿಕಾರಂಗಳು, ಷಟ್ಕರ್ಮಂಗಳು,
ಆದಿ ಅನಾದಿ ನಿತ್ಯಾನಿತ್ಯವ ತಿಳಿಯಲರಿಯದೆ Read More »
ಆಧಾರ ಸ್ವಾಧಿಷ್ಠಾನ ಮಣಿಪೂರಕ ವಿಶುದ್ಧಿ ಆಯವ ನುಡಿದಡೇನು ಆದಿ ಅನಾದಿಯ ಸುದ್ದಿಯ ಕೇಳಿದಡೇನು ಹೇಳಿದಡೇನು ತನ್ನಲ್ಲಿದ್ದುದ ತಾನರಿಯದನ್ನಕ್ಕರ. ಉನ್ಮನಿಯ ರಭಸದ ಮನ ಪವನದ ಮೇಲೆ ಚೆನ್ನಮಲ್ಲಿಕಾರ್ಜುನಯ್ಯನ ಭೇದಿಸಲರಿಯರು.
ಆಧಾರ ಸ್ವಾಧಿಷ್ಠಾನ ಮಣಿಪೂರಕ Read More »
ಆತುರದ ಧ್ಯಾನದಿಂದ ಧಾವತಿಗೊಂಡೆ ; ಜ್ಯೋತಿರ್ಲಿಂಗವ ಕಾಣಿಸಬಾರದು. ಮಾತಿನ ಮಾಲೆಗೆ ಸಿಲುಕುವನಲ್ಲ ; ಧಾತುಗೆಡಿಸಿ ಮನವ ನೋಡಿ ಕಾಡುವನು. ಆತುಮನಂತರ ಪರವನರಿದಡೆ ಆತನೆ ಯೋಗಿ ; ಆತನ ಪಾದಕ್ಕೆ ಶರಣೆಂಬೆನಯ್ಯಾಚೆನ್ನಮಲ್ಲಿಕಾರ್ಜುನಾ.
ಆತುರದ ಧ್ಯಾನದಿಂದ ಧಾವತಿಗೊಂಡೆ Read More »
ಆಡುವುದು ಹಾಡುವುದು ಹೇಳುವುದು ಕೇಳುವುದು ನಡೆವುದು ನುಡಿವುದು ಸರಸ ಸಮ್ಮೇಳವಾಗಿಪ್ಪುದಯ್ಯಾ ಶರಣರೊಡನೆ. ಚೆನ್ನಮಲ್ಲಿಕಾರ್ಜುನಯ್ಯಾ, ನೀ ಕೊಟ್ಟ ಆಯುಷ್ಯವುಳ್ಳನ್ನಕ್ಕರಲಿಂಗಸುಖಿಗಳ ಸಂಗದಲ್ಲಿ ದಿನಗಳ ಕಳೆವೆನು.
ಆಡುವುದು ಹಾಡುವುದು ಹೇಳುವುದು ಕೇಳುವುದು Read More »
ಆಡಬಹುದು ಪಾಡಬಹುದಲ್ಲದೆ ನುಡಿದಂತೆ ನಡೆಯಬಾರದು ಎಲೆ ತಂದೆ. ಲಿಂಗಕ್ಕೆ ಶರಣೆನ್ನಬಹುದಲ್ಲದೆ ಜಂಗಮಕ್ಕೆ ಶರಣೆನ್ನಬಾರದೆಲೆ ತಂದೆ. ಚೆನ್ನಮಲ್ಲಿಕಾರ್ಜುನದೇವಾ,ನಿಮ್ಮ ಶರಣರು ನುಡಿದಂತೆ ನಡೆಯಬಲ್ಲರು ಎಲೆ ತಂದೆ.
ಆಡಬಹುದು ಪಾಡಬಹುದಲ್ಲದೆ Read More »
ಆರೂ ಇಲ್ಲದವಳೆಂದು ಆಳಿಗೊಳಲುಬೇಡ ಕಂಡೆಯಾ ಎನ ಮಾಡಿದಡೂ ಆನಂಜುವಳಲ್ಲ. ತರಗೆಲೆಯ ಮೆಲಿದು ಆನಿಹೆನು, ಸರಿಯ ಮೇಲೊರಗಿ ಆನಿಹೆನು. ಚೆನ್ನಮಲ್ಲಿಕಾರ್ಜುನಯ್ಯಾ, ಕರ ಕೇಡನೊಡ್ಡಿದಡೆ ಒಡಲನು ಪ್ರಾಣವನು ನಿಮಗರ್ಪಿಸಿ ಶುದ್ಧಳಹೆನು.
