ಕನ್ಯಾಕುಮಾರಿ ಮಂದಿರತಲೆ ಹೆ ಯತಿ

ಭೀಮಪಲಶ್ರೀ—ಎಕತಾಲ್ ಕನ್ಯಾಕುಮಾರಿ ಮಂದಿರತಲೆ ಹೆ ಯತಿ, ಕೇ ತುಮಿ ಶಿಲಾಸನೇ।ಝರ ಝರ ಝರೇ ಕರುಣಾರ ಧಾರಾ ಜು¹ಗಲ ಕಮಲ ನಜ಼¹ನೇ॥ ನೀರಬ ಸಾಧನೇ ಭಾರತ ಭ್ರಮಿಜಾ಼¹, ಕಾಁದಿಲ ಕಿ ಹಿಜಾ಼¹ ದೈನ್ಜ¹ ಹೇರಿಜಾ಼¹,ಬಿರಾಮ ಬಿಹೀನ ಭಾಬೇ ನಿಶಿದಿನ ತಾಪಿತೇ ತಾರಿಬೇ ಕೇಮನೇ॥ ಬಿಬೇಕೋಜ್ಜ್ಬಲ ಬಿಬೇಕಾನನ್ದ ಗತಸಂಶಜ಼¹ ಮೋಹಬನ್ಧ,ಚಿತ್ತೇ ತೋಮಾರ ತಬು ಕೀ ದ್ಬನ್ದ್ಬ ಭಾಬಿತೇಛ ಬಸಿ ನಿರಜನೇ॥ ದೇಬತಾ! ತುಮಿ ಕೀ ಜೀಬ-ದುಖೇ ಗಲೇ ಬ್ರಹ್ಮಾನನ್ದ ಹೇಲಾಜ಼¹ ತ್ಜಾ¹ಜಿಲೇಜೀಬ-ದುಖಾನಲೇ ಆಪನಾ ದಹಿಲೇ, ಸೇಬಾ ಶಿಖಾಇಲೇ ಭುಬನೇ॥ —ಸ್ವಾಮಿ […]

ಕನ್ಯಾಕುಮಾರಿ ಮಂದಿರತಲೆ ಹೆ ಯತಿ Read More »

ಕೆ ರೇ ನರೇಂದ್ರಬರ ವೀರೇಶ್ವರ ದೇಹಧಾರಿ।

ಕೆ ರೇ ನರೇಂದ್ರಬರ ವೀರೇಶ್ವರ ದೇಹಧಾರಿ। ಸಿದ್ಧ ಮಹಾವಿದ್ಯಾಬಲೇ ಅವಿದ್ಯಾ ವಿನಾಶಕಾರೀ॥ ತಮಾಚ್ಛನ್ನ ಬಸುಮತಿ, ಹೆರಿ ಕಿ ವ್ಯಥಿತ ಯತಿ, ಬಿಳೈತೇ ಜ್ಞಾನ-ಜ್ಯೋತಿ ಕೇ ಎನೆಚೆ ಸಹಕಾರಿ॥ ರಹಿ ಪರಹಿತೇ ರತ, ಶಿಖಾಬೆ ಕೀ ಮಹಾಬ್ರತ, ಏಶೆಸ್ ಆಶ್ರಿತ-ರತ ಜನ-ಮನ್-ತಾಪಹಾರೀ। ಗುರುಪದೇ ಬಾಲಿದಾನ, ಜೀವನ-ಯೌವನ ಮಾನ ಹಯೇಚಿ ಕಿ ಅಧಿಷ್ಠಾನ, ಸಾಜಿತೇ ದೀನ-ಭಿಕ್ಷಾರಿ॥ –ಗಿರೀಶ್ ಚಂದ್ರ ಘೋಷ್

ಕೆ ರೇ ನರೇಂದ್ರಬರ ವೀರೇಶ್ವರ ದೇಹಧಾರಿ। Read More »

