ತೊರೆದು ಜೀವಿಸುಬಹುದೆ ಹರಿ

ತೊರೆದು ಜೀವಿಸುಬಹುದೆ ಹರಿ ನಿನ್ನ ಚರಣವನುಬರಿಯ ಮಾತೇಕಿನ್ನು ಅರಿತು ಪೇಳುವೆನಯ್ಯ

ತಾಯಿ ತಂದೆಯ ಬಿಟ್ಟು ತಪವ ಮಾಡಲುಬಹುದುದಾಯಾದಿ ಬಂಧುಗಳ ಬಿಡಲುಬಹುದುರಾಯ ಮುನಿದರೆ ಮತ್ತೆ ರಾಜ್ಯವನು ಬಿಡಬಹುದುಕಾಯಜಪಿತ ನಿನ್ನಡಿಯ ಬಿಡಲಾಗದು ||1||

ಒಡಲು ಹಸಿಯಲು ಅನ್ನವಿಲ್ಲದಲೆ ಇರಬಹುದುಪಡೆದ ಕ್ಷೇತ್ರವ ಬಿಟ್ಟು ಪೋಗಬಹುದುಮಡದಿ ಮಕ್ಕಳ ಕಡೆಗೆ ತೊಲಗಿಸಿಯು ಬಿಡಬಹುದುಕಡಲೊಡೆಯ ನಿನ್ನಡಿಯ ಗಳಿಗೆ ಬಿಡಲಾಗದು ||2||

ಪ್ರಾಣವನು ಪರರು ಬೇಡಿದರೆತ್ತಿ ಕೊಡಬಹುದುಮಾನಾಭಿಮಾನ ತಗ್ಗಿಸಲು ಬಹುದುಪ್ರಾಣನಾಯಕನಾದ ಆದಿಕೇಶವರಾಯಜಾಣ ಶ್ರೀಕೃಷ್ಣ ನಿನ್ನಡಿಯ ಬಿಡಲಾಗದು ||3||

Leave a Comment

Your email address will not be published. Required fields are marked *