ಚರಾಚರಾತ್ಮಕ ಪ್ರಪಂಚವೆಲ್ಲ

ಚರಾಚರಾತ್ಮಕ ಪ್ರಪಂಚವೆಲ್ಲ ಶಿವನ ಚಿದ್ಗರ್ಭದಿಂದುಯಿಸಿಪ್ಪವೆಂದು, ಶಿವಾಭಿನ್ನತ್ವದಿಂ ಸಕಲಪ್ರಾಣಿಗಳಲ್ಲಿ ತನ್ನಾತ್ಮಚೇತನವ ತನ್ನಲ್ಲಿ ಸಕಲ ಪ್ರಾಣಿಗಳ ಆತ್ಮ ಚೇತನವ ಕಂಡು, ದಯಾಪರತ್ವವನುಳ್ಳ ಸರ್ವಜ್ಞತಾ ಶಕ್ತಿಯನು ಭಕ್ತಿಸ್ಥಲದಲ್ಲಿ ಪಡೆವುದು ನೋಡಾ. ತನಗೆ ಬಂದ ಅಪವಾದ ನಿಂದೆ ಎ ಡರಾಪತ್ತುಗಳಲ್ಲಿ ಎದೆಗುಂದದೆ ಬಪ್ಪ ಸುಖ ದುಃಖ ಖೇದ ಹರ್ಷಾದಿಗಳು ಶಿವಾe್ಞÉಯಹುದೆಂದು ಪರಿಣತನಪ್ಪ ತೃಪ್ತಿಯ ಶಕ್ತಿಯನು ಮಾಹೇಶ್ವರಸ್ಥಲದಲ್ಲಿ ಪಡೆವುದು ನೋಡಾ. ದೇಹಾದಿ ಆದಿ ಪ್ರಪಂಚಕ್ಕೆ ಮೂಲಿಗನಾದ ಅನಾದಿ ಪರಶಿವನು ಪ್ರಸನ್ನತ್ವವನುಂಟುಮಾಡುವ ಅನಾದಿ ಬೋಧ ಶಕ್ತಿಯನು ಪ್ರಸಾದಿಸ್ಥಲದಲ್ಲಿ ಪಡೆವುದು ನೋಡಾ. ಅಂತಪ್ಪ ದೇಹಾದಿ ಪ್ರಪಂಚದ ಚಲನವಲನವು […]

ಚರಾಚರಾತ್ಮಕ ಪ್ರಪಂಚವೆಲ್ಲ Read More »

ಚಕ್ರ ಬೆಸಗೆಯ್ವಡೆ ಅಲಗಿನ ಹಂಗೇಕೆ ?

ಚಕ್ರ ಬೆಸಗೆಯ್ವಡೆ ಅಲಗಿನ ಹಂಗೇಕೆ ? ಮಾಣಿಕ್ಯದ ಬೆಳಗುಳ್ಳಡೆ ದೀಪದ ಹಂಗೇಕೆ ? ಪರುಷ ಕೈಯ್ಯಲುಳ್ಳಡೆ ಸಿರಿಯ ಹಂಗೇಕೆ ? ಕಾಮಧೇನು ಕರೆವಡೆ ಕರುವಿನ ಹಂಗೇಕೆ ? ಎನ್ನದೇವ ಚೆನ್ನಮಲ್ಲಿಕಾರ್ಜುನಲಿಂಗವು ಕರಸ್ಥಳದೊಳಗುಳ್ಳಡೆ ಇನ್ನಾವ ಹಂಗೇಕೆ ?

ಚಕ್ರ ಬೆಸಗೆಯ್ವಡೆ ಅಲಗಿನ ಹಂಗೇಕೆ ? Read More »