ಮೋಹಮುದ್ಗರದಿಂದ

ಭಜ ಗೋವಿಂದಂ ಭಜ ಗೋವಿಂದಂ ಗೋವಿಂದಂ ಭಜ ಮೂಢಮತೇ | ಸಂಪ್ರಾಪ್ತೇ ಸನ್ನಿಹಿತೇ ಕಾಲೇ ನಹಿ ನಹಿ ರಕ್ಷತಿ ಡುಕೃಞಕರಣೇ || ದಿನಯಾಮಿನ್ಯೌ ಸಾಯಂ ಪ್ರಾತಃ ಶಿಶಿರವಸಂತೌ ಪುನರಾಯಾತಃ | ಕಾಲಃ ಕ್ರೀಡತಿ ಗಚ್ಛತ್ಯಾಯುಃ ತದಪಿ ನ ಮುಂಚತ್ಯಾಶಾವಾಯುಃ || ಪುನರಪಿ ಜನನಂ ಪುನರಪಿ ಮರಣಂ ಪುನರಪಿ ಜನನೀ ಜಠರೇ ಶಯನಮ್ | ಇಹ ಸಂಸಾರೇ ಬಹುದುಸ್ತಾರೇ ಕೃಪಾಯಾsಪಾರೇ ಪಾಹಿ ಮುರಾರೇ || ಗೇಯಂ ಗೀತಾನಾಮಸಹಸ್ರಂ ಧ್ಯೇಯಂ ಶ್ರೀಪತಿರೂಪಮಜಸ್ರಮ್ | ನೇಯಂ ಸಜ್ಜನಸಂಗೇ ಚಿತ್ತಂ ದೇಯಂ ದೀನಜನಾಯ

ಮೋಹಮುದ್ಗರದಿಂದ Read More »

ಗಂಗೆಯೊಡನಾಡಿದ ಘಟ್ಟ ಬೆಟ್ಟಂಗಳು ಕೆಟ್ಟ ಕೇಡ ನೋಡಿರಯ್ಯಾ.

ಗಂಗೆಯೊಡನಾಡಿದ ಘಟ್ಟ ಬೆಟ್ಟಂಗಳು ಕೆಟ್ಟ ಕೇಡ ನೋಡಿರಯ್ಯಾ. ಅಗ್ನಿಯೊಡನಾಡಿದ ಕಾಷ್ಠಂಗಳು ಕೆಟ್ಟ ಕೇಡ ನೋಡಿರಯ್ಯಾ. ಜ್ಯೋತಿಯೊಡನಾಡಿದ ಕತ್ತಲೆ ಕೆಟ್ಟ ಕೇಡ ನೋಡಿರಯ್ಯಾ. e್ಞನಿಯೊಡನಾಡಿದ ಅe್ಞನಿ ಕೆಟ್ಟ ಕೇಡ ನೋಡಿರಯ್ಯಾ. ಎಲೆ ಪರಶಿವಮೂರ್ತಿ ಹರನೆ, ನಿಮ್ಮ ಜಂಗಮಲಿಂಗದೊಡನಾಡಿ ಎನ್ನ ಭವಾದಿ ಭವಂಗಳು ಕೆಟ್ಟ ಕೇಡ ನೋಡಾ, ಚೆನ್ನಮಲ್ಲಿಕಾರ್ಜುನಾ

ಗಂಗೆಯೊಡನಾಡಿದ ಘಟ್ಟ ಬೆಟ್ಟಂಗಳು ಕೆಟ್ಟ ಕೇಡ ನೋಡಿರಯ್ಯಾ. Read More »

ಕ್ರಿಯೆಗಳು ಮುಟ್ಟಲರಿಯವು,

ಕ್ರಿಯೆಗಳು ಮುಟ್ಟಲರಿಯವು, ನಿಮ್ಮನೆಂತು ಪೂಜಿಸುವೆ ? ನಾದ ಬಿಂದುಗಳು ಮುಟ್ಟಲರಿಯವು, ನಿಮ್ಮನೆಂತು ಹಾಡುವೆ ? ಕಾಯ ಮುಟ್ಟುವಡೆ ಕಾಣಬಾರದ ಘನವು, ನಿಮ್ಮನೆಂತು ಕರಸ್ಥಲದಲ್ಲಿ ಧರಿಸುವೆ ? ಚೆನ್ನಮಲ್ಲಿಕಾರ್ಜುನಯ್ಯಾ, ನಾನೇನೆಂದರಿಯದೆ ನಿಮ್ಮ ನೋಡಿ ನೋಡಿ ಸೈವೆರಗಾಗುತಿರ್ದೆನು.

