Basavanna

ಅಕಟಕಟಾ, ಶಿವ ನಿನಗಿನಿತು ಕರುಣವಿಲ್ಲ,

ಅಕಟಕಟಾ, ಶಿವ ನಿನಗಿನಿತು ಕರುಣವಿಲ್ಲ, ಅಕಟಕಟಾ ಶಿವ ನಿನಗಿನಿತು ಕೃಪೆಯಿಲ್ಲ, ಏಕೆ ಹುಟ್ಟಿಸಿದೆ, ಇಹಲೋಕ ದುಃಖಿಯ ಪರಲೋಕದೂರನ ಏಕೆ ಹುಟ್ಟಿಸಿದೆ ಕೂಡಲಸಂಗಮದೇವಾ ಕೇಳಯ್ಯಾ, ಎನಗಾಗಿ ಮತ್ತೊಂದು ತರುಮರನಿಲ್ಲವೆ

ಅಕಟಕಟಾ, ಶಿವ ನಿನಗಿನಿತು ಕರುಣವಿಲ್ಲ, Read More »

ಅಂದಾ ತ್ರಿಪುರವನುರುಹಿದಾತ ವೀರ,

ಅಂದಾ ತ್ರಿಪುರವನುರುಹಿದಾತ ವೀರ, ಅಂದಾ ದಕ್ಷನ ಯಾಗವ ಕೆಡಿಸಿದಾತ ವೀರ, ಕಡುಗಲಿ ನರಸಿಂಹನನುಗಿದಾತ ವೀರ, ನಮ್ಮ ಹರನ ಲಲಾಟದಲ್ಲಿ ಜನಿಸಿದಾತ ವೀರ, ನಮ್ಮ ಕೂಡಲಸಂಗನಲ್ಲಿ ಮಡಿವಾಳ ವೀರ.

ಅಂದಾ ತ್ರಿಪುರವನುರುಹಿದಾತ ವೀರ, Read More »

ಅಂದಣವನೇರಿದ ಸೊಣಗನಂತೆ

ಅಂದಣವನೇರಿದ ಸೊಣಗನಂತೆ ಕಂಡಡೆ ಬಿಡದು ತನ್ನ ಮುನ್ನಿನ ಸ್ವಭಾವವನು. ಸುಡು, ಸುಡು, ಮನವಿದು ವಿಷಯಕ್ಕೆ ಹರಿವುದು, ಮೃಡ ನಿಮ್ಮನನುದಿನ ನೆನೆಯಲೀಯದು. ಎನ್ನೊಡೆಯ ಕೂಡಲಸಂಗಮದೇವಾ ನಿಮ್ಮ ಚರಣವ ನೆನೆವಂತೆ ಕರುಣಿಸು- ಸೆರಗೊಡ್ಡಿ ಬೇಡುವೆ, ನಿಮ್ಮ ಧರ್ಮ.

ಅಂದಣವನೇರಿದ ಸೊಣಗನಂತೆ Read More »

ಅಯ್ಯಾ, ಹಿಂದೆಯಾನು ಮಾಡಿದ ಮರಹಿಂದ ಬಂದೆನೀ ಭವದಲ್ಲಿ.

ಅಯ್ಯಾ, ಹಿಂದೆಯಾನು ಮಾಡಿದ ಮರಹಿಂದ ಬಂದೆನೀ ಭವದಲ್ಲಿ. ನಿಮ್ಮ ಲೀಲೆ ನಿಮ್ಮ ವಿನೋದ ಸೂತ್ರದಿಂದ, ಲಕ್ಷದ ಮೇಲೆ ತೊಂಬತ್ತಾರು ಸಾವಿರ ಗೀತಂಗಳ ಆಡಿ ಹಾಡಿ, ಆ ದಾಸೋಹವೆಂಬ ಮಹಾಗಣಸಂಕುಳದೊಳೆನ್ನನಿರಿಸಿ, ನಿಮ್ಮ ಭಕ್ತಿಯ ಘನವ ನೀವೆ ಮೆರೆಯಲೆಂದು ಪರವಾದಿ ಬಿಜ್ಜಳನ ತಂದೊಡ್ಡಿ, ಎನ್ನನು ಅವನೊಡನೆ ಹೋರಿಸಿ, ಮುನ್ನೂರ ಅರವತ್ತು ಸತ್ತ ಪ್ರಾಣವನೆತ್ತಿಸಿ, ಮೂವತ್ತಾರು ಕೊಂಡೆಯವ ಗೆಲಿಸಿ, ಎಂಬತ್ತೆಂಟು ಪವಾಡಂಗಳಂ ಕೊಂಡಾಡಿ, ಮತ್ರ್ಯಲೋಕದ ಮಹಾಗಣಂಗಳ ಒಕ್ಕುದನಿಕ್ಕಿ ಎನ್ನ ಸಲಹಿದಿರಿ. ನಿಮ್ಮ ಮಹಾಗಣಂಗಳು ಮೆಚ್ಚೆ, ಎನ್ನ ಸೂತಕವ ತೊಡೆದೆ ಪ್ರಭುದೇವರ ಕರುಣದಿಂದ

