Basavanna

ಅರ್ಥವುಳ್ಳವರೆಲ್ಲ ಅರಸಿಂಗಂಜುವರಯ್ಯಾ

ಅರ್ಥವುಳ್ಳವರೆಲ್ಲ ಅರಸಿಂಗಂಜುವರಯ್ಯಾ, ಭಕ್ತಿಯುಳ್ಳವರೆಲ್ಲ ಜಂಗಮಕ್ಕಂಜುವರಯ್ಯಾ, ಸೂಳೆಗೊಲಿದವರೆಲ್ಲ ಸೂಳೆಯೆಂಜಲು ತಿಂಬರಯ್ಯಾ. ಮಾಂಸವ ಮಚ್ಚಿದವರೆಲ್ಲ ಸೊಣಗನೆಂಜಲ ತಿಂಬರಯ್ಯಾ. ಕೂಡಲಸಂಗನ ಶರಣರ ಒಕ್ಕುಮಿಕ್ಕುದ ಲಿಂಗಕ್ಕೆ ಕೊಟ್ಟುಕೊಂಡು ಯೋಗ್ಯವಾದವರ ನಮ್ಮ ಚಿಕ್ಕ ಬಸವಣ್ಣ ಬಲ್ಲ.

ಅರ್ಥವುಳ್ಳವರೆಲ್ಲ ಅರಸಿಂಗಂಜುವರಯ್ಯಾ Read More »

ಅರ್ಥವನರ್ಥವ ಮಾಡಿ ಕೋಳಾಹಳಂಗೆಯ್ಯುತ್ತಿರಲಿ

ಅರ್ಥವನರ್ಥವ ಮಾಡಿ ಕೋಳಾಹಳಂಗೆಯ್ಯುತ್ತಿರಲಿ, ಹುಟ್ಟಿದ ಮಕ್ಕಳ ನವಖಂಡವ ಮಾಡಿ ಕಡಿವುತ್ತಿರಲಿ, ಮುಟ್ಟುವ ಸ್ತ್ರೀಯ ಕಣ್ಣಮುಂದೆ ಅಭಿಮಾನಂಗೊಂಡು ನೆರೆವುತ್ತಿರಲಿ, ಇಂತೀ ತ್ರಿವಿಧವೂ ಹೊರಗಣವು. ಇನ್ನೆನ್ನಂಗದ ಮೇಲೆ ಬರಲಿ, ಹಿಡಿಖಂಡವ ಕೊಯ್ಯಲಿ, ಇಕ್ಕುವ ಶೂಲ ಪ್ರಾಪ್ತಿಸಲಿ, ಹಾಕೊಂದೆಸೆ ಹನ್ನೊಂದೆಸೆಯಾಗಿ ಮಾಡುತ್ತಿರಲಿ. ಮತ್ತೆಯೂ ಲಿಂಗಾರಾಧನೆಯ ಮಾಡುವೆ, ಜಂಗಮಾರಾಧನೆಯ ಮಾಡುವೆ, ಪ್ರಸಾದಕ್ಕೆ ತಪ್ಪೆ. ಇಂತಪ್ಪ ಭಾಷೆ ಕಿಂಚಿತ್ತು ಹುಸಿಯಾದಡೆ ನೀನಂದೆ ಮೂಗ ಕೊಯಿ, ಕೂಡಲಸಂಗಮದೇವಾ.

ಅರ್ಥವನರ್ಥವ ಮಾಡಿ ಕೋಳಾಹಳಂಗೆಯ್ಯುತ್ತಿರಲಿ Read More »

ಅರ್ಥರೇಖೆುದ್ದಲ್ಲಿ ಫಲವೇನು

ಅರ್ಥರೇಖೆುದ್ದಲ್ಲಿ ಫಲವೇನು, ಆಯುಷ್ಯರೇಖೆ ಇಲ್ಲದನ್ನಕ್ಕರ ಹಂದೆಯ ಕೈಯಲ್ಲಿ ಚಂದ್ರಾಯುಧವಿದ್ದಲ್ಲಿ ಫಲವೇನು ಅಂಧಕನ ಕೈಯಲ್ಲಿ ದರ್ಪಣವಿದ್ದು ಫಲವೇನು ಮರ್ಕಟನ ಕೈಯಲ್ಲಿ ಮಾಣಿಕವಿದ್ದು ಫಲವೇನು ನಮ್ಮ ಕೂಡಲಸಂಗನ ಶರಣರನರಿಯದವರ ಕೈಯಲ್ಲಿ ಲಿಂಗವಿದ್ದು ಫಲವೇನು ! ಶಿವಪಥವನರಿಯದನ್ನಕ್ಕ.

