ಕನಕದಾಸ

ಕೊಕೊಕೋ ಎನ್ನಿರೊ ಕುಂಭಿನಿಯವರೆಲ್ಲ

ಕೊಕೊಕೋ ಎನ್ನಿರೊ ಕುಂಭಿನಿಯವರೆಲ್ಲಕೊಕೊಕೋ ಎನ್ನಿರೊ – ನಮ್ಮ ಗೋಕುಲದೊಳಗೊಬ್ಬ ಕಳ್ಳ ಬರುತಾನೆಂದುಕೊಕೊಕೋ ಎನ್ನಿರೊ ಹೊದ್ದಿ ಮೊಲೆಯನುಂಡವಳಸುವನೆ ಕೊಂದಮುದ್ದುಗಾರ ಕಳ್ಳ ಕೊಕೊಕೋ ಎನ್ನಿರೊಕದ್ದುಕೊಂಡೊಯ್ವ ರಕ್ಕಸರನೆಲ್ಲರ ಕಾಲಲೊದ್ದೊರಸಿದ ಕಳ್ಳ ಕೊಕೊಕೋ ಎನ್ನಿರೊಹದ್ದು ಹಗೆಯ ಹಾಸಿಗೆಯ ಮೇಲೊರಗಿದಮುದ್ದುಗಾರ ಕಳ್ಳ ಕೊಕೊಕೋ ಎನ್ನಿರೊಅರ್ಧದೇಹನ ಕೈಯ ತಲೆಯ ಕಪಟದಿಂದಕದ್ದು ಬಿಸುಟ ಕಳ್ಳ ಕೊಕೊಕೋ ಎನ್ನಿರೊ ||1|| ಕೆಂಜಾಜಿಯ ಮಣಿ ಮಲ್ಲಿಗೆ ದಂಡೆಯರಂಜೆ ಕದ್ದ ಕಳ್ಳ ಕೊಕೊಕೋ ಎನ್ನಿರೊಗುಂಜಿಯ ದಂಡೆಯ ಕಲ್ಲಿಯ ಚೀಲದಮಂಜು ಮೈಯ್ಯ ಕಳ್ಳ ಕೊಕೊಕೋ ಎನ್ನಿರೊಅಂಜದೆ ಗೊಲ್ಲರ ಹಳ್ಳಿಯೊಳಗೆ ಹಾಲನೆಂಜಲಿಸಿದ ಕಳ್ಳ ಕೊಕೊಕೋ […]

ಕೊಕೊಕೋ ಎನ್ನಿರೊ ಕುಂಭಿನಿಯವರೆಲ್ಲ Read More »

ಕೈಯ ತೋರಿದ ಬಗೆಯ

ಕೈಯ ತೋರಿದ ಬಗೆಯ, ಅಮ್ಮಮ್ಮ ಯಾದವಗಿರಿ ಕಲ್ಯಾಣಿ ನೀನು ಸಕಲ ಜನರು ಕಾಣುತಿರಲುವಿಕೃತಿ ವತ್ಸರ ಚೈತ್ರ ದ್ವಿತೀಯೇಕಾದಶಿಯೊಳುಪ್ರಕಟಿತಾ ಶುಕ್ರವಾರದೊಳು ತನ್ನಭಕುತರಿಗುತ್ಸಾಹ ಸಂಧ್ಯಕಾಲದೊಳು ||1|| ಕಡಗ ಕಂಕಣ ಗೀರುಗಂಧ ಮಿಗೆಕಡು ಚೆಲುವಿನ ಬಣ್ಣ ಕುಪ್ಪುಸದಿಂದನಡು ಬೆರಳುಂಗುರದಿಂದ ಕೈಯಬೆಡಗ ನೋಡಿದ ಜನರಿಗೆ ಪುಟ್ಟಿತಾನಂದ ||2|| ಜನರೆಲ್ಲ ಯದುಶೈಲೋತ್ಸವವ ಕೇಳಿಘನ ಕಾಲದೇಶದಜಿತ ಭಯವನಿಮಗೆ ಬಿನ್ನೈಪೆನು ನಯವ ಕೊಟ್ಟಮನೋಹರುಷದಿ ನಮಗಿತ್ತ ವೈಭವವ ||3|| ಚೆಲುವರಾಯನ ರಥೋತ್ಸವದೀ ತೀರ್ಥಕೊಲಿದು ಗಂಗಾದೇವಿ ಬರುವ ಸಂಭ್ರಮವನೆಲೆಯ ಸರ್ವರಿಗನುಭವವ ಕೋಟಿಮನೋಹರುಷವನ್ನು ನಮಗಿತ್ತ ವೈಭವವ ||4|| ನಿನ್ನ ಮೋಹದ ಕಂದ

ಕೈಯ ತೋರಿದ ಬಗೆಯ Read More »

ಕೇಳಿರೈ ಶಿವಶರಣರು ಹೇಳಲಂಜಿಕೆ ಆವುದು

ಕೇಳಿರೈ ಶಿವಶರಣರು ಹೇಳಲಂಜಿಕೆ ಆವುದು ಭಾಳನೇತ್ರನ ಭಕ್ತರಿಂತು ನೋಡಿಕೊಳ್ಳಿರೈ ಮೂರುಲಿಂಗ ತನ್ನೊಳು ಮುಖ್ಯವಾಗಿರುವಾಗಬೇರೊಂದು ಲಿಂಗ ಬೆಲೆ ಮಾಡಿ ತಂದುತೋರುವಂಗೈಲಿಟ್ಟು ತೋಯ ಪುಷ್ಪವ ನೀಡಿಯಾರ ಮನಕೊಪ್ಪಿಸುವರೀ ಶೀಲವಂತರು ||1|| ಲಿಂಗವೊಂದು ತನ್ನೊಳು ಲೀನವಾಗಿರುವಾಗಅಂಗಭವಿಗಳು ಕೂಡಿ ಆಡಿಕೊಂಬರುಅಂಗದನುಭವದರ್ಥವನರಿಯದ ಇಂತಹಭಂಗಿ ಹುಚ್ಚರೆಲ್ಲ ಶಿವನ ಭಕ್ತರಹರೆ ||2|| ನಾಗಲಿಂಗ ತನ್ನೊಳು ನಾಟ್ಯವಾಡುತಲಿರಲುಆಗಮಿಸಿದ ಲಿಂಗವ ಬೆದಕಲೇತಕ್ಕೆಕಾಗಿನೆಲೆಯಾದಿಕೇಶವನೆ ನಾಗಶಯನನಾಗಿರಲು ಬೇರೊಂದನರಸಲೇತಕ್ಕೆ ||3||

ಕೇಳಿರೈ ಶಿವಶರಣರು ಹೇಳಲಂಜಿಕೆ ಆವುದು Read More »

