ಅಕ್ಕ ಮಹಾದೇವಿ

ಅನುತಾಪದೊಡಲಿಂದೆ ಬಂದ ನೋವನುಂಬವರು

ಅನುತಾಪದೊಡಲಿಂದೆ ಬಂದ ನೋವನುಂಬವರು ಒಡಲೊ, ಪ್ರಾಣವೊ, ಆರು ಹೇಳಾ ಎನ್ನೊಡಲಿಂಗೆ ನೀನು ಪ್ರಾಣವಾದ ಬಳಿಕ ಎನ್ನ ಒಡಲ ಸುಖ ದುಃಖವಾರ ತಾಗುವುದು ಹೇಳಯ್ಯಾ ? ಚೆನ್ನಮಲ್ಲಿಕಾರ್ಜುನಯ್ಯಾ, ಎನ್ನ ನೊಂದ ನೋವು, ಬೆಂದ ಬೇಗೆ,ನಿಮ್ಮ ತಾಗದೆ ಹೋಹುದೆ ಅಯ್ಯಾ

ಅನುತಾಪದೊಡಲಿಂದೆ ಬಂದ ನೋವನುಂಬವರು Read More »

ಅರ್ಥಸನ್ಯಾಸಿಯಾದಡೇನಯ್ಯಾ,

ಅರ್ಥಸನ್ಯಾಸಿಯಾದಡೇನಯ್ಯಾ, ಆವಂಗದಿಂದ ಬಂದಡೂ ಕೊಳದಿರಬೇಕು. ರುಚಿಸನ್ಯಾಸಿಯಾದಡೇನಯ್ಯಾ, ಜಿಹ್ವೆಯ ಕೊನೆಯಲ್ಲಿ ಮಧುರವನರಿಯದಿರಬೇಕು. ಸ್ತ್ರೀ ಸನ್ಯಾಸಿಯಾದಡೇನಯ್ಯಾ, ಜಾಗ್ರ ಸ್ವಪ್ನ ಸುಷುಪ್ತಿಯಲ್ಲಿ ತಟ್ಟಿಲ್ಲದಿರಬೇಕು. ದಿಗಂಬರಿಯಾದಡೇನಯ್ಯಾ, ಮನ ಬತ್ತಲೆ ಇರಬೇಕು. ಇಂತೀ ಚತುರ್ವಿಧದ ಹೊಲಬರಿಯದೆ ವೃಥಾ ಕೆಟ್ಟರುಕಾಣಾ ಚೆನ್ನಮಲ್ಲಿಕಾರ್ಜುನಾ.

ಅರ್ಥಸನ್ಯಾಸಿಯಾದಡೇನಯ್ಯಾ, Read More »

ಅತ್ತೆ ಮಾಯೆ, ಮಾವ ಸಂಸಾರಿ,

ಅತ್ತೆ ಮಾಯೆ, ಮಾವ ಸಂಸಾರಿ, ಮೂವರು ಮೈದುನರು ಹುಲಿಯಂತವದಿರು, ನಾಲ್ವರು ನಗೆವೆಣ್ಣು ಕೇಳು ಕೆಳದಿ. ಐವರು ಭಾವದಿರನೊಯ್ವ ದೈವವಿಲ್ಲ. ಆರು ಪ್ರಜೆಯತ್ತಿಗೆಯರ ಮೀರಲಾರೆನು. ತಾಯೆ, ಹೇಳುವಡೆ ಏಳು ಪ್ರಜೆ ತೊತ್ತಿರ ಕಾಹು. ಕರ್ಮವೆಂಬ ಗಂಡನ ಬಾಯ ಟೊಣೆದು, ಹಾದರವನಾಡುವೆನು ಹರನಕೊಡೆ. ಮನವೆಂಬ ಸಖಿಯ ಪ್ರಸಾದದಿಂದ ಅನುಭಾವವ ಕಲಿತೆನು ಶಿವನೊಡನೆ ಕರಚೆಲುವ ಶ್ರೀಶೈಲ ಚೆನ್ನಮಲ್ಲಿಕಾರ್ಜುನನೆಂಬಸಜ್ಜನ ಗಂಡನ ಮಾಡಿಕೊಂಡೆ

ಅತ್ತೆ ಮಾಯೆ, ಮಾವ ಸಂಸಾರಿ, Read More »

ಅರಿಸಿನವನೆ ಮಿಂದು, ಹೊಂದೊಡಿಗೆಯನೆ ತೊಟ್ಟು,

ಅರಿಸಿನವನೆ ಮಿಂದು, ಹೊಂದೊಡಿಗೆಯನೆ ತೊಟ್ಟು, ದೇವಾಂಗವನುಟ್ಟೆನೆಲೆ ಪುರುಷ ಬಾರಾ, ಪುರುಷ ರತ್ನವೆ ಬಾರಾ. ನಿನ್ನ ಬರವೆನ್ನ ಅಸುವಿನ ಬರವಾದುದೀಗ, ಬಾರಯ್ಯಾ ಚೆನ್ನಮಲ್ಲಿಕಾರ್ಜುನಯ್ಯಾ,ನೀನು ಬಂದಹನೆಂದು ಬಟ್ಟೆಯ ನೋಡಿ ಬಾಯಾರುತಿರ್ದೆನು.

