ಆಪನಿ ಕೋರಿಲೆ ಅಪನಾರ ಪೂಜಾ

ನಾಯಕೀ ಕಾನಾಡಾ—ಏಕ್ತಾಲ್ ಆಪನಿ ಕೋರಿಲೆ ಅಪನಾರ ಪೂಜಾ ಅಪನಾರ ಸ್ತುತಿ ಗಾನ।ಭವತಾರಿಣೀರ್ ಪೂಜಾರಿ ಠಾಕುರ್ ತುಮಿ ಹೇ ಅಮಾರ ಪ್ರಾಣ॥ ಕೆಹ ಬೋಲೆ ತುಮಿ ಸಾಧಕ-ಪ್ರಧಾನ, ಕೆಹ ದೇ ತೋಮಾ ದೇವತಾರ ಮಾನ|(ಅಮಿ) ಗೌರವ ಸಬ್ ತ್ಯಜಿಯೆ ದಿಯೇಛಿ ಹೃದಯೇ ಆಸನ ದಾನ॥ ಜಬೇ ಮೋನೇ ಪಡೇ ಕರುಣಾರ ಛಬಿ, ಪರ ದುಖೇ ಮ್ರಿಯಮಾಣ|ಪರ ಪಾಪ ಬಹಿ’ ರೋಗ-ಜ್ವಾಲಾ ಸಹಿ’, ತಾಪಿತೇ ಕರಿಲೆ ತ್ರಾಣ।। ದೇವ ಕಿ ಮಾನವ ಪರಿಚಯೇ ಆಜ, ಹೇನ ಪ್ರೇಮಿಕೇರ್ ಬಲೋ ಕೀ […]

ಆಪನಿ ಕೋರಿಲೆ ಅಪನಾರ ಪೂಜಾ Read More »

ಆಚಂಡಾಲಾಪ್ರತಿಹತರಯೋ

ಆಚಂಡಾಲಾಪ್ರತಿಹತರಯೋ ಯಸ್ಯ ಪ್ರೇಮ ಪ್ರವಾಹಃ ಲೋಕಾತೀತೋsಪ್ಯಹಹ ನ ಜಹೌ ಲೋಕಕಲ್ಯಾಣಮಾರ್ಗಮ್ | ತ್ರೈಲೋಕ್ಯೇsಪ್ಯಪ್ರತಿಮಮಹಿಮಾ ಜಾನಕೀಪ್ರಾಣಬಂಧೋ ಭಕ್ತ್ಯಾಜ್ಞಾನಂ ವೃತವರವಪುಃ ಸೀತಯಾ ಯೋ ಹಿ ರಾಮಃ || ಸ್ತಬ್ಧೀಕೃತ್ಯ ಪ್ರಲಯಕಲಿತಂ ವಾಹವೋತ್ಥಂ ಮಹಾಂತಂ ಹಿತ್ವಾರಾತ್ರಿಂ ಪ್ರಕೃತಿಸಹಜಾಂ ಅಂಧತಾಮಿಸ್ರಮಿಶ್ರಮ್ | ಗೀತಂ ಶಾಂತಂ ಮಧುರಮಪಿ ಯಃ ಸಿಂಹನಾದಂ ಜಗರ್ಜ ಸೋsಯಂ ಜಾತಃ ಪ್ರಥಿತಪುರುಷೋ ರಾಮಕೃಷ್ಣಸ್ತ್ವಿದಾನೀಮ್ || ನರದೇವ ದೇವ ಜಯ ಜಯ ನರದೇವ || ಶಕ್ತಿಸಮುದ್ರಸಮುತ್ಥತರಂಗಂ ದರ್ಶಿತಪ್ರೇಮವಿಜೃಂಭಿತರಂಗಂ ಸಂಶಯರಾಕ್ಷಸನಾಶಮಹಾಸ್ತ್ರಂ ಯಾಮಿ ಗುರುಂ ಶರಣಂ ಭವವೈದ್ಯಂ || ಅದ್ವಯತತ್ತ್ವಸಮಾಹಿತಚಿತ್ತಂ ಪ್ರೋಜ್ವಲಭಕ್ತಿಪಟಾವೃತವೃತ್ತಂ | ಕರ್ಮಕಲೇವರಮದ್ಭುತಚೇಷ್ಟಂ

ಆಚಂಡಾಲಾಪ್ರತಿಹತರಯೋ Read More »

