ಕಟಿಹಾದ ಬಿದಿರಿನಲ್ಲಿ ಮರಳಿ ಕಳಲೆ ಮೂಡಬಲ್ಲುದೆ ?

ಕಟಿಹಾದ ಬಿದಿರಿನಲ್ಲಿ ಮರಳಿ ಕಳಲೆ ಮೂಡಬಲ್ಲುದೆ ?
ಸುಟ್ಟ ಮಡಕೆ ಮುನ್ನಿನಂತೆ ಮರಳಿ ಧರೆಯನಪ್ಪಬಲ್ಲುದೆ ?
ತೊಟ್ಟ ಬಿಟ್ಟು ಬಿದ್ದ ಹಣ್ಣು ಮರಳಿ ತೊಟ್ಟನಪ್ಪಬಲ್ಲುದೆ ?
ಕಷ್ಟಕರ್ಮಿ ಮನುಜರು ಕಾಣದೆ ಒಂದ ನುಡಿದಡೆ,
ನಿಷ್ಠೆಯುಳ್ಳ ಶರಣರು ಮರಳಿ ಮತ್ರ್ಯಕ್ಕೆ ಬಪ್ಪರೆ ಚೆನ್ನಮಲ್ಲಿಕಾರ್ಜುನಾ ?

Leave a Comment

Your email address will not be published. Required fields are marked *