Kanaka Dasa

ಏನೆಂದು ಕೊಂಡಾಡಿ ಸ್ತುತಿಸಲೋ

ಏನೆಂದು ಕೊಂಡಾಡಿ ಸ್ತುತಿಸಲೋ ದೇವನಾನೇನು ಬಲ್ಲೆ ನಿನ್ನ ಮಹಿಮೆಗಳ ಮಾಧವ ಹರಿಮುಕುಂದನು ನೀನು ನರಜನ್ಮ ಹುಳು ನಾನುಪರಮಾತ್ಮನು ನೀನು ಪಾಮರನು ನಾನುಗರುಡ ಗಮನನು ನೀನು ಮರುಳು ಪಾಪಿಯು ನಾನುಪರಂಜ್ಯೋತಿಯು ನೀನು ದುರುಳ ತಿರುಕನು ನಾನು|| 1|| ವಾರಿಧಿಶಯನನಾದ ಕಾರುಣ್ಯನಿಧಿ ನೀನುಘೋರದಿಂದಿಹ ಕಾಮಿಕ್ರೋಧಿ ನಾನುಈರೇಳು ಭುವನದೊಳು ಇರುವ ಮೂರುತಿ ನೀನುದೂರಿ ನಿನ್ನನು ಬೈವ ದುಷ್ಟ ನಾನು||2|| ಅಣುರೇಣು ತೃಣಗಳಲಿ ಪರಿಪೂರ್ಣನು ನೀನುಕ್ಷಣಕ್ಷಣಕೆ ಅವಗುಣದ ಕುಕರ್ಮಿ ನಾನುವಾಣಿಯರಸನ ಪೆತ್ತ ವೈಕುಂಠಪತಿ ನೀನುಕ್ಷಣಭಂಗುರ ತನುವಿನ ಗೊಂಬೆ ನಾನು ||3|| ಕಂಬದಲಿ ಬಂದ ಆನಂದ ಮೂರುತಿ ನೀನುನಂಬಿಕೆಯಿಲ್ಲದ […]

ಏನೆಂದು ಕೊಂಡಾಡಿ ಸ್ತುತಿಸಲೋ Read More »

ಏನೆಂದಳೇನೆಂದಳೋ  ನಿನ್ನೊಳು ಸೀತೆ

ಏನೆಂದಳೇನೆಂದಳೋ ನಿನ್ನೊಳು ಸೀತೆ ಹನುಮಯ್ಯ ಜನಕನರಮನೆಯಲ್ಲಿ ಜನಿಸಿ ಸುಖದಲ್ಲಿರಲುಧನು ಮುರಿದು ಕೈಹಿಡಿದು ತನ್ನಘನ ಪದವಿಯನು ಬಿಟ್ಟು ವನವ ಸೇರಿದನೆಂದುವನಿತೆ ತಪಿಸುತೆ ಮನದಿ ನೊಂದು|| 1|| ಕುರುಹಿನುಂಗುರವನು ತರಳಾಕ್ಷಿಗಿತ್ತಾಗತಿರುಳಿಗಿಂತಧಿಕವೇ ಕರಟವೆಂದುಬೆರಳಿಂದ ಚಿಮ್ಮಿದಳೆ ಅಶೋಕವನದಾಚೆಗೆನಿರುತ ಸಂತಾಪದಲಿ ಮನದಿ ನೊಂದು ||2|| ಸೇತುವೆಯ ಕಟ್ಟಿ ಸಿಂಧುಗೆ ವಿಭೀಷಣಾಗ್ರಜಾತ ಲಂಕಾಧಿಪನ ವಧಿಸಿಸೀತೆಯನು ಸೆರೆಯಿಂದ ಬಿಡಿಸಿದ್ದೆ ಆದರೆನಾಥಾದಿಕೇಶವಗೆ ಬಲು ಬಿರುದು ಎಂದು||3||

ಏನೆಂದಳೇನೆಂದಳೋ  ನಿನ್ನೊಳು ಸೀತೆ Read More »

ಏನೆ ಮನವಿತ್ತೆ ಲಲಿತಾಂಗಿ

ಏನೆ ಮನವಿತ್ತೆ ಲಲಿತಾಂಗಿ ಅಸ-ಮಾನ ಗೋವಳ ಕುಲವಿಲ್ಲದವನೊಳು ಮಗಗೆ ಮೈದುನನಾದ ಮಗಳಿಗೆ ಪತಿಯಾದ ಮಗಳಿಗಳಿಯನಾದ ಅಳಿಯಗಳಿಯನಾದ ||1|| ಮಗಳ ಮಗಗೆ ಮೈದುನನಾಗಿ ಮಾವನಜಗವರಿಯಲು ಕೊಂದ ಕುಲಗೇಡಿ ಗೋವಳ ||2|| ಅತ್ತೆಗೆ ವಲ್ಲಭನಾದ ಭೃತ್ಯರಿಗಾಳಾದಚಿತ್ತ ಒಲಿದು ಚೆನ್ನ ಆದಿಕೇಶವನೊಳು ||3||

ಏನೆ ಮನವಿತ್ತೆ ಲಲಿತಾಂಗಿ Read More »

ಏನು ಮಾಡಲಯ್ಯ

ಏನು ಮಾಡಲಯ್ಯ ಬಯಲಾಸೆ ಬಿಡದು ಮಾನವ ಮೃಗೇಂದ್ರ ರಾಮಚಂದ್ರ ರಕ್ಷಿಸಯ್ಯ ಜ್ಯೋತಿರ್ಮಯವಾದ ದೀಪದ ಬೆಳಕಿಗೆ ತಾನುಕಾತರಿಸಿ ಬೀಳುವ ಪತಂಗದಂದದಲಿಧಾತುಗೆಟ್ಟು ಬೆಳ್ಳಿ ಬಂಗಾರದಲಿ ಮೆರೆವಧೂರ್ತೆಯರ ನೋಡುವೀ ಚಕ್ಷುರಿಂದ್ರಿಯಕೆ ||1|| ಅಂದವಹ ಸಂಪಗೆಯ ಅರಳ ಪರಿಮಳವುಂಡುಮುಂದುವರಿಯದೆ ಬೀಳ್ವ ಮಧುಪನಂತೆಸಿಂಧೂರ ಗಮನೆಯರ ಸಿರಿಮುಡಿಯೊಳಿಪ್ಪ ಪೂಗಂಧ ವಾಸಿಸುವ ಘ್ರಾಣೇಂದ್ರಿಯಕೆ ||2|| ಗಾಣದ ತುದಿಯೊಳಿಪ್ಪ ಭೂನಾಗನಂ ಕಂಡುಪ್ರಾಣಾಹುತಿಯೆಂದು ಸವಿವ ಮೀನಿನಂತೆಏಣಾಕ್ಷಿಯರ ಚೆಂದುಟಿಯ ಸವಿಯ ಸವಿಸವಿದುಜಾಣತನದಲಿ ನಲಿವ ಜಿಹ್ವೇಂದ್ರಿಯಕೆ ||3|| ದಿಮಿದಿಮ್ಮಿ ಘಣಘಣಾ ಎಂಬ ಘಂಟೆಯ ರವಕೆಜುಮುಜುಮನೆ ಬೆಮೆಗೊಳ್ಳುವ ಹರಿಣದಂತೆರಮಣಿಯರ ರಂಜಕದ ನುಡಿಗಳನು ಕೇಳಿ ಪ್ರ-ಣಮವೆಂದು