ಕಠೋಪನಿಷತ್ ಸಂಗ್ರಹ

ಆತ್ಮಾನಂ ರಥಿನಂ ವಿದ್ಧಿ ಶರೀರಂ ರಥಮೇವ ತು | ಬುದ್ಧಿಂ ತು ಸಾರಥಿಂ ವಿದ್ಧಿ ಮನಃ ಪ್ರಗ್ರಹಮೇವ ಚ || 1 || ಇಂದ್ರಿಯಾಣಿ ಹಯಾನಾಹುಃ ವಿಷಯಾಂಸ್ತೇಷು ಗೋಚರಾನ್ | ಆತ್ಮೇಂದ್ರಿಯಮನೋಯುಕ್ತಂ ಭೋಕ್ತೇತ್ಯಾಹುರ್ಮನೀಷಿಣಃ||2|| ಯಸ್ತ್ವವಿಜ್ಞಾನವಾನ್ ಭವತಿ ಅಯುಕ್ತೇನ ಮನಸಾ ಸದಾ | ತಸ್ಯೇಂದ್ರಿಯಾಣ್ಯವಶ್ಯಾನಿ ದುಷ್ಟಾಶ್ವಾ ಇವ ಸಾರಥೇಃ || 3 || ಯಸ್ತು ವಿಜ್ಞಾನವಾನ್ ಭವತಿ ಯುಕ್ತೇನ ಮನಸಾ ಸದಾ | ತಸ್ಯೇಂದ್ರಿಯಾಣಿ ವಶ್ಯಾನಿ ಸದಶ್ವಾ ಇವ ಸಾರಥೇಃ || 4 || ಯಸ್ತ್ವವಿಜ್ಞಾನವಾನ್ ಭವತಿ ಅಮನಸ್ಕಃ

ಕಠೋಪನಿಷತ್ ಸಂಗ್ರಹ Read More »

ಇದನಾರಯ್ಯ ಬಲ್ಲರು

ಇದನಾರಯ್ಯ ಬಲ್ಲರು ಹಮ್ಮಳಿದ ಶರಣರ ಮೇಲಿಹ ಪರವ ಬಲ್ಲ ಶರಣ. ಪಂಚೇಂದ್ರಿಯದ ಇಂಗಿತವ ಬಲ್ಲ ಶರಣ. ಒಡಲ ಬಿಟ್ಟ ಶರಣನಲ್ಲದೆ, ಉಳಿದ ಪ್ರಾಣಘಾತಕ ಪಾತಕರಿವರೆತ್ತಲು, ಶ್ರೀಶೈಲ ಚೆನ್ನಮಲ್ಲಿಕಾರ್ಜುನಯ್ಯ, ನಿಮ್ಮ ಶರಣ ಬಸವಣ್ಣಂಗಲ್ಲದೆ.

ಇದನಾರಯ್ಯ ಬಲ್ಲರು Read More »

ಇಂದ್ರಿಯವ ಬಿಟ್ಟು ಕಾಯವಿರದು

ಇಂದ್ರಿಯವ ಬಿಟ್ಟು ಕಾಯವಿರದು ; ಕಾಯವ ಬಿಟ್ಟು ಇಂದ್ರಿಯವಿರದು. ಎಂತು ನಿಃಕಾಮಿಯೆಂಬೆ, ಎಂತು ನಿರ್ದೋಷಿಯೆಂಬೆ ನೀನೊಲಿದಡೆ ಸುಖಿಯಾಗಿಪ್ಪೆ, ನೀನೊಲ್ಲದಿರೆ ದುಃಖಿಯಾಗಿಪ್ಪೆನಯ್ಯಾ, ಚೆನ್ನಮಲ್ಲಿಕಾರ್ಜುನಾ.

ಇಂದ್ರಿಯವ ಬಿಟ್ಟು ಕಾಯವಿರದು Read More »