ಅಯ್ಯಾ, ಹಿಂದೆಯಾನು ಮಾಡಿದ ಮರಹಿಂದ ಬಂದೆನೀ ಭವದಲ್ಲಿ. Read More »

ಅಯ್ಯಾ, ಸಜ್ಜನ ಸದ್ಭಾವರ ಸಂಗದಿಂದ

ಅಯ್ಯಾ, ಸಜ್ಜನ ಸದ್ಭಾವರ ಸಂಗದಿಂದ ಮಹಾನುಭಾವರ ಕಾಣಬಹುದಯ್ಯಾ. ಮಹಾನುಭಾವರ ಸಂಗದಿಂದ ಶ್ರೀಗುರುವನರಿಯಬಹುದು, ಲಿಂಗವನರಿಯಬಹುದು, ಜಂಗಮವನರಿಯಬಹುದು, ಪ್ರಸಾದವನರಿಯಬಹುದು, ತನ್ನ ತಾನರಿಯಬಹುದು. ಇದು ಕಾರಣ ಸದ್ಭಕ್ತರ ಸಂಗವನೆ ಕರುಣಿಸು ಕೂಡಲಸಂಗಮದೇವಾ, ನಿಮ್ಮ ಧರ್ಮ.

ಅಯ್ಯಾ, ಸಜ್ಜನ ಸದ್ಭಾವರ ಸಂಗದಿಂದ Read More »

ಅಯ್ಯಾ, ಮರದೊಳಗೆ ಅಗ್ನಿ ಇದ್ದಡೇನಯ್ಯಾ,

ಅಯ್ಯಾ, ಮರದೊಳಗೆ ಅಗ್ನಿ ಇದ್ದಡೇನಯ್ಯಾ, ಮಥನಿಸಿ ತೋರುವರಿಲ್ಲದನ್ನಕ್ಕರ ಕಾಣಬಹುದೆ ಜಗದೊಳಗೆ ಕೂಡೆ ಪರಿಪೂರ್ಣ ಶಿವನೆಂದಡೆ ಅಂತರಂಗದಲ್ಲಿ ಕಾಣಬಹುದೆ ಆದಿ ಲಿಂಗ ಅನಾದಿ ಶರಣನ ಭೇದವ ತಿಳುಹಿ, ನಿಜಪ್ರಾಣದೊಳಗಿಪ್ಪ ಸುಜ್ಞಾನಲಿಂಗವ ಕರಸ್ಥಲಕ್ಕೆ ತಂದು, ಆ ಕರಸ್ಥಲದ ಲಿಂಗವನೆನ್ನ ಸರ್ವಾಂಗದೊಳಗೆ ಪ್ರತಿಷ್ಠಿಸಿ ತೋರಿ, ನಿತ್ಯ ನಿಜಲಿಂಗೈಕ್ಯವಹ ಹೊಲಬಿನ ಹರಿಬ ತೋರಿ, ಮತ್ರ್ಯಲೋಕದೊಳಗೆಲ್ಲಾ ಇಂದು ಮೊದಲಾಗಿ ಪ್ರಾಣಲಿಂಗದ ಘನವ ಹರಹಿ ಶಿವಭಕ್ತಿಯನುದ್ಧರಿಸಿದನು. ಕೂಡಲಸಂಗಮದೇವರಲ್ಲಿ, ಚೆನ್ನಬಸವಣ್ಣನೆನ್ನನಾಗುಮಾಡಿ ಉಳುಹಿದನಾಗಿಇನ್ನು ಮತ್ರ್ಯಲೋಕಕ್ಕೆ ಬಂದಡೆ ಚೆನ್ನಬಸವಣ್ಣನ ಪಾದದಾಣೆ.

ಅಯ್ಯಾ, ಮರದೊಳಗೆ ಅಗ್ನಿ ಇದ್ದಡೇನಯ್ಯಾ, Read More »

ಅಯ್ಯಾ, ನೀವೆನ್ನ ಬಲ್ಲಿರಲ್ಲದೆ ನಾ ನಿಮ್ಮ

ಅಯ್ಯಾ, ನೀವೆನ್ನ ಬಲ್ಲಿರಲ್ಲದೆ ನಾ ನಿಮ್ಮ ಬಲ್ಲೆನೆ ನಿಮ್ಮ ನಿಲವ ನೋಡಿಹೆನೆಂದಡೆ ನಿಮ್ಮ ಘನವೆನ್ನ ಮನಕ್ಕೆ ಸಾಧ್ಯವಾಗದ ಕಾರಣ, ಅಂತಿಂತೆಂದುಪಮಿಸಲಮ್ಮದೆ ಇದ್ದೆ ನೋಡಯ್ಯಾ, ನಿತ್ಯತೃಪ್ತಮಹಿಮಾ, ನಿಮಗೆಂದಳವಡಿಸಿದ ಪದಾರ್ಥವ ಸುಚಿತ್ತದಿಂದವಧರಿಸಿ ಸಲಹಯ್ಯಾ ಪ್ರಭುವೆ, ಕೂಡಲಸಂಗಮದೇವಾ.