ಏನು ಮಾಡಲಯ್ಯ Read More »

ಏನು ಬರುವುದೊ ಸಂಗಡೇನು ಬರುವುದೊ 

ಏನು ಬರುವುದೊ ಸಂಗಡೇನು ಬರುವುದೊ ದಾನ ಧರ್ಮ ಮಾಡಿ ಬಹು ನಿಧಾನಿ ಎನಿಸಿಕೊಳ್ಳೊ ಮನುಜ ಹೆಂಡರಿಲ್ಲ ಮಕ್ಕಳಿಲ್ಲ ಮಂಡೆ ತುಂಬ ಬಂಧುಬಳಗಕಂಡು ಬಿಡಿಸಿಕೊಂಬರಾರೊ ದುಂಡ ಯಮನ ದೂತರೆಳೆಯೆಬಂಡಿ ತುಂಬ ಇದ್ದ ಧನವು ಹಿಂದೆ ಉಳಿವುದಲ್ಲೊ ನಿನ್ನಅಂಡಿಕೊಂಡು ಬರುವ ವಸ್ತು ಕೀರ್ತಿ ಅಪಕೀರ್ತಿ ಎರಡೆ||1|| ಎನ್ನದೆಂದು ತನ್ನದೆಂದು ಹೊನ್ನು ಹೆಣ್ಣು ಮಣ್ಣಿಗಾಗಿಬನ್ನಪಟ್ಟು ಬಾಯಿಬಿಡುವೆ ಬರಿದೆ ಮೋಹದಿಚೆನ್ನ ಮನದಿ ಪರಹಿತಾರ್ಥ ಮಾಡಿ ಪುಣ್ಯಪಡೆಯೊ ನೀನುಇನ್ನು ಮುಂದೆ ಕಿತ್ತು ತಿಂಬ ಕೂಪದಲ್ಲಿ ಕೆಡಲು ಬೇಡ ಮನುಜ||2|| ಬತ್ತಲಿಂದ ಬರುತ್ತಿಹರು ಬತ್ತಲಿಂದ ಹೋಗುತಿಹರುಕತ್ತಲೆ ಕಾಲವನು ಬೆಳಕು

ಏನು ಬರುವುದೊ ಸಂಗಡೇನು ಬರುವುದೊ  Read More »

ನು ಕಾರಣ ಬಾಯಿ ತೆರೆದಿ – ಪೇಳೆಲೊ

ಏನು ಕಾರಣ ಬಾಯಿ ತೆರೆದಿ – ಪೇಳೆಲೊದಾನವಾಂತಕ ಅಹೋಬಲ ನಾರಸಿಂಹನೆ ನಿಗಮ ಚೋರನ ಕೊಲಲು ತೆರೆದೆಯೋ ಈ ಬಾಯನಗವ ಬೆನ್ನಲಿ ಹೊತ್ತು ನಡುಗಿ ತೆರೆದೆಯೋ ಬಾಯ ಭೂ-ಮಿಗಳ್ಳನ ಕೊಂದು ಬಳಲಿ ತೆರೆದೆಯೋ ಬಾಯಜಗವರಿಯೆ ಪೇರುರವಿರಿದ ಪ್ರಹ್ಲಾದವರದಅಹೋಬಲ ನಾರಸಿಂಹನೆ||1|| ಬಲಿಯ ದಾನವ ಬೇಡಲೆಂದು ತೆರೆದೆಯೊ ಬಾಯಛಲದಿಂದ ಕ್ಷತ್ರಿಯರ ಕೊಲಲು ತೆರೆದೆಯೊ ಬಾಯಕುಲಸತಿಯ ಅರಸಿ ಕಾಣದೆ ತೆರೆದೆಯೊ ಬಾಯಮರೆತು ಮಾವನ ಕೊಂದು ನಿಂದೆ – ಇಂಥಇಳಿಯ ಬಾರದ ಭೂಮಿಗಿಳಿದ ನಾರಸಿಂಹ||2|| ನಾರಿಯರ ಚೆಲ್ವಿಕೆಯ ನೋಡಿ ತೆರೆದೆಯೊ ಬಾಯಏರಿ ಅಶ್ವವ ಮೆಟ್ಟಿ

ನು ಕಾರಣ ಬಾಯಿ ತೆರೆದಿ – ಪೇಳೆಲೊ Read More »