ಕೇಶವನೊಲುಮೆಯು ಆಗುವ ತನಕ ಹರಿ

ಕೇಶವನೊಲುಮೆಯು ಆಗುವ ತನಕ ಹರಿದಾಸರೊಳಿರುತಿರು ಹೇ ಮನುಜ ಕ್ಲೇಶಪಾಶಂಗಳ ಹರಿದು ವಿಲಾಸದಿಶ್ರೀಶನ ನುತಿಗಳ ಪೊಗಳುತ ಮನದೊಳು ಮೋಸದಿ ಜೀವರ ಘಾಸಿ ಮಾಡಿದ ಪಾಪಕಾಶಿಗೆ ಹೋದರೆ ಹೋದೀತೆಶ್ರೀಶನ ಭಕುತರ ದೂಷಿಸಿದಾ ಫಲಕಾಸು ಕೊಟ್ಟರೆ ಬಿಟ್ಟೀತೆಭಾಷೆಯ ಕೊಟ್ಟು ನಿರಾಶೆಯ ಗೈದ ಫಲಕ್ಲೇಶಗೊಳಿಸದೆ ಇದ್ದೀತೆಭೂಸುರಸ್ವವ ಹ್ರಾಸ ಮಾಡಿದ ಫಲಏಸೇಸು ಜನುಮಕು ಬಿಟ್ಟೀತೆ ||1|| ಜೀನನ ವಶದೊಳು ನಾನಾ ದ್ರವ್ಯವಿರೆದಾನಧರ್ಮಕೆ ಮನಸಾದೀತೆಹೀನ ಮನುಜನಿಗೆ e್ಞÁನವ ಬೋಧಿಸೆಹೀನ ವಿಷಯ ಅಳಿದ್ಹೋದೀತೆಮಾನಿನಿ ಮನಸದು ನಿಧಾನವಿರದಿರೆಮಾನಾಭಿಮಾನಗಳುಳಿದೀತೆಭಾನುಪ್ರಕಾಶನ ಭಜನೆಯ ಮಾಡದಹೀನಗೆ ಮುಕುತಿಯು ದೊರಕೀತೆ||2|| ಸತ್ಯಧರ್ಮಗಳ ನಿತ್ಯವು ಬೋಧಿಸೆತೊತ್ತಿನ ಮನಸಿಗೆ

ಕೇಶವನೊಲುಮೆಯು ಆಗುವ ತನಕ ಹರಿ Read More »

ಕೆಂಪು ಮೂಗಿನ ಪಕ್ಷಿ ತಂಪಿನೊಳಿರುವುದು

ಕೆಂಪು ಮೂಗಿನ ಪಕ್ಷಿ ತಂಪಿನೊಳಿರುವುದುನೆಂಪು ಬಲ್ಲವರು ಪೇಳಿ ಹಂಪೆಯ ವಿರೂಪಾಕ್ಷ ಲಿಂಗನಲ್ಲಿಝಂಪೆಯನಾಡುತಿಹುದು ಆರು ತಲೆ ಹದಿನಾರು ಕಣ್ಣುಗಳುಂಟುಮೂರು ಮೂರು ನಾಲಗೆಬೇರೆ ಹನ್ನೆರಡು ಕಣ್ಣು ಕಿವಿಗಳುಂಟುಸೇರಿತು ತೆಂಕಲಾಗೆ ||1|| ಬಲೆಯ ಬೀಸಿದರು ಸಿಕ್ಕದಾ ಮೃಗಜಲದೊಳು ತಾ ನಿಲ್ಲದುನೆಲನ ಮೇಲಿರುವುದು ನಿಂತರೆ ಸಾವುದು ಕುಲದೊಳಗಾಡುತಿಹುದು ||2|| ಸಕಲ ಕಲೆಯು ಬಲ್ಲ ಸೀತಳ ಮಲ್ಲಿಗೆಬೇರೆ ಬೇರೆನಬಹುದುಚೆನ್ನ ಕೇಶವನಲ್ಲಿ ಕೃಪೆಯುಂಟಾದರೆಅಲ್ಲುಂಟು ಇಲ್ಲಿಲ್ಲವೆ ||3||

ಕೆಂಪು ಮೂಗಿನ ಪಕ್ಷಿ ತಂಪಿನೊಳಿರುವುದು Read More »

ಕೂಸನು ಕಂಡೀರ್ಯಾ ಸುಪ್ರ-ಹ್ಲಾದನ

ಕೂಸನು ಕಂಡೀರ್ಯಾ ಸುಪ್ರ-ಹ್ಲಾದನ ಕಂಡೀರ್ಯಾ ನಮ್ಮಕೂಸನು ಕಂಡೀರ್ಯಾ ರಾಕ್ಷಸ ಕುಲದಲಿ ಜನಿಸಿತು ಕೂಸುರಾಧಾಕೃಷ್ಣನ ಭಜಿಸಿತು ಕೂಸುರಾಗ ದ್ವೇಷಗಳ ಬಿಟ್ಟಿತು ಕೂಸುರಾಮ ಪಾದವ ನೆನೆಯುವ ಕೂಸು ||1|| ಘನ ಹರಿ ಕಂಬದಿ ತೋರಿತು ಕೂಸುಗಳಿಸಿತು ಕೃಷ್ಣನ ಪ್ರೇಮವ ಕೂಸುಘನ ಪಂಪಾಲಯದಿ ವಾಸಿಪ ಕೂಸುಗಣೆ ಗೋಪಾಲನ ಪ್ರೀತಿಯ ಕೂಸು||2|| ಪ್ರಸಿದ್ಧ ವ್ಯಾಸರಾಯರೆಂಬ ಕೂಸುಪ್ರವೀಣ ವಿದ್ಯೆಯೊಳೆನಿಸಿದ ಕೂಸುಪ್ರಹ್ಲಾದನೆಂಬುವ ಆಹ್ಲಾದ ಕೂಸುಪ್ರಸನ್ನ ಕಾಗಿನೆಲೆಯಾದಿಕೇಶವನ ಕೂಸು||3||

ಕೂಸನು ಕಂಡೀರ್ಯಾ ಸುಪ್ರ-ಹ್ಲಾದನ Read More »

