ಆಕಾರವಿಲ್ಲದ ನಿರಾಕಾರ ಲಿಂಗವ

ಆಕಾರವಿಲ್ಲದ ನಿರಾಕಾರ ಲಿಂಗವ ಕೈಯಲ್ಲಿ ಹಿಡಿದು ಕಟ್ಟಿದೆವೆಂಬರು ಅಜ್ಞಾನಿ ಜೀವಿಗಳು. ಹರಿಬ್ರಹ್ಮರು ವೇದ ಪುರಾಣ ಆಗಮಂಗಳು ಅರಸಿ ಕಾಣದ ಲಿಂಗ. ಭಕ್ತಿಗೆ ಫಲವಲ್ಲದೆ ಲಿಂಗವಿಲ್ಲ. ಕರ್ಮಕ್ಕೆ ನರಕವಲ್ಲದೆ ಲಿಂಗವಿಲ್ಲ. ಜ್ಞಾನಕ್ಕೆ ಪರಿಭ್ರಮಣವಲ್ಲದೆ ಲಿಂಗವಿಲ್ಲ. ವೈರಾಗ್ಯಕ್ಕೆ ಮುಕ್ತಿಯಲ್ಲದೆ ಲಿಂಗವಿಲ್ಲ. ಇದು ಕಾರಣ ತನ್ನ ತಾನರಿದು ತಾನಾದಡೆಚೆನ್ನಮಲ್ಲಿಕಾರ್ಜುನ ತಾನೆ ಬೇರಿಲ್ಲ.

ಆಕಾರವಿಲ್ಲದ ನಿರಾಕಾರ ಲಿಂಗವ Read More »

ಆಯುಷ್ಯ ಹೋಗುತ್ತಿದೆ, ಭವಿಷ್ಯ ತೊಲಗುತ್ತಿದೆ,

ಆಯುಷ್ಯ ಹೋಗುತ್ತಿದೆ, ಭವಿಷ್ಯ ತೊಲಗುತ್ತಿದೆ, ಕೂಡಿರ್ದ ಸತಿಸುತರು ತಮತಮಗೆ ಹರಿದು ಹೋಗುತ್ತೈದಾರೆ ; ಬೇಡ ಬೇಡವೆಲೆ ಬಂಜೆಯಾಗಿ ಕೆಡಬೇಡ ಬಯಲಿಂಗೆ ಮನವೆ, ಚೆನ್ನಮಲ್ಲಿಕಾರ್ಜುನನ ಶರಣರ ಸಂಗದಲ್ಲಿ, ಹೂಣಿ ಹೊಕ್ಕು ಬದುಕು ಕಂಡಾ,ಮನವೆ.

ಆಯುಷ್ಯ ಹೋಗುತ್ತಿದೆ, ಭವಿಷ್ಯ ತೊಲಗುತ್ತಿದೆ, Read More »

ಆಯತ ಸ್ವಾಯತ ಅನುಭಾವವ ನಾನೆತ್ತ ಬಲ್ಲೆನಯ್ಯಾ

ಆಯತ ಸ್ವಾಯತ ಅನುಭಾವವ ನಾನೆತ್ತ ಬಲ್ಲೆನಯ್ಯಾ ಗುರು ಲಿಂಗ ಜಂಗಮಕ್ಕೆ ಅರ್ಥಪ್ರಾಣಾಭಿಮಾನವಂ ಸಮರ್ಪಿಸಿ, ಅಹಂಕಾರವಳಿದಿಹಂತಹ ಪುರಾತನರ ಮನೆಯಲ್ಲಿ ಭೃತ್ಯರ ಭೃತ್ಯಳಾಗಿಪ್ಪೆನಯ್ಯಾ. ಇದು ಕಾರಣ, ಚೆನ್ನಮಲ್ಲಿಕಾರ್ಜುನಯ್ಯನ ಗಣಂಗಳಲ್ಲದನ್ಯವ ನಾನರಿಯೆನಯ್ಯಾ.