ಚಂದ್ರಕಾಂತದ ಶಿಲೆಗೆ ಒಂದು ಗಜ ಹೋರುವಂತೆ

ಚಂದ್ರಕಾಂತದ ಶಿಲೆಗೆ ಒಂದು ಗಜ ಹೋರುವಂತೆ ತನ್ನ ನೆಳಲಿಂಗೆ ತಾನೆ ಹೋರಿ ಸಾವಂತೆ ಆನೆಯ ಗತಿ ಆನೆಯ ಮತಿ. ಆನೆಯಹುದು, ಆನೆಯಲ್ಲ, ಅದನೇನೆಂಬೆ ? ನೀನೆನ್ನ ಕರಸ್ಥಲದಲ್ಲಿ ಸಿಲ್ಕಿದೆಯಾಗಿ ನೀ ನಾನೆಂಬ ಭ್ರಾಂತೇಕೆ ? ನಾನು ನೀನಲ್ಲದ ತೆರಹಿಲ್ಲ, ಚೆನ್ನಮಲ್ಲಿಕಾರ್ಜುನಾ.

ಚಂದ್ರಕಾಂತದ ಶಿಲೆಗೆ ಒಂದು ಗಜ ಹೋರುವಂತೆ Read More »

ಚಂದನವ ಕಡಿದು ಕೊರೆದು ತೇದಡೆ

ಚಂದನವ ಕಡಿದು ಕೊರೆದು ತೇದಡೆ ನೊಂದೆನೆಂದು ಕಂಪ ಬಿಟ್ಟಿತ್ತೆ ? ತಂದು ಸುವರ್ಣವ ಕಡಿದೊರೆದಡೆ ಬೆಂದು ಕಳಂಕ ಹಿಡಿಯಿತ್ತೆ ? ಸಂದುಸಂದು ಕಡಿದ ಕಬ್ಬನು ತಂದು ಗಾಣದಲ್ಲಿಕ್ಕಿ ಅರೆದಡೆ, ಬೆಂದು ಪಾಕಗುಡದೆ ಸಕ್ಕರೆಯಾಗಿ ನೊಂದೆನೆಂದು ಸಿಹಿಯ ಬಿಟ್ಟಿತ್ತೆ ? ನಾ ಹಿಂದೆ ಮಾಡಿದ ಹೀನಂಗಳೆಲ್ಲವ ತಂದು ಮುಂದಿಳುಹಲು ನಿಮಗೇ ಹಾನಿ. ಎನ್ನ ತಂದೆ ಚೆನ್ನಮಲ್ಲಿಕಾರ್ಜುನಯ್ಯಾ, ನೀ ಕೊಂದಡೆಯೂ ಶರಣೆಂಬುದ ಮಾಣೆ.

ಚಂದನವ ಕಡಿದು ಕೊರೆದು ತೇದಡೆ Read More »

ಘನವ ಕಂಡೆ, ಅನುವ ಕಂಡೆ,

ಘನವ ಕಂಡೆ, ಅನುವ ಕಂಡೆ, ಆಯತ ಸ್ವಾಯತ ಸನ್ನಿಹಿತ ಸುಖವ ಕಂಡೆ. ಅರಿವರಿದು ಮರಹ ಮರೆದೆ. ಕುರುಹಿನ ಮೋಹ ಮೊರೆಗೆಡದೆ ಚೆನ್ನಮಲ್ಲಿಕಾರ್ಜುನಾ, ನಿಮ್ಮನರಿದು ಸೀಮೆಗೆಟ್ಟೆನು.

ಘನವ ಕಂಡೆ, ಅನುವ ಕಂಡೆ, Read More »

ಗಿರಿಯೊಳು ಮನದೊಳು ಗಿಡಗಿಡದತ್ತ

ಗಿರಿಯೊಳು ಮನದೊಳು ಗಿಡಗಿಡದತ್ತ ದೇವ, ಎನ್ನದೇವ, ಬಾರಯ್ಯಾ, ತೋರಯ್ಯಾ ನಿಮ್ಮ ಕರುಣವನೆಂದು, ನಾನು ಅರಸುತ್ತ ಅಳಲುತ್ತ ಕಾಣದೆ ಸುಯಿದು ಬಂದು ಕಂಡೆ. ಶರಣರ ಸಂಗದಿಂದ ಅರಸಿ ಹಿಡಿದಿಹೆನಿಂದು ನೀನಡಗುವ ಠಾವ ಹೇಳಾ ಚೆನ್ನಮಲ್ಲಿಕಾರ್ಜುನಾ.