ಅರಿಸಿನವನೆ ಮಿಂದು, ಹೊಂದೊಡಿಗೆಯನೆ ತೊಟ್ಟು, Read More »

ಅರಿವು ಸಾಧ್ಯವಾಯಿತ್ತೆಂದು,

ಅರಿವು ಸಾಧ್ಯವಾಯಿತ್ತೆಂದು, ಗುರುಲಿಂಗಜಂಗಮವ ಬಿಡಬಹುದೆ ? ಸಂದು ಸಂಶಯವಳಿದು ಅಖಂಡ ಜ್ಞಾನವಾಯಿತ್ತೆಂದು ಪರಧನ ಪರಸ್ತ್ರೀಯರುಗಳಿಗೆ ಅಳುಪಬಹುದೆ ? ‘ಯತ್ರ ಜೀವಃ ತತ್ರ ಶಿವಃ’ ಎಂಬ ಅಭಿನ್ನ ಜ್ಞಾನವಾಯಿತ್ತೆಂದು ಶುನಕ ಸೂಕರ ಕುಕ್ಕುಟ ಮಾರ್ಜಾಲಂಗಳ ಕೂಡೆ ಭುಂಜಿಸಬಹುದೆ ? ಭಾವದಲ್ಲಿ ತನ್ನ ನಿಜದ ನೆಲೆಯನರಿತಿಹುದು’ ಸುe್ಞನ ಸತ್ಕ್ರಿಯಾ ಸುನೀತಿ ಮಾರ್ಗದಲ್ಲಿ ವರ್ತಿಸುವುದು. ಹೀಂಗಲ್ಲದೆ e್ಞನವಾಯಿತ್ತೆಂದು ತನ್ನ ಮನಕ್ಕೆ ಬಂದಹಾಂಗೆ ಮೀರಿನುಡಿದು ನಡೆದೆನಾದಡೆಶ್ವಾನಗರ್ಭದಲ್ಲಿ ಹುಟ್ಟಿಸದೆ ಬಿಡುವನೆ ಚೆನ್ನಮಲ್ಲಿಕಾರ್ಜುನಯ್ಯನು ?

ಅರಿವು ಸಾಧ್ಯವಾಯಿತ್ತೆಂದು, Read More »

ಅರಿಯದವರೊಡನೆ ಸಂಗವ ಮಾಡಿದಡೆ

ಅರಿಯದವರೊಡನೆ ಸಂಗವ ಮಾಡಿದಡೆ ಕಲ್ಲ ಹೊಯ್ದು ಕಿಡಿಯ ತೆಗೆದುಕೊಂಬಂತೆ. ಬಲ್ಲವರೊಡನೆ ಸಂಗವ ಮಾಡಿದಡೆ ಮೊಸರ ಹೊಸೆದು ಬೆಣ್ಣೆಯ ತೆಗೆದುಕೊಂಬಂತೆ. ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ಶರಣರ ಸಂಗವ ಮಾಡಿದಡೆಕರ್ಪುರದ ಗಿರಿಯನುಎಕೊಂಬಂತೆ.

ಅರಿಯದವರೊಡನೆ ಸಂಗವ ಮಾಡಿದಡೆ Read More »

ಅರಸಿ ಮೊರೆವೊಕ್ಕಡೆ ಕಾವ ಗುರುವೆ,

ಅರಸಿ ಮೊರೆವೊಕ್ಕಡೆ ಕಾವ ಗುರುವೆ, ಜಯ ಜಯ ಗುರುವೆ, ಆರೂ ಅರಿಯದ ಬಯಲೊಳಗೆ ಬಯಲಾಗಿ ನಿಂದ ನಿಲವ ಹಿಡಿದೆನ್ನ ಕರದಲ್ಲಿ ತೋರದ ಗುರುವೆ, ಚೆನ್ನಮಲ್ಲಿಕಾರ್ಜುನ ಗುರುವೆ, ಜಯ ಜಯ ಗುರುವೆ.