ಏನು ಇಲ್ಲದ ಎರಡು ದಿನದ ಸಂಸಾರ

ಏನು ಇಲ್ಲದ ಎರಡು ದಿನದ ಸಂಸಾರಜ್ಞಾನದಲ್ಲಿ ದಾನಧರ್ಮವ ಮಾಡಿರಯ್ಯ ಹಸಿದು ಬಂದವರಿಗೆ ಅಶನವೀಯಲು ಬೇಕುಶಿಶುವಿಗೆ ಪಾಲ್ಬೆಣ್ಣೆಯನುಣಿಸಬೇಕುಹಸನಾದ ಭೂಮಿಯನು ಧಾರೆಯೆರೆಯಲು ಬೇಕುಪುಸಿಯಾಡದಲೆ ಭಾಷೆ ನಡೆಸಲೇ ಬೇಕು1 ಕಳ್ಳತನಗಳ ಮಾಡಿ ಒಡಲ ಹೊರೆಯಲು ಬೇಡಕುಳ್ಳಿರ್ದ ಸಭೆಯೊಳಗೆ ಕುತ್ಸಿತವು ಬೇಡಒಳ್ಳೆಯವ ನಾನೆಂದು ಬಲು ಹೆಮ್ಮೆಪಡಬೇಡಬಾಳ್ವೆ ಸ್ಥಿರವೆಂದು ನೀ ನಂಬಿ ಕೆಡಬೇಡ 2 ದೊರೆತನವು ಬಂದಾಗ ಕೆಟ್ಟುದ ನುಡಿಯಬೇಡಸಿರಿ ಬಂದ ಕಾಲಕ್ಕೆ ಬಲು ಮೆರೆಯಬೇಡಸಿರಿವಂತ ಶ್ರೀ ಕಾಗಿನೆಲೆಯಾದಿಕೇಶವನಚರಣ ಕಮಲವ ಸೇರಿ ಸುಖಿಯಾಗು ಮನುಜ 3 * ಕೀರ್ತನೆ ಪುರಂದರದಾಸರ ಅಂಕಿತದಲ್ಲೂ ದೊರೆತಿದೆ.

ಏನು ಇಲ್ಲದ ಎರಡು ದಿನದ ಸಂಸಾರ Read More »

ಏನಿದೆತ್ತಣ ಬಯಕೆ ಎಲೊ

ಏನಿದೆತ್ತಣ ಬಯಕೆ ಎಲೊ ಮಂಕು ಜೀವನೀನು ಅರಿತರೆ ಪೇಳು ನಿಜವನೆನಗೆ ಎಂಟೆರಡು ಮಾರುತರು ಎಡೆಎಡೆಗೆ ಬರುತಿರಲುನಂಟರೈವರು ಕೂಡಿ ಆಕ್ರಮಿಸುತಿಹರುದಾಂಟುವುದು ಅಸದಳವೊ ಎರಡೊಂದು ಬಲೆಗಳಲಿಕಂಟಕದಿ ಬಲು ತಾಪದಿಂದ ಬಳಲುವರು ||1|| ಆರೆರಡು ದಂತಿಗಳು ದಾರಿಯೊಳು ನಿಂತಿಹವುಆರು ಮೂರು ತುರುಗಗಳು ದಾರಿಯನು ಕೊಡವುಮೂರೆರಡನೀಡಾಡಿ ತೋರುವುದು ಎನ್ನಾಣೆಸಾರಿ ಏನೇನಹುದು ಎಂಬುದನು ನೋಡು ||2|| ಪರರನು ನಿಂದಿಸದೆ ಪರಯೋಗ್ಯ ನೀನಾಗಿಪರರ ಪಾಪಗಳ ನೀ ಕಟ್ಟಿಕೊಳದೆಪರಮಾತ್ಮ ಕಾಗಿನೆಲೆಯಾದಿಕೇಶವರಾಯಪರಹಿತಕೆ ಸಖನೆಂದು ಭಜಿಸೆಲೊ ಮನುಜ ||3||

ಏನಿದೆತ್ತಣ ಬಯಕೆ ಎಲೊ Read More »

ಏಣನಯನೆ ಏಣಭೋಜ ಮಧ್ಯಳೆ ತೋರೆ

ಏಣನಯನೆ ಏಣಭೋಜ ಮಧ್ಯಳೆ ತೋರೆಏಣಾಂಕ ಬಿಂಬ ಮುಖಿಏಣವೈರಿಯ ವೈರಿಯ ಶಿರಕುಚಯುಗೆ ಕರೆತಾರೆಏಣಾಂಕಧರ ಸಖನ ಚಳಿಯ ಮಗಳ ತಾಯಳಿಯನ ತನಯನಇಳುಹದೆ ಪೊತ್ತಿಹನಬಳಿದುಣ್ಣಲೀಸದೆ ಸೆಳೆದುಂಡನಣ್ಣನಸಲಹಿದಾತನ ಸುತನಕಳದೊಳು ತಲೆ ಚೆಂಡಾಡಿದ ಧೀರನಬಳಿ ವಾಘೆಯನು ಪಿಡಿದನಇಳೆಯ ಮೊರೆಯನು ಕೇಳಿ ಖಳರುತ್ತಮಾಂಗವನಿಳುಹಿದಾತನ ತೋರೆಲೆ 1 ಇಪ್ಪತ್ತುನಾಲ್ಕು ನಾಮಗಳೊಳಗೇಳನುತಪ್ಪದೆಣಿಸಿ ಕಳೆದುಬಪ್ಪ ಎಂಟನೆಯ ನಾಮದ ಪೆಸರಿನೊಳ್‍ಇಪ್ಪ ಕಡೆಯ ಬೀಡಲಿಅಪ್ಪಜಯದರಸನ ಕೂಡೆ ಜನಿಸಿದಕಪ್ಪು ವರ್ಣದ ಮೈಯಳಅಪ್ಪನ ಮಿತ್ರನ ಮಗನೆಂಬ ಬೊಮ್ಮನಬೊಪ್ಪನ ತೋರೆನಗೆ2 ಬಿಡುಗಣ್ಣ ಬಾಲೆ ತನ್ನೊಡೆಯನ ನುಡಿಗೇಳಿದೃಢದಿಂದ ನಡೆದು ಬಂದುಜಡಿವ ಕೋಪಕೆ ಶಾಪ ಪಡೆದುಕೊಂಡಾಕ್ಷಣನುಡಿದ ದಿನವು ದಾಟಲುಪಡೆಯನೆಲ್ಲವ ನಡು

ಏಣನಯನೆ ಏಣಭೋಜ ಮಧ್ಯಳೆ ತೋರೆ Read More »