ಅಯ್ಯಾ, ನೀವೆನ್ನ ಬಲ್ಲಿರಲ್ಲದೆ ನಾ ನಿಮ್ಮ Read More »

ಅಯ್ಯಾ, ನೀನು ನಿರಾಕಾರವಾಗಿರ್ದಲ್ಲಿ

ಅಯ್ಯಾ, ನೀನು ನಿರಾಕಾರವಾಗಿರ್ದಲ್ಲಿ ನಾನು ಜ್ಞಾನವೆಂಬ ವಾಹನವಾಗಿರ್ದೆ ಕಾಣಾ. ಅಯ್ಯಾ, ನೀನು ನಾಟ್ಯಕ್ಕೆ ನಿಂದಲ್ಲಿ ನಾನು ಚೈತನ್ಯವೆಂಬ ವಾಹನವಾಗಿರ್ದೆ ಕಾಣಾ. ಅಯ್ಯಾ, ನೀನು ಆಕಾರವಾಗಿರ್ದಲ್ಲಿ ನಾನು ವೃಷಭನೆಂಬ ವಾಹನವಾಗಿರ್ದೆ ಕಾಣಾ, ಅಯ್ಯಾ, ನೀನೆನ್ನ ಭವವ ಕೊಂದೆಹೆನೆಂದು ಜಂಗಮಲಾಂಛನವಾಗಿ ಬಂದಡೆ ನಾನು ಭಕ್ತನೆಂಬ ವಾಹನವಾಗಿರ್ದೆ ಕಾಣಾ ಕೂಡಲಸಂಗಮದೇವಾ.

ಅಯ್ಯಾ, ನೀನು ನಿರಾಕಾರವಾಗಿರ್ದಲ್ಲಿ Read More »

ಅಯ್ಯಾ, ನೀ ಒಲಿದಡೆ ತಿರಿವಂತೆ ಮಾಡುವಿರಿ,

ಅಯ್ಯಾ, ನೀ ಒಲಿದಡೆ ತಿರಿವಂತೆ ಮಾಡುವಿರಿ, ತಿರಿದಡೆ ನೀಡದಂತೆ ಮಾಡುವಿರಿ, ನೀಡಿದಡೆ ಅಕ್ಕಿ ಬೀಳುವಂತೆ ಮಾಡುವಿರಿ, ಬಿದ್ದಡೆ ನಾಯಿ ತಿಂಬಂತೆ ಮಾಡುವಿರಿ, ನಿಮ್ಮ ಧ್ಯಾನದಲಿ ನಾನಿಪ್ಪಂತೆ ಮಾಡುವಿರಿ ಕೂಡಲಸಂಗಮದೇವಾ.

ಅಯ್ಯಾ, ನೀ ಒಲಿದಡೆ ತಿರಿವಂತೆ ಮಾಡುವಿರಿ, Read More »

ಅಯ್ಯಾ, ನಿಮ್ಮ ಶರಣನ ಮತ್ರ್ಯಕ್ಕೆ ತಂದೆಯಾಗಿ

ಅಯ್ಯಾ, ನಿಮ್ಮ ಶರಣನ ಮತ್ರ್ಯಕ್ಕೆ ತಂದೆಯಾಗಿ ನೆನೆದು ಸುಖಿಯಾಗಿ ಆನು ಬದುಕಿದೆಯ್ಯಾ, ಅದೇನು ಕಾರಣ ತಂದೆಯೆಂದರಿದೆನಯ್ಯಾ, ಎನ್ನ ಕಾರಣ ತಂದೆಯೆಂದರಿದೆನಯ್ಯಾ, ಅರಿದರಿದು, ನಿಮ್ಮ ಶರಣನು ಆಚರಿಸುವ ಆಚರಣೆಯ ಕಂಡು ಕಣ್ದೆರೆದೆನಯ್ಯಾ, ಕೂಡಲಸಂಗಮದೇವಾ.