ಕುಲ ಕುಲವೆಂದು ಹೊಡೆದಾಡದಿರಿ

ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮಕುಲದ ನೆಲೆಯನೇನಾದರೂ ಬಲ್ಲಿರ ಹುಟ್ಟದ ಯೋನಿಗಳಿಲ್ಲ ಮೆಟ್ಟದ ಭೂಮಿಗಳಿಲ್ಲಅಟ್ಟು ಉಣ್ಣದ ವಸ್ತುಗಳಿಲ್ಲಗುಟ್ಟು ಕಾಣಿಸ ಬಂತು ಹಿರಿದೇನು ಕಿರಿದೇನುನೆಟ್ಟನೆ ಸರ್ವಜ್ಞನ ನೆನೆ ಕಂಡ್ಯ ಮನುಜ ||1|| ಜಲವೆ ಸಕಲ ಕುಲಕ್ಕೆ ತಾಯಲ್ಲವೆಜಲದ ಕುಲವನೇನಾದರೂ ಬಲ್ಲಿರಜಲದ ಬೊಬ್ಬುಳಿಯಂತೆ ಸ್ಥಿರವಲ್ಲವೀ ದೇಹನೆಲೆಯನರಿತು ನೀ ನೆನೆ ಕಂಡ್ಯ ಮನುಜ ||2|| ಹರಿಯೆ ಸರ್ವೋತ್ತಮ ಹರಿಯೆ ಸರ್ವೇಶ್ವರಹರಿಮಯವೆಲ್ಲವೆನುತ ತಿಳಿದುಸಿರಿ ಕಾಗಿನೆಲೆಯಾದಿಕೇಶವರಾಯನಚರಣ ಕಮಲವ ಕೀರ್ತಿಸುವನೆ ಕುಲಜ ||3||

ಕುಲ ಕುಲವೆಂದು ಹೊಡೆದಾಡದಿರಿ Read More »

ಕುಲ ಕುಲ ಕುಲವೆನ್ನುತಿಹರು 

ಕುಲ ಕುಲ ಕುಲವೆನ್ನುತಿಹರು ಕುಲವ್ಯಾವುದು ಸತ್ಯಸುಖವುಳ್ಳ ಜನರಿಗೆ ಕೆಸರೊಳು ತಾವರೆ ಪುಟ್ಟಲು ಅದ ತಂದುಬಿಸಜನಾಭನಿಗರ್ಪಿಸಲಿಲ್ಲವೆಹಸುವಿನ ಮಾಂಸದೊಳುತ್ಪತ್ತಿ ಕ್ಷೀರವವಸುಧೆಯೊಳಗೆ ಭೂಸುರರುಣಲಿಲ್ಲವೆ||1|| ಮೃಗಗಳ ಮೈಯಲಿ ಪುಟ್ಟಿದ ಕತ್ತುರಿಯತೆಗೆದು ಪೂಸುವರು ದ್ವಿಜರೆಲ್ಲರುಬಗೆಯಿಂದ ನಾರಾಯಣನ್ಯಾವ ಕುಲಅಗಜ ವಲ್ಲಭನ್ಯಾತರ ಕುಲದವನು ||2|| ಆತ್ಮ ಯಾವ ಕುಲ ಜೀವ ಯಾವ ಕುಲತತ್ತ್ವೇಂದ್ರಿಯಗಳ ಕುಲ ಪೇಳಿರಯ್ಯಆತ್ಮಾಂತರಾತ್ಮ ನೆಲೆಯಾದಿಕೇಶವನುಆತನೊಲಿದ ಮೇಲೆ ಯಾತರ ಕುಲವಯ್ಯ ||3||

ಕುಲ ಕುಲ ಕುಲವೆನ್ನುತಿಹರು  Read More »

ಕಾಯೊ ಕರುಣಾಕರನೆ

ಕಾಯೊ ಕರುಣಾಕರನೆ ಕಡು ಪಾಪಿ ನಾನುನ್ಯಾಯವೆಂಬುದು ಎನ್ನೊಳೆಳ್ಳನಿತಿಲ್ಲ ಎಣ್ಣೆ ಕೊಪ್ಪರಿಗೆಯೊಳ್ಬಿದ್ದು ಸ್ತುತಿಸಿದವನಲ್ಲಚಿನ್ನಕಶಿಪು ಬಾಧೆಗೊಳಗಾದವನಲ್ಲಬಣ್ಣಗೆಟ್ಟಡವಿಯಲಿ ತಪಸು ಮಾಡಿದವನಲ್ಲಹೆಣ್ಣನೊಲ್ಲದೆ ನಿನ್ನ ಬಂಟನಾದವನಲ್ಲ ||1|| ಒಲಿದು ದಾನವನಿತ್ತ ವೈರಿಕುಲದವನಲ್ಲಬಲು ಭಕುತಿಯ ದಾಸಿ ಪುತ್ರ ನಾನಲ್ಲಕಲಹದಲಿ ಪಣೆಗೆ ಬಾಣವ ನೆಡಿಸಿದವನಲ್ಲಕಳವಳದಿ ಕರೆದ ಪಾಂಚಾಲಿ ನಾನಲ್ಲ ||2|| ಉರಗರಾಜನ ತೆರದಿ ಹಾಸಿಗಾದವನಲ್ಲಗರುಡನಂದದಿ ಪೊತ್ತು ತಿರುಗಿದವನಲ್ಲಸಿರಿಧರನೆ ಕಾಗಿನೆಲೆಯಾದಿಕೇಶವ ನಿನ್ನಚರಣ ಡಿಂಗರಿಗ ಮಾತ್ರ ನಾನಾಗಿಹೆನೆಂದು ||3||

ಕಾಯೊ ಕರುಣಾಕರನೆ Read More »

ಕಾಯೊ ಎನ್ನನು ದೇವ

ಕಾಯೊ ಎನ್ನನು ದೇವ ಕಡೆ ಹಾಯಿಸೊ ಕಡಲೊಡೆಯ ಕಾಯಯ್ಯ ನೀ ಎನ್ನ ಕಮಲದಳಾಕ್ಷ ಒಂದು ಕಾಯಲಿ ನಾನು ಒಲಿದು ದಂಡಿಗೆಯಾದೆಎರಡು ಕಾಯಲಿ ನಾನು ವೀಣೆಯಾದೆಮೂರು ಕಾಯಲಿ ನಾನು ಮುದ್ದು ಕಿನ್ನರಿಯಾದೆನೀಟಾದ ಕಾಯಲಿ ನಾನು ನಾಗಸ್ವರವಾದೆ ||1|| ದಪ್ಪ ದಪ್ಪ ಕಾಯಲಿ ದರವೇಶಿಗಳಿಗಾದೆಮಿಕ್ಕ ಕಾಯಲಿ ನಾನು ಸನ್ನೇಸಿಗಳಿಗಾದೆಕೈತಪ್ಪಿ ಬಿದ್ದರೆ ಕದಿರಿಗೆ ಬಿಲ್ಲಾದೆಮತ್ತೆ ದೇವರ ಗುಡಿಗೆ ದೀಪವೇ ನಾನಾದೆ ||2|| ಚಿಕ್ಕಂದು ಮೊದಲು ನಾ ಸಾಸೂವೆ ಕಾಯಾದೆಚಿಕ್ಕ ಚಿನ್ಮಯಗೆ ಬುರುಡೆಯಾದೆಉಕ್ಕುವಾ ಹೊಳೆಯಲ್ಲಿ ತೆಪ್ಪವೇ ನಾನಾದೆಚೊಕ್ಕ ಕನಕಪ್ಪನ ಹಿಂದೆ ನಾ ತಿರುಪತಿಗೆ