ಆಯತ ಸ್ವಾಯತ ಅನುಭಾವವ ನಾನೆತ್ತ ಬಲ್ಲೆನಯ್ಯಾ Read More »

ಅಸನದಿಂದ ಕುದಿದು,

ಅಸನದಿಂದ ಕುದಿದು, ವ್ಯಸನದಿಂದ ಬೆಂದು, ಅತಿ ಆಸೆಯಿಂದ ಬಳಲಿ, ವಿಷಯಕ್ಕೆ ಹರಿವ ಜೀವಿಗಳು ನಿಮ್ಮನರಿಯರು. ಕಾಲಕಲ್ಪಿತ ಪ್ರಳಯ ಜೀವಿಗಳೆಲ್ಲನಿಮ್ಮನೆತ್ತ ಬಲ್ಲರಯ್ಯ ಚೆನ್ನಮಲ್ಲಿಕಾರ್ಜುನಾ ?

ಅಸನದಿಂದ ಕುದಿದು, Read More »

ಅಷ್ಟವಿಧಾರ್ಚನೆಯ ಮಾಡಿ ಒಲಿಸುವೆನೆ ಅಯ್ಯಾ

ಅಷ್ಟವಿಧಾರ್ಚನೆಯ ಮಾಡಿ ಒಲಿಸುವೆನೆ ಅಯ್ಯಾ ನೀನು ಬಹಿರಂಗವ್ಯವಹಾರದೂರಸ್ಥನು. ಅಂತರಂಗದಲ್ಲಿ ಧ್ಯಾನವ ಮಾಡಿ ಒಲಿಸುವೆನೆ ಅಯ್ಯಾ ನೀನು ವಾಙ್ಮನಕ್ಕತೀತನು. ಜಪಸ್ತೋತ್ರದಿಂದ ಒಲಿಸುವೆನೆ ಅಯ್ಯಾ ನೀನು ನಾದಾತೀತನು. ಭಾವe್ಞನದಿಂದ ಒಲಿಸುವೆನೆ ಅಯ್ಯಾ ನೀನು ಮತಿಗತೀತನು. ಹೃದಯ ಕಮಲಮಧ್ಯದಲ್ಲಿ ಇಂಬಿಟ್ಟುಕೊಂಬೆನೆ ಅಯ್ಯಾ ನೀನು ಸರ್ವಾಂಗ ಪರಿಪೂರ್ಣನು. ಒಲಿಸಲೆನ್ನಳವಲ್ಲ ನೀನೊಲಿವುದೆ ಸುಖವಯ್ಯಾ ಚೆನ್ನಮಲ್ಲಿಕಾರ್ಜುನಯ್ಯಾ.

ಅಷ್ಟವಿಧಾರ್ಚನೆಯ ಮಾಡಿ ಒಲಿಸುವೆನೆ ಅಯ್ಯಾ Read More »

ಅಷ್ಟದಳಕಮಲದ ಆತ್ಮನೊಳಗೆ ಸೃಷ್ಟಿ ಜನಿಸಿ,

ಅಷ್ಟದಳಕಮಲದ ಆತ್ಮನೊಳಗೆ ಸೃಷ್ಟಿ ಜನಿಸಿ, ಕೂರುಮ ದಿಗುದಂತಿ ದಿಗುವಳಯವ ನುಂಗಿ, ನಿಜಶೂನ್ಯ ತಾನಾದ ಬಳಿಕ, ತನ್ನ ತಾನರಿದ ನಿಜಪದ ಭಿನ್ನಯೋಗಕ್ಕೆ ಬಹುದೆ ಕಂಗಳ ನೋಟದಲ್ಲಿ ಮನದ ಸೊಗಸಿನಲ್ಲಿ, ಅನಂಗನ ದಾಳಿಯನಗಲಿದೆನಣ್ಣಾ. ಮರೀಚಿಕಾಜಲದೊಳಡಗಿದ ಪ್ರಾಣಿ ವ್ಯಾಧನ ಬಲೆಯೊಳಗಹುದೆ ಎನ್ನದೇವ ಚೆನ್ನಮಲ್ಲಿಕಾರ್ಜುನನಲ್ಲದೆಪರಪುರುಷರು ನಮಗಾಗದಣ್ಣಾ.