ಗಿರಿಯೊಳು ಮನದೊಳು ಗಿಡಗಿಡದತ್ತ Read More »

ಗಿರಿಯಲಲ್ಲದೆ ಹುಲ್ಲುಮೊರಡಿಯಲ್ಲಾಡುವುದೆ ನವಿಲು ?

ಗಿರಿಯಲಲ್ಲದೆ ಹುಲ್ಲುಮೊರಡಿಯಲ್ಲಾಡುವುದೆ ನವಿಲು ? ಕೊಳಕ್ಕಲ್ಲದೆ ಕಿರುವಳ್ಳಕ್ಕೆಳಸುವುದೆ ಹಂಸೆ ? ಮಾಮರ ತಳಿತಲ್ಲದೆ ಸರಗೈವುದೆ ಕೋಗಿಲೆ ? ಪರಿಮಳವಿಲ್ಲದ ಪುಷ್ಪಕ್ಕೆಳಸುವುದೆ ಭ್ರಮರ ? ಎನ್ನ ದೇವ ಚೆನ್ನಮಲ್ಲಿಕಾರ್ಜುನಂಗಲ್ಲದೆ ಅನ್ಯಕ್ಕೆಳಸುವುದೆ ಎನ್ನ ಮನ ? ಪೇಳಿರೆ, ಕೆಳದಿಯರಿರಾ ?

ಗಿರಿಯಲಲ್ಲದೆ ಹುಲ್ಲುಮೊರಡಿಯಲ್ಲಾಡುವುದೆ ನವಿಲು ? Read More »

ಗೂಗೆ ಕಣ್ಣ ಕಾಣಲರಿಯದೆ ರವಿಯ ಬಯ್ವುದು.

ಗೂಗೆ ಕಣ್ಣ ಕಾಣಲರಿಯದೆ ರವಿಯ ಬಯ್ವುದು. ಕಾಗೆ ಕಣ್ಣ ಕಾಣಲರಿಯದೆ ಶಶಿಯ ಬಯ್ವುದು. ಕುರುಡ ಕಣ್ಣ ಕಾಣಲರಿಯದೆ ಕನ್ನಡಿಯ ಬಯ್ವನು. ಇವರ ಮಾತೆಲ್ಲವು ಸಹಜವೆ ನರಕಸಂಸಾರದಲ್ಲಿ ಹೊದಕುಳಿಗೊಳುತ್ತ ಶಿವನಿಲ್ಲ ಮುಕ್ತಿಯಿಲ್ಲ, ಹುಸಿಯೆಂದಡೆ ನರಕದಲ್ಲಿಕ್ಕದೆ ಬಿಡುವನೆ ಚೆನ್ನಮಲ್ಲಿಕಾರ್ಜುನಯ್ಯ

ಗೂಗೆ ಕಣ್ಣ ಕಾಣಲರಿಯದೆ ರವಿಯ ಬಯ್ವುದು. Read More »

ಗುಣ ದೋಷ ಸಂಪಾದನೆಯ ಮಾಡುವನ್ನಕ್ಕ

ಗುಣ ದೋಷ ಸಂಪಾದನೆಯ ಮಾಡುವನ್ನಕ್ಕ ಕಾಮದ ಒಡಲು, ಕ್ರೋಧದ ಗೊತ್ತು, ಲೋಭದ ಇಕ್ಕೆ, ಮೋಹದ ಮಂದಿರ, ಮದದಾವರಣ, ಮತ್ಸರದ ಹೊದಕೆ. ಆ ಭಾವವರತಲ್ಲದೆ ಚೆನ್ನಮಲ್ಲಿಕಾರ್ಜುನನ ಅರಿವುದಕ್ಕೆ ಇಂಬಿಲ್ಲ ಕಾಣಿರಣ್ಣಾ.

ಗುಣ ದೋಷ ಸಂಪಾದನೆಯ ಮಾಡುವನ್ನಕ್ಕ Read More »

ಗುರುವಿನ ಕರುಣದಿಂದ ಲಿಂಗವ ಕಂಡೆ, ಜಂಗಮನ ಕಂಡೆ.