ಕಾಯೊ ಎನ್ನನು ದೇವ Read More »

ಕಾಡುವ ದುರಿತಗಳನು ಬಿಡಿಸೆಂದು

ಕಾಡುವ ದುರಿತಗಳನು ಬಿಡಿಸೆಂದುಬೇಡಿಕೊಂಬೆನೊ ದೇವ ನಾ ನಿನ್ನ ಅಡಿದಾಸನೆಂಬೋ ಎನಗೊಂದು ದೃಢ ಬುದ್ಧಿಯು ಇಲ್ಲದೆಮಡದಿ ಮಕ್ಕಳೆಂಬೊ ಕಡಲೊಳು ಮುಳುಗಿದೆಕಡೆ ಹಾಯಿಸೊ ಎನ್ನೊಡೆಯ ನೀನಾದಡೆ ||1|| ಆಸೆಗಳ ಆಧಿಕ್ಯದಿಂದೀ ಪರಿಯ ಯಮಪಾಶಕ್ಕೆ ಒಳಗಾದೆನೋಮೀಸಲೂಳಿಗವ ಮಾಡದೆಯೆ ಪರಿಪರಿಯಕ್ಲೇಶದಿಂದಲಿ ಗಾಸಿಗೊಂಡೆನಯ್ಯ ||2|| ಪಾಡುವೆನು ನಿನ್ನ ನಾಮ ಸೀತಾರಾಮಆಡುವೆನು ಮನದಣಿವ ತನಕಬೇಡಿಕೊಂಬೆನೊ ನಿನ್ನ ಭಕ್ತರ ಸೇವೆಯನುಬಾಡದಾದಿಕೇಶವ ಭಕ್ತವತ್ಸಲನೆ||3||

ಕಾಡುವ ದುರಿತಗಳನು ಬಿಡಿಸೆಂದು Read More »

ಕಷ್ಟಪಟ್ಟರು ಇಲ್ಲ ಕಳವಳಿಸಿದರು ಇಲ್ಲ

ಕಷ್ಟಪಟ್ಟರು ಇಲ್ಲ ಕಳವಳಿಸಿದರು ಇಲ್ಲಭ್ರಷ್ಟ ಮಾನವ ನಿನ್ನ ಹಣೆಬರೆಹವಲ್ಲದೆ ಇಲ್ಲ ಸಿರಿವಂತನ ಸ್ನೇಹವ ಮಾಡಿ ನಡೆದರು ಇಲ್ಲಪರಿಪರಿಯಲಿ ವಿದ್ಯೆಯ ಕಲಿತರಿಲ್ಲನರಿಯ ಬುದ್ಧಿಯಿಂದಲಿ ನಡೆದುಕೊಂಡರು ಇಲ್ಲಅರಿಯದೆ ಹಲವ ಹಂಬಲಿಸಿದರು ಇಲ್ಲ ||1|| ಕೊಂಡಾಡಿ ಕಾಡಿ ನೀ ಬೇಡಿಕೊಂಡರು ಇಲ್ಲಕಂಡ ಕಂಡವರಿಗೆ ಕೈ ಮುಗಿದರಿಲ್ಲಗಂಡುಗತ್ತರಿಯನು ಕೊರಳಿಗಿಟ್ಟರು ಇಲ್ಲ – ಪ್ರ-ಚಂಡನಾದರು ಇಲ್ಲ, ಪರಿಹಾಸ್ಯವೆಲ್ಲ ||2|| ಕಟ್ಟಾಳು ಕಡುಜಾಣನಾಗಿ ಪುಟ್ಟಿದರಿಲ್ಲಬೆಟ್ಟವನು ಕಿತ್ತು ತಂದಿಟ್ಟರಿಲ್ಲಸೃಷ್ಟಿಯೊಳು ಕಾಗಿನೆಲೆಯಾದಿಕೇಶವರಾಯಕೊಟ್ಟವರಿಗುಂಟು ಕೊಡದವರಿಗಿಲ್ಲ||3||

ಕಷ್ಟಪಟ್ಟರು ಇಲ್ಲ ಕಳವಳಿಸಿದರು ಇಲ್ಲ Read More »

ಕಷ್ಟ ತನುವಿನಲಿ ಹುಟ್ಟಿ

ಕಷ್ಟ ತನುವಿನಲಿ ಹುಟ್ಟಿ ತೊಳಲುವಂಥಎಷ್ಟೆಂದು ತಾಳುವೆನೊ ಶ್ರೀರಂಗ ಅಷ್ಟರೊಳೆಂದೆನ್ನ ಅವಗುಣವೆಣಿಸದೆ ಕಷ್ಟ ಪಡಿಸುವುದೇನು ಶ್ರೀರಂಗ ನರಜನ್ಮವನು ಎತ್ತಿ ನರಕದೊಳಗೆ ಸುತ್ತಿಗುರಿ ಗೊತ್ತು ಕಾಣೆನಯ್ಯ ಶ್ರೀರಂಗಪರಮಪಾತಕನಾಗಿ ಹರಿ ನಿಮ್ಮ ಸ್ಮರಣೆಯನುಮರೆದು ಪಾಮರನಾದೆ ಶ್ರೀರಂಗ||1|| ಅತಿವೇಧೆಯಲಿ ಸತಿಸುತರೆಂಬ ಮಂದ ದು-ರ್ಮತಿಗೆ ಮರುಳಾದೆನೊ ಶ್ರೀರಂಗಅತುಳ ಪ್ರಪಂಚಕ್ಕೆ ಹಿತನಾಗಿ ದುಷ್ಟ ಸಂ-ಗತಿಯ ನಾನರಿದಿದ್ದೆನೊ ಶ್ರೀರಂಗ ||2|| ಮಿತಿಮೀರಿ ಮನ ಹರಿ ಪದವ ನೆನೆಯದೆ ಪರಸತಿಯರಿಗಳುಪಿದೆನೊ ಶ್ರೀರಂಗಕೃತಬುದ್ಧಿಯೊಳು ಉನ್ನತನಾಗಿ ತಾನೆರೆದುಸ್ತುತಿ ಮಾಡಿಕೊಂಡಿದ್ದೆನೈ ಶ್ರೀರಂಗ ||3|| ಆಶಾಪಾಶಗಳೆಂಬ ದೇಹಕ್ಕೆ ಸಿಲ್ಕಿ ಸ-ದ್ವಾಸನೆಯನು ಬಿಟ್ಟೆನು ಶ್ರೀರಂಗಮೋಸದಿಂದಾತ್ಮಘಾತುಕನಾಗಿ ಅಪರಾಧವೇಸೊಂದು ಮಾಡಿದೆನಯ್ಯ ಶ್ರೀರಂಗ