ಆರೂ ಇಲ್ಲದವಳೆಂದು ಆಳಿಗೊಳಲುಬೇಡ ಕಂಡೆಯಾ Read More »
ಆಕಾರವಿಲ್ಲದ ನಿರಾಕಾರ ಲಿಂಗವ ಕೈಯಲ್ಲಿ ಹಿಡಿದು ಕಟ್ಟಿದೆವೆಂಬರು ಅಜ್ಞಾನಿ ಜೀವಿಗಳು. ಹರಿಬ್ರಹ್ಮರು ವೇದ ಪುರಾಣ ಆಗಮಂಗಳು ಅರಸಿ ಕಾಣದ ಲಿಂಗ. ಭಕ್ತಿಗೆ ಫಲವಲ್ಲದೆ ಲಿಂಗವಿಲ್ಲ. ಕರ್ಮಕ್ಕೆ ನರಕವಲ್ಲದೆ ಲಿಂಗವಿಲ್ಲ. ಜ್ಞಾನಕ್ಕೆ ಪರಿಭ್ರಮಣವಲ್ಲದೆ ಲಿಂಗವಿಲ್ಲ. ವೈರಾಗ್ಯಕ್ಕೆ ಮುಕ್ತಿಯಲ್ಲದೆ ಲಿಂಗವಿಲ್ಲ. ಇದು ಕಾರಣ ತನ್ನ ತಾನರಿದು ತಾನಾದಡೆಚೆನ್ನಮಲ್ಲಿಕಾರ್ಜುನ ತಾನೆ ಬೇರಿಲ್ಲ.
ಆಕಾರವಿಲ್ಲದ ನಿರಾಕಾರ ಲಿಂಗವ Read More »
ಆಯುಷ್ಯ ಹೋಗುತ್ತಿದೆ, ಭವಿಷ್ಯ ತೊಲಗುತ್ತಿದೆ, ಕೂಡಿರ್ದ ಸತಿಸುತರು ತಮತಮಗೆ ಹರಿದು ಹೋಗುತ್ತೈದಾರೆ ; ಬೇಡ ಬೇಡವೆಲೆ ಬಂಜೆಯಾಗಿ ಕೆಡಬೇಡ ಬಯಲಿಂಗೆ ಮನವೆ, ಚೆನ್ನಮಲ್ಲಿಕಾರ್ಜುನನ ಶರಣರ ಸಂಗದಲ್ಲಿ, ಹೂಣಿ ಹೊಕ್ಕು ಬದುಕು ಕಂಡಾ,ಮನವೆ.
ಆಯುಷ್ಯ ಹೋಗುತ್ತಿದೆ, ಭವಿಷ್ಯ ತೊಲಗುತ್ತಿದೆ, Read More »
ಆಯತ ಸ್ವಾಯತ ಅನುಭಾವವ ನಾನೆತ್ತ ಬಲ್ಲೆನಯ್ಯಾ ಗುರು ಲಿಂಗ ಜಂಗಮಕ್ಕೆ ಅರ್ಥಪ್ರಾಣಾಭಿಮಾನವಂ ಸಮರ್ಪಿಸಿ, ಅಹಂಕಾರವಳಿದಿಹಂತಹ ಪುರಾತನರ ಮನೆಯಲ್ಲಿ ಭೃತ್ಯರ ಭೃತ್ಯಳಾಗಿಪ್ಪೆನಯ್ಯಾ. ಇದು ಕಾರಣ, ಚೆನ್ನಮಲ್ಲಿಕಾರ್ಜುನಯ್ಯನ ಗಣಂಗಳಲ್ಲದನ್ಯವ ನಾನರಿಯೆನಯ್ಯಾ.
ಆಯತ ಸ್ವಾಯತ ಅನುಭಾವವ ನಾನೆತ್ತ ಬಲ್ಲೆನಯ್ಯಾ Read More »
ಅಸನದಿಂದ ಕುದಿದು, ವ್ಯಸನದಿಂದ ಬೆಂದು, ಅತಿ ಆಸೆಯಿಂದ ಬಳಲಿ, ವಿಷಯಕ್ಕೆ ಹರಿವ ಜೀವಿಗಳು ನಿಮ್ಮನರಿಯರು. ಕಾಲಕಲ್ಪಿತ ಪ್ರಳಯ ಜೀವಿಗಳೆಲ್ಲನಿಮ್ಮನೆತ್ತ ಬಲ್ಲರಯ್ಯ ಚೆನ್ನಮಲ್ಲಿಕಾರ್ಜುನಾ ?