ಗುರುವಿನ ಕರುಣದಿಂದ ಲಿಂಗವ ಕಂಡೆ, ಜಂಗಮನ ಕಂಡೆ. ಗುರುವಿನ ಕರುಣದಿಂದ ಪಾದೋದಕವ ಕಂಡೆ, ಪ್ರಸಾದವ ಕಂಡೆ. ಗುರುವಿನ ಕರುಣದಿಂದ ಸಜ್ಜನ ಸದ್ಭಕ್ತರ ಸದ್ಗೋಷ್ಠಿಯ ಕಂಡೆ. ಚೆನ್ನಮಲ್ಲಿಕಾರ್ಜುನಯ್ಯಾ, ನಾ ಹುಟ್ಟಲೊಡನೆ ಶ್ರೀಗುರು ವಿಭೂತಿಯ ಪಟ್ಟವ ಕಟ್ಟಿ ಲಿಂಗಸ್ವಾಯತವ ಮಾಡಿದನಾಗಿ ಧನ್ಯಳಾದೆನು.

ಗುರುವಿನ ಕರುಣದಿಂದ ಲಿಂಗವ ಕಂಡೆ, ಜಂಗಮನ ಕಂಡೆ. Read More »

ಗುರುವೆಂಬ ತೆತ್ತಿಗನು

ಗುರುವೆಂಬ ತೆತ್ತಿಗನು ಲಿಂಗವೆಂಬಲಗನು ಮನನಿಷ್ಠೆಯೆಂಬ ಕೈಯಲ್ಲಿ ಕೊಡಲು, ಕಾದಿದೆ ಗೆಲಿದೆ ಕಾಮನೆಂಬವನ, ಕ್ರೋಧಾದಿಗಳು ಕೆಟ್ಟು, ವಿಷಯಂಗಳೋಡಿದವು. ಅಲಗು ಎನ್ನೊಳು ನಟ್ಟು ಆನಳಿದ ಕಾರಣ ಚೆನ್ನಮಲ್ಲಿಕಾರ್ಜುನಲಿಂಗವ ಕರದಲ್ಲಿ ಹಿಡಿದೆ.

ಗುರುವೆಂಬ ತೆತ್ತಿಗನು Read More »

ಗುರುವೆ ತೆತ್ತಿಗನಾದ,

ಗುರುವೆ ತೆತ್ತಿಗನಾದ, ಲಿಂಗವೆ ಮದುವಣಿಗನಾದ, ನಾನೆ ಮದುವಳಿಗೆಯಾದೆನು. ಈ ಭುವನವೆಲ್ಲರಿಯಲು ಅಸಂಖ್ಯಾತರೆನಗೆ ತಾಯಿತಂದೆಗಳು. ಕೊಟ್ಟರು ಸಾದೃಶ್ಯವಪ್ಪ ವರನ ನೋಡಿ. ಇದು ಕಾರಣ ಚೆನ್ನಮಲ್ಲಿಕಾರ್ಜುನನೆ ಗಂಡನೆನಗೆ. ಮಿಕ್ಕಿನ ಲೋಕದವರೆನಗೆ ಸಂಬಂಧವಿಲ್ಲವಯ್ಯಾ ಪ್ರಭುವೆ.

ಗುರುವೆ ತೆತ್ತಿಗನಾದ, Read More »

ಗುರುಪಾದತೀರ್ಥವೆ ಮಂಗಳ ಮಜ್ಜನವೆನಗೆ.

ಗುರುಪಾದತೀರ್ಥವೆ ಮಂಗಳ ಮಜ್ಜನವೆನಗೆ. ವಿಭೂತಿಯೆ ಒಳಗುಂದದರಿಷಿಣವೆನಗೆ ದಿಗಂಬರವೆ ದಿವ್ಯಾಂಬರವೆನಗೆ. ಶಿವಭಕ್ತರ ಪಾದರೇಣುವೆ ಅನುಲೇಪನವೆನಗೆ. ರುದ್ರಾಕ್ಷಿಯೆ ಮೈದೊಡಿಗೆಯೆನಗೆ. ಶರಣರ ಪಾದರಕ್ಷೆಯೆ ಶಿರದಲ್ಲಿ ತೊಂಡಿಲುಬಾಸಿಗವೆನಗೆ. ಚೆನ್ನಮಲ್ಲಿಕಾರ್ಜುನನ ಮದವಳಿಗೆಗೆ ಬೇರೆ ಶೃಂಗಾರವೇಕೆ ಹೇಳಿರೆ ಅವ್ವಗಳಿರಾ ?

