ಕನಕದಾಸ

ಆನೆ ಬರುತಾದೆ ನೋಡಮ್ಮ ಮದ್ದಾನೆ ಬರುತಾದೆ

ಆನೆ ಬರುತಾದೆ ನೋಡಮ್ಮ ಮದ್ದಾನೆ ಬರುತಾದೆ ಆನೆ ಬರುತಾದೆ ಎಲ್ಲರು ನೋಡಿರಿ ಒಂ-ದಾನೆಯ ಕೊಂದ ಮದ್ದಾನೆಏನೆಂದು ಪೇಳಲಿ ಎಲ್ಲ ದಿಕ್ಕುಗಳಲಿತಾನೇ ತಾನಾಗಿ ಮದ ಸೊಕ್ಕಿದಾನೆ ಅನೀರ ಮುಳುಗಿ ಖಳನ ಕೊಂದು ವೇದ ತಂದುಬರಮದೇವಗಿತ್ತ ಮದ್ದಾನೆಕ್ರೂರ ಚಿತ್ರಗುಪ್ತನೊಡನೆ ಕಾರುಬಾರಿಗಿಳಿದಜಾರ ಕೃಷ್ಣನೆಂಬ ಸೊಕ್ಕಿದಾನೆ|| 1|| ದಶದಿಕ್ಕಿನೊಳು ಘಂಟೆ ಘಣಿರೆಂದು ಬರುತ್ತಿದೆಕುಸುಮಶರನ ಪೆತ್ತ ಮದ್ದಾನೆದಶಕಂಠನ ಕೊಂದು ಅನುಜಗೆ ಪಟ್ಟಗಟ್ಟಿದದಶರಥಸುತನೆಂಬ ಮದ ಸೊಕ್ಕಿದಾನೆ ||2|| ಗಂಧ ಕಸ್ತೂರಿ ಬೊಟ್ಟು ಗಮಕದಿಂದಲಿ ಇಟ್ಟುಗೊಂದಲಗಡಿಬಿಡಿ ಸುರಲೋಕ ಅಮ್ಮಮ್ಮಬೆಂಬಿಡದೆ ದೈತ್ಯರನು ಕೊಂದ ಗುಣ ಸಂಪನ್ನಸುಂದರ ಕೃಷ್ಣನೆಂಬ ಮದ […]

ಆನೆ ಬರುತಾದೆ ನೋಡಮ್ಮ ಮದ್ದಾನೆ ಬರುತಾದೆ Read More »

ಆನೆ ಬಂದಿದೆ ಇದಿಗೊ ಮದ್ದಾನೆ 

ಆನೆ ಬಂದಿದೆ ಇದಿಗೊ ಮದ್ದಾನೆ ಜ್ಞಾನಿಗಳೊಳಾಡುವ ಮದ್ದಾನೆ ದೇವಕಿಯೊಳು ಪುಟ್ಟಿದಾನೆ – ವಸುದೇವನ ಪೆಸರೊಳೈತಂದ ಮದ್ದಾನೆಶ್ರೀ ವಾಸುದೇವನೆಂಬಾನೆ – ಗೋಪಿದೇವಿಯ ಗೃಹದೊಳಾಡುವ ಪುಟ್ಟಾನೆ ||1|| ನೀಲವರ್ಣದ ನಿಜದಾನೆ – ಸ್ವರ್ಣಮಾಲೆಗಳಿಟ್ಟು ಮೆರೆವ ಚಲುವಾನೆಶ್ರೀಲೋಲನೆನಿಪ ಪಟ್ಟದಾನೆ – ದುಷ್ಟಕಾಲಿಂಗನ ಪೆಡೆಯ ಮೆಟ್ಟಿ ತುಳಿದಾನೆ ||2|| ಬಾಲೇಂದು ಮುಖದ ಮರಿಯಾನೆ – ಕದ್ದುಪಾಲನ್ನು ಕುಡಿದ ಮರಿಯಾನೆಕೈಲಿ ಗಿರಿಯನೆತ್ತಿದಾನೆಕಾಳ್ಕಿಚ್ಚನ್ನು ನುಂಗಿದ ಪಟ್ಟದಾನೆ ||3|| ಧೇನುಕಾಸುರನ ಕೊಂದಾನೆತನಗೆ ಜೋಡಿಲ್ಲದಿಹ ನಿಜದಾನೆಮಾನವರಿಗೆಲ್ಲ ಸಿಲ್ಕದಾನೆಶೌನಕಾದಿಗಳೊಂದಿಗಿಪ್ಪಾನೆ ||4|| ಮಲ್ಲರೊಡನೆ ಗೆಲಿದಾನೆ – ಕಡುಖುಲ್ಲ ಕಂಸನ ಕೆಡಹಿದಾನೆ –

ಆನೆ ಬಂದಿದೆ ಇದಿಗೊ ಮದ್ದಾನೆ  Read More »

