ತನು ನಿನ್ನದು ಜೀವನ ನಿನ್ನದು ರಂಗ

ತನು ನಿನ್ನದು ಜೀವನ ನಿನ್ನದು ರಂಗ
ಅನುದಿನದಲಿ ಬಾಹೊ ಸುಖದುಃಖ ನಿನ್ನದಯ್ಯ

ಸವಿನುಡಿ ವೇದ ಪುರಾಣ ಶಾಸ್ತ್ರಂಗಳಕಿವಿಗೊಟ್ಟು ಕೇಳುವ ಕಥೆ ನಿನ್ನದುನವಮೋಹನಾಂಗಿಯರ ರೂಪವನು ಕಣ್ಣಿಂದಎವೆಯಿಕ್ಕದೆ ನೋಡುವ ನೋಟ ನಿನ್ನದಯ್ಯ ||1||

ಒಡಗೂಡಿ ಗಂಧಕಸ್ತೂರಿ ಪರಿಮಳಂಗಳಬಿಡದೆ ಲೇಪಿಸಿಕೊಂಬುವುದು ನಿನ್ನದುಷಡುರಸದನ್ನಕ್ಕೆ ನಲಿದಾಡುವ ಜಿಹ್ವೆಕಡು ರುಚಿಗೊಂಡರಾ ರುಚಿ ನಿನ್ನದಯ್ಯ ||2||

ಮಾಯಾ ಪಾಶದ ಬಲೆಯೊಳಗೆ ಸಿಲುಕಿರುವಕಾಯ ಪಂಚೇಂದ್ರಿಯಂಗಳು ನಿನ್ನವುಕಾಯಜಪಿತ ಕಾಗಿನೆಲೆಯಾದಿಕೇಶವರಾಯ ನೀನಲ್ಲದೆ ನರರು ಸ್ವತಂತ್ರರೆ ||3||

Leave a Comment

Your email address will not be published. Required fields are marked *