ಅಯ್ಯಾ, ಅಯ್ಯಾ, ಎಂದು ಕರೆವುತ್ತಲಿದ್ದೇನೆ.
ಅಯ್ಯಾ, ಅಯ್ಯಾ, ಎಂದು ಕರೆವುತ್ತಲಿದ್ದೇನೆ. ಅಯ್ಯಾ, ಅಯ್ಯಾ, ಎಂದು ಒರಲುತ್ತಲಿದ್ದೇನೆ. ಓ ಎನ್ನಲಾಗದೆ ಅಯ್ಯಾ ಆಗಳೂ ನಿಮ್ಮ ಕರೆವುತ್ತಲಿದ್ದೇನೆ ಮೋನವೇ ಕೂಡಲಸಂಗಮದೇವಾ.
ಅಯ್ಯಾ, ಅಯ್ಯಾ, ಎಂದು ಕರೆವುತ್ತಲಿದ್ದೇನೆ. Read More »
ಅಯ್ಯಾ, ಅಯ್ಯಾ, ಎಂದು ಕರೆವುತ್ತಲಿದ್ದೇನೆ. ಅಯ್ಯಾ, ಅಯ್ಯಾ, ಎಂದು ಒರಲುತ್ತಲಿದ್ದೇನೆ. ಓ ಎನ್ನಲಾಗದೆ ಅಯ್ಯಾ ಆಗಳೂ ನಿಮ್ಮ ಕರೆವುತ್ತಲಿದ್ದೇನೆ ಮೋನವೇ ಕೂಡಲಸಂಗಮದೇವಾ.
ಅಯ್ಯಾ, ಅಯ್ಯಾ, ಎಂದು ಕರೆವುತ್ತಲಿದ್ದೇನೆ. Read More »
ಅಯ್ಯಾ ಎನಗೆ ರುದ್ರಾಕ್ಷಿಯೆ ಸರ್ವಪಾವನವು, ಅಯ್ಯಾ ಎನಗೆ ರುದ್ರಾಕ್ಷಿಯೆ ಸರ್ವಕಾರಣವು, ಅಯ್ಯಾ ಎನಗೆ ರುದ್ರಾಕ್ಷಿಯೆ ಸರ್ವಸಾಧನವು, ಅಯ್ಯಾ ಎನಗೆ ರುದ್ರಾಕ್ಷಿಯೆ ಸರ್ವಸಿದ್ಧಿ, ಅಯ್ಯಾ ಎನಗೆ ರುದ್ರಾಕ್ಷಿಯೆ ಸರ್ವಪಾಪಕ್ಷಯವು. ಅಯ್ಯಾ ನಿಮ್ಮ ಪಂಚವಕ್ತ್ರಂಗಳೆ ಪಂಚಮುಖದ ರುದ್ರಾಕ್ಷಿಗಳಾದವಾಗಿ, ಅಯ್ಯಾ ಕೂಡಲಸಂಗಮದೇವಯ್ಯಾ, ಎನ್ನ ಮುಕ್ತಿಪಥಕ್ಕೆ ಶ್ರೀಮಹಾರುದ್ರಾಕ್ಷಿಯೆ ಸಾಧನವಯ್ಯಾ.
ಅಯ್ಯಾ ಎನಗೆ ರುದ್ರಾಕ್ಷಿಯೆ ಸರ್ವಪಾವನವು, Read More »
ಅಯ್ಯಾ ! ನೀನೆಂದಡೆ ಏನೆಂಬೆನು ನಿನ್ನ ಹಂಗೇನು ಹರಿಯೇನು ನಿನ್ನ ಮುಖದಲ್ಲಿ ಒಂದಗುಳು ಸವೆಯದು. ನಿನ್ನ ಪ್ರಸಾದವ ಕೊಂಡೆನ್ನ ಭವಕ್ಕೆ ಬೀಜವಾಯಿತ್ತು. ಜಂಗಮವೆ ಲಿಂಗವೆಂದು ಒಕ್ಕುದ ಕೊಂಡಡೆ ಎನ್ನ ಭವಂ ನಾಸ್ತಿಯಾಯಿತ್ತು ಕೂಡಲಸಂಗಮದೇವಾ.