ಇಂದೆನ್ನ ಮನೆಗೆ ಒಡೆಯರು ಬಂದಡೆ

ಇಂದೆನ್ನ ಮನೆಗೆ ಒಡೆಯರು ಬಂದಡೆ ತನುವೆಂಬ ಕಳಶದಲುದಕವ ತುಂಬಿ, ಕಂಗಳ ಸೋನೆಯೊಡನೆ ಪಾದಾರ್ಚನೆಯ ಮಾಡುವೆ. ನಿತ್ಯ ಶಾಂತಿಯೆಂಬ ಶೈತ್ಯದೊಡನೆ ಸುಗಂಧವ ಪೂಸುವೆ. ಅಕ್ಷಯ ಸಂಪದವೆಂದರಿದು ಅಕ್ಷತೆಯನೇರಿಸುವೆ. ಹೃದಯಕಮಲ ಪುಷ್ಪದೊಡನೆ ಪೂಜೆಯ ಮಾಡುವೆ. ಸದ್ಭಾವನೆಯೊಡನೆ ಧೂಪವ ಬೀಸುವೆ. ಶಿವe್ಞನ ಪ್ರಕಾಶದೊಡನೆ ಮಂಗಳಾರತಿಯನೆತ್ತುವೆ. ನಿತ್ಯತೃಪ್ತಿಯೊಡನೆ ನೈವೇದ್ಯವ ಕೈಕೊಳಿಸುವೆ. ಪರಿಣಾಮದೊಡನೆ ಕರ್ಪೂರ ವೀಳೆಯವ ಕೊಡುವೆ. ಪಂಚಬ್ರಹ್ಮದೊಡನೆ ಪಂಚಮಹಾವಾದ್ಯವ ಕೇಳಿಸುವೆ. ಹರುಷದೊಡನೆ ನೋಡುವೆ, ಆನಂದದೊಡನೆ ಕುಣಿಕುಣಿದಾಡುವೆ, ಪರವಶದೊಡನೆ ಹಾಡುವೆ, ಭಕ್ತಿಯೊಡನೆ ಎರಗುವೆ, ನಿತ್ಯದೊಡನೆ ಕೂಡಿ ಆಡುವೆ. ಚೆನ್ನಮಲ್ಲಿಕಾರ್ಜುನಾ, ನಿಮ್ಮ ನಿಲವ ತೋರಿದ ಗುರುವಿನಡಿಯಲ್ಲಿ

ಇಂದೆನ್ನ ಮನೆಗೆ ಒಡೆಯರು ಬಂದಡೆ Read More »

ಇಂದ್ರನೀಲದ ಗಿರಿಯನೇರಿಕೊಂಡು

ಇಂದ್ರನೀಲದ ಗಿರಿಯನೇರಿಕೊಂಡು ಚಂದ್ರಕಾಂತದ ಶಿಲೆಯನಪ್ಪಿಕೊಂಡು ಕೊಂಬ ಬಾರಿಸುತ್ತ ಎಂದಿಪ್ಪೆನೊ ಶಿವನೆ ? ನಿಮ್ಮ ನೆನೆವುತ್ತ ಎಂದಿಪ್ಪೆನೊ ? ಅಂಗಭಂಗ ಮನಭಂಗವಳಿದು ನಿಮ್ಮನೆಂದಿಂಗೊಮ್ಮೆ ನೆರೆವೆನಯ್ಯಾ ಚೆನ್ನಮಲ್ಲಿಕಾರ್ಜುನಾ ?

ಇಂದ್ರನೀಲದ ಗಿರಿಯನೇರಿಕೊಂಡು Read More »

ಆಳುತನದ ಮಾತನಾಡದಿರೆಲವೊ

ಆಳುತನದ ಮಾತನಾಡದಿರೆಲವೊ ಮೇಲೆ ಕಾರ್ಯದಿಮ್ಮಿತ್ತಣ್ಣಾ. ಅಲಗಿನ ಮೊನೆಯ ಧಾರೆ ಮಿಂಚುವಾಗ ಕೋಡದೆ ಕೊಂಕದೆ ನಿಲಬೇಕಯ್ಯ. ಬಂಟ ಬೆಟ್ಟ ಭಕ್ತಿಯೊಂದೆ ಕಂಡಯ್ಯ ಚೆನ್ನಮಲ್ಲಿಕಾರ್ಜುನನಂತಲ್ಲದೊಲ್ಲ.

ಆಳುತನದ ಮಾತನಾಡದಿರೆಲವೊ Read More »

ಆಹಾರವ ಕಿರಿದು ಮಾಡಿರಣ್ಣಾ, ಆಹಾರವ ಕಿರಿದು ಮಾಡಿ.

ಆಹಾರವ ಕಿರಿದು ಮಾಡಿರಣ್ಣಾ, ಆಹಾರವ ಕಿರಿದು ಮಾಡಿ. ಆಹಾರದಿಂದ ವ್ಯಾಧಿ ಹಬ್ಬಿ ಬಲಿವುದಯ್ಯಾ. ಆಹಾರದಿಂ ನಿದ್ರೆ, ನಿದ್ರೆಯಿಂ ತಾಮಸ, ಅಜ್ಞಾನ, ಮೈಮರಹು, ಅಜ್ಞಾನದಿಂ ಕಾಮವಿಕಾರ ಹೆಚ್ಚಿ, ಕಾಯವಿಕಾರ, ಮನೋವಿಕಾರ, ಇಂದ್ರಿಯವಿಕಾರ, ಭಾವವಿಕಾರ, ವಾಯುವಿಕಾರವನುಂಟುಮಾಡಿ, ಸೃಷ್ಟಿಗೆ ತಹುದಾದ ಕಾರಣ ಕಾಯದ ಅತಿಪೆಷಣ ಬೇಡ. ಅತಿ ಪೆಷಣೆ ಮೃತ್ಯುವೆಂದುದು. ಜಪ ತಪ ಧ್ಯಾನ ಧಾರಣ ಪೂಜೆಗೆ ಸೂಕ್ಷ್ಮದಿಂ ತನುಮಾತ್ರವಿದ್ದರೆ ಸಾಲದೆ ತನುವ ಪೆಷಿಸುವ ಆಸೆ ಯತಿತ್ವಕ್ಕೆ ವಿಫ್ಸ್ನವೆಂದುದು. ತನು ಪೆಷಣೆಯಿಂದ ತಾಮಸ ಹೆಚ್ಚಿ, ಅಜ್ಞಾನದಿಂ ವಿರಕ್ತಿ ಹಾನಿ, ಅರಿವು ನಷ್ಟ,

