Kanaka Dasa

ಎಂಥ ಕೀರುತಿ ಪೊತ್ತುವೆರಡು ಪಾದ

ಎಂಥ ಕೀರುತಿ ಪೊತ್ತುವೆರಡು ಪಾದ – ಶ್ರೀ-ಕಾಂತ ಬಾಡದ ರಂಗ ಕರುಣಿ ದೇವೋತ್ತುಂಗ ಕುಬ್ಜ ಬ್ರಾಹ್ಮಣನಾಗಿ ಕುಂಭಿನಿ ಈರಡಿ ಮಾಡಿಹೆಜ್ಜೆಯೊಳಡಗಿಟ್ಟ ಹೆಚ್ಚಿನ ಪಾದಅರ್ಜುನನ ಶಿರವ ಕಾಯಲು ಬಾಣದಿಂದ ರಥವಗುಜ್ಜೆಯಲೂರಿ ನೆಲಕೊತ್ತಿದ ಪಾದ ||1|| ಶಾಪದಿ ಬಹುಕಾಲ ಅಹಲ್ಯೆಯು ಶಿಲೆಯಾಗೆಆ ಪ್ರಾಣ ನಿರ್ಮಿಸಿದ ಅಧಿಕ ಪಾದಗೋಪಿ ಕಟ್ಟಿದ ಒರಳ ಗೊಲ್ಲಗೇರಿಗೆಳೆಯುತಆ ಫಣಿಯ ತಲೆಯ ಮೇಲಾಡಿದ ಪಾದ ||2|| ಕುರುರಾಯನೇಳದೆಯೆ ಕುಳಿತ ಸಿಂಹಾಸನದಿಉರುಳಿಸಿಬಿಟ್ಟಂತ ಉನ್ನತ ಪಾದಮರಕತ ನಗರಿಯ ಬಾಡ ಬಂಕಾಪುರದರಸು ಸಿರಿಯಾದಿಕೇಶವನ ಶ್ರೀಪಾದ||3||

ಎಂಥ ಕೀರುತಿ ಪೊತ್ತುವೆರಡು ಪಾದ Read More »

ಎಂತಹುದೊ ನಿನ್ನಯ ಭಕುತಿ

ಎಂತಹುದೊ ನಿನ್ನಯ ಭಕುತಿ ಎನಗೆ – ಶ್ರೀ-ಕಾಂತ ನಿನ್ನಯ ಒಲುಮೆಯಿಲ್ಲದ ಮೂಢಾತ್ಮನಿಗೆ ಹಿಂದೆ ಮಾಡಿದ ಸುಕೃತ ಫಲವು ಮೊದಲಿನಿತಿಲ್ಲಇಂದು ಬಂದಡೆ ಒಳ್ಳೆ ಮತಿಯ ಕೊಡಲಿಲ್ಲಸಂದ ವಯಸನು ತಿಳಿದು ಕುಂದುತಿದೆ ಎನ್ನ ಮನ-ದಂಧಕಾರವ ಬಿಡಿಸಿ ಹೊಂದಿಸು ಜ್ಞಾನವನು ||1|| ವೇದಶಾಸ್ತ್ರ ಶಬ್ದ ತರ್ಕ ಮೀಮಾಂಸೆಗಳಓದಿದವನಲ್ಲ ನಿನ್ನಯ ಭಕುತಿಗಧಿಕವಾದ ಇನ್ನೊಂದೇನನುಸುರುವೆನು ನಾ ಮುನ್ನ ಸಂ-ಪಾದಿಸುವ ಭಕುತಿ ಇನ್ನೆಂತಿಹುದೊ ದೇವ ||2|| ಹುಟ್ಟಿದ ಮೊದಲುಗೊಂಡು ಇಂದು ಪರಿಯಂತರವುಭ್ರಷ್ಟನಾಗಿ ಪರರ ಸೇವೆಯಿಂದಿರುತಿಹೆನುಇಷ್ಟಲ್ಲದಿನ್ನೆನಗೆ ತೃಪ್ತಿ ಇನ್ನೆಂತಹುದೀಕಷ್ಟ ಶರೀರದೊಳು ತೊಳಲಲಾರೆನು ಹರಿಯೆ ||3|| ನರಜನ್ಮವೆಂಬ ಪಾತಕದ ಪಂಜರದೊಳಗೆಸ್ಥಿರವೆಂಬೊ ಅಹಂಕೃತಿ ಜೀವನವ ನಿರ್ಮಿಸಿಎರವಿನ

ಎಂತಹುದೊ ನಿನ್ನಯ ಭಕುತಿ Read More »

ಊರಿಗೆ ಬಂದರೆ ದಾಸಯ್ಯ

ಊರಿಗೆ ಬಂದರೆ ದಾಸಯ್ಯ – ನಮ್ಮಕೇರಿಗೆ ಬಾ ಕಂಡ್ಯ ದಾಸಯ್ಯ ಕೈಲಿ ಕೋಲು ಕೊಳಲು ದಾಸಯ್ಯಕಲ್ಲಿಗೆ ವರವಿತ್ತೆ ದಾಸಯ್ಯಮಲ್ಲನ ಮರ್ದಿಸಿ ಮಾವನ ಮಡುಹಿದನೀಲಮೇಘಶ್ಯಾಮ ದಾಸಯ್ಯ ||1|| ಕೊರಳೊಳು ವನಮಾಲೆ ದಾಸಯ್ಯ – ಬಲುಗಿರಿಯನು ನೆಗಹಿದೆ ದಾಸಯ್ಯಇರುಳು ಹಗಲು ನಿನ್ನ ಕಾಣದೆ ಇರಲಾರೆಮರುಳು ಮಾಡುವಂಥ ದಾಸಯ್ಯ|| 2|| ಆದಿನಾರಾಯಣ ದಾಸಯ್ಯಮೋದದೊಂದು ಸಾಸಿರ ನಾಮದ ದಾಸಯ್ಯಮೇದಿನಿಯೊಳು ಪುಟ್ಟಿ ಗೋವ್ಗಳ ಕಾಯ್ದಆದಿಕೇಶವರಾಯ ದಾಸಯ್ಯ||3||

ಊರಿಗೆ ಬಂದರೆ ದಾಸಯ್ಯ Read More »