ಕ್ರಿಯೆಗಳು ಮುಟ್ಟಲರಿಯವು, Read More »

ಕೀಡಿ ತುಂಬಿಯ ಹಂಬಲದಿಂದ ತುಂಬಿಯಾಗಿ

ಕೀಡಿ ತುಂಬಿಯ ಹಂಬಲದಿಂದ ತುಂಬಿಯಾಗಿ ತನ್ನ ಬಿಡಲುಂಟೆ ಅಯ್ಯಾ ? ಆನು ನಿಮ್ಮ ನೆನೆದು ಎನ್ನ ಕರತುಂಬಿ, ಎನ್ನ ಮನತುಂಬಿ, ಎನ್ನ ಭಾವತುಂಬಿ, ಮತ್ತಿಲ್ಲದೆ ನಿನ್ನ ಕೂಟದ ಸವಿಗಲೆಯನೆಂತು ಕಾಣುವೆನಯ್ಯಾ ಚೆನ್ನಮಲ್ಲಿಕಾರ್ಜುನಾ ?

ಕೀಡಿ ತುಂಬಿಯ ಹಂಬಲದಿಂದ ತುಂಬಿಯಾಗಿ Read More »

ಕಿಡಿ ಕಿಡಿ ಕೆದರಿದಡೆ ಎನಗೆ ಹಸಿವು ತೃಷೆಯಡಗಿತ್ತೆಂಬೆನು.

ಕಿಡಿ ಕಿಡಿ ಕೆದರಿದಡೆ ಎನಗೆ ಹಸಿವು ತೃಷೆಯಡಗಿತ್ತೆಂಬೆನು. ಮುಗಿಲು ಹರಿದು ಬಿದ್ದಡೆ ಎನಗೆ ಮಜ್ಜನಕ್ಕೆರೆದರೆಂಬೆನು. ಗಿರಿ ಮೇಲೆ ಬಿದ್ದಡೆ ಎನಗೆ ಪುಷ್ಪವೆಂಬೆನು. ಚೆನ್ನಮಲ್ಲಿಕಾರ್ಜುನಯ್ಯಾ, ಶಿರ ಹರಿದು ಬಿದ್ದಡೆ ಪ್ರಾಣ ನಿಮಗರ್ಪಿತವೆಂಬೆನು.

ಕಿಡಿ ಕಿಡಿ ಕೆದರಿದಡೆ ಎನಗೆ ಹಸಿವು ತೃಷೆಯಡಗಿತ್ತೆಂಬೆನು. Read More »

ಕಿರಿಯರಹುದರಿದಲ್ಲದೆ,

ಕಿರಿಯರಹುದರಿದಲ್ಲದೆ, ಹಿರಿಯರಹುದರಿದಲ್ಲ ನೋಡಾ ! [ಭವಿಯಹುದರಿದಲ್ಲದೆ] ಭಕ್ತನಹುದರಿದಲ್ಲ ನೋಡಾ. ಕುರುಹಹುದರಿದಲ್ಲದೆ, ನಿರಾಳವಹುದರಿದಲ್ಲ ಚೆನ್ನಮಲ್ಲಿಕಾರ್ಜುನಯ್ಯಾ ?