ಅಯ್ಯಾ ! ನೀನೆಂದಡೆ ಏನೆಂಬೆನು Read More »
ಅಂಜಿದಡೆ ಮಾಣದು, ಅಳುಕಿದಡೆ ಮಾಣದು, ವಜ್ರಪಂಜರದೊಳಗಿದ್ದಡೆ ಮಾಣದು, ತಪ್ಪದುವೋ ಲಲಾಟಲಿಖಿತ. ಕಕ್ಕುಲತೆಗೆ ಬಂದಡೆ ಆಗದು ನೋಡಾ. ಧೃತಿಗೆಟ್ಟು, ಮನ ಧಾತುಗೆಟ್ಟಡೆ ಅಪ್ಪುದು ತಪ್ಪದು, ಕೂಡಲಸಂಗಮದೇವಾ.
ಅಂಜಿದಡೆ ಮಾಣದು, ಅಳುಕಿದಡೆ ಮಾಣದು, Read More »
ಅಂಗುಲ ಹನ್ನೆರಡು ಕೂಡಲು ಒಂದು ಗೇಣು, ಗೇಣು ಎರಡು ಕೂಡಲು ಒಂದು ಮೊಳ, ಮೊಳವೆರಡು ಕೂಡಲು ಒಂದು ಹಸ್ತ, ಹಸ್ತವೆರಡು ಕೂಡಲು ಒಂದು ಮಾರು, ಮಾರೆರಡು ಕೂಡಲು ಒಂದು ಜಂಘೆ, ಜಂಘೆ ಏಳುನೂರೆಪ್ಪತ್ತು ಕೂಡಲು ಒಂದು ಪಾದಚ್ಛಯ, ಪಾದಚ್ಛಯವೆರಡು ಸಾವಿರದೆಂಟನೂರು ಕೂಡಲು ಒಂದು ಕೂಗಳತೆ, ಕೂಗಳತೆ ನಾಲ್ಕು ಕೂಡಲು ಒಂದು ಹರದಾರಿ, ಹರದಾರಿ ನಾಲ್ಕು ಕೂಡಲು ಒಂದು ಯೋಜನ, ಅಂಥ ಯೋಜನ ನಾಲ್ಕು ಚೌಕಕ್ಕು ಹನ್ನೆರಡು ಹನ್ನೆರಡು ಕೂಡಲು ಬಳಸಿ ನಾಲ್ವತ್ತೆಂಟು ಯೋಜನ ಪ್ರಮಾಣಿನ ಕಟ್ಟಳೆಯಾಯಿತ್ತು. ಇಂತಪ್ಪ
ಅಂಗುಲ ಹನ್ನೆರಡು ಕೂಡಲು ಒಂದು ಗೇಣು, Read More »
ಅಂಗಲಿಂಗಸಂಗಸುಖಸಾರಾಯದನುಭಾವ ಲಿಂಗವಂತಂಗಲ್ಲದೆ ಸಾಧ್ಯವಾಗದು ನೋಡಾ. ಏಕಲಿಂಗಪರಿಗ್ರಾಹಕನಾದ ಬಳಿಕ, ಆ ಲಿಂಗನಿಷ್ಠೆ ಗಟ್ಟಿಗೊಂಡು, ಸ್ವಯಲಿಂಗಾರ್ಚನೋಪಚಾರ ಅರ್ಪಿತ ಪ್ರಸಾದಭೋಗಿಯಾಗಿ, ವೀರಶೈವಸಂಪನ್ನನೆನಿಸಿ ಲಿಂಗವಂತನಾದ ಬಳಿಕ ತನ್ನಂಗಲಿಂಗಸಂಬಂಧಕ್ಕನ್ಯವಾದ ಜಡಭೌತಿಕ ಪ್ರತಿಷ್ಠೆಯನುಳ್ಳ ಭವಿಶೈವದೈವಕ್ಷೇತ್ರತೀರ್ಥಂಗಳಾದಿಯಾದ ಹಲವು ಲಿಂಗಾರ್ಚನೆಯ ಮನದಲ್ಲಿ ನೆನೆ[ಯ]ಲಿಲ್ಲ, ಮಾಡಲೆಂತೂ ಬಾರದು. ಇಷ್ಟೂ ಗುಣವಳವಟ್ಟಿತ್ತಾದಡೆ ಆತನೀಗ ಏಕಲಿಂಗನಿಷ್ಠಾಚಾರಯುಕ್ತನಾದ ವೀರಮಾಹೇಶ್ವರನು. ಇವರೊಳಗೆ ಅನುಸರಿಸಿಕೊಂಡು ನಡೆದನಾದಡೆ ಗುರುಲಿಂಗಜಂಗಮಪಾದೋದಕಪ್ರಸಾದ ಸದ್ಭಕ್ತಿಯುಕ್ತವಾದ ವೀರಶೈವ ಷಡುಸ್ಥಲಕ್ಕೆ ಹೊರಗಾಗಿ ನರಕಕ್ಕಿಳಿವನು ಕಾಣಾ, ಕೂಡಲಸಂಗಮದೇವಾ.