ಈತನೇನೆ ನಿನ್ನ ಮಗನು

ಈತನೇನೆ ನಿನ್ನ ಮಗನು ಸೀತಾಪತಿ ರಘುನಾಥನೆಂಬವನು ವ್ಯಾಸನ ಜನನಿಯ ವಾಸನೆ ತಾಳ್ದನುದೇಶದೊಳಗೆ ಬಲು ಪೆಸರುಳ್ಳವನುನಾಸದೊಳೊರ್ವನ ಪೊತ್ತು ಮುರಿದು ಮು-ನೀಶರ ಶಾಪವ ಪಿಡಿದು ಕೊಂದಾತನು ||1|| ಆನೆವಾಹನ ಪಿತನ ತಾಯನಳೆದೋನುಭಾನುಸುತಗೆ ಶಾಪವಿತ್ತವನುಕಾನನ ಜನನಿಯ ಕೊಂದು ಪ್ರಿಯದಲಿ ನಿ-ಧಾನದಿ ಶರಧಿ ಶಯನ ಮಾಡಿದಾತನು|| 2|| ಮೂಗ್ರಾಮ ಮುರಿದು ವಾಜಿಯನೇರಿದಾತನುಸಾಗ್ರದಿಂದಿಳೆಯ ಭಾಗ್ಯ ಹಿಂಗಿಸಿದಯೋಗ್ಯದಿಂದ ಬಳಪತಿತನವನಿಗೆಭಾಗ್ಯವಿತ್ತ ಕಾಗಿನೆಲೆಯಾದಿಕೇಶವ ||3||

ಈತನೇನೆ ನಿನ್ನ ಮಗನು Read More »

ಈತನೀಗ ವಾಸುದೇವನು

ಈತನೀಗ ವಾಸುದೇವನು ಲೋಕದೊಡೆಯ ಈತನೀಗ ವಾಸುದೇವನು ಈತನೀಗ ವಾಸುದೇವನೀ ಸಮಸ್ತ ಲೋಕದೊಡೆಯ ದೂತಗೊಲಿದು ತೇರನೇರಿ ತೇಜಿ ಪಿಡಿದು ನಡೆಸಿದಾತ ದನುಜೆಯಾಳ್ದನಣ್ಣನಯ್ಯನ ಪಿತನ ಮುಂದೆ ಕೌರವೇಂದ್ರನನುಜೆಯಾಳಿದವನ ಶಿರವ ಕತ್ತರಿಸುತ – ತನ್ನಅನುಜೆಯಾಳಿದವನ ಬೆಂಕಿ ಮುಟ್ಟದಂತೆ ಕಾಯ್ದ ರುಕ್ಮನನುಜೆಯಾಳಿದವನ ಮೂರ್ತಿಯನ್ನು ನೋಡಿರೊ||1|| ನರನ ಸುತನರಣ್ಯದಲ್ಲಿ ಗಿರಿಯೊಳ್ನಿಂತು ತನ್ನ ರೋಷದಿಶರಗಳನ್ನು ತೀಡುತಿಪ್ಪನ ಯೋಚಿಸಿಭರದಲವನ ಕರೆದು ಕುರುಹು ತೋರಿ ಪತ್ರವನ್ನು ಹಾರಿಸಿದವನಶಿರವನ್ನು ಛೇದಿಸಿದ ದೇವ ಕಾಣಿರೊ ||2|| ಸೃಷ್ಟಿಕರ್ತಗೆ ಮಗನಾದವನಿಗಿಷ್ಟ ಭೂಷಣ ಅಶನವಾದನನಿಷ್ಠ ಪುತ್ರಗೆ ವೈರಿ ತೊಡೆಯ ಛೇದಿಸೆಂದು ಬೋಧಿಸಿಕಷ್ಟವನ್ನು ಕಳೆದು ಭಕ್ತರಿಷ್ಟವನ್ನು ಕಾದ ಉ-ತ್ಕಷ್ಟ

ಈತನೀಗ ವಾಸುದೇವನು Read More »

ಈ ಸಿರಿಯ ನಂಬಿ ಹಿಗ್ಗಲು ಬೇಡ ಮನವೆ

ಈ ಸಿರಿಯ ನಂಬಿ ಹಿಗ್ಗಲು ಬೇಡ ಮನವೆ ವಾಸುದೇವನ ಭಜಿಸೊ ಒರಟು ಜೀವನವೆ ನೆಂಟರೂರಿಗೆ ಹೋಗಿ ನಾಲ್ಕು ದಿವಸವಿದ್ದರೆಎಂಟು ದಿನದಾಯಾಸ ಅಟ್ಟಬಹುದೊಉಂಟು ಸೌಭಾಗ್ಯವೆಂಬ ಧೈರ್ಯವ ಬಿಟ್ಟು ವೈ-ಕುಂಠವಾಸಿಯ ಭಜಿಸೊ ತುಂಟ ಜೀವನವೆ||1|| ಮಡದಿ ಮಕ್ಕಳು ಎಂಬ ಮಾಯಾ ಸಂಸಾರಕ್ಕೆಸಡಗರವಗೊಂಡು ಬರಿದೆ ಭ್ರಮಿಸಲೇಕೆಬಿಡದೆ ಯಮನಾಳುಗಳು ಬಾರೆಂದು ಎಳೆವಾಗಮಡದಿ ಮಕ್ಕಳು ಬಹರೆ ಭಂಡ ಜೀವನವೆ||2|| ಇಷ್ಟ ಸಂಪತ್ತನ್ನು ಬಡವರಾ ಕರೆತಂದುಕೊಟ್ಟು ಮಾಡಿದ ಪುಣ್ಯಫಲ ತನ್ನದೊಸೃಷ್ಟಿಯೊಳು ಕಾಗಿನೆಲೆಯಾದಿಕೇಶವನಂಘ್ರಿಮುಟ್ಟಿ ಮನದಲಿ ಭಜಿಸೊ ಭ್ರಷ್ಟಜೀವನವೆ||3||

ಈ ಸಿರಿಯ ನಂಬಿ ಹಿಗ್ಗಲು ಬೇಡ ಮನವೆ Read More »

ಈ ಪರಿಯ ಸೊಬಗಾವ ದೇವರಲಿ ನಾ ಕಾಣೆ

ಈ ಪರಿಯ ಸೊಬಗಾವ ದೇವರಲಿ ನಾ ಕಾಣೆಗೋಪಿದೇವಿಯ ತನಯ ಗೋಪಾಲ ಬಾಲಗಲ್ಲದೆ ದೊರೆಯ ತನದಲಿ ನೋಡೆ ಧರಣಿ ಜಾತೆಯ ರಮಣಸಿರಿಯ ತನದಲಿ ನೋಡೆ ಶ್ರೀಕಾಂತನುಹಿರಿಯ ತನದಲಿ ನೋಡೆ ಸರಸಿಜೋದ್ಭವನ ಪಿತನುಗುರುವು ತನದಲಿ ನೋಡೆ ಆದಿಗುರುವು ||1|| ಪಾವನತ್ವದಿ ನೋಡೆ ದೇವಿ ಗಂಗಾಜನಕದೇವತ್ವದಲಿ ನೋಡೆ ದಿವಿಜರೊಡೆಯಲಾವಣ್ಯದಲಿ ನೋಡೆ ಲೋಕ ಮೋಹನ ಪಿತನುಜವ ಧೈರ್ಯದಲಿ ನೋಡೆ ಅಸುರಾಂತಕ||2|| ಗಗನದಲಿ ಸಂಚರಿಪ ವೈನತೇಯ ವಾಹನಜಗವನು ಪೊತ್ತಿರ್ಪ ಶೇಷ ಶಯನಕಾಗಿನೆಲೆಯಾದಿಕೇಶವರಾಯಗಲ್ಲದೆಮಿಗಿಲು ದೈವಗಳಿಗೀ ಭಾಗ್ಯಮುಂಟೆ ||3||