ಅರಸಿ ಮೊರೆವೊಕ್ಕಡೆ ಕಾವ ಗುರುವೆ, Read More »

ಅರಸಿ ತೊಳಲಿದಡಿಲ್ಲ, ಹರಸಿ ಬಳಲಿದಡಿಲ್ಲ,

ಅರಸಿ ತೊಳಲಿದಡಿಲ್ಲ, ಹರಸಿ ಬಳಲಿದಡಿಲ್ಲ, ಬಯಸಿ ಹೊಕ್ಕಡಿಲ್ಲ, ತಪಸ್ಸು ಮಾಡಿದಡಿಲ್ಲ. ಅದು ತಾನಹ ಕಾಲಕ್ಕಲ್ಲದೆ ಸಾಧ್ಯವಾಗದು. ಶಿವನೊಲಿದಲ್ಲದೆ ಕೈಗೂಡದು. ಚೆನ್ನಮಲ್ಲಿಕಾರ್ಜುನನೆನಗೊಲಿದನಾಗಿನಾನು ಸಂಗನಬಸವಣ್ಣನ ಶ್ರೀಪಾದವ ಕಂಡು ಬದುಕಿದೆನು.

ಅರಸಿ ತೊಳಲಿದಡಿಲ್ಲ, ಹರಸಿ ಬಳಲಿದಡಿಲ್ಲ, Read More »

ಅರಲುಗೊಂಡ ಕೆರೆಗೆ ತೊರೆಬಂದು ಹಾಯ್ದಂತಾಯಿತ್ತು.

ಅರಲುಗೊಂಡ ಕೆರೆಗೆ ತೊರೆಬಂದು ಹಾಯ್ದಂತಾಯಿತ್ತು. ಬರಲುಗೊಂಡ ಸಸಿಗೆ ಮಳೆ ಸುರಿದಂತಾಯಿತ್ತು ನೋಡಾ ಇಂದೆನಗೆ. ಇಹದ ಸುಖ ಪರದ ಗತಿ ನಡೆದು ಬಂದಂತಾಯಿತ್ತು ನೋಡಾ ಎನಗೆ. ಚೆನ್ನಮಲ್ಲಿಕಾರ್ಜುನಯ್ಯಾ,ಗುರುಪಾದವ ಕಂಡು ಧನ್ಯಳಾದೆ ನೋಡಾ.

ಅರಲುಗೊಂಡ ಕೆರೆಗೆ ತೊರೆಬಂದು ಹಾಯ್ದಂತಾಯಿತ್ತು. Read More »

ಅಘಟಿತ ಘಟಿತನ ಒಲವಿನ ಶಿಶು

ಅಘಟಿತ ಘಟಿತನ ಒಲವಿನ ಶಿಶು ಕಟ್ಟಿದೆನು ಜಗಕ್ಕೆ ಬಿರಿದನು. ಕಾಮ ಕ್ರೋಧ ಲೋಭ ಮೋಹ ಮದ ಮತ್ಸರಂಗಳಿಗೆ ಇಕ್ಕಿದೆನು ಕಾಲಲಿ ತೊಡರನು. ಗುರುಕೃಪೆಯೆಂಬ ತಿಗುರನಿಕ್ಕಿ ಮಹಾಶರಣೆಂಬ ತಿಲಕವನಿಕ್ಕಿ ನಿನ್ನ ಕೊಲುವೆ ಗೆಲುವೆ ಶಿವಶರಣೆಂಬ ಅಲಗ ಕೊಂಡು. ಬಿಡು ಬಿಡು ಕರ್ಮವೆ, ನಿನ್ನ ಕೊಲ್ಲದೆ ಮಾಣೆನು. ಕೆಡಹಿಸಿಕೊಳ್ಳದೆನ್ನ ನುಡಿಯ ಕೇಳಾ. ಕೆಡದ ಶಿವಶರಣೆಂಬ ಅಲಗನೆ ಕೊಂಡು ನಿನ್ನ ಕೊಲುವೆ ಗೆಲುವೆ ನಾನು. ಬ್ರಹ್ಮಪಾಶವೆಂಬ ಕಳನನೆ ಸವರಿ, ವಿಷ್ಣು ಮಾಯೆಯೆಂಬ ಎಡೆಗೋಲನೆ ನೂಕಿ, ಎನ್ನೊಡೆಯ ಚೆನ್ನಮಲ್ಲಿಕಾರ್ಜುನಯ್ಯತಲೆದೂಗಲಿ ಕಾದುವೆನು ನಾನು.