ಕಿರಿಯರಹುದರಿದಲ್ಲದೆ, Read More »

ಕೈಸಿರಿಯ ದಂಡವ ಕೊಳಬಹುದಲ್ಲದೆ,

ಕೈಸಿರಿಯ ದಂಡವ ಕೊಳಬಹುದಲ್ಲದೆ, ಮೈಸಿರಿಯ ದಂಡವ ಕೊಳಲುಂಟೆ ? ಉಟ್ಟಂತಹ ಉಡಿಗೆ ತೊಡಿಗೆಯನೆಲ್ಲ ಸೆಳೆದುಕೊಳಬಹುದಲ್ಲದೆ, ಮುಚ್ಚಿರ್ದ ಮುಸುಕಿರ್ದ ನಿರ್ವಾಣವ ಸೆಳೆದುಕೊಳಬಹುದೆ ? ಚೆನ್ನಮಲ್ಲಿಕಾರ್ಜುನದೇವರ ಬೆಳಗನುಟ್ಟು ಲಜ್ಜೆಗೆಟ್ಟವಳಿಗೆ ಉಡುಗೆ ತೊಡುಗೆಯ ಹಂಗೇಕೋ ಮರುಳೆ ?

ಕೈಸಿರಿಯ ದಂಡವ ಕೊಳಬಹುದಲ್ಲದೆ, Read More »

ಕೈಯ ಧನವ ಕೊಂಡಡೆ, ಮೈಯ ಭಾಷೆಯ ಕೊಳಬಹುದೆ ?

ಕೈಯ ಧನವ ಕೊಂಡಡೆ, ಮೈಯ ಭಾಷೆಯ ಕೊಳಬಹುದೆ ? ಉಟ್ಟ ಉಡುಗೆಯ ಸೆಳೆದುಕೊಂಡರೆ, ಮುಚ್ಚಿ ಮುಸುಕಿದ ನಿರ್ವಾಣವ ಸೆಳೆಯಬಹುದೆ ? ನೋಡುವಿರಿ ಎಲೆ ಅಣ್ಣಗಳಿರಾ, ಕುಲವಳಿದು ಲವಳಿದು ಭವಗೆಟ್ಟು ಭಕ್ತೆಯಾದವಳ. ಎನ್ನನೇಕೆ ನೋಡುವಿರಿ ಎಲೆ ತಂದೆಗಳಿರಾ, ಚೆನ್ನಮಲ್ಲಿಕಾರ್ಜುನನ ಕೂಡಿ ಕುಲವಳಿದುಲವುಳಿದವಳನು.

ಕೈಯ ಧನವ ಕೊಂಡಡೆ, ಮೈಯ ಭಾಷೆಯ ಕೊಳಬಹುದೆ ? Read More »

ಕೋಲ ತುದಿಯ ಕೋಡಗದಂತೆ,

ಕೋಲ ತುದಿಯ ಕೋಡಗದಂತೆ, ನೇಣ ತುದಿಯ ಬೊಂಬೆಯಂತೆ, ಆಡಿದೆನಯ್ಯಾ ನೀನಾಡಿಸಿದಂತೆ, ಆನು ನುಡಿದೆನಯ್ಯಾ ನೀ ನುಡಿಸಿದಂತೆ, ಆನು ಇದ್ದೆನಯ್ಯಾ ನೀನು ಇರಿಸಿದಂತೆ, ಜಗದ ಯಂತ್ರವಾಹಕ ಚೆನ್ನಮಲ್ಲಿಕಾರ್ಜುನ ಸಾಕೆಂಬನ್ನಕ್ಕ.

ಕೋಲ ತುದಿಯ ಕೋಡಗದಂತೆ, Read More »

ಕೊಳಲ ದನಿಗೆ ಸರ್ಪ ತಲೆದೂಗಿದಡೇನು,

ಕೊಳಲ ದನಿಗೆ ಸರ್ಪ ತಲೆದೂಗಿದಡೇನು, ಒಳಗಣ ವಿಷದ ಬಯಕೆ ಬಿಡದನ್ನಕ್ಕ ? ಹಾಡಿದಡೇನು, ಕೇಳಿದಡೇನು, ತನ್ನಲುಳ್ಳ ಅವಗುಣ ಬಿಡದನ್ನಕ್ಕ ? ಒಳಗನರಿದು ಹೊರಗೆ ಮರೆದವರ ನೀ ಎನಗೆ ತೋರಯ್ಯಾ ಚೆನ್ನಮಲ್ಲಿಕಾರ್ಜುನಾ.