ಈ ಪರಿಯ ಸೊಬಗಾವ ದೇವರಲಿ ನಾ ಕಾಣೆ Read More »

ಇಷ್ಟು ದಿನ ಈ ವೈಕುಂಠ

ಇಷ್ಟು ದಿನ ಈ ವೈಕುಂಠಎಷ್ಟು ದೂರವೊ ಎನ್ನುತಲಿದ್ದೆದೃಷ್ಟಿಯಿಂದಲಿ ನಾನು ಕಂಡೆಸೃಷ್ಟಿಗೀಶನೆ ಶ್ರೀರಂಗಶಾಯಿ ಎಂಟು ಏಳನು ಕಳೆದುದರಿಂದತುಂಟರೈವರ ತುಳಿದುದರಿಂದಕಂಟಕನೊಬ್ಬನು ಅಳಿದುದರಿಂದಭಂಟನಾಗಿ ಬಂದೇ ಶ್ರೀರಂಗಶಾಯಿ||1|| ವನ ಉಪವನಗಳಿಂದಘನ ಸರೋವರಗಳಿಂದಕನಕ ಗೋಪುರಗಳಿಂದಘನಶೋಭಿತನೆ ಶ್ರೀರಂಗಶಾಯಿ||2|| ವಜ್ರವೈಢೂರ್ಯ ತೊಲೆಗಳ ಕಂಡೆಪ್ರಜ್ವಲಿಪ ಮಹಾದ್ವಾರವ ಕಂಡೆನಿರ್ಜರಾದಿ ಮುನಿಗಳ ಕಂಡೆದುರ್ಜನಾಂತಕ ಶ್ರೀರಂಗಶಾಯಿ|| 3|| ರಂಭೆ ಊರ್ವಶಿ ಮೇಳವ ಕಂಡೆತುಂಬುರು ನಾರದರ ಕಂಡೆಅಂಬುಜೋದ್ಭವ ಪ್ರಮುಖರ ಕಂಡೆಶಂಬರಾರಿ ಪಿತನೆ ಶ್ರೀರಂಗಶಾಯಿ||4|| ನಾಗಶಯನನ ಮೂರುತಿ ಕಂಡೆಭೋಗಿ ಭೂಷಣ ಶಿವನನು ಕಂಡೆಭಾಗವತರ ಸಮ್ಮೇಳವ ಕಂಡೆಕಾಗಿನೆಲೆಯಾದಿಕೇಶವ ಶ್ರೀರಂಗಶಾಯಿ ||5||

ಇಷ್ಟು ದಿನ ಈ ವೈಕುಂಠ Read More »

ಇರಬಂದುದಿಲ್ಲ ಸಂಸಾರ

ಇರಬಂದುದಿಲ್ಲ ಸಂಸಾರ – ಇದನರಿತುಸಿರಿಹರಿಯ ಭಜಿಸುವುದು ಸಾರ ಧರೆಯನಾಳಿದ ತ್ರಿಶಂಕು ದೊರೆಯು ತಾನೆಲ್ಲಿಹರಿಶ್ಚಂದ್ರ ಮೊದಲಾದ ಚಕ್ರವರ್ತಿಗಳೆಲ್ಲಿಶರಧಿ ಮಧ್ಯದೊಳಿದ್ದ ರಾವಣಾಸುರನೆಲ್ಲಿಸಿರಿಯುಳ್ಳ ಕೌರವರು ಪಾಂಡವರು ತಾವೆಲ್ಲಿಧರೆಗಿಳಿದು ಪೋದಾತ ವಾಲಿಯು ತಾನೆಲ್ಲಿಸುರರೊಡನೆ ಹೋರಿದಾ ಬಲಿಯು ತಾನೆಲ್ಲಿ ||1|| ದಶರಥ ಮೊದಲು ಷೋಡಶ ರಾಯರುಗಳೆಲ್ಲಿಅಸಹಾಯ ಶೂರ ವೀರ ವಿಕ್ರಮರೆಲ್ಲಿಅಸಮಬಲ ವಸುಮತಿಯ ಹಿರಣ್ಯಾಕ್ಷನೆಲ್ಲಿವಸುಧೆಯೊಳಗಿದ್ದ ಹದಿನಾರು ಸಾವಿರರೆಲ್ಲಿಕುಸುಮ ಬಾಣನ ಪಡೆದ ದೇವ ತಾನೆಲ್ಲಿಸುಶರೀರ ಎನಿಸಿದ ಅಭಿಮನ್ಯು ತಾನೆಲ್ಲಿ ||2|| ಈ ಪರಿಯೆ ಈ ಧರೆಯನಾಳಿ ಹೋದವರೆಷ್ಟುಈ ಪರಿಯೆ ಸ್ವರ್ಗಕ್ಕೆ ಇಂದ್ರಾದಿಗಳು ಎಷ್ಟುಈ ಪರಿಯೆ ಹರಬ್ರಹ್ಮರಾದವರು ತಾವೆಷ್ಟುಈ ಪರಿಯೆ

ಇರಬಂದುದಿಲ್ಲ ಸಂಸಾರ Read More »

ಇದ್ದೀಯಾ ಶ್ರೀ ಹರಿ ನೀನೊಲಿದು

ಇದ್ದೀಯಾ ಶ್ರೀ ಹರಿ ನೀನೊಲಿದು ಬಂದಿದ್ದೀಯಾ ಇದ್ದೀಯಾ ಶ್ರೀಹರಿ ನೀನು – ವೃದ್ಧಿಸಿದ್ಧಿಯ ನಡುವೆ ಪದುಮನಾಭನು – ಅಭಿ-ವೃದ್ಧಿಯಾಗಲು ತಡವೇನು – ಅಹಬುದ್ಧಿಯಾಗಿ ಭಜಿಸುವ ಬಾಳುವೆಗೆ – ಸ-ಮೃದ್ಧಿಯಾಗಿ ಸರ್ವ ಸಿದ್ಧಿಯ ಕೊಡಲಾಗಿ ||1|| ನಂಬಿದ್ದ ಸುಜನರು ಹರಿಯೆ – ಕೆಟ್ಟದೆಂಬ ಸುದ್ದಿಯ ನಾನರಿಯೆ – ಸತ್ಕು-ಟುಂಬ ಎಂಬುದು ಹೊಸಪರಿಯೆ – ಅಹಬೆಂಬಲವಾಗಿ ಸಜ್ಜನರ ಸಲಹುವ ಕೃ-ಪಾಂಬುಧಿ ಮೂಜಗಕೊಲಿಯಲೋಸುಗ ಬಂದು ಉಲಿಯೆ||2|| ಶೇಷಗಿರೀಶ ಮದ್ಬಂಧು – ಆದಿಕೇಶವ ಗುರುವೆ ನೀನೆಂದು – ಕೃಷ್ಣಕ್ಲೇಶ ಬಿನ್ನೈಸುವೆ ಇಂದು – ಅಹಆಸೆ ಬಿಟ್ಟು