ಆತನೇ ಪರಮಾತ್ಮ ಪರತತ್ತ್ವ

ಆತನೇ ಪರಮಾತ್ಮ ಪರತತ್ತ್ವ ಪ್ರಣವನೆಂ-ದರಿತು ಪೂಜಿಸಬಾರದೆಆತನಾ ಪದತೋಯ ಶಿರಸಾ ವಹಿಸಿ ಪಾನ-ದಿಂದಧಿಕರಾದರು – ಜೀವಿಗಳು ಮನುಜ ದಾನಮುಖದಲಿ ಬಲಿಯ ಬೇಡಿ ಭುವನವನೊಂದುಪದದಿ ಅಳೆದವನಾವನುಮಾನದಾನವನ ನಾಲ್ಮೈಯ ಮುಡಿಗಟ್ಟಿವನಮಾನ ಉಳುಹಿದನಾವನುಮಾನ ಮರುಳಾದವನ ಮರ್ದಿಸಿದ ಬ್ರಹ್ಮಹತ್ಯೆಮಹಿಗೆ ಇಳುಹಿದನಾವನುಭಾನು ಮೊದಲಾದಖಿಳ ಬ್ರಹ್ಮಾಂಡಗಳಿಗೊಂದುಪಾದ ಹೊದಿಸಿದನಾವನು ? ||1|| ಕೊಟ್ಟ ವರಗಳನೆಲ್ಲ ಕೊಡಹಿ ಬಹು ದನುಜರನುಕುಟ್ಟಿ ಹಾಕಿದನಾವನುದಿಟ್ಟವರ ಕಾಲಾಂಣ(?) ಕಟ್ಟಿ ಮುನಿ ದೈವಗಳ ಪಟ್ಟದರಸು ಅದಾವನುಬೆಟ್ಟದಾತ್ಮಜೆ ಬೆನಕ ಪೆಸರ್ಗೊಂಡು ತನ ನಾಮಗುಟ್ಟಿನಲಿ ನೆನೆಸಿದುದಾವನುಗಟ್ಟಿಯಾಗಿ ಮುನಿಪೆಣ್ಗೆ ಕೊಟ್ಟಿದ್ದ ಶಾಪವನುಬಿಟ್ಟೋಡಿಸಿದನಾವನು ? ||2|| ವೇದಮುಖದವನ ಅತಿ ಮೋದದಲಿ ಪುಟ್ಟಿಸಿದಆದಿಮೂರುತಿ

ಆತನೇ ಪರಮಾತ್ಮ ಪರತತ್ತ್ವ Read More »

ಆ ವೇಳೆಯಲಿ ಆರಾರ ಕಾಯ್ದೆಯೊ ದೇವ

ಆ ವೇಳೆಯಲಿ ಆರಾರ ಕಾಯ್ದೆಯೊ ದೇವಈ ವೇಳೆಯಲಿ ಎನ್ನ ಕಾಯ್ದರದು ನಿಜವಹುದು ಕರೆಯೆ ಕಂಬದಿ ಬಂದು ಹಿರಣ್ಯಕಶಿಪುವ ಕೊಂದೆಶರಣನನು ಪಾಲಿಸುತೆ ಕಾಯ್ದೆಯಂತೆಕರಿರಾಜ ಹರಿಯೆಂದು ಕರೆಯಲಾಕ್ಷಣ ಬಂದುಕರುಣದಿಂದಲಿ ಕಾಯ್ದೆಯಂತೆ ಹರಿಯೆ ||1|| ಧರೆಗಧಿಕನಾಥನಾ ತೊಡೆಯನೇರಲು ಕಂಡುಜರೆಯಲಾ ಧ್ರುವನ ನೀ ಕಾಯ್ದೆಯಂತೆದುರುಳ ದುಃಶಾಸನ ದ್ರೌಪದಿಯ ಸೀರೆಯ ಸೆಳೆಯೆತರುಣಿಗಕ್ಷಯವಿತ್ತು ಕಾಯ್ದೆಯಂತೆ ಹರಿಯೆ ||2|| ಅಂದು ರಾವಣ ವಿಭೀಷಣನ ನೂಕಲು ಕಂಡುಇಂದಿರಾರಮಣ ನೀ ಕಾಯ್ದೆಯಂತೆಮಂದರೋದ್ಧರ ಮಧುಸೂದನ ಮಾಧವಗೋ-ವಿಂದ ರಕ್ಷಿಸು ಬಾಡದಾದಿಕೇಶವರಾಯ ||3||

ಆ ವೇಳೆಯಲಿ ಆರಾರ ಕಾಯ್ದೆಯೊ ದೇವ Read More »

ಅಹುದಾದರಹುದೆನ್ನಿ ಅಲ್ಲವಾದರಲ್ಲವೆನ್ನಿ

ಅಹುದಾದರಹುದೆನ್ನಿ ಅಲ್ಲವಾದರಲ್ಲವೆನ್ನಿ ಬಹುಜನರು ನೆರೆ ತಿಳಿದು ಪೇಳಿ ಮತ್ತಿದನು ದೇವರಿಲ್ಲದ ಗುಡಿಯು ಪಾಳು ಬಿದ್ದಂಗಡಿಯುಭಾವವಿಲ್ಲದ ಭಕುತಿ ಅದು ಕುಹಕ ಯುಕುತಿಹೇವವಿಲ್ಲದ ಹೆಣ್ಣು ಗಜುಗ ಬೆಳೆದ ಕಣ್ಣುಸೇವೆಯರಿಯದ ದಣಿಯು ಕಲ್ಲಿನಾ ಕಣಿಯು||1|| ಧರ್ಮವಿಲ್ಲದ ಅರಸು ಮುರಿದ ಕಾಲಿನ ಹೊರಸುನಿರ್ಮಲಿಲ್ಲದ ಮನಸು ಅದು ಕಜ್ಜಿ ತಿನಿಸುಶರ್ಮವಿಲ್ಲದ ಗಂಡು ಕರಿಯ ಒನಕೆಯ ತುಂಡುಮರ್ಮವಿಲ್ಲದ ಮಾತು ಒಡಕು ಮಡಕೆ ತೂತು ||2|| ಮಕ್ಕಳಿಲ್ಲದ ಸಿರಿಯು ಕೊಳೆತ ತೆಂಗಿನ ತುರಿಯುಸೌಖ್ಯವಿಲ್ಲದ ಊಟ ಅದು ಕಾಳಕೂಟಒಕ್ಕಲಿಲ್ಲದ ಊರು ಕೊಳೆತು ನಾರುವ ನೀರುಸೊಕ್ಕಿ ನಡೆಯುವ ಭೃತ್ಯ ಅವ ಕ್ರೂರ ಕೃತ್ಯ ||3|| ಕಂಡು

