ಹಗಲಿನ ಕೂಟಕ್ಕೆ ಹೋರಿ ಬೆಂಡಾದೆ ;
ಹಗಲಿನ ಕೂಟಕ್ಕೆ ಹೋರಿ ಬೆಂಡಾದೆ ; ಇರುಳಿನ ಕೂಟದಲ್ಲಿ ಇಂಬರಿದು ಹತ್ತಿದೆ. ಕನಸಿನಲ್ಲಿ ಮನಸಂಗವಾಗಿ ಮೈಮರೆದಿರ್ದೆ ; ಮನಸ್ಸಿನಲ್ಲಿ ಮೈಮರೆದು ಒರಗಿದೆ. ಚೆನ್ನಮಲ್ಲಿಕಾರ್ಜುನನ ಕಂಡು ಕಣ್ದೆರೆದೆ.
ಹಗಲಿನ ಕೂಟಕ್ಕೆ ಹೋರಿ ಬೆಂಡಾದೆ ; Read More »
ಹಗಲಿನ ಕೂಟಕ್ಕೆ ಹೋರಿ ಬೆಂಡಾದೆ ; ಇರುಳಿನ ಕೂಟದಲ್ಲಿ ಇಂಬರಿದು ಹತ್ತಿದೆ. ಕನಸಿನಲ್ಲಿ ಮನಸಂಗವಾಗಿ ಮೈಮರೆದಿರ್ದೆ ; ಮನಸ್ಸಿನಲ್ಲಿ ಮೈಮರೆದು ಒರಗಿದೆ. ಚೆನ್ನಮಲ್ಲಿಕಾರ್ಜುನನ ಕಂಡು ಕಣ್ದೆರೆದೆ.
ಹಗಲಿನ ಕೂಟಕ್ಕೆ ಹೋರಿ ಬೆಂಡಾದೆ ; Read More »
ಹಗಲೆನ್ನೆ ಇರುಳೆನ್ನೆ ಉದಯವೆನ್ನೆ ಅಸ್ತಮಾನವೆನ್ನೆ ; ಹಿಂದೆನ್ನ ಮುಂದೆನ್ನ, ನೀನಲ್ಲದೆ ಪೆರತೊಂದಹುದೆನ್ನೆ. ಮನ ಘನವಾದುದಿಲ್ಲವಯ್ಯಾ. ಕತ್ತಲೆಯಲ್ಲಿ ಕನ್ನಡಿಯ ನೋಡಿ ಕಳವಳಗೊಂಡೆನಯ್ಯಾ. ನಿಮ್ಮ ಶರಣ ಬಸವಣ್ಣನ ತೇಜದೊಳಗಲ್ಲದೆ ಆನಿನ್ನೆಂದು ಕಾಂಬೆನು ಹೇಳಾ, ಚೆನ್ನಮಲ್ಲಿಕಾರ್ಜುನಾ.