ಇದ್ದೀಯಾ ಶ್ರೀ ಹರಿ ನೀನೊಲಿದು Read More »

ಇಂದು ಸೈರಿಸಿರಿ ಶ್ರೀಕೃಷ್ಣನ ತಪ್ಪ

ಇಂದು ಸೈರಿಸಿರಿ ಶ್ರೀಕೃಷ್ಣನ ತಪ್ಪ ಮುಂದಕೆ ನಿಮ್ಮ ಮನೆಗೆ ಬಾರನಮ್ಮ ಮಗುವು ಬಲ್ಲುದೆ ಇಷ್ಟು ಬೆಣ್ಣೆಯ ಕದ್ದರೆಬಿಗಿಯ ಬಹುದೇ ಶ್ರೀ ಚರಣವನುಅಗಣಿತ ಮಹಿಮನ ಅಂಜಿಸಲೇಕಮ್ಮಬಗೆಯ ಬಾರದೆ ನಿಮ್ಮ ಮಕ್ಕಳಂತೆ ||1|| ಹಸುಮಗುವನು ಕಂಡು ಮುದ್ದಿಸಲೊಲ್ಲದೆಹುಸಿಗ ಕಳ್ಳನೆಂದು ಕಟ್ಟುವಿರಿವಸುಧೆಯೊಳಗೆ ನಾನೊಬ್ಬಳೆ ಪಡೆದೆನೆ ನಿಮ್ಮಹಸು ಮಗುವಿನಂತೆ ಭಾವಿಸಬಾರದೆ ||2|| ಎಷ್ಟು ಸಾರಿಯು ನಾ ಬೇಡವೆಂದರೆ ಕೇಳದುಷ್ಟ ಮಕ್ಕಳ ಕೂಡೆ ಒಡನಾಟವಕಟ್ಟಿದ ನೆಲುವಿನ ಬೆಣ್ಣೆಯನೀವೆನುಬಿಟ್ಟು ಕಳುಹಿರಮ್ಮ ಆದಿಕೇಶವನ ||3||

ಇಂದು ಸೈರಿಸಿರಿ ಶ್ರೀಕೃಷ್ಣನ ತಪ್ಪ Read More »

ಇಂದು ನೀ ಕರೆದು ತಾರೆ

ಇಂದು ನೀ ಕರೆದು ತಾರೆ – ಬಾರದೆ ಶ್ರೀಗೋ-ವಿಂದ ತಾ ಮುನಿದಿಹರೆ – ವಿರಹ ಬೇಗೆಯಲಿಬೆಂದು ಸೈರಿಸಲಾರೆ – ಸಖಿ, ನೀನು ತಂದು ತೋರೆ ನೊಂದರೂ ಮನದಾನಂದದಿಂದನಂದನಂದನನೆಂದು ಸೈರಿಸಿಎಂದಿಗೂ ಅಗಲಿರಲಾರೆ ಕರೆತಂದುಹೊಂದುಗೂಡಿಸೆ ಮಂದಗಮನೆ ಕಾಲಿಲ್ಲದಲೆ ಆಡಿದ – ವೇದ ತಂದಿತ್ತಕಾಲಿಲ್ಲದವನ ಪೊತ್ತ – ಅಮೃತ ತಂದಿತ್ತಕಾಲ ತೂಗಿ ನೋಡುತ್ತ – ಗಜಉನ್ಮತ್ತಕಾಲಿನಿಂದಲಿ ಕೊಲುವ ರೂಪದಿಕಾಲಿನಲಿ ರಿಪುವನು ಸೀಳಿದಕಾಲಿನಲಿ ತಾನಳೆದ ಮೇದಿನಿಕಾಲಿನಲಿ ನಡೆದ ಭಾರ್ಗವಕಾಲಿನಲಿ ವನವಾಸ ಪೋದನಕಾಲಿನಲಿ ಕಾಳಿಯನ ಮರ್ದಿಸಿದನಕಾಲಿನಲಿ ತ್ರಿಪುರರ ಗೆಲಿದನಕಾಲಿಗೆರಗುವೆ ತೇಜಿರೂಢನ ||1|| ಎವೆಯಿಕ್ಕದೆ ನೋಡಿದ – ತಲೆಯ ತಗ್ಗಿಸಿಕವಲು

ಇಂದು ನೀ ಕರೆದು ತಾರೆ Read More »

ಆವುದೊಳ್ಳೆಯದೊ ನಿನ್ನಂಗ ಚೆಲುವ

ಆವುದೊಳ್ಳೆಯದೊ ನಿನ್ನಂಗ – ಚೆಲುವದೇವ ಬಂಕಾಪುರದ ಲಕುಮಿ ನರಸಿಂಗ ಜಗದೊಳಗೆ ತಾನು ತಂದೆಯ ಮಾತು ಕೇಳದಾಮಗನು ಇಹ ಪರಕೆ ಸಲುವ ಪ್ರಾಜ್ಞನೆ ?ಬಗೆಗೊಳಿಸಿ ಪ್ರಹ್ಲಾದ ಪಿತನೊಡಲ ನಿನ್ನ ಕೂ-ರುಗುರಿನಿಂ ಬಗೆಸಿದಾತಂಗೆ ಮುಕುತಿಯನೀವೆ ||1|| ಪೊಡವಿಯೊಳು ಅಣ್ಣನಾಜ್ಞೆಯ ಮೀರಿ ನಡೆಯುತಿಹಒಡಹುಟ್ಟಿದವಗೆ ಕೈವಲ್ಯವುಂಟೆ ?ದೃಢದಲಿ ವಿಭೀಷಣಾಗ್ರಜನನ್ನು ಬಾಣದಲಿಕೆಡಹಿಸಿದ ಬಳಿಕವಗೆ ಸ್ಥಿರಪಟ್ಟ ಕಟ್ಟಿದೆ||2|| ರೂಢಿಯಲಿ ಗುರುದ್ರೋಹವನು ಮಾಡಿದವನ ಮೊಗನೋಡಿದಾಗಲೆ ಪ್ರಾಯಶ್ಚಿತ್ತವುಂಟುನೋಡಿದಾಗಲೆ ಬೃಹಸ್ಪತಿಸತಿಗೆ ಅಳುಪಿದನಸೂಡಿದಾತನ ಸ್ನೇಹವನು ಮಾಡಿಕೊಂಡಿರ್ಪೆ ||3|| ದೇಶದೊಳು ವಂಶಕಂಟಕರೆನಿಸಿದವರೊಳಗೆಭಾಷಣವ ಮಾಡಬಪ್ಪುದೆ ಪ್ರಾಜ್ಞರು ?ಬೇಸರಿಸದೆ ಕೌರವರ ಕೊಂದ ಪಾಂಡವರ ಸಂ-ತೋಷದಲಿ ಪಕ್ಷಿಕರ