ಅಂಗಲಿಂಗಸಂಗಸುಖಸಾರಾಯದನುಭಾವ Read More »
ಅಂಗವಿಕಾರವಳಿದು ಸತಿಯ ಸಂಗವರಿಯ ನೋಡಾ, ದೇಹಗುಣಂಗಳಿಲ್ಲಾಗಿ ನಿರ್ದೇಹಪ್ರಸಾದಿ ನೋಡಯ್ಯಾ, ಅಶನವ್ಯಸನಾದಿಗಳೆಲ್ಲವು ಬೆಂದವು ನೋಡಯ್ಯಾ. ಈ ಎಲ್ಲ ಗುಣಂಗಳಳಿದು ಕೂಡಲಸಂಗಮದೇವರಲ್ಲಿ ಸಾವಧಾನಿ ಪ್ರಸಾದಿ ಚೆನ್ನಬಸವಣ್ಣನು.
ಅಂಗವಿಕಾರವಳಿದು ಸತಿಯ ಸಂಗವರಿಯ ನೋಡಾ, Read More »
ಅಂಗದಿಚ್ಛೆಗೆ ಮದ್ಯಮಾಂಸವ ತಿಂಬರು, ಕಂಗಳಿಚ್ಛೆಗೆ ಪರವಧುವ ನೆರೆವರು. ಲಿಂಗಲಾಂಛನಧಾರಿಯಾದಲ್ಲಿ ಫಲವೇನು ಲಿಂಗಪಥವ ತಪ್ಪಿ ನಡೆವವರು ಜಂಗಮಮುಖದಿಂದ ನಿಂದೆ ಬಂದಡೆ ಕೊಂಡ ಮಾರಿಂಗೆ ಹೋಹುದು ತಪ್ಪದು ಕೂಡಲಸಂಗಮದೇವಾ.
ಅಂಗದಿಚ್ಛೆಗೆ ಮದ್ಯಮಾಂಸವ ತಿಂಬರು, Read More »
ಅಂಗದಲ್ಲಿ ಲಿಂಗಸಂಗ, ಲಿಂಗದಲ್ಲಿ ಅಂಗಸಂಗವ ಮಾಡಿಹೆನೆಂದಡೆ, ಸಂದು ಭೇದವಳಿವ ಪರಿ ಎಂತು ಹೇಳಾ ಅಂಗದಲ್ಲಿ ಸಂಗವ ಮಾಡಿಹೆನೆಂದಡೆ, ಮುಂದುಗೆಡಿಸಿ ಕಾಡುವನು ಶಿವನು. ಕಾಮವೆಂಬ ಬಯಕೆಯಲ್ಲಿ ಅಳಲಿಸುವ ಬಳಲಿಸುವ ಶಿವನು. ಲಿಂಗದಲ್ಲಿ ಅಂಗವ ತಂದು ನಿಕ್ಷೇಪಿಸಿಹೆನೆಂದಡೆ, ಅಂಗದಿಂದ ಅತ್ತತ್ತಲೋಸರಿಸಿ ಓಡುವನಯ್ಯಾ ಶಿವನು. ಹೆಣ್ಣು ಗಂಡಾದಡೆ ಸಂಗಕ್ಕೆ ಒಲಿವನು ಕೇಳಾ ಶಿವನು. ಕೂಡಲಸಂಗಮದೇವರ ಬೆರಸುವಡೆ, ಭಿನ್ನವಿಲ್ಲದೆ ಕಲಿಯಾಗಿರಬೇಕು ಕೇಳಾ ಅವ್ವಾ.