ಅಯ್ಯಾ, ನಿಮ್ಮ ಶರಣನ ಮತ್ರ್ಯಕ್ಕೆ ತಂದೆಯಾಗಿ Read More »

ಅಯ್ಯಾ, ನಿಮ್ಮ ಶರಣರು ಬಂದೆನ್ನ ಅಂಗಳದೊಳಗೆ

ಅಯ್ಯಾ, ನಿಮ್ಮ ಶರಣರು ಬಂದೆನ್ನ ಅಂಗಳದೊಳಗೆ ರಕ್ಷಿಸಿಹೆವೆಂದಿರಲು ನಾನು ತೆರಹು-ಮರಹಾಗಿರ್ದು ಕೆಟ್ಟೆನಯ್ಯಾ, ನಾನು ಕೆಟ್ಟ ಕೇಡಿಂಗೆ ಕಡೆಯಿಲ್ಲವಯ್ಯಾ. ಕೂಡಲಸಂಗಮದೇವಾ, ಎನ್ನ ಭಕ್ತಿ ಸಾವಿರ ನೋಂಪಿಯ ನೋಂತು ಹಾದರದಲ್ಲಿ ಅಳಿದಂತಾಯಿತ್ತಯ್ಯಾ.

ಅಯ್ಯಾ, ನಿಮ್ಮ ಶರಣರು ಬಂದೆನ್ನ ಅಂಗಳದೊಳಗೆ Read More »

ಅಯ್ಯಾ, ನಿಮ್ಮ ಶರಣರು ಪರಮಸುಖಿಗಳಯ್ಯಾ.

ಅಯ್ಯಾ, ನಿಮ್ಮ ಶರಣರು ಪರಮಸುಖಿಗಳಯ್ಯಾ. ಅಯ್ಯಾ, ನಿಮ್ಮ ಶರಣರು ಕಾಯವೆಂಬ ಕರ್ಮಕ್ಕೆ ಹೊದ್ದದ ನಿಷ್ಕರ್ಮಿಗಳಯ್ಯಾ. ಅಯ್ಯಾ, ನಿಮ್ಮ ಶರಣರು ಮನದಲ್ಲಿ ನಿರ್ಲೇಪಜ್ಞಾನಿಗಳಯ್ಯಾ. ಕೂಡಲಸಂಗಮದೇವಯ್ಯಾ, ನಿಮ್ಮ ಶರಣರ ಘನವನೆನಗೆ ಹೇಳಲು, ನಾನು ಕೇಳಲಮ್ಮದೆ ನಮೋ ನಮೋ ಎನುತಿರ್ದೆನು ಕಾಣಾ, ಪ್ರಭುವೆ.

ಅಯ್ಯಾ, ನಿಮ್ಮ ಶರಣರು ಪರಮಸುಖಿಗಳಯ್ಯಾ. Read More »

ಅಯ್ಯಾ, ನಿಮ್ಮ ಶರಣರ ಸಂಗಸುಖವ ಏನೆಂದುಪಮಿಸುವೆನಯ್ಯಾ,

ಅಯ್ಯಾ, ನಿಮ್ಮ ಶರಣರ ಸಂಗಸುಖವ ಏನೆಂದುಪಮಿಸುವೆನಯ್ಯಾ, ನಿಮ್ಮ ಶರಣರ ಕೂಡೆ ಸಮಗೋಷ್ಠಿಯ ಮಾಡುವುದನುಪಮಿಸಲಮ್ಮೆನಯ್ಯಾ. ಕೂಡಲಸಂಗಾ, ನಿಮ್ಮ ಪ್ರಮಥರೆಲ್ಲರೂ ನೆರೆದ ಗಣತಿಂಥಿಣಿಯೊಳಗೆನ್ನನೇನೆಂದರಿಯದೆ ಅಗಲದಂತಿರಿಸಯ್ಯಾ, ನಾ ನಿಮ್ಮ ಧರ್ಮದ ಕವಿಲೆ.

ಅಯ್ಯಾ, ನಿಮ್ಮ ಶರಣರ ಸಂಗಸುಖವ ಏನೆಂದುಪಮಿಸುವೆನಯ್ಯಾ, Read More »

ಅಯ್ಯಾ, ನಿಮ್ಮ ಶರಣರ ಸಂಗವೆನಗೆ ಪರಮಸುಖವಯ್ಯಾ,

ಅಯ್ಯಾ, ನಿಮ್ಮ ಶರಣರ ಸಂಗವೆನಗೆ ಪರಮಸುಖವಯ್ಯಾ, ಅಯ್ಯಾ, ನಿಮ್ಮ ಶರಣರ ಅಗಲಿಕೆ ಎನ್ನ ಪ್ರಾಣವಿಯೋಗವಯ್ಯಾ, ಶಿವಶಿವಾ ಸಂತವಿಡುವೆನು, ಇನ್ನೆಂತಯ್ಯಾ ಎನಗೇನು ಗತಿ, ಕೂಡಲಸಂಗಮದೇವಾ ನಿಮ್ಮ ಶರಣರ ಮುನಿಸು ಎನಗೆ ಬಿಡಿಸಬಾರದ ತೊಡಕು