ಅಘಟಿತ ಘಟಿತನ ಒಲವಿನ ಶಿಶು Read More »

ಅಗ್ನಿ ಸರ್ವವ್ಯಾಪಕನಾಗಿರುವಂತೆ

ಅಗ್ನಿ ಸರ್ವವ್ಯಾಪಕನಾಗಿರುವಂತೆ ಚಿದ್ವಹ್ನಿರೂಪನಾದ ಶಿವನು ಸರ್ವವ್ಯಾಪಕನಾಗಿರ್ಪನು. ಹೃದಯಕಮಲವು ಮುಕುರದೋಪಾದಿಯಲ್ಲಿ ಪ್ರಕಾಶಿಸುತಿರ್ದಪುದು. ಆ ಕನ್ನಡಿಯೋಪಾದಿಯ ಹೃದಯಕಮಲದಲ್ಲಿ ವ್ಯಾಪಕನಾದ ಶಿವನು, ಆತ್ಮನೆನಿಸಿಕೊಂಡು ಪ್ರತಿಬಿಂಬಿಸುತಿರ್ದಪನು. ವೇದೋಪನಿಷದ್ಗಾಯತ್ರಿ ಪ್ರಸಿದ್ಧವಾದೀ ರಹಸ್ಯವ ಗುರೂಪದೇಶದಿಂ ತಿಳಿವುದಯ್ಯಶ್ರೀ ಚೆನ್ನಮಲ್ಲಿಕಾರ್ಜುನದೇವಾ.

ಅಗ್ನಿ ಸರ್ವವ್ಯಾಪಕನಾಗಿರುವಂತೆ Read More »

ಅಕ್ಕಿಯಿಲ್ಲದ ತುಷಕ್ಕೆ ಅಗ್ಗವಣಿಯನೆರೆದಡೆ

ಅಕ್ಕಿಯಿಲ್ಲದ ತುಷಕ್ಕೆ ಅಗ್ಗವಣಿಯನೆರೆದಡೆ ಅದೆಂದಿಂಗೆ ಬೆಳೆದು ಫಲವಪ್ಪುದಯ್ಯಾ ಅರಿವಿಲ್ಲದವರಿಗೆ ಆಚಾರವಿದ್ದಡೆ ಅರಕೆಗೆಟ್ಟು ಸುಖವೆಂದಪ್ಪುದಯ್ಯಾ ಹೊರೆದ ಪರಿಮಳ ಸ್ಥಿರವಾಗಬಲ್ಲುದೆ ಎನ್ನದೇವ ಚೆನ್ನಮಲ್ಲಿಕಾರ್ಜುನನನರಿಯದವರಿಗೆ ಆಚಾರವಿಲ್ಲ ಕಾಣಿರಣ್ಣಾ

ಅಕ್ಕಿಯಿಲ್ಲದ ತುಷಕ್ಕೆ ಅಗ್ಗವಣಿಯನೆರೆದಡೆ Read More »

ಅಕ್ಕಟಕ್ಕಟಾ, ಸಂಸಾರದ ಹಗರಣ ಬಂದಾಡಿತ್ತಲ್ಲಾ ?

ಅಕ್ಕಟಕ್ಕಟಾ, ಸಂಸಾರದ ಹಗರಣ ಬಂದಾಡಿತ್ತಲ್ಲಾ ? ಅಪ್ಪಾ ಬೊಪ್ಪಾ ಎಂಬ ಚೋಹವು ಅದು ಮೊಟ್ಟಮೊದಲಲ್ಲಿ ಬಂದಾಡಿತ್ತು. ತುಪ್ಪುಳು ತೊಡೆದಂತೆ ಮೀಸೆಯ ಚೋಹವು ಅದು ನಟ್ಟನಡುವೆ ಬಂದಾಡಿತ್ತು. ಮುಪ್ಪು ಮುಪ್ಪು ಎಂಬ ಚೋಹವು ಅದು ಕಟ್ಟಕಡೆಯಲಿ ಬಂದಾಡಿತ್ತು. ನಿಮ್ಮ ನೋಟವು ತೀರಲೊಡನೆ ಜಗದಾಟವು ತೀರಿತ್ತು ಕಾಣಾ ಚೆನ್ನಮಲ್ಲಿಕಾರ್ಜುನಾ.

ಅಕ್ಕಟಕ್ಕಟಾ, ಸಂಸಾರದ ಹಗರಣ ಬಂದಾಡಿತ್ತಲ್ಲಾ ? Read More »

ಅಕ್ಕ ಕೇಳೌ, ನಾನೊಂದು ಕನಸ ಕಂಡೆ.

ಅಕ್ಕ ಕೇಳೌ, ನಾನೊಂದು ಕನಸ ಕಂಡೆ. ಅಕ್ಕಿ ಅಡಕೆ ಓಲೆ ತೆಂಗಿನಕಾಯ ಕಂಡೆ. ಚಿಕ್ಕ ಚಿಕ್ಕ ಜಡೆಗಳ ಸುಲಿಪಲ್ಲ ಗೊರವನು ಭಿಕ್ಷಕ್ಕೆ ಮನೆಗೆ ಬಂದುದ ಕಂಡೆನವ್ವಾ. ಮಿಕ್ಕು ಮೀರಿ ಹೋಹನ ಬೆಂಬತ್ತಿ ಕೈವಿಡಿದೆನು ಚೆನ್ನಮಲ್ಲಿಕಾರ್ಜುನನ ಕಂಡು ಕಣ್ದೆರೆದೆನು.