ಅಂಗದಲ್ಲಿ ಅರ್ಪಿತವಾದ ಸುಖವು ಲಿಂಗದಲ್ಲಿ ಲೀಯವಾಯಿತ್ತೆಂದಡೆ ಅಂಗವ ಲಿಂಗದಲ್ಲಿ ಮತ್ತೆ ನಿಕ್ಷೇಪಿಸಿಹೆನೆಂಬ ಕಾರಣವೇಕಯ್ಯಾ ಶರಣಂಗೆ ಪ್ರಾಣನ ಲಿಂಗದಲ್ಲಿ ಸವೆಸಿ ನಿರವಯವಾಗಬಹುದಲ್ಲದೆ ಕರ್ಮದಿಂದಾದ ಕಾಯವ ಸವೆಸಿ ಸಯವಪ್ಪ ಪರಿ ಎಂತು ಹೇಳಯ್ಯಾ ಕೂಡಲಸಂಗಮದೇವಾ, ನಿಮ್ಮ ಶರಣರು ಕಾಯವಿಡಿದಿರ್ದು ನಿರ್ಮಾಯವಾಗಿರ್ಪುದ ಹೇಳಯ್ಯಾ ನಿಮ್ಮ ಧರ್ಮ.
ಅಂಗದಲ್ಲಿ ಅರ್ಪಿತವಾದ ಸುಖವು ಲಿಂಗದಲ್ಲಿ Read More »
ಅಂಗದಲಳವಟ್ಟ ಲಿಂಗಕ್ಕೆ ಅಂಗವೆ ಭಾಜನ, ಪ್ರಾಣದ ಮೇಲಣ ಲಿಂಗಕ್ಕೆ ನಿರ್ಭಾವವೆ ಭಾಜನ. ಅರಿವಿನ ಮೇಲಣ ಲಿಂಗಕ್ಕೆ ನಿರ್ಭಾವವೆ ಭಾಜನ ಕೂಡಲಸಂಗಮದೇವಯ್ಯಾ, ಪ್ರಭುದೇವರು ಆರೋಗಣೆಯ ಮಾಡುವಡೆ ಭಕ್ತಿಪರಿಯಾಣವಲ್ಲದೆ ಬೇರೆ ಭಾಜನವ ಕಾಣೆನು.
ಅಂಗದಲಳವಟ್ಟ ಲಿಂಗಕ್ಕೆ ಅಂಗವೆ ಭಾಜನ, Read More »
ಅಂಗದ ಮೇಲೆ ಲಿಂಗಸಾಹಿತ್ಯವಾದ ಬಳಿಕ ಸ್ಥಾವರದೈವಕ್ಕೆರಗಲಾಗದು. ತನ್ನ ಪುರುಷನ ಬಿಟ್ಟು ಅನ್ಯಪುರುಷನ ಸಂಗ ಸಲ್ಲುವುದೇ ರಿ ಕರಸ್ಥಲದ ದೇವನಿದ್ದಂತೆ ಧರೆಯ ಮೇಲಣ ಪ್ರತಿಷ್ಠೆಗೆರಗಿದಡೆ ನರಕದಲ್ಲಿಕ್ಕುವ ಕೂಡಲಸಂಗಮದೇವ.