ಅರ್ಥರೇಖೆುದ್ದಲ್ಲಿ ಫಲವೇನು Read More »

ಅರ್ಥ ಪ್ರಾಣ ಅಭಿಮಾನವ ಕೊಟ್ಟೆನೆಂಬರಲ್ಲದೆ

ಅರ್ಥ ಪ್ರಾಣ ಅಭಿಮಾನವ ಕೊಟ್ಟೆನೆಂಬರಲ್ಲದೆ ಕೊಟ್ಟ ಭಕ್ತರನಾರನೂ ಕಂಡುದಿಲ್ಲ; ದಾಸ ತನ್ನ ವಸ್ತ್ರವ ಕೊಟ್ಟನಲ್ಲದೆ ತನ್ನ ಕೊಟ್ಟುದಿಲ್ಲ, ಸಿರಿಯಾಳ ತನ್ನ ಮಗನ ಕೊಟ್ಟನಲ್ಲದೆ ತನ್ನ ಕೊಟ್ಟುದಿಲ್ಲ, ಬಲ್ಲಾಳ ತನ್ನ ವಧುವ ಕೊಟ್ಟನಲ್ಲದೆ ತನ್ನ ಕೊಟ್ಟುದಿಲ್ಲ. ಇವೆಲ್ಲ ಹೊರಗಣ ಮಾತು, ಕೂಡಲಸಂಗಮದೇವರಲ್ಲಿ ತನ್ನ ಕೊಟ್ಟ ಸಿಂಧುಮರಾಳ.

ಅರ್ಥ ಪ್ರಾಣ ಅಭಿಮಾನವ ಕೊಟ್ಟೆನೆಂಬರಲ್ಲದೆ Read More »

ಅರ್ಥ ಪ್ರಾಣ ಅಭಿಮಾನದಲ್ಲಿ ವಂಚನೆುಲ್ಲದಿಹುದೆ ಭಕ್ತಿ,

ಅರ್ಥ ಪ್ರಾಣ ಅಭಿಮಾನದಲ್ಲಿ ವಂಚನೆುಲ್ಲದಿಹುದೆ ಭಕ್ತಿ, ಹೆಚ್ಚು ಕುಂದಿಲ್ಲದಿಹುದೆ ಸಮಯಾಚಾರ, ಜಂಗಮವೆ ಲಿಂಗವೆಂಬುದಕ್ಕೆ ಏನು ಗುಣ ಮನದ ಲಂಪಟತನ ಹಿಂಗದಾಗಿ ಒಡೆಯರ ಬರವಿಂಗೆ ಕುನ್ನಿ ಬಾಲವ ಬಡಿದಡೆ ವೆಚ್ಚವೇನು ಹತ್ತುವುದು ಕೂಡಲಸಂಗಮದೇವಾ

ಅರ್ಥ ಪ್ರಾಣ ಅಭಿಮಾನದಲ್ಲಿ ವಂಚನೆುಲ್ಲದಿಹುದೆ ಭಕ್ತಿ, Read More »

ಅರ್ಥ ಪ್ರಾಣ ಅಬಿsಮಾನವನೊಪ್ಪಿಸಿದಲ್ಲಿ ಭಕ್ತನಪ್ಪನೆ ಅಲ್ಲ.

ಅರ್ಥ ಪ್ರಾಣ ಅಬಿsಮಾನವನೊಪ್ಪಿಸಿದಲ್ಲಿ ಭಕ್ತನಪ್ಪನೆ ಅಲ್ಲ. ಆದಿರುದ್ರನ ಮಗಳು ಆದಿಶಕ್ತಿ, ಆದಿಶಕ್ತಿಯ ಮಗ ವಿಷ್ಣು, ವಿಷ್ಣುವಿನ ಅರ್ಧಾಂಗಿ ಲಕ್ಷ್ಮಿ. ಈ ತೊತ್ತಿನ ತೊತ್ತಿನ ಪಡಿದೊತ್ತನೊಪ್ಪಿಸಿದಲ್ಲಿ ಭಕ್ತನಪ್ಪನೆ ಅಲ್ಲ. ಎನ್ನ ಮನದೊಡೆಯ ಮಹಾದೇವಾ, ನಿಮ್ಮ ಮನವ ನಿಮಗೊಪ್ಪಿಸಿ ಶುದ್ಧ ನಾನು ಕಾಣಾ, ಕೂಡಲಸಂಗಮದೇವಾ.