ಕೊಳಲ ದನಿಗೆ ಸರ್ಪ ತಲೆದೂಗಿದಡೇನು, Read More »

ಕೇಳವ್ವಾ ಕೇಳವ್ವಾ ಕೆಳದಿ ನಾನೊಂದು ಕನಸುವ ಕಂಡೆ.

ಕೇಳವ್ವಾ ಕೇಳವ್ವಾ ಕೆಳದಿ ನಾನೊಂದು ಕನಸುವ ಕಂಡೆ. ಗಿರಿಯಮೇಲೊಬ್ಬ ಗೊರವ ಕುಳ್ಳಿರ್ದುದ ಕಂಡೆ ಚಿಕ್ಕ ಚಿಕ್ಕ ಜಡೆಗಳ ಸುಲಿಪಲ್ಲ ಗೊರವನು ಬಂದೆನ್ನ ನೆರೆದ ನೋಡವ್ವಾ ಆತನನಪ್ಪಿಕೊಂಡು ತಳವೆಳಗಾದೆನು. ಚೆನ್ನಮಲ್ಲಿಕಾರ್ಜುನನ ಕಂಡು ಕಣ್ಣು ಮುಚ್ಚಿ ತೆರೆದು ತಳವೆಳಗಾದೆನು.

ಕೇಳವ್ವಾ ಕೇಳವ್ವಾ ಕೆಳದಿ ನಾನೊಂದು ಕನಸುವ ಕಂಡೆ. Read More »

ಕೆತ್ತಿದ ತಿಗುಡು ಹತ್ತೂದೆ ಮುನ್ನಿನಂತೆ ?

ಕೆತ್ತಿದ ತಿಗುಡು ಹತ್ತೂದೆ ಮುನ್ನಿನಂತೆ ? ಎರಿಣ ತಪ್ಪಿದಲ್ಲಿ ಗುಣವನರಸುವರೆ ? ಸಕ್ಕರೆ ಹಾಲು ತುಪ್ಪ ಎಂದರೆ ಕಪ್ಪ ಕಂಡಲ್ಲಿ ಮನ ಹಿಡಿವುದೆ ? ಕರ್ತೃವೆ ಚೆನ್ನಮಲ್ಲಿಕಾರ್ಜುನಯ್ಯಾ ಸತ್ತವರು ಮರಳಿ ತಕ್ಕೈಸಿಕೊಂಬರೆ

ಕೆತ್ತಿದ ತಿಗುಡು ಹತ್ತೂದೆ ಮುನ್ನಿನಂತೆ ? Read More »

ಕೆಚ್ಚಿಲ್ಲದ ಮರನ ಕ್ರಿಮಿ ಇಂಬುಗೊಂಬಂತೆ,

ಕೆಚ್ಚಿಲ್ಲದ ಮರನ ಕ್ರಿಮಿ ಇಂಬುಗೊಂಬಂತೆ, ಒಡೆಯನಿಲ್ಲದ ಮನೆಯ ಶುನಕ ಸಂಚುಗೊಂಬಂತೆ, ನೃಪತಿಯಿಲ್ಲದ ದೇಶವ ಮನ್ನೆಯರಿಂಬುಗೊಂಬಂತೆ, ನಿಮ್ಮ ನೆನಹಿಲ್ಲದ ಶರೀರವ ಭೂತ ಪ್ರೇತ ಪಿಶಾಚಿಗಳಿಂಬುಗೊಂಬಂತೆ ಚೆನ್ನಮಲ್ಲಿಕಾರ್ಜುನಾ.