ಅಕ್ಕ ಕೇಳೌ, ನಾನೊಂದು ಕನಸ ಕಂಡೆ. Read More »

ಅಕ್ಕ ಕೇಳಕ್ಕಾ, ನಾನೊಂದು ಕನಸ ಕಂಡೆ

ಅಕ್ಕ ಕೇಳಕ್ಕಾ, ನಾನೊಂದು ಕನಸ ಕಂಡೆ ಚಿಕ್ಕ ಚಿಕ್ಕ ಕೆಂಜೆಡೆಗಳ ಸುಲಿಪಲ್ಲ ಗೊರವನು. ಬಂದೆನ್ನ ನೆರೆದ ನೋಡವ್ವಾ ಆತನನಪ್ಪಿಕೊಂಡು ತಳವೆಳಗಾದೆನು. ಚೆನ್ನಮಲ್ಲಿಕಾರ್ಜುನನ ಕಂಡು ಕಣ್ಣಮುಚ್ಚಿ ತೆರೆದು ತಳವೆಳಗಾದೆನು.

ಅಕ್ಕ ಕೇಳಕ್ಕಾ, ನಾನೊಂದು ಕನಸ ಕಂಡೆ Read More »

ಅಂದೂ ನೀನೆ, ಇಂದೂ ನೀನೆ, ಏಂದೂ ನೀನೆ, ಕೇಳಾ ತಂದೆ

ಅಂದೂ ನೀನೆ, ಇಂದೂ ನೀನೆ, ಏಂದೂ ನೀನೆ, ಕೇಳಾ ತಂದೆ. ನಿನ್ನ ಬೆಂಬಳಿವಿಡಿದ ಹಳೆಮಗಳಾನಯ್ಯ ಅಂದೂ ಇಂದೂ ಎಂದೂ ನಿನ್ನ ನಂಬಿದ ಒಲವಿನ ಶಿಶು ನಾನಯ್ಯ. ಒಂದಲ್ಲದೆ ಎರಡಯೆನಯ್ಯಾ. ಎನ್ನ ತಂದೆ ಕೇಳಾ, ಚೆನ್ನಮಲ್ಲಿಕಾರ್ಜುನಾನಿಮ್ಮ ಎಂಜಲನುಂಬ ಹಳೆಯವಳಾನಯ್ಯಾ.

ಅಂದೂ ನೀನೆ, ಇಂದೂ ನೀನೆ, ಏಂದೂ ನೀನೆ, ಕೇಳಾ ತಂದೆ Read More »

ಅಯ್ಯಾ, ಸರ್ವಮೂಲಹಂಕಾರವಿಡಿದು

ಅಯ್ಯಾ, ಸರ್ವಮೂಲಹಂಕಾರವಿಡಿದು ಕುಲಭ್ರಮೆ ಲಭ್ರಮೆ ಜಾತಿಭ್ರಮೆ, ನಾಮ ವರ್ಣ ಆಶ್ರಮ ಮತ ಶಾಸ್ತ್ರಭ್ರಮೆ. ತರ್ಕಭ್ರಮೆ ರಾಜ್ಯಭ್ರಮೆ, ಧನ ಧಾನ್ಯ ಪುತ್ರ ಮಿತ್ರಭ್ರಮೆ, ಐಶ್ವರ್ಯ ತ್ಯಾಗ ಭೋಗ ಯೋಗಭ್ರಮೆ, ಕಾಯ ಕರಣ ವಿಷಯಭ್ರಮೆ, ವಾಯು ಮನ ಭಾವ ಜೀವ ಮೋಹಭ್ರಮೆ. ನಾಹಂ ಕೋಹಂ ಸೋಹಂ ಮಾಯಾಭ್ರಮೆ ಮೊದಲಾದ ಬತ್ತೀಸ ಪಾಶಭ್ರಮಿತರಾಗಿ ತೊಳಲುವ ವೇಷಧಾರಿಗಳ ಕಂಡು ಶಿವಶಕ್ತಿ ಶಿವಭಕ್ತ ಶಿವಪ್ರಸಾದಿ ಶಿವಶರಣ ಶಿವೈಕ್ಯ ಶಿವಜಂಗಮವೆಂದು ನುಡಿಯಲಾರದೆ ಎನ್ನ ಮನ ನಾಚಿನಿಮ್ಮಡಿಗಭಿಮುಖವಾಯಿತ್ತಯ್ಯಾ ಚೆನ್ನಮಲ್ಲಿಕಾರ್ಜುನಾ.