ಅಯ್ಯಾ, ನಿಮ್ಮ ಶರಣರ ಸಂಗವೆನಗೆ ಪರಮಸುಖವಯ್ಯಾ, Read More »

ಅಯ್ಯಾ, ನಿಮ್ಮ ಶರಣರ ದಾಸೋಹಕ್ಕೆ

ಅಯ್ಯಾ, ನಿಮ್ಮ ಶರಣರ ದಾಸೋಹಕ್ಕೆ ತನುಮನಧನವಲಸದಂತೆ ಮಾಡಯ್ಯಾ, ತನು ದಾಸೋಹಕ್ಕೆ ಉಬ್ಬುವಂತೆ ಮಾಡಯ್ಯಾ, ಮನ ದಾಸೋಹಕ್ಕೆ ಲೀಯವಹಂತೆ ಮಾಡು, ಧನ ದಾಸೋಹಕ್ಕೆ ಸವೆದು ನಿಮ್ಮ ಶರಣರ ಪ್ರಸಾದದಲ್ಲಿ ನಿರಂತರ ಆಡಿ, ಹಾಡಿ, ನೋಡಿ, ಕೂಡಿ, ಭಾವಿಸಿ, ಸುಖಿಸಿ, ಪರಿಣಾಮಿಸುವಂತೆ ಮಾಡು ಕೂಡಲಸಂಗಮದೇವಾ.

ಅಯ್ಯಾ, ನಿಮ್ಮ ಶರಣರ ದಾಸೋಹಕ್ಕೆ Read More »

ಅಯ್ಯಾ, ನಿಮ್ಮ ಮಹಾನುಭಾವಿಗಳ ಸಂಗದಿಂದೆನ್ನ

ಅಯ್ಯಾ, ನಿಮ್ಮ ಮಹಾನುಭಾವಿಗಳ ಸಂಗದಿಂದೆನ್ನ ತನು ಶುದ್ಧವಾಯಿತ್ತು, ಮನ ಶುದ್ಧವಾಯಿತ್ತು, ಧನ ಶುದ್ಧವಾಯಿತ್ತು, ಎನ್ನ ಸರ್ವಾಂಗಶುದ್ಧವಾಯಿತ್ತು, ವಾರಿಕಲ್ಲ ಪುತ್ಥಳಿಯನಪ್ಪಿಕೊಂಡಂತಾಯಿತ್ತು. ಕೂಡಲಸಂಗಮದೇವಾ, ನಿಮ್ಮ ಶರಣ ಪ್ರಭುದೇವರ ಕೃಪೆಯಿಂದ ಎನಗೊದಗಿದ ಘನವನೇನೇಂದುಪಮಿಸುವೆ

ಅಯ್ಯಾ, ನಿಮ್ಮ ಮಹಾನುಭಾವಿಗಳ ಸಂಗದಿಂದೆನ್ನ Read More »

ಅಯ್ಯಾ, ನಿಮ್ಮ ದೇವರೆಂದು ನಂಬಿ ಪೂಜಿಸಲಾಗದಯ್ಯಾ :

ಅಯ್ಯಾ, ನಿಮ್ಮ ದೇವರೆಂದು ನಂಬಿ ಪೂಜಿಸಲಾಗದಯ್ಯಾ : ಮೀನಜ, ರೋಮಜ ಮಹಾಮುನಿಗಳ ಲಯವ ಮಾಡುವುದ ನಾ ಬಲ್ಲೆನಾಗಿ. ಅಯ್ಯಾ ನಿಮ್ಮ ದೇವರೆಂದು ನಂಬಿ ಪೂಜಿಸಲಾಗದಯ್ಯಾ : ನವಕೋಟಿಬ್ರಹ್ಮರಿಗೆ ಪ್ರಳಯವ ಮಾಡುವುದ ನಾ ಬಲ್ಲೆನಾಗಿ. ಅಯ್ಯಾ, ನಿಮ್ಮ ದೇವರೆಂದು ನಂಬಿ ಪೂಜಿಸಲಾಗದಯ್ಯಾ : ದಶಕೋಟಿ ನಾರಾಯಣರಿಗೆ ಮರಣವ ಮಾಡುವುದ ನಾ ಬಲ್ಲೆನಾಗಿ. ಅಯ್ಯಾ, ನಿಮ್ಮ ದೇವರೆಂದು ನಂಬಿ ಪೂಜಿಸಲಾಗದಯ್ಯಾ :ಅನಂತಕೋಟಿರುದ್ರರಿಗೆ ಲಯವ ಮಾಡುವುದ ನಾ ಬಲ್ಲೆನಾಗಿ. ಅಯ್ಯಾ, ನಿಮ್ಮ ದೇವರೆಂದು ನಂಬಿ ಪೂಜಿಸಲಾಗದಯ್ಯಾ : ಎನ್ನನೇಳೇಳು ಭವಕ್ಕೆ ತಂದಲ್ಲಿ,ಆನುಭಯಲಿಂಗಜಂಗಮದ