ಅಹುದಾದರಹುದೆನ್ನಿ ಅಲ್ಲವಾದರಲ್ಲವೆನ್ನಿ Read More »

ಅಹುದಾದಡಹುದೆನ್ನಿ ಅಲ್ಲವಾದಡಲ್ಲವೆನ್ನಿ

ಅಹುದಾದಡಹುದೆನ್ನಿ ಅಲ್ಲವಾದಡಲ್ಲವೆನ್ನಿಸಹಜವಿದು ಸಜ್ಜನರ ಮನಕೆ ಸಮ್ಮತವು ಕರಿಕೆಯಿಲ್ಲದ ಬಾಳು ಕರಿವರದನ ದಯೆ ಕೇಳುಅರಿತವರಿರೆ ಮನೆಯೊಳು ಅದು ಸ್ವರ್ಗವು ಕೇಳುಕರಣಿಕರೊಳಗಣ ನಂಟು ಕಟ್ಟಿದ ಹಣವಿನ ಗಂಟುಗುರುವಿನ ವಾಕ್ಯದಿ ಭಕ್ತಿ ಇಹಪರಕದು ಮುಕ್ತಿ||1|| ಒಕ್ಕಲಿಗಾಗದ ಗವುಡ ಮೇಲೆರಗಿ ಕುಕ್ಕುವ ಲಗಡಮಕ್ಕಳ ಪಡೆವುದು ಪುಣ್ಯ ನಲಿವು ನಗೆಗಳ ಪಣ್ಯಇಕ್ಕುವ ಅನ್ನವು ಧರ್ಮ ಇಹಪರಕದು ಅತಿ ಧರ್ಮಬಿಕ್ಕಳಿಕಿಕ್ಕಿದ ವ್ಯಾಧಿ ಯಮಪುರಕದು ಹಾದಿ||2|| ಕಂಡರೆ ಸೇರದ ನಾರಿ ಕೆಂಡವನುಗುಳುವ ಮಾರಿದಂಡವ ತೆರಿಸುವ ಪುತ್ರ ಹಗೆಗಳಿಗವ ಮಿತ್ರಉಂಡರೆ ಸೇರದ ತಾಯಿ ಉರಗನ ಮೆಕ್ಕೆ ಕಾಯಿಹಿಂಡನಗಲಿದ ಗೋವು

ಅಹುದಾದಡಹುದೆನ್ನಿ ಅಲ್ಲವಾದಡಲ್ಲವೆನ್ನಿ Read More »

ಅಹಹ ಮೋಸ ಹೋದೆನಯ್ಯ

ಅಹಹ ಮೋಸ ಹೋದೆನಯ್ಯ ಹರಿಯೆ ನಿನ್ನ ನೆನೆಯದೆ ಇಹದ ಭೋಗ ನಿತ್ಯವೆಂದು ಮೆರೆದೆ ನಿನ್ನ ನೆನೆಯದೆ ಹೇಯವಾದ ದೇಹವನ್ನು ಶ್ಲಾಘನೀಯವೆಂದು ನಾಲ್ವರೊಡನುಪಾಯದಿಂದ ಹೇಮದಂತೆ ಬಣ್ಣಗಟ್ಟಿಬಾಯ ಬಡಿದು ತಂದು ತಂದುಕಾಯ ಕಳದೆನಲ್ಲದೆ ||1|| ಚಂಚಲತ್ವ ಬಲವು ಫಲವು ಜಾಲ ಕೋಪ ತಾಪದಿಂದವಂಚನಾರ್ಥ ಹಲವು ಕೆಲವು ಮಿಂಚಿನಂತೆ ಸುಳಿಸುತಸಂಚುಮಾಡಿ ಕಾಲನವರ ವಂಚನೆಗಳ ತಿಳಿಯದ್ಹೋದೆಪಂಚಬಾಣನಯ್ಯ ಕಾಯೊ ಎನ್ನವಗುಣಗಳನೆಣಿಸದೆ||2|| ದಿಕ್ಕುದೆಸೆಯದಾರೊ ಅಕ್ಕರದಿಂದಾರ ಕರೆವೆಉಕ್ಕಿ ಸವಿದು ಮನುಜರೊಡನೆಸೊಕ್ಕಿ ದಿನವ ಕಳೆದೆನೆನಗೆತಕ್ಕುದಾಯಿತಯ್ಯ ಕೇಳು ಒಡೆಯ ಆದಿಕೇಶವ||3||

ಅಹಹ ಮೋಸ ಹೋದೆನಯ್ಯ Read More »