ಗುರುಪಾದತೀರ್ಥವೆ ಮಂಗಳ ಮಜ್ಜನವೆನಗೆ. Read More »

ಗುರು ತನ್ನ ವಿನೋದಕ್ಕೆ ಗುರುವಾದ

ಗುರು ತನ್ನ ವಿನೋದಕ್ಕೆ ಗುರುವಾದ ಗುರು ತನ್ನ ವಿನೋದಕ್ಕೆ ಲಿಂಗವಾದ ಗುರು ತನ್ನ ವಿನೋದಕ್ಕೆ ಜಂಗಮವಾದ ಗುರು ತನ್ನ ವಿನೋದಕ್ಕೆ ಪಾದೋದಕವಾದ ಗುರು ತನ್ನ ವಿನೋದಕ್ಕೆ ಪ್ರಸಾದವಾದ ಗುರು ತನ್ನ ವಿನೋದಕ್ಕೆ ವಿಭೂತಿಯಾದ ಗುರು ತನ್ನ ವಿನೋದಕ್ಕೆ ರುದ್ರಾಕ್ಷಿಯಾದ ಗುರು ತನ್ನ ವಿನೋದಕ್ಕೆ ಮಹಾಮಂತ್ರವಾದ. ಇಂತೀ ಭೇದವನರಿಯದೆ, ಗುರು ಲಿಂಗ ಜಂಗಮ ಪಾದತೀರ್ಥ ಪ್ರಸಾದ ವಿಭೂತಿ ರುದ್ರಾಕ್ಷಿ ಓಂ ನಮಃ ಶಿವಾಯಯೆಂಬ ಮಂತ್ರವ ಬೇರಿಟ್ಟು ಅರಿಯಬಾರದು. ಅದಲ್ಲದೆ ಒಂದರಲ್ಲಿಯೂ ವಿಶ್ವಾಸ ಬೇರಾದಡೆ ಅಂಗೈಯಲ್ಲಿರ್ದ ಲಿಂಗವು ಜಾರಿತ್ತು. ಮಾಡಿದ

ಗುರು ತನ್ನ ವಿನೋದಕ್ಕೆ ಗುರುವಾದ Read More »

ಗಟ್ಟಿದುಪ್ಪ ತಿಳಿದುಪ್ಪಕ್ಕೆ ಹಂಗುಂಟೆ ಅಯ್ಯಾ ?

ಗಟ್ಟಿದುಪ್ಪ ತಿಳಿದುಪ್ಪಕ್ಕೆ ಹಂಗುಂಟೆ ಅಯ್ಯಾ ? ದೀಪಕ್ಕೆ ದೀಪ್ತಿಗೆ ಭೇದವುಂಟೆ ಅಯ್ಯಾ ? ಅಂಗಕ್ಕೆ ಆತ್ಮಂಗೆ ಭಿನ್ನವುಂಟೆ ಅಯ್ಯಾ ? ಎನ್ನಂಗವನು ಶ್ರೀಗುರು ಮಂತ್ರವಮಾಡಿ ತೋರಿದನಾಗಿ, ಸಾವಯಕ್ಕೂ ನಿರವಯಕ್ಕೂ ಭಿನ್ನವಿಲ್ಲವಯ್ಯಾ. ಚೆನ್ನಮಲ್ಲಿಕಾರ್ಜುನದೇವರ ಬೆರಸಿ ಮತಿಗೆಟ್ಟವಳನೇತಕ್ಕೆ ನುಡಿಸುವಿರಯ್ಯಾ ?