ಅರ್ಥ ಪ್ರಾಣ ಅಬಿsಮಾನವನೊಪ್ಪಿಸಿದಲ್ಲಿ ಭಕ್ತನಪ್ಪನೆ ಅಲ್ಲ. Read More »

ಅತ್ತಲಿತ್ತ ಹೋಗದಂತೆ, ಹೆಳವನ ಮಾಡಯ್ಯಾ ತಂದೆ,

ಅತ್ತಲಿತ್ತ ಹೋಗದಂತೆ, ಹೆಳವನ ಮಾಡಯ್ಯಾ ತಂದೆ, ಸುತ್ತಿ ಸುಳಿದು ನೋಡದಂತೆ, ಅಂಧಕನ ಮಾಡಯ್ಯಾ ತಂದೆ, ಮತ್ತೊಂದ ಕೇಳದಂತೆ, ಕಿವುಡನ ಮಾಡಯ್ಯಾ ತಂದೆ, ನಿಮ್ಮ ಶರಣರ ಪಾದವಲ್ಲದೆ ಅನ್ಯ ವಿಷಯಕ್ಕೆಳಸದಂತೆ ಇರಿಸು, ಕೂಡಲಸಂಗಮದೇವಾ.

ಅತ್ತಲಿತ್ತ ಹೋಗದಂತೆ, ಹೆಳವನ ಮಾಡಯ್ಯಾ ತಂದೆ, Read More »

ಅಡಿಗಡಿಗೆ ಲಿಂಗವನಡಿಯಡರಿ ನೋಡಿ ನೋಡಿ,

ಅಡಿಗಡಿಗೆ ಲಿಂಗವನಡಿಯಡರಿ ನೋಡಿ ನೋಡಿ, ಕಂಗಳು ಕಡೆಗೋಡಿವರಿದವೆನಗಯ್ಯಾ, ಎನ್ನ ಅಶ್ರುಜಲಂಗಳು ಆಲಿಕಲ್ಲ ರೂಹಿನಂತೆ, ಅರಗಿನ ಪುತ್ಥಳಿಯಂತೆತನು ಪುಳಕಿತವಾದ ಬೆಮರ ಬಿಂದುಗಳೆಲ್ಲಾ ! ಕೂಡಲಸಂಗನ ದರ್ಶನಸ್ಪರ್ಶದಿಂದ ಮನವೊಲಿದು ನೆರೆವ ಭರವನೇನ ಹೇಳುವೆನಯ್ಯಾ.

ಅಡಿಗಡಿಗೆ ಲಿಂಗವನಡಿಯಡರಿ ನೋಡಿ ನೋಡಿ, Read More »

ಅಡ್ಡದೊಡ್ಡ ನಾನಲ್ಲಯ್ಯಾ, ದೊಡ್ಡ ಬಸುರನಲ್ಲಯ್ಯಾ,

ಅಡ್ಡದೊಡ್ಡ ನಾನಲ್ಲಯ್ಯಾ, ದೊಡ್ಡ ಬಸುರನಲ್ಲಯ್ಯಾ, ದೊಡ್ಡವರನಲ್ಲದೆ ನಿಮ್ಮ ಶರಣರು ಮನ್ನಿಸರಯ್ಯಾ. ಹಡೆದುಂಬ ಸೂಳೆಯಂತೆ ಧನವುಳ್ಳವರನರಸಿ ಅರಸಿ ಬೋಧಿಸಲು, ಪ್ರಾರ್ಥಿಸಲು ಮುನ್ನ ನಾನರಿಯೆನಯ್ಯಾ, ದೊಡ್ಡತನವೆನಗಿಲ್ಲಯ್ಯಾ, ಅಂಜುವೆನಂಜುವೆ ನಿಮ್ಮ ಪ್ರಮಥರಿಗೆ. ಅನಾಥ ನಾನಯ್ಯಾ, ಕೂಡಲಸಂಗಮದೇವಾ.

ಅಡ್ಡದೊಡ್ಡ ನಾನಲ್ಲಯ್ಯಾ, ದೊಡ್ಡ ಬಸುರನಲ್ಲಯ್ಯಾ, Read More »

ಅರಿವಿನ ಆಪ್ಯಾಯನಕ್ಕೆ ಅನುಭಾವವೆ ತೃಪ್ತಿ,

ಅರಿವಿನ ಆಪ್ಯಾಯನಕ್ಕೆ ಅನುಭಾವವೆ ತೃಪ್ತಿ, ಅರಿವು ನೆರೆ ಕೂಡಿ, ಆ[ಚಾ]ರವೆ ಪ್ರಾಣವಾಗಿ ವಿಶ್ರಮಿಸಿದ ಬಳಿಕ, ಶ್ರೀಗುರು ಕೃಪೆಯ ಮಾಡಿದ ಪ್ರಾಣಲಿಂಗದ ಘನವೆಂತೆಂದಡೆ: ಮತ್ಸ್ಯನುಂಗಿದ ಮಾಣಿಕ್ಯದಂತೆ, ಮುತ್ತುನುಂಗಿದ ನೀರಿನಂತೆ, ಕಣ್ಣಾಲಿ ನುಂಗಿದ ನೋಟದಂತೆ, ಬಯಲನೊಳಕೊಂಡ ಬ್ರಹ್ಮಾಂಡದೊಳಗಿಪ್ಪ ಸ್ವಯಾನುಭಾವಿಗಳ ಅನುಭಾವವ ತೋರಿ ಬದುಕಿಸಾ, ಕೂಡಲಸಂಗಮದೇವಾ