ಅರಿತು ಭಜಿಪರ್ಯಾರಯ್ಯ ರಂಗಯ್ಯ

ಅರಿತು ಭಜಿಪರ್ಯಾರಯ್ಯ ರಂಗಯ್ಯ ನಿನ್ನ ಸಿರಿದೇವಿಯು ಕಿರುಬೆರಳಲ್ಲಿರುವ ಸೊಬಗನ್ನುಅರಿಯಲಾರಳೊ ದೇವ ಇಂದಿರಾದೇವಿಯು ಅರಿಯಲಾರಳು ದೇವಬೃಂದಾರಕರೆಲ್ಲ ನಿಂದು ಯೋಚಿಪರುನಂದತೀರ್ಥರ ಮತದೊಳಗೆ ಬಂದವರೆಲ್ಲಎಂದಿಗಾದರು ಪರಮಾನಂದ ಪೊಂದುವರು||1|| ಮಾನವರು ಹೀನಮಾರ್ಗದೊಳು ಮುಳುಗಿಹರುಜ್ಞಾನಿಂದು ಧ್ಯಾನಿಪರು ನಿನ್ನನೀನೆ ದಯಮಾಡಿ ಸಲಹೊ ಎನ್ನನು ಕೃಷ್ಣಕಾನನದೊಳು ಕಣ್ಣುಮುಚ್ಚಿ ಬಿಟ್ಟಿಹರೊ|| 2|| ಜಲದೊಳಗಿನ ಕಪ್ಪೆ ಜಲದ ಸವಿಯರಿಯದುಜಲದ ಸುಗಂಧವ ಜಲವರಿಯದುನೆಲೆಯ ಕಂಡವರ್ಯಾರು ನೆಲೆಯಾದಿಕೇಶವನೆಸುಲಲಿತ ತತ್ತ್ವವನು ಸುಲಭ ಮಾರ್ಗದಿ ತೋರೊ ||3||

ಅರಿತು ಭಜಿಪರ್ಯಾರಯ್ಯ ರಂಗಯ್ಯ Read More »

ಅರಿತು ನಡೆಯಲಿ ಬೇಕು

ಅರಿತು ನಡೆಯಲಿ ಬೇಕು ನರಕಾಯವೆತ್ತಿದ ಮೇಲೆಅರಿಯದಿದ್ದರೆ ನರಕವೇ ಪ್ರಾಪ್ತಿ ದುರ್ಜನರ ಮನೆಯ ಪಾಯಸಾನ್ನಕಿಂತಸಜ್ಜನರ ಮನೆಯ ರಬ್ಬಳಿಗೆ ಲೇಸುಹೆಜ್ಜೆಗೆ ಸಾವಿರ ಹೊನ್ನನಿತ್ತರೂ ಬೇಡ – ಬಲುದುರ್ಜನರ ಸಂಗ ಬಲು ಭಂಗ ಹರಿಯೆ ||1|| ಭಕ್ತಿಹೀನರ ಮನೆಯ ಪಟ್ಟು ಸುಪ್ಪತ್ತಿಗೆಗಿಂತಭಕ್ತರ ಮನೆಯ ಕಡೆಬಾಗಿಲ ಕಾಯುವುದು ಲೇಸುಮುಕ್ತಿಮಾರ್ಗವ ತೋರ್ಪ ಮುರಹರನ ದಾಸರನುಸಕ್ತಿಯಿಂ ಸೇವಿಸುವುದು ಬಲು ಸೌಖ್ಯ ಹರಿಯೆ ||2|| ಆಶೆಕಾರರ ಮನೆಯ ವಿಲಾಸ ಸುಖಕಿಂತಆಶಾರಹಿತರ ಮನೆಯ ನಿರ್ಗತಿಕ ದೈನ್ಯ ಲೇಸುಭೂಸುರಪ್ರಿಯ ಕಾಗಿನೆಲೆಯಾದಿಕೇಶವನಮೀಸಲಿನ ಪಾದಭಜನೆ ಕಡುಲೇಸು ಮನವೆ ||3||

ಅರಿತು ನಡೆಯಲಿ ಬೇಕು Read More »

ಅರಸಿನಂತೆ ಬಂಟನೋ ಹನುಮರಾಯ 

ಅರಸಿನಂತೆ ಬಂಟನೆಂಬುದ ನೀನುಕುರುಹು ತೋರಿದೆ ಮೂರು ಲೋಕಕೆ ಹನುಮ ಒಡೆಯನಂಬುಧಿಯೊಳು ಪೊಕ್ಕು ದೈತ್ಯನ ಕೊಂದುತಡೆಯದೆ ಶ್ರುತಿಯನಜಗಿತ್ತನೆಂದುಸಡಗರದಿಂದ ಶರಧಿಯ ದಾಂಟಿ ಮಹಿಜೆ ಪೆ-ರ್ಮುಡಿಯ ಮಾಣಿಕವ ರಾಘವಗಿತ್ತೆ ಹನುಮ ||1|| ಮಂದರಧರ ಗೋವರ್ಧನ ಗಿರಿಯನು ಲೀಲೆ-ಯಿಂದಲಿ ನಿಂದು ನೆಗಹಿದನೆಂದುಸಿಂಧು ಬಂಧನಕೆ ಸಮಸ್ತ ಪರ್ವತಗಳತಂದು ನಳನ ಕೈಯೊಳಗಿತ್ತೆ ಹನುಮ ||2|| ಸಿರಿಧರ ವರ ಕಾಗಿನೆಲೆಯಾದಿಕೇಶವಸುರರಿಗಮೃತವನು ಎರೆದನೆಂದುವರ ಸಂಜೀವನವ ತಂದು ಸೌಮಿತ್ರಿಗಂದುಎರೆದು ಶ್ರೀರಾಮನ ನಿಜದೂತನೆನಿಸಿದೆ ಹನುಮ ||3||