ಅಯ್ಯಾ, ನಿಮ್ಮ ದೇವರೆಂದು ನಂಬಿ ಪೂಜಿಸಲಾಗದಯ್ಯಾ : Read More »

ಅಯ್ಯಾ, ನಿಮ್ಮ ಅನುಭಾವದಿಂದ ಎನ್ನ ತನು ಹಾಳಾಯಿತ್ತಯ್ಯಾ,

ಅಯ್ಯಾ, ನಿಮ್ಮ ಅನುಭಾವದಿಂದ ಎನ್ನ ತನು ಹಾಳಾಯಿತ್ತಯ್ಯಾ, ಅಯ್ಯಾ, ನಿಮ್ಮ ಅನುಭಾವದಿಂದ ಎನ್ನ ಮನ ಹಾಳಾಯಿತ್ತಯ್ಯಾ, ಅಯ್ಯಾ, ನಿಮ್ಮ ಅನುಭಾವದಿಂದ ಎನ್ನ ಕರ್ಮಛೇದನವಾಯಿತ್ತಯ್ಯಾ, ನಿಮ್ಮವರು ಅಡಿಗಡಿಗೆ ಹೇಳಿ ಭಕ್ತಿಯೆಂಬೀ ಒಡವೆಯನು ದಿಟವ ಮಾಡಿ ತೋರಿದರು ಕಾಣಾ, ಕೂಡಲಸಂಗಮದೇವಾ.

ಅಯ್ಯಾ, ನಿಮ್ಮ ಅನುಭಾವದಿಂದ ಎನ್ನ ತನು ಹಾಳಾಯಿತ್ತಯ್ಯಾ, Read More »

ಅಯ್ಯಾ, ನಾನು ದಾಸೋಹವ ಮಾಡುವೆನಲ್ಲದೆ,

ಅಯ್ಯಾ, ನಾನು ದಾಸೋಹವ ಮಾಡುವೆನಲ್ಲದೆ, ಸಮಯವನರಿಯೆ, ಅಯ್ಯಾ, ನಾನು ಭಕ್ತಿಯ ಮಾಡುವೆನಲ್ಲದೆ, ಭಾವವನರಿಯೆ. ಸ್ಥಳಕುಳವ ವಿಚಾರಿಸಿದಡೆ, ಎನ್ನಲ್ಲಿ ಏನೂ ಹುರುಳಿಲ್ಲ, ನಿಮ್ಮ ಶರಣರ ಸೋಂಕಿನಲ್ಲಿ ಶುದ್ಧನಾದೆನು. ಕೂಡಲಸಂಗಮದೇವರು ಸಾಕ್ಷಿಯಾಗಿ, ಮಡಿವಾಳ ಮಾಚಿತಂದೆಗಳ ಶ್ರೀಪಾದಕ್ಕೆ ನಮೋ ನಮೋ ಎಂದು ಬದುಕಿದೆನು.

ಅಯ್ಯಾ, ನಾನು ದಾಸೋಹವ ಮಾಡುವೆನಲ್ಲದೆ, Read More »

ಅಯ್ಯಾ, ಕೊಟ್ಟ ಲಿಂಗವ ಮರಳಿ ಕೊಂಡು

ಅಯ್ಯಾ, ಕೊಟ್ಟ ಲಿಂಗವ ಮರಳಿ ಕೊಂಡು ಬಾ ಎಂದು ಎನ್ನನಟ್ಟಿದನಯ್ಯಾ ಶಶಿಧರನು ಮತ್ರ್ಯಕ್ಕೆ. ನಿಮ್ಮ ಮುಖದಿಂದ ಎನ್ನ ಭವ ಹರಿವುದೆಂದು ಹರಹಿಕೊಂಡಿದ್ದೆನಯ್ಯಾ ದಾಸೋಹವನು. ನಿಮ್ಮ ಬರವ ಹಾರಿ ಸವೆದವು ಒಂದನಂತ ದಿನಗಳು, ಇಂದೆನ್ನ ಪುಣ್ಯದ ಫಲದಿಂದ ಎನಗೆ ಗೋಚರವಾದಿರಿ, ಹಿಂದಣ ಸಂದೇಹ ಸೂತಕ ಹಿಂಗಿತ್ತು. ಎನ್ನ ಪ್ರಾಣಲಿಂಗವು ನೀವೇ ಆಗಿ, ಎನ್ನ ಸರ್ವಾಂಗಲಿಂಗದಲ್ಲಿ ಸನ್ನಿಹಿತವಾಗಿ, ಎನ್ನ ಚಿಂತೆಯ ನಿಶ್ಚಿಂತೆಯ ಮಾಡಾ ಕೂಡಲಸಂಗಮದೇವ ಪ್ರಭುವೆ.