ಆಹಾರವ ಕಿರಿದು ಮಾಡಿರಣ್ಣಾ, ಆಹಾರವ ಕಿರಿದು ಮಾಡಿ. Read More »

ಆಶೆಯಾಮಿಷವಳಿದು, ಹುಸಿ ವಿಷಯಂಗಳೆಲ್ಲ ಹಿಂಗಿ,

ಆಶೆಯಾಮಿಷವಳಿದು, ಹುಸಿ ವಿಷಯಂಗಳೆಲ್ಲ ಹಿಂಗಿ, ಸಂಶಯ ಸಂಬಂಧ ವಿಸಂಬಂಧವಾಯಿತ್ತು ನೋಡಾ. ಎನ್ನ ಮನದೊಳಗೆ ಘನಪರಿಣಾಮವ ಕಂಡು ಮನ ಮಗ್ನವಾಯಿತ್ತಯ್ಯಾ. ಚೆನ್ನಮಲ್ಲಿಕಾರ್ಜುನಾ, ನಿಮ್ಮ ಶರಣ ಪ್ರಭುದೇವರ ಕರುಣದಿಂದ ಬದುಕಿದೆನಯ್ಯಾ.

ಆಶೆಯಾಮಿಷವಳಿದು, ಹುಸಿ ವಿಷಯಂಗಳೆಲ್ಲ ಹಿಂಗಿ, Read More »

ಆವ ವಿದ್ಯೆಯ ಕಲಿತಡೇನು

ಆವ ವಿದ್ಯೆಯ ಕಲಿತಡೇನು ಸಾವ ವಿದ್ಯೆ ಬೆನ್ನಬಿಡದು. ಅಶನವ ತೊರೆದಡೇನು, ವ್ಯಸನವ ಮರೆದಡೇನು ಉಸುರ ಹಿಡಿದಡೇನು, ಬಸುರ ಕಟ್ಟಿದಡೇನು ಚೆನ್ನಮಲ್ಲಿಕಾರ್ಜುನದೇವಯ್ಯಾ, ನೆಲ ತಳವಾರನಾದಡೆ ಕಳ್ಳನೆಲ್ಲಿಗೆ ಹೋಹನು

ಆವ ವಿದ್ಯೆಯ ಕಲಿತಡೇನು Read More »

ಆನು ನೊಂದೆನಯ್ಯಾ, ಆನು ಬೆಂದೆನಯ್ಯಾ,

ಆನು ನೊಂದೆನಯ್ಯಾ, ಆನು ಬೆಂದೆನಯ್ಯಾ, ಆನು ಬೆಂದ ಬೇಗೆಯನರಿಯದೆ ಕೆಟ್ಟೆನಯ್ಯಾ, ಆನು ಕೆಟ್ಟ ಕೇಡನೇನೆಂದು ಹವಣಿಸುವೆನಯ್ಯಾ ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ಶರಣರ ನೋವ ಕಂಡು ಆನು ಬೆಂದೆನಯ್ಯಾ.

ಆನು ನೊಂದೆನಯ್ಯಾ, ಆನು ಬೆಂದೆನಯ್ಯಾ, Read More »

ಆದಿ ಅನಾದಿಯೆನ್ನದೆ ಬಸವಣ್ಣ ಗಣಮೇಳಾಪವಾಗಿ

ಆದಿ ಅನಾದಿಯೆನ್ನದೆ ಬಸವಣ್ಣ ಗಣಮೇಳಾಪವಾಗಿ ಅನಂತ ಯುಗಂಗಳಲ್ಲಿಯೂ ಸಕಲ ಲೋಕದೊಳು ಚರಿಸುತ್ತಿಪ್ಪ ಸುಳುಹನರಿಯದೆ ಸಕಲ ನಿಃಕಲರೆಲ್ಲ ಭ್ರಮೆಗೊಂಡು ಬೀಳುತ್ತೇಳುತ್ತಿರ್ದರು. ಇವರೆಲ್ಲರ ಮುಂದೆ ಆ ಗಣಂಗಳ ನಾನರಿದು ಬದುಕಿದೆನು ಕಾಣಾ ಶ್ರೀಶೈಲಚೆನ್ನಮಲ್ಲಿಕಾರ್ಜುನಾ.

