ಗೋವಿಂದ ಗೋವಿಂದ ಎನ್ನಲರಿಯದೆ – ವೃಥಾನೋವಿಂದ ಭಂಗವ ಪಡುವುದುಚಿತವೆ ?
ಕ್ಷೀಣ ಶಾಸ್ತ್ರಾರ್ಥವನು ಪರಿಗ್ರಹಿಸಿ ನಿಖಿಲ ಕುರಿಕೋಣಗಳ ತಲೆಚೆಂಡ ಕುಟ್ಟಿಸುತಪ್ರಾಣ ಹತ್ಯವ ಮಾಳ್ಪುದಾವ ಸತ್ಕರ್ಮ – ನಾರಾ-ಯಣನ ನಾಮಸ್ಮರಣೆ ಮಾಡು ಮನವೆ ||1||
ಖಂಡವನು ಕೊಯ್ದು ಕೊಡಬೇಡ ದಳ್ಳುರಿಯಗ್ನಿಕುಂಡವನು ಹೊಕ್ಕು ಹೊರಡುವುದುಚಿತವೆಭಂಡರಂದದಿ ಬತ್ತಲೆಯೆ ಬರುವುದಾವಾಟಪುಂಡರೀಕಾಕ್ಷನ ನೆನೆ ಕಂಡ್ಯ ಮನವೆ ||2||
ಕುಟ್ಟಿಕೊಳ್ಳದಿರಿ ಜಟ್ಟಿ ಗುಂಡಿನಲಿ, ಶಸ್ತ್ರವನುಚಿಟ್ಟಿ ಕೊಳ್ಳದಿರಿ, ಬೆನ್ನಲಿ ಸಿಡಿಯನುಕಟ್ಟಿ ತೂಗಿಸಿಕೊಳ್ಳದಿರಿ ಕರಟಕದಂತೆಗುಟ್ಟಿನಲಿ ಗೋಪಾಲಕನ ಸ್ಮರಿಸು ಮರುಳೆ ||3||
ತೊಗಲ ಬಿಲ್ಲೆಗಳ ಕೊರಳಲ್ಲಿ ಕಟ್ಟಿಕೊಂಡುಹಗಲಿರುಳು ಅನ್ನಪಾನಕೆ ಹೋಗದೆಮೃಗವೈರಿಯಂತೇಕೆ ಕಿಸುಕೆಲೆವ ರಂಪಾಟಜಗದಾಧಿಪತಿಯ ನಾಮ ಸ್ಮರಿಸು ಮರುಳೆ ||4||
ಉತ್ತಮರು ಸುರೆಯನೀಂಟುವರೆ ತರಹರಿಸಿ ಮದೋ-ನ್ಮತ್ತರಾಗಿ ಅಸಭ್ಯ ಶಬ್ದವ ನುಡಿವರೆಸತ್ತ ಹೆಣದಂತೆ ಬಿದ್ದಿಹುದಾವ ನೀತಿ ಪುರು-ಷೋತ್ತಮನ ನಾಮ ಸ್ಮರಣೆಯ ಮಾಡು ಮನವೆ ||5||
ವೇದೋಕ್ತ ಪೂಜೆಯಲಿ ತೃಪ್ತಿಪಟ್ಟರೆ ನೀವುಅದರಿಂದ ಫಲವೇನು ಪೇಳಿರಯ್ಯನಾದವನು ಕೇಳ್ದ ಹರಿಣದಂದದಿ ಕೆಡದೆ ಮಧುಸೂದನನ ನಾಮ ಸ್ಮರಣೆಯ ಮಾಡು ಮರುಳೆ ||6||
ನಿಂದಾಪವಾದ ಘಟಿಸುವುದೈಸೆ ಇದರಿಂದಮುಂದೆ ಮುಕ್ತಿಯು ನಿಮಗೆ ಸಾಧ್ಯವಹುದೆತಂದೆ ಶ್ರೀ ಕಾಗಿನೆಲೆಯಾದಿಕೇಶವ ನಾಮಒಂದೇ ವೈಕುಂಠ ಪದವನೈದಿಪುದಯ್ಯ ||7||