ಅಂಗದ ಮೇಲೆ ಲಿಂಗಸಾಹಿತ್ಯವಾದ Read More »
ಅಂಗದ ಮೇಲೆ ಲಿಂಗ ಆಯತವಾಗಿ ಲಿಂಗಾರ್ಚನೆಯ ಮಾಡಿದಡೆ ಭವ ಹಿಂಗದೆಂದು, ಪ್ರಾಣದ ಮೇಲೆ ಲಿಂಗ[ಸ್ವಾ]ಯತವ ಮಾಡಿ ಎನ್ನಂತರಂಗ ಶುದ್ಧವ ಮಾಡಿ ಲಿಂಗೈಕ್ಯದ ಹೊಲಬ ತೋರಿದನಯ್ಯಾ, ಚೆನ್ನಬಸವಣ್ಣನು. ಕಾಯದ ಕಳವಳವು ದಾಸೋಹದ ಮುಖದಲ್ಲಿ ಅಲ್ಲದೆ ಹರಿಯದೆಂದು ಜಂಗಮಮುಖಲಿಂಗವಾಗಿ ಬಂದು ಎನ್ನ ಶಿಕ್ಷಿಸಿ ರಕ್ಷಿಸಿ ಎನ್ನ ಸಂಸಾರದ ಪ್ರಕೃತಿಯ ಹರಿದನಯ್ಯಾ, ಪ್ರಭುದೇವರು. ಕೂಡಲಸಂಗಮದೇವರಲ್ಲಿ ಪ್ರಭುದೇವರ ಚೆನ್ನಬಸವಣ್ಣನ ಕರುಣದಿಂದಲಾನು ಬದುಕಿದೆನು.
ಅಂಗದ ಮೇಲೆ ಲಿಂಗ ಆಯತವಾಗಿ Read More »
ಅಂಗದ ಮೇಲಣ ಲಿಂಗ ಹಿಂಗಿ ಬಂದ ಸುಖವನಾರಿಗರ್ಪಿಸುವೆ ಹಿಂಗಲಾಗದು, ಭಕ್ತಿಪಥಕ್ಕೆ ಸಲ್ಲದಾಗಿ, ಹಿಂಗಲಾಗದು, ಶರಣಪಥಕ್ಕೆ ಸಲ್ಲದಾಗಿ, ಕೂಡಲಸಂಗಮದೇವರ ಹಿಂಗಿ ನುಂಗಿದುಗುಳು ಕಿಲ್ಬಿಷ.
ಅಂಗದ ಮೇಲಣ ಲಿಂಗ ಹಿಂಗಿ ಬಂದ Read More »
ಅಂಗದ ನಮಾಫಟವು ಸಿಂಗದ ಗಾತ್ರವು, ಹಿಂಗದು ಮನದಲ್ಲಿ ನಾನಾ ವಿಕಾರವು. ಬಂದೆಹೆನೆಂದರಿಯಲಿಲ್ಲಾಗಿ, ಸಂದೇಹ ಬಿಡದಾಗಿ, ಮುಂದುಗಾಣದು ಲೋಕ, ಬೆಂದ ಮಾಯಕ್ಕಂಜಿ ನಿಮ್ಮ ಮರೆವೊಕ್ಕೆ, ಕೂಡಲಸಂಗಮದೇವಾ.
ಅಂಗದ ನಮಾಫಟವು ಸಿಂಗದ ಗಾತ್ರವು, Read More »
ಅಂಗಯ್ಯ ಒಳಗಣ ಲಿಂಗವ ನೋಡುತ್ತ, ಕಂಗಳು ಕಡೆಗೋಡಿವರಿಯುತ್ತ ಸುರಿಯುತ್ತ ಎಂದಿಪ್ಪೆನೊ ನೋಟವೆ ಪ್ರಾಣವಾಗಿ ಎಂದಿಪ್ಪೆನೊ ಕೂಟವೇ ಪ್ರಾಣವಾಗಿ ಎಂದಿಪ್ಪೆನೊ ಎನ್ನ ಅಂಗವಿಕಾರದ ಸಂಗವಳಿದು, ಕೂಡಲಸಂಗಯ್ಯಾ, ಲಿಂಗ ಲಿಂಗವೆನುತ್ತ.
ಅಂಗಯ್ಯ ಒಳಗಣ ಲಿಂಗವ ನೋಡುತ್ತ, Read More »
ಅಂಕ ಕಳನೇರಿ ಕೈಮರೆದಿರ್ದಡೆ ಮಾರಂಕ ಬಂದಿರಿವುದ ಮಾಬನೆ ನಿಮ್ಮ ನೆನಹ ಮನ ಮರೆದಿರ್ದಡೆ ಮಾಯೆ ತನುವನಂಡಲೆವುದ ಮಾಬುದೆ ಕೂಡಲಸಂಗಯ್ಯನ ನೆನೆದಡೆ, ಪಾಪ ಉರಿಗೊಡ್ಡಿದರಗಿನಂತೆ ಕರಗುವುದಯ್ಯಾ.