ಅರಸಿನಂತೆ ಬಂಟನೋ ಹನುಮರಾಯ  Read More »

ಅಭ್ಯಾಸವನು ಮಾಡಬೇಕು ಬಿಡದೆ

ಅಭ್ಯಾಸವನು ಮಾಡಬೇಕು ಬಿಡದೆ…. ಶ್ರೀ ಗು-ರುಭ್ಯೋನಮಃ ಎಂಬ ದಿವ್ಯನಾಮಂಗಳಂ ಕೇಶವ ನಾರಾಯಣ ಮಾಧವ ಗೋವಿಂದ ಭವನಾಶ ಭಕ್ತ ಹೃದಯ ಕಮಲಾಬ್ಜದ್ಯುಮಣಿದೋಷರಹಿತ ವಿಷ್ಣು ಮದುಸೂದನ ತ್ರಿವಿಕ್ರಮ ಸು-ರೇಶ ಸರ್ವೋತ್ತಮ ದಿವ್ಯ ನಾಮಂಗಳನು ||1|| ವಾಮನ ಶ್ರೀಧರ ಹೃಷಿಕೇಶ……….ಪುಣ್ಯೋದರ ಹಿರಣ್ಯವಾಸದಾಮೋದರಾಮಲ ಕೌಸ್ತುಭರತ್ನ ವನಮಾಲಿರಾಮ ರಘುಪುಂಗವನ ನಾಮಂಗಳನು ||2|| ಸಂಕರ್ಷಣ ವಾಸುದೇವ ಪ್ರದ್ಯುಮ್ನ ನಿಖಿ-ಳಾಂಕ ಪಂಕೇಜ ಪತ್ರಾಯತಾಕ್ಷಕಿಂಕರ ರಕ್ಷಕ ಅನಿರುದ್ಧಪುರುಷೋತ್ತಮಶಂಕರಪ್ರಿಯ ಅಧೋಕ್ಷಜ ನಾಮಂಗಳಂ||3|| ನಾರಸಿಂಹಾಚ್ಯುತ ಜನಾರ್ದನ ಉಪೇಂದ್ರಸಾರ ಭವಭಯ ಹರ ಕೃಷ್ಣ ವಿಶ್ವೋ-ದ್ಧಾರ………….. ವನಮಾಲಿ ಆಮೂರುತಿಯ ನಾಮಂಗಳಂ ||4|| ಅಸಮಪಟು ಬಲಿಯ ಕಾಳೆಗದಿ ನುಂಗಿದ ನಿಜಪಾದರಸವಿರುದ್ಧ ತಾವಿಗೊದಗುವ ತೆರದೊಳುಬಿಸಜಾಕ್ಷ ಕಾಗಿನೆಲೆಯಾದಿಕೇಶವ ಎನ್ನಅಸುವಳಿದು

ಅಭ್ಯಾಸವನು ಮಾಡಬೇಕು ಬಿಡದೆ Read More »

ಅಣು ಮಹತ್ತಾದ ದೇವ 

ಅಣುವಿಂಗೆ ಅಣುವು ಮಹತಿಂಗೆ ಮಹಿಮನು ಅಖಿಳಗುಣಭರಿತ ಪರಮ ಪಾವನ ಚರಿತ ಎನ್ನ ನಿರ-ಯಣ ಸಮಯದಲ್ಲಿ ಶ್ರೀಹರಿ ಹರಿಯೆ ಎಂದೆಂಬನೆನಹನೊಲಿದಿತ್ತು ಸಲಹಯ್ಯ ನೋಡಿ ನಡೆಯದೆ ಹಿಂದನೇಕ ಜನ್ಮಗಳಲ್ಲಿಮಾಡಿರುವ ಪಾತಕವು ವ್ಯಾಧಿರೂಪಗಳಿಂದಪೀಡಿಸುತ ತನುವ ತೊತ್ತಳ ತುಳಿದು ನೆಲಕಿಕ್ಕಿತೀಡಿ ಬಸವಳಿದ ಬಳಿಕನಾಡಿಗಳು ಸ್ವಸ್ಥಾನದಾಸ್ಥಾನ ಛೇದಿಸಲುಓಡಿ ಕಂಠೋಪದಲಿ ಪ್ರಾಣ ನಿಲ್ಲದಲೆ ಒ-ದ್ದಾಡುತಿಹ ಸಮಯದಲಿ ನಾಲಗೆ ಹರಿ ನಾಮವಪಾಡಿ ಪೊಗಳುವುದ ಕರುಣಿಸಯ್ಯ ||1|| ಕಂದ ಬಾರೆಂತೆಂದು ಶೋಕಿಪ ಜನನಿ ಜನಕನಿಂದಳುತ ಜೇಷ್ಠರು ಕನಿಷ್ಠ ಭ್ರಾತೃಪುತ್ರಬಂಧು ಮಿತ್ರರು ಬಹು ಪ್ರಳಾಪಮಂ ಗೈವ ಸತಿಅಂದವಾಗಿಹ ಮಂದಿರಹೊಂದಿಪ್ಪ ಸಂಪತ್ತು