ಅರಿವಿನ ಆಪ್ಯಾಯನಕ್ಕೆ ಅನುಭಾವವೆ ತೃಪ್ತಿ, Read More »

ಅರಿವಿಂದಲರಿವೆನೆಂದಡೆ ಅರಿವಿಂಗಸಾಧ್ಯ,

ಅರಿವಿಂದಲರಿವೆನೆಂದಡೆ ಅರಿವಿಂಗಸಾಧ್ಯ, ಅರಿಯದೆ ಅರಿದ ಪರಿ ಎಂತಯ್ಯಾ ಭಾವಿಸಿ ಬೆರೆಸುವೆನೆಂದಡೆ ಭಾವ ನಿರ್ಭಾವವೆಂದುದಾಗಿ ಮತ್ತೆ ಭಾವಿಸಿಯಲ್ಲದೆ ಕಾಣಬಾರದಯ್ಯಾ. ವಾಙ್ಮನಕ್ಕಗೋಚರವೆಂದಡೆ ನುಡಿಯಲಿಲ್ಲದೆ ನಡೆ ಸಾಧ್ಯವಹ ಪರಿ ಎಂತು ಹೇಳಯ್ಯಾ ಹಲವು ಮಾತಿನ ನಿಲವು ಒಂದೆಂಬ ನುಡಿಗಡಣದ ನಿಜವ ಬಲ್ಲವರಾರು ಹೇಳಯ್ಯಾ ನಿಮ್ಮ ಮಾತೆಂಬ ಪರತತ್ವವೊಂದಲ್ಲದೆ ಎರಡುಂಟೆ ಕೂಡಲಸಂಗಮದೇವ ಕಡೆಮುಟ್ಟ ನೋಡುವಡೆ ನುಡಿಗೆಡೆಯಿಲ್ಲ, ಕೃಪೆಯಿಂದ ಕರುಣವ ಮಾಡಯ್ಯಾ ಪ್ರಭುವೆ.

ಅರಿವಿಂದಲರಿವೆನೆಂದಡೆ ಅರಿವಿಂಗಸಾಧ್ಯ, Read More »

ಅರಿವುವಿಡಿದು, ಅರಿವನರಿದು

ಅರಿವುವಿಡಿದು, ಅರಿವನರಿದು, ಅರಿವೆ ನೀವೆಂಬ ಭ್ರಾಂತು ಎನಗಿಲ್ಲವಯ್ಯಾ, ಮರಹುವಿಡಿದು, ಮರಹ ಮರೆದು, ಮರಹು ನೀವೆಂಬ ಮರಹಿನವ ನಾನಲ್ಲವಯ್ಯಾ. ದೇಹ ಪ್ರಾಣಂಗಳ ಹಿಂಗಿ, ದೇಹವಿಡಿದು, ದೇಹ ನಿಮ್ಮದೆಂಬ ಭ್ರಾಂತುಸೂತಕಿ ನಾನಲ್ಲವಯ್ಯಾ. ನಿ ಮ್ಮ ಅರಿದ ಅರಿವ ಭಿನ್ನವಿಟ್ಟ ಕಂಡೆನಾದಡೆ ನಿಮ್ಮಾಣೆ ಕಾಣಾ, ಕೂಡಲಸಂಗಮದೇವಾ.

ಅರಿವುವಿಡಿದು, ಅರಿವನರಿದು Read More »