ಗಟ್ಟಿದುಪ್ಪ ತಿಳಿದುಪ್ಪಕ್ಕೆ ಹಂಗುಂಟೆ ಅಯ್ಯಾ ? Read More »

ಗಗನದ ಗುಂಪ ಚಂದ್ರಮ ಬಲ್ಲುದಲ್ಲದೆ,

ಗಗನದ ಗುಂಪ ಚಂದ್ರಮ ಬಲ್ಲುದಲ್ಲದೆ, ಕಡೆಯಲಿದ್ದಾಡುವ ಹದ್ದು ಬಲ್ಲುದೆ ಅಯ್ಯಾ ? ನದಿಯ ಗುಂಪ ತಾವರೆ ಬಲ್ಲುದಲ್ಲದೆ, ಕಡೆಯಲಿದ್ದ ಹೊನ್ನಾವರಿಕೆ ಬಲ್ಲುದೆ ಅಯ್ಯಾ ? ಪುಷ್ಪದ ಪರಿಮಳವ ತುಂಬಿ ಬಲ್ಲುದಲ್ಲದೆ, ಕಡೆಯಲಿದ್ದಾಡುವ ನೊರಜು ಬಲ್ಲುದೆ ಅಯ್ಯಾ ? ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ಶರಣರ ನಿಲವ ನೀವೆ ಬಲ್ಲಿರಲ್ಲದೆ, ಈ ಕೋಣನ ಮೈಮೇಲಣ ಸೊಳ್ಳೆಗಳೆತ್ತ ಬಲ್ಲವಯ್ಯಾ ?

ಗಗನದ ಗುಂಪ ಚಂದ್ರಮ ಬಲ್ಲುದಲ್ಲದೆ, Read More »

ಗಂಡ ನೀನು ಹೆಂಡತಿಯಾನು ಮತ್ತೊಬ್ಬರಿಲ್ಲಯ್ಯಾ.

ಗಂಡ ನೀನು ಹೆಂಡತಿಯಾನು ಮತ್ತೊಬ್ಬರಿಲ್ಲಯ್ಯಾ. ನಿನ್ನ ಬೆಂಬಳಿಯಲಾನು ಮೆಚ್ಚಿಬಂದೆ. ಕಂಡಕಂಡವರೆಲ್ಲ ಬಲುಹಿಂದ ಕೈಹಿಡಿದರೆ, ಗಂಡಾ, ನಿನಗೆ ಸೈರಣೆಯೆಂತಾಯಿತ್ತು ಹೇಳಾ ? ಚೆನ್ನಮಲ್ಲಿಕಾರ್ಜುನಯ್ಯಾ, ನಿನ್ನ ತೋಳ ಮೇಲಣವಳನನ್ಯರೆಳದೊಯ್ಯುವರೆ ನೋಡುತಿಹುದುಚಿತವೆ ಕರುಣಿಗಳರಸಾ ?

ಗಂಡ ನೀನು ಹೆಂಡತಿಯಾನು ಮತ್ತೊಬ್ಬರಿಲ್ಲಯ್ಯಾ. Read More »

ಗಂಗೆಯೊಡನಾಡಿದ ಘಟ್ಟ ಬೆಟ್ಟಂಗಳು ಕೆಟ್ಟ ಕೇಡ ನೋಡಿರಯ್ಯಾ.

ಗಂಗೆಯೊಡನಾಡಿದ ಘಟ್ಟ ಬೆಟ್ಟಂಗಳು ಕೆಟ್ಟ ಕೇಡ ನೋಡಿರಯ್ಯಾ. ಅಗ್ನಿಯೊಡನಾಡಿದ ಕಾಷ್ಠಂಗಳು ಕೆಟ್ಟ ಕೇಡ ನೋಡಿರಯ್ಯಾ. ಜ್ಯೋತಿಯೊಡನಾಡಿದ ಕತ್ತಲೆ ಕೆಟ್ಟ ಕೇಡ ನೋಡಿರಯ್ಯಾ. e್ಞನಿಯೊಡನಾಡಿದ ಅe್ಞನಿ ಕೆಟ್ಟ ಕೇಡ ನೋಡಿರಯ್ಯಾ. ಎಲೆ ಪರಶಿವಮೂರ್ತಿ ಹರನೆ, ನಿಮ್ಮ ಜಂಗಮಲಿಂಗದೊಡನಾಡಿ ಎನ್ನ ಭವಾದಿ ಭವಂಗಳು ಕೆಟ್ಟ ಕೇಡ ನೋಡಾ, ಚೆನ್ನಮಲ್ಲಿಕಾರ್ಜುನಾ

