ಎನ್ನ ಮೀಸಲ ಬೀಸರ ಮಾಡಿದೆಯಲ್ಲಯ್ಯ.

ಎನ್ನ ಮೀಸಲ ಬೀಸರ ಮಾಡಿದೆಯಲ್ಲಯ್ಯ.
ಎನ್ನ ಮೀಸಲ ಬೀಸಾಡಿ ಕಳೆದೆಯಲ್ಲಯ್ಯ.
ಎನ್ನ ಭಾಷೆಯ ಪೈಸರ ಮಾಡಿದೆಯಲ್ಲಯ್ಯ.
ಎನ್ನ ಭಾಷೆಗೆ ದೋಷವ ತೋರಿಸಿದೆಯಲ್ಲಯ್ಯ.
ಎನ್ನ ಮೀಸಲ ಕಾಯವ ನಿಮಗೆಂದಿರಿಸಿಕೊಂಡಿದ್ದಡೆ,
ಬೀಸಾಡಿ ಕಳೆವರೆ ಹೇಳಾ ತಂದೆ ?
ಏಸು ಕಾಲ ನಿಮಗೆ ನಾನು ಮಾಡಿದ ತಪ್ಪ
ಈ ಸಮಯದಲ್ಲಿ ಹೊರಿಸಿ ಕೊಂದೆಯಲ್ಲಾ ಚೆನ್ಮಮಲ್ಲಿಕಾರ್ಜುನಾ.

Leave a Comment

Your email address will not be published. Required fields are marked *