ಏಕೆ ನಡುಗಿದೆ ತಾಯೆ ಭೂಮಿ ನಡುರಾತ್ರಿಯೊಳು

ಏಕೆ ನಡುಗಿದೆ ತಾಯೆ ಭೂಮಿ ನಡುರಾತ್ರಿಯೊಳು – ಜಗ ದೇಕ ಪೊಡವಿಗೊಡೆಯನ ರಾಣಿ ಪರಮ ಕಲ್ಯಾಣಿ ಗುರು ಹಿರಿಯರನು ಕಂಡು ಮುರುಕಿಸುವ ಮೋರೆಯಲಿಅರೆಮತಿಯ ಕೊಂಕು ಮಾತುಗಳನಾಡಿಚರಣಕೆರಗದ ಮನುಜರಿರಬಾರದೆಂದೆನುತಮರಮುರಿದು ಒರಗಿ ಸಾಯಲಿ ಎಂದು ನಡುಗಿದೆಯ1 ಉತ್ತಮರ ಹೊಟ್ಟೆಯಲಿ ಬಗಳೊ ಶ್ವಾನವು ಹುಟ್ಟಿಹೆತ್ತವರ ನಿರ್ಬಂಧಕೊಳಗು ಮಾಡಿಅತ್ತೆ ಮಾವರ ಕೀರ್ತಿಯ ಕೊಂಡಾಡುವಧಮರಹೊತ್ತು ಇರಲಾರೆನೆನುತ ಮತ್ತೆ ನಡುಗಿದೆಯ2 ಕಳ್ಳತನವನು ಕಲಿತು ಕಾಲೋಚಿತವ ಕೇಳ್ದುಸುಳ್ಳು ಮಾತುಗಳಾಡಿ ಒಡಲ ಪೊರೆದುಕೊಳ್ಳಿ ದೆವ್ವಗಳಂತೆ ಅಲೆದಾಡುತಿರುವಂಥಸುಳ್ಳು ಮನುಜರ ಹೊರಲಾರೆನೆಂದು ನಡುಗಿದೆಯ 3 ಕಲಿಯುಗದಿ ಮುರಹರನ ಸ್ಮರಣೆಯನು ಮಾಡದೆಯೆಸಲೆ ಭಕ್ತಿಯಿಂ

ಏಕೆ ನಡುಗಿದೆ ತಾಯೆ ಭೂಮಿ ನಡುರಾತ್ರಿಯೊಳು Read More »

ಏಕೆ ದಯವಿನಿತಿಲ್ಲ ಲೋಕಪಾವನ

ಏಕೆ ದಯವಿನಿತಿಲ್ಲ ಲೋಕಪಾವನ ಮೂರ್ತಿ ಬೇಕೆಂದು ನಿನ್ನ ಪಾದ ನಂಬಿದ ದಾಸನ ಮೇಲೆ ಎಡರಿಗಾಗುವರಿಲ್ಲ ಕಡನ ನಂಬುವರಿಲ್ಲಬಡವನೆಂದು ವಸ್ತ್ರವ ಕೊಡುವರಿಲ್ಲದೃಢದೊಳಿದ್ದರು ಬವಣೆ ಬಂದೊಡನೆ ಕಾಡುವುವುಒಡೆಯ ಕಂಡೂ ಕಾಣದಿರುವುದುಚಿತವಲ್ಲ||1|| ಮೊರೆಯ ಕೇಳುವರಿಲ್ಲ ಸಿರಿವಂತ ನಾನಲ್ಲಪರಮಾತ್ಮ ನಿನ್ನೊಳಗೆ ನಾನರಿತಿಲ್ಲಬೆರೆತುಕೊಂಡಿರಲು ಸಜ್ಜನರ ಗೆಳೆತನವಿಲ್ಲಪರಮಹಂಸನೆ ಹರಿಸೊ ಇಂಥ ಕೊರತೆಗಳೆಲ್ಲ ||2|| ನೀಲವರ್ಣದ ಲೋಲ ಕಾಲನವರಿಗೆ ಶೂಲಬಾಲ್ಯದಿ ಯಶೋದೆಯ ಹಾಲ ಸವಿದ ಗೋಪಾಲನಾಲಗೆಗೆ ನಿನ್ನ ವಿಶಾಲ ಅಷ್ಟಾಕ್ಷರಿಯನಿತ್ತುಪಾಲಿಸೋ ಶ್ರೀ ಕಾಗಿನೆಲೆಯಾದಿಕೇಶವನೆ||3||

ಏಕೆ ದಯವಿನಿತಿಲ್ಲ ಲೋಕಪಾವನ Read More »

ಎಳ್ಳು ಕಾಳಿನಷ್ಟು ಭಕ್ತಿ ಎನ್ನೊಳಗಿಲ್ಲ 

ಎಳ್ಳು ಕಾಳಿನಷ್ಟು ಭಕ್ತಿ ಎನ್ನೊಳಗಿಲ್ಲ ಕಳ್ಳರಿಗೆ ಕಳ್ಳನಂತೆ – ಬೆಳ್ಳಕ್ಕಿಯಂದದಿ ಡಂಭ ಗಾಣದೆತ್ತಿನಂತೆ ಕಣ್ಣಮುಚ್ಚಿ ಪ್ರದಕ್ಷಿಣೆಯ ಮಾಡಿಕಾಣದೆ ತಿರುಗುವೆನೆರಡು ಕಣ್ಣಿದ್ದು ನಾನುಮಾಣಿಕ್ಯದ ರಾಶಿಯಲ್ಲಿ ಅಂಧಕರೈವರು ಕೂಡಿಆಣಿಮುತ್ತ ಹಿಡಿದು ಹಿಡಿದು ಬಿಡುವ ಭ್ರಮಿತನಯ್ಯ||1|| ಗುಂಡು ಮುಳುಗನ ಹಕ್ಕಿಯಂತೆ ಕಂಡ ಕಂಡ ನೀರ ಮುಳುಗಿಮಂಡೆ ಶೂಲೆ ಬಾಹೋದಲ್ಲದೆ ಗತಿಯ ಕಾಣೆನೊಮಂಡೂಕನಂದದಲಿ ನೀರ ತಡಿಯಲಿ ಕುಳಿತುಕೊಂಡುಮುಂಡೆ ಮುಸುಕನಿಕ್ಕಿ ಮೂಗು ಹಿಡಿದು ಬಿಡುವ ಭ್ರಮಿತನಯ್ಯಾ|| 2|| ಇಕ್ಕುಳದ ಕೈಯಲ್ಲಿ ಹಿಡಿದ ಕಾದ ಕಬ್ಬಿಣದಂತೆಸಿಕ್ಕಿ ಸಿಡಿಮಿಡಿಗೊಂಬೆ ಗತಿಯ ಕಾಣದೆಹೊಕ್ಕುಳ ಹೂವಿನ ಬಾಡದಾದಿಕೇಶವನ ಮೊರೆಹೊಕ್ಕೆನಿಂದು ಮನ್ನಿಸಿ

ಎಳ್ಳು ಕಾಳಿನಷ್ಟು ಭಕ್ತಿ ಎನ್ನೊಳಗಿಲ್ಲ  Read More »