ಆವುದೊಳ್ಳೆಯದೊ ನಿನ್ನಂಗ ಚೆಲುವ Read More »

ಆವ ಸಿರಿಯಲಿ ನೀನು ಎನ್ನ ಮರೆತೆ

ಆವ ಸಿರಿಯಲಿ ನೀನು ಎನ್ನ ಮರೆತೆದೇವ ಜಾನಕೀರಮಣ ಪೇಳು ರಘುಪತಿಯೆ ಸುರರ ಸೆರೆಯನು ಬಿಡಿಸಿ ಬಂದೆನೆಂಬಾ ಸಿರಿಯೆಕರಿ ಮೊರೆಯ ಲಾಲಿಸಿದೆನೆಂಬ ಸಿರಿಯೆಶರಧಿಗೆ ಸೇತುವೆಗಟ್ಟಿದೆನೆನ್ನುವಾ ಸಿರಿಯೆಸ್ಥಿರವಾಗಿ ಹೇಳೆನಗೆ ಹೇಳು ರಘುಪತಿಯೆ ||1|| ಕಡಲೊಳಗೆ ಮನೆಮಾಡಿ ಮಲಗಿದೆನೆಂಬಾ ಸಿರಿಯೆಮೃಢ ನಿನ್ನ ಸಖನಾದನೆಂಬ ಸಿರಿಯೆಬಿಡದೆ ದ್ರೌಪದಿ ಮಾನ ಕಾಯ್ದೆನೆಂಬಾ ಸಿರಿಯೆದೃಢವಾಗಿ ಹೇಳೆನಗೆ ದೇವಕೀ ಸುತನೆ||2|| ಭೂಮಿಯನು ಮೂರಡಿಯ ಮಾಡಿದೆನೆಂಬ ಸಿರಿಯೆಕಾಮ ನಿನ್ನ ಸುತನಾದನೆಂಬ ಸಿರಿಯೆಆ ಮಹಾಲಕುಮಿ ನಿನ್ನ ಸತಿಯಾದಳೆಂಬ ಸಿರಿಯೆಪ್ರೇಮದಲಿ ಹೇಳೆನಗೆ ಸ್ವಾಮಿ ಅಚ್ಯುತನೆ ||3|| ಮನುಜರೆಲ್ಲರು ನಿನ್ನ ಸ್ತುತಿಸುವರೆಂಬ ಸಿರಿಯೆಹನುಮ

ಆವ ಸಿರಿಯಲಿ ನೀನು ಎನ್ನ ಮರೆತೆ Read More »

ಆವ ಪರಿಯಲಿ ನಿಮ್ಮನೊಲಿಸಿ ಮೆಚ್ಚಿಪ

ಆವ ಪರಿಯಲಿ ನಿಮ್ಮನೊಲಿಸಿ ಮೆಚ್ಚಿಪ ವಿಧವುರವೆಯಷ್ಟು ತೋರದಲ್ಲ ದೇವ ದೇವೇಶ ನೀನೆಂದು ನಂಬಿರಲು ಕೃ-ಪಾವಲೋಕನದಿ ಸಲಹೊ ದೇವ ಫಣಿರಾಜನಾಸನದಿ ಕುಳಿತಿಹಗೆ ಅರಿವೆಯಾಸನವ ನಾನೆಂತ್ಹಾಸಲಿಘನವಾದ ಗಂಗೆಯನು ಪಡೆದವಗೆ ಕಲಶ ನೀರನದೆಂತು ಮೈಗೆರೆಯಲಿತನುವಿನ ಪರಿಮಳವು ಘಮಘಮಿಪನಿಗೆ ಸುಚಂದನವದೆಂತು ನಾ ಪೂಸಲಿಅನವರತ ನಾಭಿಯೊಳು ಶತಪತ್ರವಿಹಗೆ ಮಿಕ್ಕಿನ ಪೂವ ಮುಡಿಸಲೆಂತೈ ದೇವ|| 1|| ಸುರುಚಿರೋಜ್ವಲ ಪೀತವಾಸನಿಗೆ ಉಡುಗೊರೆಯಅರಿವೆಯೇನನು ಪೊದಿಸಲಿವರ ಕೌಸ್ತುಭವು ಕೊರಳೊಳಗೆ ಇಪ್ಪವಗೆ ಆ-ಭರಣವಾವುದ ತೊಡಿಸಲಿತರಣಿ ಶತಕೋಟಿತೇಜನ ಮುಂದೆ ಹ್ಯಾಗೆ ನಾ-ಪೆರತೊಂದು ದೀಪವಿಡಲಿನೆರಹಿದ ಫಣಿಪತಿಯ ಸ್ತೋತ್ರದೂರನ ನಾನುಸ್ಮರಿಪೆನೆಂತಯ್ಯ ದೇವ ದೇವ|| 2|| ವನಜಜಾಂಡ

ಆವ ಪರಿಯಲಿ ನಿಮ್ಮನೊಲಿಸಿ ಮೆಚ್ಚಿಪ Read More »