ಅಂಕ ಕಳನೇರಿ ಕೈಮರೆದಿರ್ದಡೆ ಮಾರಂಕ ಬಂದಿರಿವುದ Read More »
ಅಂಕ ಕಂಡಾ, ಕೋಲಾಸೆ ಮತ್ತೇಕಯ್ಯಾ ಲೆಂಕ ಕಂಡಾ, ಪ್ರಾಣದಾಸೆ ಮತ್ತೇಕಯ್ಯಾ ಭಕ್ತ ಕಂಡಾ, ತನುಮನಧನದಾಸೆ ಮತ್ತೇಕಯ್ಯಾ ನಿಮ್ಮ ಅಂಕೆಗೆ ಝಂಕೆಗೆ ಶಂಕಿತನಾದಡೆ ಎನ್ನ ಲೆಂಕತನಕ್ಕೆ ಹಾನಿ ಕೂಡಲಸಂಗಮದೇವಾ.
ಅಂಕ ಕಂಡಾ, ಕೋಲಾಸೆ ಮತ್ತೇಕಯ್ಯಾ ಲೆಂಕ ಕಂಡಾ, Read More »
ಆಯತ ಸ್ವಾಯತ ಅನುಭಾವವ ನಾನೆತ್ತ ಬಲ್ಲೆನಯ್ಯಾ ಗುರು ಲಿಂಗ ಜಂಗಮಕ್ಕೆ ಅರ್ಥಪ್ರಾಣಾಭಿಮಾನವಂ ಸಮರ್ಪಿಸಿ, ಅಹಂಕಾರವಳಿದಿಹಂತಹ ಪುರಾತನರ ಮನೆಯಲ್ಲಿ ಭೃತ್ಯರ ಭೃತ್ಯಳಾಗಿಪ್ಪೆನಯ್ಯಾ. ಇದು ಕಾರಣ, ಚೆನ್ನಮಲ್ಲಿಕಾರ್ಜುನಯ್ಯನ ಗಣಂಗಳಲ್ಲದನ್ಯವ ನಾನರಿಯೆನಯ್ಯಾ.
ಆಯತ ಸ್ವಾಯತ ಅನುಭಾವವ ನಾನೆತ್ತ ಬಲ್ಲೆನಯ್ಯಾ Read More »
ಅಸನದಿಂದ ಕುದಿದು, ವ್ಯಸನದಿಂದ ಬೆಂದು, ಅತಿ ಆಸೆಯಿಂದ ಬಳಲಿ, ವಿಷಯಕ್ಕೆ ಹರಿವ ಜೀವಿಗಳು ನಿಮ್ಮನರಿಯರು. ಕಾಲಕಲ್ಪಿತ ಪ್ರಳಯ ಜೀವಿಗಳೆಲ್ಲನಿಮ್ಮನೆತ್ತ ಬಲ್ಲರಯ್ಯ ಚೆನ್ನಮಲ್ಲಿಕಾರ್ಜುನಾ ?
ಅಷ್ಟವಿಧಾರ್ಚನೆಯ ಮಾಡಿ ಒಲಿಸುವೆನೆ ಅಯ್ಯಾ ನೀನು ಬಹಿರಂಗವ್ಯವಹಾರದೂರಸ್ಥನು. ಅಂತರಂಗದಲ್ಲಿ ಧ್ಯಾನವ ಮಾಡಿ ಒಲಿಸುವೆನೆ ಅಯ್ಯಾ ನೀನು ವಾಙ್ಮನಕ್ಕತೀತನು. ಜಪಸ್ತೋತ್ರದಿಂದ ಒಲಿಸುವೆನೆ ಅಯ್ಯಾ ನೀನು ನಾದಾತೀತನು. ಭಾವe್ಞನದಿಂದ ಒಲಿಸುವೆನೆ ಅಯ್ಯಾ ನೀನು ಮತಿಗತೀತನು. ಹೃದಯ ಕಮಲಮಧ್ಯದಲ್ಲಿ ಇಂಬಿಟ್ಟುಕೊಂಬೆನೆ ಅಯ್ಯಾ ನೀನು ಸರ್ವಾಂಗ ಪರಿಪೂರ್ಣನು. ಒಲಿಸಲೆನ್ನಳವಲ್ಲ ನೀನೊಲಿವುದೆ ಸುಖವಯ್ಯಾ ಚೆನ್ನಮಲ್ಲಿಕಾರ್ಜುನಯ್ಯಾ.