ಎಷ್ಟು ಪ್ರೀತಿಯೊ ಮನಕೆ

ಎಷ್ಟು ಪ್ರೀತಿಯೊ ಮನಕೆ ಎಷ್ಟು ಪ್ರೀತಿಯೊ ಇಷ್ಟವೆಂದು ತಿಳಿದು ಈ ಕಷ್ಟ ಸಂಸಾರ ಹೊರುವುದು ಹಸಿವು ತೃಷೆಯು ಶೋಕ ಮೋಹ ಅಸುವಗೊಂಬ ಜನನ ಮರಣವಿಷ ಸಮಾನವಾದ ಬಹಳ ವ್ಯಸನ ಮೆರವಣಿಮುಸುಕಿ ಕವಿವ ವ್ಯಾಘ್ರದಂತೆ ಅಡಗಿ ಮುಪ್ಪುಗೊಂಬ ರೋಗವಿಷಯದೊಳಗೆ ಕ್ಲೇಶಪಟ್ಟು ವಿಷಯದಿಚ್ಛೆ ಬಿಡದ ಮನಕೆ ||1|| ನೀರಗುಳ್ಳೆ ಎನಿಪ ಕಣ್ಣ ನೀರಜಾಕ್ಷಿ ಎಂದು ಮತ್ತೆಸೋರುವ ಜಘನ ಕರಿಯ ಕುಂಭ ಸುರಿವ ಶ್ಲೇಷ್ಮದಮೋರೆ ಚಂದ್ರಬಿಂಬ, ಮಾಂಸವಿಕಾರವಾದ ಕುಚವ ಕನಕಕಲಶಸಾರವೆಂದು ನರಕರೂಪಿನ ನಾರಿಯರಿಗೆ ಭ್ರಮಿಸಿ ಬಾಳ್ವುದು||2|| ಅಸ್ಥಿ ಚರ್ಮ ರಕ್ತ ಮಾಂಸ

ಎಷ್ಟು ಪ್ರೀತಿಯೊ ಮನಕೆ Read More »

ಎಷ್ಟು ಪೊಗಳಲಿ ನಾನು ಎನ್ನೊಡೆಯ

ಎಷ್ಟು ಪೊಗಳಲಿ ನಾನು ಎನ್ನೊಡೆಯ ನಿಮ್ಮ ವಿ- ಶಿಷ್ಟ ಮಹಿಮೆಗಳನು ಸುಜನರಿಗೆ ಬಂದ ಕಷ್ಟವಳಿಯಲ್ಕೆ ನೀ ಸುರಕಾಮಧೇನು ವಿಷ್ಣುವೆ ಪರಮದೈವವೆಂದು ದುಷ್ಟ ರಾಕ್ಷಸರ ಕೊಂದೆ ಸೃಷ್ಟಿಸಿ ಪಾಲಿಪ ಶ್ರೀರಾಮರ ಇಷ್ಟ ಭಕ್ತರೊಳು ಶ್ರೇಷ್ಠನೆಂದೆನಿಸಿದೆ ತಾಯಿಯಪ್ಪಣೆಗೊಂಡು ಸೇವೆಗೆ ರಘುಪತಿ ರಾಯನಲ್ಲಿ ನಿಂದು ತನ್ನಾತ್ಮ ಸುಖ ಬಯಸೆನೆಂದು ಶ್ರೀ ಹರಿಗೆ ನುಡಿದುಕಾಯಬೇಕು ಸುಗ್ರೀವನನೆನುತಲಿ ತೋಯಜಾಕ್ಷಗೆ ಪೇಳಿ ವಾಲಿಯನು ಪಾಯದಿಂದಲಿ ಕೊಲ್ಲಿಸಿ ರವಿಜಗೆ ಸ- ಹಾಯ ಮಾಡಿದೆ ವಾಯುತನಯ||1|| ಕಡಲ ಬೇಗನೆ ಹಾರಿ ಶ್ರೀರಾಮರ ಮಡದಿಗುಂಗುರವ ಕೊಟ್ಟು ಅಲ್ಲಿದ್ದ ದನುಜರ ಹೊಡೆದು

ಎಷ್ಟು ಪೊಗಳಲಿ ನಾನು ಎನ್ನೊಡೆಯ Read More »

ಎಲ್ಲಿರುವನೋ ರಂಗ ಎಂಬ ಸಂಶಯ ಬೇಡ

ಎಲ್ಲಿರುವನೋ ರಂಗ ಎಂಬ ಸಂಶಯ ಬೇಡ ಎಲ್ಲಿ ಭಕ್ತರು ಕರೆಯೆ ಅಲ್ಲಿ ಬಂದೊದಗುವನು ತರಳ ಪ್ರಹ್ಲಾದ ಹರಿ ವಿಶ್ವಮಯನೆಂದುಬರೆದೋದಲವನ ಪಿತ ಕೋಪದಿಂದಸ್ಥಿರವಾದಡೀ ಕಂಬದಲಿ ತೋರು ತೋರೆನಲುಭರದಿಂದ ಬರಲದಕೆ ವೈಕುಂಠ ನೆರೆಮನೆಯೇ||1|| ಪಾಪ ಕರ್ಮವ ಮಾಡಿದಜಮಿಳನ ಯಮಭಟರುಕೋಪದಿಂದೆಳೆಯುತಿರೆ ಭೀತಿಯಿಂದತಾ ಪುತ್ರನನು ಕರೆಯೆ ಕೇಳಿ ರಕ್ಷಿಸೆ ಶ್ವೇತದ್ವೀಪವೀ ಧರೆಗೆ ಸನಿಹದಲ್ಲಿಹುದೆ ||2|| ಕರಿರಾಜನನು ನೆಗಳು ನುಂಗುತಿರೆ ಭಯದಿಂದಮೊರೆಯಿಡಲು ಕೇಳಿ ತ್ವರಿತದಲಿ ಬಂದುಕರುಣದಲಿ ಬಂಧನವ ಪರಿಹರಿಸೆ ಗಜರಾಜನಿರುವ ಸರಸಿಯು ಅನಂತಾಸನಕೆ ಮುಮ್ಮನೆಯೆ ||3|| ಕುರುಪತಿಯು ದ್ರೌಪದಿಯ ಸೀರೆಯನು ಸೆಳೆಯುತಿರೆತರುಣಿ ಹಾ ಕೃಷ್ಣ ಎಂದೊದರೆ ಕೇಳ್ದುಭರದಿಂದ

ಎಲ್ಲಿರುವನೋ ರಂಗ ಎಂಬ ಸಂಶಯ ಬೇಡ Read More »