ಕೆಚ್ಚಿಲ್ಲದ ಮರನ ಕ್ರಿಮಿ ಇಂಬುಗೊಂಬಂತೆ, Read More »

ಕಾಮವುಳ್ಳವರಿಗೆ ಕಾಯಸಂಗ ಮಚ್ಚು ನೋಡಾ.

ಕಾಮವುಳ್ಳವರಿಗೆ ಕಾಯಸಂಗ ಮಚ್ಚು ನೋಡಾ. ಕಾಮವಿಲ್ಲದವರಿಗೆ ಲಿಂಗಸಂಗ ಮಚ್ಚು ನೋಡಾ. ಕಾಮವಿಕಾರಿ ಕಾಯದತ್ತ ಮುಂತಾದಡೆ, ನಾ ನಿಮ್ಮತ್ತ ಮುಂತಾದೆ. ಚೆನ್ನಮಲ್ಲಿಕಾರ್ಜುನಯ್ಯಾ, ಕಾಮವಿಕಾರಿಯ ಸಂಗವ ಹೊದ್ದಿದಡೆ ನಿಮ್ಮಾಣೆ.

ಕಾಮವುಳ್ಳವರಿಗೆ ಕಾಯಸಂಗ ಮಚ್ಚು ನೋಡಾ. Read More »

ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು,

ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು, ಸೋಮ ಸೂರ್ಯರ ಹುರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ ? ನೀ ಮದವಳಿಗನಾಗೆ ನಾ ಮದವಳಿಗಿತ್ತಿಯಾಗೆ ಯಮನ ಕೂಡುವ ಮರುತನಂತೆ ನೋಡಾ ಶ್ರೀಗಿರಿ ಚೆನ್ನಮಲ್ಲಿಕಾರ್ಜುನಾ.

ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು, Read More »

ಕಾಮ ಬಲ್ಲಿದನೆಂದಡೆ ಉರುಹಿ ಭಸ್ಮವ ಮಾಡಿದ.

ಕಾಮ ಬಲ್ಲಿದನೆಂದಡೆ ಉರುಹಿ ಭಸ್ಮವ ಮಾಡಿದ. ಕಾಲ ಬಲ್ಲಿದನೆಂದಡೆ ಕೆಡಹಿ ತುಳಿದ. ಎಲೆ ಅವ್ವಾ, ನೀನು ಕೇಳಾ ತಾಯೆ. ಬ್ರಹ್ಮ ಬಲ್ಲಿದನೆಂದಡೆ ಶಿರವ ಚಿವುಟಿಯಾಡಿದ. ಎಲೆ ಅವ್ವಾ ನೀನು ಕೇಳಾ ತಾಯೆ. ವಿಷ್ಣು ಬಲ್ಲಿದನೆಂದಡೆ ಆಕಳ ಕಾಯ್ದಿರಿಸಿದ. ತ್ರಿಪುರದ ಕೋಟೆ ಬಲ್ಲಿತ್ತೆಂದಡೆ ನೊಸಲಕಂಗಳಲುರುಹಿದನವ್ವಾ. ಇದು ಕಾರಣ, ಚೆನ್ನಮಲ್ಲಿಕಾರ್ಜುನ ಗಂಡನೆನಗೆ, ಜನನ ಮರಣಕ್ಕೊಳಗಾಗದ ಬಲುಹನೇನ ಬಣ್ಣಿಪೆನವ್ವಾ.

ಕಾಮ ಬಲ್ಲಿದನೆಂದಡೆ ಉರುಹಿ ಭಸ್ಮವ ಮಾಡಿದ. Read More »

ಕಾಮಾರಿಯ ಗೆಲಿದನು ಬಸವಾ ನಿಮ್ಮಿಂದ.