ಅಷ್ಟವಿಧಾರ್ಚನೆಯ ಮಾಡಿ ಒಲಿಸುವೆನೆ ಅಯ್ಯಾ Read More »
ಅಷ್ಟದಳಕಮಲದ ಆತ್ಮನೊಳಗೆ ಸೃಷ್ಟಿ ಜನಿಸಿ, ಕೂರುಮ ದಿಗುದಂತಿ ದಿಗುವಳಯವ ನುಂಗಿ, ನಿಜಶೂನ್ಯ ತಾನಾದ ಬಳಿಕ, ತನ್ನ ತಾನರಿದ ನಿಜಪದ ಭಿನ್ನಯೋಗಕ್ಕೆ ಬಹುದೆ ಕಂಗಳ ನೋಟದಲ್ಲಿ ಮನದ ಸೊಗಸಿನಲ್ಲಿ, ಅನಂಗನ ದಾಳಿಯನಗಲಿದೆನಣ್ಣಾ. ಮರೀಚಿಕಾಜಲದೊಳಡಗಿದ ಪ್ರಾಣಿ ವ್ಯಾಧನ ಬಲೆಯೊಳಗಹುದೆ ಎನ್ನದೇವ ಚೆನ್ನಮಲ್ಲಿಕಾರ್ಜುನನಲ್ಲದೆಪರಪುರುಷರು ನಮಗಾಗದಣ್ಣಾ.
ಅಷ್ಟದಳಕಮಲದ ಆತ್ಮನೊಳಗೆ ಸೃಷ್ಟಿ ಜನಿಸಿ, Read More »
ಅಲ್ಲೆಂದಡೆ ಉಂಟೆಂಬುದೀ ಮಾಯೆ ಒಲ್ಲೆನೆಂದಡೆ ಬಿಡದೀ ಮಾಯೆ ಎನಗಿದು ವಿಧಿಯೆ ಚೆನ್ನಮಲ್ಲಿಕಾರ್ಜುನಯ್ಯಾ, ಒಪ್ಪಿ ಮರೆವೊಕ್ಕಡೆ ಮತ್ತುಂಟೆಕಾಯಯ್ಯಾ ಶಿವಧೋ !
ಅಲ್ಲೆಂದಡೆ ಉಂಟೆಂಬುದೀ ಮಾಯೆ Read More »
ಅಲ್ಲದವರೊಡನಾಡಿ ಎಲ್ಲಾ ಸಂಗವ ತೊರೆದೆ ನಾನು. ನಾರಿ ಸಂಗವತೊರೆದೆ, ನೀರ ಹೊಳೆಯ ತೊರೆದೆ ನಾನು. ಎನ್ನ ಮನದೊಡೆಯ ಚೆನ್ನಮಲ್ಲಿಕಾರ್ಜುನನ ಕೂಡುವ ಭರದಿಂದಎಲ್ಲಾ ಸಂಗವ ತೊರೆದೆ ನಾನು.
ಅಲ್ಲದವರೊಡನಾಡಿ ಎಲ್ಲಾ ಸಂಗವ ತೊರೆದೆ ನಾನು. Read More »
ಅಮೇಧ್ಯದ ಮಡಿಕೆ, ಮೂತ್ರದ ಕುಡಿಕೆ, ಎಲುವಿನ ತಡಿಕೆ, ಕೀವಿನ ಹಡಿಕೆ ಸುಡಲೀ ದೇಹವ ; ಒಡಲುವಿಡಿದು ಕೆಡದಿರು, ಚೆನ್ನಮಲ್ಲಿಕಾರ್ಜುನನನರಿಯದ ಮರುಳೆ.
ಅಮೇಧ್ಯದ ಮಡಿಕೆ, ಮೂತ್ರದ ಕುಡಿಕೆ, Read More »