ಎಲ್ಲಿಂದ ಬಂದೆ ಮುಂದೆತ್ತ ಪಯಣ

ಎಲ್ಲಿಂದ ಬಂದೆ ಮುಂದೆತ್ತ ಪಯಣಇಲ್ಲಿ ನಿನಗೆಷ್ಟು ದಿನವಾಲಸ್ಯ ಮರುಳೆ ಮಾತೆಯುದರದೊಳು ನವಮಾಸ ಮಲಮೂತ್ರದೊಳುಯಾತನೆಯ ಯೋನಿ ಮುಖ ಮಾರ್ಗವಿಡಿದುಭೂತಳಕೆ ಬಂದ ಹದನೇನ ತೀರಿಸಿಕೊಂಡೆಜಾತಿ ಯಾವುದು ನಿನ್ನ ಹೆಸರೇನು ಮರುಳೆ||1|| ಮುಂದಾವ ಪಥವ ಸೇರುವೆ ಮರುಳೆ, ಸಾಕಿನ್ನುಹಿಂದೆ ನೆರವಾಗಿ ನಿಂತಾಪ್ತರುಂಟೆಒಂದುಗೂಡಿದ ಪತ್ನಿ ಸುತರೆಲ್ಲ ವರ್ಜಿಪರುನಿಂದು ಮಾತಾಡು ಬರಿದೆ ಬಳಲಿದೆ ಮರುಳೆ|| 2|| ಬರವಿದೇತಕೆ ನಿನ್ನ ಸ್ಥಳವೆಲ್ಲಿ ನೆಲೆಗೊಂಡುಇರುವ ಮಂದಿರವಾವುದದನೆನಗೆ ಪೇಳೊಧರೆಯೊಳಗೆ ವರಕಾಗಿನೆಲೆಯಾದಿಕೇಶವನಸಿರಿ ಚರಣಕಮಲವನು ನೆರೆನಂಬಿ ಸುಖಿಸೊ||3||

ಎಲ್ಲಿಂದ ಬಂದೆ ಮುಂದೆತ್ತ ಪಯಣ Read More »

ಎಲ್ಲಿ ನೋಡಿದರಲ್ಲಿ ರಾಮ

ಎಲ್ಲಿ ನೋಡಿದರಲ್ಲಿ ರಾಮ – ಇದ ಬಲ್ಲ ಜಾಣರ ದೇಹದೊಳಗೆ ನೋಡಣ್ಣ ಕಣ್ಣೇ ಕಾಮನ ಬೀಜ – ಈಕಣ್ಣಿಂದಲೆ ನೋಡು ಮೋಕ್ಷ ಸಾಮ್ರಾಜ್ಯಕಣ್ಣಿನ ಮೂರುತಿ ಬಿಗಿದು – ಒಳಗಣ್ಣಿಂದಲೇ ದೇವರ ನೋಡಣ್ಣ ||1|| ಮೂಗೇ ಶ್ವಾಸ ನಿಶ್ವಾಸ – ಈಮೂಗಿಂದಲೇ ಕಾಣೊ ಯೋಗ ಸಂನ್ಯಾಸಮೂಗನಾದರೆ ವಿಶೇಷ – ಒಳಮೂಗಲಿ ನೋಡಣ್ಣ ಲೀಲಾವಿಲಾಸ ||2|| ಕಿವಿಯೇ ಕರ್ಮಕೆ ದ್ವಾರ – ಈಕಿವಿಯಿಂದಲೇ ಕೇಳೋ ಮೋಕ್ಷದ ಸಾರಕಿವಿಯೇ ಕರ್ಮ ಕುಠಾರ – ಒಳಗಿವಿಯಲ್ಲಿ ಕಾಣೊ ನಾದದ ಬೇರ ||3|| ಬೊಮ್ಮ ಮಾಡಿದ ತನುಬಿಟ್ಟು

ಎಲ್ಲಿ ನೋಡಿದರಲ್ಲಿ ರಾಮ Read More »

ಎಲ್ಲಾರು ಮಾಡುವುದು ಹೊಟ್ಟೆಗಾಗಿ ಗೇಣುಬಟ್ಟೆಗಾಗಿ

ಎಲ್ಲಾರು ಮಾಡುವುದು ಹೊಟ್ಟೆಗಾಗಿ ಗೇಣುಬಟ್ಟೆಗಾಗಿ ವೇದಶಾಸ್ತ್ರ ಪಂಚಾಂಗವ ಓದಿಕೊಂಡು ಅನ್ಯರಿಗೆಬೋಧನೆಯ ಮಾಡುವುದು ಹೊಟ್ಟೆಗಾಗಿ ಗೇಣುಬಟ್ಟೆಗಾಗಿ ||1|| ಚಂಡಭಟರಾಗಿ ನಡೆದು ಕತ್ತಿ ಢಾಲು ಕೈಲಿ ಹಿಡಿದುಖಂಡ ತುಂಡ ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ||2|| ಅಂಗಡಿ ಮುಂಗಟ್ಟನ್ಹೂಡಿ ವ್ಯಂಗ್ಯ ಮಾತುಗಳನ್ನಾಡಿಭಂಗ ಬಿದ್ದು ಗಳಿಸುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ||3|| ಕುಂಟೆ ತುದಿಗೆ ಕೊರಡು ಹಾಕಿ ಹೆಂಟೆ ಮಣ್ಣು ಸಮನು ಮಾಡಿರೆಂಟೆ ಹೊಡೆದು ಬೆಳೆಸುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ|| 4|| ಬೆಲ್ಲದಂತೆ ಮಾತಾನಾಡಿ ಎಲ್ಲರನ್ನು ಮರುಳು ಮಾಡಿಸುಳ್ಳು ಬೊಗಳಿ ತಿಂಬುವುದು

ಎಲ್ಲಾರು ಮಾಡುವುದು ಹೊಟ್ಟೆಗಾಗಿ ಗೇಣುಬಟ್ಟೆಗಾಗಿ Read More »