ಅಯ್ಯಾ, ಸರ್ವಮೂಲಹಂಕಾರವಿಡಿದು Read More »

ಅಯ್ಯಾ, ವಿರಕ್ತ ವಿರಕ್ತರೆಂದೇನೊ

ಅಯ್ಯಾ, ವಿರಕ್ತ ವಿರಕ್ತರೆಂದೇನೊ ವಿರಕ್ತಿಯ ಮಾತನಾಡುವರಲ್ಲದೆ ವಿರಕ್ತಿಕೆ ಎಲ್ಲರಿಗೆಲ್ಲಿಯದೊ ಕೈಯೊಳಗಣ ಓಲೆ, ಕಂಕುಳೊಳಗಣ ಸಂಪುಟ, ಬಾಯೊಳಗಣ ಮಾತು. ಪುಣ್ಯವಿಲ್ಲಪಾಪವಿಲ್ಲ, ಕರ್ಮವಿಲ್ಲಧರ್ಮವಿಲ್ಲ, ಸತ್ಯವಿಲ್ಲಅಸತ್ಯವಿಲ್ಲವೆಂದು ಮಾತನಾಡುತಿಪ್ಪರು. ಅದೆಂತೆಂದಡೆ ಕಂಗಳ ನೋಟ ಹಿಂಗದನ್ನಕ್ಕ, ಕೈಯೊಳಗಣ ಬೆರಟು ನಿಲ್ಲದನ್ನಕ್ಕ, ಹೃದಯದ ಕಾಮ ಉಡುಗದನ್ನಕ್ಕ ವಿರಕ್ತಿಕೆ ಎಲ್ಲರಿಗೆಲ್ಲಿಯದೊ ಬಲ್ಲ ವಿರಕ್ತನ ಹೃದಯವುದಕದೊಳಗಣ ಗುಂಡಿನಲ್ಲಿ ಮಾಣಿಕ್ಯದ ಪ್ರಭೆಯ ಕಂಡವರಾರೊ ಕಂಡಾತಂಗೆ ಕಂಗಳಲ್ಲಿ ನೋಡಿದ ಸರ್ವವಸ್ತುಗಳು ಆ ಲಿಂಗಕ್ಕರ್ಪಿತ. ಆ ಲಿಂಗವ ಕಂಡಾತಂಗೆ, ಕರ್ಣದಲ್ಲಿ ಕೇಳಿದ ಆಗಮ ಪುರಾಣಂಗಳು ಆ ಲಿಂಗಕ್ಕರ್ಪಿತ. ಆ ಲಿಂಗವ ಕಂಡಾತಂಗೆ ಜಿಹ್ವೆಯಲ್ಲಿ

ಅಯ್ಯಾ, ವಿರಕ್ತ ವಿರಕ್ತರೆಂದೇನೊ Read More »

ಅಯ್ಯಾ, ಪರಾತ್ಪರ ಸತ್ಯ ಸದಾಚಾರ

ಅಯ್ಯಾ, ಪರಾತ್ಪರ ಸತ್ಯ ಸದಾಚಾರ ಗುರುಲಿಂಗಜಂಗಮದ ಶ್ರೀಚರಣವನು ಹಿಂದೆ ಹೇಳಿದ ಅಚ್ಚಪ್ರಸಾದಿಯೋಪಾದಿಯಲ್ಲಿ ನಿರ್ವಂಚಕತ್ವದಿಂದ ಗುರುಲಿಂಗಜಂಗಮಕ್ಕೆ ಅರ್ಥಪ್ರಾಣಾಭಿಮಾನವ ಸಮರ್ಪಿಸಿ, ಒಪ್ಪತ್ತು ಅಷ್ಟವಿಧಾರ್ಚನೆ ಷೋಡಶೋಪಚಾರದಿಂದ ಅರ್ಚನೆಯ ಮಾಡಿ, ಆ ಚರಣೋದಕ ಪ್ರಸಾದವನು ತನ್ನ ಸರ್ವಾಂಗದಲ್ಲಿ ನೆಲೆಸಿರ್ಪ ಇಷ್ಟ ಮಹಾಲಿಂಗದೇವಂಗೆ ಕೊಟ್ಟು ಕೊಂಬುವಂತಹದೆ ಇದಿರಿಟ್ಟು ಜಂಗಮ ಪಾದೋದಕ ಪ್ರಸಾದವ ಕೊಂಬ ಆಚರಣೆಯ ನಿಲುಗಡೆ ನೋಡಾ. ಆಮೇಲೆ ಒಪ್ಪತ್ತು ಸಂಬಂಧವಿಟ್ಟು ಆಚರಿಸುವ ನಿಲುಕಡೆ ಎಂತೆಂದಡೆ ಅಯ್ಯಾ, ನಿನ್ನ ಷಟ್‍ಸ್ಥಾನದಲ್ಲಿ ನೆಲೆಸಿರ್ಪ ಇಷ್ಟಮಹಾಲಿಂಗದೇವನ ತ್ರಿವಿಧಸ್ಥಾನದಲ್ಲಿ ಓಂ ಬಸವಣ್ಣ ಚೆನ್ನಬಸವಣ್ಣ ಅಲ್ಲಮಪ್ರಭುವೆಂಬ ತ್ರಿವಿಧ ನಾಮಸ್ವರೂಪವಾದ ಷೋಡಶಾಕ್ಷರಂಗಳೆ

