ಜಗದಂತರ್ಯಾಮಿಯೆಂದೆನುತ ನಿನ್ನನಿಗಮ ಸಾರುವ ಮಾತು ಪುಸಿಯೆ ರಂಗ
ಭೇದವಿಲ್ಲದೆ ಸಕಲ ಜೀವರನು ಪೊತ್ತಿಹಳುಭೂದೇವಿಯೆಂಬಾಕೆ ನಿನ್ನ ಅರ್ಧಾಂಗಿಯುಸಾಧನವು ಸಕಲ ಸಿರಿ ಸಂಪತ್ತುಗಳನೀವಶ್ರೀದೇವಿ ನಿನ್ನ ಹಿರಿಯರಸಿಯೋ ದೇವ ||1||
ಎಂಬತ್ತುನಾಲ್ಕು ಲಕ್ಷ ಜೀವರಾಶಿಗಳನ್ನುಬೊಂಬೆಗಳ ಮಾಡಿ ಭವರಂಗದಲಿತುಂಬಿ ಕಲೆಗಳನೊತ್ತಿ ನೊಸಲ ಬರೆಹವ ಬರೆವಅಂಬುಜೋದ್ಭವ ನಿನ್ನ ಹೆಮ್ಮಗನು ದೇವ ||2||
ಸಕಲ ಜೀವರಾಶಿಗಳನು ಕಲ್ಪಿಸುವ ಬೀಜಸುಖದಿಂದ ಮಾಯಾಂಗನೆಯರೊಡಲೊಳುಅಕ್ಕರದಿ ಪಿಂಡಾಂಡಗಳ ಕಟ್ಟಿ ಬಲಿಸುವಮಕರಾಂಕ ನಿನ್ನ ಕಿರಿಮಗ ದೇವ ||3||
ರಾಮನಾಮವ ಜಪಿಸಿ ಪರಮ ವೈಷ್ಣವನಾಗಿಹೇಮಗಿರಿ ಸನಿಹ ಸಾಹಸ್ರನಾಮಪ್ರೇಮದಲಿ ಜಪಿಸುತ್ತ ವೈರಾಗ್ಯನಿಧಿಯಾದಸೋಮಶೇಖರನು ನಿನ್ನ ಮೊಮ್ಮಗನು ||4||
ಜಂಗಮ ಸ್ಥಾವರಕಾಧಾರವಾಗಿಹಳುಭಂಗಪಡುವ ಜನರ ಕರ್ಮವ ಕಳೆವಳುಹಿಂಗದೆ ಜಗವ ಪಾವನವ ಮಾಡುವ ಪುಣ್ಯಗಂಗೆಯೆಂಬಾಕೆ ನಿಮ್ಮಯ ಮಗಳು ದೇವ ||5||
ಶುದ್ಧ ಬುದ್ಧಿಯನುಳ್ಳ ಪ್ರದ್ಯುಮ್ನನಾ ಮಗಳುಶ್ರದ್ಧೆಯೆನಿಸಿಕೊಂಡು ಸೂತ್ರಗೆ ಸತಿಯಾಗಿಸದ್ಯೋಜಾತನ ಪಡೆದು ಪ್ರಸಿದ್ಧವಹ ದೇವಿ ಈ ಧರೆಯೊಳು ಪುಟ್ಟಿ ನಿನ್ನ ದಾಸಿಯಾದಳು ||6||
ಇಂತು ಅಣುರೇಣು ತೃಣ ಕಾಷ್ಠದೊಳಗೆಲ್ಲಸಂತೋಷವಾಗಿಹುದು ನಿನ್ನ ಸ್ಮರಣೆಯಂತ್ರವಾಹಕನೆಂಬ ಬಿರುದು ಸಲುವುದು ನಿನಗೆಕಂತುಪಿತ ಕಾಗಿನೆಲೆಯಾದಿಕೇಶವನೆ ||7||