ಕಷ್ಟ ತನುವಿನಲಿ ಹುಟ್ಟಿ Read More »

ಕಲಿಯುಗದ ಮಹಿಮೆಯನು ಕಂಡಷ್ಟು ಪೇಳುವೆನು 

ಕಲಿಯುಗದ ಮಹಿಮೆಯನು ಕಂಡಷ್ಟು ಪೇಳುವೆನು ಜಲಜನಾಭನ ಕೃಪೆಯ ಪಡೆದವರು ಕೇಳಿ ಸತ್ಯಧರ್ಮಗಳೆಲ್ಲ ಎತ್ತ ಪೋದವೊ ಕಾಣೆಉತ್ತಮರ ಜೀವನಕೆ ದಾರಿಯಿಲ್ಲನಿತ್ಯದಲಿ ಕಳವು ವ್ಯಭಿಚಾರವುಳ್ಳವರೆಲ್ಲಅರ್ಥ ಸಂಪನ್ನರಾಗನುಭವಿಸುತಿಹರು||1|| ಅತ್ತೆಯೇ ಸೊಸೆಯಾಗಿ ಸೊಸೆಯು ಅತ್ತೆಯು ಆಗಿಪುತ್ರ ಪಿತನಾಗಿ ಪಿತ ಪುತ್ರನಾಗಿಮತ್ತೆ ಗಂಡನಿಗೆ ಹೆಂಡತಿಯೆ ಗಂಡಳು ಆಗಿವರ್ತಿಸುವರಯ್ಯ ತಮಗೆದುರಿಲ್ಲವೆಂದು ||2|| ವಾವೆವರಸೆಯು ತಪ್ಪಿ ವೈರಿ ವರ್ಗವು ಹೆಚ್ಚಿದೇವ ಬ್ರಾಹ್ಮಣ ಗುರು ಹಿರಿಯರನು ಜರಿದುಕೇವಲಾಧಮರೆಲ್ಲ ಸಿರಿ ಮದದಿ ಸೊಕ್ಕಿದರುಕಾವರಾರೈ ಸಾಧು ಸಜ್ಜನರನೀಗ||3|| ವೇದ ವಿಪ್ರರು ತಮ್ಮ ವೃತ್ತಿ ಸ್ವಾಸ್ಥ್ಯವ ಕಳೆದುಆಧಾರವಿಲ್ಲದೆ ತಿರಿದು ತಿಂಬುವರುಕಾದುವ ಶೂರರಿಗೆ ಕಾಸು ಕೊಡುವವರಿಲ್ಲಮೇದಿನಿಗೆ ಬೀಳ್ವ ಮಳೆ ಖಂಡಮಂಡಲವು

ಕಲಿಯುಗದ ಮಹಿಮೆಯನು ಕಂಡಷ್ಟು ಪೇಳುವೆನು  Read More »

ಕಲಿ ಹೆಚ್ಚಿ ಬಂದಿತಲ್ಲ, ರಂಗಯ್ಯ

ಕಲಿ ಹೆಚ್ಚಿ ಬಂದಿತಲ್ಲ, ರಂಗಯ್ಯ ಕಾಯೆನ್ನ ಸಿರಿಯ ನಲ್ಲ ಬಲು ಘೋರ ಪಾತಕದಿ ಇಳೆಯು ತಲ್ಲಣಗೊಂಡುಕಳವಳಿಸುತಿದೆ ಕಾಲ ವಿಪರೀತದಿ ಅತ್ತೆಯ ಸೊಸೆ ಬಯ್ವಳು – ಪುತ್ರರು ತಮ್ಮಹೆತ್ತ ತಾಯಿಯ ಬಿಡುವರುಉತ್ತಮ ಗರತಿಗೆ ಅಪವಾದ – ಅವಿವೇಕಿಗಳುಎತ್ತ ನೋಡಲು ಹೆಚ್ಚಿ ಹೆದರಿಸಿತುನ್ಮತ್ತತನದಲಿ ಮನೆಯ ರಚಿಸುವರುಭಕ್ತಿಯೆಂಬುದ ಬಯಸದಿರುವರುಕತ್ತಲಾಯಿತು ಕಲಿಯ ಮಹಿಮೆ ||1|| ನಿತ್ಯ ನೇಮವು ನಿಂತಿತು – ಹೋಯಿತಲ್ಪಜಾತಿಗೈಶ್ವರ್ಯ ಭೋಗಭಾಗ್ಯಧಾತರಾದವರಿಗೆ ಧಾರಣೆ ಪಾರಣೆಜಾತಿನೀತಿಗಳೆಲ್ಲ ಒಂದಾಗಿಪಾತಕದಿ ಮನವೆರಗಿ ಮೋಹಿಸುತಮಾತಾಪಿತೃ ಗುರು ದೈವ ದ್ರೋಹದಿಭೂತಳವು ನಡ ನಡುಗುತಿಹುದು ||2|| ಬಿನ್ನಣ ಮಾತುಗಳು ಮತ್ತೆ ಮತ್ತೆಘನ್ನ ಮತ್ಸರ

ಕಲಿ ಹೆಚ್ಚಿ ಬಂದಿತಲ್ಲ, ರಂಗಯ್ಯ Read More »