ಹಗಲೆನ್ನೆ ಇರುಳೆನ್ನೆ ಉದಯವೆನ್ನೆ ಅಸ್ತಮಾನವೆನ್ನೆ ; Read More »
ಹಗಲು ನಾಲ್ಕುಜಾವ ನಿಮ್ಮ ಕಳವಳದಲ್ಲಿಪ್ಪೆನು. ಇರುಳು ನಾಲ್ಕುಜಾವ ಲಿಂಗದ ವಿಕಳಾವಸ್ಥೆಯಲ್ಲಿಪ್ಪೆನು. ಹಗಲಿರುಳು ನಿಮ್ಮ ಹಂಬಲದಲ್ಲಿ ಮೈಮರೆದೊರಗಿಪ್ಪೆನು. ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ಒಲುಮೆ ನಟ್ಟು ಹಸಿವು ತೃಷೆ ನಿದ್ರೆಯ ತೊರೆದೆನಯ್ಯಾ
ಹಗಲು ನಾಲ್ಕುಜಾವ ನಿಮ್ಮ ಕಳವಳದಲ್ಲಿಪ್ಪೆನು. Read More »
ಹಗಲು ನಾಲ್ಕುಜಾವ ಅಶನಕ್ಕೆ ಕುದಿವರು. ಇರುಳು ನಾಲ್ಕುಜಾವ ವ್ಯಸನಕ್ಕೆ ಕುದಿವರು. ಅಗಸ ನೀರೊಳಗಿರ್ದು ಬಾಯಾರಿ ಸತ್ತಂತೆ, ತಮ್ಮೊಳಗಿರ್ದ ಮಹಾಘನವನರಿಯರು ಚೆನ್ನಮಲ್ಲಿಕಾರ್ಜುನಾ
ಹಗಲು ನಾಲ್ಕುಜಾವ ಅಶನಕ್ಕೆ ಕುದಿವರು. Read More »
ಸೆಜ್ಜೆಯನುಪ್ಪರಿಸಿ ಶಿವಲಿಂಗ ಕರಸ್ಥಲಕ್ಕೆ ಬರಲು, ಪ್ರಜ್ವಲಿಸಿ ತೊಳತೊಳಗಿ ಬೆಳಗುತ್ತಿಹ ಕಾಂತಿಯೊಳು ಪ್ರಜ್ವಲಿಸಿ, ದೃಷ್ಟಿನಟ್ಟು ಒಜ್ಜರಿಸಿ ಸುರಿವ ಅಶ್ರುಜಲ ಶಿವಸುಖ ಸಾರಾಯನಲ್ಲಿ ಸಜ್ಜನಸತಿಯ ರತಿಯೊಡಗೂಡಿ ಲಜ್ಜೆಗೆಟ್ಟು ನಿಮ್ಮ ನೆರೆದೆನು ಚೆನ್ನಮಲ್ಲಿಕಾರ್ಜುನಾ.
ಸೆಜ್ಜೆಯನುಪ್ಪರಿಸಿ ಶಿವಲಿಂಗ ಕರಸ್ಥಲಕ್ಕೆ ಬರಲು, Read More »
ಸ್ಥಾನಭೇದ ಸಂಶಯ ಆಧಾರ ಸ್ವಾದಿಷ್ಟ ಮಣಿಪೂರಕ ಅನಾಹತ ವಿಶುದ್ಧಿ ಎಂಬ ಷಟ್‍ಚಕ್ರಂಗಳ ವರ್ತನೆಯ ನುಡಿದಡೇನು ? ಆದಿ ಅನಾದಿಯ ಕೇಳಿದಡೇನು ? ತನ್ನಲ್ಲಿದ್ದುದ ತಾನರಿಯದನ್ನಕ್ಕ ಉನ್ಮನಿಯ ರಭಸದ ಸಿಂಹಾಸನದ ಮೇಲೆ ಚೆನ್ನಮಲ್ಲಿಕಾರ್ಜುನನ ಭೇದಿಸಲರಿಯರು.
ಸಾವಿಲ್ಲದ ಕೇಡಿಲ್ಲದ ರೂಹಿಲ್ಲದ ಚೆಲುವಂಗೆ ನಾನೊಲಿದೆ. ಎಡೆಯಿಲ್ಲದ ಕಡೆಯಿಲ್ಲದ ತೆರಹಿಲ್ಲದ ಕುರುಹಿಲ್ಲದ ಚೆಲುವಂಗೆ ನಾನೊಲಿದೆ ಎಲೆ ಅವ್ವಗಳಿರಾ ? ಭವವಿಲ್ಲದ ಭಯವಿಲ್ಲದ ನಿರ್ಭಯ ಚೆಲುವಂಗೊಲಿದೆ ನಾನು. ಸೀಮೆಯಿಲ್ಲದ ನಿಸ್ಸೀಮಂಗೊಲಿದೆ ನಾನು. ಚೆನ್ನಮಲ್ಲಿಕಾರ್ಜುನನೆಂಬ ಗಂಡಂಗೆ ಮಿಗೆ ಮಿಗೆ ಒಲಿದೆ ಎಲೆ ಅವ್ವಗಳಿರಾ.