ಆವ ಕರ್ಮವೊ ಇದು ಆವ ಧರ್ಮವೊ

ಆವ ಕರ್ಮವೊ ಇದು ಆವ ಧರ್ಮವೊಆವ ಕರ್ಮವೆಂದರಿಯೆ, ಹಾರುವರಿವರು ಬಲ್ಲರೆ ಸತ್ತವನು ಎತ್ತ ಪೋದಸತ್ತು ತನ್ನ ಜನ್ಮಕೆ ಪೋದಸತ್ತವನು ಉಣ್ಣುವನೆಂದುನಿತ್ಯ ಪಿಂಡವಿಕ್ಕುತೀರಿ||1|| ಎಳ್ಳು ದರ್ಭೆ ಕೈಲಿ ಪಿಡಿದುಪಿತರ ತೃಪ್ತಿ ಪಡಿಸುತೀರಿಎಳ್ಳು ಮೀನು ನುಂಗಿ ಹೋಯಿತುದರ್ಭೆ ನೀರೊಳು ಹರಿದು ಹೋಯಿತು|| 2|| ಎಡಕೆ ಒಂದು ಬಲಕೆ ಒಂದುಎಡಕೆ ತೋರಿಸಿ ಬಲಕೆ ತೋರಿಸಿಕಡು ಧಾವಂತ ಪಡಿಸಿಕಟಿಯ ಹಸ್ತದೊಳಗೆ ಪಿಡಿಸುತೀರಿ|| 3|| ಮಂತ್ರಾಕ್ಷತೆಯ ಕೈಗೆ ಕೊಟ್ಟುಮೋಕ್ಷವನ್ನು ಹಾರೈಸುವಿರಿಮಂತ್ರವೆಲ್ಲೊ ಅಕ್ಷತೆಯೆಲ್ಲೊಮೋಕ್ಷವೆಲ್ಲೊ ಮತ್ರ್ಯವೆಲ್ಲೊ||4|| ಹೇಳುವವನು ಅವಿವೇಕಿಕೇಳುವವನು ಅಜ್ಞಾನಿಹೇಳುವ  ಕೇಳುವ ಇಬ್ಬರ ಸೊಲ್ಲಆದಿಕೇಶವಮೂರ್ತಿ ಬಲ್ಲ||5||

ಆವ ಕರ್ಮವೊ ಇದು ಆವ ಧರ್ಮವೊ Read More »

ಆರೂ ಸಮಯಕ್ಕೊದಗಲಿಲ್ಲ

ಆರೂ ಸಮಯಕ್ಕೊದಗಲಿಲ್ಲಮೋರೆ ನೋಡುತ ಸುಮ್ಮನಿಹರೆಲ್ಲ ಮಗಳು ಮಹಲಕುಮಿ ಮೊಮ್ಮಗನು ಸರಸಿಜಭವನುಖಗರಾಜವಾಹನನು ತನ್ನಳಿಯನುಅಗಜನಂದು ತನ್ನೊಡಲೊಳಿಂಬಿಟ್ಟು ಮೂ-ರ್ಬೊಗಸೆ ಮಾಡಿದ ಮುನಿಯ ಬಿಡಿಸಲಿಲ್ಲ||1|| ಶ್ರೀದೇವಿ ಭೂದೇವಿ ಮಾತೆಯರು ತಾವಿರಲುಯಾದವರಾಯ ಮೋಹದ ತಂದೆಯುವೇದಮುಖದಣ್ಣನಿರೆ ಉರಿ ನಯನದಿಂದ ಸ್ಮರಬೂದಿಯಾಗುವಾಗ ಬಿಡಿಸಲಿಲ್ಲವೇಕೆ||2|| ಪಿತನು ಸಾಗರನು ಹಿತದಾಕೆ ಶ್ರೀದೇವಿಅತಿ ಬೀಗನಾದವ ನಾರಾಯಣಜತೆ ಅಳಿಯರು ಬೊಮ್ಮಮನ್ಮಥರಿರಲಾಗಿಕ್ಷಿತಿಯೊಳಗೆ ಶಶಿ ಕ್ಷೀಣವಾಗುವ ಸಮಯದಿ ||3|| ತೆತ್ತೀಸ ಕೋಟಿ ದೇವರ್ಕಳು ತಾವಿರಲುಒತ್ತಿನಲಿ ಇಂದ್ರ ಉಪೇಂದ್ರರಿರಲುಮತ್ತೆ ಪಾರ್ವತಿ ಪುತ್ರ ವೀರೇಶ ದಕ್ಷನನೆತ್ತಿ ಹರಿಗಡಿವಾಗ ನೋಡುತಿಹರೆಲ್ಲ|| 4|| ಇಂಥಿಂಥ ದೊಡ್ಡವರು ಈ ಪಾಡು ಪಡಲಾಗಿಭ್ರಾಂತ ಮನುಜರಿಗೆ ಪೇಳಲಿನ್ನೆಷ್ಟುಕಂತುಪಿತ

ಆರೂ ಸಮಯಕ್ಕೊದಗಲಿಲ್ಲ Read More »

ಆರೂ ಸಂಗಡ ಬಾಹೋರಿಲ್ಲ 

ಆರೂ ಸಂಗಡ ಬಾಹೋರಿಲ್ಲ ನಾರಾಯಣ ನಾಮ ನೆರೆ ಬಾಹೋದಲ್ಲದೆ ಹೊತ್ತು ನವಮಾಸ ಪರಿಯಂತ ಗರ್ಭದಲಿಹೆತ್ತು ಅತ್ಯಂತ ನೋವು ಬೇನೆಗಳಿಂದಲಿತುತ್ತು ವಸ್ತ್ರವನಿಕ್ಕಿ ಸಲಹಿದಾ ತಾಯ್ತಂದೆಹೊತ್ತುಗಳೆವರಲ್ಲದೆ ಬೆನ್‍ಹತ್ತಿ ಬಹರೆ ||1|| ಗುರು ಬಂಧು ಬುಧ ಜನರು ನಿಂತಗ್ನಿ ಸಾಕ್ಷ್ಯಾಗಿಕರವಿಡಿದು ಧಾರೆಯನೆರೆಸಿಕೊಂಡತರುಣಿ ಇನಿಯನ ಹರಣ ಹೋಗಲು ತಾ ಕಂಡುಬರುವುದಕಂಜಿ ದಾರು ಗತಿಯೆಂದಳುವಳು||2|| ಮನೆ ಮಕ್ಕಳು ತಮ್ಮ ಧನಕೆ ಬಡಿದಾಡುವರುಧನಕಾಗಿ ನಿನ್ನನೆ ನಂಬಿದವರುಅನುಮಾನವೇಕೆ ಜೀವನು ತೊಲಗಿದಾಕ್ಷಣದಿಇನ್ನೊಂದು ಅರಗಳಿಗೆ ನಿಲ್ಲಗೊಡರು ||3|| ಸುತ್ತಲು ಕುಳ್ಳಿರ್ದ ಮಿತ್ರ ಬಾಂಧವರೆಲ್ಲಹೊತ್ತು ಹೋದೀತು ಹೊರಗೆ ಹಾಕೆನುವರುಹಿತ್ತಲಾ ಕಸಕಿಂತ ಅತ್ತತ್ತ ಈ ದೇಹಹೊತ್ತುಕೊಂಡೊಯ್ದು ಅಗ್ನಿಯಲಿ ಬಿಸುಡುವರು ||4|| ಹರಣ

ಆರೂ ಸಂಗಡ ಬಾಹೋರಿಲ್ಲ  Read More »