ಆದಿ ಅನಾದಿಯೆನ್ನದೆ ಬಸವಣ್ಣ ಗಣಮೇಳಾಪವಾಗಿ Read More »

ಆದಿ ಅನಾದಿ ನಿತ್ಯಾನಿತ್ಯವ ತಿಳಿಯಲರಿಯದೆ

ಆದಿ ಅನಾದಿ ನಿತ್ಯಾನಿತ್ಯವ ತಿಳಿಯಲರಿಯದೆ ವಾಯಕ್ಕೆ ಪರಬ್ರಹ್ಮವ ನುಡಿವ ವಾಯುಪ್ರಾಣಿಗಳವರೆತ್ತ ಬಲ್ಲರೋ, ಆ ಪರಬ್ರಹ್ಮದ ನಿಜದ ನಿಲವ ? ಅದೆಂತೆಂದಡೆ ; ಆದಿಯೆ ದೇಹ, ಅನಾದಿಯೆ ನಿರ್ದೇಹ, ಆದಿಯೆ ಸಕಲ, ಅನಾದಿಯೆ ನಿಷ್ಕಲ, ಆದಿಯೆ ಜಡ, ಅನಾದಿಯೆ ಅಜಡ. ಆದಿಯೆ ಕಾಯ, ಅನಾದಿಯೆ ಪ್ರಾಣ. ಈ ಎರಡರ ಯೋಗವ ಭೇದಿಸಿ ತನ್ನಿಂದ ತಾನೆ ತಿಳಿದು ನೋಡಲು, ಆದಿ ಸಂಬಂಧವಪ್ಪ ಭೂತಂಗಳು ನಾನಲ್ಲ. ದಶವಿಧೇಂದ್ರಿಯಂಗಳು ನಾನಲ್ಲ, ದಶವಾಯುಗಳು ನಾನಲ್ಲ. ಅಷ್ಟಮದಂಗಳು, ಸಪ್ತವ್ಯಸನಂಗಳು, ಅರಿಷಡ್ವರ್ಗಂಗಳು, ಷಡೂರ್ಮಿಗಳು, ಷಡ್ಬ್ರಮೆಗಳು, ಷಡ್ಭಾವವಿಕಾರಂಗಳು, ಷಟ್ಕರ್ಮಂಗಳು,

ಆದಿ ಅನಾದಿ ನಿತ್ಯಾನಿತ್ಯವ ತಿಳಿಯಲರಿಯದೆ Read More »

ಆಧಾರ ಸ್ವಾಧಿಷ್ಠಾನ ಮಣಿಪೂರಕ

ಆಧಾರ ಸ್ವಾಧಿಷ್ಠಾನ ಮಣಿಪೂರಕ ವಿಶುದ್ಧಿ ಆಯವ ನುಡಿದಡೇನು ಆದಿ ಅನಾದಿಯ ಸುದ್ದಿಯ ಕೇಳಿದಡೇನು ಹೇಳಿದಡೇನು ತನ್ನಲ್ಲಿದ್ದುದ ತಾನರಿಯದನ್ನಕ್ಕರ. ಉನ್ಮನಿಯ ರಭಸದ ಮನ ಪವನದ ಮೇಲೆ ಚೆನ್ನಮಲ್ಲಿಕಾರ್ಜುನಯ್ಯನ ಭೇದಿಸಲರಿಯರು.

ಆಧಾರ ಸ್ವಾಧಿಷ್ಠಾನ ಮಣಿಪೂರಕ Read More »

ಆತುರದ ಧ್ಯಾನದಿಂದ ಧಾವತಿಗೊಂಡೆ

ಆತುರದ ಧ್ಯಾನದಿಂದ ಧಾವತಿಗೊಂಡೆ ; ಜ್ಯೋತಿರ್ಲಿಂಗವ ಕಾಣಿಸಬಾರದು. ಮಾತಿನ ಮಾಲೆಗೆ ಸಿಲುಕುವನಲ್ಲ ; ಧಾತುಗೆಡಿಸಿ ಮನವ ನೋಡಿ ಕಾಡುವನು. ಆತುಮನಂತರ ಪರವನರಿದಡೆ ಆತನೆ ಯೋಗಿ ; ಆತನ ಪಾದಕ್ಕೆ ಶರಣೆಂಬೆನಯ್ಯಾಚೆನ್ನಮಲ್ಲಿಕಾರ್ಜುನಾ.