ಅರಿವು ಮರವೆಯೊಳಡಗಿ, ಮರವೆ ಅರಿವಿನೊಳಡಗಿ,

ಅರಿವು ಮರವೆಯೊಳಡಗಿ, ಮರವೆ ಅರಿವಿನೊಳಡಗಿ, ತೆರಹಿಲ್ಲದಿರ್ದೆನೆಂಬ ಹಮ್ಮಿದೇನೋ, ಹಮ್ಮಿದೇನೋ ಬ್ರಹ್ಮಾದ್ ಬ್ರಹ್ಮವ ನುಂಗಿ, ಮತ್ತಾ ಪರಬ್ರಹ್ಮನು ತಾನೆಂದೆಂಬ ಹಮ್ಮಿದೇನೊ, ಹಮ್ಮಿದೇನೊ ಆದಿ ಶೂನ್ಯವು ಶೂನ್ಯ, ಮಧ್ಯ ಶೂನ್ಯವು ಶೂನ್ಯ, ಅಂತ್ಯ ಶೂನ್ಯವು ಶೂನ್ಯ, ಶೂನ್ಯವಾದ ಬಳಿಕ ಅಲ್ಲಿಂದತ್ತ ನಿಂದ ನಿಲವನಾರು ಬಲ್ಲರು ಹೇಳಾ ಬಯಲು ಚಿತ್ರಿಸಿದ ಚಿತ್ರವನಾ ಬಯಲರಿಯದಂತೆ ಕೂಡಲಸಂಗಮದೇವಾ, ನಿಮ್ಮ ಶರಣರ ನಿಲವು.

ಅರಿವು ಮರವೆಯೊಳಡಗಿ, ಮರವೆ ಅರಿವಿನೊಳಡಗಿ, Read More »

ಅರಿದಿಹೆನೆಂದಡೆ ಅರಿವಿಂಗಸಾಧ್ಯ,

ಅರಿದಿಹೆನೆಂದಡೆ ಅರಿವಿಂಗಸಾಧ್ಯ, ನೆನೆದಿಹೆನೆಂದಡೆ ನೆನಹಿಂಗಸಾಧ್ಯ, ಭಾವಿಸಿಹೆನೆಂದಡೆ ಭಾವಕ್ಕಸಾಧ್ಯ, ವಾಙ್ಮನಕ್ಕಗೋಚರ ಲಿಂಗವನರಿವ ಪರಿಯೆಂತಯ್ಯಾ, ಗುರು ತೋರದನ್ನಕ್ಕರ ? ಗುರುಶಿಷ್ಯರ ಮಥನದಲ್ಲಿ ಸ್ವಯಂಜ್ಯೋತಿಲಿಂಗವು ಉದಯವಪ್ಪುದೆಂಬ ಶ್ರುತಿ ಹುಸಿಯೆ ಕೂಡಲಸಂಗಮದೇವಾ, ನಿಮ್ಮ ಮಹಾನುಭಾವರ ಮಥನದಿಂದ ಎನ್ನಲ್ಲಿ ನಿಜವ ನೆಲೆಗೊಳಿಸಾ, ಪ್ರಭುವೆ.

ಅರಿದಿಹೆನೆಂದಡೆ ಅರಿವಿಂಗಸಾಧ್ಯ, Read More »

ಅರಿಯಲಿಲ್ಲದ ಅರಿವು ಅವಗ್ರಹಿಸಿತ್ತಾಗಿ,

ಅರಿಯಲಿಲ್ಲದ ಅರಿವು ಅವಗ್ರಹಿಸಿತ್ತಾಗಿ, ಅರಿಯಲಿಲ್ಲದ ಮರೆಯಲಿಲ್ಲದ ನಿಜವು ನಿಂದಿತ್ತಾಗಿ, ನಿರ್ನಾಮವಾಯಿತ್ತು, ನಿಃಪತಿಯಾಯಿತ್ತು, ಅಗಮ್ಯದಲ್ಲಿ ಗಮನ ಕೆಟ್ಟಿತ್ತು, ನಿಂದಲ್ಲಿ ನಿರಾಳವಾಯಿತ್ತು, ಕೂಡಲಸಂಗಮದೇವರಲ್ಲಿ ಶಬ್ದಮುಗ್ಧವಾಯಿತ್ತು.

ಅರಿಯಲಿಲ್ಲದ ಅರಿವು ಅವಗ್ರಹಿಸಿತ್ತಾಗಿ, Read More »

ಅರಿಯದೆ ಜನನಿಯ ಜಠರದಲ್ಲಿ

ಅರಿಯದೆ ಜನನಿಯ ಜಠರದಲ್ಲಿ ಬಾರದ ಭವಂಗಳ ಬರಿಸಿದೆ ತಂದೆ, ಹುಟ್ಟಿತ್ತೆ ತಪ್ಪಾಯಿತ್ತೆ, ಎಲೆ ಲಿಂಗವೆ ? ಮುನ್ನ ಹುಟ್ಟಿದುದಕ್ಕೆ ಕೃಪೆಯ ಮಾಡು ಲಿಂಗವೆ ! ಇನ್ನು ಹುಟ್ಟಿದಡೆ ಕೂಡಲಸಂಗಮದೇವಾ, ನಿಮ್ಮಾಣೆ.