ಅಷ್ಟದಳಕಮಲದ ಆತ್ಮನೊಳಗೆ ಸೃಷ್ಟಿ ಜನಿಸಿ, Read More »

ಅಲ್ಲೆಂದಡೆ ಉಂಟೆಂಬುದೀ ಮಾಯೆ

ಅಲ್ಲೆಂದಡೆ ಉಂಟೆಂಬುದೀ ಮಾಯೆ ಒಲ್ಲೆನೆಂದಡೆ ಬಿಡದೀ ಮಾಯೆ ಎನಗಿದು ವಿಧಿಯೆ ಚೆನ್ನಮಲ್ಲಿಕಾರ್ಜುನಯ್ಯಾ, ಒಪ್ಪಿ ಮರೆವೊಕ್ಕಡೆ ಮತ್ತುಂಟೆಕಾಯಯ್ಯಾ ಶಿವಧೋ !

ಅಲ್ಲೆಂದಡೆ ಉಂಟೆಂಬುದೀ ಮಾಯೆ Read More »

ಅಲ್ಲದವರೊಡನಾಡಿ ಎಲ್ಲಾ ಸಂಗವ ತೊರೆದೆ ನಾನು.

ಅಲ್ಲದವರೊಡನಾಡಿ ಎಲ್ಲಾ ಸಂಗವ ತೊರೆದೆ ನಾನು. ನಾರಿ ಸಂಗವತೊರೆದೆ, ನೀರ ಹೊಳೆಯ ತೊರೆದೆ ನಾನು. ಎನ್ನ ಮನದೊಡೆಯ ಚೆನ್ನಮಲ್ಲಿಕಾರ್ಜುನನ ಕೂಡುವ ಭರದಿಂದಎಲ್ಲಾ ಸಂಗವ ತೊರೆದೆ ನಾನು.

ಅಲ್ಲದವರೊಡನಾಡಿ ಎಲ್ಲಾ ಸಂಗವ ತೊರೆದೆ ನಾನು. Read More »

ಅಮೇಧ್ಯದ ಮಡಿಕೆ, ಮೂತ್ರದ ಕುಡಿಕೆ,

ಅಮೇಧ್ಯದ ಮಡಿಕೆ, ಮೂತ್ರದ ಕುಡಿಕೆ, ಎಲುವಿನ ತಡಿಕೆ, ಕೀವಿನ ಹಡಿಕೆ ಸುಡಲೀ ದೇಹವ ; ಒಡಲುವಿಡಿದು ಕೆಡದಿರು, ಚೆನ್ನಮಲ್ಲಿಕಾರ್ಜುನನನರಿಯದ ಮರುಳೆ.

ಅಮೇಧ್ಯದ ಮಡಿಕೆ, ಮೂತ್ರದ ಕುಡಿಕೆ, Read More »

ಅಮೃತವನುಂಬ ಶಿಶುವಿಂಗೆ ವಿಷವನೂಡುವರೆ ಅಯ್ಯಾ

ಅಮೃತವನುಂಬ ಶಿಶುವಿಂಗೆ ವಿಷವನೂಡುವರೆ ಅಯ್ಯಾ ನೆಳಲ ತಂಪಿನಲ್ಲಿ ಬೆಳೆದ ಸಸಿಗೆ ಉರಿಯ ಬೇಲಿಯ ಕಟ್ಟುವರೆ ಅಯ್ಯಾ ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ಕರುಣದ ಕಂದನೊಡನೆಸೂನೆಗಾರರ ಮಾತನಾಡಿಸುವರೆ ಅಯ್ಯಾ

ಅಮೃತವನುಂಬ ಶಿಶುವಿಂಗೆ ವಿಷವನೂಡುವರೆ ಅಯ್ಯಾ Read More »