ಆರು ಹಿತವರು ಎಂದು ನಂಬಬೇಡ 

ಆರು ಹಿತವರು ಎಂದು ನಂಬಬೇಡ ಆರಿಗಾರಿಲ್ಲ ಆಪತ್ತು ಬಂದೊದಗಿದಡೆ ಜನಕ ಹಿತದವನೆಂದು ನಂಬಬಹುದೇ ಹಿಂದೆತನಯ ಪ್ರಹ್ಲಾದನಿಗೆ ಪಿತ ಮುನಿದನುಜನನಿ ರಕ್ಷಿಪಳೆಂಬೆನೇ ತಿಳಿತಿಳಿದು ಕುಂತಿತನಯ ರಾಧೇಯನಿಗೆ ಎರಡೆಣಿಸಿದ ಮೇಲೆ ||1|| ಮಗನು ತೆತ್ತಿಗನೆನಲೆ ಕಂಸ ತನ್ನಯ ಪಿತನನಿಗಳ ಬಂಧನದಿಂದ ಬಂಧಿಸಿದನುಜಗವರಿಯೆ ಸೋದರನು ಮಮತೆಯುಳ್ಳವನೆನಲೆಹಗೆವೆರಸಿ ವಾಲಿಯನು ಅನುಜ ಕೊಲಿಸಿದ ಮೇಲೆ||2|| ತನಗೆ ದೇಹಾನುಬಂಧಿಗಳೆ ಬಂಧುಗಳೆಂದುಮನದಿ ನಿಚ್ಚಳವಾಗಿ ನಂಬಬೇಡಘನ ಕೃಪಾನಿಧಿ ಕಾಗಿನೆಲೆಯಾದಿಕೇಶವನಅನುದಿನದಿ ನಂಬಿದವಗಿಹಪರದಿ ಸುಖವು|| 3||

ಆರು ಹಿತವರು ಎಂದು ನಂಬಬೇಡ  Read More »

ಆರು ಬಾಳಿದರೇನು ಆರು ಬದುಕಿದರೇನು

ಆರು ಬಾಳಿದರೇನು ಆರು ಬದುಕಿದರೇನುನಾರಾಯಣನ ಸ್ಮರಣೆ ನಮಗಿಲ್ಲದನಕ ಉಣ್ಣ ಬರದವರಲ್ಲಿ ಊರೂಟವಾದರೇನುಹಣ್ಣುಬಿಡದ ಮರಗಳು ಹಾಳಾದರೇನುಕಣ್ಣಿಲ್ಲದವಗಿನ್ನು ಕನ್ನಡಿಯಿದ್ದು ಫಲವೇನುಪುಣ್ಯವಿಲ್ಲದವನ ಪ್ರೌಢಿಮೆ ಮೆರೆದರೇನು ||1|| ಅಕ್ಕರಿಲ್ಲದವಗೆ ಮಕ್ಕಳಿದ್ದು ಫಲವೇನುಹೊಕ್ಕು ನಡೆಯದ ನಂಟತನದೊಳೇನುರೊಕ್ಕವಿಲ್ಲದವಗೆ ಬಂಧುಗಳು ಇದ್ದರೇನುಮರ್ಕಟನ ಕೈಯೊಳಗೆ ಮಾಣಿಕ್ಯವಿದ್ದರೇನು ||2|| ಅಲ್ಪ ದೊರೆಗಳ ಜೀತ ಎಷ್ಟು ಮಾಡಿದರೇನುಬಲ್ಪಂಥವಿಲ್ಲದವನ ಬಾಳ್ವೆಯೇನುಕಲ್ಪಕಲ್ಪಿತ ಕಾಗಿನೆಲೆಯಾದಿಕೇಶವನಸ್ವಲ್ಪವೂ ನೆನೆಯದ ನರನಿದ್ದರೇನು ||3||

ಆರು ಬಾಳಿದರೇನು ಆರು ಬದುಕಿದರೇನು Read More »

ಆರು ಬಲ್ಲರು ಹರಿಹರಾದಿಗಳ ಮಹಿಮೆಯನು

ಆರು ಬಲ್ಲರು ಹರಿಹರಾದಿಗಳ ಮಹಿಮೆಯನು ವಾರಿಜೋದ್ಭವ ಸುರೇಂದ್ರಾದಿಗಳಿಗಳವಲ್ಲ ಪೌರತ್ರಯವ ಗೆಲ್ವ ಸಮಯದಲಿ ತಪ ಮಾಡಿನಾರಾಯಣಾಸ್ತ್ರವನು ಪಡೆದನೀತಗೌರೀ ಮನೋಹರನ ಘನತರಾರ್ಚನೆಗೈದುಚಾರುತರ ಚಕ್ರವನು ಪಡೆದನಾ ಶೌರಿ ||1|| ಬಲಿಚಕ್ರವರ್ತಿ ಭಕ್ತಿಗೆ ಮೆಚ್ಚಿ ಅವನ ಬಾ-ಗಿಲ ಕಾಯ್ದನಚ್ಯುತನು ಅನುಗಾಲದಿಬಲು ಭುಜನು ಬಾಣಾಸುರನ ಗೃಹ ದ್ವಾರವನುಬಳಸಿ ಕಾಯ್ದನು ಹರನು ವರವ ತಾನಿತ್ತು ||2|| ಭೋಗಿಶಯನನು ಆಗಿ ಭೋಗಿಭೂಷಣನಾಗಿವಾಗೀಶನಾಗಿ ಸೃಷ್ಟಿಸ್ಥಿತಿಲಯಕ್ಕಾಗು ಕಾರಣ ಕಾರ್ಯ ಕರ್ಮಾದಿ ರೂಪಕ್ಕೆಕಾಗಿನೆಲೆಯಾದಿಕೇಶವನ ಮಹಿಮೆಯನು|| 3||

ಆರು ಬಲ್ಲರು ಹರಿಹರಾದಿಗಳ ಮಹಿಮೆಯನು Read More »

ಆರು ಬದುಕಿದರಯ್ಯ ಹರಿ ನಿನ್ನ ನಂಬಿ 

ಆರು ಬದುಕಿದರಯ್ಯ ಹರಿ ನಿನ್ನ ನಂಬಿ ತೋರು ಈ ಧರೆಯೊಳಗೆ ಒಬ್ಬರನು ಕಾಣೆ ಕೃಷ್ಣ ಕಲಹ ಬಾರದ ಮುನ್ನ ಕರ್ಣನೊಬ್ಬನ ಕೊಂದೆಸುಲಭದಲಿ ಕೌರವರ ಮನೆಯ ಮುರಿದೆನೆಲನ ಬೇಡಲು ಪೋಗಿ ಬಲಿಯ ಭೂಮಿಗೆ ತುಳಿದೆಮೊಲೆಯನುಣ್ಣಲು ಪೋಗಿ ಪೂತನಿಯ ಕೊಂದೆ ||1|| ಕರುಳೊಳಗೆ ಕತ್ತರಿಯನಿಟ್ಟೆ ಹಂಸಧ್ವಜನಸರಸದಿಂ ಮಗಳ ಗಂಡನ ಕೊಲಿಸಿದೆಮರುಳಿನಿಂದಲಿ ಪೋಗಿ ಭೃಗುಮುನಿಯ ಕಣ್ಣೊಡೆದೆಅರಿತು ನರಕಾಸುರನ ಹೆಂಡಿರನು ತಂದೆ||2|| ತಿರಿದುಂಬ ದಾಸರ ಕೈ ಕಪ್ಪ ಕೊಂಬ ಮರ್ಮತಿರುಮಲಾಚಾರ್ಯ ಶ್ರೀಗುರುವೆ ಬಲ್ಲವರ ಕಾಗಿನೆಲೆಯಾದಿಕೇಶವನ ಭಜಿಸಿದರೆತಿರಿವೆನೆಂದರು ತಿರುಪೆ ಕೂಳ್ ಪುಟ್ಟದೈ ಕೃಷ್ಣ||3||