ಅರಿಯದೆ ಜನನಿಯ ಜಠರದಲ್ಲಿ Read More »

ಅರಸುವ ಬಳ್ಳಿ ಕಾಲ ತೊಡರಿದಂತಾಯಿತ್ತು,

ಅರಸುವ ಬಳ್ಳಿ ಕಾಲ ತೊಡರಿದಂತಾಯಿತ್ತು, ಬಯಸುವ ಬಯಕೆ ಕೈಸಾರಿದಂತಾಯಿತ್ತು, ಹಲವು ದಿವಸಕೆ ನಂಟರ ಕಂಡಂತಾಯಿತ್ತು. ಅಂದೊಮ್ಮೆ ಅನಿಮಿಷಂಗೆ ಕೋಳುಹೋದ ಲಿಂಗವೆಂದು ಉಮ್ಮಹದಿಂದ ಮಂಗಳಾರತಿಯ ಬೆಳಗಿ, ನವರತ್ನದ ಹಾರ ತೋರಣವ ಕಟ್ಟಿ, ಸಂತೋಷದಿಂದೆನ್ನ ಮನವು ತೊಟ್ಟನೆ ತೊಳಲಿ, ತಿಟ್ಟನೆ ತಿರುನಗೆಫ, ದೃಷ್ಟವ ಕಂಡೆನಯ್ಯಾ. ಬಿಟ್ಟು ಹಿಂಗಿದವೆನ್ನ ಭವಮಾಲೆಗಳು, ಗೋಹೇಶ್ವರನ ಶರಣ ಪ್ರಭುದೇವರ ಕರಸ್ಥಲದೊಳಗೆ, ಕೂಡಲಸಂಗಮದೇವರೆಂಬ ಲಿಂಗವ ಕಂಡೆನಾಗಿ.

ಅರಸುವ ಬಳ್ಳಿ ಕಾಲ ತೊಡರಿದಂತಾಯಿತ್ತು, Read More »

ಅರಸು ವಿಚಾರ, ಸಿರಿಯು, ಶೃಂಗಾರ,

ಅರಸು ವಿಚಾರ, ಸಿರಿಯು, ಶೃಂಗಾರ, ಸ್ಥಿರವಲ್ಲ ಮಾನವಾ. ಕೆಟ್ಟಿತ್ತು ಕಲ್ಯಾಣ, ಹಾಳಾಯಿತ್ತು ನೋಡಾ. ಒಬ್ಬ ಜಂಗಮದ ಅಭಿಮಾನದಿಂದ ಚಾಳುಕ್ಯರಾಯನ ಆಳಿಕೆ ತೆಗೆಯಿತ್ತು, ಸಂದಿತ್ತು, ಕೂಡಲಸಂಗಮದೇವಾ ನಿಮ್ಮ ಕವಳಿಗೆಗೆ.

ಅರಸು ವಿಚಾರ, ಸಿರಿಯು, ಶೃಂಗಾರ, Read More »

ಅರಸರ ಮನೆಯಲ್ಲಿ ಅರಸಿಯಾಗಿಪ್ಪುದರಿಂದ,

ಅರಸರ ಮನೆಯಲ್ಲಿ ಅರಸಿಯಾಗಿಪ್ಪುದರಿಂದ, ಭಕ್ತರ ಮನೆಯ ತೊತ್ತಾಗಿಪ್ಪುದು ಕರ ಲೇಸಯ್ಯಾ. ` ತಾರೌ ಅಗ್ಘವಣಿ, ನೀಡೌ ಪತ್ರೆಯ, ಲಿಂಗಕ್ಕೆ ಬೋನವ ಹಿಡಿಯೌ ಎಂಬರು. ` ಕೂಡಲಸಂಗನ ಮಹಾಮನೆಯಲ್ಲು ಒಕ್ಕುದನುಣೌ ತೊತ್ತೇ‹ ಎಂಬರು.

ಅರಸರ ಮನೆಯಲ್ಲಿ ಅರಸಿಯಾಗಿಪ್ಪುದರಿಂದ, Read More »

ಅರಗಿನ ಪುತ್ಥಳಿಯನುರಿಯ ನಾಲಗೆ ಹೊಯಿದು

ಅರಗಿನ ಪುತ್ಥಳಿಯನುರಿಯ ನಾಲಗೆ ಹೊಯಿದು ಮಾತಾಡುವ ಸರಸ ಬೇಡ ! ಬೆಣ್ಣೆಯ ಬೆನಕಂಗೆ ಕೆಂಡದುಂಡಲಿಗೆಯ ಮಾಡಿ ಚಲ್ಲವಾಡಿದಡೆ ಹಲ್ಲು ಹೋಹುದು ! ಕೂಡಲಸಂಗನ ಶರಣರೊಡನೆ ಸರಸವಾಡಿದಡೆ ಅದು ವಿರಸ ಕಾಣಿರಯ್ಯಾ.