ಆತುರದ ಧ್ಯಾನದಿಂದ ಧಾವತಿಗೊಂಡೆ Read More »

ಆಡುವುದು ಹಾಡುವುದು ಹೇಳುವುದು ಕೇಳುವುದು

ಆಡುವುದು ಹಾಡುವುದು ಹೇಳುವುದು ಕೇಳುವುದು ನಡೆವುದು ನುಡಿವುದು ಸರಸ ಸಮ್ಮೇಳವಾಗಿಪ್ಪುದಯ್ಯಾ ಶರಣರೊಡನೆ. ಚೆನ್ನಮಲ್ಲಿಕಾರ್ಜುನಯ್ಯಾ, ನೀ ಕೊಟ್ಟ ಆಯುಷ್ಯವುಳ್ಳನ್ನಕ್ಕರಲಿಂಗಸುಖಿಗಳ ಸಂಗದಲ್ಲಿ ದಿನಗಳ ಕಳೆವೆನು.

ಆಡುವುದು ಹಾಡುವುದು ಹೇಳುವುದು ಕೇಳುವುದು Read More »

ಆಡಬಹುದು ಪಾಡಬಹುದಲ್ಲದೆ

ಆಡಬಹುದು ಪಾಡಬಹುದಲ್ಲದೆ ನುಡಿದಂತೆ ನಡೆಯಬಾರದು ಎಲೆ ತಂದೆ. ಲಿಂಗಕ್ಕೆ ಶರಣೆನ್ನಬಹುದಲ್ಲದೆ ಜಂಗಮಕ್ಕೆ ಶರಣೆನ್ನಬಾರದೆಲೆ ತಂದೆ. ಚೆನ್ನಮಲ್ಲಿಕಾರ್ಜುನದೇವಾ,ನಿಮ್ಮ ಶರಣರು ನುಡಿದಂತೆ ನಡೆಯಬಲ್ಲರು ಎಲೆ ತಂದೆ.

ಆಡಬಹುದು ಪಾಡಬಹುದಲ್ಲದೆ Read More »

ಆರೂ ಇಲ್ಲದವಳೆಂದು ಆಳಿಗೊಳಲುಬೇಡ ಕಂಡೆಯಾ

ಆರೂ ಇಲ್ಲದವಳೆಂದು ಆಳಿಗೊಳಲುಬೇಡ ಕಂಡೆಯಾ ಎನ ಮಾಡಿದಡೂ ಆನಂಜುವಳಲ್ಲ. ತರಗೆಲೆಯ ಮೆಲಿದು ಆನಿಹೆನು, ಸರಿಯ ಮೇಲೊರಗಿ ಆನಿಹೆನು. ಚೆನ್ನಮಲ್ಲಿಕಾರ್ಜುನಯ್ಯಾ, ಕರ ಕೇಡನೊಡ್ಡಿದಡೆ ಒಡಲನು ಪ್ರಾಣವನು ನಿಮಗರ್ಪಿಸಿ ಶುದ್ಧಳಹೆನು.

ಆರೂ ಇಲ್ಲದವಳೆಂದು ಆಳಿಗೊಳಲುಬೇಡ ಕಂಡೆಯಾ Read More »

ಆಕಾರವಿಲ್ಲದ ನಿರಾಕಾರ ಲಿಂಗವ

ಆಕಾರವಿಲ್ಲದ ನಿರಾಕಾರ ಲಿಂಗವ ಕೈಯಲ್ಲಿ ಹಿಡಿದು ಕಟ್ಟಿದೆವೆಂಬರು ಅಜ್ಞಾನಿ ಜೀವಿಗಳು. ಹರಿಬ್ರಹ್ಮರು ವೇದ ಪುರಾಣ ಆಗಮಂಗಳು ಅರಸಿ ಕಾಣದ ಲಿಂಗ. ಭಕ್ತಿಗೆ ಫಲವಲ್ಲದೆ ಲಿಂಗವಿಲ್ಲ. ಕರ್ಮಕ್ಕೆ ನರಕವಲ್ಲದೆ ಲಿಂಗವಿಲ್ಲ. ಜ್ಞಾನಕ್ಕೆ ಪರಿಭ್ರಮಣವಲ್ಲದೆ ಲಿಂಗವಿಲ್ಲ. ವೈರಾಗ್ಯಕ್ಕೆ ಮುಕ್ತಿಯಲ್ಲದೆ ಲಿಂಗವಿಲ್ಲ. ಇದು ಕಾರಣ ತನ್ನ ತಾನರಿದು ತಾನಾದಡೆಚೆನ್ನಮಲ್ಲಿಕಾರ್ಜುನ ತಾನೆ ಬೇರಿಲ್ಲ.