ಅಪಾರ ಘನಗಂಭೀರದ ಅಂಬುದಿಯಲ್ಲಿ

ಅಪಾರ ಘನಗಂಭೀರದ ಅಂಬುದಿಯಲ್ಲಿ ತಾರಾಪಥವಂ ನೋಡಿ ನಡೆಯೆ, ಭೈತ್ರದಿಂದ ದ್ವೀಪ ದ್ವೀಪಾಂತರಕ್ಕೆ ಸಕಲ ಪದಾರ್ಥವನೆಯ್ದಿಸುವುದು, ಎನ್ನ ದೇವ ಚೆನ್ನಮಲ್ಲಿಕಾರ್ಜುನಯ್ಯನ ಸಮೀಪ ತೂರ್ಯಸಂಭಾಷಣೆಯನರಿದಡೆಮುನ್ನಿನಲ್ಲಿಗೆಯ್ದಿಸುವುದು.

ಅಪಾರ ಘನಗಂಭೀರದ ಅಂಬುದಿಯಲ್ಲಿ Read More »

ಅನಿಮಿಷನಲ್ಲಮಯ್ಯ, ಮರುಳಶಂಕರಯ್ಯ,

ಅನಿಮಿಷನಲ್ಲಮಯ್ಯ, ಮರುಳಶಂಕರಯ್ಯ, ಕೋಲಶಾಂತಯ್ಯ, ಮಾದಾರ ಧೂಳಯ್ಯ, ಮಿಂಡಮಲ್ಲಿನಾಥ, ಚೆನ್ನಬಸವಣ್ಣ, ಚೇರಮರಾಯ, ತೆಲುಗ ಜೊಮ್ಮಣ್ಣ, ಕಿನ್ನರಯ್ಯ, ಹಲಾಯುಧ, ದಾಸಿಮಯ್ಯ, ಭಂಡಾರಿ, ಬಸವರಾಜ ಮುಖ್ಯವಾದಚೆನ್ನಮಲ್ಲಿಕಾರ್ಜುನನ ಶರಣರಿಗೆ ನಮೋ ನಮೋ ಎಂಬೆನು.

ಅನಿಮಿಷನಲ್ಲಮಯ್ಯ, ಮರುಳಶಂಕರಯ್ಯ, Read More »

ಅನ್ನವ ನೀಡುವವರಿಂಗೆ ಧಾನ್ಯವೆಸೆವ ಲೋಕ.

ಅನ್ನವ ನೀಡುವವರಿಂಗೆ ಧಾನ್ಯವೆಸೆವ ಲೋಕ. ಅರ್ಥವ ಕೊಡುವವರಿಂಗೆ ಪಾಷಾಣವೆಸೆವ ಲೋಕ. ಹೆಣ್ಣು ಹೊನ್ನು ಮಣ್ಣು ಮೂರನೂ ಕಣ್ಣಿನಲಿ ನೋಡಿ, ಕಿವಿಯಲಿ ಕೇಳಿ, ಕೈಯಲಿ ಮುಟ್ಟಿ, ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತ್ತು. ತನ್ನನಿತ್ತು ತುಷ್ಟಿವಡೆವರನೆನಗೆ ತೋರಾಶ್ರೀಗಿರಿ ಚೆನ್ನಮಲ್ಲಿಕಾರ್ಜುನಾ.

ಅನ್ನವ ನೀಡುವವರಿಂಗೆ ಧಾನ್ಯವೆಸೆವ ಲೋಕ. Read More »

ಅನುತಾಪದೊಡಲಿಂದೆ ಬಂದ ನೋವನುಂಬವರು

ಅನುತಾಪದೊಡಲಿಂದೆ ಬಂದ ನೋವನುಂಬವರು ಒಡಲೊ, ಪ್ರಾಣವೊ, ಆರು ಹೇಳಾ ಎನ್ನೊಡಲಿಂಗೆ ನೀನು ಪ್ರಾಣವಾದ ಬಳಿಕ ಎನ್ನ ಒಡಲ ಸುಖ ದುಃಖವಾರ ತಾಗುವುದು ಹೇಳಯ್ಯಾ ? ಚೆನ್ನಮಲ್ಲಿಕಾರ್ಜುನಯ್ಯಾ, ಎನ್ನ ನೊಂದ ನೋವು, ಬೆಂದ ಬೇಗೆ,ನಿಮ್ಮ ತಾಗದೆ ಹೋಹುದೆ ಅಯ್ಯಾ