ಅರಗಿನ ಪುತ್ಥಳಿಯನುರಿಯ ನಾಲಗೆ ಹೊಯಿದು Read More »

ಅರಗು ತಿಂದು ಕರಗುವ ದೈವವನೆಂತು ಸರಿಯೆಂಬೆನಯ್ಯಾ

ಅರಗು ತಿಂದು ಕರಗುವ ದೈವವನೆಂತು ಸರಿಯೆಂಬೆನಯ್ಯಾ ಉರಿಯ ಕಂಡಡೆ ಮುರುಟುವ ದೈವವನೆಂತು ಸರಿಯೆಂಬೆನಯ್ಯಾ ಅವಸರ ಬಂದಡೆ ಮಾರುವ ದೈವವನೆಂತು ಸರಿಯೆಂಬೆನಯ್ಯಾ ಅಂಜಿಕೆಯಾದಡೆ ಹೂಳುವ ದೈವವನೆಂತು ಸರಿಯೆಂಬೆನಯ್ಯಾ ಸಹಜಭಾವ ನಿಜೈಕ್ಯ ಕೂಡಲಸಂಗಮದೇವನೊಬ್ಬನೆ ದೇವ.

ಅರಗು ತಿಂದು ಕರಗುವ ದೈವವನೆಂತು ಸರಿಯೆಂಬೆನಯ್ಯಾ Read More »

ಅಜ್ಞಾನದಿಂದ ಹುಟ್ಟಿತ್ತು ಅಹಂ ಮಮತೆ,

ಅಜ್ಞಾನದಿಂದ ಹುಟ್ಟಿತ್ತು ಅಹಂ ಮಮತೆ, ಅಜ್ಞಾನದಿಂದ ಹುಟ್ಟಿತ್ತು ಮನಸ್ಸಂಚಲ, ಅಜ್ಞಾನದಿಂದ ಹುಟ್ಟಿತ್ತು ಇಂದ್ರಿಯೋದ್ರೇಕ, ಅಜ್ಞಾನದಿಂದ ಹುಟ್ಟಿತ್ತು ದೇಹಮೋಹ, ಅಜ್ಞಾನದಿಂದ ಹುಟ್ಟಿತ್ತು ಅತಿಕಾಂಕ್ಷೆ, ಅಜ್ಞಾನದಿಂದ ಹುಟ್ಟಿತ್ತು ತ್ರಿವಿಧಮಲ, ಅಜ್ಞಾನದಿಂದ ಹುಟ್ಟಿತ್ತು ಸಂಸಾರ, ಅಜ್ಞಾನದಿಂದ ಹುಟ್ಟಿತ್ತು ರಾಗದ್ವೇಷ, ಅಜ್ಞಾನದಿಂದ ಹುಟ್ಟಿತ್ತು ಸರ್ವಪ್ರಪಂಚು, ಅಜ್ಞಾನದಿಂದ ಹುಟ್ಟಿತ್ತು ಸರ್ವದುಃಖ, ಕೂಡಲಸಂಗಮದೇವಾ, ಈ ಅಜ್ಞಾನಭ್ರಮೆಯ ಕೆಡಿಸಿದಲ್ಲದೆ ನಿಮ್ಮನೊಡಗೂಡಬಾರದಯ್ಯಾ.

ಅಜ್ಞಾನದಿಂದ ಹುಟ್ಟಿತ್ತು ಅಹಂ ಮಮತೆ, Read More »

ಅಜ್ಞಾನ ಹಿಂಗಿತ್ತು, ಅಹಂಕಾರವಡಗಿತ್ತು,

ಅಜ್ಞಾನ ಹಿಂಗಿತ್ತು, ಅಹಂಕಾರವಡಗಿತ್ತು, ಅರಿಷಡ್ವರ್ಗಂಗಳು ಹರಿಹಂಚಾದವು, ಅಷ್ಟಮದಂಗಳು ಪಟ್ಟಪರಿಯಾದವು, ದಶವಾಯುಗಳು ವಶವರ್ತಿಯಾದವು, ಇಂದ್ರಿಯಂಗಳು ಬಂಧನವಡೆದವು, . ಮನೋವಿಕಾರ ನಿಂದಿತ್ತು. ಕೂಡಲಸಂಗಮದೇವಾ, ನಿಮ್ಮಲ್ಲಿ ನಮ್ಮ ಮಹಾದೇವಿಯಕ್ಕಗಳ ನಿರ್ವಾಣದ ಸಹಜ ನಿಲವ ಕಂಡು, ನಮೋ ನಮೋ ಎನುತಿರ್ದೆನಯ್ಯಾ, ಪ್ರಭುವೆ.