ಅಯ್ಯಾ, ಪರಾತ್ಪರ ಸತ್ಯ ಸದಾಚಾರ Read More »

ಅಯ್ಯಾ, ನೀನೆನ್ನ ಮೊರೆಯನಾಲಿಸಿದಡಾಲಿಸು,

ಅಯ್ಯಾ, ನೀನೆನ್ನ ಮೊರೆಯನಾಲಿಸಿದಡಾಲಿಸು, ಆಲಿಸದಿರ್ದಡೆ ಮಾಣು. ಅಯ್ಯಾ, ನೀನೆನ್ನ ದುಃಖವ ನೋಡಿದಡೆ ನೋಡು, ನೋಡದಿರ್ದಡೆ ಮಾಣು. ನಿನಗಿದು ವಿಧಿಯೆ ? ನೀನೊಲ್ಲದಡೆ ಆನೊಲಿಸುವ ಪರಿಯೆಂತಯ್ಯಾ ? ಮನವೆಳಸಿ ಮಾರುವೋಗಿ ಮರೆವೊಕ್ಕಡ ಕೊಂಬ ಪರಿಯೆಂತಯ್ಯಾ ಚೆನ್ನಮಲ್ಲಿಕಾರ್ಜುನಾ ?ಆಲಿಸದಿರ್ದಡೆ ಮಾಣು. ಅಯ್ಯಾ, ನೀನೆನ್ನ ದುಃಖವ ನೋಡಿದಡೆ ನೋಡು, ನೋಡದಿರ್ದಡೆ ಮಾಣು. ನಿನಗಿದು ವಿಧಿಯೆ ? ನೀನೊಲ್ಲದಡೆ ಆನೊಲಿಸುವ ಪರಿಯೆಂತಯ್ಯಾ ? ಮನವೆಳಸಿ ಮಾರುವೋಗಿ ಮರೆವೊಕ್ಕಡೆಕೊಂಬ ಪರಿಯೆಂತಯ್ಯಾ ಚೆನ್ನಮಲ್ಲಿಕಾರ್ಜುನಾ ?

ಅಯ್ಯಾ, ನೀನೆನ್ನ ಮೊರೆಯನಾಲಿಸಿದಡಾಲಿಸು, Read More »

ಅಯ್ಯಾ, ನಿಮ್ಮ ಸಜ್ಜನ ಸದ್ಭಕ್ತರ ಕಂಡೆನಾಗಿ,

ಅಯ್ಯಾ, ನಿಮ್ಮ ಸಜ್ಜನ ಸದ್ಭಕ್ತರ ಕಂಡೆನಾಗಿ, ಎನ್ನ ಕಂಗಳ ಪಟಲ ಹರಿಯಿತ್ತಿಂದು. ಅಯ್ಯಾ, ನಿಮ್ಮ ಸಜ್ಜನಸದ್ಭಕ್ತರ ಶ್ರೀಚರಣಕ್ಕೆರಗಿದೆನಾಗಿ, ಎನ್ನ ಹಣೆಯ ಲಿಖಿತ ತೊಡೆಯಿತ್ತಿಂದು. ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ಶರಣ ಸಂಗನಬಸವಣ್ಣನ ಪಾದವ ಕಂಡುಮಿಗೆ ಮಿಗೆ ನಮೋ ನಮೋ ಎನುತಿರ್ದೆನಯ್ಯಾ.