ಅನುತಾಪದೊಡಲಿಂದೆ ಬಂದ ನೋವನುಂಬವರು Read More »

ಅರ್ಥಸನ್ಯಾಸಿಯಾದಡೇನಯ್ಯಾ,

ಅರ್ಥಸನ್ಯಾಸಿಯಾದಡೇನಯ್ಯಾ, ಆವಂಗದಿಂದ ಬಂದಡೂ ಕೊಳದಿರಬೇಕು. ರುಚಿಸನ್ಯಾಸಿಯಾದಡೇನಯ್ಯಾ, ಜಿಹ್ವೆಯ ಕೊನೆಯಲ್ಲಿ ಮಧುರವನರಿಯದಿರಬೇಕು. ಸ್ತ್ರೀ ಸನ್ಯಾಸಿಯಾದಡೇನಯ್ಯಾ, ಜಾಗ್ರ ಸ್ವಪ್ನ ಸುಷುಪ್ತಿಯಲ್ಲಿ ತಟ್ಟಿಲ್ಲದಿರಬೇಕು. ದಿಗಂಬರಿಯಾದಡೇನಯ್ಯಾ, ಮನ ಬತ್ತಲೆ ಇರಬೇಕು. ಇಂತೀ ಚತುರ್ವಿಧದ ಹೊಲಬರಿಯದೆ ವೃಥಾ ಕೆಟ್ಟರುಕಾಣಾ ಚೆನ್ನಮಲ್ಲಿಕಾರ್ಜುನಾ.

ಅರ್ಥಸನ್ಯಾಸಿಯಾದಡೇನಯ್ಯಾ, Read More »

ಅತ್ತೆ ಮಾಯೆ, ಮಾವ ಸಂಸಾರಿ,

ಅತ್ತೆ ಮಾಯೆ, ಮಾವ ಸಂಸಾರಿ, ಮೂವರು ಮೈದುನರು ಹುಲಿಯಂತವದಿರು, ನಾಲ್ವರು ನಗೆವೆಣ್ಣು ಕೇಳು ಕೆಳದಿ. ಐವರು ಭಾವದಿರನೊಯ್ವ ದೈವವಿಲ್ಲ. ಆರು ಪ್ರಜೆಯತ್ತಿಗೆಯರ ಮೀರಲಾರೆನು. ತಾಯೆ, ಹೇಳುವಡೆ ಏಳು ಪ್ರಜೆ ತೊತ್ತಿರ ಕಾಹು. ಕರ್ಮವೆಂಬ ಗಂಡನ ಬಾಯ ಟೊಣೆದು, ಹಾದರವನಾಡುವೆನು ಹರನಕೊಡೆ. ಮನವೆಂಬ ಸಖಿಯ ಪ್ರಸಾದದಿಂದ ಅನುಭಾವವ ಕಲಿತೆನು ಶಿವನೊಡನೆ ಕರಚೆಲುವ ಶ್ರೀಶೈಲ ಚೆನ್ನಮಲ್ಲಿಕಾರ್ಜುನನೆಂಬಸಜ್ಜನ ಗಂಡನ ಮಾಡಿಕೊಂಡೆ

ಅತ್ತೆ ಮಾಯೆ, ಮಾವ ಸಂಸಾರಿ, Read More »