ಕನಕದಾಸನ ಮೇಲೆ ದಯ ಮಾಡಲು ವ್ಯಾಸ

ಕನಕದಾಸನ ಮೇಲೆ ದಯ ಮಾಡಲು ವ್ಯಾಸಮುನಿ ಮಠಿಕರೆಲ್ಲರು ದೂರುತಿಹರೊ ತೀರ್ಥವನು ಕೊಡುವಾಗ ಕನಕನ್ನ ಕರೆಯೆನಲುದೂರ್ತರಾಗಿದ್ದ ವಿದ್ವಾಂಸರೆಲ್ಲಸಾರ್ಥಕವಾಯ್ತು ಇವರ ಸನ್ಯಾಸಿತನವೆಲ್ಲಪೂತ್ರ್ಯಾಗಲೆಂದು ಯತಿ ನಗುತಲಿಹನು 1 ಮರುದಿನ ಅವರವರ ಪರೀಕ್ಷಿಸಬೇಕೆಂದುಕರೆದು ಸನ್ಯಾಸಿಗಳ ಕನಕಸಹಿತತ್ವರಿತದಲಿ ಕರದಲ್ಲಿ ಕದಳಿ ಫಲವನೆ ಕೊಟ್ಟುಯಾರಿರದ ಸ್ಥಳದಲ್ಲಿ ಮೆದ್ದು ಬನ್ನಿರಿ ಎನಲು2 ಊರ ಹೊರಗೆ ಹೋಗಿ ಬ್ಯಾರೆ ಬ್ಯಾರೆ ಕುಳಿತುತ್ವರಿತದಿಂ ಮೆದ್ದು ವಿದ್ವಾಂಸರೆಲ್ಲತೋರಲಿಲ್ಲವು ಎನಗೆ ಏಕಾಂತ ಸ್ಥಳವೆನುತಸಾರಿ ಕದಳಿ ಫಲವ ತಂದು ಮುಂದಿಟ್ಟ 3 ಡಿಂಬದೊಳು ಶಬ್ದ ವಾಗಾದಿ ಶ್ರೋತೃಗಳಲ್ಲಿಇಂಬಾಗಿ ತತ್ತ್ವೇಶರೆಲ್ಲ ತುಂಬಿಹರುತಿಂಬುವುದು ಹ್ಯಾಂಗೆನುತ ವ್ಯಾಸರಾಯರ ಕೇಳೆಕಂಬದಂತಾದರವರೆಲ್ಲ ಕುಳಿತವರು 4 ಮಾಣಿಕವು ಕೋಡಗನ

ಕನಕದಾಸನ ಮೇಲೆ ದಯ ಮಾಡಲು ವ್ಯಾಸ Read More »

ಕದರ ಮಂಡಲಗಿಯ ಕರುಣಿ ಹನುಮರಾಯ

ಕದರ ಮಂಡಲಗಿಯ ಕರುಣಿ ಹನುಮರಾಯ |ಸದುಗುಣವಂತನೆ ಹಣುವಂತನೆ ಅಂಜನೆಯ ವರಸೂನು ಆಶ್ರಿತ ಕಾಮಧೇನುಮಂಜುಳ ಗಾನ ಗೀತ ಪರಮ ವಿಖ್ಯಾತ ಸಂಜೀವನವ ತಂದ ವ್ಯೋಮ ಮಾರ್ಗದಿ ಬಂದಅಂಜದ ಗುಣವಂತನೆ ಹಣುವಂತನೆ1 ಶಶಿಧರಾನ್ವಯ ದೂತ ಸೌಮಿತ್ರಿಯ ವರೂಥ ಅಸಮಾಸ್ತ್ರಧೃತವೇದ ಅಮಿತ ಪ್ರಖ್ಯಾತ ಆ ಸುಗ್ರೀವ ಜಾಮಾತ ಮುಖ್ಯ ಪ್ರಾಣನಾಥ ವಿಶಾಲ ಗುಣವಂತನೆ ಹಣುವಂತನೆ 2 ಕ್ಷೋಣಿಯೊಳು ಕನಕದಾಸನ ನೆರಳು ಅನಕ ಏನು ಬಲಿಸಿದೆಯೊ ಔಷಧಿಯ ಕುಣುಕ ನೀನಿದ್ದರೆ ಕನಕ ಪ್ರಾಣ ತೆರಳುವ ತನಕ ಶ್ರೀನಿಧೇ ಆದಿಕೇಶವ ಎನ್ನ ಜನಕ3

ಕದರ ಮಂಡಲಗಿಯ ಕರುಣಿ ಹನುಮರಾಯ Read More »

ಕಣಿಯ ಹೇಳಲು ಬಂದೆ ನಾರಾಯಣನಲ್ಲದೆ

ಕಣಿಯ ಹೇಳಲು ಬಂದೆ ನಾರಾಯಣನಲ್ಲದೆ ಇಲ್ಲವೆಂದು – ಮಿಕ್ಕಬಣಗು ದೈವದ ಗೊಡವೆ ಬೇಡ ನರಕ ತಪ್ಪದು ಎಕ್ಕನಾತಿಯರು ಕಾಟಿ ಜಕ್ಕಿ ಜಲಕನ್ಯೆಯರುಸೊಕ್ಕಿನಿಂದ ಸೊಂಟಮುರುಕ ಬೈರೇ ದೇವರುಮಿಕ್ಕ ಮಾರಿ ಮಸಣಿ ಚೌಡಿ ಮೈಲಾರಿ ಮೊದಲಾದಠಕ್ಕು ದೈವದ ಗೊಡವೆ ಬೇಡ ನರಕ ತಪ್ಪದು ||1|| ಸುತ್ತಣವರ ಮಾತ ಕೇಳಿ ಗುತ್ತಿಯ ಎಲ್ಲಮ್ಮಗೊಲಿದುಬತ್ತಲೆಯೆ ದೇವರೆದುರು ಬರುವುದು ನೋಡಿರೊಮತ್ತೆ ಬೇವಿನುಡುಗೆಯ ಅರ್ತಿಯಿಂದುಟುಗೊಂಡುಮುಕ್ತಿ ಕಾಂಬೆವೆಂಬ ಮೌಢ್ಯ ಬೇಡಿರಯ್ಯ ||2|| ತೂಳದವರ ಮಾತ ಕೇಳಿ ಖೂಳರೆಲ್ಲ ಕೂಡಿಕೊಂಡುಹಾಳು ಮಾಡಿ ಕೈಯಲಿದ್ದ ಹೊನ್ನು ಹಣಗಳಬಾಳುತಿಪ್ಪ ಕೋಣ ಕುರಿಯ

ಕಣಿಯ ಹೇಳಲು ಬಂದೆ ನಾರಾಯಣನಲ್ಲದೆ Read More »

ಕಡೆ ಹಾಯಿಸೊ ಕಮಲ ಲೋಚನನೆ

ಕಡೆ ಹಾಯಿಸೊ ಕಮಲ ಲೋಚನನೆ ಎನ್ನತಡಿಯ ಸೇರಿಸೊ ತರಣಿಶತಕೋಟಿ ತೇಜ ಕಾಕು ಇಂದ್ರಿಯಗಳೆಂಬ ಕಟುಕರಿಗೆ ನಾ ಸಿಲುಕಿಮೇಕೆಯಂದದಿ ಬಾಯಿ ಬಿಡುತಿಪ್ಪೆನುಸಾಕಾರ ರೂಪ ಸರ್ವೋತ್ತಮನೆ ನೀ ಕರುಣಾಕರನೆಂಬ ಪೆಂಪುಂಟಾದಡೀಗೆನ್ನ|| 1|| ಕೊಮಲೆವ ದುಷ್ಕøತವೆಂಬ ಗಜಕೆ ಕೇಸರಿ ಎಂಬಛಲ ಬಿರುದು ತಾಳ್ದ ದೇವರ ದೇವ ನೀನೆನ್ನ ||2|| ಹಾದಿಗಾಣದೆ ತೊಲಗಿ ಪೋಪೆನೆಂದರೆ ಭಾವಬೂದಿಯೊಳಗಾಡಿ ಮುಳುಗಾಡುತಿಹೆನೊಭೂಧರನ ತಾಳ್ದ ಕೂರ್ಮಾವತಾರನೆ ಬಾಡದಾದಿಕೇಶವರಾಯ ಬೆನ್ನಲೆತ್ತಿಕೊಂಡು||3||