ಅಣು ಮಹತ್ತಾದ ದೇವ  Read More »

ಅಡಿಗೆಯನು ಮಾಡಬೇಕಣ್ಣ

ನಾನೀಗ ಅಜ್ಞಾನದಡಿಗೆಯನು ಮಾಡಬೇಕಣ್ಣ ಅಡಿಗೆಯನ್ನು ಮಾಡಬೇಕುಮಡಿಸಬೇಕು ಮದಗಳನ್ನುಒಡೆಯನಾಜ್ಞೆಯಿಂದ ಒಳ್ಳೆಸಡಗರದಲಿ ಮನೆಯ ಸಾರಿಸಿ ತನ್ನ ಗುರುವ ನೆನೆಯ ಬೇಕಣ್ಣತನುಭಾವವೆಂಬ ಭಿನ್ನ ಕಲ್ಮಶವಳಿಯ ಬೇಕಣ್ಣಒನಕೆಯಿಂದ ಕುಟ್ಟಿಕೇರಿ ತನಗೆ ತಾನೆ ಆದ ಕೆಚ್ಚನನುವರಿತು ಇಕ್ಕಬೇಕು ಅರಿವರ್ಗವೆಂಬ ತುಂಟರಳಿಸಿ|| 1|| ತತ್ವಭಾಂಡವ ತೊಳೆಯ ಬೇಕಣ್ಣ – ಸತ್ಯಾತ್ಮನಾಗಿಅರ್ತಿ ಅಕ್ಕಿಯ ಮಥಿಸಬೇಕಣ್ಣಕತ್ತರಿ ಮನವೆಂಬ ಹೊಟ್ಟನು ಎತ್ತಿ ಒಲೆಗೆ ಹಾಕಿ ಇನ್ನುಮುತ್ತಿಕೊಂಡಿಹ ಮಮತೆಯನ್ನು ಎತ್ತಿ ಎಸರ ಹಿಂಗಿಸುತಲಿ ||2|| ಜನನ ಸೊಂಡಿಗೆ ಹುರಿಯಬೇಕಣ್ಣ – ನಿಜವಾಗಿ ನಿಂತುತನುವು ತುಪ್ಪವ ಕಾಸಬೇಕಣ್ಣಕನಕಗಿರಿ ಕಾಗಿನೆಲೆಯಾದಿಕೇಶವನ ದಾಸಕನಕನ ಕಟ್ಟಳೆಯೊಳು ನಿಂತು

ಅಡಿಗೆಯನು ಮಾಡಬೇಕಣ್ಣ Read More »

ಅಟ್ಟು ಇಕ್ಕದವರ ಮನೆಯ 

ಅಟ್ಟು ಇಕ್ಕದವರ ಮನೆ ಪಾಯಸ ಕಜ್ಜಾಯವಅಟ್ಟರೇನು ಅಡದಿದ್ದರೇನು ನಿಚ್ಚಣಿಗೆ ದೋಟಿಗೆ ನಿಲುಕದ ಹಣ್ಣಿನ ವೃಕ್ಷನಿಚ್ಚ ನಿಚ್ಚವು ಬಾಗಿ ಫಲವಾದರೇನುಔಚಿತ್ಯ ವಿದ್ಯೆಯನರಿಯದ ದೊರೆ ತಾನುಮೆಚ್ಚಿದರೇನು ಮೆಚ್ಚದಿದ್ದರೇನು ||1|| ದಾರಿದ್ರ್ಯಕ್ಕೊದಗದ ದ್ರವ್ಯ ಪದಾರ್ಥದಏರಿ ಇದ್ದರೇನು ಪರ್ವತವಿದ್ದರೇನುಶರೀರ ಸೌಖ್ಯ ಶಮನಕ್ಕಾಗದ ಹೆಣ್ಣುಊರಲಿದ್ದರೇನು ತೌರೂರಲಿದ್ದರೇನು ||2|| ಉರಗಾದ್ರಿ ವಾಸ ನಾರಾಯಣಾದಿಕೇಶವನಚರಣ ಕಮಲವನು ಸೇರಿಕೊಳ್ಳದೆವರ ಶಾಪವಿಲ್ಲದ ಬಣಗುದೈವಗಳಿಗೆಶರಣೆಂದರೇನು ಶರಣೆನದಿದ್ದರೇನು|| 3||

ಅಟ್ಟು ಇಕ್ಕದವರ ಮನೆಯ  Read More »