ಸಾವಿಲ್ಲದ ಕೇಡಿಲ್ಲದ ರೂಹಿಲ್ಲದ ಚೆಲುವಂಗೆ ನಾನೊಲಿದೆ. Read More »
ಸಾವಿರ ಹೊನ್ನಿಂಗೆ ಸಾದಕೊಂಡು ಸುಣ್ಣವ ಬೆರಸಿದಂತೆ ಮಾಡಿದೆಯಯ್ಯಾ. ಮೂರು ಲಕ್ಷದ ಬೆಲೆಗೆ ರತ್ನವ ಕೊಂಡು ಮಡುವಿನಲ್ಲಿ ಇಟ್ಟಂತೆ ಮಾಡಿದೆಯಯ್ಯಾ. ಚೆನ್ನಮಲ್ಲಿಕಾರ್ಜುನಯ್ಯಾ, ಎನ್ನ ಮುಟ್ಟಿ ಪಾವನವ ಮಾಡಿ ಕಷ್ಟಸಂಸಾರಿಗೊಪ್ಪಿಸುವಂತೆ ಮಾಡಿದೆಯಯ್ಯಾ.
ಸಾವಿರ ಹೊನ್ನಿಂಗೆ ಸಾದಕೊಂಡು Read More »
ಸೂರ್ಯಪ್ರಕಾಶ ಆಕಾಶದ ವಿಸ್ತೀರ್ಣ, ವಾಯುವಿನ ಚಲನೆಯೆಲ್ಲಾ ಹಗಲಿನ ಪೂಜೆ. ಚಂದ್ರಪ್ರಕಾಶ ನಕ್ಷತ್ರ ಅಗ್ನಿವಿದ್ಯುತ್ತಾದಿ ದೀಪ್ತಿಮಯವೆನಿಸಿಪ್ಪವೆಲ್ಲಾ ಇರುಳಿನ ಪೂಜೆ. ನಿನ್ನ ಪ್ರಕಾಶದಲ್ಲಿ ಎನ್ನ ಮರದಿಪ್ಪೆನಯ್ಯಾ ಚೆನ್ನಮಲ್ಲಿಕಾರ್ಜುನಾ.
ಸೂರ್ಯಪ್ರಕಾಶ ಆಕಾಶದ ವಿಸ್ತೀರ್ಣ, Read More »
ಸುಟ್ಟ ಬೂದಿಯೊಳಗೊಂದು ಸುಡದ ಬೂದಿಯ ಕಂಡೆ, ಆ ಸುಡದ ಬೂದಿಯ ಬೆಟ್ಟವ ಮಾಡಿದಾತನ ಗುಟ್ಟನಾರು ಕಂಡುದಿಲ್ಲ. ನಾನು ಆತನನರಿದು ಶರಣೆಂದು ಬದುಕಿದೆ. ಆ ಬೆಟ್ಟದ ಮೇಲೆ ಅನೇಕ ವಸ್ತುಗಳ ಕಂಡು ಚರಿಸುತ್ತಿದ್ದೇನೆ ಚೆನ್ನಮಲ್ಲಿಕಾರ್ಜುನಾ.
ಸುಟ್ಟ ಬೂದಿಯೊಳಗೊಂದು ಸುಡದ ಬೂದಿಯ ಕಂಡೆ, Read More »
ಸುಖದ ಸುಖಿಗಳ ಸಂಭಾಷಣೆಯಿಂದ ದುಃಖಕ್ಕೆ ವಿಶ್ರಾಮವಾಯಿತ್ತು. ಭಾವಕ್ಕೆ ತಾರ್ಕಣೆಯಾದಲ್ಲಿ, ನೆನಹಕ್ಕೆ ವಿಶಾಮವಾಯಿತ್ತು. ಬೆಚ್ಚು ಬೆರಸಲೊಡನೆ ಮಚ್ಚು ಒಳಕೊಂಡಿತ್ತಯ್ಯಾ, ಚೆನ್ನಮಲ್ಲಿಕಾರ್ಜುನಯ್ಯಾ ನಿಮ್ಮ ಶರಣರ ಸಂಗದಿಂದ.