ಕಡೆ ಹಾಯಿಸೊ ಕಮಲ ಲೋಚನನೆ Read More »

ಕಂಡೆ ಶ್ರೀಹರಿ ದಿವ್ಯಪಾದ

ಕಂಡೆ ಶ್ರೀಹರಿ ದಿವ್ಯಪಾದ – ಬ್ರ-ಹ್ಮಾಂಡ ವ್ಯಾಪಕವಾಗಿ ಬೆಳಗುವ ಪಾದ ಸಿರಿಯು ಸೇವಿಪ ವರ ಪಾದ – ನಮ್ಮಗರುಡನಿಂದ ಹೊತ್ತು ತಿರುಗುವ ಪಾದತರಳ ಧ್ರುವನ ಕಾಯ್ದ ಪಾದ – ಮುನಿಸುರರು ನಮಿಸುವ ಲಲಿತ ಪಾದ 1 ಸರಸಿಜೋದ್ಭವ ವಂದ್ಯ ಪಾದಪುರಹರ ನಮಿತ ಪರಿಪೂರ್ಣ ಪಾದನರಗೆ ಸಾರಥಿಯಾದ ಪಾದಕೌರವ ಮೂಲ ಮುರಿದಿಟ್ಟ ಪಾದ2 ದಿವಿಜರಾಜನಿಗೊಲಿದ ಪಾದಅವಿವೇಕಿ ದಾನವರ ಕೊಂದ ಪಾದಬುವಿ ಗಯಾಪುರ ಶ್ರೇಷ್ಠ ಪಾದಭವ ಹಿಂಗಿಪಾದಿಕೇಶವ ಪಾದ3

ಕಂಡೆ ಶ್ರೀಹರಿ ದಿವ್ಯಪಾದ Read More »

ಕಂಡೆ ನಾ ತಂಡ ತಂಡದ ಹಿಂಡು

ಕಂಡೆ ನಾ ತಂಡ ತಂಡದ ಹಿಂಡು ಹಿಂಡು ದೈವ ಪ್ರಚಂಡ – ರಿಪುಗಂಡ ಉದ್ದಂಡ ನರಸಿಂಹನ ಕಂಡೆನಯ್ಯ ಘುಡುಘುಡಿಸಿ ಕಂಬದಲಿ ಧಡಧಡ ಸಿಡಿಲು ಸಿಡಿಯೆಕಿಡಿಕಿಡಿಸೆ ನುಡಿಯಡಗಲೊಡನೆ ಮುಡಿವಿಡಿದುಘಡಘಡನೆ ನಡುನಡುಗೆ ಘುಡುಘುಡಿಸಿ ಸಭೆ ಬೆದರೆಹಿಡಿ ಹಿಡಿದು ಹಿರಣ್ಯಕನ ತೊಡೆ ಮೇಲೆ ಕೆಡಹಿದನ||1|| ಉರದೊಳಪ್ಪಳಿಸಿ ಅರಿ ಬಸಿರ ಸರಸರನೆ ಸೀಳಿಪರಿಪರಿಯಲಿ ಚರ್ಮ ಎಳೆದೆಳೆದು ಎಲುಬು ನರನರವನು ತೆಗೆದು ನಿರ್ಗಳಿತ ಶೋಣಿತ ಸುರಿಯೆಹರಿಹರಿದು ಕರುಳ ಕೊರಳೊಳಿಟ್ಟವನ||2|| ಪುರಜನರು ಹಾಯೆನಲು ಸುರರು ಹೂಮಳೆಗರೆಯೆತರತರದ ವಾದ್ಯ ಸಂಭ್ರಮಗಳಿಂದಹರಿಹರಿ ಶರಣೆಂದು ಸ್ತುತಿಸಿ ಶಿಶು ಮೊರೆಯಿಡುವಕರುಣಾಳು ಕಾಗಿನೆಲೆಯಾದಿಕೇಶವನ||3||

ಕಂಡೆ ನಾ ತಂಡ ತಂಡದ ಹಿಂಡು Read More »

ಓಹೊ ಎನ ಜೀವ ಮೈಯೆಲ್ಲ ನವಗಾಯ 

ಓಹೊ ಎನ ಜೀವ ಮೈಯೆಲ್ಲ ನವಗಾಯ ಗಾಯ ಕಟ್ಟುವರಿಲ್ಲ ಗಾಳಿ ಹಾಕುವರಿಲ್ಲ ಮಾಡಿಲ್ಲ ಮಳೆಯಿಲ್ಲ ಮರದ ಮ್ಯಾಲೆ ನೀರ ಕಂಡೆಕಾಡು ಸುಡುವುದ ಕಂಡೆ ಬೂದಿಯ ಕಾಣಲಿಲ್ಲ ||1|| ಬಿತ್ತಲಿಲ್ಲ ಬೆಳೆಯಲಿಲ್ಲ ನೆಟ್ಟು ನೀರ ತೋರಲಿಲ್ಲಹೊತ್ತುಕೊಂಡು ತಿರುಗಿದೆ ರೊಕ್ಕದಾ ಪ್ರಾಣಿಯನ್ನು ||2|| ಅಡಿಕೆಯಷ್ಟು ಆಕಳಣ್ಣ ಹಿಡಿಕೆಯಷ್ಟು ಕೆಚ್ಚಲಣ್ಣಒಡನೆ ಕರೆದಾರ ಕರಿತೈತಿ ರಂಜಣಿಗಿ ಹಾಲಣ್ಣ ||3|| ಮೂರು ಮೊಳದಾ ಬಳ್ಳಿಗೆ ಆರು ಮೊಳದ ಕಾಯಣ್ಣಆರು ಹತ್ತರ ಮೊಳದ, ಕಾಯಿ ಕೊಯ್ಯುವ ಕುಡುಗೋಲಣ್ಣ||4|| ಊರ ಮುಂದೆ ಹಿರಣ್ಯಕನ ಕೊರಳ ಕೊಯ್ವುದ ಕಂಡೆಕೊರಳ

ಓಹೊ ಎನ ಜೀವ ಮೈಯೆಲ್ಲ ನವಗಾಯ  Read More »