ಅಷ್ಟವಿಧಾರ್ಚನೆಯ ಮಾಡಿ ಒಲಿಸುವೆನೆ ಅಯ್ಯಾ ನೀನು ಬಹಿರಂಗವ್ಯವಹಾರದೂರಸ್ಥನು. ಅಂತರಂಗದಲ್ಲಿ ಧ್ಯಾನವ ಮಾಡಿ ಒಲಿಸುವೆನೆ ಅಯ್ಯಾ ನೀನು ವಾಙ್ಮನಕ್ಕತೀತನು. ಜಪಸ್ತೋತ್ರದಿಂದ ಒಲಿಸುವೆನೆ ಅಯ್ಯಾ ನೀನು ನಾದಾತೀತನು. ಭಾವe್ಞನದಿಂದ ಒಲಿಸುವೆನೆ ಅಯ್ಯಾ ನೀನು ಮತಿಗತೀತನು. ಹೃದಯ ಕಮಲಮಧ್ಯದಲ್ಲಿ ಇಂಬಿಟ್ಟುಕೊಂಬೆನೆ ಅಯ್ಯಾ ನೀನು ಸರ್ವಾಂಗ ಪರಿಪೂರ್ಣನು. ಒಲಿಸಲೆನ್ನಳವಲ್ಲ ನೀನೊಲಿವುದೆ ಸುಖವಯ್ಯಾ ಚೆನ್ನಮಲ್ಲಿಕಾರ್ಜುನಯ್ಯಾ.
ಅಷ್ಟವಿಧಾರ್ಚನೆಯ ಮಾಡಿ ಒಲಿಸುವೆನೆ ಅಯ್ಯಾ Read More »
ಅಷ್ಟದಳಕಮಲದ ಆತ್ಮನೊಳಗೆ ಸೃಷ್ಟಿ ಜನಿಸಿ, ಕೂರುಮ ದಿಗುದಂತಿ ದಿಗುವಳಯವ ನುಂಗಿ, ನಿಜಶೂನ್ಯ ತಾನಾದ ಬಳಿಕ, ತನ್ನ ತಾನರಿದ ನಿಜಪದ ಭಿನ್ನಯೋಗಕ್ಕೆ ಬಹುದೆ ಕಂಗಳ ನೋಟದಲ್ಲಿ ಮನದ ಸೊಗಸಿನಲ್ಲಿ, ಅನಂಗನ ದಾಳಿಯನಗಲಿದೆನಣ್ಣಾ. ಮರೀಚಿಕಾಜಲದೊಳಡಗಿದ ಪ್ರಾಣಿ ವ್ಯಾಧನ ಬಲೆಯೊಳಗಹುದೆ ಎನ್ನದೇವ ಚೆನ್ನಮಲ್ಲಿಕಾರ್ಜುನನಲ್ಲದೆಪರಪುರುಷರು ನಮಗಾಗದಣ್ಣಾ.
ಅಷ್ಟದಳಕಮಲದ ಆತ್ಮನೊಳಗೆ ಸೃಷ್ಟಿ ಜನಿಸಿ, Read More »
ಅಲ್ಲೆಂದಡೆ ಉಂಟೆಂಬುದೀ ಮಾಯೆ ಒಲ್ಲೆನೆಂದಡೆ ಬಿಡದೀ ಮಾಯೆ ಎನಗಿದು ವಿಧಿಯೆ ಚೆನ್ನಮಲ್ಲಿಕಾರ್ಜುನಯ್ಯಾ, ಒಪ್ಪಿ ಮರೆವೊಕ್ಕಡೆ ಮತ್ತುಂಟೆಕಾಯಯ್ಯಾ ಶಿವಧೋ !
ಅಲ್ಲೆಂದಡೆ ಉಂಟೆಂಬುದೀ ಮಾಯೆ Read More »
ಅಲ್ಲದವರೊಡನಾಡಿ ಎಲ್ಲಾ ಸಂಗವ ತೊರೆದೆ ನಾನು. ನಾರಿ ಸಂಗವತೊರೆದೆ, ನೀರ ಹೊಳೆಯ ತೊರೆದೆ ನಾನು. ಎನ್ನ ಮನದೊಡೆಯ ಚೆನ್ನಮಲ್ಲಿಕಾರ್ಜುನನ ಕೂಡುವ ಭರದಿಂದಎಲ್ಲಾ ಸಂಗವ ತೊರೆದೆ ನಾನು.