ಸುಖದ ಸುಖಿಗಳ ಸಂಭಾಷಣೆಯಿಂದ Read More »
ಸರ್ಪನ ಬಾಯ ಕಪ್ಪೆ ನೊಣಕ್ಕೆ ಹಾರುವಂತೆ ಆಪ್ಯಾಯನ ಬಿಡದು. ಕಾಯವರ್ಪಿತವೆಂಬ ಹುಸಿಯ ನೋಡಾ. ನಾನು ಭಕ್ತಳೆಂಬ ನಾಚಿಕೆಯ ನೋಡಾ. ನಾನು ಯುಕ್ತಳೆಂಬ ಹೇಸಿಕೆಯ ನೋಡಾ. ಓಗರವಿನ್ನಾಗದು, ಪ್ರಸಾದ ಮುನ್ನಿಲ್ಲ ; ಚೆನ್ನಮಲ್ಲಿಕಾರ್ಜುನಯ್ಯ ಉಪಚಾರದರ್ಪಿತವನವಗಡಿಸಿ ಕಳೆವ
ಸರ್ಪನ ಬಾಯ ಕಪ್ಪೆ ನೊಣಕ್ಕೆ ಹಾರುವಂತೆ Read More »
ಸಪ್ತಧಾತುಗಳಿಂದ ಬಳಸಲ್ಪಟ್ಟ ಈ ಶರೀರವೆ ಶಿವನ ಪಟ್ಟಣವೆಂದು ಹೇಳಲ್ಪಟ್ಟಿತ್ತು. ಈ ಪಿಂಡವೆಂಬ ಪಟ್ಟಣದಲ್ಲಿ ಸೂಕ್ಷ್ಮವಾದಂಥಧಾರಾಕಾಶದಿಂದ ಮನೋಹರವಾಗಿದ್ದ ಹೃದಯಕಮಲವೆ ಅಂತಃಪುರವು. ಅಲ್ಲಿ ನಿತ್ಯಪರಿಪೂರ್ಣತ್ವದಿಂದ ಸಿದ್ಧನಾಗಿ ಸಚ್ಚಿದಾನಂದವೇ ಕುರುಹಾಗುಳ್ಳ ಪರಮಶಿವನು ಜಲದಲ್ಲಿ ತೋರುತ್ತಿರ್ದ ಆಕಾಶದೋಪಾದಿಯಲ್ಲಿ ಪ್ರತ್ಯಕ್ಷವಾಗಿ ಪ್ರಕಾಶವೇ ಸ್ವರೂಪವಾಗುಳ್ಳಾತನಾಗಿ ಇರುತಿರ್ದನು. ಆ ಜಲಮಧ್ಯದಲ್ಲಿಯ ಆಕಾಶ ಬಿಂಬದಲ್ಲಿರುತಿರ್ದ ಘಟಾಕಾಶದೋಪಾದಿಯಲ್ಲಿ ಖಂಡಿತನಾಗಿರ್ದ ಚಿದ್ರೂಪನಾದ ಶಿವನನು ಭಾವಿಸುವುದಯ್ಯ ಶ್ರೀ ಚೆನ್ನಮಲ್ಲಿಕಾರ್ಜುನದೇವಾ.