ಅರಿಸಿನವನೆ ಮಿಂದು, ಹೊಂದೊಡಿಗೆಯನೆ ತೊಟ್ಟು,

ಅರಿಸಿನವನೆ ಮಿಂದು, ಹೊಂದೊಡಿಗೆಯನೆ ತೊಟ್ಟು, ದೇವಾಂಗವನುಟ್ಟೆನೆಲೆ ಪುರುಷ ಬಾರಾ, ಪುರುಷ ರತ್ನವೆ ಬಾರಾ. ನಿನ್ನ ಬರವೆನ್ನ ಅಸುವಿನ ಬರವಾದುದೀಗ, ಬಾರಯ್ಯಾ ಚೆನ್ನಮಲ್ಲಿಕಾರ್ಜುನಯ್ಯಾ,ನೀನು ಬಂದಹನೆಂದು ಬಟ್ಟೆಯ ನೋಡಿ ಬಾಯಾರುತಿರ್ದೆನು.

ಅರಿಸಿನವನೆ ಮಿಂದು, ಹೊಂದೊಡಿಗೆಯನೆ ತೊಟ್ಟು, Read More »

ಅರಿವು ಸಾಧ್ಯವಾಯಿತ್ತೆಂದು,

ಅರಿವು ಸಾಧ್ಯವಾಯಿತ್ತೆಂದು, ಗುರುಲಿಂಗಜಂಗಮವ ಬಿಡಬಹುದೆ ? ಸಂದು ಸಂಶಯವಳಿದು ಅಖಂಡ ಜ್ಞಾನವಾಯಿತ್ತೆಂದು ಪರಧನ ಪರಸ್ತ್ರೀಯರುಗಳಿಗೆ ಅಳುಪಬಹುದೆ ? ‘ಯತ್ರ ಜೀವಃ ತತ್ರ ಶಿವಃ’ ಎಂಬ ಅಭಿನ್ನ ಜ್ಞಾನವಾಯಿತ್ತೆಂದು ಶುನಕ ಸೂಕರ ಕುಕ್ಕುಟ ಮಾರ್ಜಾಲಂಗಳ ಕೂಡೆ ಭುಂಜಿಸಬಹುದೆ ? ಭಾವದಲ್ಲಿ ತನ್ನ ನಿಜದ ನೆಲೆಯನರಿತಿಹುದು’ ಸುe್ಞನ ಸತ್ಕ್ರಿಯಾ ಸುನೀತಿ ಮಾರ್ಗದಲ್ಲಿ ವರ್ತಿಸುವುದು. ಹೀಂಗಲ್ಲದೆ e್ಞನವಾಯಿತ್ತೆಂದು ತನ್ನ ಮನಕ್ಕೆ ಬಂದಹಾಂಗೆ ಮೀರಿನುಡಿದು ನಡೆದೆನಾದಡೆಶ್ವಾನಗರ್ಭದಲ್ಲಿ ಹುಟ್ಟಿಸದೆ ಬಿಡುವನೆ ಚೆನ್ನಮಲ್ಲಿಕಾರ್ಜುನಯ್ಯನು ?

ಅರಿವು ಸಾಧ್ಯವಾಯಿತ್ತೆಂದು, Read More »

ಅರಿಯದವರೊಡನೆ ಸಂಗವ ಮಾಡಿದಡೆ

ಅರಿಯದವರೊಡನೆ ಸಂಗವ ಮಾಡಿದಡೆ ಕಲ್ಲ ಹೊಯ್ದು ಕಿಡಿಯ ತೆಗೆದುಕೊಂಬಂತೆ. ಬಲ್ಲವರೊಡನೆ ಸಂಗವ ಮಾಡಿದಡೆ ಮೊಸರ ಹೊಸೆದು ಬೆಣ್ಣೆಯ ತೆಗೆದುಕೊಂಬಂತೆ. ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ಶರಣರ ಸಂಗವ ಮಾಡಿದಡೆಕರ್ಪುರದ ಗಿರಿಯನುಎಕೊಂಬಂತೆ.