ಅಯ್ಯಾ, ಕೊಟ್ಟ ಲಿಂಗವ ಮರಳಿ ಕೊಂಡು Read More »

ಅಯ್ಯಾ, ಏಳೇಳು ಜನ್ಮದಲ್ಲಿ ಶಿವಭಕ್ತನಾಗಿ ಬಾರದಿರ್ದಡೆ

ಅಯ್ಯಾ, ಏಳೇಳು ಜನ್ಮದಲ್ಲಿ ಶಿವಭಕ್ತನಾಗಿ ಬಾರದಿರ್ದಡೆ ನಿಮ್ಮಾಣೆ, ನಿಮ್ಮ ಪ್ರಮಥರಾಣೆ ! ನಿಮ್ಮ ಪ್ರಸಾದಕ್ಕಲ್ಲದೆ ಬಾಯ್ದೆರೆಯೆನಯ್ಯಾ. ಪ್ರಥಮಭವಾಂತರದಲ್ಲಿ ಶಿಲಾದನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು ನಿಮ್ಮ ಭೃತ್ಯನ ಮಾಡಿ ಎನನ್ನಿರಿಸಿಕೊಂಡಿರ್ದಿರಯ್ಯಾ. ಎರಡನೆಯ ಭವಾಂತರದಲ್ಲಿ ಸ್ಕಂದನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು ನಿಮ್ಮ ಕಾರುಣ್ಯವ ಮಾಡಿರಿಸಿಕೊಂಡಿರ್ದಿರಯ್ಯಾ. ಮೂರನೆಯ ಭವಾಂತರದಲ್ಲಿ ನೀಲಲೋಹಿತನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು ನಿಮ್ಮ ಲೀಲಾವಿನೋದದಿಂದಿರಿಸಿಕೊಂಡಿರ್ದಿರಯ್ಯಾ. ನಾಲ್ಕನೆಯ ಭವಾಂತರದಲ್ಲಿ ಮನೋಹರನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು ನಿಮ್ಮ ಮನಃಪ್ರೇರಕನಾಗಲೆಂದಿರಿಸಿಕೊಂಡಿರ್ದಿರಯ್ಯಾ. ಐದನೆಯ ಭವಾಂತರದಲ್ಲಿ ಕಾಲಲೋಚನನೆಂಬ ಗಣೇಶ್ವರನ ಮಾಡಿ,

ಅಯ್ಯಾ, ಏಳೇಳು ಜನ್ಮದಲ್ಲಿ ಶಿವಭಕ್ತನಾಗಿ ಬಾರದಿರ್ದಡೆ Read More »

ಅಯ್ಯಾ, ಎನ್ನ ಹೃದಯದಲ್ಲಿ ವ್ಯಾಪ್ತವಾಗಿಹ

ಅಯ್ಯಾ, ಎನ್ನ ಹೃದಯದಲ್ಲಿ ವ್ಯಾಪ್ತವಾಗಿಹ ಪರಮ ಚಿದ್ಬೆಳಗ ಹಸ್ತಮಸ್ತಕ ಸಂಯೋಗದಿಂದೊಂದುಗೂಡಿ ಮಹಾಬೆಳಗ ಮಾಡಿದಿರಲ್ಲಾ. ಅಯ್ಯಾ, ಎನ್ನ ಮಸ್ತಕದೊಳಗೊಂದುಗೂಡಿದ ಮಹಾಬೆಳಗ ತಂದು ಭಾವದೊಳಗಿಂಬಿಟ್ಟಿರಲ್ಲಾ, ಅಯ್ಯಾ, ಎನ್ನ ಭಾವದೊಳಗೆ ಕೂಡಿದ ಮಹಾಬೆಳಗ ತಂದು ಮನಸಿನೊಳಗಿಂಬಿಟ್ಟಿರಲ್ಲಾ. ಅಯ್ಯಾ, ಎನ್ನ ಮನಸಿನೊಳು ಕೂಡಿದ ಮಹಾಬೆಳಗ ತಂದು ಕಂಗಳೊಳಗಿಂಬಿಟ್ಟಿರಲ್ಲಾ. ಅಯ್ಯಾ, ಎನ್ನ ಕಂಗಳೊಳು ಕೂಡಿದ ಮಹಾಬೆಳಗ ತಂದು ಕರಸ್ಥಲದೊಳಗಿಂಬಿಟ್ಟಿರಲ್ಲಾ. ಅಯ್ಯಾ, ಎನ್ನ ಕರಸ್ಥಲದಲ್ಲಿ ಥಳಥಳಿಸಿ ಬೆಳಗಿ ಹೊಳೆಯುತ್ತಿಪ್ಪ ಅಖಂಡತೇಜವನೆ ಇಷ್ಟಲಿಂಗವೆಂಬ ದೃಷ್ಟವ ತೋರಿ ನಿಶ್ಚಯವ ಶ್ರೋತ್ರದಲ್ಲಿ ಸೃಜಿಸಿದಿರಲ್ಲಾ. ಅಯ್ಯಾ, ಎನ್ನ ಶ್ರೋತ್ರದಲ್ಲಿ ಸೃಜಿಸಿದ ಸುಮಂತ್ರದೊಳಗೆ

