ಜಪವ ಮಾಡಿದರೇನು ತಪವ ಮಾಡಿದರೇನುವಿಪರೀತ ಕಪಟಗುಣ ಕಲುಷವಿದ್ದವರು
ಆದಿಗುರುವರಿಯದೆ ಅತ್ತಲಿತ್ತಲು ತೊಳಲಿವೇದಶಾಸ್ತ್ರವನೋದಿ ಬಾಯಾರಲುಹಾದಿಯನು ಕಾಣದಂತಿರುತಿರ್ದು ಹಲವೆಂಟುವಾದ ತರ್ಕದೊಳಿದ್ದ ಭೇದವಾದಿಗಳು ||1||
ನುಡಿ ನಡೆವ ಕಾಲದಲಿ ದಾನ ಮಾಡದೆ ಇರಲುಅಡವಿಯೊಳು ಕೆರೆ ತುಂಬಿ ಬತ್ತಿದಂತೆಮಡದಿ ಮಕ್ಕಳಿಗೆಂದು ಒಡವೆ ವಸ್ತ್ರವ ಗಳಿಸೆಹಿಡಿಯಲಾ ಯಮನವರ ಕಟ್ಟಿಗೊಳಗಾಗಿ ||2||
ಚಳಿಮಳೆಯ ಅತಿ ಕಾರುಗತ್ತಲೆಯೊಳಗೆ ಎದ್ದುಹೊಳೆಯೊಳಗೆ ಮುಳುಗಿ ಜಪ ತಪವ ಮಾಡಿಕಳವಳಿಸಿ ನೂರೆಂಟು ಹಲುಬಿ ಬಳಲಲು ಬೇಡನಳಿನಾಕ್ಷ ಆದಿಕೇಶವನ ನೆನೆ ಮನವೆ ||3||