ಅರಿಯದವರೊಡನೆ ಸಂಗವ ಮಾಡಿದಡೆ Read More »

ಅರಸಿ ಮೊರೆವೊಕ್ಕಡೆ ಕಾವ ಗುರುವೆ,

ಅರಸಿ ಮೊರೆವೊಕ್ಕಡೆ ಕಾವ ಗುರುವೆ, ಜಯ ಜಯ ಗುರುವೆ, ಆರೂ ಅರಿಯದ ಬಯಲೊಳಗೆ ಬಯಲಾಗಿ ನಿಂದ ನಿಲವ ಹಿಡಿದೆನ್ನ ಕರದಲ್ಲಿ ತೋರದ ಗುರುವೆ, ಚೆನ್ನಮಲ್ಲಿಕಾರ್ಜುನ ಗುರುವೆ, ಜಯ ಜಯ ಗುರುವೆ.

ಅರಸಿ ಮೊರೆವೊಕ್ಕಡೆ ಕಾವ ಗುರುವೆ, Read More »

ಅರಸಿ ತೊಳಲಿದಡಿಲ್ಲ, ಹರಸಿ ಬಳಲಿದಡಿಲ್ಲ,

ಅರಸಿ ತೊಳಲಿದಡಿಲ್ಲ, ಹರಸಿ ಬಳಲಿದಡಿಲ್ಲ, ಬಯಸಿ ಹೊಕ್ಕಡಿಲ್ಲ, ತಪಸ್ಸು ಮಾಡಿದಡಿಲ್ಲ. ಅದು ತಾನಹ ಕಾಲಕ್ಕಲ್ಲದೆ ಸಾಧ್ಯವಾಗದು. ಶಿವನೊಲಿದಲ್ಲದೆ ಕೈಗೂಡದು. ಚೆನ್ನಮಲ್ಲಿಕಾರ್ಜುನನೆನಗೊಲಿದನಾಗಿನಾನು ಸಂಗನಬಸವಣ್ಣನ ಶ್ರೀಪಾದವ ಕಂಡು ಬದುಕಿದೆನು.

ಅರಸಿ ತೊಳಲಿದಡಿಲ್ಲ, ಹರಸಿ ಬಳಲಿದಡಿಲ್ಲ, Read More »

ಅರಲುಗೊಂಡ ಕೆರೆಗೆ ತೊರೆಬಂದು ಹಾಯ್ದಂತಾಯಿತ್ತು.

ಅರಲುಗೊಂಡ ಕೆರೆಗೆ ತೊರೆಬಂದು ಹಾಯ್ದಂತಾಯಿತ್ತು. ಬರಲುಗೊಂಡ ಸಸಿಗೆ ಮಳೆ ಸುರಿದಂತಾಯಿತ್ತು ನೋಡಾ ಇಂದೆನಗೆ. ಇಹದ ಸುಖ ಪರದ ಗತಿ ನಡೆದು ಬಂದಂತಾಯಿತ್ತು ನೋಡಾ ಎನಗೆ. ಚೆನ್ನಮಲ್ಲಿಕಾರ್ಜುನಯ್ಯಾ,ಗುರುಪಾದವ ಕಂಡು ಧನ್ಯಳಾದೆ ನೋಡಾ.

ಅರಲುಗೊಂಡ ಕೆರೆಗೆ ತೊರೆಬಂದು ಹಾಯ್ದಂತಾಯಿತ್ತು. Read More »