ಗಂಗೆಯೊಡನಾಡಿದ ಘಟ್ಟ ಬೆಟ್ಟಂಗಳು ಕೆಟ್ಟ ಕೇಡ ನೋಡಿರಯ್ಯಾ. Read More »

ಕ್ರಿಯೆಗಳು ಮುಟ್ಟಲರಿಯವು,

ಕ್ರಿಯೆಗಳು ಮುಟ್ಟಲರಿಯವು, ನಿಮ್ಮನೆಂತು ಪೂಜಿಸುವೆ ? ನಾದ ಬಿಂದುಗಳು ಮುಟ್ಟಲರಿಯವು, ನಿಮ್ಮನೆಂತು ಹಾಡುವೆ ? ಕಾಯ ಮುಟ್ಟುವಡೆ ಕಾಣಬಾರದ ಘನವು, ನಿಮ್ಮನೆಂತು ಕರಸ್ಥಲದಲ್ಲಿ ಧರಿಸುವೆ ? ಚೆನ್ನಮಲ್ಲಿಕಾರ್ಜುನಯ್ಯಾ, ನಾನೇನೆಂದರಿಯದೆ ನಿಮ್ಮ ನೋಡಿ ನೋಡಿ ಸೈವೆರಗಾಗುತಿರ್ದೆನು.

ಕ್ರಿಯೆಗಳು ಮುಟ್ಟಲರಿಯವು, Read More »

ಕೀಡಿ ತುಂಬಿಯ ಹಂಬಲದಿಂದ ತುಂಬಿಯಾಗಿ

ಕೀಡಿ ತುಂಬಿಯ ಹಂಬಲದಿಂದ ತುಂಬಿಯಾಗಿ ತನ್ನ ಬಿಡಲುಂಟೆ ಅಯ್ಯಾ ? ಆನು ನಿಮ್ಮ ನೆನೆದು ಎನ್ನ ಕರತುಂಬಿ, ಎನ್ನ ಮನತುಂಬಿ, ಎನ್ನ ಭಾವತುಂಬಿ, ಮತ್ತಿಲ್ಲದೆ ನಿನ್ನ ಕೂಟದ ಸವಿಗಲೆಯನೆಂತು ಕಾಣುವೆನಯ್ಯಾ ಚೆನ್ನಮಲ್ಲಿಕಾರ್ಜುನಾ ?

ಕೀಡಿ ತುಂಬಿಯ ಹಂಬಲದಿಂದ ತುಂಬಿಯಾಗಿ Read More »

ಕಿಡಿ ಕಿಡಿ ಕೆದರಿದಡೆ ಎನಗೆ ಹಸಿವು ತೃಷೆಯಡಗಿತ್ತೆಂಬೆನು.

ಕಿಡಿ ಕಿಡಿ ಕೆದರಿದಡೆ ಎನಗೆ ಹಸಿವು ತೃಷೆಯಡಗಿತ್ತೆಂಬೆನು. ಮುಗಿಲು ಹರಿದು ಬಿದ್ದಡೆ ಎನಗೆ ಮಜ್ಜನಕ್ಕೆರೆದರೆಂಬೆನು. ಗಿರಿ ಮೇಲೆ ಬಿದ್ದಡೆ ಎನಗೆ ಪುಷ್ಪವೆಂಬೆನು. ಚೆನ್ನಮಲ್ಲಿಕಾರ್ಜುನಯ್ಯಾ, ಶಿರ ಹರಿದು ಬಿದ್ದಡೆ ಪ್ರಾಣ ನಿಮಗರ್ಪಿತವೆಂಬೆನು.