ಆರು ಬದುಕಿದರಯ್ಯ ಹರಿ ನಿನ್ನ ನಂಬಿ  Read More »

ಆರಿಗಾರಿಲ್ಲ ಆಪತ್ಕಾಲದೊಳಗೆ 

ಆರಿಗಾರಿಲ್ಲ ಆಪತ್ಕಾಲದೊಳಗೆ ವಾರಿಜಾಕ್ಷನ ನಾಮ ನೆನೆ ಕಂಡ್ಯ ಮನವೆ ಹಸಿದು ಬಳಲುವಾಗ ಹಗೆ ಕೈಗೆ ಸಿಲುಕಿದಾಗದೆಸೆಗೆಟ್ಟು ಅಧಿಕ ವ್ಯಾಧಿಯಲಿ ಇರುವಾಗಅಸಮಾನನಾದಾಗ ಅತಿ ಭೀತಿಗೊಂಡಾಗಬಿಸಜನಾಭನ ನಾಮ ನೆನೆಕಂಡ್ಯ ಮನವೆ||1|| ಸಾಲದವರೆಳೆವಾಗ ಚಾಡಿ ಮಾತಿಗೆ ಭೂಪಘಳುಘುಳಿಸುತ ಕೋಪವನು ತೋರಿದಾಗಮೇಲು ತಾನರಿಯದಯೆ ನಿಂದೆ ಹೊಂದಿರುವಾಗನೀಲಮೇಘಶ್ಯಾಮನ ನೆನೆಕಂಡ್ಯ ಮನವೆ|| 2|| ಪಂಥದಲಿರುವಾಗ ಪದವಿ ತಪ್ಪಿರುವಾಗದಂತಿಮದವೇರಿ ಬೆನ್ನತ್ತಿದಾಗಕಂತುಪಿತ ಕಾಗಿನೆಲೆಯಾದಿಕೇಶವನ ನಿ-ಶ್ಚಿಂತೆಯಿಂದಲಿ ನೀನು ನೆನೆಕಂಡ್ಯ ಮನವೆ ||3||

ಆರಿಗಾರಿಲ್ಲ ಆಪತ್ಕಾಲದೊಳಗೆ  Read More »

ಆರಿಗಳವಲ್ಲಾತ್ಮ ಯೋಗ

ಆರಿಗಳವಲ್ಲಾತ್ಮ ಯೋಗ ಸಿದ್ಧಿಸೇರಿ ಸುಜ್ಞಾನಸವಿದುಂಬಗಲ್ಲದೆ ರಜಸು – ತಾಮಸವೆಂಬ ರಯವನೆಲ್ಲವ ಕಳೆದುಗಜ ಬಜಿಸುವ ಪಂಚಭೂತಗಳರಜನಿಗೆ ಸಿಲ್ಕದೆ ಪರಬ್ರಹ್ಮನ ಬಲುನಿಜವ ತಿಳಿಯಬಲ್ಲ ನಿರ್ವಾಣಗಲ್ಲದೆ|| 1|| ಭಿನ್ನ ಭೇದಗಳೆಂಬ ಬಲು ಸಂಶಯ ಕಳೆದುತನ್ನೊಳಗೆ ತಾ ತಿಳಿದು ತಾರಕಬ್ರಹ್ಮವಚೆನ್ನಾಗಿ ನೀ ನೋಡು ಚೆಲುವ ಕಂಗಳಿಂದತನ್ನಗ್ನಿಯೊಳಗಿರುವ ಪ್ರೌಢರಿಗಲ್ಲದೆ|| 2|| ಅಕಾರ ಉಕಾರ ಮಕಾರ ಎಂತೆಂಬಓಂಕಾರಕೆ ಕೂಡಿ ಎರಡಿಲ್ಲದಸಾಕಾರ ಕಾಗಿನೆಲೆಯಾದಿಕೇಶವನಆಕಾರದೊಡನಾಡುವರಿಗಲ್ಲದೆ ||3||

ಆರಿಗಳವಲ್ಲಾತ್ಮ ಯೋಗ Read More »

ಆನೆಯ ನೋಡಿರಯ್ಯ ನೀವೆಲ್ಲರು

ಆನೆಯ ನೋಡಿರಯ್ಯ ನೀವೆಲ್ಲರುಆನಂದ ಪಡೆಯಿರಯ್ಯ ತಾನು ತನ್ನವರೆಂಬ ಮಾನವರ ಸಲಹಿದ ಪಾಂಡು ಚಕ್ರೇಶನ ಸುತರಿಗೊಲಿದಾನೆಗಂಡುಗಲಿ ಮಾಗಧನ ಒರಸಿದಾನೆಹಿಂಡು ಗೋವಳರೊಳಗೆ ಹಿರಿಯನ ಕಳೆಯದಾನೆಲಂಡರಿಗೆ ಎದೆಗೊಡುವ ಪುಂಡಾನೆ ||1|| ಬಾಲಕನ ನುಡಿಗೇಳಿ ಖಳನ ಸೀಳಿದಾನೆಪಾಲುಂಡು ವಿದುರನ ಸಲಹಿದಾನೆಲೋಲಾಕ್ಷಿ ಮಾನಭಂಗಕ್ಕೊದಗಿದಾನೆಖೂಳ ಶಿಶುಪಾಲನನು ಸೀಳಿದಾನೆ||2|| ಅಜಮಿಳನಿಗೆ ನಿಜಪದವಿಯ ಕೊಟ್ಟಾನೆಕುಜನರೆಲ್ಲರನು ಒರಗಿಸಿದಾನೆಅಜಪಿತ ಕಾಗಿನೆಲೆಯಾದಿಕೇಶವಾನೆತ್ರಿಜಗವಲ್ಲಭ ತಾನು ಭಜಕರ ವಶವಾನೆ ||3||

ಆನೆಯ ನೋಡಿರಯ್ಯ ನೀವೆಲ್ಲರು Read More »