ಅಯ್ಯಾ, ಎನ್ನ ಹೃದಯದಲ್ಲಿ ವ್ಯಾಪ್ತವಾಗಿಹ Read More »

ಅಯ್ಯಾ, ಎನ್ನ ಕಾಯದಲ್ಲಿ ಮಡಿವಾಳನ ತೋರಿದ,

ಅಯ್ಯಾ, ಎನ್ನ ಕಾಯದಲ್ಲಿ ಮಡಿವಾಳನ ತೋರಿದ, ಎನ್ನ ಮನದಲ್ಲಿ ತನ್ನ ನಿಲವ ತೋರಿದ, ಎನ್ನ ಅರಿವಿನಲ್ಲಿ ನಿಮ್ಮ ತೋರಿದ, ಇಂತೀ ತ್ರಿವಿಧಸ್ವಾಯತವನು ಎನ್ನ ಸರ್ವಾಂಗದಲ್ಲಿ ಪ್ರತಿಷ್ಠಿಸಿ ತೋರಿದ. ಕೂಡಲಸಂಗಮದೇವಯ್ಯಾ, ಚೆನ್ನಬಸವಣ್ಣನ ಕರುಣದಿಂದ ಮಡಿವಾಳನೆಂಬ ಪರುಷ ಸಾಧ್ಯವಾಯಿತ್ತೆನಗೆ.

ಅಯ್ಯಾ, ಎನ್ನ ಕಾಯದಲ್ಲಿ ಮಡಿವಾಳನ ತೋರಿದ, Read More »

ಅಯ್ಯಾ, ಅಯ್ಯಾ, ಎಂದು ಕರೆವುತ್ತಲಿದ್ದೇನೆ.

ಅಯ್ಯಾ, ಅಯ್ಯಾ, ಎಂದು ಕರೆವುತ್ತಲಿದ್ದೇನೆ. ಅಯ್ಯಾ, ಅಯ್ಯಾ, ಎಂದು ಒರಲುತ್ತಲಿದ್ದೇನೆ. ಓ ಎನ್ನಲಾಗದೆ ಅಯ್ಯಾ ಆಗಳೂ ನಿಮ್ಮ ಕರೆವುತ್ತಲಿದ್ದೇನೆ ಮೋನವೇ ಕೂಡಲಸಂಗಮದೇವಾ.

ಅಯ್ಯಾ, ಅಯ್ಯಾ, ಎಂದು ಕರೆವುತ್ತಲಿದ್ದೇನೆ. Read More »

ಅಯ್ಯಾ ಎನಗೆ ರುದ್ರಾಕ್ಷಿಯೆ ಸರ್ವಪಾವನವು,

ಅಯ್ಯಾ ಎನಗೆ ರುದ್ರಾಕ್ಷಿಯೆ ಸರ್ವಪಾವನವು, ಅಯ್ಯಾ ಎನಗೆ ರುದ್ರಾಕ್ಷಿಯೆ ಸರ್ವಕಾರಣವು, ಅಯ್ಯಾ ಎನಗೆ ರುದ್ರಾಕ್ಷಿಯೆ ಸರ್ವಸಾಧನವು, ಅಯ್ಯಾ ಎನಗೆ ರುದ್ರಾಕ್ಷಿಯೆ ಸರ್ವಸಿದ್ಧಿ, ಅಯ್ಯಾ ಎನಗೆ ರುದ್ರಾಕ್ಷಿಯೆ ಸರ್ವಪಾಪಕ್ಷಯವು. ಅಯ್ಯಾ ನಿಮ್ಮ ಪಂಚವಕ್ತ್ರಂಗಳೆ ಪಂಚಮುಖದ ರುದ್ರಾಕ್ಷಿಗಳಾದವಾಗಿ, ಅಯ್ಯಾ ಕೂಡಲಸಂಗಮದೇವಯ್ಯಾ, ಎನ್ನ ಮುಕ್ತಿಪಥಕ್ಕೆ ಶ್ರೀಮಹಾರುದ್ರಾಕ್ಷಿಯೆ ಸಾಧನವಯ್ಯಾ.

ಅಯ್ಯಾ ಎನಗೆ ರುದ್ರಾಕ್ಷಿಯೆ ಸರ್ವಪಾವನವು, Read More »