ಅಜ್ಞಾನ ಹಿಂಗಿತ್ತು, ಅಹಂಕಾರವಡಗಿತ್ತು, Read More »

ಅಗ್ನಿಯಾಧಾರದಲ್ಲಿ ಕಬ್ಬುನ ನೀರುಂಬುದಯ್ಯಾ,

ಅಗ್ನಿಯಾಧಾರದಲ್ಲಿ ಕಬ್ಬುನ ನೀರುಂಬುದಯ್ಯಾ, ಭೂಮಿಯಾಧಾರದಲ್ಲಿ ವೃಕ್ಷ ನೀರುಂಬುದಯ್ಯಾ, ಜಂಗಮವಾಪ್ಯಾಯನವಾದಡೆ ಲಿಂಗ ಸಂತ್ಟುಯಹುದಯ್ಯಾ. ವೃಕ್ಷಸ್ಯ ವದನಂ ಭೂಮಿಃ ಸ್ಥಾವರಸ್ಯ ಚ ಜಂಗಮಃ ಅಹಂ ತುಷ್ಟೋsಡಿಸ್ಮ್ಯುಮಾದೇವಿ ಉಭಯೋರ್ಲಿಂಗಜಂಗಮಾತ್ ಇದು ಕಾರಣ ಕೂಡಲಸಂಗಮದೇವರಲ್ಲಿ ಜಂಗಮವಾಪ್ಯಾಯನವಾದಡೆ ಲಿಂಗಸಂತ್ಟು.

ಅಗ್ನಿಯಾಧಾರದಲ್ಲಿ ಕಬ್ಬುನ ನೀರುಂಬುದಯ್ಯಾ, Read More »

ಅಗ್ಫವಣಿಯವಸರ ಸದಾಚಾರ ಸತ್ಕ್ರೀಯೆಂಬ

ಅಗ್ಫವಣಿಯವಸರ ಸದಾಚಾರ ಸತ್ಕ್ರೀಯೆಂಬ ಭೂಮಿಯ ಮೇಲೆ ಸರ್ವಶುದ್ಧವೆಂಬ ಗೋಮಯವ ತಂದು, ವಿನಯಾರ್ಥವೆಂಬ ಉದಕದಿಂದ ಸಮ್ಮಾರ್ಜನೆಯಂ ಮಾಡಿ ತನುವಿನ ಅವಗುಣಂಗಳಂ ಹುಡಿಗುಟ್ಟಿ ರಂಗವಾಲೆಯನಿಕ್ಕಿ, ಅಕ್ಷಯವೆಂಬ ಬಿಂದಿಗೆಯಲ್ಲಿ ಪರಮಾನಂದವೆಂಬ ಅಗ್ಫವಣಿಯ ತುಂಬಿ, ಸಮರಸದಿಂದ ಮಜ್ಜನಕ್ಕೆರೆಯಲು ಹೃದಯಕಮಲವೆಂಬ ಪುಷ್ಪಮಂ ಸಲಿಸಿ, ಸೌಖ್ಯತರ ಶಾಂತಿಯೆಂಬ ಗಂಧವನಿಟ್ಟು, ಅಕ್ಷಯವೆಂಬ ಅಕ್ಷತೆಯನಳವಡಿಸಿ, ಸದ್ಭಾವವೆಂಬ ಧೂಪಮಂ ಬೀಸಿ, ಸುಜ್ಞಾನವೆಂಬ ನಿವಾಳಿಯನೆತ್ತಿ ನಿತ್ಯನಿರಂಜನವೆಂಬ ನೀರಾಜನಮಂ ಬೆಳಗಲು, ಬ್ರಹ್ಮನಾದವೆಂಬ ಘಂಟೆಯಂ ಬಾರಿಸಲು ನಿತ್ಯಲಿಂಗಾರ್ಚನೆಗೆಡೆಮಾಡಲು, ಇದರ ವರ್ಮಕರ್ಮಸ್ಥಿತಿಯನರಿದು ಶಿವಲಿಂಗಾರ್ಚನೆಯ ಮಾಡಬಲ್ಲಡೆ, ಮತ್ರ್ಯದಲ್ಲಿ ನಾನಾರನೂ ಕಾಣೆನು. ಕೂಡಲಸಂಗಮದೇವಾ, ಪ್ರಭು ಶಿವಲಿಂಗಾರ್ಚನೆಯಂ ಮಾಡಲು, ನಾನೆ

ಅಗ್ಫವಣಿಯವಸರ ಸದಾಚಾರ ಸತ್ಕ್ರೀಯೆಂಬ Read More »