ಸಪ್ತಧಾತುಗಳಿಂದ ಬಳಸಲ್ಪಟ್ಟ ಈ ಶರೀರವೆ Read More »
ಸದ್ಗುರು ಸ್ವಾಮಿ ಶಿಷ್ಯಂಗೆ ಅನುಗ್ರಹವ ಮಾಡುವಲ್ಲಿ ತಚ್ಫಿಷ್ಯನ ಮಸ್ತಕದ ಮೇಲೆ ತನ್ನ ಹಸ್ತವನಿರಿಸಿದಡೆ ಲೋಹದ ಮೇಲೆ ಪರುಷ ಬಿದ್ದಂತಾಯಿತ್ತಯ್ಯಾ. ಒಪ್ಪುವ ಶ್ರೀ ವಿಭೂತಿಯ ನೊಸಲಿಂಗೆ ಪಟ್ಟವಕಟ್ಟಿದಡೆ ಮುಕ್ತಿರಾಜ್ಯದ ಒಡೆತನಕ್ಕೆ ಪಟ್ಟವಕಟ್ಟಿದಂತಾಯಿತ್ತಯ್ಯಾ. ಸದ್ಯೋಜಾತ ವಾಮದೇವ ಅಘೋರ ತತ್ಪುರುಷ ಈಶಾನವೆಂಬ ಪಂಚಕಳಶದಭಿಷೇಕವ ಮಾಡಿಸಲು, ಶಿವನ ಕರುಣಾಮೃತದ ಸೋನೆ ಸುರಿದಂತಾಯಿತ್ತಯ್ಯಾ. ನೆರೆದ ಶಿವಗಣಂಗಳ ಮಧ್ಯದಲ್ಲಿ ಮಹಾಲಿಂಗವನು ಕರತಳಾಮಳಕವಾಗಿ ಶಿಷ್ಯನ ಕರಸ್ಥಲಕ್ಕೆ ಇತ್ತು, ಅಂಗದಲ್ಲಿ ಪ್ರತಿಷ್ಠಿಸಿ, ಪ್ರಣವಪಂಚಾಕ್ಷರಿಯುಪದೇಶವ ಕರ್ಣದಲ್ಲಿ ಹೇಳಿ, ಕಂಕಣವ ಕಟ್ಟಿದಲ್ಲಿ, ಕಾಯವೆ ಕೈಲಾಸವಾಯಿತ್ತು ; ಪ್ರಾಣವೆ ಪಂಚಬ್ರಹ್ಮಮಯಲಿಂಗವಾಯಿತ್ತು. ಇಂತು ಮುಂದ
ಸದ್ಗುರು ಸ್ವಾಮಿ ಶಿಷ್ಯಂಗೆ ಅನುಗ್ರಹವ ಮಾಡುವಲ್ಲಿ Read More »
ಸತಿ ಎಂಬುದು ಮಾಟ, ಪತಿಯೆಂಬುದು ಮಾಟ, ತನುವೆಂಬುದು ಮಾಯೆ, ಮನವೆಂಬುದು ಮಾಯೆ, ಸುಖವೆಂಬುದು ಮಾಯೆ, ಚೆನ್ನಮಲ್ಲಿಕಾರ್ಜುನನೆನಗೆ ಕೈಹಿಡಿದ ಗಂಡನಲ್ಲದೆ ಮಿಕ್ಕಿನವರೆಲ್ಲರೂ ಮೂಗಿಲ್ಲದ ಬಣ್ಣದ ಬೊಂಬೆಗಳು ಕಾಣಯ್ಯಾ.
ಸತಿ ಎಂಬುದು ಮಾಟ, ಪತಿಯೆಂಬುದು ಮಾಟ, Read More »
ಸತ್ಯ ಸದ್ಭಕ್ತರ ಸಂಭಾಷಣೆ ನುಡಿಗಡಣವೆಂಬುದು ನಿಚ್ಚಲೊಂದು ಉಪದೇಶ ಮಂತ್ರವ ಕಲಿತಂತೆ. ಬಚ್ಚಬ¾Âಯ ಭವಿಗಳ ಸಂಗದಲ್ಲಿದ್ದರೆ ಕಿಚ್ಚಿನೊಳಗೆ ಬಿದ್ದ ಕೀಡೆಯಂತಪ್ಪುದಯ್ಯ. ಸುಚಿತ್ತದಿಂದ ನಿಮ್ಮ ಸದ್ಭಕ್ತರ ಸಂಗದಲ್ಲಿರಿಸದಿರ್ದಡೆ ನಾನಿನ್ನೆತ್ತ ಸಾರುವೆನು ಹೇಳಾ ಚೆನ್ನಮಲ್ಲಿಕಾರ್ಜುನಾ ?
