ಅಯ್ಯಾ, ನಿಮ್ಮ ಶರಣರ ಸಂಗಸುಖವ ಏನೆಂದುಪಮಿಸುವೆನಯ್ಯಾ,

ಅಯ್ಯಾ, ನಿಮ್ಮ ಶರಣರ ಸಂಗಸುಖವ ಏನೆಂದುಪಮಿಸುವೆನಯ್ಯಾ,
ನಿಮ್ಮ ಶರಣರ ಕೂಡೆ ಸಮಗೋಷ್ಠಿಯ ಮಾಡುವುದನುಪಮಿಸಲಮ್ಮೆನಯ್ಯಾ.
ಕೂಡಲಸಂಗಾ, ನಿಮ್ಮ ಪ್ರಮಥರೆಲ್ಲರೂ ನೆರೆದ ಗಣತಿಂಥಿಣಿಯೊಳಗೆನ್ನನೇನೆಂದರಿಯದೆ
ಅಗಲದಂತಿರಿಸಯ್ಯಾ, ನಾ ನಿಮ್ಮ ಧರ್ಮದ ಕವಿಲೆ.

Leave a Comment

Your email address will not be published. Required fields are marked *