ಕೊಡುವವನು ನೀನು
ಕೊಡುವವನು ನೀನು ಕೊಂಬುವನು ನಾನು ಬಡಮನದ ಮನುಜನ ಬೇಡಿ ಫಲವೇನು ಹದಿನಾರು ಹಲ್ಲುಗಳ ಬಾಯ್ದೆರದು ಬೇಡಿದರೆ ಇದು ಸಮಯವಲ್ಲೆಂದು ಪೇಳಿ ತಾನು ಮದನ ಕೇಳಿಗೆ ನೂರನೊಂದಾಗಿ ನೋಡುವನು ಮದಡ ಮಾನವನೇನು ಕೊಡಬಲ್ಲ ಹರಿಯೆ ||1|| ಗತಿಯಲ್ಲವೆಂತೆಂದು ನಾನಾ ಪ್ರಕಾರದಲಿ ಮತಿಗೆಟ್ಟು ಪೊಗಳಿದರೆ ಅವನು ತನ್ನ ಸತಿಸುತರ ಕೇಳಬೇಕೆಂದು ಮೊಗ ತಿರುಹುವ ಅತಿ ದುರುಳ ಮತ್ತೇನು ಕೊಡಬಲ್ಲ ಹರಿಯೆ ||2|| ಹೀನ ವೃತ್ತಿಯ ಜನರಿಗಾಸೆಯನು ಬಡುವದು ಗಾಣದೆತ್ತು ತಿರುಗಿ ಬಳಲಿದಂತೆ ಭಾನು ಕೋಟಿ ತೇಜ ವಿಜಯವಿಠ್ಠಲರೇಯ ನೀನಲ್ಲದನ್ಯತ್ರ ಕೊಡುಕೊಂಬುರಂಟೆ […]