ಸತ್ಯ ಸದ್ಭಕ್ತರ ಸಂಭಾಷಣೆ ನುಡಿಗಡಣವೆಂಬುದು Read More »
ಸಟೆದಿಟವೆಂಬ ಎರಡುವಿಡಿದು ನಡೆವುದೀ ಲೋಕವೆಲ್ಲವು. ಸಟೆದಿಟವೆಂಬ ಎರಡುವಿಡಿದು ನುಡಿವುದೀ ಲೋಕವೆಲ್ಲವು. ಸಟೆದಿಟವೆಂಬ ಎರಡುವಿಡಿದು ನಡೆವನೆ ಶರಣನು ? ಗುರುಲಿಂಗಜಂಗಮದಲ್ಲಿ ಸಟೆಯ ಬಳಸಿದಡೆ ಅವನು ತ್ರಿವಿಧಕ್ಕೆ ದ್ರೋಹಿ, ಅಘೋರ ನರಕಿ. ಉಂಬುದೆಲ್ಲ ಕಿಲ್ಬಿಷ, ತಿಂಬುದೆಲ್ಲ ಅಡಗು, ಕುಡಿವುದೆಲ್ಲ ಸುರೆ. ಹುಸಿಯೆಂಬುದೆ ಹೊಲೆ, ಶಿವಭಕ್ತಂಗೆ ಹುಸಿಯೆಂಬುದುಂಟೆ ಅಯ್ಯಾ ? ಹುಸಿಯನಾಡಿ ಲಿಂಗವ ಪೂಜಿಸಿದಡೆ ಹೊಳ್ಳ ಬಿತ್ತಿ ಫಲವನರಸುವಂತೆ,
ಸಟೆದಿಟವೆಂಬ ಎರಡುವಿಡಿದು ನಡೆವುದೀ ಲೋಕವೆಲ್ಲವು. Read More »
ಸಂಸಾರಸಂಗದಲ್ಲಿರ್ದೆ ನೋಡಾ ನಾನು. ಸಂಸಾರ ನಿಸ್ಸಾರವೆಂದು ತೋರಿದನೆನಗೆ ಶ್ರೀಗುರು. ಅಂಗವಿಕಾರದ ಸಂಗವ ನಿಲಿಸಿ, ಲಿಂಗವನಂಗದ ಮೇಲೆ ಸ್ಥಾಪ್ಯವ ಮಾಡಿದನೆನ್ನ ಗುರು, ಹಿಂದಣ ಜನ್ಮವ ತೊಡೆದು, ಮುಂದಣ ಪ ಥವ ತೋರಿದನೆನ್ನ ತಂದೆ. ಚೆನ್ನಮಲ್ಲಿಕಾರ್ಜುನನ ನಿಜವ ತೋರಿದನೆನ್ನ ಗುರು.
ಸಂಸಾರಸಂಗದಲ್ಲಿರ್ದೆ ನೋಡಾ ನಾನು. Read More »
ಸಂಸಾರವೆಂಬ ಹಗೆಯಯ್ಯಾ ಎನ್ನ ತಂದೆ. ಎನ್ನ ವಂಶವಂಶದಪ್ಪದೆ ಅರಸಿಕೊಂಡು ಬರುತ್ತಿದೆಯಯ್ಯಾ. ಎನ್ನುವನರಸಿಯರಸಿ ಹಿಡಿದು ಕೊಲುತ್ತಿದೆಯಯ್ಯಾ. ನಿನ್ನ ನಾ ಮರೆಹೊಕ್ಕೆ ಕಾಯಯ್ಯಾ. ಎನ್ನ ಬಿನ್ನಪವನವಧರಿಸಾ, ಚೆನ್ನಮಲ್ಲಿಕಾರ್ಜುನಾ.