ಆಕಾರವಿಲ್ಲದ ನಿರಾಕಾರ ಲಿಂಗವ Read More »

ಆಯುಷ್ಯ ಹೋಗುತ್ತಿದೆ, ಭವಿಷ್ಯ ತೊಲಗುತ್ತಿದೆ,

ಆಯುಷ್ಯ ಹೋಗುತ್ತಿದೆ, ಭವಿಷ್ಯ ತೊಲಗುತ್ತಿದೆ, ಕೂಡಿರ್ದ ಸತಿಸುತರು ತಮತಮಗೆ ಹರಿದು ಹೋಗುತ್ತೈದಾರೆ ; ಬೇಡ ಬೇಡವೆಲೆ ಬಂಜೆಯಾಗಿ ಕೆಡಬೇಡ ಬಯಲಿಂಗೆ ಮನವೆ, ಚೆನ್ನಮಲ್ಲಿಕಾರ್ಜುನನ ಶರಣರ ಸಂಗದಲ್ಲಿ, ಹೂಣಿ ಹೊಕ್ಕು ಬದುಕು ಕಂಡಾ,ಮನವೆ.

ಆಯುಷ್ಯ ಹೋಗುತ್ತಿದೆ, ಭವಿಷ್ಯ ತೊಲಗುತ್ತಿದೆ, Read More »

ಆವಾವ ಬಗೆಯಿಂದ ಹರಿಗರ್ಪಿಸೊ

ಆವಾವ ಬಗೆಯಿಂದ ಹರಿಗರ್ಪಿಸೊ ಭಾವ ಶುದ್ಧನಾಗಿ ಮುಖ್ಯತ್ವ ವಹಿಸದೆ ನೋಡುವ ನೋಟಗಳು ಹರಿಯೆ ನೋಡಿದನೆನ್ನಿ ವೋಡುವ ಆಟಗಳು ಹರಿಯೆ ವೋಡಿದನೆನ್ನಿ ಆಡುವ ಮಾತುಗಳು ಹರಿಯೆ ಆಡಿದನೆನ್ನಿ ||1|| ನಡಿವ ನಡಿಗೆ ಎಲ್ಲ ಹರಿಯೆ ನಡೆದನೆನ್ನಿ| ಕೊಡುವ ದಾನಗಳು ಹರಿಯೆ ಕೊಟ್ಟನೆನ್ನಿ ಒಡನಾಡುವ ಲೀಲೆ ಹರಿಯೆ ಆಡಿದನೆನ್ನಿ ಪಿಡಿವ ಚೇಷ್ಟೆಗಳೆಲ್ಲ ಹರಿಯೆ ಪಿಡಿದನೆನ್ನಿ ||2|| ಕೇಳುವ ಶಬ್ದಗಳು ಹರಿಯೆ ಕೇಳಿದನೆನ್ನಿ ಹೇಳುವ ವಿಧವನಿತು ಹರಿಯೆ ಎನ್ನಿ ಮಾಲೆ ಧರಿಸುವುದು ಹರಿಯೆ ಧರಿಸಿದನೆನ್ನಿ ಮೇಲು ಸುಖ ಬಡುವುದು ಹರಿಯೆ ಎನ್ನಿ||3||

ಆವಾವ ಬಗೆಯಿಂದ ಹರಿಗರ್ಪಿಸೊ Read More »