ಎರಡು ಸಾವಿರದ ಜಿಹ್ವೆಯುರಗ ಪೊಗಳಿದ ಹರಿಯೆ 

ಎರಡು ಸಾವಿರದ ಜಿಹ್ವೆಯುರಗ ಪೊಗಳಿದ ಹರಿಯೆ ಪರಂಜ್ಯೋತಿ ಪರಬ್ರಹ್ಮ ಪರಮಪುರುಷ ಓಂ ಎಂದು ಹುಟ್ಟು ಬಣ್ಣ ಒಂದರೊಳಗೆ ಕಟ್ಟು ಬಣ್ಣ ಒಂದು ಮಾಡಿಕಟ್ಟಿ ಕುಟ್ಟಿ ಕಾಸಿ ಕರಗಿ ಮೂರು ಬಣ್ಣವಮುಟ್ಟಿ ಮಾಡಿ ನಾಲ್ಕು ಬಣ್ಣ ಒಪ್ಪವಿಕ್ಕಿ ಅದರ ಮೇಲೆಗಟ್ಟಿಯಾಗಿ ನೆಲೆಗೆ ನಿಂತವೈದು ಬಣ್ಣವುಸೃಷ್ಟಿಯಾರೇಳು ಬಣ್ಣ ಎಂಟು ಒಂಬತ್ತರೊಳಗೆ ನೆಟ್ಟನೆ ಹತ್ತು ಹನ್ನೊಂದು ಹನ್ನೆರಡು ತೋರುವಘಟ್ಟಿ ಹದಿಮೂರು ಹದಿನಾಲ್ಕು ಹದಿನೈದರಿಂದಕಟ್ಟಕಡೆಗೆ ನಿಂದ ಹದಿನಾರು ಬಣ್ಣ ಓಂ ಎಂದು ||1|| ಭದ್ರಕಂಬ ಒಂದರೊಳಗೆ ಉದ್ದವಾದ ಕೊನೆಯ ಮೇಲೆಸಿದ್ಧಿಯಾದ ಚಿಗುರು ಹೂವು

ಎರಡು ಸಾವಿರದ ಜಿಹ್ವೆಯುರಗ ಪೊಗಳಿದ ಹರಿಯೆ  Read More »

ಎನ್ನ ಮಾನಿನಿ ರನ್ನೆ ತಾನ್ಯಾಕೆ ಬಾರನು

ಎನ್ನ ಮಾನಿನಿ ರನ್ನೆ ತಾನ್ಯಾಕೆ ಬಾರನುನೀನೆ ವಿಚಾರಿಸು ಇಬ್ಬರ ನ್ಯಾಯವ ಮಗಳಿಗೆ ಮಗಳಾದ ಮಗಳಿಗಳಿಯನಾದಮಗಳ ಗಂಡಗೆ ಭಾವ ಮಾವನಾದುದ ಕೇಳಿನಾ ನಿನ್ನ ಪಾದಕ್ಕೆ ಬಂದೆ ಶ್ರೀಹರಿಯೆ ||1|| ವೈರಿಗೆ ವೈರಿಯಾದೆ ವೈರಿಗೆ ಸುತನಾದೆವೈರಿ ಗಂಡಗೆ ತನ್ನ ಮಗಳ ಕೊಟ್ಟುದ ಕೇಳಿನಾ ನಿನ್ನ ಪಾದಕೆ ಬಂದೆ ಶ್ರೀಹರಿಯೆ ||2|| ಆನಿ ಬಿದ್ದರ ತನ್ನ ಗ್ಯಾನದಿಂದೇಳುವುದುಏನು ಮಾಡಿದರು ಅದರ ಭಾವ ಹಿಂಗದುe್ಞÁನವಂತ ಕಾಗಿನೆಲೆಯಾದಿಕೇಶವರಾಯ ಮುನಿದು ಪೋದನೆ|| 3||

ಎನ್ನ ಮಾನಿನಿ ರನ್ನೆ ತಾನ್ಯಾಕೆ ಬಾರನು Read More »

ಎನ್ನ ನುಡಿ ಪುಸಿಯಲ್ಲ ಈ ಜಗದೊಳು 

ಎನ್ನ ನುಡಿ ಪುಸಿಯಲ್ಲ ಈ ಜಗದೊಳು ಅರವಿಂದವಿಲ್ಲದಿಹ ಕೊಳವು ತಾ ಕಂಗಳವುಹರಿಣಾಂಕನಿಲ್ಲದಿಹ ಇರುಳು ಮರುಳುಸ್ವರಭೇದವಿಲ್ಲದಿಹ ಸಂಗೀತವಿಂಗೀತಸರಸವಿಲ್ಲದಿಹ ಸತಿಯ ಭೋಗ ತನುರೋಗ ||1|| ಪಂಥ ಪಾಡುಗಳನರಿಯದ ಬಂಟನವ ತುಂಟಅಂತರವರಿಯದಾ ವೇಶಿ ಹೇಸಿದಂತಿಯಿಲ್ಲದ ಅರಸು ಮುರಿದ ಕಾಲಿನ ಗೊರಸುಅಂತಸ್ಥವಿಲ್ಲದ ಪ್ರಧಾನಿ ಮದ್ಯಪಾನಿ||2|| ಮಾಗಿಯಲಿ ಸತಿಯನಗಲಿದ ಕಾಂತನವ ಭ್ರಾಂತಪೂಗಣೆಯ ಗೆಲಿಯದಿಹ ನರ ಗೋಖುರಭೋಗಿಸದೆ ಇಹಪರಕೆ ಗಳಿಸಿದರ್ಥ ಅಪಾರ್ಥಕಾಗಿನೆಲೆಯಾದಿಕೇಶವನ ಭಕ್ತ ಮುಕ್ತ ||3||

ಎನ್ನ ನುಡಿ ಪುಸಿಯಲ್ಲ ಈ ಜಗದೊಳು  Read More »

ಎನ್ನ ಕಂದ ಹಳ್ಳಿಯ ಹನುಮ 

ಎನ್ನ ಕಂದ ಹಳ್ಳಿಯ ಹನುಮ ಚೆನ್ನಾಗೈದಾರ ಲಕ್ಷ್ಮಣ ದೇವರು ತುಪ್ಪ ಪಂಚಾಮೃತವಂದು ಅಡವಿಗಡ್ಡೆಗಳಿಂದುಕರ್ಪೂರ ವೀಳ್ಯವಂದು ಕುರುಕು ಇಂದುಸುಪ್ಪತ್ತಿಗೆ ಮಂಚವಂದು ಹುಲ್ಲು ಹಾಸಿಗೆಯಿಂದುಶ್ರೀಪತಿ ರಾಘವ ಕ್ಷೇಮದಲೈದಾರೆ||1|| ನವ ವಸ್ತ್ರಗಳು ಅಂದು ನಾರಸೀರೆಗಳಿಂದುಹೂವಿನ ಗಂಟು ಅಂದು ಜಡೆಗಳಿಂದುಜವ್ವಾಜಿ ಕತ್ತುರಿಯಂದು ಭಸಿತ ಧೂಳಿಂದುಶ್ರೀವರ ರಾಘವ ಕ್ಷೇಮದಲೈದಾರೆ||2|| ಕನಕ ರಥಗಳಂದು ಕಾಲುನಡಿಗೆಯಿಂದುಘನ ಛತ್ರ ಚಾಮರವಂದು ಬಿಸಿಲು ಇಂದುಸನಕಾದಿಗಳೋಲೈಪ ಆದಿಕೇಶವ ನಮ್ಮಹನುಮೇಶ ರಾಘವ ಕ್ಷೇಮದಲೈದಾರೆ ||3||