ಅಯ್ಯಾ, ನಿಮ್ಮ ಸಜ್ಜನ ಸದ್ಭಕ್ತರ ಕಂಡೆನಾಗಿ, Read More »

ಅಯ್ಯಾ, ನಿಮ್ಮ ಶರಣರು ಮೆಟ್ಟಿದ ಧರೆ ಪಾವನವಯ್ಯಾ

ಅಯ್ಯಾ, ನಿಮ್ಮ ಶರಣರು ಮೆಟ್ಟಿದ ಧರೆ ಪಾವನವಯ್ಯಾ. ಅಯ್ಯಾ, ನಿಮ್ಮ ಶರಣರಿದ್ದ ಪುರವೆ ಕೈಲಾಸಪುರವಯ್ಯಾ. ಅಯ್ಯಾ, ನಿಮ್ಮ ಶರಣರು ನಿಂದುದೆ ನಿಜನಿವಾಸವಯ್ಯಾ. ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ಶರಣ ಬಸವಣ್ಣನಿದ್ದ ಕ್ಷೇತ್ರ ಅವಿಮುಕ್ತ ಕ್ಷೇತ್ರವಾಗಿ, ಆನು ಸಂಗನಬಸವಣ್ಣನ ಶ್ರೀಪಾದಕ್ಕೆನಮೋ ನಮೋ ಎನುತಿರ್ದೆನು.

ಅಯ್ಯಾ, ನಿಮ್ಮ ಶರಣರು ಮೆಟ್ಟಿದ ಧರೆ ಪಾವನವಯ್ಯಾ Read More »

ಅಯ್ಯಾ, ನಿಮ್ಮ ಶರಣರ ಬರವಿಂಗೆ

ಅಯ್ಯಾ, ನಿಮ್ಮ ಶರಣರ ಬರವಿಂಗೆ ಗುಡಿ ತೋರಣವ ಕಟ್ಟುವೆ. ಅಯ್ಯಾ, ನಿಮ್ಮ ಶರಣರ ಬರವಿಂಗೆ ಮುಡುಹಿನಲ್ಲಿ ಪಟ್ಟವ ಕಟ್ಟುವೆ. ಅಯ್ಯಾ, ನಿಮ್ಮ ಶರಣರೆನ್ನ ಮನೆಗೆ ಬಂದಡೆ, ಅವರ ಶ್ರೀಪಾದವನೆನ್ನ ಹೃದಯದಲ್ಲಿ ಬಗೆದಿಟ್ಟುಕೊಂಬೆ,ಕಾಣಾ ಚೆನ್ನಮಲ್ಲಿಕಾರ್ಜುನಾ.

ಅಯ್ಯಾ, ನಿಮ್ಮ ಶರಣರ ಬರವಿಂಗೆ Read More »

ಅಯ್ಯಾ, ನಿಮ್ಮ ಶರಣರ ಕೂಡಿದ

ಅಯ್ಯಾ, ನಿಮ್ಮ ಶರಣರ ಕೂಡಿದ ಸುಖವನುಪಮೆಗೆ ತರಬಾರದಯ್ಯಾ. ಅಯ್ಯಾ, ನಿಮ್ಮ ಮಹಂತರ ಕೂಡಿ ಅಗಲುವ ಧಾವತಿಗಿಂತ ಸಾವುದೇ ಕರಲೇಸಯ್ಯಾ. ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮನರುಹಿದ ಮಹಿಮರನಗಲಿಆನು ನಿಲ್ಲಲಾರೆನಯ್ಯಾ.

ಅಯ್ಯಾ, ನಿಮ್ಮ ಶರಣರ ಕೂಡಿದ Read More »

ಅಯ್ಯಾ, ನಿಮ್ಮ ಅನುಭಾವಿಗಳ ಸಂಗದಿಂದ

ಅಯ್ಯಾ, ನಿಮ್ಮ ಅನುಭಾವಿಗಳ ಸಂಗದಿಂದ ಎನ್ನ ತನು ಶುದ್ಧವಾಯಿತ್ತು. ಅಯ್ಯಾ, ನಿಮ್ಮ ಅನುಭಾವಿಗಳ ಸಂಗದಿಂದ ಎನ್ನ ಮನ ಶುದ್ಧವಾಯಿತ್ತು. ಅಯ್ಯಾ, ನಿಮ್ಮ ಅನುಭಾವಿಗಳ ಸಂಗದಿಂದ ಎನ್ನ ಪ್ರಾಣ ಶುದ್ಧವಾಯಿತ್ತು. ಅಯ್ಯಾ, ನಿಮ್ಮ ಅನುಭಾವಿಗಳು ಎನ್ನ ಒರೆದೊರೆದು ಆಗುಮಾಡಿದ ಕಾರಣ ಚೆನ್ನಮಲ್ಲಿಕಾರ್ಜುನಯ್ಯಾ, ನಿಮಗಾನು ತೊಡಿಗೆಯಾದೆನು.

ಅಯ್ಯಾ, ನಿಮ್ಮ ಅನುಭಾವಿಗಳ ಸಂಗದಿಂದ Read More »