ಸಂಸಾರವೆಂಬ ಹಗೆಯಯ್ಯಾ ಎನ್ನ ತಂದೆ. Read More »
ಸಂಸಾರವ ನಿರ್ವಾಣವ ಮಾಡಿ, ಮನವ ವಜ್ರತುರಗವ ಮಾಡಿ, ಜೀವವ ರಾವುತನ ಮಾಡಿ, ಮೇಲಕ್ಕೆ ಉಪ್ಪರಿಸಲೀಯದೆ, ಮುಂದಕ್ಕೆ ಮುಗ್ಗರಿಸಲೀಯದೆ ಈ ವಾರುವನ ಹಿಂದಕ್ಕೆ ಬರಸೆಳೆದು ನಿಲಿಸಿ, ಮೋಹರವಾಗಿದ್ದ ದಳದ ಮೇಲೆ, ಅಟ್ಟಿ ಮುಟ್ಟಿ ತಿವಿದು ಹೊಯಿದು ನಿಲಿಸಲಎರಿಯದೆ, ಧವಳಬಣ್ಣದ ಕೆಸರುಗಲ್ಲ ಮೆಟ್ಟಿ ತೊತ್ತಳದುಳಿವುತ್ತಲು ಇದಾರಯ್ಯಾ. ಅಂಗಡಿಯ ರಾಜಬೀದಿಯೊಳಗೆ ಬಿದ್ದ ರತ್ನಸೆಟ್ಟಿ ಈ ಥಳಥಳನೆ ಹೊಳವ ಪ್ರಜ್ವಲಿತವ ಕಾಣದೆ ಹಳಹಳನೆ ಹಳಸುತ್ತೈದಾರೆ ಅಯ್ಯಾ. ಆಧಾರಸ್ಥಾನದ ಇಂಗಳವನಿಕ್ಕಿ ವಾಯು ಪವನದಿಂದ ನಿಲಿಸಲು, ಆ ಅಗ್ನಿಯ ಸೆಕೆ ಹೋಗಿ ಬ್ರಹ್ಮರಂಧ್ರವ ಮುಟ್ಟಲು, ಅಲ್ಲಿರ್ದ
ಸಂಸಾರವ ನಿರ್ವಾಣವ ಮಾಡಿ, Read More »
ಸಂಗನಬಸವಣ್ಣನ ಪಾದವ ಕಂಡೆನಾಗಿ ಎನ್ನ ಅಂಗ ನಾಸ್ತಿಯಾಯಿತ್ತು. ಚೆನ್ನಬಸವಣ್ಣನ ಪಾದವ ಕಂಡೆನಾಗಿ ಎನ್ನ ಪ್ರಾಣ ಬಯಲಾಯಿತ್ತು. ಪ್ರಭುವೆ, ನಿಮ್ಮ ಶ್ರೀಚರಣಕ್ಕೆ ಶರಣೆಂದೆನಾಗಿ ಎನಗೆ ಅರಿವು ಸ್ವಾಯತವಾಯಿತ್ತು. ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ಶರಣರ ಕರುಣವ ಪಡೆದೆನಾಗಿ ಎನಗಾವ ಜಂಜಡವೂ ಇಲ್ಲವಯ್ಯಾ ಪ್ರಭುವೆ.
ಸಂಗನಬಸವಣ್ಣನ ಪಾದವ ಕಂಡೆನಾಗಿ Read More »
ಸಂಗದಿಂದಲ್ಲದೆ ಅಗ್ನಿ ಹುಟ್ಟದು, ಸಂಗದಿಂದಲ್ಲದೆ ಬೀಜ ಮೊಳೆದೋರದು, ಸಂಗದಿಂದಲ್ಲದೆ ಹೂವಾಗದು. ಸಂಗದಿಂದಲ್ಲದೆ ಸರ್ವಸುಖದೋರದು. ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ಮಹಾನುಭಾವಿಗಳ ಸಂಗದಿಂದಲಾನು ಪರಮಸುಖಿಯಾದೆನಯ್ಯಾ.