ಅಜ್ಞಾನಿಗಳ ಕೂಡೆ ಅಧಿಕ ಸ್ನೇಹಕ್ಕಿಂತ

ಅಜ್ಞಾನಿಗಳ ಕೂಡೆ ಅಧಿಕ ಸ್ನೇಹಕ್ಕಿಂತ ಸುಜ್ಞಾನಿಗಳ ಕೂಡೆ ಜಗಳವೇ ಲೇಸು ಉಂಬುಡುವುದಕಿಲ್ಲದರಸಿನೋಲಗಕಿಂತತುಂಬಿದೂರೊಳಗೆ ತಿರಿದುಂಬುವುದೆ ಲೇಸುಹಂಬಲಿಸಿ ಹಾಳ್ಹರಟೆ ಹೊಡೆವುದಕಿಂತ – ಹರಿಯೆಂಬ ದಾಸರ ಕೂಡೆ ಸಂಭಾಷಣೆಯೆ ಲೇಸು ||1|| ಒಡನೆ ಹಂಗಿಸುವನೋಗರವನುಂಬುದಕಿಂತಕುಡಿನೀರು ಕುಡಿದುಕೊಂಡಿರುವುದೇ ಲೇಸುಬಿಡದೆ ಬಾಂಧವರೊಡನೆ ಕಡಿದಾಡುವುದಕಿಂತಅಡವಿಯೊಳಗe್ಞÁತ ವಾಸವೇ ಲೇಸು  ||2|| ಮಸೆಯುತಿಹ ಮತ್ಸರದ ನೆರೆಯೊಳಿರುವುದಕಿಂತಹಸನಿಲ್ಲದ ಹಾಳುಗುಡಿಯೇ ಲೇಸುಬಿಸಜಾಕ್ಷ ಕಾಗಿನೆಲೆಯಾದಿಕೇಶವರಾಯವಸುಮತಿಯೊಳು ನಿನ್ನ ದಾಸತ್ವವೇ ಲೇಸು ||3||

ಅಜ್ಞಾನಿಗಳ ಕೂಡೆ ಅಧಿಕ ಸ್ನೇಹಕ್ಕಿಂತ Read More »

ದಶಾವತಾರದ ಲೀಲೆಗಳು

ಅಂಬುಜದಳಾಕ್ಷಗೆ ಮಂಗಳ ಸರ್ವ ಜೀವರಕ್ಷಕಗೆ ಮಂಗಳ ಜಲಧಿಯೊಳಾಮ್ನಾಯ ತಂದಗೆ ಮಂಗಳಕುಲಗಿರಿ ತಾಳ್ದಗೆ ಜಯಮಂಗಳನೆಲನ ಕದ್ದಸುರನ ಗೆಲಿದಗೆ ಮಂಗಳಚೆಲುವ ನರಸಿಂಹಗೆ ಶುಭಮಂಗಳ ||1|| ವಸುಧೆಯ ಈರಡಿಗೈದಗೆ ಮಂಗಳವಸುದಾಧಿಪರಳಿದಗೆ ಜಯಮಂಗಳದಶಕಂಧರನನ್ನು ಗೆಲಿದಗೆ ಮಂಗಳಪಶುಗಳ ಕಾಯ್ದಗೆ ಶುಭ ಮಂಗಳ  ||2|| ಪುರ ತ್ರಯ ವಧುಗಳ ಗೆಲಿದಗೆ ಮಂಗಳತುರಗ ವಾಹನನಿಗೆ ಜಯ ಮಂಗಳವರ ನೆಲೆಯಾದಿಕೇಶವನಿಗೆ ಮಂಗಳಪರಮ ಪತ್ನಿವ್ರತಗೆ ಶುಭ ಮಂಗಳ  ||3||

ದಶಾವತಾರದ ಲೀಲೆಗಳು Read More »

ಅಂಧಂತಮಸು ಇನ್ನಾರಿಗೆ

ಅಂಧಂತಮಸು ಇನ್ನಾರಿಗೆ ಗೋ-ವಿಂದನ ನಿಂದಿಸುವರಿಗೆ ಸಂದೇಹವಿಲ್ಲದೆ ಸಾರಿಸಾರಿಗೆ ವಾಯುನಂದನನ ವಂದಿಸದವರಿಗೆ ಮಾತುಮಾತಿಗೆ ಹರಿಯ ನಿಂದಿಸಿ ಸ-ರ್ವೋತ್ತಮ ಶಿವನೆಂದು ವಾದಿಸಿಧಾತುಗ್ರಂಥಗಳೆಲ್ಲ ತೋರಿಸಿ ವೇ-ದಾಂತ ಪ್ರಮಾಣಗಳ ಹಾರಿಸಿಸೋತು ಸಂಕಟಪಟ್ಟು ಘಾತಕ ಒಡಲೊಳಗಿಟ್ಟುನೀತಿ ಹೇಳುವ ಕೆಟ್ಟ ಜಾತಿಗಳಿಗಲ್ಲದೆ  ||1|| ಮೂಲಕವತಾರಕ್ಕೆ ಭೇದವು – ಮುಖ್ಯಶೀಲ ಪಂಡಿತರೊಳಗೆ ವಿವಾದವುಲೀಲಾ ಸಾದೃಶ್ಯವ ತೋರುತ – ಲಿಂಗಭಂಗವಿಲ್ಲದ ದೇಹ ಹಾರುತಮೂಲ ಗುರುವು ಕುಂತೀಬಾಲನೆನ್ನದೆ ವೃಥಾಶೀಲಗೆಟ್ಟಂಥ ಖೂಳರಿಗಲ್ಲದೆ ಮತ್ತೆ ||2|| ವ್ಯಾಸರ ಮಾತುಗಳಾಡುತ ವಿ-ಶ್ವಾಸ ಘಾತಕತನ ಮಾಡುತದೋಷವೆಂದರೆ ನುಡಿ ಕೇಳದೆ ಸಂ-ತೋಷವೆಂದರೆ ನೋಡಿ ಬಾಳದೆಶೇಷಶಯನನಾದಿಕೇಶವರಾಯನದಾಸರೊಡೆಯ ಮಧ್ವದ್ವೇಷಿಗಳಿಗಲ್ಲದೆ  ||3||

ಅಂಧಂತಮಸು ಇನ್ನಾರಿಗೆ Read More »