ಎನ್ನ ಕಂದ ಹಳ್ಳಿಯ ಹನುಮ  Read More »

ಎಂದೆಂದು ಇಂಥ ಚೋದ್ಯ ಕಂಡದ್ದಿಲ್ಲವೊ 

ಎಂದೆಂದು ಇಂಥ ಚೋದ್ಯ ಕಂಡದ್ದಿಲ್ಲವೊ ಅಂಗಡಿ ಬೀದಿಯೊಳೊಂದು ಆಕಳ ಕರು ನುಂಗಿತುಲಂಘಿಸುವ ಹುಲಿಯ ಕಂಡು ನರಿಯು ನುಂಗಿತು ||1|| ಹುತ್ತದೊಳಾಡುವ ಸರ್ಪ ಮತ್ತ ಗಜವ ನುಂಗಿತುಉತ್ತರ ದಿಶೆಯೊಳು ಬೆಳುದಿಂಗಳಾಯಿತಮ್ಮ ||2|| ಯೋಗ ಮಾರ್ಗಿ ಕಾಗಿನೆಲೆಯಾದಿಕೇಶವರಾಯಭಾಗವತರ ಬೆಡಗಿದು ಬೆಳುದಿಂಗಳಾಯಿತಮ್ಮ ||3||

ಎಂದೆಂದು ಇಂಥ ಚೋದ್ಯ ಕಂಡದ್ದಿಲ್ಲವೊ  Read More »

ಎಂದಿದ್ದರೀ ಕೊಂಪೆ ಎನಗೆ ನಂಬಿಕೆಯಿಲ್ಲ 

ಎಂದಿದ್ದರೀ ಕೊಂಪೆ ಎನಗೆ ನಂಬಿಕೆಯಿಲ್ಲ ಮುಂದರಿತು ಶ್ರೀಹರಿಯ ಭಜಿಸುವುದು ಲೇಸು ಎಲುವುಗಳು ತೊಲೆಜಂತೆ ನರಗಳವು ಬಿಗಿದಂತೆಬಲಿದ ಚರ್ಮವು ಮೇಲು ಹೊದಿಕೆಯಂತೆಗಳಗಳನೆ ನುಡಿವ ನಾಲಗೆ ಗಂಟೆಯುಲಿಯಂತೆಕೆಲಕಾಲಕೀ ಕೊಂಪೆ ಕಡೆಗಾಹುದಂತೆ ||1|| ಕಂಡಿಗಳು ಒಂಬತ್ತು ಕಳಬಂಟರೈವರುಅಂಡಲೆವುದೊತ್ತಿನಲಿ ಷಡುವರ್ಗವುಮಂಡಲಕೆ ಹೊಸಪರಿಯ ಮನ್ಮಥನ ಠಾಣ್ಯವಿದುಮಂಡೆ ಹೋಗುವುದನ್ನು ಅರಿಯದೀ ಕೊಂಪೆ||2|| ಕೊಂಪೆಯಲಿ ಶೃಂಗಾರ ಕೊಂಡಾಡಲಳವಲ್ಲಕೆಂಪು ಬಣ್ಣಗಳಿಂದ ಚೆನ್ನಾಯಿತುಇಂಪಿನಲಿ ಕಾಗಿನೆಲೆಯಾದಿಕೇಶವನನ್ನುಸೊಂಪಿನಲಿ ನೆನೆನೆನೆದು ಸುಖಿಯಾಗು ಮನುಜಾ ||3||

ಎಂದಿದ್ದರೀ ಕೊಂಪೆ ಎನಗೆ ನಂಬಿಕೆಯಿಲ್ಲ  Read More »

ಎಂಥ ಟವಳಿಗಾರನಮ್ಮ

ಎಂಥ ಟವಳಿಗಾರನಮ್ಮ ನಂದ ಗೋಪ್ಯಮ್ಮ ಕೇಳೆ – ನಿನ್ನ ಮಗ ಎಂಥ ಟವಳಿಗಾರನಮ್ಮ ಹಣವ ಕೊಟ್ಟೇನೆಂದುಗುಣದಿಂದ ಎನ್ನ ತಂದಹಣವ ಕೇಳಿದರಲ್ಲಿ – ಹಣವೆ ?ತಡೆಯಲಾರದ ತಲ್ಲಣವೆ ?ಕುದುರೆ ಮೇಲಿನ ಪಲ್ಲಣವೆ ?ಇಲ್ಲ, ಬಾಯಿಗಿಟ್ಟ ಬೊಕ್ಕಣವೆ ? – ಹೋಗೆನುತಾನೆ ||1|| ಕೊಪ್ಪಾನೆ ಕೊಟ್ಟೇನೆಂದುಒಪ್ಪಿಸಿ ಎನ್ನ ತಂದಕೊಪ್ಪಾನ ಕೇಳಿದರಲ್ಲಿ – ಕೊಪ್ಪ ?ಊರಮುಂದಿನ ತಿಪ್ಪ ?ಕೇರಿಯೊಳಗಿನ ಕೆಪ್ಪ ?ಕೆರೆಯೊಳಗಿನ ಹುಳಿಸೊಪ್ಪ ? – ಹೋಗೆನುತಾನೆ||2|| ಬಳೆಯ ಕೊಟ್ಟೇನೆಂದುಬಲು ಮಾತಿನಲಿ ತಂದಬಳೆಯ ಕೇಳಿದರಲ್ಲಿ – ಬಳೆಯೆ ?ಊರ ಮುಂದಿನ ಗಳೆಯೆ

ಎಂಥ ಟವಳಿಗಾರನಮ್ಮ Read More »