ಆವರೋಗವೆ ಯೆನಗೆ ದೇವ ಧನ್ವಂತ್ರೀ

ಆವರೋಗವೆ ಯೆನಗೆ ದೇವ ಧನ್ವಂತ್ರೀ ಸಾವಧಾನದಿಯೆನ್ನ ಕೈಪಿಡಿದು ನೋಡೋ ಹರಿಮೂರ್ತಿ ಕಾಣಿಸದು ಎನ್ನ ಕಂಗಳಿಗೆ ಹರಿಕೀರ್ತನೆ ಕೇಳದೆನ್ನ ಕಿವಿಗಳಿಗೆ ಹರಿಯ ಶ್ರೀಗಂಧವಾಘ್ರಾಣಿಸದೆನ್ನ ನಾಸಿಕವು ಹರಿಯಪ್ರಸಾದ ಜಿಹ್ವೆಗೆ ಸವಿಯಾಗದು ||1|| ಹರಿಪಾದ ಪೂಜಿಸೆ ಹಸ್ತಗಳು ಚರಿಸದು ಹರಿಗುರುಗಳಂಘ್ರಿಗೆ ಶಿರ ಬಾಗದು ಹರಿಯ ಸೇವೆಗೆ ಯೆನ್ನ ಅಂಗಗಳು ಚಲಿಸದು ಹರಿಯಾತ್ರೆಗೆನ್ನ ಕಾಲುಗಳೇಳದೋ ||2|| ಅನಾಥಬಂಧು ಶ್ರೀವಿಜಯವಿಠ್ಠಲರೇಯ ಯೆನ್ನ ಭಾಗ್ಯದ ಸ್ವಾಮಿಯಾಗಿ ನೀನೊ ಅನಾದಿಕಾಲದ ಘನರೋಗವನೆ ಬಿಡಿಸು ನಿನ್ನ ಉಪಕಾರವ ನಾನೆಂದಿಗೂ ಮರೆಯೇ ||3||

ಆವರೋಗವೆ ಯೆನಗೆ ದೇವ ಧನ್ವಂತ್ರೀ Read More »

ಆವಪರಿಯಲಿ ನಿನ್ನನು ವೊಲಿಸುವೆ

ಆವಪರಿಯಲಿ ನಿನ್ನನು ವೊಲಿಸುವೆ ದೇವ ಎನ್ನೊಳಗೆ ಒಂದಾದರೂ ಗುಣವಿಲ್ಲಾ ಅರಿಯೆ ಧರ್ಮವ ಪಾಪ | ಮರಿಯೆ ಉತ್ತಮರನ್ನ ಕರಿಯೆ ನಾಮಕೆ ಬಾಯಿ | ತೆರಿಯೆ ಸುರಿಯೆ ಜರಿಯೆ ಮೋºಕೆ ಮನ | ಮುರಿಯೆ ವ್ಯಾಕುಲಜ್ಞಾನಾಂ | ಕುರಿಯ ನಿನ್ನವರೊಳು | ಬೆರಿಯೆನರಿಯೆ ಸರಿಯೆ ದುಸ್ಸಂಗ ಕಥಾ | ಬರಿಯೆ ಕರದಿ ಯಾತ್ರಿಗೆ ಹರಿಯೆ ಪುಣ್ಯ ತೀರ್ಥ | ವರಿಯೆ ಮೊರಿಯೆ ಹರಿಯೆ ಜಗದೊರೆಯೆ | ಸಿರಿದೊರೆಯೆ ಅಘ ಕರಿಗೆ ಕೇಸರಿಯೆ ಮತ್ತಾ | ರರಿಯೆ ನಿನ್ನವರ ಮರಿಯೆ||1||

ಆವಪರಿಯಲಿ ನಿನ್ನನು ವೊಲಿಸುವೆ Read More »

ಆವದೆನೆಗೆ ಪ್ರೀತಿ ಎಂದೆಂಬಿಯಾ

ಆವದೆನೆಗೆ ಪ್ರೀತಿ ಎಂದೆಂಬಿಯಾ | ದೇವ ದೇವಕಿ ತನುಜ ಬಿನ್ನಪವ ಮಾಡುವೆನೊ ದೊರೆತನವಲ್ಲೆ ಧನವಲ್ಲೆ ಒಬ್ಬರ ಬಳಿಯ | ಹಿರಿಯತನವಲ್ಲೆ ಹಿಗ್ಗುವುದು ವಲ್ಲೆ | ಹರಿ ನಿನ್ನ ಚರಣಗಳ ಸ್ಮರಿಸುವ ಭಾಗವತರ | ಅರಮನೆಯ ಬೀದಿಯಲಿ ಹೊರಳುವ ಭಾಗ್ಯವ ಕೊಡು ||1|| ಪಂಡಿತನಾಗಲಿವಲ್ಲೆ ಫಲವಲ್ಲೆ ನಾವು ಪ್ರ | ಚಂಡ ಯೋಗಗಳೊಲ್ಲೆ ಯಾಗವಲ್ಲೆ | ಥಂಡ ಥÀಂಡದಿ ನಿನ್ನ ಕೊಂಡಾಡುವರ ಬಳಿಯ | ಕೊಂಡರಾಗಿಪ್ಪವರ ಸೇರುವ ಭಾಗ್ಯವ ಕೊಡು ||2|| ಅಂದಣವೇರಲಿವಲ್ಲೆ ಆತ್ಮಸುಖವಲ್ಲೆ ನಾ | ನೆಂದು

ಆವದೆನೆಗೆ ಪ್ರೀತಿ ಎಂದೆಂಬಿಯಾ Read More »