ಭಜ ರೇ ಹನುಮಂತಂ

ಭಜ ರೇ ಹನುಮಂತಂ ಮಾನಸ ಭಜರೇ ಹನುಮಂತಂ|| ಕೋಮಲಕಾಯಂ ನಾಮಸುದೇವಂ ಭಜ ಸಖ ಸಿಂಹಂ ಭೂಸುರಶ್ರೇಷ್ಠಂ|| ಮೂರ್ಖನಿಶಾಚರವನಸಂಹಾರಂ ಸೀತಾದುಃಖವಿನಾಶನಕಾರಂ|| ಪರಮಾನಂದಗುಣೋದಯಚರಿತಂ ಕರುಣಾರಸಸಂಪೂರ್ಣಸುಭರಿತಂ|| ರಣರಂಗಧೀರಂ ಗುಣಗಂಭೀರಂ ದಾನವದೈತ್ಯಾರಣ್ಯಕುಠಾರಂ|| ಗುರುಚಿನ್ನಕೇಶವಕದಳೀರಂಗಂ ಸ್ಥಿರಸದ್ಭಕ್ತಂ ಮುಖ್ಯಪ್ರಾಣಂ|| —ಕನಕದಾಸ

ಭಜ ರೇ ಹನುಮಂತಂ Read More »

ನೀ ಮಾಯೆಯೊಳಗೋ

ನೀ ಮಾಯೆಯೊಳಗೋ ನಿನ್ನೊಳು ಮಾಯೆಯೋ ನೀ ದೇಹದೊಳಗೋ ನಿನ್ನೊಳು ದೇಹವೋ|| ಬಯಲು ಆಲಯದೊಳಗೋ ಆಲಯವು ಬಯಲೊಳಗೋ ಬಯಲು ಆಲಯವೆರಡೂ ನಯನದೊಳಗೋ| ನಯನ ಬುದ್ಧಿಯ ಒಳಗೋ ಬುದ್ಧಿ ನಯನದ ಒಳಗೋ ನಯನ ಬುದ್ಧಿಗಳೆರಡೂ ನಿನ್ನೊಳಗೋ ಹರಿಯೇ|| ಸವಿಯು ಸಕ್ಕರೆಯೊಳಗೋ ಸಕ್ಕರೆಯು ಸವಿಯೊಳಗೋ ಸವಿಯು ಸಕ್ಕರೆಯೆರಡೂ ಜಿಹ್ವೆಯೊಳಗೋ| ಜಿಹ್ವೆ ಮನಸಿನ ಒಳಗೋ ಮನಸು ಜಿಹ್ವೆಯ ಒಳಗೋ ಜಿಹ್ವೆ ಮನಸುಗಳೆರಡೂ ನಿನ್ನೊಳಗೋ ಹರಿಯೆ|| ಕುಸುಮದೊಳು ಗಂಧವೋ ಗಂಧದೊಳು ಕುಸುಮವೋ ಕುಸುಮಗಂಧಗಳೆರಡೂ ಘ್ರಾಣದೊಳಗೋ| ಅಸಮಭವ ಕಾಗಿನೆಲೆಯಾದಿಕೇಶವರಾಯ ಉಸುರಲೆನ್ನಳವಲ್ಲ ಎಲ್ಲ ನಿನ್ನೊಳಗೋ||                                                     —-ಕನಕದಾಸ

ನೀ ಮಾಯೆಯೊಳಗೋ Read More »

ತಲ್ಲಣಿಸದಿರು ಕಂಡ್ಯ

ತಲ್ಲಣಿಸದಿರು ಕಂಡ್ಯ ತಾಳು ಮನವೇ ಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ|| ಬೆಟ್ಟದ ತುದಿಯಲ್ಲಿ ಹುಟ್ಟಿರುವ ವೃಕ್ಷಕ್ಕೆ ಕಟ್ಟೆಯನು ಕಟ್ಟಿ ನೀರೆರೆದವರು ಯಾರೋ| ಪುಟ್ಟಿಸಿದ ಸ್ವಾಮಿ ತಾ ಹೊಣೆಗಾರನಾಗಿರಲು ಘಟ್ಯಾಗಿ ಸಲಹುವನು ಇದಕೆ ಸಂಶಯಬೇಡ|| ಅಡವಿಯೊಳಗಾಡುವ ಮೃಗಪಕ್ಷಿಗಳಿಗೆಲ್ಲ ಅಡಿಗಡಿಗೆ ಆಹಾರವಿತ್ತವರು ಯಾರೋ| ಪಡೆದ ಜನನಿಯ ತೆರದಿ ಸ್ವಾಮಿ ಹೊಣೆಗೀಡಾಗಿ ಬಿಡದೆ ರಕ್ಷಿಪನಿದಕೆ ಸಂದೇಹ ಬೇಡ|| ಕಲ್ಲೊಳಗೆ ಹುಟ್ಟಿರುವ ಕ್ರಿಮಿಕೀಟಗಳಿಗೆಲ್ಲ ಅಲ್ಲಲ್ಲಿ ಆಹಾರವಿತ್ತವರು ಯಾರೋ| ಫುಲ್ಲಲೋಚನ ಕಾಗಿನೆಲೆಯಾದಿಕೇಶವನು ಎಲ್ಲರನು ಸಲಹುವನು ಇದಕೆ ಸಂಶಯಬೇಡ||                                                                  —ಕನಕದಾಸ

ತಲ್ಲಣಿಸದಿರು ಕಂಡ್ಯ Read More »