ಕಾಯೊ ಕರುಣಾಕರನೆ ಕಡು ಪಾಪಿ ನಾನುನ್ಯಾಯವೆಂಬುದು ಎನ್ನೊಳೆಳ್ಳನಿತಿಲ್ಲ
ಎಣ್ಣೆ ಕೊಪ್ಪರಿಗೆಯೊಳ್ಬಿದ್ದು ಸ್ತುತಿಸಿದವನಲ್ಲಚಿನ್ನಕಶಿಪು ಬಾಧೆಗೊಳಗಾದವನಲ್ಲಬಣ್ಣಗೆಟ್ಟಡವಿಯಲಿ ತಪಸು ಮಾಡಿದವನಲ್ಲಹೆಣ್ಣನೊಲ್ಲದೆ ನಿನ್ನ ಬಂಟನಾದವನಲ್ಲ ||1||
ಒಲಿದು ದಾನವನಿತ್ತ ವೈರಿಕುಲದವನಲ್ಲಬಲು ಭಕುತಿಯ ದಾಸಿ ಪುತ್ರ ನಾನಲ್ಲಕಲಹದಲಿ ಪಣೆಗೆ ಬಾಣವ ನೆಡಿಸಿದವನಲ್ಲಕಳವಳದಿ ಕರೆದ ಪಾಂಚಾಲಿ ನಾನಲ್ಲ ||2||
ಉರಗರಾಜನ ತೆರದಿ ಹಾಸಿಗಾದವನಲ್ಲಗರುಡನಂದದಿ ಪೊತ್ತು ತಿರುಗಿದವನಲ್ಲಸಿರಿಧರನೆ ಕಾಗಿನೆಲೆಯಾದಿಕೇಶವ ನಿನ್ನಚರಣ ಡಿಂಗರಿಗ ಮಾತ್ರ ನಾನಾಗಿಹೆನೆಂದು ||3||