ಬೆಳಗಿನ ಝಾವದಿ ಬಾರೊ ಹರಿಯೆ
ಬೆಳಗಿನ ಝಾವದಿ ಬಾರೊ ಹರಿಯೆ, ನಿನ್ನ ಚರಣ ತೊಳೆದು ಜಲಪಾನ ಮಾಡುವೆನೊ ನೀರೊಳು ನಿನ್ನನು ಕಾಂಬೆ ಗಿರಿ ಭಾರಪೊತ್ತರೆ ನಗುವಳೊ ನಿನ್ನ ರಂಭೆ ಮೋರೆ ತಗ್ಗಿಸಿದರೇನೆಂಬೆ ಅಲ್ಲಿ ನಾರಸಿಂಹನಾಗಿ ಪೂಜೆಯ ಗೊಂಬೆ ||1|| ಬಲಿಯದಾನವ ಬೇಡಿದ್ದೆಲ್ಲ ನೀ ಛಲದಿ ಕ್ಷತ್ರಿಯರ ಸಂಹಾರ ಮಾಡೆದ್ಯಲ್ಲ ಛಲವಂತ ನಿನಗೆದುರಿಲ್ಲ ನೀ ನೊಲಿದ್ಹನುಮನಿಗೆ ಅಜಪದವನಿತ್ಯೆಲ್ಲ ||2|| ರುಕ್ಮಿಣೀಶಗೆ ಸಮರಿಲ್ಲ ಕೃಷ್ಣ ಬಿಮ್ಮನೆ ತ್ರಿಪುರ ಸತಿಯರಪ್ಪಿದ್ಯೆಲ್ಲ ಬ್ರಹ್ಮಾದಿಗಳು ಸಮರಲ್ಲ ಬಲು ಹಮ್ಮಿಲಿ ಹಯವೇರಿ ವಿಜಯವಿಠ್ಠಲ|| 3||
ಬೆಳಗಿನ ಝಾವದಿ ಬಾರೊ ಹರಿಯೆ Read More »