ಒಡವೆ ಹೋಯಿತು ಮನ ದೃಢವಾಯಿತು

ಒಡವೆ ಹೋಯಿತು ಮನ ದೃಢವಾಯಿತು ಹಿಡಿದರೋಡುವ ಕಳ್ಳ ಬಿಡದೆ ಕದ್ದುಕೊಂಡು ಹೋದ ಆರು ಜೋಡಿನ ಓಲೆಯಿತ್ತು ಮೂರು ಮುತ್ತಿನ ಮೂಗುತಿಯಿತ್ತುಚಾರುತರದ ಇಪ್ಪತ್ನಾಲ್ಕೆಳೆಯ ಸರವು ಒಂದಿತ್ತುಈರೈದು ತಾಳಿಗಳಿತ್ತು ಬಿರುದಿನ ಕಪ್ಪೆಂಟಿತ್ತುದಾರಿ ನೋಡಿಕೊಂಡು ಇದ್ದ ಛಾಯನೆಂಬ ಕಳ್ಳ ಕದ್ದ ||1|| ಎಪ್ಪತ್ತೆರಡು ಸಾವಿರ ಸೂತ್ರದ ಹಸ್ತಕಟ್ಟು ಎರಡಿತ್ತುಕಪ್ಪು ಬಿಳುಪು ಕೆಂಪು ವರ್ಣದ ಪದಕ ಒಂದಿತ್ತುಒಪ್ಪವಿತ್ತ ಹಸ್ತಕಡಗ ಆಶಾಪಾಶವೆರಡಿತ್ತುಒಪ್ಪವನ್ನು ಸಾಧಿಸಿ ನೇತ್ರನೆಂಬ ಕಳ್ಳ ಕದ್ದ ||2|| ಹುಟ್ಟು ಸಾವು ಎರಡು ಎಂಬ ಘಟ್ಟಿ ತೂಕದ ನಗವಿತ್ತುಕಷ್ಟ ಸುಖ ಕರ್ಮಗಳೆಂಬ ಸಂಚಿಗಳಿತ್ತುಅಷ್ಟು ಇಷ್ಟು

ಒಡವೆ ಹೋಯಿತು ಮನ ದೃಢವಾಯಿತು Read More »

ಒಂಬತ್ತು ಹೂವಿಗೆ ಒಂದೇ ನಾಳವು ಚಂದಮಾಮ 

ಒಂಬತ್ತು ಹೂವಿಗೆ ಒಂದೇ ನಾಳವು ಚಂದಮಾಮ ತುಂಬಿ ನಾಳತುದಿ ತುಂಬಿ ಭಾನು ಪ್ರಭೆ ಚಂದಮಾಮ ಕದರು ಗಾತ್ರ ಕಂಬ ತೆಕ್ಕೆಗಾತರ ಹೂವು ಚಂದಮಾಮಆನೆಗಾತರ ಕಾಯಿ ಒಂಟೆಗಾತರ ಹಣ್ಣು ಚಂದಮಾಮ ||1|| ಕಾಲಿಲ್ಲದಾತನು ಹತ್ತಿದನು ಮರವನು ಚಂದಮಾಮಕೈಯಿಲ್ಲದಾತನು ಕೊಯ್ದನಾ ಹಣ್ಣನು ಚಂದಮಾಮ ||2|| ನೆತ್ತಿಲ್ಲದಾತನು ಹೊತ್ತನು ಹಣ್ಣ ಚಂದಮಾಮತಳವಿಲ್ಲದಾ ಗೂಡೆಯಲಿಳಿಸಿದನಾ ಹಣ್ಣ ಚಂದಮಾಮ ||3|| ಮಾರ್ಗ ತಪ್ಪಿ ಮಾರ್ಗ ಹಿಡಿದು ನಡೆದರು ಚಂದಮಾಮಸದ್ದಿಲ್ಲದಾ ಸಂತೇಲಿಳಿಸಿದರಾ ಹಣ್ಣ ಚಂದಮಾಮ ||4|| ರೊಕ್ಕವಿಲ್ಲದಾತ ಕೊಂಡನಾ ಹಣ್ಣ ಚಂದಮಾಮಮೂಗಿಲ್ಲದಾತ ಮೂಸಿದನಾ ಹಣ್ಣ ಚಂದಮಾಮ ||5|| ಕಣ್ಣಿಲ್ಲದಾತನು ಕೆಂಪಾನೆ ಹಣ್ಣೆಂದ

ಒಂಬತ್ತು ಹೂವಿಗೆ ಒಂದೇ ನಾಳವು ಚಂದಮಾಮ  Read More »

ಏನೆಂದು ನುಡಿವೆ ನಿನ್ನವರಂತೆ

ಏನೆಂದು ನುಡಿವೆ ನಿನ್ನವರಂತೆ ಕೇಡು ಬುದ್ಧಿ ಎನ್ನೊಳಗಿಲ್ಲ – ಗುಣಹೀನರಲ್ಲದ ಈ ನರರ ಪಾಲಿಪ ಬುದ್ಧಿ ನಿನ್ನೊಳಗಿಲ್ಲ ತರಳ ಪ್ರಹ್ಲಾದನಂದದಿ ನಿನ್ನ ರೂಪನು ಕೆಡಿಸಲಿಲ್ಲನರನಂತೆ ಬಂಡಿಬೋವನ ಮಾಡಿ ನಿನ್ನ ದುಡಿಸಲಿಲ್ಲಪರಾಶರನಂತೆ ನದಿಯೊಳಿದ್ದ ಹೆಣ್ಣ ಕೂಡಲಿಲ್ಲಗರುಡನಂದದಿ ನಿನ್ನ ಪೊತ್ತು ತಿರುಗಲಿಲ್ಲ ||1|| ಸನಕಾದಿ ಮುನಿಯಂತೆ ವನದೊಳು ಅನುದಿನ ಚರಿಸಲಿಲ್ಲಬಿನಗು ಬೇಡತಿಯಂತೆ ಸವಿದುಂಡ ಹಣ್ಣ ತಿನಿಸಲಿಲ್ಲಇನಕುಲ ಕಪಿಯಂತೆ ವಂಚಿಸಿ ವಾಲಿಯ ಕೊಲಿಸಲಿಲ್ಲಘನ ಪಾತಕದಜಮಿಳನಂತೆ ನಾರಗ ಎನ್ನಲಿಲ್ಲ||2|| ಕದನದೊಳು ವಿಭೀಷಣನಂತೆ ಅಣ್ಣನ ಕೊಲಿಸಲಿಲ್ಲವಿದುರನ ತೆರನಂತೆ ಸದನವ ಮುರಿದು ನಿನ್ನ ಬೆರೆಯಲಿಲ್ಲಮದಗಜದಂತೆ ಮಕರಿಗೆ ಸಿಲ್ಕಿ ಒರಲಲಿಲ್ಲಗದರಿ

ಏನೆಂದು ನುಡಿವೆ ನಿನ್ನವರಂತೆ Read More »