ಕಾಮಾರಿಯ ಗೆಲಿದನು ಬಸವಾ ನಿಮ್ಮಿಂದ. ಸೋಮಧರನ ಹಿಡಿತಪ್ಪೆನು ಬಸವಾ ನಿಮ್ಮ ಕೃಪೆಯಿಂದ. ನಾಮದಲ್ಲಿ ಹೆಂಗೂಸೆಂಬ ಹೆಸರಾದಡೇನು ? ಭಾವಿಸಲು ಗಂಡು ರೂಪು ಬಸವಾ ನಿಮ್ಮ ದಯದಿಂದ. ಅತಿಕಾಮಿ ಚೆನ್ನಮಲ್ಲಿಕಾರ್ಜುನಂಗೆ ತೊಡರಿಕ್ಕಿ ಎರಡುವರಿಯದೆ ಕೂಡಿದೆನು ಬಸವಾ ನಿಮ್ಮ ಕೃಪೆಯಿಂದ.

ಕಾಮಾರಿಯ ಗೆಲಿದನು ಬಸವಾ ನಿಮ್ಮಿಂದ. Read More »

ಕಾಯವಿಕಾರಿಗೆ ಕಾಯಕ್ಕೆ ಮೆಚ್ಚಿದೆ.

ಕಾಯವಿಕಾರಿಗೆ ಕಾಯಕ್ಕೆ ಮೆಚ್ಚಿದೆ. ವಾಯದ ಸುಖ ನಿನಗೆ ಮುಂದೆ ನರಕವೆಂದರಿಯೆ. ದೇವರ ದೇವಂಗೆ ವಂದಿಸಹೋದರೆ ಬಾಯಬಿಡದಿರು, ಕೈವಿಡಿದು ಸೆಳೆಯದಿರು. ಚೆನ್ನಮಲ್ಲಿಕಾರ್ಜುನನ ಪಾದಕ್ಕೆರಗುವ ಭರವೆನಗೆ ಮರುಳೆ.

ಕಾಯವಿಕಾರಿಗೆ ಕಾಯಕ್ಕೆ ಮೆಚ್ಚಿದೆ. Read More »

ಕಾಯದೊಳಗೆ ಅಕಾಯವಾಯಿತ್ತು.

ಕಾಯದೊಳಗೆ ಅಕಾಯವಾಯಿತ್ತು. ಜೀವದೊಳಗೆ ನಿರ್ಜೀವವಾಯಿತ್ತು. ಭಾವದೊಳಗೆ ನಿರ್ಭಾವವಾಯಿತ್ತು. ಎನ್ನ ಮನದೊಳಗೆ ಘನ ನೆನಹಾಯಿತ್ತು. ಎನ್ನ ತಲೆ ಮೊಲೆಗಳ ನೋಡಿ ಸಲಹಿದಿರಾಗಿ ಚೆನ್ನಮಲ್ಲಿಕಾರ್ಜುನಯ್ಯನ ಧರ್ಮದವಳಾನು.

ಕಾಯದೊಳಗೆ ಅಕಾಯವಾಯಿತ್ತು. Read More »

ಕಾಯದ ಕಾರ್ಪಣ್ಯವರತಿತ್ತು, ಕರಣಂಗಳ ಕಳವಳವಳಿದಿತ್ತು.

ಕಾಯದ ಕಾರ್ಪಣ್ಯವರತಿತ್ತು, ಕರಣಂಗಳ ಕಳವಳವಳಿದಿತ್ತು. ಮನ ತನ್ನ ತಾರ್ಕಣೆಯ ಕಂಡು ತಳವೆಳಗಾದುದು. ಇನ್ನೇವೆನಿನ್ನೇವೆನಯ್ಯಾ ? ನಿಮ್ಮ ಶರಣ ಬಸವಣ್ಣನ ಶ್ರೀಪಾದವ ಕಂಡಲ್ಲದೆ ಬಯಕೆ ಬಯಲಾಗದು. ಇನ್ನೇವೆನಿನ್ನೇವೆನಯ್ಯಾ ಚೆನ್ನಮಲ್ಲಿಕಾರ್ಜುನಾ ?