ಅಲ್ಲದವರೊಡನಾಡಿ ಎಲ್ಲಾ ಸಂಗವ ತೊರೆದೆ ನಾನು. Read More »
ಅಮೇಧ್ಯದ ಮಡಿಕೆ, ಮೂತ್ರದ ಕುಡಿಕೆ, ಎಲುವಿನ ತಡಿಕೆ, ಕೀವಿನ ಹಡಿಕೆ ಸುಡಲೀ ದೇಹವ ; ಒಡಲುವಿಡಿದು ಕೆಡದಿರು, ಚೆನ್ನಮಲ್ಲಿಕಾರ್ಜುನನನರಿಯದ ಮರುಳೆ.
ಅಮೇಧ್ಯದ ಮಡಿಕೆ, ಮೂತ್ರದ ಕುಡಿಕೆ, Read More »
ಅಮೃತವನುಂಬ ಶಿಶುವಿಂಗೆ ವಿಷವನೂಡುವರೆ ಅಯ್ಯಾ ನೆಳಲ ತಂಪಿನಲ್ಲಿ ಬೆಳೆದ ಸಸಿಗೆ ಉರಿಯ ಬೇಲಿಯ ಕಟ್ಟುವರೆ ಅಯ್ಯಾ ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ಕರುಣದ ಕಂದನೊಡನೆಸೂನೆಗಾರರ ಮಾತನಾಡಿಸುವರೆ ಅಯ್ಯಾ
ಅಮೃತವನುಂಬ ಶಿಶುವಿಂಗೆ ವಿಷವನೂಡುವರೆ ಅಯ್ಯಾ Read More »
ಅಪಾರ ಘನಗಂಭೀರದ ಅಂಬುದಿಯಲ್ಲಿ ತಾರಾಪಥವಂ ನೋಡಿ ನಡೆಯೆ, ಭೈತ್ರದಿಂದ ದ್ವೀಪ ದ್ವೀಪಾಂತರಕ್ಕೆ ಸಕಲ ಪದಾರ್ಥವನೆಯ್ದಿಸುವುದು, ಎನ್ನ ದೇವ ಚೆನ್ನಮಲ್ಲಿಕಾರ್ಜುನಯ್ಯನ ಸಮೀಪ ತೂರ್ಯಸಂಭಾಷಣೆಯನರಿದಡೆಮುನ್ನಿನಲ್ಲಿಗೆಯ್ದಿಸುವುದು.
ಅಪಾರ ಘನಗಂಭೀರದ ಅಂಬುದಿಯಲ್ಲಿ Read More »
ಅನಿಮಿಷನಲ್ಲಮಯ್ಯ, ಮರುಳಶಂಕರಯ್ಯ, ಕೋಲಶಾಂತಯ್ಯ, ಮಾದಾರ ಧೂಳಯ್ಯ, ಮಿಂಡಮಲ್ಲಿನಾಥ, ಚೆನ್ನಬಸವಣ್ಣ, ಚೇರಮರಾಯ, ತೆಲುಗ ಜೊಮ್ಮಣ್ಣ, ಕಿನ್ನರಯ್ಯ, ಹಲಾಯುಧ, ದಾಸಿಮಯ್ಯ, ಭಂಡಾರಿ, ಬಸವರಾಜ ಮುಖ್ಯವಾದಚೆನ್ನಮಲ್ಲಿಕಾರ್ಜುನನ ಶರಣರಿಗೆ ನಮೋ ನಮೋ ಎಂಬೆನು.
ಅನಿಮಿಷನಲ್ಲಮಯ್ಯ, ಮರುಳಶಂಕರಯ್ಯ, Read More »
ಅನ್ನವ ನೀಡುವವರಿಂಗೆ ಧಾನ್ಯವೆಸೆವ ಲೋಕ. ಅರ್ಥವ ಕೊಡುವವರಿಂಗೆ ಪಾಷಾಣವೆಸೆವ ಲೋಕ. ಹೆಣ್ಣು ಹೊನ್ನು ಮಣ್ಣು ಮೂರನೂ ಕಣ್ಣಿನಲಿ ನೋಡಿ, ಕಿವಿಯಲಿ ಕೇಳಿ, ಕೈಯಲಿ ಮುಟ್ಟಿ, ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತ್ತು. ತನ್ನನಿತ್ತು ತುಷ್ಟಿವಡೆವರನೆನಗೆ ತೋರಾಶ್ರೀಗಿರಿ ಚೆನ್ನಮಲ್ಲಿಕಾರ್ಜುನಾ.
ಅನ್ನವ ನೀಡುವವರಿಂಗೆ ಧಾನ್ಯವೆಸೆವ ಲೋಕ. Read More »