ಕಿಡಿ ಕಿಡಿ ಕೆದರಿದಡೆ ಎನಗೆ ಹಸಿವು ತೃಷೆಯಡಗಿತ್ತೆಂಬೆನು. Read More »

ಕಿರಿಯರಹುದರಿದಲ್ಲದೆ,

ಕಿರಿಯರಹುದರಿದಲ್ಲದೆ, ಹಿರಿಯರಹುದರಿದಲ್ಲ ನೋಡಾ ! [ಭವಿಯಹುದರಿದಲ್ಲದೆ] ಭಕ್ತನಹುದರಿದಲ್ಲ ನೋಡಾ. ಕುರುಹಹುದರಿದಲ್ಲದೆ, ನಿರಾಳವಹುದರಿದಲ್ಲ ಚೆನ್ನಮಲ್ಲಿಕಾರ್ಜುನಯ್ಯಾ ?

ಕಿರಿಯರಹುದರಿದಲ್ಲದೆ, Read More »

ಕೈಸಿರಿಯ ದಂಡವ ಕೊಳಬಹುದಲ್ಲದೆ,

ಕೈಸಿರಿಯ ದಂಡವ ಕೊಳಬಹುದಲ್ಲದೆ, ಮೈಸಿರಿಯ ದಂಡವ ಕೊಳಲುಂಟೆ ? ಉಟ್ಟಂತಹ ಉಡಿಗೆ ತೊಡಿಗೆಯನೆಲ್ಲ ಸೆಳೆದುಕೊಳಬಹುದಲ್ಲದೆ, ಮುಚ್ಚಿರ್ದ ಮುಸುಕಿರ್ದ ನಿರ್ವಾಣವ ಸೆಳೆದುಕೊಳಬಹುದೆ ? ಚೆನ್ನಮಲ್ಲಿಕಾರ್ಜುನದೇವರ ಬೆಳಗನುಟ್ಟು ಲಜ್ಜೆಗೆಟ್ಟವಳಿಗೆ ಉಡುಗೆ ತೊಡುಗೆಯ ಹಂಗೇಕೋ ಮರುಳೆ ?

ಕೈಸಿರಿಯ ದಂಡವ ಕೊಳಬಹುದಲ್ಲದೆ, Read More »

ಕೈಯ ಧನವ ಕೊಂಡಡೆ, ಮೈಯ ಭಾಷೆಯ ಕೊಳಬಹುದೆ ?

ಕೈಯ ಧನವ ಕೊಂಡಡೆ, ಮೈಯ ಭಾಷೆಯ ಕೊಳಬಹುದೆ ? ಉಟ್ಟ ಉಡುಗೆಯ ಸೆಳೆದುಕೊಂಡರೆ, ಮುಚ್ಚಿ ಮುಸುಕಿದ ನಿರ್ವಾಣವ ಸೆಳೆಯಬಹುದೆ ? ನೋಡುವಿರಿ ಎಲೆ ಅಣ್ಣಗಳಿರಾ, ಕುಲವಳಿದು ಲವಳಿದು ಭವಗೆಟ್ಟು ಭಕ್ತೆಯಾದವಳ. ಎನ್ನನೇಕೆ ನೋಡುವಿರಿ ಎಲೆ ತಂದೆಗಳಿರಾ, ಚೆನ್ನಮಲ್ಲಿಕಾರ್ಜುನನ ಕೂಡಿ ಕುಲವಳಿದುಲವುಳಿದವಳನು.

ಕೈಯ ಧನವ ಕೊಂಡಡೆ, ಮೈಯ ಭಾಷೆಯ ಕೊಳಬಹುದೆ ? Read More »

ಕೋಲ ತುದಿಯ ಕೋಡಗದಂತೆ,

ಕೋಲ ತುದಿಯ ಕೋಡಗದಂತೆ, ನೇಣ ತುದಿಯ ಬೊಂಬೆಯಂತೆ, ಆಡಿದೆನಯ್ಯಾ ನೀನಾಡಿಸಿದಂತೆ, ಆನು ನುಡಿದೆನಯ್ಯಾ ನೀ ನುಡಿಸಿದಂತೆ, ಆನು ಇದ್ದೆನಯ್ಯಾ ನೀನು ಇರಿಸಿದಂತೆ, ಜಗದ ಯಂತ್ರವಾಹಕ ಚೆನ್ನಮಲ್ಲಿಕಾರ್ಜುನ ಸಾಕೆಂಬನ್ನಕ್ಕ.

ಕೋಲ ತುದಿಯ ಕೋಡಗದಂತೆ, Read More »