ಕಾಯದ ಕಾರ್ಪಣ್ಯವರತಿತ್ತು, ಕರಣಂಗಳ ಕಳವಳವಳಿದಿತ್ತು. Read More »

ಕಾಯದ ಕಳವಳವ ಕೆಡಿಸಿ, ಮನದ ಮಾಯೆಯ ಮಾಣಿಸಿ,

ಕಾಯದ ಕಳವಳವ ಕೆಡಿಸಿ, ಮನದ ಮಾಯೆಯ ಮಾಣಿಸಿ, ಎನ್ನ ಹರಣವ ಮೇಲೆತ್ತಿ ಸಲಹಿದೆಯಯ್ಯಾ. ಶಿವಶಿವಾ, ಎನ್ನ ಭವಬಂಧನವ ಬಿಡಿಸಿ, ನಿಮ್ಮತ್ತ ತೋರಿದ ಘನವನುಪಮಿಸಬಾರದಯ್ಯಾ. ಇರುಳೋಸರಿಸಿದ ಜಕ್ಕವಕ್ಕಿಯಂತೆ ನಾನಿಂದು ನಿಮ್ಮ ಶ್ರೀಪಾದವನಿಂಬುಗೊಂಡು ಸುಖದೊಳೋಲಾಡುವೆನಯ್ಯಾ, ಚೆನ್ನಮಲ್ಲಿಕಾರ್ಜುನಾ.

ಕಾಯದ ಕಳವಳವ ಕೆಡಿಸಿ, ಮನದ ಮಾಯೆಯ ಮಾಣಿಸಿ, Read More »

ಕಾಯಕ್ಕೆ ನೆಳಲಾಗಿ ಕಾಡಿತ್ತು ಮಾಯೆ.

ಕಾಯಕ್ಕೆ ನೆಳಲಾಗಿ ಕಾಡಿತ್ತು ಮಾಯೆ. ಪ್ರಾಣಕ್ಕೆ ಮನವಾಗಿ ಕಾಡಿತ್ತು ಮಾಯೆ. ಮನಕ್ಕೆ ನೆನಹಾಗಿ ಕಾಡಿತ್ತು ಮಾಯೆ. ನೆನಹಿಂಗೆ ಅರುಹಾಗಿ ಕಾಡಿತ್ತು ಮಾಯೆ. ಅರುಹಿಂಗೆ ಮರಹಾಗಿ ಕಾಡಿತ್ತು ಮಾಯೆ. ಜಗದ ಜಂಗುಳಿಗೆ ಬೆಂಗೋಲನೆತ್ತಿ ಕಾಡಿತ್ತು ಮಾಯೆ. ಚೆನ್ನಮಲ್ಲಿಕಾರ್ಜುನಾ, ನೀನೊಡ್ಡಿದ ಮಾಯೆಯನಾರಿಗೂ ಗೆಲಬಾರದು.

ಕಾಯಕ್ಕೆ ನೆಳಲಾಗಿ ಕಾಡಿತ್ತು ಮಾಯೆ. Read More »

ಕಾಯ ಮೀಸಲಾಗಿ ನಿನಗರ್ಪಿತವಾಯಿತ್ತು.

ಕಾಯ ಮೀಸಲಾಗಿ ನಿನಗರ್ಪಿತವಾಯಿತ್ತು. ಕರಣ ಮೀಸಲಾಗಿ ನಿನಗರ್ಪಿತವಾಯಿತ್ತು. ಆನೊಂದರಿಯೆನಯ್ಯಾ. ಎನ್ನ ಗತಿ ನೀನಾಗಿ, ಎನ್ನ ಮತಿ ನೀನಾಗಿ, ಪ್ರಾಣ ನಿನಗರ್ಪಿತವಾಯಿತ್ತು. ನೀನಲ್ಲದೆ ಪೆರತೊಂದ ನೆನೆದಡೆ ಆಣೆ, ನಿಮ್ಮಾಣೆ ಚೆನ್ನಮಲ್ಲಿಕಾರ್ಜುನಾ.

ಕಾಯ ಮೀಸಲಾಗಿ ನಿನಗರ್ಪಿತವಾಯಿತ್ತು. Read More »