ಅಘಟಿತ ಘಟಿತನ ಒಲವಿನ ಶಿಶು

ಅಘಟಿತ ಘಟಿತನ ಒಲವಿನ ಶಿಶು ಕಟ್ಟಿದೆನು ಜಗಕ್ಕೆ ಬಿರಿದನು. ಕಾಮ ಕ್ರೋಧ ಲೋಭ ಮೋಹ ಮದ ಮತ್ಸರಂಗಳಿಗೆ ಇಕ್ಕಿದೆನು ಕಾಲಲಿ ತೊಡರನು. ಗುರುಕೃಪೆಯೆಂಬ ತಿಗುರನಿಕ್ಕಿ ಮಹಾಶರಣೆಂಬ ತಿಲಕವನಿಕ್ಕಿ ನಿನ್ನ ಕೊಲುವೆ ಗೆಲುವೆ ಶಿವಶರಣೆಂಬ ಅಲಗ ಕೊಂಡು. ಬಿಡು ಬಿಡು ಕರ್ಮವೆ, ನಿನ್ನ ಕೊಲ್ಲದೆ ಮಾಣೆನು. ಕೆಡಹಿಸಿಕೊಳ್ಳದೆನ್ನ ನುಡಿಯ ಕೇಳಾ. ಕೆಡದ ಶಿವಶರಣೆಂಬ ಅಲಗನೆ ಕೊಂಡು ನಿನ್ನ ಕೊಲುವೆ ಗೆಲುವೆ ನಾನು. ಬ್ರಹ್ಮಪಾಶವೆಂಬ ಕಳನನೆ ಸವರಿ, ವಿಷ್ಣು ಮಾಯೆಯೆಂಬ ಎಡೆಗೋಲನೆ ನೂಕಿ, ಎನ್ನೊಡೆಯ ಚೆನ್ನಮಲ್ಲಿಕಾರ್ಜುನಯ್ಯತಲೆದೂಗಲಿ ಕಾದುವೆನು ನಾನು.

ಅಘಟಿತ ಘಟಿತನ ಒಲವಿನ ಶಿಶು Read More »

ಅಗ್ನಿ ಸರ್ವವ್ಯಾಪಕನಾಗಿರುವಂತೆ

ಅಗ್ನಿ ಸರ್ವವ್ಯಾಪಕನಾಗಿರುವಂತೆ ಚಿದ್ವಹ್ನಿರೂಪನಾದ ಶಿವನು ಸರ್ವವ್ಯಾಪಕನಾಗಿರ್ಪನು. ಹೃದಯಕಮಲವು ಮುಕುರದೋಪಾದಿಯಲ್ಲಿ ಪ್ರಕಾಶಿಸುತಿರ್ದಪುದು. ಆ ಕನ್ನಡಿಯೋಪಾದಿಯ ಹೃದಯಕಮಲದಲ್ಲಿ ವ್ಯಾಪಕನಾದ ಶಿವನು, ಆತ್ಮನೆನಿಸಿಕೊಂಡು ಪ್ರತಿಬಿಂಬಿಸುತಿರ್ದಪನು. ವೇದೋಪನಿಷದ್ಗಾಯತ್ರಿ ಪ್ರಸಿದ್ಧವಾದೀ ರಹಸ್ಯವ ಗುರೂಪದೇಶದಿಂ ತಿಳಿವುದಯ್ಯಶ್ರೀ ಚೆನ್ನಮಲ್ಲಿಕಾರ್ಜುನದೇವಾ.

ಅಗ್ನಿ ಸರ್ವವ್ಯಾಪಕನಾಗಿರುವಂತೆ Read More »

ಅಕ್ಕಿಯಿಲ್ಲದ ತುಷಕ್ಕೆ ಅಗ್ಗವಣಿಯನೆರೆದಡೆ

ಅಕ್ಕಿಯಿಲ್ಲದ ತುಷಕ್ಕೆ ಅಗ್ಗವಣಿಯನೆರೆದಡೆ ಅದೆಂದಿಂಗೆ ಬೆಳೆದು ಫಲವಪ್ಪುದಯ್ಯಾ ಅರಿವಿಲ್ಲದವರಿಗೆ ಆಚಾರವಿದ್ದಡೆ ಅರಕೆಗೆಟ್ಟು ಸುಖವೆಂದಪ್ಪುದಯ್ಯಾ ಹೊರೆದ ಪರಿಮಳ ಸ್ಥಿರವಾಗಬಲ್ಲುದೆ ಎನ್ನದೇವ ಚೆನ್ನಮಲ್ಲಿಕಾರ್ಜುನನನರಿಯದವರಿಗೆ ಆಚಾರವಿಲ್ಲ ಕಾಣಿರಣ್ಣಾ

ಅಕ್ಕಿಯಿಲ್ಲದ ತುಷಕ್ಕೆ ಅಗ್ಗವಣಿಯನೆರೆದಡೆ Read More »