ಸಂಗದಿಂದಲ್ಲದೆ ಅಗ್ನಿ ಹುಟ್ಟದು, Read More »
ಶಿವಶಿವಾ, ಶ್ರೀಗುರುಲಿಂಗಯ್ಯದೇವರು ತನ್ನ ಕರಸ್ಥಲವ ತಂದು ಎನ್ನ ಶಿರಸ್ಥಲದ ಮೇಲಿರಿಸಿದ ಬಳಿಕ ಎನ್ನ ಭವಂ ನಾಸ್ತಿಯಾಯಿತ್ತು. ಎನ್ನ ತನ್ನಂತೆ ಮಾಡಿದ, ತನ್ನ ಎನ್ನಂತೆ ಮಾಡಿದ ; ಎನ್ನಲ್ಲಿ ತನ್ನಲ್ಲಿ ತೆರಹಿಲ್ಲದೆ ಮನಕ್ಕೆ ತೋರಿದ. ತನ್ನ ಕರಸ್ಥಲದೊಳಗಿದ್ದ ಶಿವಲಿಂಗದೇವರನು ಎನ್ನ ಕರಸ್ಥಲದೊಳಗೆ ಮೂರ್ತಿಗೊಳಿಸಿದ. ಎನ್ನ ಕರಸ್ಥಲದೊಳಗಿದ್ದ ಶಿವಲಿಂಗದೇವರನು ಎನ್ನ ತನುವಿನ ಮೇಲೆ ಮೂರ್ತಿಗೊಳಿಸಿದ. ಎನ್ನ ತನುವಿನ ಮೇಲಣ ಶಿವಲಿಂಗದೇವರನು ಎನ್ನ ಮನವೆಂಬ ಮಂಟಪದೊಳಗೆ ಮೂರ್ತಿಗೊಳಿಸದ. ಎನ್ನ ಮನವೆಂಬ ಮಂಟಪದೊಳಗೆ ಮೂರ್ತಿಗೊಳಿಸಿದ ಶಿವಲಿಂಗದೇವರನು ಎನ್ನ e್ಞನವೆಂಬ ಮಂಟಪದೊಳಗೆ ಮೂರ್ತಿಗೊಳಿಸಿದ. ಎನ್ನ
ಶಿವಶಿವಾ, ಶ್ರೀಗುರುಲಿಂಗಯ್ಯದೇವರು ತನ್ನ ಕರಸ್ಥಲವ ತಂದು Read More »
ಶಿವಶಿವಾ, ಕರ್ಮಕ್ಷಯವಾದಲ್ಲಿ ಕರ್ಮದ ಮಾತ ಕೇಳಿಸಿದೆಯಯ್ಯಾ ? ಪಾಪಲೇಪವಳಿದಲ್ಲಿ ಪಾಪದ ಮಾತ ಕೇಳಿಸಿದೆಯಲ್ಲಯ್ಯಾ ? ಶಿವಶಿವಾ, ಭವದ ಬಟ್ಟೆಯನಗಲಿದಲ್ಲಿ ? ಬಂಧನದ ನುಡಿಯನಾಡಿಸಿದೆಯಲ್ಲಯ್ಯಾ ? ಚೆನ್ನಮಲ್ಲಿಕಾರ್ಜುನಯ್ಯಾ, ನೀನೆ ಗಂಡನೆಂದಿದ್ದಲ್ಲಿ, ಪರಪುರುಷರ ಮಾತನಾಡಿಸಿದೆಯಲ್ಲಯ್ಯಾ ?
ಶಿವಶಿವಾ, ಕರ್ಮಕ್ಷಯವಾದಲ್ಲಿ Read More »
ಶಿವಭಕ್ತರ ರೋಮನೊಂದಡೆ, ಶಿವನು ನೋವ ನೋಡಾ. ಶಿವಭಕ್ತರು ಪರಿಣಾಮಿಸಿದಡೆ, ಶಿವನು ಪರಿಣಾಮಿಸುವ ನೋಡಾ. ಭಕ್ತದೇಹಿಕದೇವನೆಂದು ಶ್ರುತಿ ಹೊಗಳುವ ಕಾರಣ, ಶಿವಭಕ್ತರ ಲೇಸು ಹೊಲ್ಲೆಹ ಶಿವನ ಮುಟ್ಟುವುದು ನೋಡಾ. ತಾಯಿನೊಂದಡೆ ಒಡಲಶಿಶು ನೋವತೆರನಂತೆ, ಭಕ್ತರು ನೊಂದಡೆ ತಾ ನೋವ ನೋಡಾ ಚೆನ್ನಮಲ್ಲಿಕಾರ್ಜುನ.
ಶಿವಭಕ್ತರ ರೋಮನೊಂದಡೆ, ಶಿವನು ನೋವ ನೋಡಾ. Read More »